Tag: city corporation election

  • ಪಾಲಿಕೆ ಚುನಾವಣಾ ಫಲಿತಾಂಶ- ಮತದಾರರಿಗೆ, ಪಕ್ಷದ ಹಿರಿಯ ನಾಯಕರಿಗೆ ಸಿಎಂ ಧನ್ಯವಾದ

    ಪಾಲಿಕೆ ಚುನಾವಣಾ ಫಲಿತಾಂಶ- ಮತದಾರರಿಗೆ, ಪಕ್ಷದ ಹಿರಿಯ ನಾಯಕರಿಗೆ ಸಿಎಂ ಧನ್ಯವಾದ

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಆಶೀರ್ವಾದಿಂದ ಮಾಹನಗರ ಪಾಲಿಕೆ ಚುನಾವಣೆಯಲ್ಲಿ ಗೆದ್ದಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

    ಚುನಾವಣಾ ಫಲಿತಾಂಶ ಹೊರಬರುತ್ತಿದ್ದಂತೆಯೇ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ- ಧಾರವಾಡದಲ್ಲಿ ಬಿಜೆಪಿಗೆ ಗೆಲುವು ಸಿಕ್ಕಿದೆ. ಬೆಳಗಾವಿ ಹಾಗೂ ಹುಬ್ಬಳ್ಳಿ-ಧಾರವಾಡದಲ್ಲಿ ಬಿಜೆಪಿ ಸ್ಪಷ್ಟವಾದ ಬಹುಮತ ಪಡೆದುಕೊಳ್ಳುವಂತಹ ಎಲ್ಲಾ ಸಾಧ್ಯತೆಗಳಿವೆ. ಕಲಬುರಗಿಯಲ್ಲಿ ಕೂಡ ನಂಬರ್ ಒನ್ ಪಾರ್ಟಿ ಆಗುವ ಲಕ್ಷಣಗಳು ಕಾಣಿಸುತ್ತಿವೆ ಎಂದರು.

    ಎಲ್ಲಾ ಮಹಾನಗರ ಪಾಲಿಕೆಯ ಅಧ್ಯಕ್ಷರುಗಳಿಗೆ, ಹಿರಿಯ ನಾಯಕರು, ಶಾಸಕರು, ಮಂತ್ರಿಗಳು, ಕಾರ್ಯಕರ್ತರಿಗೆ ಹಾಗೂ ಸಂಪೂರ್ಣವಾಗಿ ಪ್ರಚಾರ ಮಾಡಿರುವಂತಹ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರವಿಕುಮಾರ್, ಅರುಣ್ ಕುಮಾರ್ ಅವರಿಗೆ ಧನ್ಯವಾದ ಸಮರ್ಪಿಸುವುದಾಗಿ ಸಿಎಂ ಹೇಳಿದರು.

    ಮತದಾರರು ನಮ್ಮ ಮೇಲೆ ಮತ್ತೊಮ್ಮೆ ವಿಶ್ವಾಸ ಇಟ್ಟುಕೊಂಡಿದ್ದಾರೆ. ಕಳೆದ ಬಾರಿ ಬೆಳಗಾವಿಯಲ್ಲಿ ಬಹಳ ಕಡಿಮೆ ಸೀಟು ಇತ್ತು. ಆದರೆ ಈ ಬಾರಿ ಅದ್ಭುತ ಪ್ರದರ್ಶನ ಆಗಿದೆ. ಬಹಳಷ್ಟು ವಿಶ್ಲೇಷಣೆಗಳು ಕೇಳಿಬಂದಿದ್ದವು. ಆದರೆ ಅವೆಲ್ಲವನ್ನೂ ಮತದಾರರು ಹುಸಿಗೊಳಿಸಿದ್ದಾರೆ. ಬೆಳಗಾವಿ ಯಾವತ್ತಿಗೂ ಬಿಜೆಪಿ ಜೊತೆಗಿರುತ್ತದೆ ಅನ್ನೋದನ್ನು ಅಲ್ಲಿನ ಮತದಾರರು ಬಹಳ ಸ್ಪಷ್ಟವಾಗಿ ತೋರಿಸಿದ್ದಾರೆ. ಹಾಗೆಯೇ ಹುಬ್ಬಳ್ಳಿ-ಧಾರವಾಡ ಕೂಡ ಬಿಜೆಪಿ ಕೋಟೆಯಾಗಿದ್ದು, ಅದನ್ನು ಸುಭದ್ರವಾಗಿ ಇಟ್ಟುಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ ಎಂದರು.

    ಕಲಬುರಗಿಯಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಈಗಾಗಲೇ ಆಯ್ಕೆಯಾಗಿದ್ದೇವೆ. ಬಾಕಿಯಾಗಿರುವ ಇನ್ನಷ್ಟು ವಾರ್ಡ್ ಗಳಲ್ಲಿ ಅಲ್ಲಿ ಕೂಡ ಆಯ್ಕೆಯಾಗುವ ನಿರೀಕ್ಷೆ ಇದೆ. ಒಟ್ಟಾರೆಯಾಗಿ ಸರ್ಕಾರ ಬಂದು 1 ತಿಂಗಳಲ್ಲಿ ನಡೆದ ಈ ಚುನಾವಣೆಯಲ್ಲಿ ಪ್ರಥಮ ಸೂಚನೆಯನ್ನು ನೀಡಿದ್ದು, ಜನ ಮನ್ನಣೆ ನೀಡುವ ಮೂಲಕ ಸರ್ಕಾರಕ್ಕೆ ಬೆಂಬಲ ಕೊಟ್ಟಿದ್ದಾರೆ. ಇದು ಮುಂದಿನ ದಿನಗಳಿಗೆ ದಿಕ್ಸೂಚಿ ಆಗಿದ್ದು, ಯಡಿಯೂರಪ್ಪ ಅವರ ಆಶೀರ್ವಾದ ಹಾಗೂ ಅಮಿತ್ ಶಾ ಹಾಗೂ ಮೋದಿಯವರ ಹೆಸರು ಪ್ರೇರಣೆಯಿಂದ ಇಂದು ಗೆಲುವು ಸಾಧಿಸಿದ್ದೇವೆ ಎಂದು ತಿಳಿಸಿದರು. ಇದೇ ವೇಳೆ ಎಲ್ಲಾ ಮತದಾರರಿಗೆ ಅಭಿನಂದನೆಗಳನ್ನು ಸಿಎಂ ಸಲ್ಲಿಸಿದರು.

  • ಹುಬ್ಬಳ್ಳಿ-ಧಾರವಾಡದಲ್ಲಿ ಚುಕ್ಕಾಣಿ ಹಿಡಿಯೋರು ಯಾರು?- ಹ್ಯಾಟ್ರಿಕ್ ಗೆಲುವು ಸಾಧಿಸುತ್ತಾ ಬಿಜೆಪಿ?

    ಹುಬ್ಬಳ್ಳಿ-ಧಾರವಾಡದಲ್ಲಿ ಚುಕ್ಕಾಣಿ ಹಿಡಿಯೋರು ಯಾರು?- ಹ್ಯಾಟ್ರಿಕ್ ಗೆಲುವು ಸಾಧಿಸುತ್ತಾ ಬಿಜೆಪಿ?

    ಹುಬ್ಬಳ್ಳಿ/ಧಾರವಾಡ: ಬಸವರಾಜ ಬೊಮ್ಮಾಯಿ ಸಿಎಂ ಆದ ಬಳಿಕ ತವರಿನಲ್ಲಿ ನಡೀತಿರೋ ಮೊದಲ ಚುನಾವಣೆ ಇದಾಗಿರೋದ್ರಿಂದ ಅವಳಿ ನಗರ ಪಾಲಿಕೆಯಲ್ಲಿ ಕಮಲ ಅರಳಿಸೋ ಉಮೇದಿನಲ್ಲಿದೆ. ಈ ಬಾರಿ ಒಟ್ಟು 82 ವಾರ್ಡ್‍ಗಳಿಗೆ ಚುನಾವಣೆ ನಡೆದಿದೆ.

    ಪಾಲಿಕೆಯಲ್ಲಿ ಈ ಬಾರಿ ಒಟ್ಟು 420 ಅಭ್ಯರ್ಥಿಗಳಿದ್ದು, ಅಧಿಕಾರದ ಗದ್ದುಗೆ ಏರಲು 42 ಸ್ಥಾನಗಳ ಅಗತ್ಯವಿದೆ. ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಹಿಡಿದಿತ್ತು. ಕಳೆದ ಮೂರು ಅವಧಿಗಳಲ್ಲಿಯೂ ಬಿಜೆಪಿ ಪ್ರಾಬಲ್ಯ ಮೆರೆದಿತ್ತು. ಹೀಗಾಗಿ ಸಿಎಂ ತವರಿನಲ್ಲಿ ಮತ್ತೊಮ್ಮೆ ಕಮಲ ಅರಳೋದು ನಿಶ್ಚಿತ ಎಂದು ಬಿಜೆಪಿ ಲೆಕ್ಕಾಚಾರ ಹಾಕುತ್ತಿದೆ. ಆದರೆ ಈ ಬಾರಿ ಬಿಜೆಪಿಗೆ ಕಾಂಗ್ರೆಸ್ ತೀವ್ರ ಪೈಪೋಟಿ ನೀಡಿದೆ. ಇದನ್ನೂ ಓದಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ

    2013 ರಲ್ಲಿ ನಡೆದ ಪಾಲಿಕೆ ಚುನಾವಣೆಯಲ್ಲಿ 67 ವಾರ್ಡ್‍ಗಳಿಗೆ ಮತದಾನ ನಡೆದಿತ್ತು. ಸಹಜವಾಗಿ ಬಿಜೆಪಿ, ಪಕ್ಷೇತರ ಹಾಗೂ ಕೆಜೆಪಿ ಅಭ್ಯರ್ಥಿಗೆ ತನ್ನ ತೆಕ್ಕೆಗೆ ತೆಗೆದುಕೊಂಡು ಅಧಿಕಾರ ಸ್ವೀಕಾರ ಮಾಡಿತ್ತು. ಜೆಡಿಎಸ್ ಹಾಗೂ ಕಾಂಗ್ರೆಸ್ ಸೇರಿಯೂ 34 ಆಗುತ್ತಿರಲಿಲ್ಲ. ಹೀಗಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಅಧಿಕಾರ ಮಾಡೋಕೆ ಪ್ರಯತ್ನ ಸಹ ಮಾಡಿರಲಿಲ್ಲ. ಈ ಬಾರಿ ವಾರ್ಡ್‍ಗಳ ಸಂಖ್ಯೆ 82 ಆಗಿವೆ.  ಇದನ್ನೂ ಓದಿ: ಕಲಬುರಗಿಯಲ್ಲಿ ಭದ್ರಕೋಟೆ ಉಳಿಸಿಕೊಳ್ಳುತ್ತಾ ಕಾಂಗ್ರೆಸ್?

    ಈ ಬಾರಿ ಯಾರಿಗೆ ಹುಬ್ಬಳ್ಳಿ-ಧಾರವಾಡ ಗದ್ದುಗೆ..?
    * ಒಟ್ಟು ವಾರ್ಡ್ – 82
    * ಮ್ಯಾಜಿಕ್ ನಂ – 42
    * ಅಭ್ಯರ್ಥಿಗಳು – 420
    * ಮತದಾನ – ಶೇ.55
    (ಬಿಜೆಪಿ 82, ಕಾಂಗ್ರೆಸ್ 82, ಜೆಡಿಎಸ್ 49, ಇತರೆ 207)