Tag: cinema

  • ರಚಿತಾ ರಾಮ್ ಹುಟ್ಟುಹಬ್ಬಕ್ಕೆ ಲ್ಯಾಂಡ್ ಲಾರ್ಡ್ ಟೀಮ್‌ನಿಂದ ಗಿಫ್ಟ್

    ರಚಿತಾ ರಾಮ್ ಹುಟ್ಟುಹಬ್ಬಕ್ಕೆ ಲ್ಯಾಂಡ್ ಲಾರ್ಡ್ ಟೀಮ್‌ನಿಂದ ಗಿಫ್ಟ್

    ಟಿ ರಚಿತಾ ರಾಮ್ (Rachita Ram) ಅವರು ರಾಜರಾಜೇಶ್ವರಿ ನಗರದಲ್ಲಿರುವ ತಮ್ಮನಿವಾಸದಲ್ಲಿ ಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡರು. ಇದೇ ಸಂದರ್ಭದಲ್ಲಿ ರಚಿತಾರಾಮ್ ಅಭಿನಯದ ʻಲ್ಯಾಂಡ್ ಲಾರ್ಡ್ʼ ಚಿತ್ರದ ರಚಿತಾ ರಾಮ್ ಅವರ ಅವರ ಕ್ಯಾರೆಕ್ಟರ್ ಟೀಸರ್ ಬಿಡುಗಡೆ ಮಾಡಲಾಯಿತು.

    ಕೆ.ವಿ. ಸತ್ಯಪ್ರಕಾಶ್, ಹೇಮಂತ್ ಗೌಡ ಕೆ.ಎಸ್. ಅವರ ನಿರ್ಮಾಣದ, ಜಡೇಶ್ ಕೆ.ಹಂಪಿ ಅವರ ನಿರ್ದೇಶನದ ‘ಲ್ಯಾಂಡ್ ಲಾರ್ಡ್’ ಚಿತ್ರದಲ್ಲಿ ದುನಿಯಾ ವಿಜಯ್ ನಾಯಕನಾಗಿ ನಟಿಸಿದ್ದು ರಚಿತಾ ರಾಮ್ ನಾಯಕಿ ಪಾತ್ರ ನಿರ್ವಹಿಸಿದ್ದಾರೆ. ಇದನ್ನೂ ಓದಿ: ಕೋಣ ಚಿತ್ರದ ಹೊಸ ಅವತಾರದಲ್ಲಿ ಕೋಮಲ್: ಟ್ರೇಲರ್‌ ರಿಲೀಸ್

    ಈ ಸಂದರ್ಭದಲ್ಲಿ ಮಾತನಾಡಿದ ನಟಿ, ಈ ವರ್ಷದ ಬರ್ತ್ ಡೇ ನನಗೆ ತುಂಬಾ ಸ್ಪೆಷಲ್. ʻಲ್ಯಾಂಡ್ ಲಾರ್ಡ್ʼ ಚಿತ್ರತಂಡದ ಕಡೆಯಿಂದ ಈ ಟೀಸರ್ ನನಗೆ ಸರ್‌ಪ್ರೈಸ್ ಗಿಫ್ಟ್. ಇದೊಂದು ವಿಭಿನ್ನ ಪಾತ್ರ ಎಂದು ಹೇಳಿದರು.

    ನಿರ್ದೇಶಕ ಜಡೇಶ್ ಕೆ.ಹಂಪಿ ಮಾತನಾಡಿ, ಇಂಥಹ ಪಾತ್ರವನ್ನು ರಚಿತಾ ಅವರು ಒಪ್ಪುತ್ತಾರಾ? ಎಂಬ ಆತಂಕವಿತ್ತು. ಅವರು ಒಪ್ಪಿಕೊಂಡು ಅಭಿನಯಿಸಿದ್ದು ತುಂಬಾ ಸಂತೋಷ. ʻಕೂಲಿʼ ಚಿತ್ರದಲ್ಲಿ ಕಲ್ಯಾಣಿಯಾಗಿ ನಟಿಸಿದ್ದರು. ಅದಕ್ಕಿಂತ ಬೇರೆ ಥರದಲ್ಲಿ ಈ ಪಾತ್ರ ಮೂಡಿ ಬಂದಿದೆ. ಇದರಲ್ಲಿ ಅವರು ಚಿನ್ನಮ್ಮ ಆಗಿದ್ದಾರೆ ಎಂದು ಹೇಳಿದರು.

    ನಿರ್ಮಾಪಕ ಕೆ.ವಿ. ಸತ್ಯಪ್ರಕಾಶ್ ಮಾತನಾಡಿ, ನಮ್ಮ ಚಿತ್ರದಲ್ಲಿ ರಚಿತಾರಾಮ್ ಅವರು ಅದ್ಭುತ ಪಾತ್ರ ನಿರ್ವಹಿಸಿದ್ದಾರೆ. ಅವರು ರಾಷ್ಟ್ರಪ್ರಶಸ್ತಿ ಪಡೆಯುವ ಮಟ್ಟಕ್ಜೆ ಬೆಳೆಯಲಿ. ಇದು ನೈಜ ಘಟನೆಯನ್ನು ಆಧರಿಸಿ ನಿರ್ಮಿಸಿದ ಚಿತ್ರ. ಈ ಚಿತ್ರದ ಅಭಿನಯಕ್ಕೆ ರಚಿತಾ ರಾಮ್ ಅವರಿಗೆ ರಾಷ್ಟ್ರಮಟ್ಟದ ಪ್ರಶಸ್ತಿ ಸಿಗುತ್ತದೆ ಎಂದು ಭವಿಷ್ಯ ನುಡಿದರು. ಇದನ್ನೂ ಓದಿ:ಮಲ್ಟಿಪ್ಲೆಕ್ಸ್ ಗಳಲ್ಲಿ ಸಿನಿಮಾ ನೋಡಿದ್ರೆ ಟಿಕೆಟ್ ಜೋಪಾನವಾಗಿ ಇಟ್ಕೊಳ್ಳಿ: ಪ್ರೇಕ್ಷಕರಿಗೆ ಸರ್ಕಾರ ಮನವಿ

  • ಕೋಣ ಚಿತ್ರದ ಹೊಸ ಅವತಾರದಲ್ಲಿ ಕೋಮಲ್: ಟ್ರೇಲರ್‌  ರಿಲೀಸ್

    ಕೋಣ ಚಿತ್ರದ ಹೊಸ ಅವತಾರದಲ್ಲಿ ಕೋಮಲ್: ಟ್ರೇಲರ್‌ ರಿಲೀಸ್

    ಹಜಾಭಿನಯದ ಮೂಲಕ ಮನೆ ಮಾತಾಗಿರುವ ಕೋಮಲ್ ಕುಮಾರ್ (Komal) ಇದೀಗ ಕೋಣ (Kona) ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರಲು ರೆಡಿಯಾಗುತ್ತಿದ್ದಾರೆ. ಟೀಸರ್ ಮೂಲಕ ಕುತೂಹಲ ಹೆಚ್ಚಿಸಿದ್ದ ಕೋಣ ಚಿತ್ರದ ಟ್ರೇಲರ್ (Trailer) ಇದೀಗ ರಿಲೀಸ್ ಆಗಿದೆ. ಕಾಮಿಡಿ, ಆಕ್ಷನ್, ಸಸ್ಪೆನ್ಸ್ ಅಂಶಗಳನ್ನು ಬ್ಲೆಂಡ್ ಮಾಡಿ ಟ್ರೇಲರ್ ಕಟ್ ಮಾಡಲಾಗಿದೆ. ಇಲ್ಲಿ ಕೋಮಲ್ ಹೊಸ ಅವತಾರದಲ್ಲಿ ಕಾಣಿಸುತ್ತಾರೆ.

    ನಿರ್ಮಾಣದಲ್ಲಿ ಕೈ ಜೋಡಿಸಿರುವ ತನಿಷಾ ಕುಪ್ಪಂಡ (Tanisha Kuppanda) ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಕೀರ್ತಿರಾಜ್, ರಿತ್ವಿ ಜಗದೀಶ್, ನಮ್ರತಾ ಗೌಡ, ವಿನಯ್ ಗೌಡ, ರಾಘು ರಾಮನಕೊಪ್ಪ, ವಿಜಯ್ ಚೆಂಡೂರ್, ಎಂ.ಕೆ.ಮಠ್, ರಂಜಿತ್ ಗೌಡ, ತುಕಾಲಿ ಸಂತೋಷ್, ಹುಲಿ ಕಾರ್ತಿಕ್, ನಿರಂಜನ್, ಅನಂತ್, ಶಿಶಿರ್ ಶಾಸ್ತ್ರಿ, ಗೋಲ್ಡ್ ಸುರೇಶ್, ಸುಷ್ಮಿತ, ಜಗಪ್ಪ, ಮಂಜು ಪಾವಗಡ, ಕುರಿ ಸುನಿಲ್, ಮೋಹನ್ ಕೃಷ್ಣರಾಜ್ ಹೀಗೆ ದೊಡ್ಡ ತಾರಾಬಳಗ ಚಿತ್ರದಲ್ಲಿದೆ.  ಇದನ್ನೂ ಓದಿ:  ಮೊದಲ ದಿನವೇ ಬುಕ್‌ಮೈಶೋದಲ್ಲಿ ದಾಖಲೆ ಬರೆದ ಕಾಂತಾರ

    ಡಾರ್ಕ್ ಕಾಮೆಡಿ ಶೈಲಿಯಲ್ಲಿ ‘ಕೋಣ’ ಸಿನಿಮಾ ಮೂಡಿಬರಲಿದೆ. ಜಗ್ಗೇಶ್ ನಟನೆಯ ‘8 MM’ ಸಿನಿಮಾಗೆ ನಿರ್ದೇಶನ ಮಾಡಿದ್ದ ಎಸ್. ಹರಿಕೃಷ್ಣ ಅವರು ಈ ಸಿನಿಮಾಗೆ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ರಾಜ್ಯ ಪ್ರಶಸ್ತಿ ವಿಜೇತ ನಿರ್ದೇಶಕ ನಾಗೇಶ್.ಎನ್ ಕೋ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದಾರೆ. ಒಂದು ನೈಜ ಘಟನೆಯನ್ನು ಆಧರಿಸಿ ಈ ಚಿತ್ರ ತಯಾರಾಗಿದ್ದು ತೆರೆಗೆ ಬರಲು ಸಿದ್ಧವಾಗಿದೆ. ಕೋಮಲ್ ಕುಮಾರ್ ಅವರು ಈವರೆಗೂ ಕಾಣಿಸಿಕೊಂಡಿರದ ಪಾತ್ರವನ್ನು ‘ಕೋಣ’ ಸಿನಿಮಾದಲ್ಲಿ ನಿಭಾಯಿಸಿದ್ದಾರೆ. ಇದನ್ನೂ ಓದಿKantara: Chapter 1ಗೆ ಭರ್ಜರಿ ರೆಸ್ಪಾನ್ಸ್  ಮೊದಲ ದಿನವೇ 55 ಕೋಟಿ ಗಳಿಕೆ

    ಕುಪ್ಪಂಡಾಸ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ತನಿಷಾ ಕುಪ್ಪಂಡ, ಕಾರ್ತಿಕ್ ಕಿರಣ್ ಸಂಕಪಾಲ್, ರವಿಕಿರಣ್ .ಎನ್ ಅವರು ‘ಕೋಣ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಶಶಾಂಕ್ ಶೇಷಗಿರಿ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ವೀನಸ್ ನಾಗರಾಜ್ಮೂರ್ತಿ ಛಾಯಾಗ್ರಹಣದ ಜವಾಬ್ದಾರಿ ನಿಭಾಯಿಸಿದ್ದು ಇವರ ಜೊತೆ ವಿಶಾಲ್ ಗೌಡ ಸಹ ಕೈ ಜೋಡಿಸಿದ್ದಾರೆ. ಉಮೇಶ್ ಆರ್. ಬಿ. ಅವರ ಸಂಕಲನ ಚಿತ್ರಕ್ಕಿದೆ, ಸಾಹಸ ನಿರ್ದೇಶಕರಾಗಿ ವಿನೋದ್‌ ಕುಮಾರ್‌, ಮುರುಗನ್ ಅವರ ನೃತ್ಯ ನಿರ್ದೇಶನ ಹಾಗೂ ಶಶಿಕುಮಾರ್, ಸಂದೀಪ್ ಆಚಾರ್ಯ ಸಂಭಾಷಣೆ ಚಿತ್ರಕ್ಕಿದ್ದು ಕೋಣ ಚಿತ್ರ ಅದ್ಭುತವಾಗಿ ಮೂಡಿಬಂದಿದ್ದು ಪ್ರೇಕ್ಷಕರನ್ನ ಸೆಳೆಯುವಲ್ಲಿ ಅನುಮಾನವೇ ಇಲ್ಲ.

  • ಮೊದಲ ದಿನವೇ ಬುಕ್‌ಮೈಶೋದಲ್ಲಿ ದಾಖಲೆ ಬರೆದ ಕಾಂತಾರ

    ಮೊದಲ ದಿನವೇ ಬುಕ್‌ಮೈಶೋದಲ್ಲಿ ದಾಖಲೆ ಬರೆದ ಕಾಂತಾರ

    ರಿಷಭ್‌ ಶೆಟ್ಟಿ (Rishab Shetty) ನಟಿಸಿ, ನಿರ್ದೇಶಿಸಿದ ಕಾಂತಾರ: ಚಾಪ್ಟರ್ 1 (Kantara: Chapter 1) ಟಿಕೆಟ್‌ ಬುಕ್ಕಿಂಗ್‌ ಮಾಡುವ ಬುಕ್‌ಮೈಶೋದಲ್ಲಿ (BookMyShow) ದಾಖಲೆ ಬರೆದಿದಿದೆ.

    24 ಗಂಟೆಯಲ್ಲಿ 1.28 ಮಿಲಿಯನ್‌(12.8 ಲಕ್ಷ) ಟಿಕೆಟ್‌ ಮಾರಾಟವಾಗಿದೆ. ಈ ಮೂಲಕ 2025ರಲ್ಲಿ ಬುಕ್‌ಮೈ ಶೋದಲ್ಲಿ ಅತಿ ಹೆಚ್ಚು ಟಿಕೆಟ್‌ ಮಾರಾಟವಾದ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಸಿನಿಮಾ ತಯಾರಿಸಿದ ಹೊಂಬಾಳೆ ಸಂಸ್ಥೆ ಹೇಳಿಕೊಂಡಿದೆ.

    ಇದು ಕೇವಲ ಒಂದು ದಿನದ ಟಿಕೆಟ್‌ ಮಾರಾಟದ ಲೆಕ್ಕ ಆಗಿದ್ದು, ಶುಕ್ರವಾರ ಮತ್ತು ಶನಿವಾರದ ಟಿಕೆಟ್‌ಗಳು ಭರ್ಜರಿಯಾಗಿ ಮಾರಾಟವಾಗಿದೆ. ಹೀಗಾಗಿ ಎರಡನೇ ದಿನದಲ್ಲಿ ಕಾಂತಾರ 100 ಕೋಟಿ ರೂ. ಕ್ಲಬ್‌ ಸೇರುವ ಸಾಧ್ಯತೆಯಿದೆ. ಇದನ್ನೂ ಓದಿ: Kantara: Chapter 1ಗೆ ಭರ್ಜರಿ ರೆಸ್ಪಾನ್ಸ್ ಮೊದಲ ದಿನವೇ 55 ಕೋಟಿ ಗಳಿಕೆ

    ಭಾರತದಲ್ಲಿ ಒಟ್ಟು 6,500 ಚಿತ್ರ ಮಂದಿರಗಳಲ್ಲಿ ಸುಮಾರು 12,511ಕ್ಕೂ ಹೆಚ್ಚು ಶೋಗಳು ಪ್ರದರ್ಶನಗೊಂಡಿದ್ದವು. ರಿಲೀಸ್‌ಗೂ ಒಂದು ದಿನ ಮೊದಲೇ ಅಂದರೆ ಅ.1ರಂದು ದೇಶದ ವಿವಿಧೆಡೆ ಪ್ರೀಮಿಯರ್ ಶೋಗಳು ನಡೆದಿದ್ದು, ಈ ಶೋಗಳೆಲ್ಲ ಹೌಸ್‌ಫುಲ್ ಪ್ರದರ್ಶನ ಕಂಡಿದ್ದವು. ಇದರಿಂದ ಸಿನಿಮಾಗೆ ಉತ್ತಮ ಪ್ರಚಾರ ಸಿಕ್ಕಿದ್ದು, ಬಿಡುಗಡೆ ದಿನ ಉತ್ತಮ ಪ್ರದರ್ಶನ ಕಂಡಿದೆ.

    ಬುಕ್‌ಮೈಶೋದಲ್ಲಿ 47 ಸಾವಿರಕ್ಕೂ ಹೆಚ್ಚು ಜನ ಸಿನಿಮಾಗೆ ಕಮೆಂಟ್‌ ಮಾಡಿದ್ದರೆ 72 ಸಾವಿರ ಜನ ವೋಟ್‌ ಮಾಡಿದ್ದು 10ಕ್ಕೆ 9.4 ಅಂಕ ನೀಡಿ ಬಹಳ ಚೆನ್ನಾಗಿದ್ದು, ಥಿಯೇಟರ್‌ನಲ್ಲಿ ನೋಡಿ ಕನ್ನಡ ಸಿನಿಮಾವನ್ನು ಪ್ರೋತ್ಸಾಹಿಸಿ ಎಂದು ಹೇಳುತ್ತಿದ್ದಾರೆ.

     

  • ಅಖಂಡ 2 ಸಿನಿಮಾ ರಿಲೀಸ್ ಡೇಟ್ ಫಿಕ್ಸ್ : ಬಾಲಯ್ಯ ನಟನೆಯ ಸಿನಿಮಾ

    ಅಖಂಡ 2 ಸಿನಿಮಾ ರಿಲೀಸ್ ಡೇಟ್ ಫಿಕ್ಸ್ : ಬಾಲಯ್ಯ ನಟನೆಯ ಸಿನಿಮಾ

    ಟಾಲಿವುಡ್ ನಟ ನಂದಮೂರಿ ಬಾಲಕೃಷ್ಣ (Nandamuri Balakrishna) ಅಭಿನಯದ ಬಹು ನಿರೀಕ್ಷಿತ ‘ಅಖಂಡ 2’ (Akhanda 2) ಸಿನಿಮಾ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಅಖಂಡ ಚಿತ್ರದ ಮುಂದುವರಿದ ಭಾಗವಾಗಿರುವ ಅಖಂಡ-2 ಡಿಸೆಂಬರ್ 5, 2025 ರಂದು ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ತೆರೆಗೆ ಬರಲಿದೆ.

    ಬೊಯಪಾಟಿ ಶ್ರೀನು ಹಾಗೂ ಬಾಲಕೃಷ್ಣ ಕಾಂಬಿನೇಷನ್ನ ನಾಲ್ಕನೇ ಸಿನಿಮಾ ಇದಾಗಿದೆ. ಈ ಹಿಂದೆ ಬಂದಿದ್ದ ಸಿಂಹ, ಲೆಜೆಂಡ್ ಹಾಗೂ 2021ರಲ್ಲಿ ಬಿಡುಗಡೆ ಆಗಿದ್ದ ಅಖಂಡ ಸಿನಿಮಾಗಳು ಭಾರಿ ಯಶಸ್ಸುಗಳಿಸಿವೆ. ಇದೀಗ `ಅಖಂಡ-2’ರ ನಿರ್ದೇಶನದಲ್ಲಿ ಬೊಯಪಾಟಿ ತೊಡಗಿದ್ದಾರೆ. ಪ್ರತಿಷ್ಠಿತ 14 ರೀಲ್ಸ್ ಪ್ಲಸ್ ಬ್ಯಾನರ್ ಅಡಿಯಲ್ಲಿ ರಾಮ್ ಅಚಂತ ಮತ್ತು ಗೋಪಿಚಂದ್ ಅಚಂತ ನಿರ್ಮಿಸಿರುವ ಈ ಚಿತ್ರವನ್ನು ಎಂ ತೇಜಸ್ವಿನಿ ನಂದಮೂರಿ ಪ್ರಸ್ತುತಪಡಿಸಿದ್ದಾರೆ.

    ಅಖಂಡ-2 ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸ ಭರದಿಂದ ಸಾಗುತ್ತಿದೆ.ಚಿತ್ರದಲ್ಲಿ ಬಾಲಯ್ಯಗೆ ಜೋಡಿಯಾಗಿ ಸಂಯುಕ್ತಾ ನಟಿಸುತ್ತಿದ್ದು, ಆದಿ ಪಿನಿಸೆಟ್ಟಿ ಖಳನಾಯಕನಾಗಿ ತೊಡೆ ತಟ್ಟಿದ್ದಾರೆ.

    ಹೈ ಬಜೆಟ್‌ನಲ್ಲಿ ನಿರ್ಮಾಣವಾಗುತ್ತಿರುವ ಅಖಂಡ-2 ಸಿನಿಮಾಗೆ ಎಸ್ ಥಮನ್ ಸಂಗೀತ ನಿರ್ದೇಶನ, ಸಿ ರಾಮಪ್ರಸಾದ್, ಸಂತೋಷ್ ಡಿ ಡೆಟಕೆ ಛಾಯಾಗ್ರಹಣ, ಎ.ಎಸ್ ಪ್ರಕಾಶ್ ಕಲಾ ನಿರ್ದೇಶನ, ತಮ್ಮಿರಾಜು ಸಂಕಲನ, ರಾಮ್-ಲಕ್ಷ್ಮಣ್ ಫೈಟ್ ಚಿತ್ರಕ್ಕಿರಲಿದೆ.

  • ಕಾಂತಾರದ ನಂತರದ What Next? – ಪ್ರಶ್ನೆಗೆ ಉತ್ತರ ನೀಡಿದ ರಿಷಭ್‌ ಶೆಟ್ಟಿ

    ಕಾಂತಾರದ ನಂತರದ What Next? – ಪ್ರಶ್ನೆಗೆ ಉತ್ತರ ನೀಡಿದ ರಿಷಭ್‌ ಶೆಟ್ಟಿ

    ಹು ನಿರೀಕ್ಷಿತ ಕಾಂತಾರ (Kantara) ಚಿತ್ರ ನಾಳೆ ಬಿಡುಗಡೆಯಾಗಲಿದೆ. ಬಿಡುಗಡೆಯಾಗುವ ಸಂದರ್ಭದಲ್ಲಿ ಕಾಂತಾರದ ನಂತರ ವಾಟ್‌ ನೆಕ್ಸ್ಟ್‌ ಎಂಬ ಪ್ರಶ್ನೆಗೆ ರಿಷಭ್‌ ಶೆಟ್ಟಿ (Rishab Shetty) ಮುಂದೆ ʼರೆಸ್ಟ್‌ʼ ಎಂದು ಉತ್ತರಿಸಿದ್ದಾರೆ.

    ಪಬ್ಲಿಕ್‌ ಟಿವಿ ಸಂದರ್ಶನದಲ್ಲಿ ಮಾತನಾಡಿದ ಅವರು, ಈ ಪ್ರಶ್ನೆಗೆ ಉತ್ತರ ಮುಂದೆ ವಿಶ್ರಾಂತಿ ಪಡೆಯುವುದು. ಚಿತ್ರಕ್ಕೆ ಬಹಳ ಶ್ರಮ ಹಾಕಿದ್ದೇವೆ. ನಮ್ಮ ತಂಡಕ್ಕೆ ಇದು ಮೊದಲ ಪ್ಯಾನ್‌ ಇಂಡಿಯಾ ಸಿನಿಮಾ. ಬಿಡುಗಡೆಯ ದಿನಾಂಕ ಪ್ರಕಟ ಮಾಡಿದ್ದರಿಂದ ಆ ದಿನದ ಒಳಗಡೆ ಮುಗಿಸಲೇಬೇಕಾದ ಒತ್ತಡವಿತ್ತು. ಹೀಗಾಗಿ ಮುಂದೆ ವಿಶ್ರಾಂತಿ ಪಡೆಯುವುದು ನನ್ನ ಮೊದಲ ಆದ್ಯತೆ ಎಂದರು. ಇದನ್ನೂ ಓದಿ: ನೋವಿನ ಸಂದರ್ಭದಲ್ಲಿ ಸಂಭ್ರಮ ಬೇಡವೆಂದು ಹಿಂದೆ ಸರಿದ ರಿಷಬ್ ಶೆಟ್ಟಿ

     

    ಹಲವು ಪ್ರಶ್ನೆಗಳಿಗೆ ಸಿನಿಮಾದಲ್ಲಿ ಉತ್ತರ ಸಿಗುತ್ತದೆ ಎಂದ ಅವರು, ಕಾಂತಾರ ಮೊದಲ ಚಿತ್ರವನ್ನು ಪ್ಯಾನ್‌ ಇಂಡಿಯಾಗೆ ತೆಗೆದುಕೊಂಡು ಹೋಗಿದ್ದು ಕನ್ನಡಿಗರು. ಈಗ ಚಾಪ್ಟರ್‌ 1 ತೆಗೆದುಕೊಂಡು ಹೋಗುತ್ತಿದ್ದಾರೆ. ಇದು ನಮಗೆ ಬಹಳ ಸಂತೋಷ ನೀಡಿದೆ ಎಂದು ಹೇಳಿದರು.

    ಪ್ಯಾನ್‌ ಇಂಡಿಯಾ ಸೇರಿದಂತೆ ವಿಶ್ವ ಮಟ್ಟದಲ್ಲಿ ಸಿನಿಮಾ ರಿಲೀಸ್‌ ಮಾಡಲು ಹೊಂಬಾಳೆ ಸಂಸ್ಥೆ ಬಹಳ ಕೆಲಸ ಮಾಡಿದೆ. ಇದಕ್ಕೆ ನಾನು ಧನ್ಯವಾದ ಹೇಳುತ್ತೇನೆ ಎಂದರು.

    ಎಲ್ಲರೂ ಎಲ್ಲಾ ಭಾಷೆಗಳಿಗೆ ಗೌರವ ಕೊಡುತ್ತಾರೆ. ನಮಗೆ ನಮ್ಮ ಭಾಷೆಯ ಹೆಮ್ಮೆಯಿದೆ. ಹಾಗೆಂದ ಮಾತ್ರಕ್ಕೆ ಬೇರೆ ಭಾಷೆಯನ್ನು ನಾವು ದೂರುವುದಿಲ್ಲ. ಕನ್ನಡಕ್ಕೆ ನಾವು ಹೇಗೆ ಗೌರವ ನೀಡುತ್ತಿವೆಯೋ ಅದೇ ರೀತಿ ಬೇರೆ ಭಾಷೆಗಳಿಗೆ ಗೌರವ ನೀಡುತ್ತೇವೆ ಎಂದು ತಿಳಿಸಿದರು.

  • ಅಕ್ಷರ ಗೌಡ, ಸುಧೀರ್ ಆನಂದ್ ಕಾಂಬಿನೇಷನ್‌ನ ತೆಲುಗಿನ `ಹೈಲೆಸ್ಸೂ’ ಚಿತ್ರಕ್ಕೆ ಮುಹೂರ್ತ

    ಅಕ್ಷರ ಗೌಡ, ಸುಧೀರ್ ಆನಂದ್ ಕಾಂಬಿನೇಷನ್‌ನ ತೆಲುಗಿನ `ಹೈಲೆಸ್ಸೂ’ ಚಿತ್ರಕ್ಕೆ ಮುಹೂರ್ತ

    ಸುಧೀರ್ ಆನಂದ್ (Sudheer Anand) ಅಭಿನಯದ ಪ್ರಸನ್ನ ಕುಮಾರ್ ಕೋಟ ನಿರ್ದೇಶನದ ಸಿನಿಮಾದ ಮಹೂರ್ತ ಸಮಾರಂಭ ನೆರವೇರಿದೆ. ಶಿವ ಚೆರಿ, ರವಿಕಿರಣ ಅವರ ವಜ್ರ ವಾರಾಹಿ ಸಿನಿಮಾಸ್ ಪ್ರೊಡಕ್ಷನ್ ನಂ.1ಕ್ಕೆ ಹೈಲೆಸ್ಸೂ ಎಂದು ಟೈಟಲ್ ಇಡಲಾಗಿದೆ. ಅದ್ದೂರಿಯಾಗಿ ಲಾಂಚ್ ಆದ ಹೈಲೆಸ್ಸೂ (Hilesso) ಚಿತ್ರದ ಮುಹೂರ್ತದ ಮೊದಲ ದೃಶ್ಯಕ್ಕೆ ವಿ.ವಿ.ವಿನಾಯಕ್ ಕ್ಲಾಪ್ ಮಾಡಿದ್ದಾರೆ.

    ಸ್ಮಾಲ್ ಸ್ಕ್ರೀನ್ ಹಾಗೂ ಬಿಗ್ ಸ್ಕ್ರೀನ್ ಎರಡರಲ್ಲಿಯೂ ಗುರುತಿಸಿಕೊಂಡಿರೋ ಸುಧೀರ್ ಆನಂದ್ ಹೈಲೆಸ್ಸೂ ಚಿತ್ರಕ್ಕೆ ನಾಯಕ. ಪ್ರಸನ್ನ ಕುಮಾರ್ ಕೋಟ ಈ ಚಿತ್ರದ ಮೂಲಕ ಡೈರೆಕ್ಟರ್ ಆಗಿ ಟಾಲಿವುಡ್‌ಗೆ ಎಂಟ್ರಿಕೊಟ್ಟಿದ್ದಾರೆ. ಶಿವ ಚೆರಿ ಮತ್ತು ರವಿಕಿರಣ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಇದನ್ನೂ ಓದಿ: ದರ್ಶನ್ ಅನುಪಸ್ಥಿತಿಯಲ್ಲಿ ದಸರಾ ಆಯುಧಪೂಜೆ ನೆರವೇರಿಸಿದ ವಿಜಯಲಕ್ಷ್ಮಿ, ಪುತ್ರ

    ಇದು ಸುಧೀರ್ ಆನಂದ್ ನಾಯಕನಾಗಿ ನಟಿಸುತ್ತಿರುವ ಐದನೇ ಸಿನಿಮಾ. ಗ್ರಾಮೀಣ ಹಿನ್ನೆಲೆಯ ಡ್ರಾಮಾ ಆಗಿ ರೂಪುಗೊಳ್ಳುತ್ತಿರುವ ಈ ಚಿತ್ರದಲ್ಲಿ, ಇತ್ತೀಚೆಗೆ ಕೋರ್ಟ್ ಚಿತ್ರದಲ್ಲಿ ಅದ್ಭುತ ಪ್ರದರ್ಶನ ನೀಡಿದ ಶಿವಾಜಿ, ಖಳನಾಯಕನಾಗಿ ನಟಿಸುತ್ತಿದ್ದಾರೆ.

    ಹೈಲೆಸ್ಸೂ ಎಂಬ ಶೀರ್ಷಿಕೆ ರೈತ ಸಮುದಾಯಗಳಲ್ಲಿ ಸಾಮಾನ್ಯವಾಗಿ ಬಳಕೆಯಾಗುವ ಹಳ್ಳಿಗಾಡಿನ ಪದಪ್ರಯೋಗದಿಂದ ತೆಗೆದುಕೊಳ್ಳಲಾಗಿದ್ದು, ಶೀರ್ಷಿಕೆಯ ಲೋಗೋವನ್ನು ಕ್ರಿಯೇಟಿವ್ ಆಗಿ ವಿನ್ಯಾಸಗೊಳಿಸಲಾಗಿದೆ. ಹಡಗಿನ ಆಕಾರದಲ್ಲಿ ಮಹಿಳೆಯ ಪಾದವು ಎಸ್ ಅಕ್ಷರ ರೂಪದಲ್ಲಿ ತೋರುತ್ತದೆ. ಜೊತೆಗೆ, ಕೈಯಲ್ಲಿ ಆಯುಧ ಹಿಡಿದಿದ್ದು ಪೋಸ್ಟರ್ ಕೂತೂಹಲ ಮೂಡಿಸುವಂತಿದೆ.

    ಸದ್ಯ ಈ ಸಿನಿಮಾ ಅದ್ದೂರಿಯಾಗಿ ಮಹೂರ್ತ ನಡೆಸಲಾಗಿದ್ದು, ಮಹೂರ್ತದಲ್ಲಿ ಅನೇಕ ಅತಿಥಿಗಳು ಭಾಗವಹಿಸಿದರು. ನಿಖಿಲ್ ಶೀರ್ಷಿಕೆಯನ್ನು ಅನಾವರಣಗೊಳಿಸಿದರು. ಬನ್ನಿ ವಾಸು ನಿರ್ಮಾಪಕರಿಗೆ ಸ್ಕ್ರಿಪ್ಟ್ ಹಸ್ತಾಂತರಿಸಿದರು. ನಿರ್ದೇಶಕರು ವಶಿಷ್ಠ, ಚಂದು ಮೋಂಡೇಟಿ, ಮೆಹರ್ ರಾಮೇಶ್ ಕ್ಯಾಮೆರಾವನ್ನು ಆನ್ ಮಾಡಿ, ನಿರ್ದೇಶಕ ಪ್ರಸನ್ನ ಕುಮಾರ್ ಸ್ವತಃ ಚಿತ್ರದ ಮೊದಲ ಶಾಟ್‌ಗೆ ಆಕ್ಷನ್ ಕಟ್ ಹೇಳಿದ್ರು.

    ಈ ಚಿತ್ರದಲ್ಲಿ ನಾಯಕಿಯಾಗಿ ನಟಾಶಾ ಸಿಂಗ್ ಮತ್ತು ನಕ್ಷ ಸರನ್ ಕಾಣಿಸಿಕೊಳ್ಳಲಿದ್ದು, ಜನಪ್ರಿಯ ಕನ್ನಡ ನಟಿ ಅಕ್ಷರ ಗೌಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ಮೊಟ್ಟ ರಾಜೇಂದ್ರನ್, ಗೇಟಪ್ ಶ್ರೀನು, ಬೇವರ ದುಹಿತಾ ಸರಣ್ಯ ಮತ್ತಿತರರು ಪ್ರಮುಖ ಪಾತ್ರಗಳಲ್ಲಿ ನಟಿಸಲಿದ್ದಾರೆ. ಚಿತ್ರದ ತಾಂತ್ರಿಕ ವಿಭಾಗವನ್ನೂ ಯುವ ಪ್ರತಿಭಾವಂತ ತಂಡವೇ ನೋಡಿಕೊಳ್ಳಲಿದೆ. ಈ ಸಿನಿಮಾ ತೆಲುಗು, ತಮಿಳು, ಕನ್ನಡ ಮತ್ತು ಮಲಯಾಳಂ ಸೇರಿದಂತೆ ಎಲ್ಲಾ ದಕ್ಷಿಣ ಭಾರತೀಯ ಭಾಷೆಗಳಲ್ಲಿ ರಿಲೀಸ್ ಆಗಲಿದೆ.

  • ಟಾಲಿವುಡ್‌ನಲ್ಲಿ ಕಾಂತಾರ ಬಾಯ್ಕಾಟ್ ಸಮಸ್ಯೆ ಬಗೆಹರಿಸಿದ ಪವನ್ ಕಲ್ಯಾಣ್

    ಟಾಲಿವುಡ್‌ನಲ್ಲಿ ಕಾಂತಾರ ಬಾಯ್ಕಾಟ್ ಸಮಸ್ಯೆ ಬಗೆಹರಿಸಿದ ಪವನ್ ಕಲ್ಯಾಣ್

    – ಪವನ್ ಕಲ್ಯಾಣ್‌ಗೆ ಧನ್ಯವಾದ ಅರ್ಪಿಸಿದ ಹೊಂಬಾಳೆ ಫಿಲಂಸ್

    ಟಾಲಿವುಡ್‌ನಲ್ಲಿ ಕಾಂತಾರ ಬಾಯ್ಕಾಟ್ ಸಮಸ್ಯೆ ಬಗೆಹರಿಸಿದ್ದಕ್ಕೆ ಪವನ್ ಕಲ್ಯಾಣ್‌ಗೆ (Pawan Kalyan) ಹೊಂಬಾಳೆ ಫಿಲಂಸ್ (Hombale Film’s) ಧನ್ಯವಾದ ಅರ್ಪಿಸಿದೆ.

    ಅಖಂಡ ಆಂಧ್ರದಾದ್ಯಂತ ಕಾಂತಾರ ಚಿತ್ರಕ್ಕೆ ಬಾಯ್ಕಾಟ್ ಹೇರಿ ಅಭಿಯಾನ ಶುರುವಾಗಿತ್ತು. ಹೈದ್ರಾಬಾದ್‌ನಲ್ಲಿ ಪ್ರೀ-ರಿಲೀಸ್ ಇವೆಂಟ್ ವೇಳೆ ರಿಷಬ್ (Rishab Shetty) ಕನ್ನಡದಲ್ಲಿ ಮಾತನಾಡಿದ್ರು ಅನ್ನೋದು ಒಂದು ಕಾರಣವಾಗಿದ್ರೆ, ಪವನ್ ಕಲ್ಯಾಣ ಓಜಿ ಸಿನಿಮಾ ರಿಲೀಸ್ ಆದ ವೇಳೆ ಥಿಯೇಟರ್‌ನಲ್ಲಿ ಡಿಜೆ ಬಳಸಿ ಗಲಾಟೆ ಮಾಡಿರುವುದನ್ನ ಕನ್ನಡಪರ ಸಂಘಟನೆಗಳು ತಡೆದು ವಿರೋಧಿಸಿದ್ದವು ಅನ್ನೋದು ಇನ್ನೊಂದು ಕಾರಣ. ಹೀಗಾಗಿ ಆಂಧ್ರದಲ್ಲಿ ಒಂದು ಗುಂಪು ಕಾಂತಾರ ಚಿತ್ರಕ್ಕೆ ಬಾಯ್ಕಾಟ್ ಅಭಿಯಾನ ಶುರುಮಾಡಿತ್ತು. ಇದನ್ನೂ ಓದಿ: ಬರದಿರುವ ಭಾಷೆ ಮಾತಾಡಿ ಅಗೌರವ ತೋರಿಸೋದು ಬೇಡ – ಹೈದ್ರಾಬಾದ್‌ನಲ್ಲಿ ಕನ್ನಡ ಮಾತಾಡಿದ್ದಕ್ಕೆ ರಿಷಬ್ ಸ್ಪಷ್ಟನೆ

    ಇದೀಗ ಬಿಗುವಿನ ಪರಿಸ್ಥಿತಿಯನ್ನು ಡಿಸಿಎಂ ಹಾಗೂ ನಟ ಪವನ್ ಕಲ್ಯಾಣ್ ತಿಳಿಗೊಳಿಸಿದ್ದಾರೆ. ಆಂಧ್ರದಲ್ಲಿ ಕಾಂತಾರ ಚಿತ್ರ ಸುಲಭವಾಗಿ ರಿಲೀಸ್ ಆಗುವಂತೆ ದಾರಿ ಮಾಡಿಕೊಟ್ಟಿದ್ದಾರೆ. ಹೀಗಾಗಿ ಕಾಂತಾರ ಚಿತ್ರತಂಡ ಪವನ್ ಕಲ್ಯಾಣ್‌ಗೆ ಅಧಿಕೃತವಾಗಿ ಧನ್ಯವಾದ ಅರ್ಪಿಸಿದೆ.

    ಕಾಂತಾರ ಚಿತ್ರಕ್ಕೆ ತಮ್ಮ ರಾಜ್ಯದಲ್ಲಿ ಎದುರಾಗುತ್ತಿರುವ ಸಮಸ್ಯೆಯನ್ನ ತಡೆದ ಪವನ್ ಕಲ್ಯಾಣ್ ರಾಜ್ಯದ ಜನತೆಗೆ ಪರಿಸ್ಥಿತಿಯ ಕುರಿತು ಮನವರಿಕೆ ಮಾಡಿಕೊಟ್ಟಿದ್ದಾರೆ. ಕರ್ನಾಟಕದಲ್ಲಿ ಎದುರಾಗುವ ಪರಿಸ್ಥಿತಿ ಮುಂದಿಟ್ಟುಕೊಂಡು ಅವರ ಚಿತ್ರಗಳಲ್ಲಿ ನಾವು ಇಲ್ಲಿ ತೊಂದರೆ ಕೊಡುವುದು ಸರಿಯಿಲ್ಲ. ನಾವು ರಾಷ್ಟ್ರೀಯ ಭಾವನೆಯಿಂದ ಹಾಗೂ ಹೃದಯದಿಂದ ನೋಡಬೇಕು. ಡಾ.ರಾಜ್‌ಕುಮಾರ್ ಅವರಿಂದ ಹಿಡಿದು ಕಿಚ್ಚ ಸುದೀಪ್, ಶಿವರಾಜ್‌ಕುಮಾರ್, ಉಪೇಂದ್ರ ಹಾಗೂ ರಿಷಬ್ ಶೆಟ್ಟಿವರೆಗೂ ತೆಲುಗು ಜನರು ಬೆಂಬಲ ಕೊಟ್ಟಿದ್ದಾರೆ. ನಾವು ಸಹೋದರತ್ವದಿಂದ ಮುಂದುವರೆಯಬೇಕು ಎಂದು ಕರೆ ಕೊಟ್ಟಿದ್ದಾರೆ.

    ಜೊತೆಗೆ ಎರಡೂ ರಾಜ್ಯಗಳ ಚಲನಚಿತ್ರ ಮಂಡಳಿಗಳು ಪರಸ್ಪರ ಎದುರಾಗುತ್ತಿರುವ ಅಡೆತಡೆಗಳ ಚರ್ಚಿಸಬೇಕು. ಈ ವಿಷಯವನ್ನು ನಾನು ಮುಖ್ಯಮಂತ್ರಿಯವರಿಗೆ ತಿಳಿಸುತ್ತೇನೆ. ಕರ್ನಾಟಕದಲ್ಲಿ ಆಗಿರುವ ಬೆಳವಣಿಗೆ ಇಟ್ಟುಕೊಂಡು ಕಾಂತಾರ ಚಾಪ್ಟರ್ 1 ಚಿತ್ರಕ್ಕೆ ತೊಂದರೆ ಕೊಡಬೇಡಿ ಎಂದು ತಮ್ಮ ನಾಡಿನ ಜನತೆಗೆ ಡಿಸಿಎಂ ಸಂದೇಶ ರವಾನಿಸಿದ್ದಾರೆ. ಹೀಗೆ ಎರಡೂ ರಾಜ್ಯಗಳ ಪರಸ್ಪರ ಸೌಹಾರ್ದತೆ ಕಾಪಾಡಿಕೊಳ್ಳಲು ಸೇತುವೆಯಾಗಿದ್ದಾರೆ.

  • ಇನ್ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಗೀತಾ ಶಿವರಾಜ್‌ಕುಮಾರ್ ಘೋಷಣೆ

    ಇನ್ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಗೀತಾ ಶಿವರಾಜ್‌ಕುಮಾರ್ ಘೋಷಣೆ

    ಶಿವಮೊಗ್ಗ: ಇನ್ನುಮುಂದೆ ನಾನು ಚುನಾವಣೆಗೆ (Election) ಸ್ಪರ್ಧಿಸುವುದಿಲ್ಲ ಎಂದು ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್‌ಕುಮಾರ್ (Geetha Shivarajkumar) ಮಹತ್ವದ ಘೋಷಣೆ ಹೊರಡಿಸಿದ್ದಾರೆ.

    ಮಹಿಳಾ ಕಾಂಗ್ರೆಸ್ (Congress) ಸಮಾರಂಭದಲ್ಲಿ ಮಾತನಾಡಿದ ಅವರು, ಚುನಾವಣೆಗೆ ಈ ಹಿಂದೆ ಸ್ಪರ್ಧಿಸಿದ್ದರೂ ಕೂಡ ಪಕ್ಷ ಸಂಘಟನೆಯಲ್ಲಿ ಜೊತೆಗೆ ಇರುತ್ತೇನೆ. ನಿಮ್ಮೊಂದಿಗೆ ಕೆಲಸ ಮಾಡುತ್ತೇನೆ, ಯಾವಾಗ ಕರೆದರೂ ನಾನು ಬರುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಆಯುಧ ಪೂಜೆ ಹಬ್ಬಕ್ಕೂ ಸಾರಿಗೆ ಇಲಾಖೆಯಲ್ಲಿ ದುಡ್ಡಿಲ್ವಾ?- ಒಂದು ಬಸ್‌ಗೆ ಕೇವಲ 150 ರೂ. ಬಿಡುಗಡೆ

    ನೂತನ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶ್ವೇತಾ ಬಂಡಿಯವರನ್ನು ಅಭಿನಂದಿಸಿದ ಅವರು, ಶ್ವೇತಾ ಬಂಡಿಯವರು ತಮ್ಮ ಚುನಾವಣೆಯ ಪ್ರಚಾರದಲ್ಲಿ ಶ್ರಮಿಸಿದ್ದಾರೆ. ಇಂದಿನ ಸಮಾವೇಶ ಖುಷಿ ತಂದಿದೆ. ಮಹಿಳೆಯರು ಅಬಲೆಯರಲ್ಲ. ಅವರಿಗೆ ಎಲ್ಲಾ ಶಕ್ತಿಯಿದೆ ಅವರು ಎಲ್ಲರನ್ನ ಜೊತೆಗೂಡಿಸಿಕೊಂಡು ಅವರು ಪಕ್ಷ ಸಂಘಟಿಸಲಿ ಎಂದು ಸಲಹೆ ನೀಡಿದರು. ನಾನು ಇನ್ಮುಂದೆ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ, ಆದರೆ ಪಕ್ಷದ ಎಲ್ಲರ ಜೊತೆಗೂ ದೃಢವಾಗಿ ಇರುತ್ತೇನೆ ಎಂದು ಪುನರುಚ್ಚರಿಸಿದರು. ಇದನ್ನೂ ಓದಿ: ಮೂರು ಅಂತಸ್ತಿಗೆ ಅನುಮತಿ.. ಕಟ್ಟಿದ್ದು ಐದು ಅಂತಸ್ತು – ವಾಲಿದ ಬಿಲ್ಡಿಂಗ್‌ ತೆರವು ಕಾರ್ಯಾಚರಣೆ

    ಗೀತಾ ಶಿವರಾಜ್‌ಕುಮಾರ್ ಚುನಾವಣೆಯಿಂದ ದೂರ ಸರಿದಿದ್ದಾರೆ. 2024ರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಗೀತಾ ಶಿವರಾಜ್ ಕುಮಾರ್, ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಇದೀಗ ಶಿವಮೊಗ್ಗದಲ್ಲೇ ತಮ್ಮ ಚುನಾವಣಾ ನಿವೃತ್ತಿ ಬಗ್ಗೆ ಘೋಷಿಸಿದ್ದಾರೆ. ಇನ್ಮುಂದೆ ನಾನು ಯಾವುದೇ ಚುನಾವಣೆಗೆ ನಿಲ್ಲೋದಿಲ್ಲ ಅಂತ ಗೀತಾ ಶಿವರಾಜ್‌ಕುಮಾರ್ ಘೋಷಿಸಿದ್ದಾರೆ. ಇದನ್ನೂ ಓದಿ: ನಿಮ್ಮ ಮಾಹಿತಿ ಸುರಕ್ಷಿತವಾಗಿರಲ್ಲ: ಜಾತಿಗಣತಿ ಬಹಿಷ್ಕಾರಕ್ಕೆ ತೇಜಸ್ವಿ ಸೂರ್ಯ ಕರೆ

  • ಬಿಕಿನಿ ಎಐ ಫೋಟೋ ವೈರಲ್ ಮಾಡಿದವ್ರಿಗೆ ಸಾಯಿಪಲ್ಲವಿ ಟಾಂಗ್

    ಬಿಕಿನಿ ಎಐ ಫೋಟೋ ವೈರಲ್ ಮಾಡಿದವ್ರಿಗೆ ಸಾಯಿಪಲ್ಲವಿ ಟಾಂಗ್

    ತ್ತೀಚೆಗೆ ನಟಿ ಸಾಯಿಪಲ್ಲವಿ (Sai Pallavi) ಬಿಕಿನಿ ಧರಿಸಿರುವ ಫೋಟೋ ವೈರಲ್ ಆಗಿತ್ತು. ಆರಂಭದಲ್ಲಿ ಅಸಲಿಯಾ ನಕಲಿಯಾ ಎಂಬ ಹುಡುಕಾಟದಲ್ಲಿದ್ದ ಫ್ಯಾನ್ಸ್‌ ಗೆ ಇದು ಎಐ ಫೋಟೋ ಅನ್ನೋದು ಬಳಿಕ ತಿಳಿದುಬಂತು. ಇದೀಗ ಇದೇ ವೈರಲ್ ಫೋಟೋ ವಿಚಾರಕ್ಕೆ ಸಾಯಿಪಲ್ಲವಿ ಪರೋಕ್ಷವಾಗಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರವಾಸದ ಅಷ್ಟೂ ವೀಡಿಯೋ ಫೋಟೋಗಳನ್ನ ಇನ್ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಅವರು ಇಲ್ಲಿ ಕಾಣಿಸುವ ಫೋಟೋಗಳು ಎಐ ಫೋಟೋಗಳಲ್ಲ ಎಂದು ಹೇಳುವ ಮೂಲಕ ವೈರಲ್ ಮಾಡಿರೋ ಎಐ ಫೋಟೋ ದುರುಳರಿಗೆ ಟಾಂಗ್ ಕೊಟ್ಟಿದ್ದಾರೆ.

    ಸಾಯಿಪಲ್ಲವಿ ಇತ್ತೀಚೆಗೆ ತಂಗಿ ಪೂಜಾ ಹಾಗೂ ಕುಟುಂಬಸ್ಥರ ಜೊತೆ ಪ್ರವಾಸಕ್ಕೆ ತೆರಳಿದ್ರು. ಅಲ್ಲಿನ ಒಂದಷ್ಟು ಫೋಟೋಗಳನ್ನ ಪೂಜಾ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಕ್ಕ ಸಾಯಿಪಲ್ಲವಿ ಜೊತೆ ಪೂಜಾ ಬೀಚ್‌ನಲ್ಲಿ ಸಮಯ ಕಳೆದಿರುವ ಫೋಟೋಗಳನ್ನ ಹಂಚಿಕೊಂಡಿದ್ದು ಅಕ್ಕ, ತಂಗಿ ಇಬ್ಬರೂ ಈಜುಡುಗೆ ಧರಿಸಿರುವ ಫೋಟೋವನ್ನೂ ಹಂಚಿಕೊಂಡಿದ್ದರು. ಆದರೆ ಈಜುಡುಗೆಗೂ ಬಿಕಿನಿಗೂ ವ್ಯತ್ಯಾಸ ಇರುತ್ತೆ. ಇದೇ ಫೋಟೋಗಳನ್ನ ಇಟ್ಟುಕೊಂಡು ಸಾಯಿಪಲ್ಲವಿ ಬಿಕಿನಿ ಧರಿಸಿ ನಿಂತಿರುವಂತೆ ಎಐ ಫೋಟೋಗಳನ್ನ ಜನರೇಟ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡಲಾಗಿತ್ತು.

     

    View this post on Instagram

     

    A post shared by Sai Pallavi (@saipallavi.senthamarai)

    ಸಾಯಿಪಲ್ಲವಿ ಇದುವರೆಗೂ ಹೀಗೆ ಯಾವತ್ತೂ ಕಾಣಿಸ್ಕೊಂಡಿಲ್ಲ. ಹೀಗಾಗಿ ಕೆಲವರ ಅಸಮಾಧಾನಕ್ಕೆ ಕಾರಣವಾಗಿದ್ದರು. ಜೊತೆಗೆ ಸಾಯಿಪಲ್ಲವಿ ರಾಮಾಯಣದಲ್ಲಿ ಸೀತೆ ಪಾತ್ರ ಮಾಡುತ್ತಿರುವ ಬಗ್ಗೆಯೂ ಅದೇ ಸೋಶಿಯಲ್ ಮೀಡಿಯಾದಲ್ಲಿ ಅಸಮಾಧಾನ ವ್ಯಕ್ತಪಡಿಸಿ ಟ್ರೋಲ್ ಮಾಡಲಾಗಿತ್ತು. ತಂತ್ರಜ್ಞಾನದ ದುರುಪಯೋಗಕ್ಕೆ ಬೇಸರಿಸಿಕೊಂಡ ಸಾಯಿಪಲ್ಲವಿ ಇದೀಗ ಏನನ್ನೂ ಹೇಳದೆ ಪ್ರವಾಸದ ನಿಜವಾದ ಚಿತ್ರಣ ಹೇಗಿತ್ತು ಅನ್ನೋದನ್ನ ಎಳೆ ಎಳೆಯಾಗಿ ದರ್ಶನ ಮಾಡಿಸಿದ್ದಾರೆ. ಇದ್ಯಾವ್ದೂ ಎಐ ಫೋಟೋಗಳಲ್ಲ ಅನ್ನೋದ್ರ ಮೂಲಕ ಸುಳ್ಳು ವದಂತಿ ಹಬ್ಬಿಸಿ ಸಾಯಿಪಲ್ಲವಿ ಬಗ್ಗೆ ಕೀಳರಿಮೆ ಮೂಡಿಸುವ ಪ್ರಯತ್ನದಲ್ಲಿದ್ದವರಿಗೆ ಟಾಂಗ್ ಕೊಟ್ಟಿದ್ದಾರೆ.

  • ದರ್ಶನ್ ಅಳಿಯ ಟಕ್ಕರ್ ಮನೋಜ್‌ರ `ಗಾರ್ಡನ್’ ಸಿನಿಮಾಗೆ ದಿನಕರ್ ಕ್ಲ್ಯಾಪ್

    ದರ್ಶನ್ ಅಳಿಯ ಟಕ್ಕರ್ ಮನೋಜ್‌ರ `ಗಾರ್ಡನ್’ ಸಿನಿಮಾಗೆ ದಿನಕರ್ ಕ್ಲ್ಯಾಪ್

    ಮ್ಮ ನಗರಗಳು ಸ್ವಚ್ಛವಾಗಿ, ಸುಂದರವಾಗಿ ಮತ್ತು ಆರೋಗ್ಯಕರವಾಗಿರುವುದರ ಹಿಂದೆ ಅದೆಷ್ಟೋ ಶ್ರಮಿಕರ ಬೆವರು ಮತ್ತು ತ್ಯಾಗ ಅಡಗಿದೆ. ಸೂರ್ಯೋದಯಕ್ಕೂ ಮುನ್ನವೇ ಎದ್ದು, ಬೆಳಗಿನ ಚಳಿಯಲ್ಲಿ, ಮಧ್ಯಾಹ್ನದ ಕಡು ಬಿಸಿಲಿನಲ್ಲಿ, ಮಳೆಯಲ್ಲೂ ತಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ನಿರ್ವಹಿಸುವ ಜೀವಗಳೆಂದರೆ, ಅವರು ಪೌರ ಕಾರ್ಮಿಕರು. ಪೌರ ಕಾರ್ಮಿಕರ ಸ್ಥಿತಿಗತಿಗಳ ಕುರಿತು ಹೇಳಲು ಸಾಕಷ್ಟು ವಿವರಗಳಿವೆ. ಸದ್ಯ ಪೌರಕಾರ್ಮಿಕರ ಬದುಕನ್ನು ಕಟ್ಟಿಕೊಡುವ `ಗಾರ್ಡನ್’ ಸಿನಿಮಾ (Garden Cinema) ಅದ್ಧೂರಿಯಾಗಿ ಆರಂಭಗೊಂಡಿದೆ.

    ಆರ್ಯ ಮಹೇಶ್ ನಿರ್ದೇಶನದಲ್ಲಿ, ಟಕ್ಕರ್ ಮನೋಜ್ ನಟನೆಯಲ್ಲಿ ಗಾರ್ಡನ್ ಮೂಡಿಬರಲಿದೆ. ಮುಹೂರ್ತದ ದಿನ ಫಸ್ಟ್ ಲುಕ್ ಪೋಸ್ಟರ್ ಕೂಡಾ ಅನಾವರಣಗೊಂಡಿದೆ. ಇದರಲ್ಲಿ ಹೀರೋ ಮುಖವನ್ನು ನೇರವಾಗಿ ಅನಾವರಣ ಮಾಡಿಲ್ಲ. ಬದಲಿಗರ ಕೈ ಮುಷ್ಟಿ ಹಿಡಿದು, ಹಿಮ್ಮುಖವಾಗಿ ನಿಂತಿರುವ ಸ್ಟಿಲ್, ಅದರ ಮೇಲೆ ಬಿಬಿಎಂಪಿ ಬಿಲ್ಡಿಂಗ್, ಬೆಂಗಳೂರು ಮಹಾನಗರ ಪಾಲಿಕೆ ಎನ್ನುವ ಮುದ್ರೆ ಮುಂತಾದ ಎಲಿಮೆಂಟುಗಳನ್ನು ಬಳಸಲಾಗಿದೆ. ಮೇಲ್ನೋಟಕ್ಕೆ ಇದು ಬೆಂಗಳೂರಿನ ಕಸ ವಿಲೇವಾರಿ ಮತ್ತು ಅದರ ಸುತ್ತಲಿನ ಮಾಫಿಯಾದ ಸುತ್ತ ಇರುವ ಕಥಾಹಂದರ ಎನ್ನುವುದು ಸ್ಪಷ್ಟವಾಗಿ ಗೊತ್ತಾಗುವಂತಿದೆ. ಮುಹೂರ್ತ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ, ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿದ ದಿನಕರ್ ತೂಗುದೀಪ (Dinakar Thoogudeepa) ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

    ನಿರ್ದೇಶಕ ಆರ್ಯ ಮಹೇಶ್ ಈ ಸಲ ಕೂಡಾ ನೈಜ ಕಥಾವಸ್ತುವನ್ನು ಕೈಗೆತ್ತಿಕೊಂಡಿದ್ದಾರೆ. ಬೆಂಗಳೂರಿನ ಡಂಪಿಂಗ್ ಯಾರ್ಡ್‌ಗಳನ್ನು ಗಾರ್ಡನ್ ಅಂತಾ ಕರೀತಾರೆ. ಈ ಚಿತ್ರದ ಬಹುತೇಕ ಶೂಟಿಂಗ್ ನಡೆಯೋದು ಕಸ ವಿಲೇವಾರಿ ವಿಚಾರದ ಸುತ್ತ. ಹೀಗಾಗಿ ಗಾರ್ಡನ್ ಎಂದು ಹೆಸರಿಟ್ಟಿದ್ದಾರಂತೆ ನಿರ್ದೇಶಕರು. ಈ ಚಿತ್ರದಲ್ಲಿ ಇಬ್ಬರು ಹುಡುಗಿಯರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅನು ಪ್ರೇಮಾ ಮತ್ತು ಸೋನಮ್ ರೈ ಇಬ್ಬರೂ ಮನೋಜ್ ಅವರ ಜೊತೆಗೆ ಕಾಣಿಸಿಕೊಳ್ಳಲಿದ್ದಾರೆ.

    ಗಾರ್ಡನ್ ಚಿತ್ರದಲ್ಲಿ ರೆಗ್ಯುಲರ್ ಹೀರೋ ಹೀರೋಯಿನ್ ಥರದ ಪಾತ್ರಗಳಿರದೇ ವಿಶೇಷ ಪಾತ್ರದಲ್ಲಿ ಅನುಪ್ರೇಮಾ ಹಾಗೂ ಸೋನಮ್ ರೈ ನಟಿಸಿದ್ದಾರೆ. ಅಂದಹಾಗೆ ಗಾರ್ಡನ್ ಸಿನಿಮಾಗೆ ನಿರ್ಮಾಪಕ ಜಿ. ಮುನಿರಾಜು ಬಂಡವಾಳ ಹೂಡಿದ್ದಾರೆ. ನಿರ್ದೇಶಕ ಮಹೇಶ್ ಅವರ ಬೊಂಬೂ ಸವಾರಿ ಚಿತ್ರಕ್ಕೆ ಸಹ ನಿರ್ಮಾಪಕನಾಗಿದ್ದ ಮುನಿರಾಜು ಅವರು ಈ ಸಲ ಎಂ.ಆರ್.ಸಿನಿಮಾಸ್ ಬ್ಯಾನರ್ ಮೂಲಕ ಪೂರ್ಣ ಪ್ರಮಾಣದ ನಿರ್ಮಾಪಕನಾಗಿ ಗಾರ್ಡನ್ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಮುಹೂರ್ತದ ವೇಳೆ ಈ ಚಿತ್ರದ ಛಾಯಾಗ್ರಾಹಕ ಮುಂಜಾನೆ ಮಂಜು, ಸಾಹಸ ನಿರ್ದೇಶಕ ವೈಲೆಂಟ್ ವೇಲು, ಕೊರಿಯೋಗ್ರಾಫರ್ ಟಗರು ರಾಜು, ಸಂಕಲನಕಾರ ಜಿ ಗಿರೀಶ್ ಕುಮಾರ್ ಮುಂತಾದವರು ಹಾಜರಿದ್ದರು. ಮುಹೂರ್ತ ಸಮಾರಂಭಕ್ಕೆ ಖ್ಯಾತ ಚಿತ್ರ ಸಾಹಿತಿ ವಿ. ನಾಗೇಂದ್ರ ಪ್ರಸಾದ್, ಮುಳಬಾಗಲು ಶಾಸಕ ಸಮೃದ್ಧಿ ಮಂಜುನಾಥ್, ರಾಯಲ್ ಎಸ್.ಆರ್. ಅನಿಲ್ ಕುಮಾರ್, ಹಸಿರು ಸೇನೆ ರಾಜ್ಯಾಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ್, ಪಿ.ಮೂರ್ತಿ ಮುಂತಾದವರು ಆಗಮಿಸಿ ಶುಭ ಕೋರಿದ್ದಾರೆ.