Tag: cikkamagaluru

  • ಬಿಳಿ ಬಟ್ಟೆ ಧರಿಸಿದ್ದ ವ್ಯಕ್ತಿಯೊಬ್ರು ಹಳಿಯಲ್ಲಿ ನಿಂತಿದ್ರು – ಧರ್ಮೇಗೌಡ್ರ ಸಾವಿನ ಬಗ್ಗೆ ರೈಲು ಚಾಲಕ ಹೇಳಿದ್ದೇನು?

    ಬಿಳಿ ಬಟ್ಟೆ ಧರಿಸಿದ್ದ ವ್ಯಕ್ತಿಯೊಬ್ರು ಹಳಿಯಲ್ಲಿ ನಿಂತಿದ್ರು – ಧರ್ಮೇಗೌಡ್ರ ಸಾವಿನ ಬಗ್ಗೆ ರೈಲು ಚಾಲಕ ಹೇಳಿದ್ದೇನು?

    ಚಿಕ್ಕಮಗಳೂರು: ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್ ಧರ್ಮೇಗೌಡ ಅವರು ಆತ್ಮಹತ್ಯೆಗೆ ಶರಣಾಗಿದ್ದು, ಇದೀಗ ರೈಲು ಚಾಲಕ ಅವರ ಸಾವಿನ ರಹಸ್ಯವನ್ನು ತಿಳಿಸಿದ್ದಾರೆ.

    ರೈಲು ಚಾಲಕ ಸಿದ್ದರಾಮ್ ಅವರು ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಈ ಮೂಲಕ ಧರ್ಮೇಗೌಡರಿಗೆ ಡಿಕ್ಕಿ ಹೊಡೆದಿದ್ದು ಜನ ಶತಾಬ್ದಿ ರೈಲು ಅನ್ನೋದು ಕನ್ಫರ್ಮ್ ಆಗಿದೆ.

    ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಗುಣಸಾಗರದ ಬಳಿ ಬಿಳಿ ಬಟ್ಟೆ ಧರಿಸಿದ್ದ ವ್ಯಕ್ತಿಯೊಬ್ಬರು ಹಳಿಯ ಮೇಲೆ ನಿಂತಿದ್ದರು. ಹಳಿ ಮೇಲೆ ರೈಲಿಗೆ ನೇರಾ-ನೇರ ನಿಂತಿರುವುದು ಕಾಣಿಸಿತ್ತು. ರೈಲು ವೇಗವಾಗಿದ್ದ ಕಾರಣ ನಿಲ್ಲಿಸಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.

    ನಡೆದಿದ್ದೇನು..?
    ಎಸ್.ಎಲ್ ಧರ್ಮೇಗೌಡ ಅವರು ಸೋಮವಾರ ಸಂಜೆ 6.30ರ ಸುಮಾರಿಗೆ ಗುಣಸಾಗರಕ್ಕೆ ಆಗಮಿಸಿದ್ದರು. ಸಖರಾಯಪಟ್ಟಣದ ಮನೆಯಿಂದ ಡ್ರೈವರ್ ಜೊತೆ ಕಾರಿನಲ್ಲಿ ಬಂದಿದ್ದ ಅವರು, ರೈಲ್ವೆ ಟ್ರ್ಯಾಕ್ ಬಳಿ ಕಾರನ್ನ ನಿಲ್ಲಿಸಲು ಡ್ರೈವರಿಗೆ ಸೂಚನೆ ನೀಡಿದ್ದಾರೆ. ಇತ್ತ ರೈಲ್ವೆ ಹಳಿಯತ್ತ ಬರುವಾಗ ಹಳ್ಳಿಗರನ್ನ ಮಾತನಾಡಿಸಿ ಬಂದಿದ್ದರು. ಅಲ್ಲದೆ ನನಗೆ ಒಬ್ಬರ ಜೊತೆ ಖಾಸಗಿಯಾಗಿ ಮಾತನಾಡಬೇಕು, ನೀನು ಹೋಗು ಅಂತ ಚಾಲಕನನ್ನು ಕಳುಹಿಸಿದ್ದಾರೆ. ಆ ಬಳಿಕ ಕಡೂರಿನ ವ್ಯಕ್ತಿಯೊಬ್ಬರಿಗೆ ಫೋನ್ ಮಾಡಿ ಜನಶತಾಬ್ದಿ ರೈಲು ಬರುವ ಸಮಯವನ್ನು ವಿಚಾರಿಸಿದ್ದಾರೆ. ನಂತರ ತಮ್ಮ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದರು.

    ನಂತರ ಜನಶತಾಬ್ದಿ ರೈಲಿಗೆ ತಲೆಕೊಟ್ಟು ಧರ್ಮೇಗೌಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯಿಂದ ಧರ್ಮೇಗೌಡ ಅವರ ಮೃತದೇಹ ಛಿದ್ರಗೊಂಡಿದ್ದು, ಸುಮಾರು 100 ಮೀಟರ್ ದೂರದಲ್ಲಿ ಕೈ ಪತ್ತೆಯಾಗಿತ್ತು. ಪರಿಷತ್‍ನಲ್ಲಿ ನಡೆದ ಗಲಾಟೆಯಿಂದ ಮನಸ್ಸಿಗೆ ನೋವಾಗಿದೆ. ಮನೆಯಲ್ಲಿನ ಆಸ್ತಿ ವಿಚಾರ, ಹಣಕಾಸು ಸಂಬಂಧ ಡೆತ್‍ನೋಟ್‍ನಲ್ಲಿ ಬರೆದಿದ್ದರು. ಅಲ್ಲದೆ ಪತ್ನಿ ಮಮತಾ, ಮಗ, ಮಗಳಲ್ಲಿ ಕ್ಷಮೆ ಕೂಡ ಕೇಳಿದ್ದು, ಮನೆಯನ್ನು ಪೂರ್ಣಗೊಳಿಸುವಂತೆ ಸೂಚನೆ ಕೂಡ ನೀಡಿದ್ದರು.

  • ಪ್ರವಾಸಿಗರ ಕೆಟ್ಟುನಿಂತ ವಾಹನ ರಿಪೇರಿಗಾಗಿ ಕೈಯಲ್ಲಿ ಸ್ಪ್ಯಾನರ್ ಹಿಡಿದ ಎಸ್‍ಪಿ ಅಣ್ಣಾಮಲೈ

    ಪ್ರವಾಸಿಗರ ಕೆಟ್ಟುನಿಂತ ವಾಹನ ರಿಪೇರಿಗಾಗಿ ಕೈಯಲ್ಲಿ ಸ್ಪ್ಯಾನರ್ ಹಿಡಿದ ಎಸ್‍ಪಿ ಅಣ್ಣಾಮಲೈ

    ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಜನಸಮಾನ್ಯರಿಗೆ ಅಪಘಾತವಾದ್ರೆ, ಮಾರ್ಗಮಧ್ಯೆ ವಾಹನ ಕೆಟ್ಟು ನಿಂತಾಗ ಸಹಾಯ ಮಾಡುವವರೇ ಕಡಿಮೆಯಾಗಿದ್ದಾರೆ. ಆದರೆ ಎಸ್‍ಪಿ ಅಣ್ಣಾಮಲೈ ಅವರು ಕೈಯಲ್ಲಿ ಸ್ಪ್ಯಾನರ್ ಹಿಡಿದು ಕೆಟ್ಟುನಿಂತ ವಾಹನ ರಿಪೇರಿಗೆ ಸಹಾಯ ಮಾಡಲು ಮುಂದಾಗಿದ್ದಾರೆ.

    ಬೆಂಗಳೂರಿನ ಕಾರೊಂದು ಪಂಚರ್ ಆಗಿ ರಸ್ತೆ ಮಧ್ಯೆಯೇ ನಿಂತು ಹೋಗಿತ್ತು. ಈ ಸಂದರ್ಭದಲ್ಲಿ ಸ್ವತಃ ಚಿಕ್ಕಮಗಳೂರು ಎಸ್‍ಪಿ ಅಣ್ಣಾಮಲೈ ಕೈಯಲ್ಲಿ ಸ್ಪ್ಯಾನರ್ ಹಿಡಿದು ಸಹಾಯ ಮಾಡುವ ಪ್ರಯತ್ನ ಮಾಡಿದ್ದಾರೆ.

    ಬೆಂಗಳೂರಿನಿಂದ ಪ್ರವಾಸಿಗರು ಕಾರಿನಲ್ಲಿ ಭಾನುವಾರ ರಾತ್ರಿ ಚಿಕ್ಕಮಗಳೂರು-ಶೃಂಗೇರಿ ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದರು. ಆದರೆ ಮತ್ತಾವರ ಗ್ರಾಮದ ಬಳಿ ಕಾರು ಪಂಚರ್ ಆಗಿ ನಿಂತಿತ್ತು. ರಸ್ತೆಯ ಸುತ್ತಾಮುತ್ತಾ ಮರಗಳಿದ್ದರಿಂದ ಪ್ರವಾಸಿಗರು ಭಯದಲ್ಲಿದ್ದರು. ಈ ವೇಳೆ ಕೊಪ್ಪದಿಂದ ಚಿಕ್ಕಮಗಳೂರಿಗೆ ಆಗಮಿಸುತ್ತಿದ್ದ ಎಸ್‍ಪಿ ಅಣ್ಣಾಮಲೈ ಸ್ವತಃ ತಾವೇ ಕೈಯಲ್ಲಿ ಸ್ಪ್ಯಾನರ್ ಹಿಡಿದು ಟಯರ್ ಬಿಚ್ಚಲು ಯತ್ನಿಸಿದ್ದಾರೆ.

    ಟಯರ ಬಿಚ್ಚಲು ಸಾಧ್ಯವಾಗದ ವೇಳೆಯಲ್ಲಿ ಮೆಕಾನಿಕ್‍ಗೆ ಫೋನ್ ಮಾಡಿ ಬರುವಂತೆ ತಿಳಿಸಿದ್ದಾರೆ. ನಂತರ ಕಾರಿನಲ್ಲಿದ್ದ ಪ್ರವಾಸಿಗರನ್ನು ತಮ್ಮ ಕಾರಿನಲ್ಲಿ ಕೂರಿಸಿಕೊಂಡು ನಗರಕ್ಕೆ ತಂದು ಬಿಟ್ಟಿದ್ದಾರೆ. ಎಸ್‍ಪಿ ಸಹಾಯ ಕಂಡು ಕಾರು ಮಾಲೀಕ ಆಶ್ಚರ್ಯಪಟ್ಟು ಎಸ್‍ಪಿ ಈ ರೀತಿಯ ಸಹಾಯ ಮಾಡಿದ್ದು ತುಂಬಾ ಖುಷಿ ಆಯಿತು ಎಂದು ಹೇಳಿದರು.