Tag: Cinema Theatre

  • ಬಸ್, ಸಿನಿಮಾ ಥಿಯೇಟರ್, ಪಬ್ ಬಾರ್‌ಗಳಲ್ಲೂ ಮಾಸ್ಕ್ ಅಗತ್ಯ – ರಾಜ್ಯ ಆರೋಗ್ಯ ಇಲಾಖೆ ಗೈಡ್‌ಲೈನ್ಸ್‌ನಲ್ಲಿ ಏನೇನಿದೆ?

    ಬಸ್, ಸಿನಿಮಾ ಥಿಯೇಟರ್, ಪಬ್ ಬಾರ್‌ಗಳಲ್ಲೂ ಮಾಸ್ಕ್ ಅಗತ್ಯ – ರಾಜ್ಯ ಆರೋಗ್ಯ ಇಲಾಖೆ ಗೈಡ್‌ಲೈನ್ಸ್‌ನಲ್ಲಿ ಏನೇನಿದೆ?

    ಬೆಂಗಳೂರು: ಚೀನಾ (China) ಸೇರಿ ಹಲವು ದೇಶಗಳಲ್ಲಿ ಕೋವಿಡ್ (Covid) ಆರ್ಭಟ ಜೋರಾಗಿದ್ದು, ಕೇಂದ್ರ ಸರ್ಕಾರದ ಬೆನ್ನಲ್ಲೇ ರಾಜ್ಯಗಳೂ ಅಲರ್ಟ್ ಆಗಿವೆ. ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಿರೋ ಬೆನ್ನಲ್ಲೇ, ಇತ್ತ ರಾಜ್ಯ ಸರ್ಕಾರ ಕೂಡ ಸಿಎಂ ಬೊಮ್ಮಾಯಿ (Basavaraj Bommai) ನೇತೃತ್ವದಲ್ಲಿ ಸಭೆ ಸೇರಿ ಕೆಲವೊಂದು ಮಹತ್ವದ ನಿರ್ಣಯಗಳನ್ನು ಕೈಗೊಂಡಿದ್ದು, ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿಯನ್ನ (Karnataka Covid Guidelines) ಬಿಡುಗಡೆ ಮಾಡಿದೆ.

    ಹೊಸ ಮಾರ್ಗಸೂಚಿಯಲ್ಲಿ ಏನಿದೆ?
    ಪಬ್, ಬಾರ್, ರೆಸ್ಟೋರೆಂಟ್, ಸಿನಿಮಾ ಹಾಲ್‌ಗಳು, ಶಾಪಿಂಗ್ ಮಾಲ್, ಕಚೇರಿಗಳು ಸೇರಿದಂತೆ ಬಸ್, ರೈಲು, ಮೆಟ್ರೋ, ವಿಮಾನಯಾನ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಅಗತ್ಯವಾಗಿರುತ್ತದೆ. ಅದರಲ್ಲೂ ವಿಶೇಷವಾಗಿ ವೃದ್ಧರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು, ಒಳಾಂಗಣದಲ್ಲಿದ್ದಾಗಲೂ ಮಾಸ್ಕ್ ಧರಿಸುವುದು ಉತ್ತಮ. ಇದನ್ನೂ ಓದಿ: ಕೋವಿಡ್ ಪರೀಕ್ಷೆ ಹೆಚ್ಚಿಸಿ.. ಎಲ್ಲರೂ ಮಾಸ್ಕ್ ಧರಿಸಿ – ಮೋದಿ ಸಲಹೆ

    ಅರ್ಹರೆಲ್ಲರೂ ಕೋವಿಡ್-19 ಲಸಿಕೆಯ ಬೂಸ್ಟರ್ ಡೋಸ್ ಅನ್ನು ಶೀಘ್ರವಾಗಿ ಪಡೆದುಕೊಳ್ಳಬೇಕು. ಉಸಿರಾಟದ ಸಮಸ್ಯೆ ಹಾಗೂ ಕೋವಿಡ್-19 ಸೋಂಕಿನ ಲಕ್ಷಣಗಳನ್ನು ಹೊಂದಿರುವವರು, ಸ್ವಯಂ ಪ್ರತ್ಯೇಕವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಫಲಿತಾಂಶದ ಆಧಾರದ ಮೇಲೆ ಚಾಲ್ತಿಯಲ್ಲಿರುವ ಪ್ರಮಾಣೀಕೃತ ಶಿಷ್ಠಾಚಾರದ ಅನ್ವಯ ಕ್ರಮಗಳನ್ನು ಪಾಲಿಸುವುದು.

    ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಮಧ್ಯಮ ಪ್ರಮಾಣದ ವ್ಯಾಯಾಮ, ಉಸಿರಾಟದ ವ್ಯಾಯಾಮಗಳು ಹಾಗೂ ಧ್ಯಾನವನ್ನು ಮಾಡಬಹುದಾಗಿದೆ. ಮುಂದುವರೆದು, ಸಭೆ ಹಾಗೂ ಸಮಾರಂಭಗಳ ಆಯೋಜಕರು ಈ ಕೆಳಗಿನ ಮಾರ್ಗಸೂಚಿಯನ್ನು ಪಾಲಿಸುವಂತೆ ನಿರೀಕ್ಷಿಸಲಾಗಿದೆ. ಇದನ್ನೂ ಓದಿ: ಪ್ರೇಮಿಗಳ ಸ್ವರ್ಗ ತಾಜ್‌ಮಹಲ್ ಭೇಟಿಗೂ ಕೋವಿಡ್ ಪರೀಕ್ಷೆ ಕಡ್ಡಾಯ

    ಸಾರ್ವಜನಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆದಷ್ಟೂ ಹೊರಾಂಗಣದಲ್ಲಿ ಮತ್ತು ಒಳ್ಳೆಯ ಗಾಳಿ ಬೆಳಕಿನ ವ್ಯವಸ್ಥೆ ಇರುವ ಸ್ಥಳಗಳಲ್ಲಿ, ಹಗಲು ಹೊತ್ತಿನಲ್ಲಿ ನಡೆಸುವುದರಿಂದ ಆರೋಗ್ಯದ ಮೇಲೆ ಮುಂಜಾನೆ ಹಾಗೂ ಸಂಜೆಯ ಶೀತ ಗಾಳಿಯ ಪರಿಣಾಮವನ್ನು ತಡೆಗಟ್ಟಬಹುದು. ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದ್ದು, ದೈಹಿಕ ಅಂತರವನ್ನು ಪಾಲಿಸುವುದು ಅಗತ್ಯವಾಗಿದೆ. ಹೆಚ್ಚಿನ ಜನರು ಗುಂಪುಗೂಡುವಿಕೆಯನ್ನು, ವಿಶೇಷವಾಗಿ ಒಳಾಂಗಣಗಳಲ್ಲಿ ಗುಂಪುಗೂಡುವಿಕೆಯನ್ನು ಕಟ್ಟುನಿಟ್ಟಾಗಿ ತಡೆಗಟ್ಟಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಟಿಕೆಟ್ ದರ ಇಳಿಕೆ – `ಗಂಧದಗುಡಿ’ ಚಿತ್ರ ವೀಕ್ಷಿಸುವ ಪ್ರೇಕ್ಷಕರಿಗೆ ಬಂಪರ್ ಆಫರ್

    ಟಿಕೆಟ್ ದರ ಇಳಿಕೆ – `ಗಂಧದಗುಡಿ’ ಚಿತ್ರ ವೀಕ್ಷಿಸುವ ಪ್ರೇಕ್ಷಕರಿಗೆ ಬಂಪರ್ ಆಫರ್

    ರ್ನಾಟಕ ರತ್ನ (Karnataka Ratna Award) ಡಾ.ಪುನೀತ್ ರಾಜ್ ಕುಮಾರ್ (Puneeth Rajkumar) ಕನಸಿನ `ಗಂಧದಗುಡಿ’ ರಿಲೀಸ್ ಒಂದು ವಾರದಲ್ಲೇ ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣ್ತಿದೆ. ನೂರಾರು ಚಿತ್ರಮಂದಿರಗಳಲ್ಲಿ (Cinema Theatre,) ಬಿಡುಗಡೆ ಆಗಿದ್ದ, ಡಾಕ್ಯುಮೆಂಟರಿ ಸಿನಿಮಾಗೆ ಅಪ್ಪು ಅಭಿಮಾನಿಗಳಿಂದ ಭರ್ಜರಿ ರೆಸ್ಪಾನ್ಸ್ ಬರ್ತಿದೆ. ವೀಕೆಂಡ್ ರಜೆಗಳೂ ಚಿತ್ರಕ್ಕೆ ಸಾಥ್ ನೀಡಿದ್ದು ಅಭಿಮಾನಿಗಳು ಚಿತ್ರ ಮಂದಿರದತ್ತ ಬರುತ್ತಿದ್ದಾರೆ.

    ಈ ಸಿನಿಮಾಗೆ 2 ಕೋಟಿ ಖರ್ಚು ಮಾಡಲಾಗಿದೆ ಎಂದು ಹೇಳಲಾಗಿದೆ. ಆದರೆ ಸಿನಿ ಪಂಡಿತರ ಲೆಕ್ಕಾಚಾರದಲ್ಲಿ ಈಗಾಗಲೇ ಗಂಧದಗುಡಿ (Gandhadagudi) 25 ಕೋಟಿಗೂ ಅಧಿಕ ಕಲೆಕ್ಷನ್ ಬಾಚಿಕೊಂಡಿದೆ. ಇದೀಗ ರಾಜ್ಯಾದ್ಯಂತ ಪ್ರತಿಯೊಬ್ಬರೂ ಸಿನಿಮಾ (Cinema) ವೀಕ್ಷಣೆ ಮಾಡಲಿ ಹಾಗೂ ಪರಿಸರ ಜಾಗೃತಿ ಅಳವಡಿಸಿಕೊಳ್ಳಲಿ ಅನ್ನೋ ಕಾರಣಕ್ಕೆ ಟಿಕೆಟ್ ದರದಲ್ಲಿ ಭಾರೀ ರಿಯಾಯಿತಿ ನೀಡಲಾಗಿದೆ. ಇದನ್ನೂ ಓದಿ: ‘ಗಂಧದ ಗುಡಿ’ ರಿಲೀಸ್ ಆಗಿ ಒಂದು ವಾರ: ಬಾಕ್ಸ್ ಆಫೀಸ್ ಗಳಿಕೆ ಎಷ್ಟು?

    ಈ ಕುರಿತು ಪ್ರಕಟಣೆ ಹೊರಡಿಸಿರುವ ಅಶ್ವಿನಿ ಪುನೀತ್ ರಾಜ್‌ಕುಮಾರ್ (Ashwini Puneet Rajkumar), ಗಂಧದಗುಡಿ ಅಪ್ಪು ರವರ ಒಂದು ಕನಸು ಕರ್ನಾಟಕದ ವನ್ಯ ಸಂಪತ್ತು ಹಾಗೂ ಪ್ರಕೃತಿ ಸೌಂದರ್ಯವನ್ನು ಕನ್ನಡಿಗರಿಗೆ ಪರಿಚಯಿಸುವ ಅವರ ಹಂಬಲ ಈ ಸಿನಿಮಾ ರೂಪಗೊಳ್ಳಲು ಕಾರಣ. ಅಪ್ಪು ಅವರ ಉದ್ದೇಶ ಈ ಸಿನಿಮಾ ಎಲ್ಲ ಕನ್ನಡಿಗರು ನೋಡಬೇಕೆಂಬುದು, ಅದರಲ್ಲೂ ಮಕ್ಕಳು ನೋಡಬೇಕು ಎಂಬುದಾಗಿದೆ. ಈ ಸಲುವಾಗಿ ನಾನು ಹಾಗೂ ಚಿತ್ರ ತಂಡ ಎಲ್ಲರೊಡನೆ ಚರ್ಚಿಸಿ ವಿತರಕರ ಹಾಗೂ ಪ್ರದರ್ಶಕರ ಸಹಕಾರದೊಂದಿಗೆ ನಮ್ಮ ಚಿತ್ರ `ಗಂಧದಗುಡಿ’ಯನ್ನು ನವೆಂಬರ್ 7 ರಿಂದ 10ರ ವರೆಗೆ ಸಿಂಗಲ್ ಸ್ಕ್ರೀನ್ ಥೀಯೇಟರ್ ಗಳಲ್ಲಿ 756 ರೂ.ಗಳಿಗೆ ಹಾಗೂ ಮಲ್ಟಿಪ್ಲೆಕ್ಸ್‌ ಗಳಲ್ಲಿ (Mulitiplex) 112 ರೂ.ಗಳಿಗೆ ಕರ್ನಾಟಕ ರಾಜ್ಯಾದ್ಯಂತ ದಿನದ ಎಲ್ಲಾ ಆಟಗಳು ಪ್ರದರ್ಶನ ಮಾಡಬೇಕೆಂದು ನಿರ್ಧಾರ ಮಾಡಿದ್ದೇವೆ. ನಮ್ಮ ಮಕ್ಕಳ ನಾಳೆಗಳಿಗಾಗಿ ಕಾಡನ್ನು ಸಂರಕ್ಷಿಸೋಣ, ಗಂಧದಗುಡಿ ಯನ್ನು ತೋರಿಸೋಣ ಎಂದು ಕರೆ ಕೊಟ್ಟಿದ್ದಾರೆ. ಇದನ್ನೂ ಓದಿ: ಚಿಲ್ಲರೆ, ಮಾನಗೆಟ್ಟವನೇ ಎಂದು ರೂಪೇಶ್ ರಾಜಣ್ಣಗೆ ಸಂಬರ್ಗಿ ಕ್ಲಾಸ್

    ಗಂಧದಗುಡಿ ಸಿನಿಮಾವನ್ನು ಜಗತ್ತಿಗೆ ತೋರಿಸುವ ಹಂಬಲ ದಿ. ಪುನೀತ್ ಅವರಿಗಿತ್ತು. ಅವರ ಕನಸನ್ನು ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಈಡೇರಿಸುತ್ತಿದ್ದು, ಚಿತ್ರವನ್ನು ಎಲ್ಲರಿಗೂ ತೋರಿಸಲು ಹಲವು ಕಾರ್ಯಕ್ರಮಗಳನ್ನೂ ರೂಪಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]