ನವದೆಹಲಿ: ಸುಪ್ರೀಂ ಕೋರ್ಟ್‌ನ (Supreme Court) 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯ ಕಾಂತ್ (Justice Surya Kant) ನೇಮಕಗೊಂಡಿದ್ದು, ನವೆಂಬರ್ 24ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಸಿಜೆಐ ಭೂಷಣ್ ಆರ್. ಗವಾಯಿ ಅವರ ಅಧಿಕಾರಾವಧಿ ನವೆಂಬರ್ 23ರಂದು ಅಂತ್ಯಗೊಳ್ಳಲಿದೆ. ಹೀಗಾಗಿ, ಸಿಜೆ ಹುದ್ದೆಗೆ ಸೂರ್ಯಕಾಂತ್ ಹೆಸರನ್ನು ಗವಾಯಿ ಅವರು ಕೇಂದ್ರ ಸರ್ಕಾರಕ್ಕೆ (Central Government) ಶಿಫಾರಸು ಮಾಡಿದ್ರು. ಇದೀಗ ಕೇಂದ್ರ ಕಾನೂನು ಸಚಿವಾಲಯ ಬಿ.ಆರ್ ಗವಾಯಿ ಶಿಫಾರಸನ್ನು ಪರಿಗಣಿಸಿದೆ. ನವೆಂಬರ್ 24ರಂದು ನ್ಯಾ. ಸೂರ್ಯಕಾಂತ್ ಸಿಜೆ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ನವದೆಹಲಿ: ದೇಶದಲ್ಲೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ (BR Gavai) ಮೇಲೆ ವಕೀಲರೊಬ್ಬರು ಶೂ ಎಸೆದ ಆಘಾತಕಾರಿ ಘಟನೆ ನಡೆದಿದೆ. ಸುಪ್ರೀಂ ಕೋರ್ಟ್ ಆವರಣದಲ್ಲಿರುವ ಕೋರ್ಟ್ ಹಾಲ್-1ರಲ್ಲಿ ವಿಚಾರಣೆಯ ವೇಳೆ 71 ವರ್ಷದ ವಕೀಲ ಕಿಶೋರ್ ರಾಕೇಶ್ ಎಂಬುವವರು ಶೂ ಎಸೆದಿದ್ದಾರೆ. ಘಟನೆಗೆ ದೇಶವ್ಯಾಪಿ ಖಂಡನೆ ವ್ಯಕ್ತವಾಗಿದೆ. ಈ ಬೆನ್ನಲ್ಲೇ ಸಿಜೆಐ ಗವಾಯಿ ಅವರೊಂದಿಗೆ ಪ್ರಧಾನಿ ಮೋದಿ (PM Modi) ಮಾತನಾಡಿದ್ದಾರೆ. ಘಟನೆ ಬಗ್ಗೆ ತಿಳಿದುಕೊಂಡಿದ್ದಾರೆ. ಬಳಿಕ ಎಕ್ಸ್ ಪೋಸ್ಟ್‌ನಲ್ಲಿ ಸಂದೇಶವೊಂದನ್ನ ಹಂಚಿಕೊಂಡಿದ್ದು, ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
Spoke to Chief Justice of India, Justice BR Gavai Ji. The attack on him earlier today in the Supreme Court premises has angered every Indian. There is no place for such reprehensible acts in our society. It is utterly condemnable.
ಮೋದಿ ಎಕ್ಸ್ ಪೋಸ್ಟ್‌ನಲ್ಲಿ ಏನಿದೆ?
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಜಿ ಅವರೊಂದಿಗೆ ಮಾತನಾಡಿದೆ. ಇಂದು ಮುಂಜಾನೆ ಸುಪ್ರೀಂ ಕೋರ್ಟ್ ಆವರಣದಲ್ಲಿ ಅವರ ಮೇಲೆ ನಡೆದ ದಾಳಿ ಪ್ರತಿಯೊಬ್ಬ ಭಾರತೀಯನನ್ನೂ ಕೆರಳಿಸಿದೆ. ನಮ್ಮ ಸಮಾಜದಲ್ಲಿ ಇಂತಹ ಖಂಡನೀಯ ಕೃತ್ಯಗಳಿಗೆ ಸ್ಥಳವಿಲ್ಲ. ಇದು ಸಂಪೂರ್ಣವಾಗಿ ಖಂಡನೀಯ. ಅಲ್ಲದೇ ಇಂತಹ ಪರಿಸ್ಥಿತಿಯನ್ನು ಎದುರಿಸುವಾಗ ನ್ಯಾಯಮೂರ್ತಿ ಗವಾಯಿ ಅವರು ಪ್ರದರ್ಶಿಸಿದ ಶಾಂತಿಯುತ ನಡೆಯನ್ನ ನಾನು ಮೆಚ್ಚುತ್ತೇನೆ. ಇದು ನ್ಯಾಯದ ಮೌಲ್ಯಗಳಿಗೆ ಮತ್ತು ನಮ್ಮ ಸಂವಿಧಾನದ ಚೈತನ್ಯ ಬಲಪಡಿಸುವ ನಿಟ್ಟಿನಲ್ಲಿ ಅವರ ಬದ್ಧತೆಯನ್ನು ಎತ್ತಿ ತೋರಿಸುದೆ ಎಂದು ಬರೆದುಕೊಂಡಿದ್ದಾರೆ.
ಕೋರ್ಟ್ ಹಾಲ್‌ನಲ್ಲಿ ಏನಾಯ್ತು?
ಗವಾಯಿ ಅವರು ವಕೀಲರಿಂದ ಪ್ರಕರಣಗಳ ಉಲ್ಲೇಖವನ್ನು ಕೇಳುತ್ತಿದ್ದ ಸಂದರ್ಭದಲ್ಲಿ ಆರೋಪಿ ವಕೀಲ ಪೀಠದ ಬಳಿಗೆ ತೆರಳಿ, ತನ್ನ ಶೂವನ್ನು ನ್ಯಾಯಮೂರ್ತಿಯವರ ಮೇಲೆ ಎಸೆಯಲು ಯತ್ನಿಸಿದ್ದಾರೆ. ಭದ್ರತಾ ಸಿಬ್ಬಂದಿ ತಕ್ಷಣ ಮಧ್ಯಪ್ರವೇಶಿಸಿ, ವಕೀಲನನ್ನು ಹೊರಗೆ ಕರೆದೊಯ್ದಿದ್ದಾರೆ. ಈ ವೇಳೆ, `ಸನಾತನ ಧರ್ಮದ ಅವಮಾನವನ್ನು ಸಹಿಸುವುದಿಲ್ಲ’ ಅಂತ ವಕೀಲ ಕೂಗಿದ್ದಾನೆ. ಈ ಆಘಾತಕಾರಿ ಬೆಳವಣಿಗೆಯ ಹೊರತಾಗಿಯೂ ಸಿಜೆಐ ಗವಾಯಿ ತಾಳ್ಮೆ ವಹಿಸಿದ್ದರು. ಘಟನೆಯಿಂದ `ವಿಚಲಿತರಾಗಬೇಡಿ. ನಾವು ವಿಚಲಿತರಾಗಿಲ್ಲ. ಇಂತಹ ವಿಷಯಗಳು ನನ್ನ ಮೇಲೆ ಪರಿಣಾಮ ಬೀರುವುದಿಲ್ಲ’ ಅಂತ ಕೋರ್ಟ್‌ನಲ್ಲಿದ್ದ ವಕೀಲರಿಗೆ ವಾದ ಮುಂದುವರಿಸಲು ಸೂಚಿಸಿದ್ದಾರೆ.
ದೆಹಲಿ ಪೊಲೀಸರ ಪ್ರಕಾರ ಆರೋಪಿ ವಕೀಲ ಕಿಶೋರ್ ರಾಕೇಶ್‌ನನ್ನು ಭದ್ರತಾ ಸಿಬ್ಬಂದಿ ಸುಪ್ರೀಂ ಕೋರ್ಟ್‌ನ ಭದ್ರತಾ ಘಟಕಕ್ಕೆ ಹಸ್ತಾಂತರಿಸಿದ್ದಾರೆ. ವಕೀಲ ಕಿಶೋರ್ ಮಯೂರ್ ವಿಹಾರ್ ಪ್ರದೇಶದ ನಿವಾಸಿ ಮತ್ತು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ನೋಂದಾಯಿತ ಸದಸ್ಯರಾಗಿದ್ದಾರೆ. ಘಟನೆ ಬೆನ್ನಲ್ಲೇ ದೇಶಾದ್ಯಂತ ಯಾವುದೇ ವಕೀಲಿಕೆ ಮಾಡದಂತೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ ರಾಕೇಶ್ ಕಿಶೋರ್ ಅವರನ್ನು ಸಸ್ಪೆಂಡ್ ಮಾಡಿದೆ.
ಈ ಮಧ್ಯೆ, ಸಿಜೆ ಮೇಲೆ ಶೂ ಎಸೆದ ಪ್ರಕರಣವನ್ನ ಸಿಎಂ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದ ನ್ಯಾಯಮೂರ್ತಿ ಬಿ.ಎಸ್ ಗವಾಯಿ ಮೇಲೆ ಶೂ ಎಸೆದ ಕಿಡಿಗೇಡಿ ವಕೀಲನನ್ನ ತಕ್ಷಣವೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಅಂತ ಎಕ್ಸ್‌ನಲ್ಲಿ ಒತ್ತಾಯಿಡಿದ್ದಾರೆ. ಸಚಿವರಾದ ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಕಿಡಿಕಾರಿದ್ದಾರೆ.
ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ (BR Gavai) ಅವರು ತಮ್ಮ ನಿವೃತ್ತಿಯ ನಂತರ ಯಾವುದೇ ಸರ್ಕಾರಿ ಹುದ್ದೆ ಸ್ವೀಕರಿಸುವುದಿಲ್ಲ ಎಂದು ಘೋಷಿಸಿದರು. ಬದಲಿಗೆ ಅವರು ಸಮಾಲೋಚನೆ ಮತ್ತು ಮಧ್ಯಸ್ಥಿಕೆ ಕ್ಷೇತ್ರದಲ್ಲಿ ಕೆಲಸ ಮಾಡುವುದಾಗಿ ಹೇಳಿದ್ದಾರೆ.
ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ದಿವಂಗತ ಟಿ.ಆರ್ ಗಿಲ್ಡಾ ಸ್ಮಾರಕ ಇ-ಗ್ರಂಥಾಲಯದ ಉದ್ಘಾಟನಾ ಸಮಾರಂಭದಲ್ಲಿ ಸಿಜೆಐ ಗವಾಯಿ ಈ ಹೇಳಿಕೆ ನೀಡಿದ್ದಾರೆ. ಅಮರಾವತಿಯ ತಮ್ಮ ಹುಟ್ಟೂರು ದಾರಾಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ನವೆಂಬರ್ 24ರ ನಂತರ ನಾನು ಯಾವುದೇ ಸರ್ಕಾರಿ ಹುದ್ದೆಯನ್ನು ಸ್ವೀಕರಿಸುವುದಿಲ್ಲ. ಆದರೆ ನಾನು ಸಮಾಲೋಚನೆ ಮತ್ತು ಮಧ್ಯಸ್ಥಿಕೆ ಕೆಲಸದಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದಿದ್ದಾರೆ. ಪ್ರಸಕ್ತ ವರ್ಷ ನ.23 ರಂದು ಅವರು ನಿವೃತ್ತರಾಗಲಿದ್ದಾರೆ. ಇದನ್ನೂ ಓದಿ: ಪಾಕ್ ಉಗ್ರವಾದಕ್ಕೆ ಆಪರೇಷನ್ ಸಿಂಧೂರ ನೇರ ಸಂದೇಶ ರವಾನಿಸಿದೆ: ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ
ನಿವೃತ್ತಿಯ ನಂತರ ತಮ್ಮ ಹೆಚ್ಚಿನ ಸಮಯವನ್ನು ದಾರಾಪುರ, ಅಮರಾವತಿ ಮತ್ತು ನಾಗ್ಪುರದಲ್ಲಿ ಕಳೆಯಲು ಯೋಜಿಸುತ್ತಿರುವುದಾಗಿಯೂ ಅವರು ಹೇಳಿದ್ದಾರೆ. ನ್ಯಾಯಾಂಗ ಸ್ವಾತಂತ್ರ‍್ಯದ ಬಗ್ಗೆ ಮಾತನಾಡಿ, ನಿವೃತ್ತಿಯ ನಂತರ ಸರ್ಕಾರಿ ಹುದ್ದೆಯನ್ನು ಸ್ವೀಕರಿಸುವುದು ಅಥವಾ ಚುನಾವಣೆಗಳಲ್ಲಿ ಸ್ಪರ್ಧಿಸುವುದು ನೈತಿಕ ಕಳವಳಗಳನ್ನು ಹುಟ್ಟುಹಾಕುತ್ತದೆ. ಇದು ನ್ಯಾಯಾಂಗದ ಮೇಲಿನ ಸಾರ್ವಜನಿಕರ ವಿಶ್ವಾಸ ಕುಗ್ಗಿಸುತ್ತದೆ ಎಂದು ಸಿಜೆಐ ಗವಾಯಿ ಈ ಹಿಂದೆ ಹೇಳಿದ್ದರು. ನ್ಯಾಯಾಂಗದ ವಿಶ್ವಾಸಾರ್ಹತೆ ಮತ್ತು ಸ್ವಾತಂತ್ರ‍್ಯವನ್ನು ಕಾಪಾಡಿಕೊಳ್ಳಲು ನಿವೃತ್ತಿಯ ನಂತರ ಯಾವುದೇ ಸರ್ಕಾರಿ ಹುದ್ದೆಗಳನ್ನು ಸ್ವೀಕರಿಸುವುದಿಲ್ಲ ಎಂದು ಅವರು ತಮ್ಮ ಅನೇಕ ಸಹೋದ್ಯೋಗಿಗಳ ಜೊತೆ ಸಾರ್ವಜನಿಕವಾಗಿ ಪ್ರತಿಜ್ಞೆ ಮಾಡಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿ ಒಬಿಸಿಗಳ ಪಾಲಿನ 2ನೇ ಅಂಬೇಡ್ಕರ್ – `ಕೈʼ ಮುಖಂಡ ಉದಿತ್ ರಾಜ್ ಬಣ್ಣನೆ
ದರ್ಯಾಪುರದಲ್ಲಿ ಹೊಸ ನ್ಯಾಯಾಲಯದ ಕಟ್ಟಡದ ಉದ್ಘಾಟನೆಯ ಸಂದರ್ಭದಲ್ಲಿ, ಸಿಜೆಐ ಗವಾಯಿ ನ್ಯಾಯಾಂಗ ರಚನೆಯ ವಿಕೇಂದ್ರೀಕರಣವನ್ನು ಪ್ರತಿಪಾದಿಸಿದರು. ಇದು ಜನರಿಗೆ ನ್ಯಾಯವನ್ನು ಸುಲಭವಾಗಿ ಪ್ರವೇಶಿಸುವಂತೆ ಮಾಡುತ್ತದೆ ಎಂದು ಹೇಳಿದರು. ನ್ಯಾಯಾಂಗ ಮೂಲಸೌಕರ್ಯ ಸಮಿತಿಯ ಮುಖ್ಯಸ್ಥರಾಗಿ, ಅಧಿಕಾರಶಾಹಿ ಅಡೆತಡೆಗಳು ಈ ಕಾರ್ಯಕ್ಕೆ ಅಡ್ಡಿಯಾಗುತ್ತಿದ್ದರೂ, ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಹೊಸ ನ್ಯಾಯಾಲಯಗಳನ್ನು ಸ್ಥಾಪಿಸಲು ಒಂದು ಮಾದರಿಯನ್ನು ಸಿದ್ಧಪಡಿಸಿದ್ದೇನೆ ಎಂದು ಅವರು ಉಲ್ಲೇಖಿಸಿದರು. ಇದನ್ನೂ ಓದಿ: ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ 20 ವಾಹನಗಳ ನಡ್ವೆ ಭೀಕರ ಅಪಘಾತ – ಐಷಾರಾಮಿ ಕಾರುಗಳೇ ಚಿಂದಿ ಚಿಂದಿ
ನವದೆಹಲಿ: ನಗದು ಪತ್ತೆ ಪ್ರಕರಣದಲ್ಲಿ ದುಷ್ಕೃತ್ಯ ಎಸಗಿದ ಆರೋಪದಲ್ಲಿ ತಮ್ಮನ್ನು ತಪ್ಪಿತಸ್ಥರೆಂದು ಘೋಷಿಸಿದ ಆಂತರಿಕ ತನಿಖಾ ಸಮಿತಿಯ ವರದಿಯನ್ನು ಅಸಿಂಧುಗೊಳಿಸುವಂತೆ ಕೋರಿ ನ್ಯಾಯಮೂರ್ತಿ ಯಶವಂತ್ ವರ್ಮಾ (Justice Yashwant Varma) ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಲು ವಿಶೇಷ ಪೀಠವನ್ನು ರಚಿಸುವುದಾಗಿ ಸುಪ್ರೀಂ ಕೋರ್ಟ್ (Supreme Court) ಹೇಳಿದೆ.
ಪ್ರಕರಣವನ್ನು ಇಂದು ಸಿಜೆಐ ಬಿ.ಆರ್ ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತು. ನ್ಯಾಯಮೂರ್ತಿ ಯಶವಂತ ವರ್ಮಾ ಪರ ಹಿರಿಯ ಕಪಿಲ್ ಸಿಬಲ್ ವಾದ ಮಂಡಿಸಿದರು. ಇದು ನ್ಯಾ. ವರ್ಮಾ ಅವರ ಪದಚ್ಯುತಿಗೆ ಸಂಬಂಧಿಸಿದ ಪ್ರಕರಣ, ನಾವು ಕೆಲವು ಸಾಂವಿಧಾನಿಕ ಸಮಸ್ಯೆಗಳನ್ನು ಎತ್ತಿದ್ದೇವೆ. ಸಾಧ್ಯವಾದಷ್ಟು ಬೇಗ ಅದನ್ನು ಪಟ್ಟಿ ಮಾಡಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ರಾಜ್ಯದಲ್ಲಿ ಜಾತಿಗಣತಿಗೆ ದಿನಾಂಕ ಫಿಕ್ಸ್ – ಸೆ.22ರಿಂದ ಅ.7ರ ವರೆಗೆ ಸಮೀಕ್ಷೆ ನಡೆಸಲು ನಿರ್ಧಾರ
ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಜೆಐ ಬಿ.ಆರ್ ಗವಾಯಿ, ಸಿಜೆಐ ಕೂಡ ಈ ಪ್ರಕ್ರಿಯೆಯ ಭಾಗವಾಗಿರುವುದರಿಂದ ಈ ವಿಷಯವನ್ನು ತಮ್ಮ ಮುಂದೆ ಪಟ್ಟಿ ಮಾಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಅಲ್ಲದೇ ನಾವು ನಿರ್ಧಾರ ತೆಗೆದುಕೊಂಡು ಪೀಠವನ್ನು ರಚಿಸುತ್ತೇವೆ ಎಂದು ಸಿಜೆಐ ಸಿಬಲ್ ಅವರಿಗೆ ತಿಳಿಸಿದರು. ಇದನ್ನೂ ಓದಿ: ಅಮೆರಿಕ-ಜಪಾನ್ ನಡುವೆ ವ್ಯಾಪಾರ ಒಪ್ಪಂದ; ಟ್ರಂಪ್ ಘೋಷಣೆ
ನವದೆಹಲಿ: ಸುಪ್ರೀಂ ಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ (Sanjiv Khanna) ಅವರು, ಮುಂದಿನ ಸಿಜೆಐ (CJI) ಆಗಿ ಅಧಿಕಾರ ವಹಿಸಿಕೊಳ್ಳಲು ನ್ಯಾಯಮೂರ್ತಿ ಬಿ.ಆರ್ ಗವಾಯಿ (BR Gavai) ಅವರ ಹೆಸರು ಶಿಫಾರಸು ಮಾಡಿದ್ದಾರೆ.
ಮುಂದಿನ ತಿಂಗಳು ಮೇ 13ರಂದು ಸಿಜೆಐ ಹುದ್ದೆಯಿಂದ ಸಂಜೀವ್ ಖನ್ನಾ ನಿವೃತ್ತಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಉತ್ತರಾಧಿಕಾರಿಯಾಗಿ ಬಿ.ಆರ್ ಗವಾಯಿ ಅವರ ಹೆಸರನ್ನ ಕೇಂದ್ರ ಕಾನೂನು ಸಚಿವಾಲಯಕ್ಕೆ ಶಿಫಾರಸು ಮಾಡಿದ್ದಾರೆ. ಸರ್ಕಾರದ ಅನುಮೋದನೆ ನಂತರ ನ್ಯಾ. ಬಿ.ಆರ್ ಗವಾರಿ ಅವರು ಮೇ 14ರಂದು 52ನೇ ಸಿಜೆಐಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಿಗೆ ಸೆಡ್ಡು ಹೊಡೆಯಲು ಆಂಧ್ರ ಸರ್ಕಾರದಿಂದ ಭಾರೀ ಆಫರ್ – ಟಿಸಿಎಸ್‌ಗೆ 99 ಪೈಸೆಗೆ 21 ಎಕ್ರೆ ಭೂಮಿ
ಕಳೆದ ವರ್ಷ ನವೆಂಬರ್ 10ರಂದು ಡಿ.ವೈ ಚಂದ್ರಚೂಡ್ ಅವರು ಸಿಜೆಐ ಸ್ಥಾನದಿಂದ ನಿವೃತ್ತರಾದರು. ಆ ಬಳಿಕ ಸಂಜೀವ್ ಖನ್ನಾ ಸುಪ್ರೀಂ ಕೋರ್ಟ್‌ನ 51ನೇ ಮುಖ್ಯನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಸದ್ಯ ಅವರು ಮೇ 13ರಂದು ನಿವೃತ್ತಿ ಹೊಂದಿದ ಬಳಿಕ ಮೇ 14ರಂದು ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ. ಬಿ.ಆರ್ ಗವಾಯಿ ಅವರು 2025ರ ನವೆಂಬರ್‌ನಲ್ಲಿ ನಿವೃತ್ತಿ ಹೊಂದಲಿದ್ದಾರೆ. ಇದನ್ನೂ ಓದಿ: ಭಾರತದ ಮೊದಲ ಆನ್-ಬೋರ್ಡ್ ಎಟಿಎಂ ಪ್ರಯೋಗ ಯಶಸ್ವಿ – ಇನ್ಮುಂದೆ ರೈಲಿನಲ್ಲೂ ಇರಲಿದೆ ಎಟಿಎಂ!
2022ರ ನವೆಂಬರ್ 8ರಂದು ಸಿಜೆಐ ಉದಯ್ ಉಮೇಶ್ ಲಲಿತ್ (UU Lalit) ಅವರು ನಿವೃತ್ತಿ ಹೊಂದಿದ ಬಳಿಕ ಚಂದ್ರಚೂಡ್ ಸುಪ್ರೀಂ ಕೋರ್ಟ್‌ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಚಂದ್ರಚೂಡ್ ಅವರು ಅಧಿಕಾರ ಸ್ವೀಕರಿಸಿದ್ದರು. ಯುಯು ಲಲಿತ್ ಅವರಿಗೂ ಮುನ್ನ ಎನ್.ವಿ.ರಮಣ (NV Ramana) ಅವರು 48ನೇ ಸಿಜೆಐ ಆಗಿ ಅಧಿಕಾರ ನಿರ್ವಹಿಸಿದ್ದರು. ಇದನ್ನೂ ಓದಿ: ವಾರಂತ್ಯಕ್ಕೆ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನರ್ ರಚನೆ?
ಭೂಷಣ್ ರಾಮಕೃಷ್ಣ ಗವಾಯಿ ಯಾರು?
2007ರಲ್ಲಿ ನ್ಯಾ. ಕೆ.ಜಿ ಬಾಲಕೃಷ್ಣನ್ ಅವರ ಬಳಿಕ ನ್ಯಾಯಮೂರ್ತಿ ಸ್ಥಾನ ಅಲಂಕರಿದ 2ನೇ ದಲಿತರೂ ಪ್ರಮುಖರಾಗಿದ್ದಾರೆ. ಮಹಾರಾಷ್ಟ್ರದ ಅಮರಾವತಿ ಮೂಲದ ಗವಾಯಿ ಅವರು 1985 ರಲ್ಲಿ ಬ್ಯಾರಿಸ್ಟರ್ ರಾಜಾ ಭೋನ್ಸಾಲೆ ಅವರ ಬಳಿ ತಮ್ಮ ವಕೀಲ ವೃತ್ತಿ ಪ್ರಾರಂಭಿಸಿದರು. ಬಳಿಕ ಬಾಂಬೆ ಹೈಕೋರ್ಟ್‌ನಲ್ಲಿ ಸ್ವತಂತ್ರವಾಗಿ ಅಭ್ಯಾಸ ಶುರು ಮಾಡಿದರು. 1992 ರಲ್ಲಿ ಸಹಾಯಕ ಸರ್ಕಾರಿ ಪ್ಲೀಡರ್ ಮತ್ತು ಹೆಚ್ಚುವರಿ ಸಾರ್ವಜನಿಕ ಅಭಿಯೋಜಕರಾಗಿ ನೇಮಕಗೊಂಡ ಇವರು 2000 ಇಸವಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆದರು. ನಂತರ 2003ರಲ್ಲಿ ಬಾಂಬೆ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ಅವರ ವೃತ್ತಿ ಜೀವನ ಪ್ರಾರಂಭವಾಯಿತು. 2005ರಲ್ಲಿ ಖಾಯಂ ನ್ಯಾಯಾಧೀಶರಾದರು. 2019 ರಲ್ಲಿ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಬಡ್ತಿಹೊಂದಿದರು.
ಗವಾಯಿ ಅವರು ಅಮರಾವತಿಯ ಡಾ. ಅಂಬೇಡ್ಕರ್ ಕಾಲೇಜ್ ಆಫ್ ಲಾದಿಂದ ಕಾನೂನು ಪದವಿಯನ್ನು ಪಡೆದರು. ತಮ್ಮ ಶಿಕ್ಷಣದ ಜೊತೆಗೆ, ಕಾನೂನು ಕ್ಷೇತ್ರದಲ್ಲಿ ಗಮನಾರ್ಹ ಸಾಧನೆಗಳನ್ನು ಮಾಡಿದ್ದಾರೆ. ನ್ಯಾಯಮೂರ್ತಿ ಗವಾಯಿ ಅವರ ವೃತ್ತಿಜೀವನದ ಗಮನಾರ್ಹ ತೀರ್ಪುಗಳಲ್ಲಿ ಒಂದು ಜಮ್ಮು ಮತ್ತು ಕಾಶ್ಮೀರದ 370 ನೇ ವಿಧಿಯನ್ನು ರದ್ದುಪಡಿಸುವುದು ಮತ್ತು ಅದನ್ನು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವುದು. ಅವರು ನವೆಂಬರ್‌ನಲ್ಲಿ ನಿವೃತ್ತರಾಗುವ ಮೊದಲು ಸುಮಾರು ಆರು ತಿಂಗಳ ಕಾಲ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಲಿದ್ದಾರೆ.
ನವೆಂಬರ್ 11ರಂದು ಸಿಜೆಐ ಹುದ್ದೆಯಿಂದ ಹಾಲಿ ಸಿಜೆಐ ಚಂದ್ರಚೂಡ್ (DY ChandraChud) ನಿವೃತ್ತಿಯಾಗಲಿದ್ದಾರೆ. ಅಂದೇ ಸಂಜೀವ್ ಖನ್ನಾ ಅವರು ಅಧಿಕಾರ ವಹಿಸಿಕೊಳ್ಳಲಿದ್ದು, 2025ರ ಮೇ 13ರ ವರೆಗೆ ಕರ್ತವ್ಯ ನಿರ್ವಹಿಸಲಿದ್ದಾರೆ. 2019ರ ಜನವರಿ 18ರಂದು ನ್ಯಾ. ಸಂಜೀವ್ ಖನ್ನಾ ಅವರನ್ನು ದೆಹಲಿ ಹೈಕೋರ್ಟ್‌ನಿಂದ ಸುಪ್ರೀಂ ಕೋರ್ಟ್ ಹುದ್ದೆಗೆ ನೇಮಿಸಲಾಗಿತ್ತು. ಇದನ್ನೂ ಓದಿ: ಬಿಹಾರ, ಆಂಧ್ರಕ್ಕೆ ಬಂಪರ್ ಗಿಫ್ಟ್ – 6,798 ಕೋಟಿ ಮೊತ್ತದ 2 ರೈಲ್ವೇ ಯೋಜನೆಗಳಿಗೆ ಕೇಂದ್ರ ಕ್ಯಾಬಿನೆಟ್ ಅಸ್ತು
2022ರ ನವೆಂಬರ್ 8ರಂದು ಸಿಜೆಐ ಉದಯ್ ಉಮೇಶ್ ಲಲಿತ್ (UU Lalit) ಅವರು ನಿವೃತ್ತಿ ಹೊಂದಿದ ಬಳಿಕ ಚಂದ್ರಚೂಡ್ ಸುಪ್ರೀಂ ಕೋರ್ಟ್‌ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಯುಯು ಲಲಿತ್ ಅವರಿಗೂ ಮುನ್ನ ಎನ್.ವಿ.ರಮಣ (NV Ramana) ಅವರು 48ನೇ ಸಿಜೆಐ ಆಗಿ ಅಧಿಕಾರ ನಿರ್ವಹಿಸಿದ್ದರು. ಇದನ್ನೂ ಓದಿ: ಮಹಾ ಚುನಾವಣೆ: ಅಜಿತ್ ಪವಾರ್ ಬಣಕ್ಕೆ ಸಿಕ್ತು ಗಡಿಯಾರ ಚಿಹ್ನೆ – ಸುಪ್ರೀಂ ಕೋರ್ಟ್ ಅನುಮತಿ
ನವದೆಹಲಿ: ಸುಪ್ರೀಂ ಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ (DY Chandrachud) ಅವರು, ಮುಂದಿನ ಸಿಜೆಐ (CJI) ಆಗಿ ಅಧಿಕಾರ ವಹಿಸಿಕೊಳ್ಳಲು ನ್ಯಾಯಮೂರ್ತಿ ಸಂಜೀವ್ ಖನ್ನಾ (Sanjiv Khanna) ಅವರ ಹೆಸರು ಶಿಫಾರಸು ಮಾಡಿದ್ದಾರೆ.
ಮುಂದಿನ ನವೆಂಬರ್ 11ರಂದು ಸಿಜೆಐ ಹುದ್ದೆಯಿಂದ ಚಂದ್ರಚೂಡ್ ನಿವೃತ್ತಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಮೆಮೊರಾಂಡಮ್ ಆಫ್ ಪ್ರೊಸೀಜರ್ ಪ್ರಕಾರ, ಮುಂದಿನ ಶಿಫಾರಸು ಕಳುಹಿಸುವಂತೆ ಕೇಂದ್ರ ಸರ್ಕಾರ (Central Government) ಕಳೆದ ಶುಕ್ರವಾರ ಚಂದ್ರಚೂಡ್ ಅವರಿಗೆ ಪತ್ರ ಬರೆದಿತ್ತು. ಇದಕ್ಕೆ ಪ್ರತಿಕ್ರಿಯಿಸಿ ಪತ್ರ ಬರೆದಿರುವ ಚಂದ್ರಚೂಡ್ ಅವರು ತಮ್ಮ ಉತ್ತರಾಧಿಕಾರಿಯಾಗಿ ಸಂಜೀವ್ ಖನ್ನಾ ಅವರ ಹೆಸರನ್ನ ಶಿಫಾರಸು ಮಾಡಿದ್ದಾರೆ. ಸರ್ಕಾರದ ಅನುಮೋದನೆ ನಂತರ ನ್ಯಾ. ಸಂಜೀವ್ ಖನ್ನಾ 51ನೇ ಸಿಜೆಐಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಚಂದ್ರಚೂಡ್ ಹಿನ್ನೆಲೆ ಏನು?
ಎಲ್‌ಎಲ್‌ಎಂ ಪೂರ್ಣಗೊಳಿಸಿದ ನ್ಯಾ. ಚಂದ್ರಚೂಡ್ ಅವರು ಡಾಕ್ಟರ್ ಇನ್ ಜುಡಿಷಿಯಲ್ ಸೈನ್ಸಸ್ ಪದವಿಯನ್ನು ಅಮೆರಿಕದ ಹಾರ್ವರ್ಡ್ ಕಾನೂನು ಶಾಲೆಯಿಂದ ಪಡೆದಿದ್ದಾರೆ. ಇದಕ್ಕೂ ಮುನ್ನ ಅವರು ದೆಹಲಿಯ ಸೇಂಟ್ ಸ್ಟೀಫನ್ಸ್ ಕಾಲೇಜಿನಿಂದ ಅರ್ಥಶಾಸ್ತ್ರದಲ್ಲಿ ಬಿಎ ಪದವಿ ಪಡೆದಿದ್ದರು. ದೆಹಲಿ ವಿಶ್ವವಿದ್ಯಾಲಯದ ಕ್ಯಾಂಪಸ್ ಲಾ ಸೆಂಟರ್‌ನಿಂದ ಎಲ್‌ಎಲ್‌ಬಿ ಪದವಿ ಪಡೆದಿದ್ದರು. ಸುಪ್ರೀಂ ಕೋರ್ಟ್ ಮತ್ತು ಬಾಂಬೆ ಹೈಕೋರ್ಟ್‌ನಲ್ಲಿ ವಕೀಲರಾಗಿ ಪ್ರಾಕ್ಟೀಸ್ ಮಾಡಿದ್ದ ನ್ಯಾ. ಚಂದ್ರಚೂಡ್ ಅವರನ್ನು ಬಾಂಬೆ ಹೈಕೋರ್ಟ್ 1998ರ ಜೂನ್‌ನಲ್ಲಿ ಹಿರಿಯ ವಕೀಲರಾಗಿ ಪದೋನ್ನತಿ ನೀಡಿತ್ತು. ಇದನ್ನೂ ಓದಿ: 2025-26ರ ಹಿಂಗಾರು ಬೆಳೆಗಳ ಬೆಂಬಲ ಬೆಲೆ ಹೆಚ್ಚಳ – ಎಷ್ಟು ಏರಿಕೆಯಾಗಿದೆ?
2000 ಇಸವಿಯಲ್ಲಿ ಬಾಂಬೆ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕವಾಗುವುದಕ್ಕೂ ಮೊದಲು 1998ರಿಂದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ಅವರು ಕೆಲಸ ಮಾಡಿದ್ದರು. 2013ರ ಅಕ್ಟೋಬರ್ 31ರಂದು ನ್ಯಾ. ಚಂದ್ರಚೂಡ್ ಅವರನ್ನು ಅಲಾಹಾಬಾದ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಿತ್ತು. 2016ರ ಮೇ 13ರಂದು ನ್ಯಾ. ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪದೋನ್ನತಿ ಪಡೆದರು. ನಂತರ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ 2 ವರ್ಷ ಅಧಿಕಾರ ಪೂರೈಸಿದ ಸಾಧನೆ ಇವರದ್ದಾಗಲಿದೆ. ಇದನ್ನೂ ಓದಿ: BMW i7 ಇವಿ ಕಾರಿಗೆ ನಿಂಬೆಹಣ್ಣು, ಮೆಣಸಿನಕಾಯಿ ಕಟ್ಟಿ ಪೂಜೆ ಸಲ್ಲಿಸಿದ ಜರ್ಮನ್ ರಾಯಭಾರಿ
ನವದೆಹಲಿ: ಮಣಿಪುರದಲ್ಲಿ ನಡೆದ ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆಗೆ ನಿವೃತ್ತ ಮಹಿಳಾ ನ್ಯಾಯಾಧೀಶರ ಸಮಿತಿಯನ್ನು ರಚಿಸಲು ಸುಪ್ರೀಂ ಕೋರ್ಟ್ (Supreme Court) ಸೋಮವಾರ ಚಿಂತನೆ ನಡೆಸಿದೆ.
ಪ್ರಕರಣದ ವಿಶೇಷ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ (DY Chandrachud) ನೇತೃತ್ವದ ತ್ರಿ ಸದಸ್ಯ ಪೀಠ, ಈವರೆಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ತ್ರಿಶೂಲ ಏನು ಮಾಡುತ್ತಿದೆ? – ಯೋಗಿ ಆದಿತ್ಯನಾಥ್ ಪ್ರಶ್ನೆ
ವಾದ ಪ್ರತಿವಾದ ಆಲಿಸಿದ ಬಳಿಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ CJI ಚಂದ್ರಚೂಡ್, ನಮ್ಮ ಬಳಿ ಎರಡು ಆಯ್ಕೆಗಳಿವೆ. ಮೊದಲನೇಯದಾಗಿ ನಾವು ಓರ್ವ ಮಹಿಳಾ, ಓರ್ವ ಪುರುಷ ನ್ಯಾಯಧೀಶರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಬಹುದು, ವಾಸ್ತವಾಂಶ ತಿಳಿಯಲು ನಾವು ಸಮಿತಿ ರಚನೆ ಮಾಡಬೇಕಾಗುತ್ತದೆ. ಇನ್ನು 2ನೇ ಆಯ್ಕೆ ಸರ್ಕಾರ ಇಲ್ಲಿಯವರೆಗೂ ಏನು ಮಾಡಿದೆ? ಅನ್ನೋದರ ಮೇಲೆ ನಿರ್ಧಾರವಾಗುತ್ತೆ. ಈವರೆಗೂ ಸರ್ಕಾರ ತೆಗೆದುಕೊಂಡ ಕ್ರಮಗಳು ತೃಪ್ತಿಕರವಾಗಿದ್ದರೇ ನಾವು ಮಧ್ಯಪ್ರವೇಶ ಮಾಡದೇ ಇರುವುದು. ಇದನ್ನೂ ಓದಿ: ಉಗ್ರ ಅಫ್ಸರ್ ಪಾಷಾ ಮಂಗಳೂರು ಸ್ಫೋಟದ ಮಾಸ್ಟರ್ ಮೈಂಡ್ – ಶಾರೀಕ್‌ಗೆ ಜೈಲಿನಲ್ಲೇ ತರಬೇತಿ
ಈ ಹಿನ್ನೆಲೆಯಲ್ಲಿ ನಮಗೆ ವಸ್ತುನಿಷ್ಠ ವರದಿಬೇಕು. ಈವರೆಗೂ 6,000 ಎಫ್‌ಐಆರ್ ವಿವರಗಳನ್ನ ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ಅಧಿಕಾರಿಗಳು ಈ ಬಗ್ಗೆ ಏನು ಕ್ರಮ ತೆಗೆದುಕೊಂಡಿದ್ದಾರೆ ಅನ್ನೋ ಮಾಹಿಯೂ ಬೇಕು. ದಾಖಲಾಗಿರುವ 6,000 FIRಗಳ ವಿಭಜನೆ ಮಾಡಬೇಕು. ಅದರಲ್ಲಿ ಎಷ್ಟು ಶೂನ್ಯ ಎಫ್‌ಐಆರ್ ದಾಖಲಾಗಿವೆ? ಎಷ್ಟು ಜನರ ಬಂಧನವಾಗಿದೆ? ಎಷ್ಟು ಮಂದಿ ನ್ಯಾಯಾಂಗ ಬಂಧನದಲ್ಲಿದ್ದಾರೆ? ಎಷ್ಟು ಮಂದಿ 156(3), ಎಷ್ಟು ಸೆಕ್ಷನ್ 164 ಹೇಳಿಕೆಗಳನ್ನ ದಾಖಲಿಸಲಾಗಿದೆ? ಎಂಬ ಮಾಹಿತಿ ಬೇಕು ಎಂದು ಸಿಜೆಐ ಚಂದ್ರಚೂಡ್ ನಿರ್ದೇಶಿಸಿದ್ದಾರೆ.
ಎಲ್ಲ ಮಾಹಿತಿಯನ್ನ ಆಗಸ್ಟ್ 1ರಂದು ಕೋರ್ಟ್‌ಗೆ ನೀಡಬೇಕು ಎಂದು ಅವರು ಇದೇ ವೇಳೆ ಸೂಚಿಸಿದರು. ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ವಿವರಗಳನ್ನ ನೀಡಲು ಹೆಚ್ಚಿನ ಸಮಯವನ್ನ ಕೋರಿದರು. ಆದ್ರೆ ನ್ಯಾಯಾಲಯವು ನಿರಾಕರಿಸಿತು.
ಪ್ರಕರಣದ ಬಗ್ಗೆ ಎಸ್‌ಐಟಿ ರಚನೆ ಬಗ್ಗೆ ಕೇಂದ್ರ ಸರ್ಕಾರದ ಅಭಿಪ್ರಾಯವನ್ನ ಸುಪ್ರೀಂಕೋರ್ಟ್ ಕೇಳಿದೆ. ಎಸ್‌ಐಟಿ ರಚನೆ ಅಂತಿಮವಾದ್ರೆ ಯಾರನ್ನ ಸೇರ್ಪಡೆ ಮಾಡಬಹುದು? ಒಳ್ಳೆಯ ಹೆಸರುಗಳಿದ್ದರೆ ತಿಳಿಸಿ, ನಾವು ಆ ಹೆಸರುಗಳನ್ನು ಪರಿಶೀಲಿಸಬೇಕು ಎಂದು ಪೀಠ ಹೇಳಿ, ವಿಚಾರಣೆಯನ್ನ ನಾಳೆ ಮಧ್ಯಾಹ್ನಕ್ಕೆ ಮುಂದೂಡಿತು.
ಮಣಿಪುರು ಘಟನೆ ಸಮರ್ಥಿಸಲು ಸಾಧ್ಯವಿಲ್ಲ:
ಪಶ್ಚಿಮ ಬಂಗಾಳ ಮತ್ತು ಛತ್ತೀಸ್‌ಗಢದಲ್ಲಿ ನಡೆದ ಮಹಿಳೆಯರ ಬೆತ್ತಲೆ ಮೆರವಣಿಗೆ ಮಣಿಪುರ ಘಟನೆಗೆ ಸಮರ್ಥಿಸಲು ಸಾಧ್ಯವಿಲ್ಲ ಎಂದು ಡಿ.ವೈ ಚಂದ್ರಚೂಡ್ ಹೇಳಿದ್ದಾರೆ. ವಿಚಾರಣೆ ವೇಳೆ ವಕೀಲ ಬಾನ್ಸುರಿ ಸ್ವರಾಜ್ ಅವರ ವಾದಕ್ಕೆ ಪ್ರತಿಕ್ರಿಯಿಸಿದ ಅವರು, ಮಣಿಪುರ ಘಟನೆಯ ಜೊತೆಗೆ ಇತರೆ ಘಟನೆಗಳ ಹೋಲಿಕೆ ಮಾಡುವುದು ಸರಿಯಲ್ಲ, ಪಶ್ಚಿಮ ಬಂಗಾಳ ಮತ್ತು ಛತ್ತೀಸ್‌ಗಢದಲ್ಲಿ ಗುಂಪುಗಳು ಮಹಿಳೆಯರನ್ನ ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಪ್ರಕರಣಗಳು ತನಿಖೆಯಾಗಬೇಕು ಎಂದರು.
ಪಶ್ಚಿಮ ಬಂಗಾಳ ಮತ್ತು ಇತರ ರಾಜ್ಯಗಳಲ್ಲಿಯೂ ಮಹಿಳೆಯರ ವಿರುದ್ಧದ ಅಪರಾಧಗಳು ನಡೆಯುತ್ತಿವೆ ಎಂಬುದನ್ನ ಒಪ್ಪಿಕೊಳ್ಳಲಾಗಿದೆ. ಆದ್ರೆ ಮಣಿಪುರದ ಪರಿಸ್ಥಿತಿ ವಿಭಿನ್ನವಾಗಿದೆ ಮತ್ತು ಅದನ್ನ ಇತರ ಘಟನೆಗಳಿಗೆ ಹೋಲಿಸುವ ಮೂಲಕ ಸಮರ್ಥಿಸಲು ಸಾಧ್ಯವಿಲ್ಲ ಎಂದು ಅವರು ಒತ್ತಿ ಹೇಳಿದರು.
ನವದೆಹಲಿ: ಕೇರಳ ಸ್ಟೋರಿ (Kerala Story) ಚಿತ್ರದ ಪ್ರದರ್ಶನಕ್ಕೆ ನಿಷೇಧ ಹೇರಿರುವ ಪಶ್ಚಿಮ ಬಂಗಾಳ (West Bengal) ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ (Supreme Court) ಗುರುವಾರ ತಡೆ ನೀಡಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ (CJI) ಡಿವೈ ಚಂದ್ರಚೂಡ್ (DY Chandrachud), ನ್ಯಾಯಮೂರ್ತಿ ಪಿ.ಎಸ್ ನರಸಿಂಹ ಮತ್ತು ಜೆಬಿ ಪಾರ್ದಿವಾಲಾ ಅವರಿದ್ದ ಪೀಠವು ಈ ಆದೇಶ ನೀಡಿದೆ. ಚಿತ್ರಮಂದಿರಗಳಿಗೆ ಭದ್ರತೆ ಒದಗಿಸುವಂತೆ ತಮಿಳುನಾಡು (Tamil Nadu) ರಾಜ್ಯಕ್ಕೆ ಸೂಚಿಸಿದೆ. ವಿಚಾರಣೆ ನಡೆಸುವಾಗ ಪ್ರತಿ ಚಿತ್ರಮಂದಿರಕ್ಕೆ ಸಾಕಷ್ಟು ಭದ್ರತೆಯನ್ನು ಒದಗಿಸಬೇಕು. ಅಲ್ಲದೆ ಚಲನಚಿತ್ರ ನೋಡುವವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯವಾದ ವ್ಯವಸ್ಥೆಯನ್ನು ಮಾಡಬೇಕೆಂದು ನ್ಯಾಯಾಲಯ ನಿರ್ದೇಶಿಸಿದೆ. ಇದನ್ನೂ ಓದಿ: ಜಲ್ಲಿಕಟ್ಟುಗೆ ಸುಪ್ರೀಂ ಅನುಮತಿ – ಕಂಬಳಕ್ಕೂ ಗ್ರೀನ್ ಸಿಗ್ನಲ್
ಚಲನಚಿತ್ರವು ಘಟನೆಗಳ ಕಾಲ್ಪನಿಕ ಆವೃತ್ತಿಯಾಗಿದೆ. 32 ಸಾವಿರ ಮಹಿಳೆಯರ ಮತಾಂತರದ ಅಂಕಿಅಂಶವನ್ನು ಖಚಿತಪಡಿಸಲು ಯಾವುದೇ ಅಧಿಕೃತ ದತ್ತಾಂಶಗಳಿಲ್ಲ ಎಂದು ಚಿತ್ರದ ವಿರುದ್ಧ ವಾದಿಸಲಾಗಿದೆ. ಇದನ್ನು ಸ್ಪಷ್ಟವಾಗಿ ಹೇಳುವ ಅಥವಾ ನಿರಾಕರಣೆಯ ಸ್ಪಷ್ಟತೆಯನ್ನು ಖಚಿತಪಡಿಸಬೇಕು ಎಂದು ನಿರ್ಮಾಪಕರಿಗೆ ನಿರ್ದೇಶನ ನೀಡಿದೆ.
ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (CBFC) ಪ್ರಮಾಣೀಕರಣಕ್ಕೆ ಸಂಬಂಧಿಸಿದ ಅರ್ಜಿಯನ್ನು ನ್ಯಾಯಾಲಯದ ಬೇಸಿಗೆ ರಜೆಯ ನಂತರ ವಿಚಾರಣೆ ನಡೆಸಲಿದೆ. ಅದಕ್ಕಾಗಿ ನ್ಯಾಯಾಲಯವು ಮೊದಲು ಚಲನಚಿತ್ರವನ್ನು ನೋಡಬೇಕಾಗುತ್ತದೆ ಎಂದು ಆದೇಶದಲ್ಲಿ ಹೇಳಿದೆ.
ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಮೇ 8 ರಂದು ಪಶ್ಚಿಮ ಬಂಗಾಳ ಸಿನಿಮಾಗಳ ನಿಯಂತ್ರಣ ಕಾಯಿದೆಯ ಸೆಕ್ಷನ್ 4 ಹಾಗೂ ಸೆಕ್ಷನ್ 6 (1) ರ ಅಡಿಯಲ್ಲಿ ರಾಜ್ಯದ ಶಾಂತಿ ಕಾಪಾಡುವ ಕಾರಣ ನೀಡಿ ಚಿತ್ರ ಪ್ರದರ್ಶನಕ್ಕೆ ನಿಷೇಧ ಹೇರಿತ್ತು. ಅಲ್ಲದೆ ತಮಿಳುನಾಡು ಸರ್ಕಾರ ಚಿತ್ರ ನಿಷೇಧಕ್ಕೆ ತಯಾರಿ ನಡೆಸಿತ್ತು. ಈ ಎರಡು ಸರ್ಕಾರಗಳ ನಿರ್ಧಾರವನ್ನು ಪ್ರಶ್ನಿಸಿ ಚಿತ್ರದ ನಿರ್ಮಾಪಕರು ಸುಪ್ರೀಂಗೆ ಮನವಿ ಸಲ್ಲಿಸಿದ್ದರು. ಅಲ್ಲದೆ ಮೂಲಭೂತ ಹಕ್ಕಾದ ವಾಕ್ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ನಿರ್ಧಾರ ಇದಾಗಿದೆ. ಈ ನಿರ್ಧಾರದಿಂದಾಗಿ ಚಿತ್ರದ ಹಣ ಗಳಿಕೆಯಲ್ಲಿ ಕುಸಿತ ಕಂಡಿದೆ. ಚಿತ್ರವನ್ನು ಪೈರಸಿ ಮಾಡಲು ಇದು ಕಾರಣವಾಗುತ್ತಿದೆ ಎಂದು ಆರೋಪಿಸಿದ್ದರು.
ಮೇ 2 ರಂದು ಕೇರಳ ಹೈಕೋರ್ಟ್ ಇಂತಹ ಸಿನಿಮಾಗಳ ವಿರುದ್ಧದ ಅರ್ಜಿಗಳು ಅನಗತ್ಯ ಪ್ರಚಾರವನ್ನು ನೀಡುತ್ತವೆ ಎಂದು ಹೇಳಿತ್ತು. ಸಿನಿಮಾವನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಮದ್ರಾಸ್ ಹೈಕೋರ್ಟ್ ಮೇ 4ರಂದು ತಿರಸ್ಕರಿಸಿತ್ತು. ಬಳಿಕ ಅಗತ್ಯ ಮೂಲಭೂತ ಹಕ್ಕಿಗೆ ಧಕ್ಕೆಯಾಗುತ್ತಿದೆ ಎಂದು ನಿರ್ಮಾಪಕರು ಮನವಿ ಮಾಡಿಕೊಂಡ ನಂತರ ಸುಪ್ರೀಂ ವಿಚಾರಣೆಗೆ ಒಪ್ಪಿಕೊಂಡಿತ್ತು. ಇದನ್ನೂ ಓದಿ: ಮಾಡೆಲ್ ಹೇರ್‌ಸ್ಟೈಲ್ ಹಾಳು ಮಾಡಿದ್ದಕ್ಕೆ 2 ಕೋಟಿ ಪರಿಹಾರ – ಆದೇಶಕ್ಕೆ ಸುಪ್ರೀಂ ತಡೆ
ನವದೆಹಲಿ: ಅದಾನಿ ಸಮೂಹ ಸಂಸ್ಥೆಗಳ (Adani Group of companies) ವಿರುದ್ಧದ ಹಿಂಡನ್‍ಬರ್ಗ್ ಸಂಶೋಧನಾ ವರದಿಯಲ್ಲಿನ (Hindenburg Research report) ಆರೋಪಗಳ ಕುರಿತಾದ ತನಿಖೆಯ ಸ್ಥಿತಿಗತಿಯ ವರದಿಯನ್ನು ಆಗಸ್ಟ್ 14 ರಂದು ನೀಡುವಂತೆ ಸೆಬಿಗೆ (SEBI) ಸುಪ್ರೀಂ ಕೋರ್ಟ್ (Supreme Court) ಬುಧವಾರ ಸೂಚಿಸಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ (CJI) ಡಿವೈ ಚಂದ್ರಚೂಡ್ (DY Chandrachud), ನ್ಯಾಯಮೂರ್ತಿಗಳಾದ ಪಿಎಸ್ ನರಸಿಂಹ ಮತ್ತು ಜೆಬಿ ಪರ್ದಿವಾಲಾ ಅವರ ಪೀಠವು ಈ ಆದೇಶವನ್ನು ನೀಡಿದೆ. ಆದೇಶ ವೇಳೆ ನ್ಯಾಯಾಲಯ ಸೆ.30ರ ವರೆಗೂ ತನಿಖೆಗೆ ಅವಕಾಶ ನೀಡಬಹುದು ಆದರೆ ನಿಗದಿಪಡಿಸಲಾದ ಅವಧಿಯಲ್ಲಿ ತನಿಖೆಯ ಪ್ರಗತಿಯನ್ನು ತಿಳಿಸಬೇಕು ಎಂದು ಸಿಜೆಐ ಸೂಚಿಸಿದರು. ಇದನ್ನೂ ಓದಿ: ಅದಾನಿ ಸಮೂಹ ವಿರುದ್ಧದ ಹಿಂಡೆನ್‍ಬರ್ಗ್ ವರದಿ ತನಿಖೆ – 6 ತಿಂಗಳ ಕಾಲಾವಕಾಶ ವಿಸ್ತರಣೆಗೆ ಸೆಬಿ ಮನವಿ
ಹಿಂಡನ್‍ಬರ್ಗ್ ವರದಿಯಲ್ಲಿ ಉಲ್ಲೇಖಿಸಲಾದ 12 ಸಂಶಯಾಸ್ಪದ ವಹಿವಾಟುಗಳ ತನಿಖೆಗೆ ಕನಿಷ್ಠ 15 ತಿಂಗಳ ತನಿಖೆ ಅಗತ್ಯವಿದೆ. ಆದರೆ ಆರು ತಿಂಗಳು ಅವಕಾಶ ವಿಸ್ತರಿಸಿದರೆ ತನಿಖೆ ಪೂರ್ಣಗೊಳಿಸುವುದಾಗಿ ಕಳೆದ ತಿಂಗಳು ಸೆಬಿ ಸಲ್ಲಿಸಿದ್ದ ಮನವಿಯಲ್ಲಿ ಹೇಳಿತ್ತು. ಅರ್ಜಿಯನ್ನು ವಿಚಾರಣೆ ನಡೆಸಿದ್ದ ಕೋರ್ಟ್ 6 ತಿಂಗಳ ಕಾಲಾವಕಾಶವನ್ನು ನೀಡಲು ನಿರಾಕರಿಸಿತ್ತು.
ನಿವೃತ್ತ ನ್ಯಾಯಮೂರ್ತಿ ಎಎಂ ಸಪ್ರೆ ನೇತೃತ್ವದ ಸಮಿತಿ ನೀಡಿರುವ ವರದಿಯನ್ನು ನ್ಯಾಯಾಲಯ ಸ್ವೀಕರಿಸಿದೆ. ಬೇಸಿಗೆಯ ರಜೆಯ ನಂತರ ಪ್ರಕರಣದ ವಿಚಾರಣೆಗೆ ಎತ್ತಿಕೊಳ್ಳಲಾಗುವುದು ಎಂದು ಕೋರ್ಟ್ ಹೇಳಿದೆ.
ಇಂದಿನ ವಿಚಾರಣೆ ವೇಳೆ ವಕೀಲ ಪ್ರಶಾಂತ್ ಭೂಷಣ್ ವಾದ ಮಂಡಿಸಿ, ಇದು ಕಂಪನಿಯನ್ನು ರಕ್ಷಿಸುವ ಸ್ಪಷ್ಟ ಪ್ರಯತ್ನವಾಗಿದೆ ಎಂದು ಸೆಬಿಯ ವಿರುದ್ಧ ಆರೋಪಿಸಿದರು.