Tag: Civilians Migrate

  • ಇಸ್ರೇಲ್‌ ಭೀಕರ ವಾಯುದಾಳಿಗೆ 22 ಮಂದಿ ಬಲಿ – 117 ಮಂದಿಗೆ ಗಾಯ, ಹಿಜ್ಬುಲ್ಲಾ ಟಾಪ್‌ ಲೀಡರ್‌ ಸೇಫ್‌

    ಇಸ್ರೇಲ್‌ ಭೀಕರ ವಾಯುದಾಳಿಗೆ 22 ಮಂದಿ ಬಲಿ – 117 ಮಂದಿಗೆ ಗಾಯ, ಹಿಜ್ಬುಲ್ಲಾ ಟಾಪ್‌ ಲೀಡರ್‌ ಸೇಫ್‌

    ಬೈರೂತ್: ಇಸ್ರೇಲ್‌ ಸೇನೆಯು ಸೆಂಟ್ರಲ್‌ ಬೈರೂತ್‌ನ ವಿಶ್ವಸಂಸ್ಥೆ ಶಾಂತಿಪಾಲನಾ ಪ್ರಧಾನ ಕಚೇರಿ ಮೇಲೆ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ (Israeli Strikes) 22 ಮಂದಿ ಹತ್ಯೆಯಾಗಿದ್ದು, ಸುಮಾರು 117 ಮಂದಿ ಗಾಯಗೊಂಡಿದ್ದಾರೆ. ಅದೃಷ್ಟವಶಾತ್‌ ಈ ದಾಳಿಯಲ್ಲಿ ಹಿಜ್ಬುಲ್ಲಾದ (Hezbollah) ಉನ್ನತ ಅಧಿಕಾರಿಯೊಬ್ಬರು ಬದುಕುಳಿದಿದ್ದಾರೆ ಎಂದು ಲೆಬನಾನ್‌ ಆರೋಗ್ಯ ಸಚಿವಾಲಯ ಹೇಳಿಕೊಂಡಿದೆ.

    ಕಳೆದ 1 ವರ್ಷದಲ್ಲಿ ಇಸ್ರೇಲ್‌ (Israel) ನಡೆಸಿದ ಮಾರಣಾಂತಿಕ ದಾಳಿಗಳಲ್ಲಿ ಇದು ಒಂದು ಎನ್ನಲಾಗಿದೆ. ದಾಳಿಯಿಂದ ಲೆಬನಾನ್‌ನಲ್ಲಿ ವಿಶ್ವಸಂಸ್ಥೆಯ ಶಾಂತಿ ಪಾಲಕರಿಗೆ ಅಪಾಯವುಂಟಾಗಿದ್ದು, ಅಂತಾರಾಷ್ಟ್ರೀಯ ಕಾನೂನು ಉಲ್ಲಂಘನೆಯಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಇಸ್ರೇಲ್‌ ಕೆಣಕಿ ತಪ್ಪು ಮಾಡಿತೇ ಇರಾನ್‌? – ಉಭಯ ರಾಷ್ಟ್ರಗಳ ಸೇನಾ ಸಾಮರ್ಥ್ಯ ನೋಡಿದ್ರೆ ಮೈ ನಡುಗುತ್ತೆ!

    ಸೆಂಟ್ರಲ್‌ ಬೈರೂತ್‌ನ ವಿಶ್ವಸಂಸ್ಥೆ ಶಾಂತಿಪಾಲನಾ ಪ್ರಧಾನ ಕಚೇರಿ, ಲೆಬನಾನ್‌ ಸೇನಾ ಟ್ಯಾಂಕರ್‌ಗಳನ್ನ ಗುರಿಯಾಗಿಸಿ ಇಸ್ರೇಲ್‌ ದಾಳಿ ನಡೆಸಿದೆ. ಹಿಜ್ಬುಲ್ಲಾ ಮುಖ್ಯಸ್ಥ ನಸ್ರಲ್ಲಾನನ್ನ ಹೊಡೆದುರುಳಿಸಿದ ನಂತರ ಉನ್ನತ ಅಧಿಕಾರಿಗಳ ಸರಣಿ ಹತ್ಯೆಯನ್ನೇ ಹೆಚ್ಚಾಗಿ ಗುರಿಯಾಗಿಸಿದೆ. ಆದ್ರೆ ಈ ದಾಳಿಯಲ್ಲಿ ಹಿಜ್ಬುಲ್ಲಾದ ಉನ್ನತಾಧಿಕಾರಿ ಬದುಕುಳಿದಿದ್ದಾರೆ. ಈ ದಾಳಿಯು ಅಂತಾರಾಷ್ಟ್ರೀಯ ಕಾನೂನು ಉಲ್ಲಂಘನೆ ಮಾಡಿದೆ ಎಂದು ಸ್ಪೇನ್‌ ಹಾಗೂ ಇಟಲಿ ದೇಶಗಳು ಆರೋಪಿಸಿವೆ.

    ಇತ್ತೀಚೆಗೆ ಇಸ್ರೇಲ್‌ ಹಿಜ್ಬುಲ್ಲಾದ 120 ಉಗ್ರ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿತ್ತು. ಆ ನಂತರ ನಡೆದ ಅತಿದೊಡ್ಡ ದಾಳಿಯಾಗಿದೆ. ಇದನ್ನೂ ಓದಿ: ಇಸ್ರೇಲ್‌ ಯುದ್ಧಕ್ಕೆ ಬೆಚ್ಚಿದ ಜನ – 2.20 ಲಕ್ಷ ಮಂದಿ ಲೆಬನಾನ್‌ನಿಂದ ಸಿರಿಯಾಕ್ಕೆ ಪಲಾಯನ

    2.20 ಲಕ್ಷ ಮಂದಿ ಲೆಬನಾನ್‌ನಿಂದ ಸಿರಿಯಾಕ್ಕೆ ಪಲಾಯನ
    ಇತ್ತೀಚಿನ ದಿನಗಳಲ್ಲಿ ಇಸ್ರೇಲ್‌ನ ಯುದ್ಧ ವಿಮಾನಗಳು (Israeli Fighter Jets) ಲೆಬನಾನ್‌ನ ಬೆಕಾ ಪ್ರದೇಶ ಮತ್ತು ಬೈರೂತ್‌ನಲ್ಲಿ ವ್ಯಾಪಕವಾದ ವೈಮಾನಿಕ ದಾಳಿಗಳನ್ನು ನಡೆಸಿದೆ. ಮೂಲಸೌಕರ್ಯ ತಾಣಗಳು, ಲಾಂಚರ್‌ಗಳು, ಕಮಾಂಡ್ & ಕಂಟ್ರೋಲ್ ಸೆಂಟರ್‌ಗಳು ಹಾಗೂ ಶಸ್ತ್ರಾಸ್ತ್ರಗಳ ಸಂಗ್ರಹಣಾ ಸೌಲಭ್ಯ ಕೇಂದ್ರಗಳನ್ನು ಗುರಿಯಾಗಿಸಿ ದಾಳಿ ನಡೆಸಿವೆ. ಸದ್ಯಕ್ಕೆ ಕದನ ವಿರಾಮ ಘೋಷಣೆಯಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಇದರಿಂದ ಭಯಭೀತರಾಗಿರುವ 2.20 ಲಕ್ಷ ಮಂದಿ ಸಿರಿಯಾಕ್ಕೆ ಪಲಾಯನ ಮಾಡಿದ್ದಾರೆ ಎಂದು ವರದಿಗಳು ತಿಳಿಸಿವೆ.

  • ಇಸ್ರೇಲ್‌ ಯುದ್ಧಕ್ಕೆ ಬೆಚ್ಚಿದ ಜನ – 2.20 ಲಕ್ಷ ಮಂದಿ ಲೆಬನಾನ್‌ನಿಂದ ಸಿರಿಯಾಕ್ಕೆ ಪಲಾಯನ

    ಇಸ್ರೇಲ್‌ ಯುದ್ಧಕ್ಕೆ ಬೆಚ್ಚಿದ ಜನ – 2.20 ಲಕ್ಷ ಮಂದಿ ಲೆಬನಾನ್‌ನಿಂದ ಸಿರಿಯಾಕ್ಕೆ ಪಲಾಯನ

    ಬೈರೂತ್‌: ಇಸ್ರೇಲ್‌ ದಿನದಿಂದ ದಿನಕ್ಕೆ ಯುದ್ಧದ ತೀವ್ರತೆಯನ್ನು ಹೆಚ್ಚಿಸುತ್ತಿರುವ ಹಿನ್ನೆಲೆಯಲ್ಲಿ ಲೆಬನಾನ್‌ ಜನ ಸಂಕಷ್ಟಕ್ಕೀಡಾಗಿ ದೇಶ ತೊರೆದಿದ್ದಾರೆ. ಇಸ್ರೇಲ್‌ ಜೊತೆಗಿನ ಸಂಘರ್ಷದಿಂದಾಗಿ ಲೆಬನಾನ್‌ನ 12 ಲಕ್ಷ ಮಂದಿ ಸಂಕಷ್ಟಕ್ಕೀಡಾಗಿದ್ದಾರೆ. ಇದರಿಂದಾಗಿ ಸುಮಾರು 2.20 ಲಕ್ಷ ಮಂದಿ ಲೆಬನಾನ್‌ನಿಂದ ಸಿರಿಯಾಕ್ಕೆ ವಲಸೆ (Civilians Migrate) ಹೋಗಿದ್ದಾರೆ ಎಂದು ವರದಿಯಾಗಿದೆ.

    ಇತ್ತೀಚಿನ ದಿನಗಳಲ್ಲಿ ಇಸ್ರೇಲ್‌ನ ಯುದ್ಧ ವಿಮಾನಗಳು (Israeli Fighter Jets) ಲೆಬನಾನ್‌ನ ಬೆಕಾ ಪ್ರದೇಶ ಮತ್ತು ಬೈರೂತ್‌ನಲ್ಲಿ ವ್ಯಾಪಕವಾದ ವೈಮಾನಿಕ ದಾಳಿಗಳನ್ನು ನಡೆಸಿದೆ. ಮೂಲಸೌಕರ್ಯ ತಾಣಗಳು, ಲಾಂಚರ್‌ಗಳು, ಕಮಾಂಡ್ & ಕಂಟ್ರೋಲ್ ಸೆಂಟರ್‌ಗಳು ಹಾಗೂ ಶಸ್ತ್ರಾಸ್ತ್ರಗಳ ಸಂಗ್ರಹಣಾ ಸೌಲಭ್ಯ ಕೇಂದ್ರಗಳನ್ನು ಗುರಿಯಾಗಿಸಿ ದಾಳಿ ನಡೆಸಿವೆ. ಅಲ್ಲದೇ ಮೂರು ದಿನಗಳ ಹಿಂದೆಯಷ್ಟೇ ಕೇವಲ 1 ಗಂಟೆ ಅವಧಿಯಲ್ಲಿ 120ಕ್ಕೂ ಹೆಚ್ಚು ಹಿಜ್ಬುಲ್ಲಾ (Hezbollah) ಉಗ್ರ ನೆಲೆಗಳನ್ನು ಧ್ವಂಸ ಮಾಡಿದೆ. ಅಲ್ಲದೇ ಸದ್ಯಕ್ಕೆ ಕದನ ವಿರಾಮ ಘೋಷಣೆಯಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಇದರಿಂದ ಭಯಭೀತರಾಗಿರುವ 2.20 ಲಕ್ಷ ಮಂದಿ ಸಿರಿಯಾಕ್ಕೆ ಪಲಾಯನ ಮಾಡಿದ್ದಾರೆ ಎಂದು ವರದಿಗಳು ತಿಳಿಸಿವೆ.

    ಯುದ್ಧದಿಂದ ಹಿಂದೆ ಸರಿಯುವಂತೆ ಲೆಬನಾನ್‌ಗೆ ಎಚ್ಚರಿಕೆ:
    ದಕ್ಷಿಣ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ನಡೆಸಿದ ಕೆಲ ಗಂಟೆಗಳ ನಂತರ ನೆತನ್ಯಾಹು (Benjamin Netanyahu) ವೀಡಿಯೋವೊಂದರಲ್ಲಿ ಮಾತನಾಡಿದ್ದಾರೆ. ಒಂದು ಕಾಲದಲ್ಲಿ ಪ್ರಾಕೃತಿಕ ಸೌಂದರ್ಯ, ಸಹಿಷ್ಣುತೆಗೆ ಹೆಸರುವಾಸಿಯಾಗಿದ್ದ ಮಧ್ಯಪ್ರಾಚ್ಯ ಈಗ ಹಿಜ್ಬುಲ್ಲಾ ಮದ್ದು ಗುಂಡುಗಳನ್ನು ಸಂಗ್ರಹಿಸಿದ್ದು, ಇರಾನಿನ ಮಿಲಿಟರಿ ನೆಲೆಯಾಗಿ ಮಾರ್ಪಟ್ಟಿದೆ. ಹಾಗಾಗಿ ಕೂಡಲೇ ನಿಮ್ಮ ದೇಶವನ್ನು ಕೂಡಲೇ ಹಿಂತೆಗೆದುಕೊಳ್ಳಿ ಎಂದು ಎಚ್ಚರಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ಈಗಲೂ ಸಮಯವಿದೆ ಹಿಂದೆ ಸರಿದುಬಿಡಿ – ಲೆಬನಾನ್‌ಗೆ ಇಸ್ರೇಲ್‌ ಪ್ರಧಾನಿ ಎಚ್ಚರಿಕೆ

    ಇದು ಲೆಬನಾನ್ ಜನತೆಗೆ ನಮ್ಮ ಸಂದೇಶ. ನಿಮ್ಮ ದೇಶವನ್ನು ಮಧ್ಯಪ್ರಾಚ್ಯದ ಮುತ್ತು ಎಂದು ಕರೆಯುತ್ತಿದ್ದದ್ದು ನೆನಪಿದೆಯಾ? ಈಗ ಲೆಬನಾನ್‌ಗೆ ಏನಾಯಿತು? ನಿರಂಕುಶಾಧಿಕಾರಿಗಳು ಮತ್ತು ಭಯೋತ್ಪಾದಕರ ಗುಂಪು ಅದನ್ನು ನಾಶಪಡಿಸಿದರು. ಒಂದು ಕಾಲದಲ್ಲಿ ಲೆಬನಾನ್ ಸಹನೆ, ಸೌಂದರ್ಯಕ್ಕೆ ಹೆಸರುವಾಸಿಯಾಗಿತ್ತು. ಇಂದು ಅದು ಅವ್ಯವಸ್ಥೆಯ ಸ್ಥಳವಾಗಿದೆ, ಯುದ್ಧದ ಕೇಂದ್ರವಾಗಿದೆ ಎಂದು ಹೇಳಿದ್ದಾರೆ.

    ನಾವು ಗಾಜಾದಲ್ಲಿ ನೋಡುವಂತೆ ವಿನಾಶ ಮತ್ತು ದುಃಖಕ್ಕೆ ಕಾರಣವಾಗುವ ಸುದೀರ್ಘ ಯುದ್ಧದ ಪ್ರಪಾತಕ್ಕೆ ಬೀಳುವ ಮೊದಲು ಎಚ್ಚೆತ್ತುಕೊಳ್ಳಬೇಕು. ಈಗಲೂ ಲೆಬನಾನ್‌ ತಮ್ಮ ರಾಷ್ಟ್ರವನ್ನು ಉಳಿಸಿಕೊಳ್ಳಬಹುದು. ನೀವು ನಿಮ್ಮ ಹಿಂತಿರುಗಿದರೆ, ಯುದ್ಧವನ್ನು ನಿಲ್ಲಿಸಿದ್ರೆ, ಶಾಂತಿ ಸಮೃದ್ಧ ಹಾದಿಗೆ ಮರಳಬಹುದು. ನೀವು ಮಾಡದಿದ್ದರೆ, ಹಿಜ್ಬುಲ್ಲಾ ಮಂದುವರಿಯುತ್ತದೆ. ನಿಮ್ಮ ನೇತೃತ್ವ ಖರ್ಚು ವೆಚ್ಚದಲ್ಲಿ ಇಸ್ರೇಲ್‌ ವಿರುದ್ಧ ಹೋರಾಡಲು ಪ್ರಯತ್ನಿಸಿ, ಲೆಬನಾನ್‌ ಅನ್ನು ಯುದ್ಧಕ್ಕೆ ಎಳೆದು ತರುತ್ತಾರೆ. ಆದ್ದರಿಂದ ಈಗಲೇ ಎಚ್ಚೆತ್ತುಕೊಳ್ಳಿ ಎಂದು ಖಡಕ್ಕಾಗಿ ಹೇಳಿದ್ದಾರೆ. ಇದನ್ನೂ ಓದಿ: ಇಸ್ರೇಲ್‌ ಕೆಣಕಿ ತಪ್ಪು ಮಾಡಿತೇ ಇರಾನ್‌? – ಉಭಯ ರಾಷ್ಟ್ರಗಳ ಸೇನಾ ಸಾಮರ್ಥ್ಯ ನೋಡಿದ್ರೆ ಮೈ ನಡುಗುತ್ತೆ!

    ಇಸ್ರೇಲ್ ಯುದ್ಧವನ್ನು ಕೊನೆಗಾಣಿಸಲು ನಿರ್ಧರಿಸಿದೆ. ನಮ್ಮ ಜನರನ್ನು ಸುರಕ್ಷಿತವಾಗಿ ಅವರ ಮನೆಗಳಿಗೆ ಹಿಂದಿರುಗಿಸಲು ಅಗತ್ಯವಿರುವ ಎಲ್ಲವನ್ನೂ ಮಾಡಲು ನಾವು ನಿರ್ಧರಿಸಿದ್ದೇವೆ. ಇಸ್ರೇಲ್‌ಗೆ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕಿದೆ. ಇಸ್ರೇಲ್‌ಗೆ ಗೆಲ್ಲುವ ಛಲವೂ ಇದೆ, ಗೆಲ್ಲುತ್ತದೆ ಎಂದಿರುವ ಅವರು, ಹಿಜ್ಬುಲ್ಲಾವನ್ನು ಸಂಪೂರ್ಣವಾಗಿ ನಿರ್ನಾಮ ಮಾಡುವ ಪ್ರತಿಜ್ಞೆ ಮಾಡಿದ್ದಾರೆ.