Tag: clean chit

  • ನಾಯಿ ಕಚ್ಚಿದ ಕೇಸ್‌ – ನಟ ದರ್ಶನ್‌ಗೆ ಕ್ಲೀನ್‌ ಚಿಟ್‌, ಶೀಘ್ರವೇ ಚಾರ್ಜ್‌ಶೀಟ್‌

    ನಾಯಿ ಕಚ್ಚಿದ ಕೇಸ್‌ – ನಟ ದರ್ಶನ್‌ಗೆ ಕ್ಲೀನ್‌ ಚಿಟ್‌, ಶೀಘ್ರವೇ ಚಾರ್ಜ್‌ಶೀಟ್‌

    ಬೆಂಗಳೂರು: ಮಹಿಳೆಗೆ ನಟ ದರ್ಶನ್ ನಾಯಿ ಕಚ್ಚಿದ ಪ್ರಕರಣದಲ್ಲಿ (Dog Bite Case) ಸ್ಯಾಂಡಲ್‌ವುಡ್ ಸಾರಥಿಗೆ ಬಿಗ್ ರಿಲೀಫ್‌ ಸಿಗುವ ಸಾಧ್ಯತೆ ದಟ್ಟವಾಗಿದೆ.

    ಹೌದು. ಆರ್.ಆರ್ ನಗರ ಪೊಲೀಸರು ನಟ ದರ್ಶನ್‌ಗೆ (Actor Darshan) ಕ್ಲೀನ್ ಚಿಟ್ ಕೊಡಲು ಮುಂದಾಗಿದ್ದಾರೆ ಎನ್ನುತ್ತಿದೆ ಪೊಲೀಸ್ ಮೂಲಗಳು. ದರ್ಶನ್ ಮನೆಯ ನಾಯಿ ಕಳೆದ ಅಮಿತಾ ಜಿಂದಾಲ್ ಅವರಿಗೆ ಕಚ್ಚಿತ್ತು. ಈ ಸಂಬಂಧ ಮಹಿಳೆ ನಟ ದರ್ಶನ್ ಹಾಗೂ ಮನೆ ಕೆಲಸದವನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇದನ್ನೂ ಓದಿ: ಶೀಘ್ರ ಪೆಟ್ರೋಲ್-ಡೀಸೆಲ್ ದರ ಇಳಿಕೆಗೆ ಒಲವು ತೋರಿದ ಕೇಂದ್ರ

    ಪ್ರಕರಣದಲ್ಲಿ ಆರೋಪಿಗಳಾಗಿದ್ದ ದರ್ಶನ್ ಹಾಗೂ ಮನೆ ಕೆಲಸದವನಿಗೆ ನೋಟಿಸ್ ಕೊಟ್ಟು ವಿಚಾರಣೆ ಮಾಡಿ ಘಟನೆ ಬಗ್ಗೆ ಇಬ್ಬರ ಬಳಿ ಆರ್.ಆರ್ ನಗರ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದರು. ಈಗ ಚಾರ್ಜ್ ಶೀಟ್ (Chargesheet) ಸಲ್ಲಿಸಲು ಆರ್.ಆರ್ ನಗರ ಪೊಲೀಸರು ತಯಾರಿ ಮಾಡುತ್ತಿದ್ದಾರೆ. ಪ್ರಕರಣದಲ್ಲಿ ದರ್ಶನ್ ಪಾತ್ರ ಅಷ್ಟಾಗಿ ಕಂಡು ಬರದ ಹಿನ್ನೆಲೆಯಲ್ಲಿ ದರ್ಶನ್‌ ಹೆಸರು ಕೈಬಿಟ್ಟು ಚಾರ್ಜ್‌ಶೀಟ್‌ ಸಲ್ಲಿಸಲು ಪೊಲೀಸರು ಮುಂದಾಗಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.  ಇದನ್ನೂ ಓದಿ: Article 370 Verdict: ಸುಪ್ರೀಂ ಆದೇಶವನ್ನು ಗೌರವಯುತವಾಗಿ ಒಪ್ಪುವುದಿಲ್ಲ: ಪಿ ಚಿದಂಬರಂ

     

    ಕ್ಲೀನ್ ಚಿಟ್ ಯಾಕೆ?
    ಘಟನೆ ನಡೆದಾಗ ನಟ ದರ್ಶನ್ ಘಟನಾ ಸ್ಥಳದಲ್ಲಿ ಇರಲಿಲ್ಲ. ನಾಯಿ ದಾಳಿಯ ದಿನ ದರ್ಶನ್ ಹೊರ ರಾಜ್ಯದಲ್ಲಿ ಶೂಟಿಂಗ್‌ನಲ್ಲಿ (Shooting) ಭಾಗಿಯಾಗಿದ್ದರು. ದರ್ಶನ್‌ ಹೊರಗಡೆ ಇರುವುದನ್ನು ಟವರ್ ಲೋಕೇಷನ್ ಮೂಲಕ ಪೊಲೀಸರು ಖಾತ್ರಿ ಪಡಿಸಿಕೊಂಡಿದ್ದಾರೆ.

    ದರ್ಶನ್ ನಾಯಿ ನೋಡಿಕೊಳ್ಳಲು ಕೆಲಸದವರನ್ನು ನೇಮಕ ಮಾಡಿದ್ದರು. ಮಹಿಳೆ ದರ್ಶನ್ ವಿರುದ್ಧ ಮಾಡಿರುವ ಆರೋಪಗಳಿಗೆ ಸೂಕ್ತ ಸಾಕ್ಷ್ಯಗಳಿಲ್ಲ. ಕೆಲಸದ ವ್ಯಕ್ತಿ ಮಾಡಿರುವ ತಪ್ಪಿಗೆ  ಮಾಲೀಕನನ್ನು ಆರೋಪಿ ಮಾಡುವುದು ಸರಿಯಲ್ಲ ಎಂಬ ಕಾರಣಕ್ಕೆ ದರ್ಶನ್‌ ಹೆಸರು ಕೈಬಿಟ್ಟು ಚಾರ್ಜ್‌ಶೀಟ್‌ ಸಲ್ಲಿಸಲು ಪೊಲೀಸರು ಮುಂದಾಗಿದ್ದಾರೆ.

  • ಸಮೀರ್ ಮುಸ್ಲಿಂ ಅಲ್ಲ – ಜಾತಿ ಪರಿಶೀಲನಾ ಸಮಿತಿ ಕ್ಲೀನ್‌ ಚಿಟ್

    ಸಮೀರ್ ಮುಸ್ಲಿಂ ಅಲ್ಲ – ಜಾತಿ ಪರಿಶೀಲನಾ ಸಮಿತಿ ಕ್ಲೀನ್‌ ಚಿಟ್

    ಮುಂಬೈ: ನಕಲಿ ಜಾತಿ ಪ್ರಮಾಣ ಪತ್ರ ಬಳಸಿ ಸರ್ಕಾರಿ ನೌಕರಿ ಪಡೆದಿರುವುದಾಗಿ ಆರೋಪ ಹೊತ್ತಿದ್ದ ಮಾಜಿ ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೆಡೆಗೆ ಜಾತಿ ಪರಿಶೀಲನಾ ಸಮಿತಿ ಕ್ಲೀನ್‌ ಚಿಟ್ ನೀಡಿದೆ.

    ಸಮೀರ್ ವಾಂಖೆಡೆ ಹುಟ್ಟಿನಿಂದ ಮುಸ್ಲಿಂ ಅಲ್ಲ. ಅವರು ಮಹಾರ್-37 ಪರಿಶಿಷ್ಟ ಜಾತಿಗೆ ಸೇರಿದವರು. ಸಮೀರ್ ವಾಂಖೆಡೆ ಹಾಗೂ ಅವರ ತಂದೆ ದ್ಯಾನೇಶ್ ವಾಂಖೆಡೆ ಹಿಂದೂ ಧರ್ಮವನ್ನು ತ್ಯಜಿಸಿ ಮುಸ್ಲಿಂ ಧರ್ಮವನ್ನು ಸ್ವೀಕರಿಸಿಲ್ಲ ಎಂದು ಸಮಿತಿ ತೀರ್ಮಾನಿಸಿದೆ. ಇದನ್ನೂ ಓದಿ: ಸ್ವಾವಲಂಬಿ ಭಾರತ ಕಟ್ಟಲು ಕೈಜೋಡಿಸಿ: ರಾಜ್ಯಪಾಲರ ಮನವಿ

    ಮಹಾರಾಷ್ಟ್ರದ ಮಾಜಿ ಕ್ಯಾಬಿನೆಟ್ ಸಚಿವ ಮತ್ತು ಎನ್‌ಸಿಪಿ ನಾಯಕ ನವಾಬ್ ಮಲಿಕ್ ಸಮೀರ್ ಅವರು ನಕಲಿ ಜಾತಿ ಪ್ರಮಾಣ ಪತ್ರ ಬಳಸಿರುವುದಾಗಿ ಆರೋಪಿಸಿದ್ದರು. ಬಳಿಕ ರಾಜಕೀಯ ಮುಖಂಡರಾದ ಮನೋಜ್ ಸಂಸಾರೆ, ಅಶೋಕ್ ಕಾಂಬ್ಳೆ ಹಾಗೂ ಸಂಜಯ್ ಕಾಂಬ್ಳೆ ಅವರು ಸಮೀರ್ ವಾಂಖೆಡೆ ವಿರುದ್ಧ ದೂರು ನೀಡಿದ್ದರು. ಇದೀಗ ಈ ಆರೋಪ ಆಧಾರ ರಹಿತ ಎಂದು ಜಾತಿ ಪರಿಶೀಲನಾ ಸಮಿತಿ ಹೇಳಿದೆ. ಇದನ್ನೂ ಓದಿ: ಲಂಚ-ಮಂಚ ಹೇಳಿಕೆಗೆ ಕೌಂಟರ್ ಕೊಟ್ಟ ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಫೇಸ್‌ಬುಕ್ ಪೋಸ್ಟ್‌ನಲ್ಲಿ ಸುದೀರ್ಘ ಉತ್ತರ

    ಸಮೀರ್ ವಾಂಖೆಡೆಗೆ ಕ್ಲೀನ್‌ ಚಿಟ್ ಲಭಿಸುತ್ತಿದ್ದಂತೆಯೇ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸತ್ಯಮೇವ ಜಯತೆ ಎಂದು ಬರೆದುಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಪ್ರಕರಣ – ಕೋರ್ಟ್‌ಗೆ ಬಿ ರಿಪೋರ್ಟ್‌ ಸಲ್ಲಿಕೆ; ಈಶ್ವರಪ್ಪಗೆ ಕ್ಲೀನ್‌ ಚಿಟ್‌

    ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಪ್ರಕರಣ – ಕೋರ್ಟ್‌ಗೆ ಬಿ ರಿಪೋರ್ಟ್‌ ಸಲ್ಲಿಕೆ; ಈಶ್ವರಪ್ಪಗೆ ಕ್ಲೀನ್‌ ಚಿಟ್‌

    ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣದ ತನಿಖೆ ನಡೆಸಿದ್ದ ಉಡುಪಿ ಎಸ್‌ಪಿ, ಮಾಜಿ ಸಚಿವ ಈಶ್ವರಪ್ಪಗೆ ಕ್ಲೀನ್ ಚಿಟ್ ನೀಡಿದ್ದಾರೆ.

    ಉಡುಪಿ ಎಸ್‌ಪಿ ವಿಷ್ಣುವರ್ಧನ್‌ ಅವರು ಜನಪ್ರತಿನಿಧಿಗಳ ಕೋರ್ಟ್‌ಗೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಪ್ರಕರಣ ಸಂಬಂಧ ಯಾವುದೇ ಸಾಕ್ಷ್ಯಾಧಾರ ಲಭ್ಯವಾಗಿಲ್ಲ. ಅಸಲಿಗೆ ಈಶ್ವರಪ್ಪ-ಸಂತೋಷ್ ಮುಖಾಮುಖಿ ಭೇಟಿಯಾಗಿರಲಿಲ್ಲ ಎಂದು ಬಿ ರಿಪೋರ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಟೋಲ್‍ಗೇಟ್‍ಗೆ ಡಿಕ್ಕಿಯಾಗಿ ಪಲ್ಟಿಯಾದ ಅಂಬುಲೆನ್ಸ್- ಮೂವರು ಸಾವು, ಓರ್ವ ಗಂಭೀರ

    ಉದ್ದೇಶಪೂರ್ವಕವಾಗಿಯೇ ಸಚಿವ ಈಶ್ವರಪ್ಪ ಮನೆಯ ಬಳಿ ಸಂತೋಷ್ ಪಾಟೀಲ್ ಹೋಗಿ ನಿಲ್ತಿದ್ರು. ಹಣ ಕೇಳಿರುವುದಕ್ಕೆ ಯಾವುದೇ ಸಾಕ್ಷ್ಯಾಧಾರ ಲಭ್ಯ ಆಗಿಲ್ಲ. ವಾಟ್ಸಪ್ ಚಾಟ್, ಆಡಿಯೋ ಸೇರಿ ಯಾವುದೇ ತಾಂತ್ರಿಕ ದಾಖಲೆಗಳು ಪತ್ತೆ ಆಗಿಲ್ಲ. ಕಾರ್ಯಕರ್ತರು ಯಾವ ರೀತಿ ಬಂದು ಹೋಗ್ತಿದ್ರೋ ಅದೇ ರೀತಿ ಸಂತೋಷ್ ಪಾಟೀಲ್ ಬಂದು ಹೋಗ್ತಿದ್ರು ಎಂದು ಬಿ ರಿಪೋರ್ಟ್‌ನಲ್ಲಿ ವರದಿ ಮಾಡಿದ್ದಾರೆ.

    ಈಶ್ವರಪ್ಪ ವಿರುದ್ಧ ಲಂಚದ ಹಣಕ್ಕೆ ಬೇಡಿಕೆಯಿಟ್ಟ ಆರೋಪ ಮಾಡಿ ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಶಿವಮೊಗ್ಗದ ಲಾಡ್ಜ್‌ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಂತರ ಈಶ್ವರಪ್ಪ ತಲೆದಂಡ ಕೂಡ ಆಗಿತ್ತು. ಇತ್ತೀಚಿಗಷ್ಟೇ ರಾಜ್ಯಪಾಲರಿಗೆ ಪತ್ರ ಬರೆದಿದ್ದ ಸಂತೋಷ್ ಪಾಟೀಲ್ ಪತ್ನಿ, ಈಶ್ವರಪ್ಪ ಪ್ರಭಾವದ ಕಾರಣ ಈ ಪ್ರಕರಣವನ್ನು ಮುಚ್ಚಿ ಹಾಕಲು ಪೊಲೀಸರು ಯತ್ನಿಸುತ್ತಿದ್ದಾರೆ. ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ಮನವಿ ಮಾಡಿಕೊಂಡಿದ್ದರು. ಇದನ್ನೂ ಓದಿ: ಹೆಚ್‍ಡಿಕೆ ಆಯಸ್ಸು ಗಟ್ಟಿಯಾಗಿದೆ, ಬಂದೂಕಿನಿಂದ ಹೊಡೆದರೂ ಸಾಯಲ್ಲ: ಸಿಎಂ ಇಬ್ರಾಹಿಂ

    Live Tv
    [brid partner=56869869 player=32851 video=960834 autoplay=true]

  • ಡ್ರಗ್ಸ್ ಪ್ರಕರಣ – ನಿರೂಪಕಿ ಅನುಶ್ರೀಗೆ ಕ್ಲೀನ್ ಚಿಟ್ ಸಾಧ್ಯತೆ

    ಡ್ರಗ್ಸ್ ಪ್ರಕರಣ – ನಿರೂಪಕಿ ಅನುಶ್ರೀಗೆ ಕ್ಲೀನ್ ಚಿಟ್ ಸಾಧ್ಯತೆ

    ಮಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಎದುರಿಸಿದ್ದ ಆ್ಯಂಕರ್ ಕಂ ನಟಿ ಅನುಶ್ರೀಗೆ ಕ್ಲೀನ್ ಚಿಟ್ ನೀಡುವ ಸಾಧ್ಯತೆಗಳು ಹೆಚ್ಚಾಗಿವೆ. ಈ ಮೂಲಕ ಅನುಶ್ರೀ ಬಗ್ಗೆ ಸಾಕಷ್ಟು ಅರೋಪ ಇದ್ದರೂ ಪೊಲೀಸರು ಅಸಹಾಯಕರಾದ್ರಾ ಎಂಬ ಅನುಮಾನ ಮೂಡಿದೆ.

    ಈ ಹಿಂದೆ ಅನುಶ್ರೀ ಮಾಜಿ ಮುಖ್ಯಮಂತ್ರಿ, ಮಗ ಹಾಗೂ ಕೆಲ ಪ್ರಭಾವಿ ರಾಜಕರಾಣಿಗಳ ನಂಟಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಬೆನ್ನಲ್ಲೇ ಇದೀಗ ಅನುಶ್ರೀಗೆ ಕ್ಲೀನ್ ಚಿಟ್ ನೀಡುವ ಸಾಧ್ಯತೆಗಳಿವೆ. ಹೀಗಾಗಿ ಇದೀಗ ಪ್ರಭಾವಿ ವ್ಯಕ್ತಿಗಳ ಪ್ರಭಾವ ವರ್ಕೌಟ ಆಯ್ತಾ?, ಒತ್ತಡದಿಂದ ಅನುಶ್ರೀ ಬಚಾವ್ ಆದ್ರಾ ಎಂಬ ಪ್ರಶ್ನೆ ಎದ್ದಿದೆ.

    ಅನುಶ್ರೀಗೆ ಡ್ರಗ್ಸ್ ಟೆಸ್ಟ್ ಮಾಡಿಸಲು ಸಾಕಷ್ಟು ಆಧಾರ ಸಂಗ್ರಹ ಮಾಡಲಾಗಿತ್ತು. ಆದರೂ ಅನುಶ್ರೀಗೆ ಡ್ರಗ್ ಟೆಸ್ಟ್ ನಡಿಯೋದು ಡೌಟ್ ಎಂದು ಹೇಳಲಾಗುತ್ತಿದೆ. ಒಟ್ಟಿನಲ್ಲಿ ಅನುಶ್ರೀ ಪ್ರಕರಣದಲ್ಲಿ ಸರ್ಕಾರದ ಮೇಲೆ ಪ್ರಭಾವಿಗಳ ಒತ್ತಡ ಹೆಚ್ಚಾಯ್ತಾ ಎಂಬ ಶಂಕೆ ವ್ಯಕ್ತವಾಗುತ್ತಿದೆ.  ಇದನ್ನೂ ಓದಿ: ಕನ್ನಡಿಗರು ಕೊಟ್ಟ ಹೆಸರಿಗೆ ಧಕ್ಕೆ ಮಾಡಿಲ್ಲ, ಯಾವತ್ತೂ ಮಾಡಲ್ಲ: ಕಣ್ಣೀರಿಟ್ಟ ಅನುಶ್ರೀ

    ಪ್ರಕರಣದ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಅನುಶ್ರೀ ಅವರ ಮೊಬೈಲ್ ಕರೆಗಳ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ರಾಜ್ಯದ ಪ್ರಭಾವಿ ನಾಯಕರಿಗೆ ಕರೆ ಮಾಡಿರುವ ಮಾಹಿತಿ ಲಭ್ಯವಾಗಿದೆ ಎನ್ನಲಾಗಿತ್ತು. ಅಲ್ಲದೇ ವಿಚಾರಣೆ ಸಂದರ್ಭದಲ್ಲಿ ಸಿಸಿಬಿ ಪೊಲೀಸರು ಮೊಬೈಲ್ ಸಿಮ್ ಕಾರ್ಡ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಅನುಶ್ರೀ ಅವರಿಗೆ ನೋಟಿಸ್ ಬಂದ ದಿನ ಮತ್ತು ಮಾರನೇ ದಿನ ರಾಜ್ಯದ ಮೂವರು ಪ್ರಭಾವಿಗಳಿಗೆ ಕರೆ ಮಾಡಿದ್ದಾರೆ. ಮೂವರು ಪ್ರಭಾವಿಗಳಿಗೆ ಕರೆ ಮಾಡಿ ಹೆಚ್ಚು ಸಮಯ ಮಾತನಾಡಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಇದನ್ನೂ ಓದಿ: ಅನುಶ್ರೀ ಪ್ರಕರಣದ ಮಾಜಿ ಸಿಎಂ ಯಾರೆಂದು ಬಹಿರಂಗಪಡಿಸಿ- ಹೆಚ್‍ಡಿಕೆ ಗರಂ

    ಪ್ರಭಾವಿಗಳ ಮೊಬೈಲ್ ಸಂಖ್ಯೆ ನೋಡಿ ಪೊಲೀಸರಿಗೆ ಶಾಕ್ ಆಗಿದ್ದಾರೆ. ಅನುಶ್ರೀ ಕರೆ ಮಾಡಿದ್ದ ‘ಆ’ ಮೂವರು ಸಾಮಾನ್ಯರಲ್ಲ, ಮೂರು ದೊಡ್ಡ ಪಕ್ಷಗಳ ನಾಯಕರು ಎನ್ನಲಾಗಿದ್ದು, ಒಬ್ಬರು ರಾಜ್ಯದ ಅತಿ ದೊಡ್ಡ ರಾಜಕಾರಣಿ, ಮತ್ತೊಬ್ಬರು ಕರಾವಳಿಯ ಅತಿ ಪ್ರಭಾವಿ ನಾಯಕರು ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿತ್ತು. ಇದನ್ನೂ ಓದಿ: 14 ವರ್ಷದ ಹಿಂದೆ ಬಸ್ ಹತ್ಕೊಂಡು ಬಂದು ಬೆಂಗ್ಳೂರಲ್ಲಿ ನೆಲೆ ಕಂಡಿದ್ದೇನೆ: ಗಳಗಳನೇ ಅತ್ತ ಅನುಶ್ರೀ

  • ಮಹಮ್ಮದ್ ಶಮಿ ಮ್ಯಾಚ್ ಫಿಕ್ಸಿಂಗ್ ಪ್ರಕರಣ – ಕ್ಲೀನ್ ಚಿಟ್ ನೀಡಿದ ಬಿಸಿಸಿಐ

    ಮಹಮ್ಮದ್ ಶಮಿ ಮ್ಯಾಚ್ ಫಿಕ್ಸಿಂಗ್ ಪ್ರಕರಣ – ಕ್ಲೀನ್ ಚಿಟ್ ನೀಡಿದ ಬಿಸಿಸಿಐ

    ಮುಂಬೈ: ಟೀಂ ಇಂಡಿಯಾ ವೇಗಿ ಮಹಮ್ಮದ್ ಶಮಿ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪಕ್ಕೆ ಸಂಬಂಧಿಸಿದಂತೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಗುರುವಾರ ಕ್ಲೀನ್ ಚಿಟ್ ನೀಡಿದೆ.

    ಬಿಸಿಸಿಐ ನ ಭ್ರಷ್ಟಾಚಾರ ನಿಗ್ರಹ ಘಟಕ(ಎಸಿಯು)ಕ್ಕೆ ಶಮಿ ವಿರುದ್ಧದ ಪತ್ನಿ ಮಾಡಿರುವ ಆರೋಪದ ಬಗ್ಗೆ ತನಿಖೆ ನಡೆಸಲು ಆಡಳಿತಾಧಿಕಾರಿಗಳ ಸಮಿತಿ (ಸಿಒಎ) ಎಸಿಯು ಮುಖ್ಯಸ್ಥ ನೀರಜ್ ಕುಮಾರ್ ಅವರಿಗೆ ಸೂಚಿಸಿತ್ತು.

    ಕಳೆದ ಕೆಲ ದಿನಗಳ ಹಿಂದೆ ಬಿಡುಗಡೆಯಾಗಿದ್ದ  ಬಿಸಿಸಿಐ ವಾರ್ಷಿಕ ಆಟಗಾರರ ಪಟ್ಟಿಯಿಂದ ಶಮಿ ಅವರನ್ನು ಕೈ ಬಿಟ್ಟಿತ್ತು. ಪ್ರಸ್ತುತ ಬಿಸಿಸಿಐ ನಿಂದ ಕ್ಲೀನ್ ಚಿಟ್ ಪಡೆದಿರುವ ಶಮಿ ಗ್ರೇಡ್ `ಬಿ’ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ವಾರ್ಷಿಕ ಮೂರು ಕೋಟಿ ರೂ. ಸಂಭಾವನೆಯನ್ನು ಪಡೆಯಲಿದ್ದಾರೆ. ಅಲ್ಲದೇ ಏಪ್ರಿಲ್ 07 ರಿಂದ ಆರಂಭವಾಗುವ ಐಪಿಎಲ್ 11 ನೇ ಅವೃತ್ತಿಯಲ್ಲಿ ಆಡುವ ಅವಕಾಶವನ್ನು ಪಡೆದಿದ್ದಾರೆ.

    ಮಹಮ್ಮದ್ ಶಮಿ ವಿರುದ್ಧ ಪತ್ನಿ ಹಸೀನ್ ಜಹಾನ್ ಆರೋಪಗಳನ್ನು ಮಾಡಿದ ಬಳಿಕ ಕೌಟುಂಬಿಕ ದೌರ್ಜನ್ಯ ಕಾಯ್ದೆ ಅಡಿ ಎಫ್‍ಐಆರ್ ದಾಖಲಿಸಲಾಗಿತ್ತು. ಈ ವೇಳೆ ಬಿಸಿಸಿಐ ತನ್ನ ವಾರ್ಷಿಕ ಸದಸ್ಯರ ಪಟ್ಟಿಯಿಂದ ಶಮಿ ಅವರನ್ನು ಹೊರಗಿಟ್ಟಿತ್ತು. ಆದರೆ ಶಮಿ ಆರಂಭದಿಂದಲೂ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸುತ್ತ ಬಂದಿದ್ದರು.

    ಹಸೀನ್ ಅವರು ಶಮಿ ಅವರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದರು. ಪಾಕಿಸ್ತಾನ ಮೂಲದ ನಟಿ ಜೊತೆ ಶಮಿ ಸಂಪರ್ಕ ಹೊಂದಿದ್ದು, ಮಹಮ್ಮದ್ ಭಾಯ್ ಎಂಬುವರ ಮೂಲಕ ಹಣ ಪಡೆದಿದ್ದಾರೆ ಎಂದು ಆರೋಪಿಸಿದ್ದರು.

    ಪ್ರಸ್ತುತ ಎಸಿಯು ಮುಖ್ಯಸ್ಥ ನೀರಜ್ ಕುಮಾರ್ ಅವರು ಶಮಿ ಅವರ ವಿರುದ್ಧ ನಡೆಸಿದ ತನಿಖೆಯ ವರದಿಯನ್ನು ಬಿಸಿಸಿಐ ಗೆ ಸಲ್ಲಿಸಿದ್ದಾರೆ. ಈ ವರದಿಯಲ್ಲಿ ಪ್ರಕರಣದ ಕುರಿತು ಹೆಚ್ಚಿನ ವಿಚಾರಣೆಗಳು ಅಗತ್ಯವಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಲಾಗಿದೆ ಎನ್ನಲಾಗಿದ್ದು, ವರದಿಯ ಅಭಿಪ್ರಾಯದಂತೆ ಬಿಸಿಸಿಐ ಭ್ರಷ್ಟಾಚಾರ ನಿಗ್ರಹ ಸಂಹಿತೆ ಅಡಿ ಶಮಿ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರಲು ನಿರ್ಧರಿಸಿದೆ.

    ಇದಕ್ಕೂ ಮುನ್ನ ಮಹ್ಮಮದ್ ಶಮಿ ವಿರುದ್ಧ ಕೊಲ್ಕತ್ತ ಲಾಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಹಸೀನ್ ದೂರು ಕೂಡ ದಾಖಲಿಸಿದ್ದರು, ಅಲ್ಲದೇ ಪತಿ ಶಮಿಗೆ ಇಬ್ಬರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ಫೇಸ್‍ಬುಕ್ ನಲ್ಲಿ  ಪೋಸ್ಟ್ ಮಾಡಿದ್ದರು.

     

  • ಅಲ್ಪಸಂಖ್ಯಾತರಿಗೆ ಕ್ಲೀನ್ ಚಿಟ್ ಭಾಗ್ಯ- ಸಚಿವ ರಾಮಲಿಂಗಾರೆಡ್ಡಿ ಸಮರ್ಥನೆ ಕೊಟ್ಟಿದ್ದು ಹೀಗೆ

    ಅಲ್ಪಸಂಖ್ಯಾತರಿಗೆ ಕ್ಲೀನ್ ಚಿಟ್ ಭಾಗ್ಯ- ಸಚಿವ ರಾಮಲಿಂಗಾರೆಡ್ಡಿ ಸಮರ್ಥನೆ ಕೊಟ್ಟಿದ್ದು ಹೀಗೆ

    ಚಿಕ್ಕಬಳ್ಳಾಪುರ: ಕೋಮುಗಲಭೆ ಪ್ರಕರಣಗಳಲ್ಲಿ ಅಲ್ಪಸಂಖ್ಯಾತರಿಗೆ ಕ್ಲೀನ್ ಚಿಟ್ ನೀಡಿರುವ ಸರ್ಕಾರದ ಕ್ರಮವನ್ನು ಗೃಹಸಚಿವ ರಾಮಲಿಂಗಾರೆಡ್ಡಿ ಸಮರ್ಥಿಸಿಕೊಂಡಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ, ಕಾವೇರಿ, ವಿಚಾರದಲ್ಲಿ ರೈತರ ಮೇಲಿನ ಕೇಸ್ ಗಳನ್ನ ಹಿಂಪಡೆದಿದ್ದೀವಿ. ಟಿಪ್ಪು-ಜಯಂತಿ ವೇಳೆ ಹಲವಡೆ ಪರ ವಿರೋಧದ ಪ್ರತಿಭಟನೆಗಳು ನಡೆದಿವೆ. ಆಸ್ತಿ-ಪಾಸ್ತಿ ಹಾನಿ, ಕೊಲೆ ಯತ್ನ ಪ್ರಕರಣಗಳನ್ನು ನಾವು ಹಿಂಪಡೆಯುವುದಿಲ್ಲ. ಆಸ್ತಿ-ಪಾಸ್ತಿ ಹಾನಿ, ಕೊಲೆ ಯತ್ನ ಪ್ರಕರಣಗಳು ಇಲ್ಲದೆ ಇರುವವರ ಕೆಲ ಪ್ರಕರಣಗಳನ್ನ ನಾವು ಕೈಬಿಟ್ಟಿದ್ದೇವೆ ಅಂತ ಹೇಳಿದ್ರು. ಇದನ್ನೂ ಓದಿ: ಅಲ್ಪಸಂಖ್ಯಾತರಿಗೆ ಸಿಕ್ತು ಕ್ಲೀನ್‍ಚಿಟ್ ಭಾಗ್ಯ- ಸರ್ಕಾರದಿಂದಲೇ ಹಿಂದೂ-ಮುಸ್ಲಿಂ ಇಬ್ಭಾಗ ಕೆಲಸ

    ಯಡಿಯೂರಪ್ಪ ಈ ತರ ಎಷ್ಟು ಕೇಸ್ ಮಾಡಿದ್ದಾರೆ ಪಟ್ಟಿ ಕೊಡ್ತೀನಿ. ಉತ್ತರ ಪ್ರದೇಶದಲ್ಲಿ 20 ಸಾವಿರ ಕೇಸ್ ವಿತ್ ಡ್ರಾ ಮಾಡಿದ್ದಾರೆ. ಪಿಎಫ್‍ಐ, ಎಸ್ ಡಿಪಿಐ ಜೊತೆ ಕಾಂಗ್ರೆಸ್ ಹೊಂದಾಣಿಕೆ ಅಂತ ಆರೋಪ ವ್ಯಕ್ತವಾಗುತ್ತಿದೆ. ನಾವು ಯಾಕೆ ಹೊಂದಾಣಿಕೆ ಮಾಡಿಕೊಳ್ಳಬೇಕು. ಬಿಜೆಪಿಯವರೇ ದಕ್ಷಿಣ ಕನ್ನಡದಲ್ಲಿ ಹೊಂದಾಣಿಕೆ ಮಾಡಿಕೊಂಡಿದ್ದವರು ಅಂತ ಅವರು ತಿಳಿಸಿದ್ರು.

    ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯಕ್ಕೆ ಬಂದಾಗ ಬಂದ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಬಿಜೆಪಿಯವರು ಈ ಮಾತುಗಳನ್ನ ಬಿಟ್ಟು ಕೆಲಸ ಮಾಡೋದು ಕಲೀಬೇಕು. ಲೆಕ್ಕ ಕೇಳೋಕೆ ಅಮಿತ್ ಷಾ ಯಾರು? ಯಡಿಯೂರಪ್ಪ ಯಾರು? ಅಮಿತ್ ಶಾ ಸಂವಿಧಾನಾತ್ಮಕ ಹುದ್ದೆಯಲ್ಲಿ ಇದ್ದಾರಾ..? ಅವರಿಗೂ ಇದಕ್ಕೂ ಲೆಕ್ಕ ಕೇಳೋದಕ್ಕೂ ಸಂಬಂಧ ಇಲ್ಲ ಅಂದ್ರು.

    ಮೋದಿಯವರು ರಾಜ್ಯಕ್ಕೆ ಬಂದಾಗ ಬಂದ್ ಮಾಡುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಸರ್ಕಾರ ರೈತರ ಪರ ಸರ್ಕಾರವಾಗಿದೆ. ನಿನ್ನೆಯ ಬಂದ್ ಗೂ ನಮಗೂ ಯಾವುದೇ ಸಂಬಂಧವಿಲ್ಲ. ನಾನು ಮೋದಿ ಬಂದಾಗ ಬಂದ್ ಬೇಡ ಅಂತ ಹೇಳ್ತಿನಿ. ಸಂಘಟನೆಯವರು ನನ್ನ ಮಾತು ಕೇಳ್ತಾರಾ..? ಮಹದಾಯಿ ವಿಚಾರದಲ್ಲಿ ಅಮಿತ್ ಶಾ, ಮೋದಿ ಗಮನ ಸೆಳೆಯಲು ಬಂದ್ ಮಾಡಲಾಗುತ್ತಿದೆ. ಮಹದಾಯಿ ಬಗ್ಗೆ ಅಮಿತ್ ಶಾ ತುಟಿಕ್ ಪಿಟಿಕ್ ಅನ್ನಲಿಲ್ಲ. ಮೋದಿ ಮಹದಾಯಿ ವಿಚಾರದಲ್ಲಿ ಏನೂ ಮಾತೋಡೋದೆ ಇಲ್ಲ ಅಂತ ಕಿಡಿಕಾರಿದ್ರು.

  • ಅಲ್ಪಸಂಖ್ಯಾತರಿಗೆ ಸಿಕ್ತು ಕ್ಲೀನ್‍ಚಿಟ್ ಭಾಗ್ಯ- ಸರ್ಕಾರದಿಂದಲೇ ಹಿಂದೂ-ಮುಸ್ಲಿಂ ಇಬ್ಭಾಗ ಕೆಲಸ

    ಅಲ್ಪಸಂಖ್ಯಾತರಿಗೆ ಸಿಕ್ತು ಕ್ಲೀನ್‍ಚಿಟ್ ಭಾಗ್ಯ- ಸರ್ಕಾರದಿಂದಲೇ ಹಿಂದೂ-ಮುಸ್ಲಿಂ ಇಬ್ಭಾಗ ಕೆಲಸ

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಮತ್ತೆ ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗಿದೆ. ಸಿದ್ದರಾಮಯ್ಯ ಸರ್ಕಾರದಿಂದಲೇ ಹಿಂದೂ-ಮುಸ್ಲಿಂ ಇಬ್ಭಾಗ ಮಾಡುವ ಕೆಲಸ ನಡೆಯುತ್ತಿದೆ ಎಂಬ ಆರೋಪವೊಂದು ಇದೀಗ ಕೇಳಿ ಬಂದಿದೆ.

    ಕೋಮು ಗಲಭೆಗಳಲ್ಲಿ ಭಾಗಿಯಾದ ಅಲ್ಪಸಂಖ್ಯಾತರಿಗೆ ಕ್ಲೀನ್ ಚಿಟ್ ನೀಡಲು ಸಿದ್ದರಾಮಯ್ಯ ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ಅಭಿಯೋಜನೆಯಿಂದ ಕೇಸ್‍ಗಳನ್ನು ವಾಪಸ್ ಪಡೆಯಲು ಕೋರಿ ಪತ್ರ ಬರೆಯಲಾಗಿದೆ.

    5 ವರ್ಷಗಳಲ್ಲಿ 20 ಜಿಲ್ಲೆ, ಬೆಳಗಾವಿ ಮತ್ತು ಮಂಗಳೂರು ಕಮಿಷನರೇಟ್‍ಗಳಲ್ಲಿ ದಾಖಲಾಗಿರುವ ಪ್ರಕರಣವನ್ನು ಹಿಂಪಡೆಯಲು ರಾಜ್ಯ ಸರ್ಕಾರ ಅಭಿಯೋಜನೆಯನ್ನು ಕೋರಿದೆ. ಒಟ್ಟಿನಲ್ಲಿ ಕೋಮು ಭಾವನೆ ಬಿತ್ತಿದ್ದಾರೆ ಎಂದು ಸರ್ಕಾರ, ಕಲ್ಲಡ್ಕ ಪ್ರಭಾಕರ್ ಭಟ್ ಮೇಲೆ ಕೇಸ್ ಹಾಕುತ್ತೆ. ಆದ್ರೆ ಇತ್ತ ಕೋಮುಗಲಭೆಗಳಲ್ಲಿ ಭಾಗಿಯಾಗಿರೋ ಮುಸ್ಲಿಮರ ಮೇಲಿನ ಕೇಸ್ ವಾಪಸ್ ಪಡಿತಾರೆ ಅನ್ನೋ ಆರೋಪ ಕೇಳಿಬಂದಿದೆ.