Tag: CISF

  • ನನ್ನಿಂದ ಟ್ಯೂಷನ್‌ ತೆಗೆದುಕೊಳ್ಳಿ: ಖರ್ಗೆ vs ನಡ್ಡಾ ವಾಕ್ಸಮರ

    ನನ್ನಿಂದ ಟ್ಯೂಷನ್‌ ತೆಗೆದುಕೊಳ್ಳಿ: ಖರ್ಗೆ vs ನಡ್ಡಾ ವಾಕ್ಸಮರ

    ನವದೆಹಲಿ: ರಾಜ್ಯಸಭೆಯಲ್ಲಿ ಕೇಂದ್ರ ಸಚಿವ ಜೆಪಿ ನಡ್ಡಾ (JP Nadda), ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ (Mallaikarjun Kharge) ಮಧ್ಯೆ ಕೇಂದ್ರಿಯ ಕೈಗಾರಿಕಾ ಭದ್ರತಾ ಸಿಬ್ಬಂದಿ (CISF) ವಿಚಾರಕ್ಕೆ ಸಂಬಂಧಿಸಿದಂತೆ ವಾಕ್ಸಮರ ನಡೆದಿದೆ.

    ಸದನದ ಬಾವಿ ಬಳಿ ಕೇಂದ್ರಿಯ ಕೈಗಾರಿಕಾ ಭದ್ರತಾ ಸಿಬ್ಬಂದಿ ನಿಯೋಜನೆ ಸರಿಯಲ್ಲ. ಸದಸ್ಯರು ತಮ್ಮ ಪ್ರಜಾಸತಾತ್ಮಕ ಹಕ್ಕುಗಳನ್ನು ಚಲಾಯಿಸುವಾಗ ಸಿಐಎಸ್‌ಎಫ್ ಇಟ್ಟು ಸದನ ನಡೆಸ್ತಿರುವುದು ಆಘಾತ ತಂದಿದೆ. ಜೇಟ್ಲಿ, ಸುಷ್ಮಾಸ್ವರಾಜ್ ಪ್ರಜಾಸತ್ತಾತ್ಮಕ ರೀತಿಯಲ್ಲಿ ಪ್ರತಿಭಟನೆ ಕಲಾಪಕ್ಕೆ ಅಡ್ಡಿ ಅಂದಿದ್ದರು. ಅದನ್ನು ಮುಂದುವರಿಸುತ್ತೇವೆ ಎಂದು ಖರ್ಗೆ ಹೇಳಿದರು.  ಇದನ್ನೂ ಓದಿ: ಕರ್ನಾಟಕದಲ್ಲಿರುವ 6,291 ಪ್ರಾಥಮಿಕ ಕೃಷಿ ಸಾಲ ಸಂಘಗಳಲ್ಲಿ 125 ಸಂಘಗಳು ದಿವಾಳಿ ಅಂಚಿನಲ್ಲಿವೆ: ಅಮಿತ್ ಶಾ

    ಖರ್ಗೆ ಹೇಳಿಕೆಯನ್ನು ರಾಜ್ಯಸಭಾ ಉಪಸಭಾಪತಿ ಹರಿವಂಶ್ ತಳ್ಳಿ ಹಾಕಿದರು. ಇದು ಸಿಐಎಸ್‌ಎಫ್ ಸಿಬ್ಬಂದಿಯಲ್ಲ, ಸಂಸತ್ತಿನ ಭದ್ರತಾ ಸಿಬ್ಬಂದಿ. ಮಾರ್ಷಲ್ ಮಾತ್ರ ಸಭಾಧ್ಯಕ್ಷರ ಆದೇಶ ಪಾಲಿಸುತ್ತಾರೆ ಎಂದು ಸ್ಪಷ್ಪಪಡಿಸಿದರು. ಹಾಗಾದರೆ, ಈ ಸದನವನ್ನು ಯಾರು ನಡೆಸುತ್ತಿದ್ದಾರೆ ನೀವಾ? ಅಥವಾ ಅಮಿತ್ ಶಾನ ಎಂದು ಖರ್ಗೆ ಮರು ಪ್ರಶ್ನಿಸಿದರು.

    ಮಧ್ಯಪ್ರವೇಶಿಸಿದ ಕೇಂದ್ರ ಸಚಿವ ನಡ್ಡಾ, ಕಲಾಪಕ್ಕೆ ಅಡ್ಡಿಪಡಿಸುವುದು ಪ್ರಜಾಸತ್ತಾತ್ಮಕವಲ್ಲ. ಪ್ರತಿಪಕ್ಷವಾಗಿ ಹೇಗೆ ಕೆಲಸ ಮಾಡಬೇಕೆಂದ ನನ್ನಿಂದ ಟ್ಯೂಷನ್ ತೆಗೆದುಕೊಳ್ಳಿ. ಇದೇ ರೀತಿ ಮಾತನಾಡುತ್ತಿದ್ದರೆ ಮುಂದಿನ 40 ವರ್ಷ ನೀವು ವಿರೋಧ ಪಕ್ಷದಲ್ಲಿಯೇ ಇರುತ್ತೀರಿ ಎಂದು ನಡ್ಡಾ ಗುಡುಗಿದರು.

  • ಕುಡಿದು ರಂಪಾಟ – ʻಜೈಲರ್ʼ ಸಿನಿಮಾ ವಿಲನ್ ವಿನಾಯಕನ್ ಅರೆಸ್ಟ್!

    ಕುಡಿದು ರಂಪಾಟ – ʻಜೈಲರ್ʼ ಸಿನಿಮಾ ವಿಲನ್ ವಿನಾಯಕನ್ ಅರೆಸ್ಟ್!

    2023ರಲ್ಲಿ ತೆರೆ ಕಂಡಿದ್ದ ಸೂಪರ್ ಹಿಟ್ ಸಿನಿಮಾ ʻಜೈಲರ್ʼನಲ್ಲಿ (Jailer) ರಜನಿಕಾಂತ್ ಎದುರು ವಿಲನ್ ಆಗಿ ಅಬ್ಬರಿಸಿದ್ದ ಮಲಯಾಳಂ ನಟ ವಿನಾಯಕನ್ (Vinayakan) ಅವರನ್ನು ಅರೆಸ್ಟ್ ಮಾಡಲಾಗಿದೆ. ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂಠಪೂರ್ತಿ ಕುಡಿದಿದ್ದ ವಿನಾಯಕನ್, ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ.

    ವಿನಾಯಕನ್ ಅವರು ಕೊಚ್ಚಿಯಿಂದ ಹೈದರಾಬಾದ್‌ನ ರಾಜೀವ್ ಗಾಂಧಿ ಇಂಟರ್‌ನ್ಯಾಷನಲ್‌ ಏರ್‌ಪೋರ್ಟ್‌ಗೆ (Hyderabad Airport) ಆಗಮಿಸಿದ್ದರು. ಅಲ್ಲಿ ಇಂಡಿಗೋ ಸಿಬ್ಬಂದಿ ಜೊತೆಗೆ ಮೊದಲು ಅನುಚಿತವಾಗಿ ವರ್ತಿಸಿದ್ದಾರೆ. ಅವರು ವಿಪರೀತ ಕುಡಿದಿದ್ದರಿಂದ ಮೈಮೇಲೆ ಅರಿವೇ ಇಲ್ಲದಂತೆ ನಡೆದುಕೊಂಡಿದ್ದಾರೆ. ಅಲ್ಲಿನ ಸಿಬ್ಬಂದಿಗೆ ಅವರನ್ನು ನಿಯಂತ್ರಿಸುವುದು ಕಷ್ಟವಾಗಿದೆ. ಅಲ್ಲದೇ ಪ್ರಯಾಣಿಕರೊಂದಿಗೂ ಅಸಭುವಾಗಿ ವರ್ತಿಸಿದ್ದಾರೆ. ಈ ಬಗ್ಗೆ ದೂರು ನೀಡಿದ ಬಳಿಕ ಏರ್‌ಪೋರ್ಟ್ ಸಿಐಎಸ್‌ಎಫ್ (CISF) ಭದ್ರತಾ ಸಿಬ್ಬಂದಿ ವಿನಾಯಕನ್ ಅವರನ್ನು ವಶಕ್ಕೆ ಪಡೆದು, ಸ್ಥಳೀಯ ಏರ್‌ಪೋರ್ಟ್ ಪೊಲೀಸರಿಗೆ ಒಪ್ಪಿಸಿದ್ದಾರೆ.

    ಅರೆಬೆತ್ತಲಾಗಿ ಕುಳಿತಿದ್ದ ನಟ:
    ವಿಮಾನ ನಿಲ್ದಾಣದಲ್ಲಿ ಧರಿಸಿದ್ದ ಶರ್ಟ್ ಬಿಚ್ಚಿ ಅರೆಬೆತ್ತಲಾಗಿ ಕುಳಿತಿದ್ದ ವಿನಾಯಕನ್ ಅವರ ವಿಡಿಯೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಸದ್ಯ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಏರ್‌ಪೋರ್ಟ್ ಪೊಲೀಸ್ ಠಾಣೆಯ ಸಿಐ ಬಾಲರಾಜ್, ಪ್ರಕರಣ ದಾಖಲಾಗಿದ್ದು, ತನಿಖೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ ಪಕ್ಷವನ್ನು ಅಧಿಕೃತಗೊಳಿಸಿದ ಚುನಾವಣಾ ಆಯೋಗ

    ಉತ್ತಮ ನಟ:
    ಕಳೆದ 28 ವರ್ಷಗಳಿಂದ ಮಲಯಾಳಂ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟ ವಿನಾಯಕನ್ ಅವರು ಮಲಯಾಳಂನ ಹಲವು ಹಿಟ್ ಸಿನಿಮಾಗಳಲ್ಲಿ ನಟಿಸಿ, ಉತ್ತಮ ನಟ ಎನಿಸಿಕೊಂಡಿದ್ದಾರೆ. ʻಜೈಲರ್‌ʼ ಸಿನಿಮಾದಲ್ಲಿ ರಜನಿಕಾಂತ್ ಎದುರು ಖಳನಾಗಿ ನಟಿಸಿದ ಮೇಲೆ ಅವರ ಜನಪ್ರಿಯತೆ ಇನ್ನಷ್ಟು ಹೆಚ್ಚಾಯಿತು. 2016ರಲ್ಲಿ ತೆರೆಕಂಡ ಮಲಯಾಳಂನ ʻಕಮ್ಮಟ್ಟಿಪಾಡಂʼ ಸಿನಿಮಾದ ನಟನೆಗಾಗಿ ವಿನಾಯಕನ್‌ಗೆ ಭಾರೀ ಮೆಚ್ಚುಗೆ ಸಿಕ್ಕಿತ್ತು. ಅದಕ್ಕಾಗಿ ಅವರು ಅತ್ಯುತ್ತಮ ನಟ ಪ್ರಶಸ್ತಿಯನ್ನು ಕೂಡ ಪಡೆದುಕೊಂಡಿದ್ದರು. ಇದನ್ನೂ ಓದಿ: ಸದ್ದು ಮಾಡುತ್ತಿದೆ ಅನೀಶ್, ಮಿಲನಾ ನಾಗರಾಜ್ ನಟನೆಯ ‘ಆರಾಮ್ ಅರವಿಂದ ಸ್ವಾಮಿ’ ಚಿತ್ರದ ಪೋಸ್ಟರ್

    ವಿವಾದಗಳಿಂದಲೇ ಫೇಮಸ್‌:
    ನಟ ವಿನಾಯಕನ್‌ ಅವರ ವಿವಾದ ಇದೇ ಮೊದಲೇನಲ್ಲ. 2023ರ ಅಕ್ಟೋಬರ್‌ನಲ್ಲಿ ಮಲಯಾಳಂ ಕೇರಳದ ಎರ್ನಾಕುಲಂನ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಗದ್ದಲ ಸೃಷ್ಟಿಸಿದ್ದಕ್ಕಾಗಿ ಬಂಧಿಸಲಾಗಿತ್ತು. 2022ರಲ್ಲಿ ಮೀಟೂ ಆಂದೋಲನದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿ ಸುದ್ದಿಯಾಗಿದ್ದರು. ಇದನ್ನೂ ಓದಿ: ಗುರುದತ್‌ ಗಾಣಿಗ ನಿರ್ದೇಶನದ ‘ಜುಗಾರಿ ಕ್ರಾಸ್’ ಸಿನಿಮಾ ಅನೌನ್ಸ್- ಕುತೂಹಲ ಹೆಚ್ಚಿಸಿದ ಫಸ್ಟ್ ಲುಕ್

    ತಮಿಳು ಮತ್ತು ಮಲಯಾಳಂ ಚಿತ್ರಗಳಲ್ಲಿ ನಟಿಸಿ ಖ್ಯಾತಿ ಪಡೆದಿರುವ ವಿನಾಯಕನ್‌, ಸದ್ಯ ವಿಕ್ರಮ್‌ ನಟನೆಯ ಆಕ್ಷನ್‌ ಥ್ರಿಲ್ಲರ್‌ ಸಿನಿಮಾ ʻಧ್ರುವನಚ್ಚತ್ತಿರಂʼ ಚಿತ್ರದಲ್ಲಿ ನಟಿಸಲು ಸಜ್ಜಾಗಿದ್ದಾರೆ. ಬಳಿಕ ತೆಕ್ಕು ವಡಕ್ಕು, ಕರಿಂತಂದನ್‌ ಮಲಯಾಳಂ ಸಿನಿಮಾಗಳಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ನಟಿಸಲು ಕಾಲ್‌ಶೀಟ್‌ ಕೊಟ್ಟಿದ್ದಾರೆ. ಇದನ್ನೂ ಓದಿ: ಅಂಬಾನಿ ಮನೆಯ ಗಣೇಶ ಹಬ್ಬದ ಸಂಭ್ರಮದಲ್ಲಿ ಬಾಲಿವುಡ್ ಸ್ಟಾರ್ಸ್

  • ಕಂಗನಾಗೆ ಕಪಾಳಮೋಕ್ಷ ಮಾಡಿದ ಸಿಬ್ಬಂದಿ ಬೆಂಗ್ಳೂರಿಗೆ ವರ್ಗಾವಣೆ?- CISF ಹೇಳಿದ್ದೇನು?

    ಕಂಗನಾಗೆ ಕಪಾಳಮೋಕ್ಷ ಮಾಡಿದ ಸಿಬ್ಬಂದಿ ಬೆಂಗ್ಳೂರಿಗೆ ವರ್ಗಾವಣೆ?- CISF ಹೇಳಿದ್ದೇನು?

    ಮುಂಬೈ: ಚಂಡೀಗಢ ವಿಮಾನ ನಿಲ್ದಾಣದಲ್ಲಿ ನಟಿ ಕಂಗನಾ ರಣಾವತ್‌ಗೆ (Kangana Ranaut) ಕಪಾಳಮೋಕ್ಷ ಮಾಡಿದ ಸಿಐಎಸ್‌ಎಫ್ ಕಾನ್‌ಸ್ಟೆಬಲ್ ಕುಲ್ವಿಂದರ್ ಕೌರ್ ಅವರ ವರ್ಗಾವಣೆ ಕುರಿತು ಊಹಾಪೋಹಗಳು ಹರಿದಾಡುತ್ತಿದೆ. ಈ ಬೆನ್ನಲ್ಲೇ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಸ್ಪಷ್ಟನೆ ನೀಡಿದೆ.

    ನಟಿ ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಸಿಐಎಸ್‌ಎಫ್ ಸಿಬ್ಬಂದಿಯನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ. ಅಲ್ಲದೇ ಅವರನ್ನು ಚಂಡೀಗಢದಿಂದ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಇದೀಗ ಸಿಐಎಸ್ಎಫ್ ಸ್ಪಷ್ಟನೆ ಕೊಡುವ ಮೂಲಕ ಊಹಾಪೋಹಗಳಿಗೆ ಫುಲ್‌ಸ್ಟಾಪ್‌ ಹಾಕಿದೆ.

    ಬಿಜೆಪಿ ಸಂಸದೆ ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಆರೋಪದ ಮೇಲೆ ಸಿಐಎಸ್‌ಎಫ್ ಕಾನ್‌ಸ್ಟೆಬಲ್ ಕುಲ್ವಿಂದರ್ ಕೌರ್ (Kulwinder Kaur) ಅವರನ್ನು ಇನ್ನೂ ಅಮಾನತುಗೊಳಿಸಲಾಗಿದೆ ಮತ್ತು ಅವರ ವಿರುದ್ಧ ಇಲಾಖಾ ವಿಚಾರಣೆ ನಡೆಯುತ್ತಿದೆ ಎಂದು ಸಿಐಎಸ್‌ಎಫ್ ತಿಳಿಸಿದೆ. ಇದನ್ನೂ ಓದಿ: ಹತ್ರಾಸ್‌ ದುರಂತ- ಪರಿಹಾರದ ಮೊತ್ತ ಹೆಚ್ಚಿಸಿದ ಸಿಎಂ ಯೋಗಿ ಆದಿತ್ಯನಾಥ್‌

    ಜೂನ್ 7 ರಂದು ಕಂಗನಾ ಚಂಡೀಗಢ ವಿಮಾನ ನಿಲ್ದಾಣದಿಂದ ದೆಹಲಿಯತ್ತ ಹೊರಟಿದ್ದರು. ಈ ವೇಳೆ ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಸಿಐಎಸ್‌ಎಫ್ ಸಿಬ್ಬಂದಿ ಕುಲ್ವಿಂದರ್ ಕೌರ್ ಕಪಾಳಮೋಕ್ಷ ಮಾಡಿದ್ದಾರೆ. ರೈತರ ಆಂದೋಲನಕ್ಕೆ ಸಂಬಂಧಿಸಿದಂತೆ ಕಂಗನಾ ಹೇಳಿಕೆಯಿಂದ ಕುಲ್ವಿಂದರ್ ಅವರಿಗೆ ನೋವಾಗಿದೆ. ಈ ಕಾರಣದಿಂದ ಅವರಿ ಕಂಗನಾ ಕೆನ್ನೆಗೆ ಹೊಡೆದಿದ್ದಾರೆ ಎಂದು ಹೇಳಲಾಗಿತ್ತು.

  • ತಾಯಿಯ ಗೌರವಕ್ಕಾಗಿ ಸಾವಿರ ಉದ್ಯೋಗಗಳನ್ನು ಕಳೆದುಕೊಳ್ಳಲು ತಯಾರಿದ್ದೇನೆ: ಕುಲ್ವಿಂದರ್ ಕೌರ್

    ತಾಯಿಯ ಗೌರವಕ್ಕಾಗಿ ಸಾವಿರ ಉದ್ಯೋಗಗಳನ್ನು ಕಳೆದುಕೊಳ್ಳಲು ತಯಾರಿದ್ದೇನೆ: ಕುಲ್ವಿಂದರ್ ಕೌರ್

    ಚಂಡೀಗಢ: ನನ್ನ ತಾಯಿಯ ಗೌರವಕ್ಕಾಗಿ ಸಾವಿರ ಉದ್ಯೋಗಗಳನ್ನು ಕಳೆದುಕೊಳ್ಳಲು ತಯಾರಿದ್ದೇನೆ ಎಂದು ನೂತನ ಸಂಸದೆ ಕಂಗನಾ ರಣಾವತ್‍ಗೆ ( Kangana Ranaut) ಕಪಾಳಮೋಕ್ಷ ಮಾಡಿದ್ದ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಕುಲ್ವಿಂದರ್ ಕೌರ್ (Kulwinder Kaur) ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

    ಕುಲ್ವಿಂದರ್ ಕೌರ್ ಅವರನ್ನು ಕೆಲಸದಿಂದ ಅಮಾನತು ಮಾಡಿ, ಬಂಧಿಸಲಾಗಿದೆ. ಇದಕ್ಕೂ ಮುನ್ನ ಅವರು, ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಈ ಕೆಲಸವನ್ನು ಕಳೆದುಕೊಳ್ಳುವ ಭಯವಿಲ್ಲ. ನಾನು ಸಿದ್ಧಳಿದ್ದೇನೆ, ನನ್ನ ತಾಯಿಯ ಗೌರವಕ್ಕಾಗಿ ಇಂತಹ ಸಾವಿರಾರು ಉದ್ಯೋಗಗಳನ್ನು ಕಳೆದುಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಸಿಬ್ಬಂದಿ ಕರ್ತವ್ಯದಿಂದ ಅಮಾನತು – ಬಳಿಕ ಅರೆಸ್ಟ್‌!

    ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿರುವ ಕಂಗನಾ ರಣಾವತ್ ಅವರು ಗುರುವಾರ ಚಂಡೀಗಢ ವಿಮಾನ ನಿಲ್ದಾಣಕ್ಕೆ (Chandigarh Airport) ಬಂದಿದ್ದಾಗ, ವಿಮಾನ ನಿಲ್ದಾಣದಲ್ಲಿ ಕೌರ್ ಅವರು ಕಪಾಳಮೋಕ್ಷ ಮಾಡಿದ್ದರು.

    2020ರಲ್ಲಿ ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಬೃಹತ್ ಪ್ರತಿಭಟನೆಗೆ ಇಳಿದಿದ್ದರು. ಈ ವೇಳೆ ನಟಿ ಕಂಗನಾ, ರೈತರು 100 ರೂ.ಗೆ ಅಲ್ಲಿ ಕುಳಿತಿದ್ದಾರೆ ಎಂದು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದರು. ವ್ಯಾಪಕ ಟೀಕೆ ವ್ಯಕ್ತವಾದ ನಂತರ ಪೋಸ್ಟ್‌ನ್ನು ಡಿಲೀಟ್ ಮಾಡಿದ್ದರು. ನಟಿ ಈ ಹೇಳಿಕೆ ನೀಡಿದಾಗ ತನ್ನ ತಾಯಿ ಅಲ್ಲೇ ಕುಳಿತು ಪ್ರತಿಭಟನೆ ನಡೆಸುತ್ತಿದ್ದರು. ಹಾಗಾಗಿ ನಟಿ ಹೇಳಿಕೆಯಿಂದ ನೋವುಂಟಾಗಿದ್ದು, ಕಪಾಳಮೋಕ್ಷ ಮಾಡಿದೆ ಎಂದು ಕೌರ್ ಆಕ್ರೋಶ ಹೊರಹಾಕಿದ್ದರು. ಇದಾದ ಬಳಿಕ ಕಂಗನಾ ಪೊಲೀಸರಿಗೆ ದೂರು ನೀಡಿ ಬಳಿಕ ವಿಮಾನದ ಮೂಲಕ ದೆಹಲಿಗೆ ಪ್ರಯಾಣ ಬೆಳೆಸಿದ್ದರು. ಇದನ್ನೂ ಓದಿ: ನನ್ನ ತಾಯಿ ಕೂಡ ಪ್ರತಿಭಟನೆಯಲ್ಲಿದ್ರು- ಕಂಗನಾಗೆ ಕಪಾಳಮೋಕ್ಷ ಮಾಡಿದ ಸಿಬ್ಬಂದಿ ಸಮರ್ಥನೆ

  • ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಸಿಬ್ಬಂದಿ ಕರ್ತವ್ಯದಿಂದ ಅಮಾನತು – ಬಳಿಕ ಅರೆಸ್ಟ್‌!

    ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಸಿಬ್ಬಂದಿ ಕರ್ತವ್ಯದಿಂದ ಅಮಾನತು – ಬಳಿಕ ಅರೆಸ್ಟ್‌!

    ಚಂಡೀಗಢ: ಹಿಮಾಚಲ ಪ್ರದೇಶ ಮಂಡಿ ಕ್ಷೇತ್ರದ ನೂತನ ಸಂಸದೆ ಆಗಿರುವ ನಟಿ ಕಂಗನಾ ರಣಾವತ್‌ (Kangana Ranaut) ಅವರಿಗೆ ಕಪಾಳಮೋಕ್ಷ ಮಾಡಿದ್ದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ಮಹಿಳಾ ಸಿಬ್ಬಂದಿ ಕುಲ್ವಿಂದರ್ ಕೌರ್‌ ಅವರನ್ನ ಕರ್ತವ್ಯದಿಂದ ಅಮಾನತುಗೊಳಿಸಿ, ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಆರೋಪಿ ಕುಲ್ವಿಂದರ್‌ ಕೌರ್‌ (Kulwinder Kaur) ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕಂಗನಾ ರಣಾವತ್‌ ಅವರಿಗೆ ಕಪಾಳಮೋಕ್ಷ ಮಾಡಿದ್ದರಿಂದ ಅವರ ವಿರುದ್ಧ ಪೊಲೀಸ್‌ ಪ್ರಕರಣ ದಾಖಲಾಗಿದ್ದು, ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

    ಏನಿದು ಘಟನೆ?
    ಮಂಡಿಯ ನೂತನ ಬಿಜೆಪಿ ಸಂಸದೆ ಕಂಗನಾ ರಣಾವತ್‌ಗೆ ಸಿಐಎಸ್ಎಫ್ ಮಹಿಳಾ ಸಿಬ್ಬಂದಿ ಕುಲ್ವಿಂದರ್ ಕೌರ್ ಚಂಡೀಗಢ ವಿಮಾನ ನಿಲ್ದಾಣದಲ್ಲಿ (Chandigarh Airport) ಕಪಾಳಮೋಕ್ಷ ಮಾಡಿದ ಘಟನೆ ನಡೆದಿತ್ತು. ರೈತರ ಆಂದೋಲನಕ್ಕೆ ಸಂಬಂಧಿಸಿದಂತೆ ಕಂಗನಾ ನೀಡಿದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಕಪಾಳಮೋಕ್ಷ ಮಾಡಿರುವುದಾಗಿ ಆಕೆ ಹೇಳಿಕೊಂಡಿದ್ದರು. ಇದನ್ನೂ ಓದಿ: ಇವಿಎಂ ಸತ್ತಿದ್ಯಾ ಅಥವಾ ಬದುಕಿದ್ಯಾ? – ವಿಪಕ್ಷ ನಾಯಕರನ್ನ ಲೇವಡಿ ಮಾಡಿದ ಮೋದಿ

    2020ರಲ್ಲಿ ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಬೃಹತ್‌ ಪ್ರತಿಭಟನೆಗೆ ಇಳಿದಿದ್ದರು. ಈ ವೇಳೆ ನಟಿ ಕಂಗನಾ, ರೈತರು 100 ರೂ.ಗೆ ಅಲ್ಲಿ ಕುಳಿತಿದ್ದಾರೆ ಎಂದು ತಮ್ಮ ಸೋಶಿಯಲ್‌ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದರು. ವ್ಯಾಪಕ ಟೀಕೆ ವ್ಯಕ್ತವಾದ ನಂತರ ಪೋಸ್ಟ್‌ ಅನ್ನು ಡಿಲೀಟ್‌ ಮಾಡಿದ್ದರು. ನಟಿ ಈ ಹೇಳಿಕೆ ನೀಡಿದಾಗ ತನ್ನ ತಾಯಿ ಅಲ್ಲೇ ಕುಳಿತು ಪ್ರತಿಭಟನೆ ನಡೆಸುತ್ತಿದ್ದರು. ಹಾಗಾಗಿ ನಟಿ ಹೇಳಿಕೆಯಿಂದ ನೋವುಂಟಾಗಿದ್ದು, ಕಪಾಳಮೋಕ್ಷ ಮಾಡಿದೆ ಎಂದು ಕೌರ್ ಆಕ್ರೋಶ ಹೊರಹಾಕಿದ್ದರು. ಇದಾದ ಬಳಿಕ ಕಂಗನಾ ಪೊಲೀಸರಿಗೆ ದೂರು ನೀಡಿ ಬಳಿಕ ವಿಮಾನದ ಮೂಲಕ ದೆಹಲಿಗೆ ಪ್ರಯಾಣ ಬೆಳೆಸಿದರು. ಇದನ್ನೂ ಓದಿ: ನಕಲಿ ಆಧಾರ್‌ ಕಾರ್ಡ್‌ ಬಳಸಿ ಸಂಸತ್‌ ಪ್ರವೇಶಿಸಲು ಯತ್ನಿಸಿದ ಮೂವರ ಬಂಧನ

    ಘಟನೆ ಬಳಿಕ ಕಂಗನಾ ಹೇಳಿದ್ದೇನು?
    ಘಟನೆ ಬಳಿಕ ವೀಡಿಯೋ ಸಂದೇಶ ಬಿಡುಗಡೆ ಮಾಡಿದ್ದ ಕಂಗನಾ, ನನಗೆ ಮಾಧ್ಯಮಗಳು ಮತ್ತು ನನ್ನ ಹಿತೈಷಿಗಳಿಂದ ಸಾಕಷ್ಟು ಫೋನ್ ಕರೆಗಳು ಬರುತ್ತಿವೆ. ಮೊದಲನೆಯದಾಗಿ ನಾನು ಸುರಕ್ಷಿತವಾಗಿದ್ದು, ಸಂಪೂರ್ಣವಾಗಿ ಚೆನ್ನಾಗಿದ್ದೇನೆ. ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸೆಕ್ಯೂರಿಟಿ ಚೆಕ್‌ ಮುಗಿಸಿ ಹೊರ ಬಂದ ತಕ್ಷಣ ಎರಡನೇ ಕ್ಯಾಬಿನ್‌ನಲ್ಲಿದ್ದ ಸಿಐಎಸ್‌ಎಫ್‌ನ ಭದ್ರತಾ ಸಿಬ್ಬಂದಿ ನನ್ನ ಕೆನ್ನೆಗೆ ಹೊಡೆದರು. ಈ ವೇಳೆ ಯಾಕೆ ಹೀಗೆ ಮಾಡಿದೆ ಎಂದು ಆಕೆಯನ್ನು ಪ್ರಶ್ನಿಸಿದಾಗ, ರೈತರ ಪ್ರತಿಭಟನೆಗೆ ನನ್ನ ಬೆಂಬಲವಿದೆ ಎಂದಳು. ಸದ್ಯ ನಾನು ಸುರಕ್ಷಿತವಾಗಿದ್ದೇನೆ ಆದರೆ ಪಂಜಾಬ್‌ನಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆ ಮತ್ತು ಉಗ್ರವಾದದ ಬಗ್ಗೆ ನನಗೆ ಕಾಳಜಿಯೂ ಇದೆ ಎಂದಿದ್ದರು.

  • ಅರೆಸ್ಟ್‌ ಬಳಿಕ SIT ಕಚೇರಿಗೆ ಪ್ರಜ್ವಲ್‌ ರೇವಣ್ಣ; ಏರ್‌ಪೋರ್ಟ್‌ನಲ್ಲಿ ಏನೆಲ್ಲಾ ಬೆಳವಣಿಗೆ ಆಯ್ತು? – ಮುಂದೇನು ಕ್ರಮ?

    ಅರೆಸ್ಟ್‌ ಬಳಿಕ SIT ಕಚೇರಿಗೆ ಪ್ರಜ್ವಲ್‌ ರೇವಣ್ಣ; ಏರ್‌ಪೋರ್ಟ್‌ನಲ್ಲಿ ಏನೆಲ್ಲಾ ಬೆಳವಣಿಗೆ ಆಯ್ತು? – ಮುಂದೇನು ಕ್ರಮ?

    – ಶುಕ್ರವಾರ ಬೆಳಗ್ಗಿನ ಜಾವ ಮೆಡಿಕಲ್‌ ಟೆಸ್ಟ್‌ ಸಾಧ್ಯತೆ

    ಬೆಂಗಳೂರು: 35 ದಿನಗಳ ಬಳಿಕ ಬೆಂಗಳೂರಿಗೆ ಬಂದಿಳಿದ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನ ಎಸ್‌ಐಟಿ ಅಧಿಕಾರಿಗಳು ಏರ್‌ಪೋರ್ಟ್‌ನಲ್ಲೇ ಬಂಧಿಸಿ, ಎಸ್‌ಐಟಿ ಕಚೇರಿಗೆ ಕರೆದೊಯ್ದಿದ್ದಾರೆ. ಪ್ರಜ್ವಲ್‌ ಅವರನ್ನು ಅರೆಸ್ಟ್‌ ಮಾಡಿದ ಬಳಿಕ ಏನೆಲ್ಲಾ ಬೆಳವಣಿಗೆ ಆಯ್ತು? ಮುಂದಿನ ಕ್ರಮಗಳೇನು ಎಂಬ ಪಿನ್‌ ಟು ಪಿನ್‌ ಡಿಟೇಲ್ಸ್‌ ಇಲ್ಲಿದೆ…

    * ಶುಕ್ರವಾರ ಮಧ್ಯರಾತ್ರಿ 12:35ರ ವೇಳೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಜ್ವಲ್‌ ರೇವಣ್ಣ ಅವರಿದ್ದ ಲುಫ್ತಾನ್ಸಾ ಏರ್‌ಲೈನ್ಸ್‌ನ (Lufthansa Airlines) DLH 764 A-359 ವಿಮಾನ ಲ್ಯಾಂಡಿಗ್‌ ಆಯಿತು. ಇದನ್ನೂ ಓದಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಧ್ಯರಾತ್ರಿ ಏರ್‌ಪೋರ್ಟ್‌ನಲ್ಲೇ ಅರೆಸ್ಟ್!

    * ವಿಮಾನ ಲ್ಯಾಂಡಿಂಗ್‌ ಪ್ರಕ್ರಿಯೆ ಪೂರ್ಣಗೊಳ್ಳುತ್ತಿದ್ದಂತೆ ಸಿಐಎಸ್‌ಎಫ್‌ ಸಿಬ್ಬಂದಿ ವಿಮಾನದ್ವಾರದಲ್ಲೇ ಸುತ್ತುವರಿದು ಪ್ರಜ್ವಲ್‌ ಅವರನ್ನ ವಶಕ್ಕೆ ಪಡೆಯಲು ಮುಂದಾದರು. ವಿಮಾನ ನಿಲ್ದಾಣದಲ್ಲಿ ಮಿಗ್ರೇಷನ್‌ ಅಧಿಕಾರಿಗಳು ಇಮಿಗ್ರೇಷನ್‌ ಪ್ರಕ್ರಿಯೆ (ಲಗೇಜ್‌ ಪರಿಶೀಲಿಸಿ, ಭಾರತಕ್ಕೆ ಮರಳಿರುವುದಾಗಿ ಸ್ಟ್ಯಾಂಪ್‌ ಹಾಕಿದ್ದಾರೆ) ಪೂರ್ಣಗೊಳಿಸುತ್ತಿದ್ದಂತೆ ಎಸ್‌ಐಟಿಗೆ ಹಸ್ತಾಂತರಿಸಿದ್ದಾರೆ.

    * ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಏರ್‌ಪೋರ್ಟ್‌ನಲ್ಲಿ ಎಸ್‌ಐಟಿ ಅಧಿಕಾರಿಗಳು ಬಂಧಿಸಿ ಕರೆದೊಯ್ದಿದ್ದಾರೆ. ಇದನ್ನೂ ಓದಿ: 35 ದಿನಗಳ ಬಳಿಕ ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ವಾಪಸ್!

    * ಮಾಧ್ಯಮದವರ ಕಣ್ತಪ್ಪಿಸಲು ಮಾರ್ಗ ಬದಲಿಸಿದ್ದ ಎಸ್‌ಐಟಿ ಅಧಿಕಾರಿಗಳು ಮಧ್ಯರಾತ್ರಿ 2 ಗಂಟೆ ವೇಳೆಗೆ ಎಸ್‌ಐಟಿ ಕಚೇರಿಗೆ ಕರೆತಂದಿದ್ದಾರೆ.

    * ಪ್ರಜ್ವಲ್‌ ರೇವಣ್ಣ ಅವರು ಮೇಲ್ನೋಟಕ್ಕೆ ಆರೋಗ್ಯವಾಗಿರುವಂತೆ ಕಂಡುಬಂದಿದ್ದಾರೆ. ಹಾಗಾಗಿ ಎಸ್‌ಐಟಿ ಕಚೇರಿಗೆ ಕರೆದೊಯ್ಯಲಾಗಿದೆ. ಶುಕ್ರವಾರ ಬೆಳಗ್ಗಿನ ಜಾವ ಅವರನ್ನ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗುತ್ತದೆ. ವೈದ್ಯಕೀಯ ಪರೀಕ್ಷೆ ನಂತರ ಕೋರ್ಟ್‌ಗೆ ಹಾಜರುಪಡಿಸಲಾಗುತ್ತದೆ ಎಸ್‌ಐಟಿ ಮೂಲಗಳು ತಿಳಿಸಿವೆ.

  • ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಧ್ಯರಾತ್ರಿ ಏರ್‌ಪೋರ್ಟ್‌ನಲ್ಲೇ ಅರೆಸ್ಟ್!

    ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಧ್ಯರಾತ್ರಿ ಏರ್‌ಪೋರ್ಟ್‌ನಲ್ಲೇ ಅರೆಸ್ಟ್!

    ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಪ್ರಕರಣ ನಡೆದ 35 ದಿನಗಳ ಬಳಿಕ ಬೆಂಗಳೂರಿನಲ್ಲಿ ಅರೆಸ್ಟ್ ಆಗಿದ್ದಾರೆ.

    ಏಪ್ರಿಲ್ 26ರಂದು ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಏಪ್ರಿಲ್ 27ರಂದು ಜರ್ಮನಿಗೆ ಹಾರಿದ್ದ ಪ್ರಜ್ವಲ್ ಜರ್ಮನಿಯ ಮ್ಯೂನಿಕ್‌ನಿಂದ ಬಂದ ಲುಫ್ತಾನ್ಸಾ ಏರ್‌ಲೈನ್ಸ್‌ನ (lufthansa airlines) DLH 764 A-359 ವಿಮಾನದಲ್ಲಿ ಬೆಂಗಳೂರಿಗೆ ವಾಪಸ್ ಆದರು. ಶುಕ್ರವಾರ ಮಧ್ಯರಾತ್ರಿ 12:35ರ ವೇಳೆಗೆ ವೇಳೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಯಿತು. ವಿಮಾನ ಲ್ಯಾಂಡಿಂಗ್‌ ಆಗುತ್ತಿದ್ದಂತೆ ವಿಮಾನ ಸುತ್ತುವರಿದ ಸಿಐಎಸ್‌ಎಫ್‌ ಸಿಬ್ಬಂದಿ, ಪ್ರಜ್ವಲ್‌ ಅವರನ್ನ ಬಂಧಿಸಿ ಕರೆದೊಯ್ದಿದ್ದಾರೆ. ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್‌ ಪ್ರಕ್ರಿಯೆ ಮುಕ್ತಾಯಗೊಂಡ ಬಳಿಕ ಅವರನ್ನ ಎಸ್‌ಐಟಿಗೆ ಹಸ್ತಾಂತರಿಸಲಿದ್ದಾರೆ.

    ಭಾರೀ ಭದ್ರತೆ:
    ಪ್ರಜ್ವಲ್ ಆಗಮನದ ವೇಳೆ ಹೆಚ್ಚು ಜನ ಸೇರುವ ಸಾಧ್ಯತೆಯಿದ್ದ ಕಾರಣ ಸಂಚಾರಕ್ಕೆ ತೊಂದರೆ ಆಗದಂತೆ ನೋಡಿಕೊಳ್ಳಲು ಮುನ್ನೆಚ್ಚರಿಕಾ ಕ್ರಮವಾಗಿ ಸಂಚಾರ ಪೊಲೀಸರು ಅಲರ್ಟ್ ಆಗಿದ್ದರು. ಪ್ರಜ್ವಲ್ ಬಂಧನ ಮಾಡಿ ಕರೆದುಕೊಂಡು ಹೋಗುವ ವೇಳೆಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಏರ್‌ಪೋರ್ಟ್ ರಸ್ತೆಯಲ್ಲಿ ವಾಹನಗಳನ್ನು ನಿಲುಗಡೆ ಮಾಡದಂತೆ ಸೂಚಿಸಲಾಗಿತ್ತು, ಜನಸಂದಣಿ ಸೇರದಂತೆ ಎಚ್ಚರಿಕೆ ವಹಿಸಲಾಗಿತ್ತು. ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಟ್ರಾಫಿಕ್ ಪೊಲೀಸರು ಹಾಗೂ ಕಾನೂನು ಸುವ್ಯವಸ್ಥೆ ಪೊಲೀಸರು ಭೇಟಿ ನೀಡಿದ್ದು, ಪ್ರಜ್ವಲ್ ಕರೆದೊಯ್ಯುವ ಮಾರ್ಗವನ್ನು ಪರಿಶೀಲನೆ ನಡೆಸಿದ್ದರು.

    ಮ್ಯೂನಿಕ್ ವಿಮಾನ ನಿಲ್ದಾಣದ ವಲಸೆ ವಿಭಾಗ ಬೆಂಗಳೂರು ವಿಮಾನ ನಿಲ್ದಾಣದ ವಲಸೆ ವಿಭಾಗಕ್ಕೆ ಮೊದಲೇ ಪ್ರಯಾಣಿಕರ ಪಟ್ಟಿ ಕಳುಹಿಸಿತ್ತು. ಈ ಪಟ್ಟಿಯಲ್ಲಿ ಪ್ರಜ್ವಲ್ ರೇವಣ್ಣ ಹೆಸರು ಇರುವುದನ್ನು ಎಸ್‌ಐಟಿ ಖಚಿತ ಪಡಿಸಿತ್ತು. ಲುಫ್ತನ್ಸಾ ವಿಮಾನದಲ್ಲಿ 3 ಲಕ್ಷ ರೂ. ಖರ್ಚು ಮಾಡಿ ಬಿಸಿನೆಸ್ ದರ್ಜೆಯ ಟಿಕೆಟ್ ಖರೀದಿಸಿ ಪ್ರಜ್ವಲ್ ಮ್ಯೂನಿಕ್‌ನಿಂದ ಹೊರಟಿದ್ದರು. ಒಟ್ಟು 23 ಬಿಸಿನೆಸ್ ದರ್ಜೆಯ ಟಿಕೆಟ್ ಪೈಕಿ 8 ಮಂದಿ ಮಾತ್ರ ಪ್ರಜ್ವಲ್ ಅವರಿದ್ದ ವಿಮಾನದಲ್ಲಿ ಪ್ರಯಾಣ ಮಾಡಿದ್ದರು. ಪ್ರಜ್ವಲ್ ರೇವಣ್ಣ ಒಬ್ಬಂಟಿಯಾಗಿ ವಿಂಡೋ ಸೀಟ್‌ನಲ್ಲಿ ಕುಳಿತಿದ್ದರು.

    ಪ್ರಕರಣ ಬೆಳಕಿಗೆ ಬಂದಿದ್ದು ಯಾವಾಗ?
    ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಅಶ್ಲೀಲ ವೀಡಿಯೋಗಳನ್ನೊಳಗೊಂಡ ಏಪ್ರಿಲ್‌ 23ರಂದು ಬೆಳಕಿಗೆ ಬಂದಿತ್ತು. ಈ ಬಗ್ಗೆ ದೂರುಗಳು ಕೇಳಿಬರುತ್ತಿದ್ದಂತೆ ಎಸ್‌ಐಟಿ ರಚನೆಗೆ ರಾಜ್ಯ ಸರ್ಕಾರ ಮುಂದಾಗಿತ್ತು. ಅಶ್ಲೀಲ ವೀಡಿಯೋ ಪ್ರಕರಣ ಹೊರಬರುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿ ತಲೆಮರೆಸಿಕೊಂಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಪೆನ್‌ಡ್ರೈವ್ ಪ್ರಕರಣ ಸಂಬಧ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿತ್ತು. ಈ ಬೆಳವಣಿಗೆಯ ನಂತರ, ಮೇ 1 ರಂದು ಪ್ರಜ್ವಲ್ ವಿಚಾರಣೆಗೆ ಹಾಜರಾಗಲು 7 ದಿನಗಳ ಕಾಲಾವಕಾಶ ಕೇಳಿದ್ದರು. ಬಳಿಕ ಯಾರೊಟ್ಟಿಗೂ ಸಂಪರ್ಕದಲ್ಲಿಲ್ಲದೇ ನಾಪತ್ತೆಯಾಗಿದ್ದ ಪ್ರಜ್ವಲ್ ಇದೇ ಮೇ 27ರಂದು ಅಜ್ಞಾತ ಸ್ಥಳದಿಂದ ವೀಡಿಯೋವೊಂದನ್ನ ಬಿಡುಗಡೆ ಮಾಡಿದ್ದರು.

    ವೀಡಿಯೋದಲ್ಲಿ ಪ್ರಜ್ವಲ್ ಹೇಳಿದ್ದೇನು?
    ವಿದೇಶಕ್ಕೆ ಹೋಗುವ ಬಗ್ಗೆ ಮೊದಲೇ ಪ್ಲಾನ್ ಆಗಿತ್ತು. ವಿದೇಶಕ್ಕೆ ಹೋಗುವಾಗ ನನ್ನ ಮೇಲೆ ಯಾವುದೇ ಆರೋಪ ಇರಲಿಲ್ಲ. ನಾನು ವಿದೇಶದಲ್ಲಿದ್ದಾಗ ಯೂಟ್ಯೂಬ್ ನ್ಯೂಸ್ ನೋಡಿ ನನ್ನ ಮೇಲೆ ಗಂಭೀರ ಆರೋಪ ಬಂದಿರುವುದು ಕಂಡುಬAದಿದೆ. ಇದಾದ ನಂತರ ನನ್ನ ಹೆಸರನ್ನು ರಾಜಕೀಯವಾಗಿ ಬಳಸಿಕೊಂಡಿದ್ದಾರೆ. ಎಸ್‌ಐಟಿ ನೋಟಿಸ್ ನೀಡಿದ ವಿಚಾರ ಗೊತ್ತಾಯಿತು. ನಾನು ರಾಜಕೀಯವಾಗಿ ಬೆಳೆಯಬಾರದು ಎಂಬ ಕಾರಣಕ್ಕೆ ನನ್ನ ಮೇಲೆ ಪಿತೂರಿ ಮಾಡಿದ್ದಾರೆ ಎಂದು ಆರೋಪಿಸಿದ್ದರು.

  • ಲೋಕಸಭೆಯಲ್ಲಿ ಸ್ಮೋಕ್ ಬಾಂಬ್ ಸ್ಫೋಟ ಪ್ರಕರಣ – ಸಂಸತ್ ಭವನಕ್ಕೆ CISFನಿಂದ ಭದ್ರತೆ?

    ಲೋಕಸಭೆಯಲ್ಲಿ ಸ್ಮೋಕ್ ಬಾಂಬ್ ಸ್ಫೋಟ ಪ್ರಕರಣ – ಸಂಸತ್ ಭವನಕ್ಕೆ CISFನಿಂದ ಭದ್ರತೆ?

    ನವದೆಹಲಿ: ಸಂಸತ್ ಭವನದಲ್ಲಿ ಭದ್ರತಾ ನಿಯಮಗಳ ಉಲ್ಲಂಘನೆ (Parliament Security Breach) ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸರ್ಕಾರ ಸಂಸತ್ತಿನ ಕಟ್ಟಡ ಸಂಕೀರ್ಣದ ಸಮಗ್ರ ಭದ್ರತೆಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆಗೆ (CISF) ಹಸ್ತಾಂತರಿಸಲು ನಿರ್ಧರಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

    CISF ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ (CAPF) ಆಗಿದ್ದು, ಇದು ಪ್ರಸ್ತುತ ದೆಹಲಿಯಲ್ಲಿನ ಅನೇಕ ಕೇಂದ್ರ ಸರ್ಕಾರದ ಸಚಿವಾಲಯದ ಕಟ್ಟಡಗಳಾದ ಪರಮಾಣು ಮತ್ತು ಏರೋಸ್ಪೇಸ್ ಡೊಮೇನ್, ಸಿವಿಲ್ ಏರ್‌ಪೋರ್ಟ್‌ಗಳು (Civil Airports) ಮತ್ತು ದೆಹಲಿ ಮೆಟ್ರೋ ನಿಲ್ದಾಣಗಳಿಗೆ (Metro Stations) ಭದ್ರತೆ ನೀಡುತ್ತಿದೆ. ಇದನ್ನೂ ಓದಿ: ಅಜಿತ್ ಪವಾರ್, ಶಿಂಧೆಯ ಪೈಕಿ ಯಾರು ಮೊದಲು ಬರುತ್ತಾರೋ ಕಾದುನೋಡಿ – ಕರ್ನಾಟಕ ಕಾಂಗ್ರೆಸ್‌ ಬಗ್ಗೆ ಹೆಚ್‌ಡಿಕೆ ಬಾಂಬ್‌

    ಕೇಂದ್ರ ಗೃಹಸಚಿವಾಲಯವು ಸಂಸತ್ತಿನ ಕಟ್ಟಡ ಸಂಕೀರ್ಣದ ಸಮೀಕ್ಷೆಗೆ ಬುಧವಾರ ನಿರ್ದೇಶನ ನೀಡಿದ್ದು, ಸಂಸತ್‌ನಲ್ಲಿ ಸಿಐಎಸ್‌ಎಫ್ ಭದ್ರತೆ ಮತ್ತು ಅಗ್ನಿಶಾಮಕ ವಿಭಾಗವನ್ನು ಸಮಗ್ರ ಮಾದರಿಯಲ್ಲಿ ನಿಯೋಜನೆ ಮಾಡಬಹುದಾಗಿದೆ ಎಂದು ಮೂಲಗಳು ತಿಳಿಸಿವೆ. ಸಿಐಎಸ್‌ಎಫ್‌ನ ತಜ್ಞರು, ಸಂಸತ್ತಿನ ಭದ್ರತಾ ತಂಡದ ಅಧಿಕಾರಿಗಳೊಂದಿಗೆ ಈ ವಾರದ ಕೊನೆಯಲ್ಲಿ ಸಂಸತ್‌‌ನ ಸಮೀಕ್ಷೆ ಕೈಗೊಳ್ಳಲಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕೆ ಬರಗಾಲ ಪರಿಹಾರ ಬಿಡುಗಡೆ ವಿಚಾರವಾಗಿ ಡಿ.23ಕ್ಕೆ ಕೇಂದ್ರದ ಸಭೆ: ಕೃಷ್ಣಬೈರೇಗೌಡ

    ಹೊಸ ಮತ್ತು ಹಳೆಯ ಸಂಸತ್ತಿನ ಸಂಕೀರ್ಣ ಮತ್ತು ಅದರ ಮಿತ್ರ ಕಟ್ಟಡಗಳನ್ನು ಸಿಐಎಸ್‌ಎಫ್‌ನ ಸಮಗ್ರ ಭದ್ರತೆಯ ಅಡಿಯಲ್ಲಿ ತರಲಾಗುವುದು, ಸಂಸತ್ತಿನ ಭದ್ರತಾ ಸೇವೆ (ಪಿಎಸ್‌ಎಸ್), ದೆಹಲಿ ಪೊಲೀಸ್ ಮತ್ತು ಪಾರ್ಲಿಮೆಂಟ್ ಡ್ಯೂಟಿ ಗ್ರೂಪ್ (PDG) ಭದ್ರತೆಯಲ್ಲಿ ಮುಂದುವರಿಯಲಿದೆ. ಡಿಸೆಂಬರ್ 13 ರಂದು ಲೋಕಸಭೆಯಲ್ಲಿ ಮೈಸೂರು ಮೂಲದ ಮನೋರಂಜರ್ ಮತ್ತು ಸಾಗರ್ ಶರ್ಮಾ ಹೆಸರಿನ ಇಬ್ಬರು ಯುವಕರು ಭದ್ರತಾ ನಿಯಮ ಉಲ್ಲಂಘಿಸಿ ಸ್ಮೋಕ್‌ ಬಾಂಬ್ ಸ್ಫೋಟಿಸಿದ್ದರು. ಇದನ್ನೂ ಓದಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ; ಬೆಂಗಳೂರು, ನೀರಾವರಿ ಯೋಜನೆಗಳಿಗೆ ಅನುಮತಿ & ಹಣಕಾಸು ನೆರವು ಕೋರಿದ ಡಿಸಿಎಂ

  • 60 ಬಾರಿ ಚಿನ್ನ ಕಳ್ಳಸಾಗಾಣಿಕೆಗೆ ಸಹಾಯ – ಏರ್‌ಪೋರ್ಟ್ ಅಧಿಕಾರಿ ವಿರುದ್ಧ ಎಫ್‍ಐಆರ್

    60 ಬಾರಿ ಚಿನ್ನ ಕಳ್ಳಸಾಗಾಣಿಕೆಗೆ ಸಹಾಯ – ಏರ್‌ಪೋರ್ಟ್ ಅಧಿಕಾರಿ ವಿರುದ್ಧ ಎಫ್‍ಐಆರ್

    ತಿರುವನಂತಪುರಂ: ವಿಮಾನನಿಲ್ದಾಣದಲ್ಲಿ (Airport) 60ಕ್ಕೂ ಹೆಚ್ಚು ಬಾರಿ ಚಿನ್ನ ಕಳ್ಳಸಾಗಾಣೆದಾರರಿಗೆ ಸಹಾಯ ಮಾಡಲು ಲಂಚ (Bribe) ಪಡೆದ ಆರೋಪದ ಮೇಲೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.

    ಆರೋಪಿಯನ್ನು ಸಿಐಎಸ್‍ಎಫ್ ಸಹಾಯಕ ಕಮಾಂಡೆಂಟ್ ನವೀನ್ ಕುಮಾರ್ ಎಂದು ತಿಳಿದು ಬಂದಿದೆ. ಕ್ಯಾಲಿಕಟ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನವನ್ನು ಕಳ್ಳಸಾಗಾಣಿಕೆ ಮಾಡುತ್ತಿದ್ದವರಿಗೆ ಸಹಾಯ ಮಾಡಲು ಯತ್ನಿಸಿದಾಗ ಆರೋಪಿ ಸಿಕ್ಕಿಬಿದ್ದಿದ್ದಾನೆ. ಮಲಪ್ಪುರಂ ಪೊಲೀಸರು ಆತನ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಥೀಂ ಪಾರ್ಕ್‌ನಲ್ಲಿ ತಲೆ ಎತ್ತಿದ್ದ ಪರಶುರಾಮನ ಪ್ರತಿಮೆ ರಾತ್ರೋರಾತ್ರಿ ಮಾಯ!

    ಆರೋಪಿ ಕಸ್ಟಮ್ಸ್ ಅಧಿಕಾರಿ ಮತ್ತು ಲಗೇಜ್ ನಿರ್ವಹಿಸುವ ಹೊರಗುತ್ತಿಗೆ ಉದ್ಯೋಗಿ ಶರಫಲಿ ಎಂಬವನ ಸಹಾಯದಿಂದ ಸುಮಾರು 60 ಬಾರಿ ಚಿನ್ನವನ್ನು ಕಳ್ಳಸಾಗಣೆ ಮಾಡಲು ಸಹಾಯ ಮಾಡಿದ್ದಾನೆ. ಪ್ರತಿ ಬಾರಿ 60,000 ರೂ.ಗಳನ್ನು ಲಂಚವಾಗಿ ಪಡೆದಿದ್ದಾನೆ. ಅಲ್ಲದೇ ಆರೋಪಿ ಈ ವಿಚಾರವಾಗಿ ಸಾಗಾಣಿಕೆದಾರರೊಂದಿಗೆ ಸಂಪರ್ಕಿಸಲು ಮೂರು ಸಿಮ್‍ಗಳನ್ನು ಬಳಸುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಪ್ರಕರಣ ದಾಖಲಾದ ನಂತರ ಸಿಐಎಸ್‍ಎಫ್ ಮಹಾನಿರ್ದೇಶಕರು ಆರೋಪಿ ಅಧಿಕಾರಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದ್ದಾರೆ. ಅಕ್ಟೋಬರ್ 5ರಂದು ಚಿನ್ನ ಕಳ್ಳಸಾಗಾಣೆ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿದ್ದರು. ತನಿಖೆ ವೇಳೆ ಅಧಿಕಾರಿಯ ಪಾತ್ರ ಬಯಲಾಗಿದೆ. ಇದನ್ನೂ ಓದಿ: ಮಣಿಪುರ ವಿದ್ಯಾರ್ಥಿಗಳ ಹತ್ಯೆ ಪ್ರಕರಣ – ಆರೋಪಿ ಪುಣೆಯಲ್ಲಿ ಅರೆಸ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Delhi Metro: ಮೆಟ್ರೋ ರೈಲಿನಲ್ಲಿ ಲಿಪ್‌ ಲಾಕ್‌ ಮಾಡಿದ ಪ್ರೇಮಿಗಳು – ವೀಡಿಯೋ ವೈರಲ್‌

    Delhi Metro: ಮೆಟ್ರೋ ರೈಲಿನಲ್ಲಿ ಲಿಪ್‌ ಲಾಕ್‌ ಮಾಡಿದ ಪ್ರೇಮಿಗಳು – ವೀಡಿಯೋ ವೈರಲ್‌

    ನವದೆಹಲಿ: ಇತ್ತೀಚೆಗಷ್ಟೇ ಯುವತಿಯೊಬ್ಬಳು ದೆಹಲಿ ಮೆಟ್ರೋದಲ್ಲಿ (Delhi Metro Girl) ಬಿಕಿನಿ ಧರಿಸಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಪ್ರೇಮಿಗಳಿಬ್ಬರು ಮೆಟ್ರೋ ಕೋಚ್‌ನ ನೆಲದ ಮೇಲೆ ಕುಳಿತು ಲಿಪ್‌ ಲಾಕ್‌ ಮಾಡುತ್ತಿರುವ ವೀಡಿಯೋ ಜಾಲತಾಣದಲ್ಲಿ (Social Media) ಸದ್ದು ಮಾಡುತ್ತಿದೆ.

    ಮೆಟ್ರೋ ಕೋಚ್‌ನ (Metro Coach) ನೆಲದ ಮೇಲೆ ಕುಳಿತು ಪ್ರೇಮಿಗಳಿಬ್ಬರು (Lovers) ಲಿಪ್‌ ಲಾಕ್‌ ಮಾಡುತ್ತಿದ್ದ ದೃಶ್ಯ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ವೀಡಿಯೋದಲ್ಲಿ ಯುವತಿ ವ್ಯಕ್ತಿಯೊಬ್ಬನ ಮಡಿಲಲ್ಲಿ ಕುಳಿತು ಪರಸ್ಪರ ತುಟಿಗೆ ಚುಂಬಿಸುತ್ತಿರುವುದು ಕಂಡುಬಂದಿದ್ದು, ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: Delhi Metro Girl: ನಾನೂ ಸಂಪ್ರದಾಯಸ್ಥ ಹುಡ್ಗಿ, ಏನ್ ಬೇಕಾದ್ರೂ ಧರಿಸ್ತೀನಿ ಎಂದ ಬಿಕಿನಿ ಗರ್ಲ್

    ಸಾಂದರ್ಭಿಕ ಚಿತ್ರ

    ಮೂಲಗಳ ಪ್ರಕಾರ, ಕೆಲ ದಿನಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜೊತೆಗೆ ಯುವತಿ ಹಾಗೂ ವೀಡಿಯೋದಲ್ಲಿನ ಯುವಕ ಗಂಡ-ಹೆಂಡತಿ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಮೆಟ್ರೋದಲ್ಲಿ ಬಿಕಿನಿ ಗರ್ಲ್; ಉರ್ಫಿ ಜಾವೇದ್ ತಂಗಿ ಎಂದ ನೆಟ್ಟಿಗರು

    ಈ ಕುರಿತು ಹೇಳಿಕೆ ನೀಡಿರುವ ಡಿಎಂಆರ್‌ಸಿ, ದೆಹಲಿ ಮೆಟ್ರೋ ಬಳಸುವಾಗ ಪ್ರಯಾಣಿಕರು ಜವಾಬ್ದಾರಿಯುತವಾಗಿ ವರ್ತಿಸಬೇಕು. ಇಂತಹ ಅಶ್ಲೀಲ ಚಟುವಟಿಕೆಗಳಿಂದ ಅದು ಪ್ರಯಾಣಿಕರನ್ನ ಕೆರಳಿಸಹುದು. ಡಿಎಂಆರ್‌ಸಿ ಕಾರ್ಯಾಚರಣೆ ಮತ್ತು ನಿರ್ವಹಣೆ ಕಾಯ್ದೆಯ ಸೆಕ್ಷನ್‌ 59ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

    ಕೆಲ ದಿನಗಳ ಹಿಂದೆಯಷ್ಟೇ ಯುವತಿಯೊಬ್ಬಳು ದೆಹಲಿ ಮೆಟ್ರೋದಲ್ಲಿ ಬಿಕಿನಿ ಧರಿಸಿ ಓಡಾಡಿದ್ದಳು. ಇದರಿಂದ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಡಿಎಂಆರ್‌ಸಿ ಸಹ ಕಟ್ಟುನಿಟ್ಟಿನ ಕ್ರಮ ಕೈಗೊಂಡಿತ್ತು.