Tag: Cinema Industry

  • ರಶ್ಮಿಕಾ ಬೈ ಮಿಸ್‌ ಆಗಿ ಹೇಳಿರಬೇಕು, ಕ್ಷಮಿಸಿಬಿಡೋಣ: ನಟಿ ಹರ್ಷಿಕಾ ಪೂಣಚ್ಚ

    ರಶ್ಮಿಕಾ ಬೈ ಮಿಸ್‌ ಆಗಿ ಹೇಳಿರಬೇಕು, ಕ್ಷಮಿಸಿಬಿಡೋಣ: ನಟಿ ಹರ್ಷಿಕಾ ಪೂಣಚ್ಚ

    ಬೆಂಗಳೂರು: ರಶ್ಮಿಕಾ ಮಂದಣ್ಣ (Rashmika Mandanna) ಹೇಳಿಕೆ ವಿವಾದ ಅಂತ ಹೇಳಲ್ಲ. ಅವರು ಗೊತ್ತಿಲ್ಲದೇ ಬೈ ಮಿಸ್ ಆಗಿ ಹೇಳಿರಬೇಕು ಕ್ಷಮಿಸಿಬಿಡೋಣ ಅಂತ ನಟಿ ಹರ್ಷಿಕಾ ಪೂಣಚ್ಚ (Harshika Poonacha) ಹೇಳಿದ್ದಾರೆ.

    ʻಕೊಡವ ಸಮುದಾಯದಿಂದ (Kodava community) ಇಲ್ಲಿಯವರೆಗೆ ಯಾರೂ ಸಿನಿಮಾ ಇಂಡಸ್ಟ್ರಿಗೆ ಬಂದಿಲ್ಲ, ನಾನೇ ಫಸ್ಟ್ ಅನ್ನಿಸುತ್ತೆʼ ಎಂಬ ನಟಿ ರಶ್ಮಿಕಾ ಮಂದಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ರಶ್ಮಿಕಾ ಮಂದಣ್ಣ ಹೇಳಿಕೆಯನ್ನ ಕ್ಷಮಿಸಿಬಿಡೋಣ. ರಶ್ಮಿಕಾ ಮಂದಣ್ಣ ಬಗ್ಗೆ ನೆಗೆಟಿವ್ ಮಾತಾಡೋದು ಬೇಡ. ನಾನಂತೂ ರಶ್ಮಿಕಾ ಅವರ ಬಗ್ಗೆ ನೆಗೆಟಿವ್ ಮಾತಾಡಲ್ಲ ಅಂತ ತಿಳಿಸಿದ್ದಾರೆ. ಇದನ್ನೂ ಓದಿ: ಕೊಡವ ಕಮ್ಯೂನಿಟಿಯಿಂದ ಇಂಡಸ್ಟ್ರಿಗೆ ಬಂದಿದ್ದು ನಾನೇ ಫಸ್ಟ್ – ರಶ್ಮಿಕಾ ಮತ್ತೊಂದು ಯಡವಟ್ಟು 

    ರಶ್ಮಿಕಾ ಮಂದಣ್ಣ ಹೇಳಿಕೆ ವಿವಾದ ಅಂತ ಹೇಳಲ್ಲ. ಅವರು ಗೊತ್ತಿಲ್ಲದೇ ಬೈ ಮಿಸ್ ಆಗಿ ಹೇಳಿರಬೇಕು. ತೆಲುಗು, ತಮಿಳು, ಬಾಲಿವುಡ್ ಅಲ್ಲಿ ಹೆಸರು ಮಾಡಿರುವ ಮೊದಲ ನಟಿ ಅಂತ ಹೇಳೋಕೆ ಹೊರಟಿರಬೇಕು. ರಶ್ಮಿಕಾ ಮಂದಣ್ಣ ಬಗ್ಗೆ ನನಗೆ ಗೌರವವಿದೆ. ಅವರು, ಒಳ್ಳೆ ಹೆಸರು ಮಾಡಿದ್ದಾರೆ. ಆದ್ರೆ ಬಾಲಿವುಡ್ ಅಲ್ಲೂ ಅವರೇ ಮೊದಲಲ್ಲ ಅಂತಲೂ ಹೇಳಿದ್ದಾರೆ. ಇದನ್ನೂ ಓದಿ: ಫಾರ್ಮ್‌ ಹೌಸ್‌ನಲ್ಲಿ ಚಾಮುಂಡಿ ಪೂಜೆ ನೆರವೇರಿಸಿದ ದರ್ಶನ್

    ನಮ್ಮ ಕೊಡವ ಸಮುದಾಯ ಸಣ್ಣ ಸಮುದಾಯ. ಆದ್ರೇ ಎಲ್ಲಾ ರಂಗದಲ್ಲೂ ನಮ್ಮ ಸಮುದಾಯದವರಿದ್ದಾರೆ. ಸೈನ್ಯ, ಸಿನಿಮಾ, ರಾಜಕೀಯ ಎಲ್ಲಾ ರಂಗದಲ್ಲೂ ನಮ್ಮ ಸಮುದಾಯದವರಿದ್ದಾರೆ. ಕೊಡವರಲ್ಲಿ ಗಂಡು ಹೆಣ್ಣು ಎನ್ನುವ ಬೇಧವಿಲ್ಲ ಎಂದಿದ್ದಾರೆ.

    ರಶ್ಮಿಕಾ ಹೇಳಿದ್ದೇನು?
    ಇತ್ತೀಚಿಗೆ ಸಂದರ್ಶನವೊಂದರಲ್ಲಿ ನಟಿ ರಶ್ಮಿಕಾ ಮಂದಣ್ಣ ಮಾತನಾಡುತ್ತಾ, ಕೊಡವ ಸಮುದಾಯದಿಂದ ಇಲ್ಲಿಯವರೆಗೆ ಯಾರೂ ಸಿನಿಮಾ ಇಂಡಸ್ಟ್ರಿಗೆ (Cinema Industry) ಬಂದಿಲ್ಲ. ಸಿನಿಮಾ ಇಂಡಸ್ಟ್ರಿಗೆ ನಟಿಯಾಗಿ ಬಂದಿರೋದು ನಾನೇ ಫಸ್ಟ್ ಅನ್ನಿಸುತ್ತೆ ಎಂದು ಹೇಳಿದ್ದಾರೆ. ಈ ವೇಳೆ ಸಂದರ್ಶಕಿ ನೀವೇ ಮೊದಲು ಎಂದು ಜನ ನಿರ್ಧರಿಸಿದ್ದಾರಾ ಎಂದು ಕೇಳಿದಾಗ, ಖಂಡಿತ ಕೊಡವ ಸಮುದಾಯದವರು ಇದನ್ನು ನಿರ್ಧರಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಈ ರೀತಿ ಹೇಳಿಕೆ ನೀಡುವ ಮೂಲಕ ನಟಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಈಗಾಗಲೇ ಕೊಡವ ಸಮುದಾಯದಿಂದ ಸಾಕಷ್ಟು ನಾಯಕಿಯರು ಚಿತ್ರರಂಗಕ್ಕೆ ಬಂದಿದ್ದು, ಖ್ಯಾತಿಯನ್ನು ಗಳಿಸಿದ್ದಾರೆ. ನಟಿ ಪ್ರೇಮ, ನಿಧಿ ಸುಬ್ಬಯ್ಯಾ, ಹರ್ಷಿಕ ಪೂಣಚ್ಚ, ಶುಭ್ರ ಅಯ್ಯಪ್ಪ ಸೇರಿ ಹಲವರು ಬಂದಿದ್ದು, ಹೆಸರು ಮಾಡಿದ್ದಾರೆ. ಇವರೆಲ್ಲರಿಗೂ ಮುನ್ನ ನಟಿ ಪ್ರೇಮ ಹಲವು ಭಾಷೆಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದರು ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: `ನನ್ನ ಮಕ್ಕಳಿಗೆ ತಂದೆ ಇಲ್ಲದಿರಬಹುದು’…ಅಮ್ಮನಾಗುತ್ತಿರುವ ನಟಿ ಭಾವನಾ ಮೊದಲ ಮಾತು

  • ಕೊಡವ ಕಮ್ಯೂನಿಟಿಯಿಂದ ಇಂಡಸ್ಟ್ರಿಗೆ ಬಂದಿದ್ದು ನಾನೇ ಫಸ್ಟ್ – ರಶ್ಮಿಕಾ ಮತ್ತೊಂದು ಯಡವಟ್ಟು 

    ಕೊಡವ ಕಮ್ಯೂನಿಟಿಯಿಂದ ಇಂಡಸ್ಟ್ರಿಗೆ ಬಂದಿದ್ದು ನಾನೇ ಫಸ್ಟ್ – ರಶ್ಮಿಕಾ ಮತ್ತೊಂದು ಯಡವಟ್ಟು 

    ಆಗಾಗ ಕೆಲವು ಹೇಳಿಕೆಗಳಿಂದ ವಿವಾದಕ್ಕೀಡಾಗುವ ಕಾಂಟ್ರವರ್ಸಿ ಕ್ವೀನ್ ರಶ್ಮಿಕಾ ಮಂದಣ್ಣ (Rashmika Mandanna) ಇದೀಗ ಮತ್ತೊಂದು ಹೇಳಿಕೆ ನೀಡಿ, ವಿವಾದ ಹುಟ್ಟುಹಾಕಿದ್ದಾರೆ. ಈ ಹೇಳಿಕೆ ಚಿತ್ರರಂಗದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

    ಇತ್ತೀಚಿಗೆ ಸಂದರ್ಶನವೊಂದರಲ್ಲಿ ನಟಿ ರಶ್ಮಿಕಾ ಮಂದಣ್ಣ ಮಾತನಾಡುತ್ತಾ, ಕೊಡವ ಸಮುದಾಯದಿಂದ ಇಲ್ಲಿಯವರೆಗೆ ಯಾರೂ ಸಿನಿಮಾ ಇಂಡಸ್ಟ್ರಿಗೆ ಬಂದಿಲ್ಲ, ನಾನೇ ಫಸ್ಟ್ ಅನ್ನಿಸುತ್ತೆ ಸಿನಿಮಾ ಇಂಡಸ್ಟ್ರಿಗೆ ನಟಿಯಾಗಿ ಬಂದಿರೋದು ಎಂದು ಹೇಳಿದ್ದಾರೆ. ಈ ವೇಳೆ ಸಂದರ್ಶಕಿ ನೀವೇ ಮೊದಲು ಎಂದು ಜನ ನಿರ್ಧರಿಸಿದ್ದಾರಾ ಎಂದು ಕೇಳಿದಾಗ, ಖಂಡಿತ ಕೊಡವ ಸಮುದಾಯದವರು ಇದನ್ನು ನಿರ್ಧರಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಇದನ್ನೂ ಓದಿ: ಅಮರನಾಥ ಯಾತ್ರೆಗೆ ತೆರಳುತ್ತಿದ್ದ 5 ಬಸ್‌ಗಳ ನಡುವೆ ಸರಣಿ ಅಪಘಾತ – 30ಕ್ಕೂ ಹೆಚ್ಚು ಮಂದಿಗೆ ಗಾಯ

    ಈ ರೀತಿ ಹೇಳಿಕೆ ನೀಡುವ ಮೂಲಕ ನಟಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಈಗಾಗಲೇ ಕೊಡವ ಸಮುದಾಯದಿಂದ ಸಾಕಷ್ಟು ನಾಯಕಿಯರು ಚಿತ್ರರಂಗಕ್ಕೆ ಬಂದಿದ್ದು, ಖ್ಯಾತಿಯನ್ನು ಗಳಿಸಿದ್ದಾರೆ. ನಟಿ ಪ್ರೇಮ, ನಿಧಿ ಸುಬ್ಬಯ್ಯಾ, ಹರ್ಷಿಕ ಪೂಣಚ್ಚ, ಶುಭ್ರ ಅಯ್ಯಪ್ಪ ಸೇರಿ ಹಲವರು ಬಂದಿದ್ದು, ಹೆಸರು ಮಾಡಿದ್ದಾರೆ. ಇವರೆಲ್ಲರಿಗೂ ಮುನ್ನ ನಟಿ ಪ್ರೇಮ ಹಲವು ಭಾಷೆಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದರು ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.

    ಇದಕ್ಕೂ ಮುನ್ನ ಕನ್ನಡ ಚಲನಚಿತ್ರೋವತ್ಸಕ್ಕೆ ನಟಿಯನ್ನು ಆಹ್ವಾನಿಸಿದಾಗ ನನಗೆ ಸಮಯವಿಲ್ಲ ಎಂದಿದ್ದರು. ಜೊತೆಗೆ ಛಾವಾ ಸಿನಿಮಾದ ಪ್ರಚಾರದ ಸಂದರ್ಭದಲ್ಲಿ `ನಾನು ಹೈದರಾಬಾದ್‌ನವಳು’ ಎಂದು ಹೇಳಿ ವಿವಾದಕ್ಕೆ ಒಳಗಾಗಿದ್ದರು.ಇದನ್ನೂ ಓದಿ: ಮದುವೆ ದಿಬ್ಬಣಕ್ಕೆ ಹೊರಟಿದ್ದ ಕಾರು ಭೀಕರ ಅಪಘಾತ – ವರ ಸೇರಿ 8 ಮಂದಿ ದುರ್ಮರಣ

  • ಇಂಡಸ್ಟ್ರಿಯಲ್ಲಿ ನನಗೆ ಯಾರೂ ಫ್ರೆಂಡ್ಸ್ ಇಲ್ಲ… ಹೀಗ್ಯಾಕಂದ್ರು ನಯನತಾರ..?

    ಇಂಡಸ್ಟ್ರಿಯಲ್ಲಿ ನನಗೆ ಯಾರೂ ಫ್ರೆಂಡ್ಸ್ ಇಲ್ಲ… ಹೀಗ್ಯಾಕಂದ್ರು ನಯನತಾರ..?

    ಹುಭಾಷಾ ನಟಿ ನಯನತಾರಾ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಸ್ಫೋಟಕ ಮಾತುಗಳನ್ನ ಆಡಿದ್ದಾರೆ. ನಿಮಗೆ ಇಂಡಸ್ಟ್ರಿಯಲ್ಲಿ ಕ್ಲೋಸ್ ಫ್ರೆಂಡ್ಸ್ ಯಾರಿದ್ದಾರೆ ಅನ್ನೋ ಪ್ರಶ್ನೆಗೆ ಉತ್ತರಿಸಿರುವ ನಟಿ “ನನಗೆ ಸಿನಿಮಾ ಇಂಡಸ್ಟ್ರಿಯಲ್ಲಿ ಯಾರೂ ಬೆಸ್ಟ್ ಫ್ರೆಂಡ್ ಅಂತಾ ಇಲ್ಲ” ಎಂದಿದ್ದಾರೆ. ಯಾಕಂದ್ರೆ ಸಿನಿಮಾದಿಂದ ಸಿನಿಮಾಗೆ ಎಲ್ಲರೂ ಬೇರೆ ಬೇರೆ ಜನ ಪರಿಚಯ ಆಗ್ತಾರೆ ಎಂದು ಉತ್ತರಿಸಿದ್ದಾರೆ.

    ಒಂದು ಸಿನಿಮಾ ಮುಗಿದ ಬಳಿಕ ಮತ್ತೊಂದು ಸಿನಿಮಾ ಮಾಡಬೇಕಾದರೆ ಹೊಸ ಜನರ ಪರಿಚಯವಾಗುತ್ತೆ. ಆ ಸಿನಿಮಾ ಮುಗಿದ್ಮೇಲೆ ಮತ್ತೆ ಹೊಸ ಹೊಸ ಜನರ ಜೊತೆ ಕೆಲಸ ಮಾಡಬೇಕಾಗುತ್ತೆ. ಹೀಗಾಗಿ ಸಿನಿಮಾ ಇಂಡಸ್ಟ್ರಿಯಲ್ಲಿ ನನಗೆ ಬೆಸ್ಟ್ ಫ್ರೆಂಡ್ ಯಾರೂ ಇಲ್ಲ ಎಂದಿದ್ದಾರೆ. ಈ ಮಾತು ಸಾಕಷ್ಟು ಜನರಿಗೆ ಹುಬ್ಬೇರಿಸುವಂತೆ ಮಾಡಿದೆ. ಇದನ್ನೂ ಓದಿ: ಮೋಹನ್‌ಲಾಲ್ ಮಗಳು ವಿಸ್ಮಯ ಚಿತ್ರರಂಗಕ್ಕೆ ಎಂಟ್ರಿ!

    ನಟಿ ನಯನತಾರಾ ಯಾವಾಗಲೂ ಸ್ಟ್ರೈಟ್‍ಫಾರ್ವರ್ಡ್ ಹೀಗಾಗಿ ಬೋಲ್ಡ್ ಆಗಿ ಆನ್ಸರ್ ಮಾಡಿದ್ದಾರೆ. ಇನ್ನು ರಾಕಿಂಗ್‍ಸ್ಟಾರ್ ಯಶ್ ನಟನೆಯ ಮಲ್ಟಿಸ್ಟಾರ್ ಸಿನಿಮಾ ಟಾಕ್ಸಿಕ್‍ನಲ್ಲಿ ವಿಭಿನ್ನ ಪಾತ್ರದಲ್ಲಿ ನಟಿಸಿದ್ದಾರೆ. ಚಿರಂಜೀವಿ ಅವರ 157ನೇ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ಮೋಹನ್‍ಲಾಲ್, ಮುಮ್ಮುಟಿ ಅವರ ಚಿತ್ರದಲ್ಲೂ ನಯನತಾರಾ ಅಭಿನಯಿಸುತ್ತಿದ್ದಾರೆ.

    ನಯನತಾರಾ ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಸ್ಟ್ರೈಟ್ ಫಾರ್ವರ್ಡ್ ಆಗಿ ಆಡಿದ ಮಾತುಗಳು ಈಗ ಭಾರಿ ಚರ್ಚೆಗೆ ಕಾರಣವಾಗಿವೆ. ಮದುವೆಯಾದ ಬಳಿಕ ಸಿನಿಮಾಗಳಿಂತ ಫ್ಯಾಮಿಲಿಗೆ ಜಾಸ್ತಿ ಟೈಂ ಕೊಡ್ತಿರುವ ಸೌತ್ ಬ್ಯೂಟಿ ನಯನತಾರಾ ಆಗಾಗ ಸಿನಿಮಾಗಳಲ್ಲೂ ಕಾಣಿಸಿಕೊಳ್ತಿದ್ದಾರೆ. ಇದನ್ನೂ ಓದಿ: ಪಿ.ಸಿ ಶೇಖರ್ ನಿರ್ದೇಶನ ಮಹಾನ್ ಚಿತ್ರದಲ್ಲಿ ಮಿತ್ರ ವಿಶೇಷ ಪಾತ್ರ

  • ಚಿತ್ರರಂಗ ಶೋಕಿ ಕ್ಷೇತ್ರವಲ್ಲ, ನಾನು ಮಚ್ಚು ಲಾಂಗು ಹಿಡಿದಿಲ್ಲ: ನಿಖಿಲ್ ಕುಮಾರಸ್ವಾಮಿ

    ಚಿತ್ರರಂಗ ಶೋಕಿ ಕ್ಷೇತ್ರವಲ್ಲ, ನಾನು ಮಚ್ಚು ಲಾಂಗು ಹಿಡಿದಿಲ್ಲ: ನಿಖಿಲ್ ಕುಮಾರಸ್ವಾಮಿ

    ಚಾಮರಾಜನಗರ: ಚಿತ್ರರಂಗದ (Cinema Industry) ಬಗ್ಗೆ ಯಾರೋ ಹಗುರವಾಗಿ ಮಾತನಾಡಿದ್ದಾರೆ. ಸಿನಿಮಾವನ್ನು ಶೋಕಿ ಎಂದು ಕರೆದಿದ್ದಾರೆ. ಚಿತ್ರರಂಗ ಶೋಕಿಯ ಕ್ಷೇತ್ರವಲ್ಲ. ಅದು ನನ್ನ ಫ್ಯಾಷನ್. ನಾನು ಇದುವರೆಗೆ ನಟಿಸಿದ ಸಿನಿಮಾಗಳಲ್ಲಿ ಲಾಂಗು, ಮಚ್ಚು ಹಿಡಿದಿಲ್ಲ ಎಂದು ನಟ, ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದ್ದಾರೆ.

    ಕೊಳ್ಳೇಗಾಲದಲ್ಲಿ ಮಾತನಾಡಿದ ಅವರು, ಒಂದು ಸಿನಿಮಾ ಮಾಡಲು ಸಾಕಷ್ಟು ದಿನ ಕಷ್ಟಪಡುತ್ತೇವೆ. ನಾನು ಮುಂದೆಯು ಫ್ಯಾಮಿಲಿ ಸಬ್ಜೆಕ್ಟ್ ಸಿನಿಮಾ ಮಾಡುತ್ತೇನೆ. ಸಮಾಜಕ್ಕೆ ಸಂದೇಶ ಕೊಡುವ ಸಿನಿಮಾ ಮಾಡುತ್ತೇನೆ. ಚಿತ್ರರಂಗ ನನ್ನ ವೃತ್ತಿ, ಅದರ ಬಗ್ಗೆ ಲಘುವಾಗಿ ಮಾತಾಡಬಾರದು. ಎರಡೂವರೆ ಗಂಟೆ ಸಿನಿಮಾ ಮಾಡೋದು ಅಷ್ಟು ಸುಲಭವಲ್ಲ. ಸಿನಿಮಾ ಅನ್ನೋದು ಸಿನಿಮಾ ಅಲ್ಲ. ಸಿನಿಮಾದಲ್ಲಿ ನಟನೆ ಮಾಡೋದು ಒಂದು ಕನಸು. ಡಾ. ರಾಜಕುಮಾರ್, ಅಂಬರೀಶಣ್ಣ ಬಹಳ ಶ್ರಮ ಪಟ್ಟಿದ್ದಾರೆ. ನಮ್ಮ ತಂದೆ ರಾಜಕಾರಣಕ್ಕೆ ಬರುವ ಮೊದಲು ಸಿನಿಮಾ ಡಿಸ್ಟ್ರಿಬ್ಯುಟ್ ಮಾಡುತ್ತಿದ್ದರು ಎಂದು ತಿಳಿಸಿದರು.

    ಇದೇ ವೇಳೆ ಹಾಸನ ಟಿಕೆಟ್ ವಿಚಾರವಾಗಿ ಎದ್ದಿರುವ ಗೊಂದಲದ ಬಗ್ಗೆ ಮಾತನಾಡಿದ ಅವರು, ಸಹಜವಾಗಿ ಎಲ್ಲಿ ಪಕ್ಷ ಬಲಿಷ್ಠವಿರುತ್ತದೋ ಅಲ್ಲಿ ಆಕಾಂಕ್ಷಿಗಳು ಜಾಸ್ತಿ ಇರುತ್ತಾರೆ. ಪಕ್ಷದ ರಾಜ್ಯಾಧ್ಯಕ್ಷರು, ರಾಷ್ಟ್ರಾಧ್ಯಕ್ಷರು ಅದಕ್ಕೆ ತೆರೆ ಎಳೆಯುತ್ತಾರೆ. ಎಲ್ಲಾ ಗೊಂದಲಕ್ಕೂ ಕೂಡ ಶೀಘ್ರವೇ ಬ್ರೇಕ್ ಬೀಳುತ್ತದೆ ಎಂದರು.

    ಶಾಸಕ ಪ್ರೀತಂ ಗೌಡ 50 ಸಾವಿರಕ್ಕಿಂತ ಒಂದು ವೋಟ್ ಕಡಿಮೆ ಬಿದ್ದರೂ ಮರುಚುನಾವಣೆಗೆ ಹೋಗುತ್ತೇನೆ ಎಂಬ ಹೇಳಿಕೆಯ ವಿಚಾರವಾಗಿ ಪ್ರತಿಕ್ರಿಯಿಸಿದ ನಿಖಿಲ್, ರಾಜಕಾರಣದಲ್ಲಿ ನಾವು ಎಷ್ಟು ತಲೆತಗ್ಗುತ್ತೇವೆ, ಅಷ್ಟು ಜನ ನಮ್ಮನ್ನು ರಾಜಕೀಯವಾಗಿ ಬೆಳೆಸುತ್ತಾರೆ. ಇಲ್ಲಿ ಅಹಂಕಾರ, ದರ್ಪ ಯಾವುದೂ ವರ್ಕೌಟ್ ಆಗುವುದಿಲ್ಲ. ಸಮಯ ಹತ್ತಿರ ಬಂದಿದೆ. ಜನರು ತೀರ್ಮಾನಿಸುತ್ತಾರೆ ಎಂದು ಶಾಸಕ ಪ್ರೀತಂ ಗೌಡರಿಗೆ ಟಾಂಗ್ ಕೊಟ್ಟರು.

    ಸುಮಲತಾ ಅಂಬರೀಶ್ ಕುರಿತು ಮಾತನಾಡಿದ ಅವರು, ನಾನು ಚುನಾವಣೆ ವೇಳೆಯೂ ಕೂಡಾ ಸುಮಲತಾರನ್ನು ತಾಯಿಯೆಂದು ಕರೆದಿದ್ದೇನೆ. ಲೋಕಸಭಾ ಚುನಾವಣೆಗೆ ತಾಯಿ ಎದುರು ನಿಂತಾಗ ನನಗೆ ಅನುಭವವಿರಲಿಲ್ಲ. ಅವತ್ತೂ ತಾಯಿ ಎಂದು ಮತನಾಡಿಸಿದ್ದೇನೆ. ಇವತ್ತೂ ಆ ಪದವನ್ನೇ ಬಳಸುತ್ತೇನೆ. ಅವರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದರು. ಇದನ್ನೂ ಓದಿ: ಶುಕ್ರವಾರ ರಾಜ್ಯ ಬಜೆಟ್‌ ಮಂಡನೆ – ಸರ್ಕಾರಕ್ಕೆ 10 ಪ್ರಶ್ನೆ ಕೇಳಿದ ಸಿದ್ದರಾಮಯ್ಯ

    ನಿಖಿಲ್ ಕುಮಾರಸ್ವಾಮಿ ರಾಜಕಾರಣದಲ್ಲಿ ಇನ್ನೂ ಯುವಕ ಎಂದು ಕಾಂಗ್ರೆಸ್ ಶಾಸಕ ಚೆಲುವರಾಯಸ್ವಾಮಿ ಹೇಳಿಕೆ ಪ್ರತಿಕ್ರಿಯಿಸಿದ ಅವರು, ಚೆಲುವಣ್ಣ ಬಹಳ ಅನುಭವಿ ರಾಜಕಾರಣಿ. ಅವರ ಮುಂದೆ ನಾನು ಹುಡುಗನೇ. ಅವರಷ್ಟು ನನಗೆ ಅನುಭವವಿಲ್ಲ. ಈ ಸಲ ಜನರು ತೀರ್ಮಾನಿಸುತ್ತಾರೆ ಎಂದು ನುಡಿದರು.

    123 ಗುರಿ ಸಾಧಿಸಲು ಕುಮಾರಸ್ವಾಮಿ ಏಕಾಂಗಿ ಹೋರಾಟ ಮಾಡುತ್ತಿದ್ದಾರೆ. ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಜನರು ಅವಕಾಶ ಮಾಡಿಕೊಟ್ಟಿದ್ದಾರೆ. ಅವರ ಕಾಲದಲ್ಲಿ ಏನು ಅಭಿವೃದ್ಧಿ ಆಗಿದೆ. ಕುಮರಸ್ವಾಮಿ 34 ತಿಂಗಳ ಅವಧಿಯಲ್ಲಿ ಏನು ಅಭಿವೃದ್ಧಿ ಮಾಡಿದ್ದಾರೆ ಅಂತ ಜನತೆಗೆ ಗೊತ್ತಿದೆ. ಕನ್ನಡಿಗರು ನಮ್ಮ ಕೈ ಹಿಡಿಯುತ್ತಾರೆ ಎಂಬ ನಂಬಿಕೆಯಿದೆ ಎಂದು ಹೇಳಿದರು. ಇದನ್ನೂ ಓದಿ: ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಸಿನಿಮಾ ಪತ್ರಕರ್ತರಿಗೆ ಫಿಲ್ಮ್‌ ಚೇಂಬರ್ ಅಭಿನಂದನೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಾವಿರ ಜನರನ್ನು ಹಿಂದೆ ಇಟ್ಟುಕೊಂಡರಷ್ಟೇ ನಾಯಕ ಆಗಲ್ಲ: ಶಿವಣ್ಣ

    ಸಾವಿರ ಜನರನ್ನು ಹಿಂದೆ ಇಟ್ಟುಕೊಂಡರಷ್ಟೇ ನಾಯಕ ಆಗಲ್ಲ: ಶಿವಣ್ಣ

    ಬೆಂಗಳೂರು: ಸಾವಿರ ಜನರನ್ನು ಹಿಂದೆ ಇಟ್ಟುಕೊಂಡರಷ್ಟೇ ನಾಯಕ ಆಗಲ್ಲ. ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗಬೇಕು. ಆಗಲೇ ನಾಯಕ ಆಗಲು ಸಾಧ್ಯ ಎಂದು ನಟ ಶಿವರಾಜ್ ಕುಮಾರ್ ತಿಳಿಸಿದ್ದಾರೆ.

    ಕೊರೊನಾ ಹಾಗೂ ಲಾಕ್‍ಡೌನ್‍ನಿಂದಾಗಿ ಚಿತ್ರರಂಗ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲು ಶಿವರಾಜ್ ಕುಮಾರ್ ಮನೆಯಲ್ಲಿ ಸಭೆ ನಡೆಸಲಾಯಿತು. ನಾಗಾವರದ ಶಿವರಾಜ್ ಕುಮಾರ್ ಮನೆಯಲ್ಲಿ ನಡೆದ ಸಭೆಯಲ್ಲಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ, ಅದರ ಸಂಸ್ಥೆಗಳು ಹಾಗೂ ಅದರ ಅಂಗ ಸಂಸ್ಥೆಗಳು ಭಾಗಿಯಾಗಿದ್ದವು.

    ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿವರಾಜ್ ಕುಮಾರ್, ಚಿತ್ರರಂಗದ ಎಲ್ಲ ವಿಭಾಗಗಳಿಂದ ಒಗ್ಗಟ್ಟಾಗಿ ಬಂದಿರುವುದು ಖುಷಿ ತಂದಿದೆ. ಇಂಡಸ್ಟ್ರಿಯ ಸಾಕಷ್ಟು ಸಮಸ್ಯೆಗಳನ್ನು ನನ್ನ ಜೊತೆ ಹಂಚಿಕೊಂಡಿದ್ದಾರೆ. ನನ್ನನ್ನು ಕಂಡರೆ ಎಲ್ಲರೂ ಇಷ್ಟಪಡುತ್ತಾರೆ. ನಾವೆಲ್ಲರೂ ಒಗ್ಗಟ್ಟಾಗಿ ಹೋಗೋಣ. ಮಾದರಿ ಇಂಡಸ್ಟ್ರಿಯಾಗಿ ಬಾಳೋಣ ಎಂದರು ಕರೆ ನೀಡಿದರು.

    ಕೊರೊನಾ ಏನೂ ದೊಡ್ಡ ವಿಷಯವಲ್ಲ, ಅದನ್ನು ಹೋಗಲಾಡಿಸಬಹುದು. ಮೂರು, ನಾಲ್ಕು ದಿನಗಳಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಭೆ ಸೇರಿ, ಅದರಲ್ಲಿ ರಾಜ್ಯ ಸರ್ಕಾರಕ್ಕೆ ಯಾವ ರೀತಿ ಮನವಿ ಸಲ್ಲಿಸಬೇಕು ಎಂಬುದರ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು.

    ನನಗೆ ಯಾವ ನಾಯಕತ್ವವೂ ಮುಖ್ಯವಲ್ಲ, ಎಲ್ಲರ ಜೊತೆಯಲ್ಲಿ ಹೋಗುತ್ತೇನೆ. ಸರ್ಕಾರದ ಬಳಿ ಹೋಗಲು ಎಲ್ಲರೂ ತೀರ್ಮಾನ ಮಾಡಿದ್ದಾರೆ. ಸರ್ಕಾರದ ಮುಂದೆ ಹೋಗುವ ಮುನ್ನ ನಾವು ಏನು ಮಾಡಿದ್ದೇವೆ ಎಂಬುದನ್ನು ತಿಳಿಯಬೇಕಿದೆ. ಸರ್ಕಾರದ ಮುಂದೆ ಹೋಗೋದು ಮುಖ್ಯವಲ್ಲ, ಇನ್ನೂ ಸಾಕಷ್ಟು ಕೆಲಸ ಮಾಡಬೇಕಿದೆ. ಟೀಮ್ ಕೆಲಸ ಆದ ಮೇಲೆ ಮುಂದುವರಿಯುತ್ತೇವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇವೆ ಎಂದರು.

    ಯಾರೂ ಧೈರ್ಯ ಕಳೆದುಕೊಳ್ಳುವ ಅವಶ್ಯಕತೆ ಇಲ್ಲ. ಎಲ್ಲರಿಗೂ ಸೂಕ್ತ ಪರಿಹಾರ ಮಾಡಲಾಗುತ್ತದೆ. ತಕ್ಷಣವೇ ಎಲ್ಲವೂ ಸರಿ ಹೋಗುತ್ತೆ ಅಂತ ಹೇಳಲು ಆಗುವುದಿಲ್ಲ. ಅದಕ್ಕೆ ಸಮಯ ಬೇಕು, ನಿಮ್ಮ ಜೊತೆ ನಾನು ಇದ್ದೇನೆ. ಎಲ್ಲರೂ ಧೈರ್ಯವಾಗಿರಿ ಎಂದು ಕಾರ್ಮಿಕರಿಗೆ ಶಿವರಾಜ್ ಕುಮಾರ್ ಧೈರ್ಯ ತುಂಬಿದರು.

    ನಿರ್ಮಾಪಕ ಸಾ.ರಾ.ಗೋವಿಂದು ಮಾತನಾಡಿ, ಸಧ್ಯದಲ್ಲೇ ಮುಖ್ಯಮಂತ್ರಿಗಳ ಭೇಟಿಯಾಗುವ ಬಗ್ಗೆ ನಿರ್ಧಾರ ಮಾಡಿದ್ದೇವೆ. ಚಿತ್ರರಂಗದ ಉಳಿವಿಗಾಗಿ ಮುಖ್ಯಮಂತ್ರಿ ಬಳಿ ಮನವಿ ಮಾಡುತ್ತೇವೆ ಎಂದರು.

    ಕೊರೊನಾ ಸಮಯದಲ್ಲಿ ಚಿತ್ರರಂಗ ಸಾಕಷ್ಟು ಸಮಸ್ಯೆ ಎದುರಿಸುತ್ತಿದೆ. ಎಲ್ಲ ರಂಗಕ್ಕೂ ಪ್ಯಾಕೆಜ್ ಘೋಷಿಸಿರೋ ಸರ್ಕಾರ, ಚಿತ್ರರಂಗದ ಬಗ್ಗೆ ನಿರ್ಲಕ್ಷ ವಹಿಸಿದೆ. ಹೀಗಾಗಿ ಸರ್ಕಾರದ ಮುಂದೆ ತಮ್ಮ ಬೇಡಿಕೆಯನ್ನಿಡಲು ಶಿವರಾಜ್ ಕುಮಾರ್ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ.

    ಸಭೆಯಲ್ಲಿ ಸಾಧುಕೋಕಿಲ, ಜಯಣ್ಣ, ಸೂರಪ್ಪ ಬಾಬು, ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಉಮೇಶ್ ಬಣಕಾರ್, ಸಾರಾ ಗೋವಿಂದು, ಕೆ.ಮಂಜು, ಗುರುಕಿರಣ್, ಭೋಗೇಂದ್ರ, ಸುರೇಶ್ ಕುಮಾರ್, ಭಾಮ ಹರೀಶ್, ಎ.ಗಣೇಶ್, ನಿರ್ಮಾಪಕ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್, ಕೋಟಿ ರಾಮು, ನಿರ್ಮಾಪಕ ವಿತರಕ ಚಿನ್ನೇಗೌಡ, ಕಾರ್ತಿಕ್ ಗೌಡ, ಛಾಯಾಗ್ರಾಹಕ ಸಂಘದ ಅದ್ಯಕ್ಷ ಜೆ.ಜೆ.ಕೃಷ್ಣ, ನಿರ್ಮಾಪಕ ಕೆಪಿ ಹಾಗೂ ಇತರರು ಇದ್ದರು.

  • ಅಸಹಾಯಕ ಸಿನಿಮಾ ಕಾರ್ಮಿಕರಿಗೆ ಇನ್ಫೋಸಿಸ್ ಫೌಂಡೇಷನ್ ಆಸರೆ

    ಅಸಹಾಯಕ ಸಿನಿಮಾ ಕಾರ್ಮಿಕರಿಗೆ ಇನ್ಫೋಸಿಸ್ ಫೌಂಡೇಷನ್ ಆಸರೆ

    -ನಿರ್ಮಾಪಕ ರಮೇಶ್ ರೆಡ್ಡಿ ಸಮ್ಮುಖದಲ್ಲೊಂದು ಸಾರ್ಥಕ ಕಾರ್ಯ

    ಬೆಂಗಳೂರು: ಕೊರೊನಾ ವೈರಸ್ ಅಟಾಟೋಪದಿಂದಾಗಿ ಹೆಚ್ಚೂ ಕಡಿಮೆ ಇಡೀ ವಿಶ್ವವೇ ಸ್ತಬ್ಧವಾಗಿದೆ. ಅದರಲ್ಲಿ ನಮ್ಮ ದೇಶ, ರಾಜ್ಯವೂ ಹೊರತಾಗಿಲ್ಲ. ಮೇಲ್ನೋಟಕ್ಕೆ ಲಾಕ್‍ಡೌನ್ ಈ ಕ್ಷಣದ ಅನಿವಾರ್ಯತೆಯಾಗಿ ಕಂಡರೂ ಕೂಡಾ ದಿನದ ತುತ್ತನ್ನು ಆ ದಿನವೇ ಸಂಪಾದಿಸಿಕೊಂಡು ಜೀವನ ಸಾಗಿಸುತ್ತಿದ್ದ ಕೋಟಿ ಕೋಟಿ ಜೀವಗಳು ತೀವ್ರತರನಾದ ಸಂಕಷ್ಟಕ್ಕೀಡಾಗಿವೆ. ಆ ಸಾಲಿನಲ್ಲಿ ಕನ್ನಡ ಚಿತ್ರರಂಗದ ಭಾಗವಾಗಿರುವ ಕಾರ್ಮಿಕರೂ ಕೂಡ ಸೇರಿಕೊಂಡಿದ್ದಾರೆ. ಅಂಥವರಿಗೆಲ್ಲ ನೆರವಾಗುವಂಥ ಸಾರ್ಥಕ ಕಾರ್ಯವನ್ನು ಸುಧಾ ಮೂರ್ತಿ ಸಾರಥ್ಯದ ಇನ್ಫೋಸಿಸ್ ಫೌಂಡೇಷನ್ ಕೈಗೊಂಡಿದೆ. ಅದು ಕನ್ನಡ ಚಿತ್ರರಂಗದಲ್ಲಿ ಯಶಸ್ವೀ ನಿರ್ಮಾಪಕರಾಗಿ ಗುರುತಿಸಿಕೊಂಡಿರುವ ರಮೇಶ್ ರೆಡ್ಡಿಯವರ ಇರುವಿಕೆಯಲ್ಲಿ ನಡೆಯುತ್ತಿದೆ.

    ಯಾವುದೇ ಸಂಕಷ್ಟದ ಕಾಲದಲ್ಲಿ ನೊಂದವರ ನೆರವಿಗೆ ನಿಲ್ಲುವಂಥಾ ತಾಯ್ತನವನ್ನು ಸುಧಾಮೂರ್ತಿ ಸದಾ ಕಾಲವೂ ಕಾಯ್ದುಕೊಳ್ಳುತ್ತಾರೆ. ಅವರ ನೆರಳಿನಲ್ಲಿಯೇ ಬೆಳೆದು ಬಂದಿರುವ ರಮೇಶ್ ರೆಡ್ಡಿಯವರು ಕೂಡಾ ಅಂಥಾದ್ದೇ ಮನಸ್ಥಿತಿಯನ್ನು ರೂಢಿಸಿಕೊಂಡಿದ್ದಾರೆ. ಅಷ್ಟಕ್ಕೂ ಅವರೂ ಕೂಡಾ ಕಾರ್ಮಿಕರ ಬದುಕಿನ ಅನಿವಾರ್ಯತೆಗಳನ್ನು, ಸಂಕಟಗಳನ್ನು ತಾವೇ ಕಂಡು ಬೆಳೆದು ಬಂದವರು. ಆದ್ದರಿಂದಲೇ ಬಹು ಬೇಗನೆ ಚಿತ್ರರಂಗದ ಕಾರ್ಮಿಕರ ಸಂಕಷ್ಟಗಳಿಗೆ ಕಣ್ಣಾಗಿದ್ದಾರೆ. ಇದರ ಭಾಗವಾಗಿಯೇ ಸುಧಾಮೂರ್ತಿಯವರ ನೆರವು ಕನ್ನಡ ಚಿತ್ರರಂಗದ ಕಾರ್ಮಿಕ ಸಂಘಟನೆಗಳ ಸಮ್ಮುಖದಲ್ಲಿ ಹಲವಾರು ಕಾರ್ಮಿಕರಿಗೆ ಜೀವನಾವಶ್ಯಕ ಸಾಮಾಗ್ರಿಗಳನ್ನು ತಲುಪಿಸಲಾಗಿದೆ.

    ನಿರ್ಮಾಪಕ ರಮೇಶ್ ರೆಡ್ಡಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಲ್ಯಾಣ ನಿಧಿ ಅಧ್ಯಕ್ಷರಾದ ಸಾ.ರಾ ಗೋವಿಂದು, ಕಾರ್ಮಿಕ ಸಂಘಟನೆಯ ಉಪಾಧ್ಯಕ್ಷರಾದ ರವಿಶಂಕರ್ ಮುಂತಾದ ಹಲವರ ಉಪಸ್ಥಿತಿಯಲ್ಲಿ ಇನ್ಫೋಸಿಸ್ ಫೌಂಡೇಷನ್ನಿನ ನೆರವನ್ನು ಕಾರ್ಮಿಕರಿಗೆ ತಲುಪಿಸುವ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಹೀಗೆ ಚಾಲನೆ ಪಡೆದುಕೊಂಡಿರುವ ಈ ನೆರವಿನ ಕಾರ್ಯಕ್ರಮವನ್ನು ಮುಂದಿನ ದಿನಗಳಲ್ಲಿ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳ ಮೂಲಕ ಮುಂದುವರೆಯಲಿದೆ. ಇದೇ ಸಂದರ್ಭದಲ್ಲಿ ಕಾರ್ಮಿಕರಿಗೆ ನೆರವಾಗಿರುವ ಸುಧಾಮೂರ್ತಿಯವರ ಕಾರ್ಯವನ್ನು ಮೆಚ್ಚಿಕೊಂಡು ಮಾತಾಡಿರುವ ರಮೇಶ್ ರೆಡ್ಡಿಯವರು `ಸುಧಾಮೂರ್ತಿಯವರ ಕಡೆಯಿಂದ ದೇಶ ಮತ್ತು ರಾಜ್ಯದಲ್ಲಿ ಅನೇಕ ಒಳ್ಳೆ ಕೆಲಸಗಳಾಗುತ್ತಿವೆ. ಈ ಕಷ್ಟ ಕಾಲದಲ್ಲಿ ಅವರು ಚಲನಚಿತ್ರ ಕಾರ್ಮಿಕರ ಬಗ್ಗೆ ಕಾಳಜಿ ತೋರಿಸಿರುವುದು ಸ್ವಾಗತಾರ್ಹ’ ಎಂದಿದ್ದಾರೆ.

    ಸುಧಾ ಮೂರ್ತಿಯವರ ಈ ಮಾನವೀಯ ನೆರವನ್ನು ಸಾ.ರಾ.ಗೋವಿಂದು ಕೂಡಾ ಮನದುಂಬಿ ಮೆಚ್ಚಿಕೊಂಡಿದ್ದಾರೆ. `ಈ ಕೊರೋನಾ ಕರ್ಫ್ಯೂನಿಂದಾಗಿ ಸಾವಿರಾರು ಚಲನಚಿತ್ರ ಕಾರ್ಮಿಕ ಕುಟುಂಬಗಳು ಸಂಕಷ್ಟಕ್ಕೀಡಾಗಿವೆ. ದಿನನಿತ್ಯದ ಜೀವನಕ್ಕೂ ಪರದಾಡುವ ಸ್ಥಿತಿ ತಲುಪಿಕೊಂಡಿರುವ ಅಂಥವರಿಗೆಲ್ಲ ಸುಧಾಮೂರ್ತಿಯವರ ನೆರವು ನೀಡುತ್ತಿರೋದು ಸಂತಸದ ವಿಷಯ’ ಎಂದಿದ್ದಾರೆ.

    ಒಟ್ಟಾರೆಯಾಗಿ ಇದೊಂದು ಸಾರ್ಥಕ ಕಾರ್ಯಕ್ರಮ. ಅದು ಇದೀಗ ಗಾಳಿಪಟ-2 ಚಿತ್ರದ ನಿರ್ಮಾಪಕರೂ ಆಗಿರುವ ರಮೇಶ್ ರೆಡ್ಡಿಯವರ ಸಮ್ಮುಖದಲ್ಲಿಯೇ ನಡೆದಿರೋದು ನಿಜಕ್ಕೂ ಖುಷಿಯ ಸಂಗತಿ. ಯಾಕೆಂದರೆ, ರಮೇಶ್ ರೆಡ್ಡಿಯವರೂ ಕೂಡಾ ನಾನಾ ಪಡಿಪಾಟಲುಗಳನ್ನು ಅನುಭವಿಸುತ್ತಾ, ಗಾರೆ ಕಾರ್ಮಿಕರಾಗಿಯೂ ದುಡಿದು ಅನುಭವ ಹೊಂದಿರುವವರು. ಆ ಕಷ್ಟದ ದಿನಗಳ ನೆನಪಿನ ಪಸೆಯನ್ನು ಇನ್ನೂ ಮನಸಲ್ಲಿಟ್ಟುಕೊಂಡಿರುವ ಅವರೀಗ ಇಂಥಾದ್ದೊಂದು ಮಾನವೀಯ ಕಾರ್ಯಕ್ರಮದ ಭಾಗವಾಗಿರೋದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

  • ಸಿನಿಮಾ ಕೆಲಸಗಾರರಿಗಾಗಿ 50 ಲಕ್ಷ ರೂ. ದಾನ ನೀಡಿದ ರಜನಿ

    ಸಿನಿಮಾ ಕೆಲಸಗಾರರಿಗಾಗಿ 50 ಲಕ್ಷ ರೂ. ದಾನ ನೀಡಿದ ರಜನಿ

    ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಕಷ್ಟದಲ್ಲಿರುವವರಿಗೆ ಹಾಗೂ ಪ್ರಕೃತಿ ವಿಕೋಪಗಳಂತಹ ಸಂದರ್ಭದಲ್ಲಿ ಸಹಾಯ ಹಸ್ತ ಚಾಚುವಲ್ಲಿ ಎತ್ತಿದ ಕೈ. ಯಾವುದೇ ಪ್ರಕೃತಿ ವಿಕೋಪ ಸಂದರ್ಭಗಳಲ್ಲಿಯೂ ಅವರು ಲಕ್ಷ ಲಕ್ಷ ರೂಗಳನ್ನು ಸಹಾಯದ ರೂಪದಲ್ಲಿ ನೀಡುತ್ತಾರೆ. ಅದೇ ರೀತಿ ಇದೀಗ ಕೊರೊನಾದಿಂದ ತತ್ತರಿಸಿರುವ ಸಿನಿಮಾ ಕ್ಷೇತ್ರದ ದಿನಗೂಲಿ ನೌಕರರಿಗೂ ಸಹಾಯ ಹಸ್ತ ಚಾಚಿದ್ದಾರೆ.

    ಮಹಾಮಾರಿ ಕೊರೊನಾ ವೈರಸ್‍ನಿಂದಾಗಿ ಇಡೀ ದೇಶವೇ ತತ್ತರಿಸಿ ಹೋಗಿದೆ. ಎಲ್ಲವೂ ಸ್ತಬ್ಧವಾಗಿದೆ, ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಯಾವುದೇ ಕಾರ್ಖಾನೆ, ಕಂಪನಿಗಳು ಕಾರ್ಯನಿರ್ವಹಿಸುತ್ತಿಲ್ಲ. ಕೆಲವು ಕಂಪನಿಗಳು ವರ್ಕ್ ಫ್ರಮ್ ಹೋಮ್ ಪದ್ಧತಿ ಅನುಸರಿಸಿದರೆ, ಇನ್ನೂ ಕೆಲ ಕಂಪನಿಗಳು ತಾತ್ಕಾಲಿಕವಾಗಿ ಕಾರ್ಯವನ್ನು ಸ್ಥಗಿತಗೊಳಿಸಿವೆ. ಮಾರ್ಚ್ 31ರ ವರೆಗೆ ಇದೇ ಪರಿಸ್ಥಿತಿ ಮುಂದುವರಿಯಲಿದ್ದು, ಎಲ್ಲರೂ ಆತಂಕದಲ್ಲಿದ್ದಾರೆ.

    ಕೊರೊನಾ ಎಫೆಕ್ಟ್ ಸಿನಿಮಾ ರಂಗಕ್ಕೂ ತಟ್ಟಿದ್ದು, ಸಿನಿಮಾ ಕ್ಷೇತ್ರದ ಎಲ್ಲ ಕೆಲಸಗಳು ಸ್ಥಗಿತಗೊಂಡಿವೆ. ನಟ, ನಟಿಯರು ಸ್ವಯಂ ದಿಗ್ಬಂಧನ ವಿಧಿಸಿಕೊಂಡು ಮನೆಯಲ್ಲಿ ಕಾಲ ಕಳೆಯುತ್ತಿದ್ದಾರೆ. ಹೀಗಾಗಿ ಸಿನಿಮಾ ಕ್ಷೇತ್ರ ಸ್ತಬ್ಧವಾಗಿದೆ. ಇದರ ಎಫೆಕ್ಟ್ ಸಿನಿಮಾ ಕ್ಷೇತ್ರದ ದಿನಗೂಲಿ ನೌಕರರ ಮೇಲೆ ಬಿದ್ದಿದ್ದು, ಕೆಲಸವಿಲ್ಲದೆ, ಸಂಬಳ ಇಲ್ಲದೆ ಪರದಾಡುತ್ತಿದ್ದಾರೆ. ತುತ್ತು ಅನ್ನಕ್ಕೂ ಬೇಡುವ ಪರಿಸ್ಥಿತಿ ಎದುರಾಗಿದೆ ಹೀಗಾಗಿ ಇಂತಹ ಕೆಲಸಗಾರರಿಗೆ ಇದೀಗ ಸಿನಿಮಾ ನಟರು ಸಹಾಯ ಹಸ್ತ ಚಾಚಿದ್ದಾರೆ.

    ನಟರಾದ ಸೂರ್ಯ ಮತ್ತು ವಿಜಯ್ ಸೇತುಪತಿ ಈಗಾಗಲೇ ತಲಾ 10 ಲಕ್ಷ ರೂ.ಗಳನ್ನು ನೀಡಿದ್ದಾರೆ. ಇದಾದ ಬಳಿಕ ಇದೀಗ ಸೂಪರ್ ಸ್ಟಾರ್ ರಜನಿಕಾಂತ್ ಸಹ ಕಾರ್ಮಿಕರ ಕಷ್ಟಕ್ಕೆ ಮಿಡಿದಿದ್ದಾರೆ. ಚಲನಚಿತ್ರ ಕಾರ್ಮಿಕರಿಗೆಂದೇ ಇರುವ ಫಿಲ್ಮ್ ಎಂಪ್ಲಾಯಿಸ್ ಫೆಡರೇಷನ್ ಆಫ್ ಸೌತ್ ಇಂಡಿಯಾ (ಎಫ್‍ಇಎಫ್‍ಎಸ್‍ಐ) ಸಂಘಟನೆಗೆ ರಜನಿಕಾಂತ್ 50 ಲಕ್ಷ ರೂ. ನೀಡಿದ್ದಾರೆ. ಈ ಸಂಘಟನೆಯಲ್ಲಿ ಸುಮಾರು 25 ಸಾವಿರ ಕಾರ್ಮಿಕರು ಕೆಲಸ ಮಾಡುತ್ತಿದ್ದು, ಕೊರೊನಾ ಎಫೆಕ್ಟ್‍ನಿಂದಾಗಿ ಕೆಲಸವಿಲ್ಲದೆ ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ. ಇದನ್ನು ಕಂಡ ರಜನಿ, ಸಹಾಯ ಹಸ್ತ ಚಾಚುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

    ರಜನಿಕಾಂತ್ ಸದ್ಯ ಅಣ್ಣಾತೆ ಚಿತ್ರದಲ್ಲಿ ನಟಿಸುತ್ತಿದ್ದು, ಕೊರೊನಾ ಭೀತಿಯಿಂದಾಗಿ ಸಿನಿಮಾದ ಚಿತ್ರೀಕರಣವನ್ನು ಬಂದ್ ಮಾಡಲಾಗಿದೆ. ಈ ಚಿತ್ರಕ್ಕೆ ಶಿವ ಆ್ಯಕ್ಷನ್ ಕಟ್ ಹೇಳಿದ್ದು, ನಯನತಾರಾ, ಕೀರ್ತಿ ಸುರೇಶ್ ನಾಯಕಿಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ.