Tag: Civil Court

  • 100 ಕೋಟಿ ರೂ. ಮೌಲ್ಯದ ಒತ್ತುವರಿ ತೆರವು ಮಾಡಿದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ!

    100 ಕೋಟಿ ರೂ. ಮೌಲ್ಯದ ಒತ್ತುವರಿ ತೆರವು ಮಾಡಿದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ!

    ಮೈಸೂರು: ನಗರಾಭಿವೃದ್ಧಿ ಪ್ರಾಧಿಕಾರವು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ 100 ಕೋಟಿ ರೂ. ಮೌಲ್ಯದ 5.14 ಎಕರೆ ಒತ್ತುವರಿ ತೆರವು ಮಾಡಿದೆ.

    ಮೈಸೂರು ತಾಲೂಕು ಬಸವನಹಳ್ಳಿ ಗ್ರಾಮದಲ್ಲಿ ಸರ್ವೇ ನಂ.118ರಲ್ಲಿ ಒತ್ತುವರಿ ತೆರವು ಮಾಡಲಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವೂ ಈ ಗ್ರಾಮದ ಮಹದೇವಯ್ಯ ಅವರಿಗೆ ಸೇರಿದ ಜಮೀನು ಸ್ವಾಧೀನ ಮಾಡಿಕೊಂಡು ಪರಿಹಾರ ನೀಡಿತ್ತು. ಆದರೆ ಭೂಮಿ ಮಾಲೀಕರು ಭೂಮಿ ನೀಡದೆ ಸಿವಿಲ್ ನ್ಯಾಯಾಲಯದ ಮೊರೆ ಹೋಗಿದ್ದರು. ಇದನ್ನೂ ಓದಿ:  ಮಹಿಳೆಯರಿಗೆ ವೀಡಿಯೋ ಕಾಲ್ ಮಾಡಿ ಅಸಭ್ಯ ವರ್ತನೆ – CPI ಅಮಾನತು

    ಈ ಪರಿಣಾಮ ಮೈಸೂರು ಸಿವಿಲ್ ನ್ಯಾಯಾಲಯ ನಗರಾಭಿವೃದ್ಧಿ ಪ್ರಾಧಿಕಾರದ ಪರವೇ ಆದೇಶ ನೀಡಿತ್ತು. ಹೀಗಾಗಿ ಈ ಜಾಗದಲ್ಲಿ ನಿರ್ಮಾಣವಾಗಿದ್ದ ಶೆಡ್ ತೆರವುಗೊಳಿಸಿ ಮೂಡಾ ನಾಮಫಲಕ ಹಾಕಲಾಯಿತು. ಪ್ರಾಧಿಕಾರದ ಆಯುಕ್ತ ಡಾ.ಡಿ.ಬಿ.ನಟೇಶ್ ಅವರ ನೇತೃತ್ವದಲ್ಲಿ ಪೊಲೀಸ್ ಬಿಗಿ ಬಂದೊಬಸ್ತ್ ನಲ್ಲಿ ತೆರವು ಕಾರ್ಯಾಚರಣೆ ನಡೆಸಲಾಯಿತು.

  • ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯದ ಸಿಬ್ಬಂದಿ ಅನುಮಾನಾಸ್ಪದ ಸಾವು

    ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯದ ಸಿಬ್ಬಂದಿ ಅನುಮಾನಾಸ್ಪದ ಸಾವು

    ಚಿಕ್ಕಬಳ್ಳಾಪುರ: ಜಿಲ್ಲಾ ಸಿವಿಲ್ ನ್ಯಾಯಾಲಯದ ಅಟೆಂಡರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

    ಚಿಕ್ಕಬಳ್ಳಾಪುರದ ಪ್ರಶಾಂತ ನಗರದ ಪ್ರಕೃತಿ ಶಾಲೆ ಹಿಂಭಾಗ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ನವೀನ್(30) ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಕಳೆದ ಎರಡು ದಿನಗಳಿಂದ ಕೆಲಸಕ್ಕೆ ಬಾರದ ಹಿನ್ನೆಲೆ ಸಹೋದ್ಯೋಗಿಗಳು ಮನೆಗೆ ತೆರಳಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

    ನೇಣು ಬಿಗಿದ ಸ್ಥಿತಿಯಲ್ಲಿ ನವೀನ್ ಮೃತದೇಹ ಪತ್ತೆಯಾಗಿದೆ. ಜೀನ್ಸ್ ಪ್ಯಾಂಟ್ ಹಾಗೂ ಶರ್ಟ್ ನಿಂದ ಕತ್ತು ಹಿಸುಕಿ ಕೊಲೆ ಮಾಡಿರುವ ರೀತಿ ಮೇಲ್ನೋಟಕ್ಕೆ ಕಂಡುಬಂದಿದೆ. ಚಿಕ್ಕಬಳ್ಳಾಪುರ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ತನಿಖೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ತಮ್ಮ ನ್ಯಾಯಾಲಯದ ಸಿಬ್ಬಂದಿ ಸಾವಿನ ಸುದ್ದಿ ತಿಳಿದು ಸ್ವತಃ ನ್ಯಾಯಾಧೀಶರಾದ ರೂಪಾರವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಈ ಸಂಬಂಧ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ‘ಹಾಯ್ ಬೆಂಗಳೂರು’ ಸಂಪಾದಕ ರವಿ ಬೆಳಗೆರೆಗೆ ಕೋರ್ಟ್ ನಿಂದ ಮಧ್ಯಂತರ ರಿಲೀಫ್

    ‘ಹಾಯ್ ಬೆಂಗಳೂರು’ ಸಂಪಾದಕ ರವಿ ಬೆಳಗೆರೆಗೆ ಕೋರ್ಟ್ ನಿಂದ ಮಧ್ಯಂತರ ರಿಲೀಫ್

    ಬೆಂಗಳೂರು: ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಹಾಯ್ ಬೆಂಗಳೂರು ಸಂಪಾದಕ ರವಿ ಬೆಳಗೆರೆಯವರ ಜಾಮೀನು ಅರ್ಜಿ ವಿಚಾರಣೆ 65ನೇ ಸೆಷನ್ಸ್ ಕೋರ್ಟ್ ನಲ್ಲಿ ನಡೆಯಿತು.

    ಡಿಸೆಂಬರ್ 16 ರ ವರೆಗೆ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಇಂದಿಗೆ ಮಧ್ಯಂತರ ಜಾಮೀನು ಅರ್ಜಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಮತ್ತೆ ಮಧ್ಯಂತರ ಜಾಮೀನು ವಿಸ್ತರಿಸದಂತೆ ಸಿಸಿಬಿ ವಕೀಲರು ಮನವಿ ಮಾಡಿದ್ದರು.

    ಇನ್ನು ತಮ್ಮ ವಕೀಲರ ಜೊತೆ ಕೋರ್ಟ್ ಗೆ ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಕೂಡ ಹಾಜರಾಗಿದ್ದರು. ಇನ್ನು ಸರ್ಕಾರಿ ವಕೀಲರು ಮುಖ್ಯ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಒಂದು ವಾರ ಸಮಯಾವಕಾಶ ಕೇಳಿದ್ದಾರೆ.

    ರವಿ ಬೆಳಗೆರೆಗೆ ಆರೋಗ್ಯ ಚೆನ್ನಾಗಿದೆ. ಹಾಗಾಗಿ ಅವರಿಗೆ ಮಧ್ಯಂತರ ಜಾಮಿನು ವಿಸ್ತರಿಸಬೇಡಿ ಅಂತ ಕೋರ್ಟ್ ನಲ್ಲಿ ಸಿಸಿಬಿ ವಕೀಲರು ವಾದ ಮಂಡಿಸಿದ್ರು. ರವಿಬೆಳಗೆರೆ ಅವರ ಆರೊಗ್ಯದ ಬಗ್ಗೆ ರಿಪೋರ್ಟ್ ಗಳು ಇದ್ದಾವೆ ಹೊರತು, ಆರೋಗ್ಯ ಸರಿಯಿಲ್ಲ ಅಂತ ಇತ್ತೀಚಿನ ಯಾವುದೇ ರಿಪೋರ್ಟ್ ಅವರ ಬಳಿ ಇಲ್ಲ. ಮಧ್ಯಂತರ ಜಾಮೀನಿಗಾಗಿ ಸುಳ್ಳು ಅನಾರೋಗ್ಯದ ಸರ್ಟಿಫಿಕೇಟ್ ಗಳನ್ನು ನೀಡುತ್ತಿದ್ದಾರೆ ಅಂತ ವಕೀಲರು ವಾದಿಸಿದ್ರು.

    ರವಿಬೆಳಗೆರೆ ಮಧ್ಯಂತರ ಜಾಮೀನು ಅವಧಿಯನ್ನು ಸೆಷನ್ಸ್ ಕೋರ್ಟ್ ನ್ಯಾಯಮೂರ್ತಿ ಮಧುಸೂದನ್ ಅವರು ಡಿ. 18ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.