Tag: Circular

  • ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ನಡೆಸಲು ಖಡಕ್ ಸುತ್ತೋಲೆ

    ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ನಡೆಸಲು ಖಡಕ್ ಸುತ್ತೋಲೆ

    ಪ್ರತಿ ವರ್ಷವೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಚುನಾವಣೆ ನಡೆಯಬೇಕು. ಆದರೆ, ಕಳೆದು ಮೂರು ವರ್ಷಗಳಿಂದ ಚುನಾವಣೆ ನಡೆಸದೇ ಮುಂದೂಡಲಾಗುತ್ತಿದೆ ಎನ್ನುವ ಆರೋಪವಿದೆ. ಕೋವಿಡ್ ಮತ್ತಿತರ ಕಾರಣಗಳನ್ನು ನೀಡುತ್ತಾ ಈಗಿರುವ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಚುನಾವಣೆಯನ್ನು ಮುಂದೂಡುತ್ತಿದ್ದಾರೆ ಎಂದು ವಾಣಿಜ್ಯ ಮಂಡಳಿಯ ಸದಸ್ಯರೇ ಸಂಘಗಳ ಜಿಲ್ಲಾ ನೋಂದಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ಸಂಬಂಧಪಟ್ಟ ಅಧಿಕಾರಿಗಳು ಕೂಡ ಈಗಾಗಲೇ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮೂರು ಬಾರಿ ನೋಟಿಸ್ ಜಾರಿ ಮಾಡಿದ್ದರು. ಆದರೂ, ಈವರೆಗೂ ಚುನಾವಣೆ ನಡೆಸಿಲ್ಲ. ಹಾಗಾಗಿ ಹಿರಿಯ ನಿರ್ಮಾಪಕರಾದ ಭಾ.ಮಾ.ಹರೀಶ್ ಮತ್ತು ಇತರ ಸದಸ್ಯರು ಸಂಘಗಳ ಜಿಲ್ಲಾ ನೋಂದಣಾಧಿಕಾರಿಗಳಿಗೆ ಮತ್ತೊಂದು ದೂರು ಸಲ್ಲಿಸಿದ್ದರು. ಈ ಬಾರಿ ಚುನಾವಣೆ ನಡೆಸಲೇಬೇಕೆಂದು ನೋಂದಣಾಧಿಕಾರಿ ಕೊನೆಯ ನೋಟಿಸ್ ಜಾರಿ ಮಾಡಿದ್ದಾರೆ. ತಪ್ಪಿದ್ದಲ್ಲಿ ಸೂಕ್ತ ಕ್ರಮ ತಗೆದುಕೊಳ್ಳುವ ಎಚ್ಚರಿಕೆಯನ್ನೂ ನೀಡಿದ್ದಾರೆ. ಇದನ್ನೂ ಓದಿ : ಅನೂಪ್ ಭಂಡಾರಿ ಜತೆ ಮತ್ತೊಂದು ಚಿತ್ರ : ಸರ್ಪೈಸ್ ಕೊಟ್ಟ ಸುದೀಪ್


    ಪಬ್ಲಿಕ್ ಟಿವಿ ಡಿಜಿಟಲ್ ಗೆ ಈ ನೋಟಿಸ್ ಕಾಪಿ ಸಿಕ್ಕಿದ್ದು, ‘ಸಂಘ ಸಂಸ್ಥೆಗಳ ಚುನಾವಣೆ ನಡೆಸಲು ಸರಕಾರವು ಆದೇಶ ಹೊರಡಿಸಿದೆ. ಹಾಗೂ ಸಂಘದ ಸದಸ್ಯರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಚುನಾವಣೆ ನಡೆಸದಿರುವ ಬಗ್ಗೆ ಸಂಘಗಳ ಜಿಲ್ಲಾ ನೋಂದಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ಆದ್ದರಿಂದ ಕೂಡಲೇ ಚುನಾವಣಾ ದಿನಾಂಕವನ್ನು ನಿಗಧಿಪಡಿಸಬೇಕು. ತಪ್ಪಿದಲ್ಲಿ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎನ್ನುವ ನೋಟಿಸ್ ಅನ್ನು ಸಂಘಗಳ ಜಿಲ್ಲಾ ನೋಂದಣಾಧಿಕಾರಿ, 4ನೇ ವಲಯ, ಬೆಂಗಳೂರು ನಗರ ಜಿಲ್ಲೆಯ ಅಧಿಕಾರಿ ಎಸ್.ಜಿ.ಮಂಜುನಾಥ್ ಸಿಂಗ್ ಹೊರಡಿಸಿದ್ದಾರೆ. ಇದನ್ನೂ ಓದಿ : ಭೋಜಪುರಿ ಚಿತ್ರರಂಗದಲ್ಲಿ ಕನ್ನಡ ನಾಯಕಿಯರ ಕಲರವ


    ಅಂದುಕೊಂಡಂತೆ ಆಗಿದ್ದರೆ, ಇದೇ ಫೆ.16 ರಂದು ವಾಣಿಜ್ಯ ಮಂಡಳಿಗೆ ಚುನಾವಣೆ ನಡೆಯಬೇಕಿತ್ತು. ಕೋವಿಡ್ ಕಾರಣದಿಂದ ಸರಕಾರವೇ ಚುನಾವಣೆ ಮುಂದೂಡಿತ್ತು. ಇದೀಗ ಅದು ತೆರವುಗೊಂಡಿದೆ. ಆದರೂ, ಚುನಾವಣೆಯ ಯಾವುದೇ ಪ್ರಕ್ರಿಯೆಗಳು ನಡೆದಿಲ್ಲ. ಮತ್ತೆ ಚುನಾವಣೆಯನ್ನು ಮುಂದೂಡುವ ತಂತ್ರ ವಾಣಿಜ್ಯ ಮಂಡಳಿಯಲ್ಲಿ ನಡೆಯುತ್ತಿದೆ ಎನ್ನುವ ಕಾರಣಕ್ಕಾಗಿ 50ಕ್ಕೂ ಹೆಚ್ಚು ಸದಸ್ಯರು ದೂರು ಸಲ್ಲಿಸಿದ್ದರು. ಇದೀಗ ನೋಟಿಸ್ ಪಡೆದಿರುವ ವಾಣಿಜ್ಯ ಮಂಡಳಿಯು ಚುನಾವಣೆ ನಡೆಸತ್ತಾ ಅಥವಾ ಮುಂದೂಡುತ್ತಾ ಎಂದು ಕಾದು ನೋಡಬೇಕು.

  • ಸರ್ಕಾರಿ ಅಧಿಕಾರಿಗಳು ಕೆಲಸಕ್ಕೆ ಹಾಜರಾಗುವಂತೆ ಸೂಚನೆ

    ಸರ್ಕಾರಿ ಅಧಿಕಾರಿಗಳು ಕೆಲಸಕ್ಕೆ ಹಾಜರಾಗುವಂತೆ ಸೂಚನೆ

    ಬೆಂಗಳೂರು: ಸರ್ಕಾರಿ ಅಧಿಕಾರಿಗಳು ಕೆಲಸಕ್ಕೆ ಹಾಜರಾಗುವಂತೆ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರು ಸುತ್ತೋಲೆ ಹೊರಡಿಸಿದ್ದಾರೆ.

    ಕೊರೊನಾ ಭೀತಿಯಿಂದ ಕೆಲ ಸರ್ಕಾರಿ ಇಲಾಖೆಗಳಿಗೆ ರಜೆ ನೀಡಲಾಗಿತ್ತು. ಈಗ ಸೂಚಿಸಿರುವ ಎಲ್ಲ ಸರ್ಕಾರಿ ಅಧಿಕಾರಿಗಳು ಮರಳಿ ಕೆಲಸಕ್ಕೆ ಹಾಜರಗಬೇಕು ಎಂದು ವಿಜಯ್ ಭಾಸ್ಕರ್ ಸುತ್ತೋಲೆ ಹೊರಡಿಸಿ ಸೂಚಿಸಿದ್ದಾರೆ.

    ಕರ್ನಾಟಕ ರಾಜ್ಯದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಚಿವಾಲಯ ಸೇರಿದಂತೆ ರಾಜ್ಯಮಟ್ಟದ ಕಚೇರಿಗಳಲ್ಲಿ ಹಾಗೂ ಕರ್ನಾಟಕ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಅತ್ಯಗತ್ಯ ಸೇವೆಗಳನ್ನು ಒದಗಿಸುತ್ತಿರುವ ಇಲಾಖೆಗಳಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಒಳಾಡಳಿತ ಇಲಾಖೆ, ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸಾರಿಗೆ ಇಲಾಖೆ, ಇಂಧನ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ರಾಜ್ಯದಲ್ಲಿರುವ ಎಲ್ಲಾ ಖಜಾನೆಗಳನ್ನು ಸೇರಿದಂತೆ ಆರ್ಥಿಕ ಇಲಾಖೆ, ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಮತ್ತು ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲ ವರ್ಗದ ಅಧಿಕಾರಿ/ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗತಕ್ಕದ್ದು.

    ಮೇಲ್ಕಾಣಿಸಿದ ಇಲಾಖೆಗಳನ್ನು ಹೊರತುಪಡಿಸಿ ಉಳಿದ ಇಲಾಖೆಗಳಲ್ಲಿ ಸರ್ಕಾರಿ ನಿಗಮ ಮಂಡಳಿಗಳಲ್ಲಿ ಮತ್ತು ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರೂಪ್-ಎ ವೃಂದದ ಎಲ್ಲಾ ಅಧಿಕಾರಿಗಳು ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.

    ಆದರೆ ಸರ್ಕಾರ ಹೊರಡಿಸಿರುವ ಸುತ್ತೋಲೆಯಲ್ಲಿ ದೃಷ್ಟಿಹೀನ ಹಾಗೂ ಇತರೆ ದೈಹಿಕ ಅಂಗವೈಕಲ್ಯ ಹೊಂದಿರುವ ಅಧಿಕಾರಿ ಅಥವಾ ಸಿಬ್ಬಂದಿ ಕಚೇರಿಗೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ.

  • ಕೊರೊನಾ ಎಫೆಕ್ಟ್ – ಹೆಚ್ಚುವರಿ ಮುನ್ನೆಚ್ಚರಿಕೆ ಕ್ರಮಕ್ಕೆ ಪಿಯುಸಿ ಬೋರ್ಡ್ ಸುತ್ತೋಲೆ

    ಕೊರೊನಾ ಎಫೆಕ್ಟ್ – ಹೆಚ್ಚುವರಿ ಮುನ್ನೆಚ್ಚರಿಕೆ ಕ್ರಮಕ್ಕೆ ಪಿಯುಸಿ ಬೋರ್ಡ್ ಸುತ್ತೋಲೆ

    ಬೆಂಗಳೂರು: ದಿನೇ ದಿನೇ ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವಿಕೆ ಹೆಚ್ಚಳ ಆಗುತ್ತಾನೆ ಇದೆ. ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಕೂಡ ಅನೇಕ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದೆ. ಈಗಾಗಲೇ 1-6 ನೇ ತರಗತಿಗೆ ಪರೀಕ್ಷೆ ರದ್ದು ಮಾಡಿದೆ. ಮಾರ್ಚ್ 31ವರೆಗೆ 7-9 ನೇ ತರಗತಿವರೆಗಿನ ಪರೀಕ್ಷೆ ಮುಂದೂಡಿದೆ. ಈಗಾಗಲೇ ದ್ವೀತಿಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಕೊರೊನಾ ಸೊಂಕು ತಡೆಗೆ ಹೊಸದಾಗಿ ಹೆಚ್ಚುವರಿ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಪಿಯುಸಿ ಬೋರ್ಡ್ ಹೊಸದಾಗಿ ಸುತ್ತೋಲೆ ಹೊರಡಿಸಿದೆ.

    ರಾಜ್ಯದಲ್ಲಿ 1016 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಎಲ್ಲಾ ಕೇಂದ್ರಗಳಲ್ಲಿ ಹೆಚ್ಚುವರಿ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಪಿಯುಸಿ ಬೋರ್ಡ್ ಸುತ್ತೋಲೆ ಹೊರಡಿಸಿದೆ. 9 ಅಂಶಗಳ ಮುಂಜಾಗ್ರತಾ ಕ್ರಮಗಳನ್ನು ಇಲಾಖೆ ಹೊರಡಿಸಿದ್ದು, ಎಲ್ಲಾ ಪರೀಕ್ಷಾ ಕೇಂದ್ರಗಳು ಕಡ್ಡಾಯವಾಗಿ ಪಾಲನೆ ಮಾಡಲು ಪಿಯುಸಿ ಬೋರ್ಡ್ ಸೂಚನೆ ನೀಡಿದೆ.

    ಮುನ್ನೆಚ್ಚರಿಕೆ ಕ್ರಮಗಳು
    1. ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ವಿವಿಧ ತಂಡಗಳಲ್ಲಿ ಚದುರಿದ ರೀತಿಯಲ್ಲಿ ಪ್ರವೇಶಿಸುವಂತೆ ಕ್ರಮವಹಿಸುವುದು.
    2. ವಿವಿಧ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸಲು ಸಮಯ ನಿಗದಿ ಮಾಡುವುದು.
    3. ವಿದ್ಯಾರ್ಥಿಗಳು ಕೊಠಡಿ ಪ್ರವೇಶಿಸುವ ಮುನ್ನ ಕೈಗಳನ್ನು ಸ್ವಚ್ಛಗೊಳಿಸಲು ಸೂಚಿಸುವುದು.
    4. ಪರೀಕ್ಷಾ ಕೇಂದ್ರದಲ್ಲಿ ಸ್ಯಾನಿಟೈಸರ್, ಸಾಬೂನು, ನೀರಿನ ವ್ಯವಸ್ಥೆ ಹೆಚ್ಚು ಪ್ರಮಾಣದಲ್ಲಿ ಒದಗಿಸುವುದು.
    5. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದ ಬಳಿ ಗುಂಪು ಸೇರಿದಂತೆ ನೋಡಿಕೊಳ್ಳುವದು.
    6. ಜ್ವರ, ಕೆಮ್ಮು, ನೆಗಡಿ ಇರೋ ವಿದ್ಯಾರ್ಥಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸುವುದು.
    7. ವಿದ್ಯಾರ್ಥಿಗಳು ಮಾಸ್ಕ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಕೊಡುವುದು.
    8. ಅಗತ್ಯ ಸಂದರ್ಭದಲ್ಲಿ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ಸಲಹೆ ಪಡೆಯುವುದು.

  • 10 ರೂ. ನಾಣ್ಯ ಸ್ವೀಕರಿಸುವಂತೆ ಬಿಎಂಟಿಸಿಯಿಂದ ಸುತ್ತೋಲೆ

    10 ರೂ. ನಾಣ್ಯ ಸ್ವೀಕರಿಸುವಂತೆ ಬಿಎಂಟಿಸಿಯಿಂದ ಸುತ್ತೋಲೆ

    ಬೆಂಗಳೂರು: ಹತ್ತು ರೂಪಾಯಿ ನಾಣ್ಯ ಚಾಲ್ತಿಯಲ್ಲಿ ಇಲ್ಲ ಎಂಬ ಸುದ್ದಿ ಎಲ್ಲೆಡೆ ಹಬ್ಬಿ ವ್ಯಾಪಾರ, ವ್ಯವಹಾರ ಎಲ್ಲಾ ಕಡೆ ನಾಣ್ಯವನ್ನು ಸ್ವೀಕರಿಸುತ್ತಿಲ್ಲ. ಬಿಎಂಟಿಸಿ ಬಸ್ಸುಗಳಲ್ಲಿ ಕೂಡ ನಾಣ್ಯ ಸ್ವೀಕರಿಸುತ್ತಿಲ್ಲ. ಈ ಬಗ್ಗೆ ಬಿಎಂಟಿಸಿ ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ವಾಗ್ವಾದ ನಡೆದಿರುವ ಉದಾಹಾರಣೆಗಳು ಹೆಚ್ಚಿವೆ. ಹಾಗಾಗಿ ಈ ಬಗ್ಗೆ ಬಿಎಂಟಿಸಿ ಸುತ್ತೋಲೆಯನ್ನ ಹೊರಡಿಸಿದೆ.

    ಹತ್ತು ರೂಪಾಯಿ ನಾಣ್ಯವನ್ನು ಆರ್‌ಬಿಐ ಬ್ಯಾನ್ ಮಾಡಿಲ್ಲ. ನಾಣ್ಯವನ್ನು ಸ್ವೀಕರಿಸಿ ಎಂದು ಸುತ್ತೋಲೆಯನ್ನು ಹೊರಡಿಸಿದೆ. ಬಸ್ಸುಗಳಲ್ಲಿ ಇರಬಹುದು ಡಿಪೋಗಳಲ್ಲಿ ಇರಬಹುದು ನಾಣ್ಯ ಸ್ವೀಕರಿಸುವಂತೆ ಎಲ್ಲೆಡೆ ಸುತ್ತೋಲೆಯನ್ನು ಹೊರಡಿಸಲಾಗಿದೆ. ಬಿಎಂಟಿಸಿ ಡಿಪೋ ಮತ್ತು ಬಸ್ಸುಗಳಲ್ಲಿ ಹತ್ತು ರೂಪಾಯಿ ನಾಣ್ಯವನ್ನು ಸ್ವೀಕರಿಸಿ ಎಂದು ಸುತ್ತೋಲೆ ನೀಡಲಾಗಿದೆ.

    ಎಲ್ಲಾ ಕಂಡಕ್ಟರ್ ಗಳು ಬಿಎಂಟಿಸಿ ಬಸ್ಸಿನಲ್ಲಿ ಪ್ರಯಾಣಿಕರು ನೀಡುವ ಹತ್ತು ರೂಪಾಯಿ ನಾಣ್ಯವನ್ನು ಮಾನ್ಯ ಮಾಡುವಂತೆ ಸೂಚನೆ ನೀಡಿದೆ. ಜೊತೆಗೆ ಪ್ರಯಾಣಿಕರಿಗೆ ಚಿಲ್ಲರೆ ನೀಡುವಾಗ ಹತ್ತು ರೂಪಾಯಿ ನಾಣ್ಯ ನೀಡಬೇಕು. ಹತ್ತು ರೂಪಾಯಿ ನಾಣ್ಯ ಮಾನ್ಯತೆ ಇದೆ ಅದನ್ನು ಮರು ಬಳಕೆ ಮಾಡಿ ಎಂದು ಸೂಚನೆ ನೀಡಬೇಕೆಂದು ಹೇಳಿದೆ. ಜೊತೆಗೆ ಬಸ್ಸುಗಳಲ್ಲಿ ಹತ್ತು ರೂಪಾಯಿ ನಾಣ್ಯದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಬಿಎಂಟಿಸಿ ತಿಳಿಸಿದೆ.

  • ಅನಧಿಕೃತ ಹೂಡಿಕೆ ಬಗ್ಗೆ ಚಿತ್ರ ಮಂದಿರದಲ್ಲಿ ವಿಡಿಯೋ ಜಾಹೀರಾತಿಗೆ ಸೂಚನೆ

    ಅನಧಿಕೃತ ಹೂಡಿಕೆ ಬಗ್ಗೆ ಚಿತ್ರ ಮಂದಿರದಲ್ಲಿ ವಿಡಿಯೋ ಜಾಹೀರಾತಿಗೆ ಸೂಚನೆ

    ಧಾರವಾಡ: ಅನಧಿಕೃತ ಹೂಡಿಕೆಗಳ ಕುರಿತು ಚಲನಚಿತ್ರ ಮಂದಿರಗಳಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಲು ಚಲನಚಿತ್ರ ಮಂದಿರಗಳಲ್ಲಿ ವಿವಿಧ ವಿಡಿಯೋ ಜಾಹೀರಾತುಗಳನ್ನು ಪ್ರದರ್ಶಿಸಲು ಜಿಲ್ಲಾಧಿಕಾರಿ ದೀಪಾ ಚೋಳನ್ ಸುತ್ತೋಲೆ ಹೊರಡಿಸಿದ್ದಾರೆ.

    ವಿವಿಧ ಅನಧಿಕೃತ ಕಂಪನಿಗಳ ಆಮಿಷಕ್ಕೆ ಮರುಳಾಗಿ ಹಣ ಕಳೆದುಕೊಳ್ಳುತ್ತಿರುವ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದ 15 ಸೆಕೆಂಡುಗಳ ಸಾರ್ವಜನಿಕ ಹಿತಾಸಕ್ತಿ ಸರ್ಕಾರಿ ವಿಡಿಯೋ ಜಾಹೀರಾತುಗಳನ್ನು ಉಚಿತವಾಗಿ ಧಾರವಾಡ ಜಿಲ್ಲೆಯ ಎಲ್ಲ ಚಲನಚಿತ್ರ ಮಂದಿರಗಳ ಮಾಲೀಕರು ಪ್ರತಿ ಚಲನಚಿತ್ರ ಪ್ರದರ್ಶಿಸುವ ಆರಂಭದಲ್ಲಿ ಹಾಗೂ ವಿರಾಮ ಸಂದರ್ಭದಲ್ಲಿ ಪ್ರದರ್ಶಿಸಲು ಸುತ್ತೋಲೆ ಮೂಲಕ ನಿರ್ದೇಶಿಸಲಾಗಿದೆ.

    ಕರ್ನಾಟಕ ಚಲನಚಿತ್ರ ನಿಯಂತ್ರಣ ಕಾಯ್ದೆ 1964ರ ನಿಯಮ 12ರ ಅನ್ವಯ ಈ ನಿರ್ದೇಶನವನ್ನು ಕಡ್ಡಾಯವಾಗಿ ಪಾಲಿಸುವಂತೆ ಸರ್ಕಾರಿ ವಿಡಿಯೋ ಜಾಹೀರಾತುಗಳನ್ನು ಪ್ರದರ್ಶಿಸಲು ಜಿಲ್ಲಾಧಿಕಾರಿ ದೀಪಾ ಚೋಳನ್ ಸೂಚಿಸಿದ್ದಾರೆ.

  • ಮುಂದಿನ ವರ್ಷ ಎರಡು ಬಾವುಟ ಹಾರಿಸಲು ಸೂಚಿಸುತ್ತೇವೆ: ಬಸವರಾಜ್ ಬೊಮ್ಮಾಯಿ

    ಮುಂದಿನ ವರ್ಷ ಎರಡು ಬಾವುಟ ಹಾರಿಸಲು ಸೂಚಿಸುತ್ತೇವೆ: ಬಸವರಾಜ್ ಬೊಮ್ಮಾಯಿ

    – ನನಗೆ ಯಾವುದೇ ರೀತಿಯ ಸುತ್ತೋಲೆ ಬಂದಿಲ್ಲ

    ಉಡುಪಿ: ಮುಂದಿನ ವರ್ಷ ಕನ್ನಡ ರಾಜ್ಯೋತ್ಸವದೊಂದು ಎರಡೂ ಬಾವುಟ ಹಾರಿಸಲು ಸೂಚಿಸುತ್ತೇವೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

    ಕನ್ನಡ ರಾಜ್ಯೋತ್ಸವ ಸಂದರ್ಭ ಕನ್ನಡ ಧ್ವಜ ಹಾರಿಸುವ, ಹಾರಿಸದೇ ಇರುವ ವಿಚಾರದಲ್ಲಿ ರಾಜ್ಯ ಸಂಪುಟ ಸದಸ್ಯರೆ ಗೊಂದಲದಲ್ಲಿದ್ದಾರೆ. ಒಬ್ಬೊಬ್ಬರು ಒಂದೊಂದು ಹೇಳಿಕೆಯನ್ನು ನೀಡಿದ್ದಾರೆ. ಉಡುಪಿಯಲ್ಲಿ ಜಿಲ್ಲಾಡಳಿತದ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ ಕನ್ನಡ ಧ್ವಜವನ್ನು ಹಾರಿಸಿಲ್ಲ. ಆದರೆ ಕನ್ನಡ ಧ್ವಜವನ್ನು ಹಾರಿಸಬಾರದು ಎಂದು ರಾಜ್ಯ ಸರಕಾರ ಯಾವುದೇ ಸುತ್ತೋಲೆ ಹೊರಡಿಸಿಲ್ಲ. ಜಿಲ್ಲಾ ಉಸ್ತುವಾರಿ ಸಚಿವನಾಗಿ ನಾನು ಯಾವುದೇ ಸುತ್ತೋಲೆ ಸ್ವೀಕರಿಸಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

    ಜಿಲ್ಲಾಧಿಕಾರಿಗಳಿಗೆ ಇವತ್ತೇ ಸೂಚನೆ ಕೊಟ್ಟಿದ್ದೇನೆ. ಮುಂದಿನ ವರ್ಷ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸುತ್ತೇವೆ ಎಂದು ಹೇಳಿದರು. ಈ ಬಗ್ಗೆ ದಿನೇಶ್ ಗುಂಡೂರಾವ್ ಟ್ವೀಟ್‍ಗೆ ನಾನು ಉತ್ತರಿಸಲ್ಲ ಎಂದ ಸಚಿವರು ರಾಜ್ಯೋತ್ಸವ ಪ್ರಶಸ್ತಿ ವಿಚಾರದಲ್ಲಿ ರಾಜಕೀಯ ಬೆರೆಸಿಲ್ಲ, ರಾಜಕಾರಣಿಗಳಿಗೆ ರಾಜ್ಯೋತ್ಸವ ಪ್ರಶಸ್ತಿ ಕೊಟ್ಟಿಲ್ಲ. ಸಾಧಕರಿಗೆ ಪ್ರಶಸ್ತಿ ಕೊಡಲಾಗಿದೆ ಎಂದು ತಿಳಿಸಿದರು.

    ದೇಶದಲ್ಲಿ ಡಿಜಿಟಲೈಸೇಶನ್ ಹೆಚ್ಚಾಗಿರುವುದರಿಂದ ಹಣಕಾಸು ವಿನಿಮಯಗಳೆಲ್ಲಾ ಆನ್ ಲೈನ್ ಮುಖಾಂತರ ನಡೆಯುತ್ತಿದೆ. ಹೀಗಾಗಿ ಸೈಬರ್ ಕ್ರೈಂ ಹೆಚ್ಚಾಗಿದೆ. ಅದರಲ್ಲೂ ಕರ್ನಾಟಕ ಐಟಿಯಲ್ಲಿ ಬಹಳ ಮುಂದೆ ಇರೋದ್ರಿಂದ ಇಲ್ಲಿ ಡಿಜಿಟಲೈಸೇಶನ್ ಮಿಸ್ ಯೂಸ್ ಆಗುತ್ತಿದೆ. ಈ ಬಗ್ಗೆ ನಿಗಾ ವಹಿಸಲು ರಾಜ್ಯದಲ್ಲಿ ಸೆನ್ ಪೊಲೀಸ್ ಠಾಣೆ ಸಂಖ್ಯೆ ಹೆಚ್ಚು ಮಾಡುತ್ತೇವೆ. ಬೆಂಗಳೂರು ನಗರ ಸೇರಿದಂತೆ, ಕಮಿಷನರೇಟ್ ವ್ಯಾಪ್ತಿಯಲ್ಲಿ ಠಾಣೆಗಳ ಸಂಖ್ಯೆ ಹೆಚ್ಚು ಮಾಡಲಾಗುವುದು ಎಂದರು. ಬಾಂಗ್ಲಾ ವಲಸಿಗರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಕೇಂದ್ರ ಗೃಹ ಇಲಾಖೆಯಿಂದ ಸೂಚನೆ ಬಂದಿದೆ ಎಂದು ಬೊಮ್ಮಾಯಿ ಹೇಳಿದರು.

    ಟಿಪ್ಪು ಕುರಿತ ಪಠ್ಯವನ್ನು ಕೈ ಬಿಡುವ ವಿಚಾರವಾಗಿ ಕ್ಯಾಬಿನೆಟ್ ಸಭೆಯಲ್ಲಿ ಇನ್ನೂ ಚರ್ಚೆಯಾಗಿಲ್ಲ. ಟಿಪ್ಪು ವಿಚಾರಗಳು ಹಿಂದೆ ಪ್ರಚಲಿತದಲ್ಲಿ ಇರಲಿಲ್ಲ. ವಿವಾದಾದ್ಮಕ ವಿಚಾರ ಮಕ್ಕಳಿಗೆ ತಿಳಿಸಬಾರದು ಅನ್ನೋದು ಸರ್ಕಾರದ ಉದ್ದೇಶ. ಶಾಲಾ ಪಠ್ಯದಿಂದ ಪಾಠ ರದ್ಧತಿ ಬಗ್ಗೆ ಸಿಎಂ ಪರಿಶೀಲನೆ ಮಾಡಬೇಕೆಂದು ಹೇಳಿದ್ದಾರೆ. ಸರ್ಕಾರ ಇಲ್ಲಿಯವರೆಗೆ ಯಾವುದೇ ನಿರ್ಣಯ ಮಾಡಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

  • ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

    ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

    ಬೆಂಗಳೂರು: ಕರುನಾಡಿನ ತುಂಬೆಲ್ಲ ಕನ್ನಡಿಗರು ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಸಹ ಕನ್ನಡಿಗರಿಗೆ ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ.

    ಟ್ವೀಟ್: ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿವಸವೇ ಕರ್ನಾಟಕ ರಾಜ್ಯೋತ್ಸವ. ಕನ್ನಡಿಗರ ವಿಶಾಲ ಹೃದಯವಂತಿಕೆ ಹಾಗೂ ಕನ್ನಡ ನಾಡಿನ ಸೌಂದರ್ಯ ಹೆಸರುವಾಸಿಯಾದದ್ದು. ಬರುವ ದಿನಗಳಲ್ಲಿ ಕರ್ನಾಟಕದ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ.

    ಇತ್ತ ರಾಜ್ಯ ಬಿಜೆಪಿ ಸರ್ಕಾರ ಹೊರಡಿಸಿರುವ ಸುತ್ತೋಲೆಯೊಂದು ಹೊಸ ವಿವಾದಕ್ಕೆ ಕಾರಣವಾಗಿದೆ. ಕನ್ನಡ ರಾಜ್ಯೋತ್ಸವದಂದು ರಾಜ್ಯದ ಯಾವ ಭಾಗದಲ್ಲಿಯೂ ಕನ್ನಡ ಧ್ವಜ ಹಾರಾಟ ಬೇಡ. ಕೇವಲ ರಾಷ್ಟ್ರಧ್ವಜವನ್ನಷ್ಟೇ ಹಾರಿಸಿ ಎಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸರ್ಕಾರ ಕಡ್ಡಾಯ ಸೂಚನೆ ಹೊರಡಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯ ವೇಳೆ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ, ರಾಷ್ಟ್ರಧ್ವಜಾರೋಹಣ ಮಾಡಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.

    ಕಾಂಗ್ರೆಸ್ ನಾಯಕ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಧ್ವಜ ಸಂಹಿತೆ ಹೆಸರಿನಲ್ಲಿ ಜನ ಮಾನಸದಲ್ಲಿ ದಶಕಗಳಿಂದ ನೆಲೆಯೂರಿದ ಕನ್ನಡದ ಅಸ್ಮಿತೆಯ ಪ್ರತಿಬಿಂಬವಾದ ನಾಡಧ್ವಜ ಹಾರಾಟಕ್ಕೆ ಅವಕಾಶ ನೀಡದೇ ಇರುವ ಮೂಲಕ ಬಿಜೆಪಿ ಸರ್ಕಾರ ಕನ್ನಡಿಗರ ಭಾವನೆಯೊಂದಿಗೆ ಚೆಲ್ಲಾಟವಾಡುತ್ತಿದೆ. ಕರ್ನಾಟಕದಲ್ಲಿ ನಾಡಧ್ವಜವಲ್ಲದೆ ಭಗವಾಧ್ವಜ ಹಾರಿಸಬೇಕೆ? ಎಂದು ಕಿಡಿ ಕಾರಿದ್ದಾರೆ.

  • ಕನ್ನಡ ರಾಜ್ಯೋತ್ಸವದಂದು ಕನ್ನಡ ಧ್ವಜಕ್ಕೆ ರಾಜ್ಯ ಸರ್ಕಾರದಿಂದಲೇ ಅಪಮಾನ

    ಕನ್ನಡ ರಾಜ್ಯೋತ್ಸವದಂದು ಕನ್ನಡ ಧ್ವಜಕ್ಕೆ ರಾಜ್ಯ ಸರ್ಕಾರದಿಂದಲೇ ಅಪಮಾನ

    -ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಟೀಕೆ

    ಬೆಂಗಳೂರು: ನಾಡಿನಾದ್ಯಂತ ಕನ್ನಡ ರಾಜ್ಯೋತ್ಸವ ಸಂಭ್ರಮ. ಕನ್ನಡ ನಾಡಿನ ಉದಯವಾದ ಈ ದಿನವನ್ನು ಸಡಗರದಿಂದ ಆಚರಿಸಲು ಸಕಲ ಸಿದ್ಧತೆಗಳು ನಡೆದಿದೆ. ಆದರೆ ರಾಜ್ಯದ ಬಿಜೆಪಿ ಸರ್ಕಾರ ಹೊರಡಿಸಿರುವ ಸುತ್ತೋಲೆಯೊಂದು ಹೊಸ ವಿವಾದಕ್ಕೆ ಕಾರಣವಾಗಿದೆ. ಕನ್ನಡ ರಾಜ್ಯೋತ್ಸವದಂದು ರಾಜ್ಯದ ಯಾವ ಭಾಗದಲ್ಲಿಯೂ ಕನ್ನಡ ಧ್ವಜ ಹಾರಾಟ ಬೇಡ. ಕೇವಲ ರಾಷ್ಟ್ರಧ್ವಜವನ್ನಷ್ಟೇ ಹಾರಿಸಿ ಎಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸರ್ಕಾರ ಕಡ್ಡಾಯ ಸೂಚನೆ ಹೊರಡಿಸಿದೆ.

    https://twitter.com/dineshgrao/status/1189948344753246208

    ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯ ವೇಳೆ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ, ರಾಷ್ಟ್ರಧ್ವಜಾರೋಹಣ ಮಾಡಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.

    ರಾಜ್ಯ ಸರ್ಕಾರದ ಈ ಆದೇಶದ ವಿರುದ್ಧ ಕನ್ನಡ ಪರ ಸಂಘಟನೆಗಳು ಸೇರಿದಂತೆ ಸಾಮಾಜಿಕ ತಾಣಗಳಲ್ಲಿ ಸಹ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕಾಂಗ್ರೆಸ್ ನಾಯಕ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಧ್ವಜ ಸಂಹಿತೆ ಹೆಸರಿನಲ್ಲಿ ಜನ ಮಾನಸದಲ್ಲಿ ದಶಕಗಳಿಂದ ನೆಲೆಯೂರಿದ ಕನ್ನಡದ ಅಸ್ಮಿತೆಯ ಪ್ರತಿಬಿಂಬವಾದ ನಾಡಧ್ವಜ ಹಾರಾಟಕ್ಕೆ ಅವಕಾಶ ನೀಡದೇ ಇರುವ ಮೂಲಕ ಬಿಜೆಪಿ ಸರ್ಕಾರ ಕನ್ನಡಿಗರ ಭಾವನೆಯೊಂದಿಗೆ ಚೆಲ್ಲಾಟವಾಡುತ್ತಿದೆ. ಕರ್ನಾಟಕದಲ್ಲಿ ನಾಡಧ್ವಜವಲ್ಲದೆ ಭಗವಾಧ್ವಜ ಹಾರಿಸಬೇಕೆ? ಎಂದು ಕಿಡಿ ಕಾರಿದ್ದಾರೆ.

  • ಬಿಎಂಟಿಸಿಯಲ್ಲಿ ಇನ್ಮುಂದೆ ಪ್ರಯಾಣಿಕರು ಪ್ಲಾಸ್ಟಿಕ್ ಕವರ್ ತರುವಂತಿಲ್ಲ

    ಬಿಎಂಟಿಸಿಯಲ್ಲಿ ಇನ್ಮುಂದೆ ಪ್ರಯಾಣಿಕರು ಪ್ಲಾಸ್ಟಿಕ್ ಕವರ್ ತರುವಂತಿಲ್ಲ

    ಬೆಂಗಳೂರು: ಬಿಎಂಟಿಸಿ ಬಸ್‍ನಲ್ಲಿ ಇನ್ನು ಮುಂದೆ ಪ್ರಯಾಣಿಕರು ಪ್ಲಾಸ್ಟಿಕ್ ಕವರ್, ವಸ್ತು ತರುವಂತಿಲ್ಲ ಎಂದು ಬೆಂಗಳೂರು ಮಹಾನಗರ ಪಾಲಿಕೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಶಿಖಾ ಆದೇಶ ಹೊರಡಿಸಿದ್ದಾರೆ.

    ಬಿಎಂಟಿಸಿ ಬಸ್‍ನಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು ನಿಷೇಧಿಸಿರುವ ಬಿಎಂಟಿಸಿ ಅಡಳಿತ ಮಂಡಳಿ, ಪ್ಲಾಸ್ಟಿಕ್‍ನ್ನು ತರದಂತೆ ಪ್ರಯಾಣಿಕರಿಗೆ ಜಾಗೃತಿ ಮೂಡಿಸಲು ಚಾಲಕರಿಗೆ ಮತ್ತು ನಿರ್ವಾಹಕರಿಗೆ ಸುತ್ತೋಲೆ ಕಳುಹಿಸಿದ್ದಾರೆ.

    ಬಸ್ಸಿನ ಒಳಗಡೆ ಪ್ರಯಾಣಿಕರು ಪ್ಲಾಸ್ಟಿಕ್ ಕವರುಗಳನ್ನು ತರುವುದನ್ನು ನಿಷೇಧಿಸಬೇಕೆಂದು ಮತ್ತು ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿ ಮತ್ತು ಅಧಿಕಾರಿಗಳು ಪ್ಲಾಸ್ಟಿಕ್ ಕವರುಗಳನ್ನು ಬಳಸುವುದನ್ನು ನಿಷೇಧಿಸಬೇಕು, ಹಾಗೂ ಪ್ರಯಾಣಿಕರು, ಸಿಬ್ಬಂದಿಗಳು ಮತ್ತು ಅಧಿಕಾರಿಗಳಲ್ಲಿ ಇದರ ಬಗ್ಗೆ ಜಾಗೃತಿ ಮೂಡಿಸಿ. ನಮ್ಮ ಬೆಂಗಳೂರು ನಗರ ಮತ್ತು ಸಂಸ್ಥೆಯನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿ ಮಾಡಬೇಕು ಎಂದು ಶಿಖಾ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

  • ಪಶ್ಚಿಮ ಬಂಗಾಳದಲ್ಲಿ ಮುಸ್ಲಿಂ ಮಕ್ಕಳಿಗೆ ಪ್ರತ್ಯೇಕ ಊಟದ ಹಾಲ್

    ಪಶ್ಚಿಮ ಬಂಗಾಳದಲ್ಲಿ ಮುಸ್ಲಿಂ ಮಕ್ಕಳಿಗೆ ಪ್ರತ್ಯೇಕ ಊಟದ ಹಾಲ್

    ಕೋಲ್ಕತ್ತಾ: ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಮುಸ್ಲಿಂ ಮಕ್ಕಳಿಗೆ ಪ್ರತ್ಯೇಕ ಊಟದ ರೂಮ್ ನಿರ್ಮಿಸಲು ಸುತ್ತೋಲೆಯನ್ನು ಹೊರಡಿಸಿ ವಿವಾದಕ್ಕೆ ಕಾರಣವಾಗಿದೆ.

    ಕೂಚ್‍ಬಿಹಾರ್ ಜಿಲ್ಲೆಯ ಶಾಲೆಗಳಲ್ಲಿ ಶೇಕಡಾ 70ಕ್ಕಿಂತ ಹೆಚ್ಚು ಮುಸ್ಲಿಂ ಮಕ್ಕಳೇ ಇದ್ದಾರೆ. ಇಲ್ಲಿ ಮಧ್ಯಾಹ್ನದ ಊಟಕ್ಕೆ ಪ್ರತ್ಯೇಕ ಊಟದ ಹಾಲ್‍ಗಳನ್ನು ನಿರ್ಮಿಸಬೇಕು ಎಂದು ಜಿಲ್ಲಾ ಶಿಕ್ಷಣಾಧಿಕಾರಿಗಳಿಗೆ ಸುತ್ತೋಲೆ ಕಳುಹಿಸಲಾಗಿದೆ.

    ಈ ಆದೇಶವನ್ನು ಜಾರಿ ಮಾಡಲು ಪಶ್ಚಿಮ ಬಂಗಾಳದ ಅಲ್ಪಸಂಖ್ಯಾತ ವ್ಯವಹಾರ ಮತ್ತು ಮದರಸಾ ಶಿಕ್ಷಣ ಇಲಾಖೆ ಶೇ. 70ಕ್ಕಿಂತ ಹೆಚ್ಚು ಮುಸ್ಲಿಂ ಮಕ್ಕಳು ಇರುವ ಶಾಲೆಗಳ ಪಟ್ಟಿಯನ್ನು ಸಿದ್ಧ ಮಾಡಿದೆ ಎಂದು ಹೇಳಲಾಗಿದೆ. ಶಿಕ್ಷಣ ಸಂಸ್ಥೆಯಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಶೇಕಡವಾರು ಪ್ರಮಾಣವನ್ನು ನಮೂದಿಸಿರುವ ಮಾಹಿತಿಯೊಂದಿಗೆ ಸರ್ಕಾರಿ ಮತ್ತು ಸರ್ಕಾರಿ ಅನಿದಾನಿತ ಶಾಲೆಗಳ ಪಟ್ಟಿಯನ್ನು ಸಂಗ್ರಹ ಮಾಡಲು ಜಿಲ್ಲಾ ಶಿಕ್ಷಣಾಧಿಕಾರಿಗೆ ಸುತ್ತೋಲೆ ಕಳುಹಿಸಲಾಗಿದೆ.

    ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿರುವ ಮಮತಾ ಬ್ಯಾನರ್ಜಿ, ಜಾರಿ ಆಗಿರುವ ಸುತ್ತೋಲೆಯ ಬಗ್ಗೆ ಗೊತ್ತಿಲ್ಲ. ಈ ಸಂಬಂಧ ತನಿಖೆ ಮಾಡಿಸಲಾಗುತ್ತಿದ್ದು, ಆದೇಶವನ್ನು ಹಿಂಪಡೆಯಲಾಗಿದೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಹೆಚ್ಚಿರುವ ಕಡೆಗಳಲ್ಲಿ ಇಲಾಖೆಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ನಡೆಸಲು ತಾಂತ್ರಿಕವಾಗಿ ಈ ರೀತಿಯ ಮಾಹಿತಿಯನ್ನು ಕೇಳಿರಬಹುದು. ನಾನಾ ಇಲಾಖೆಗಳ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಮಾಹಿತಿ ಕೇಳಲಾಗುತ್ತದೆ. ಇದರಲ್ಲಿ ಮಕ್ಕಳ ನಡುವೆ ಬೇಧ ಕಲ್ಪಿಸುವ ಯಾವುದೇ ಸಂಚು ಇರುವುದಿಲ್ಲ ಎಂದು ಹೇಳಿದ್ದಾರೆ.

    ಈ ವಿಚಾರದ ಬಗ್ಗೆ ಎಲ್ಲಾ ಕಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಅವರು ವಿದ್ಯಾರ್ಥಿಗಳ ನಡುವೆ ಪ್ರತ್ಯೇಕತೆ ಉಂಟು ಮಾಡುವ ಈ ಸುತ್ತೋಲೆ ಸರಿಯಲ್ಲ ಎಂದು ಹೇಳಿದ್ದಾರೆ. ಟ್ವಿಟರ್‍ನಲ್ಲಿ ಸುತ್ತೋಲೆಯನ್ನು ಪೋಸ್ಟ್ ಮಾಡಿರುವ ಅವರು, ಇದರ ಹಿಂದಿನ ದುರುದ್ದೇಶವೇನು ಎಂದು ಕಟುವಾಗಿ ಪ್ರಶ್ನಿಸಿದ್ದಾರೆ,

    ಸುತ್ತೋಲೆಯಲ್ಲಿ ಏನಿದೆ?
    ಕೂಚ್‍ಬಿಹಾರ್ ಜಿಲ್ಲಾಧಿಕಾರಿ ಕಚೇರಿಯ ಅಲ್ಪಸಂಖ್ಯಾತರ ವಿಭಾಗದಿಂದ ಕಳುಹಿಸಲಾಗಿರುವ ಸುತ್ತೋಲೆಯಲ್ಲಿ ಜಿಲ್ಲೆಯಲ್ಲಿ ಶೇಕಡಾ 70ಕ್ಕಿಂತ ಹೆಚ್ಚು ಮುಸ್ಲಿಂ ಮಕ್ಕಳಿರುವ ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಎಷ್ಟಿವೆ ಎನ್ನುವ ಮಾಹಿತಿಯನ್ನು ತಕ್ಷಣ ನೀಡಿ. ಈ ಶಾಲೆಗಳಲ್ಲಿ ಮಧ್ಯಾಹ್ನದ ಊಟ ಸೇವನೆಗೆ ಪ್ರತ್ಯೇಕ ಊಟದ ಹಾಲ್ ನಿರ್ಮಿಸುವ ಪ್ರಸ್ತಾವನೆ ಕಳುಹಿಸಬೇಕಾಗಿದೆ ಎಂದು ತಿಳಿಸಲಾಗಿದೆ.