Tag: ciment mixer

  • ಸ್ಕೂಟಿಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ- ಸ್ಥಳದಲ್ಲೇ ಇಬ್ಬರ ದುರ್ಮರಣ

    ಸ್ಕೂಟಿಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ- ಸ್ಥಳದಲ್ಲೇ ಇಬ್ಬರ ದುರ್ಮರಣ

    ಬೆಂಗಳೂರು: ಸಿಮೆಂಟ್ ಮಿಕ್ಸರ್ ವಾಹನವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

    ಆನೇಕಲ್ ತಾಲೂಕಿನ ಚಂದಾಪುರದಲ್ಲಿ ರೈಲ್ವೆ ಬ್ರಿಡ್ಜ್ ಕೆಳಗೆ ಇಂದು ಬೆಳ್ಳಂಬೆಳಗ್ಗೆ ಈ ಘಟನೆ ನಡೆದಿದೆ. ವೆಂಕಟರಮಣಪ್ಪ(45) ವೆಂಕಟಪ್ಪ(43) ಮೃತ ದುರ್ದೈವಿಗಳಾಗಿದ್ದು, ಇವರು ರಾಮಸಾಗರ ನಿವಾಸಿಗಳು ಎಂಬುವುದಾಗಿ ತಿಳಿದುಬಂದಿದೆ.

    ರೈಲ್ವೆ ಬ್ರಿಡ್ಜ್ ನಿಂದಾಗಿ ಕಿರಿದಾಗಿರುವ ರಾಷ್ಟ್ರೀಯ ಹೆದ್ದಾರಿ-7 ಸರ್ವಿಸ್ ರಸ್ತೆ ಇಲ್ಲದೆ ಇರುವುದೇ ಘಟನೆಗೆ ಕಾರಣ ಎನ್ನಲಾಗುತ್ತಿದೆ.

    ಸೂರ್ಯ ಸಿಟಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.