Tag: Clinic

  • ನಕಲಿ ವೈದ್ಯರಿಗೆ ಶಾಕ್ ನೀಡಿದ ಆರೋಗ್ಯ ಇಲಾಖೆ ವೈದ್ಯಾಧಿಕಾರಿಗಳು

    ನಕಲಿ ವೈದ್ಯರಿಗೆ ಶಾಕ್ ನೀಡಿದ ಆರೋಗ್ಯ ಇಲಾಖೆ ವೈದ್ಯಾಧಿಕಾರಿಗಳು

    ಬೀದರ್: ಗಡಿ ಜಿಲ್ಲೆ ಬೀದರ್‌ನಲ್ಲಿ (Bidar) ನಕಲಿ ವೈದ್ಯರ (Fake Doctor) ಹಾವಳಿ ಹಿನ್ನೆಲೆಯಲ್ಲಿ ಇಂದು (ಬುಧವಾರ) ಕಮಲನಗರ ತಾಲೂಕಿನ ಒಟ್ಟು 6 ನಕಲಿ ಕ್ಲಿನಿಕ್‌ಗಳ (Clinic) ಮೇಲೆ ದಿಢೀರ್ ದಾಳಿ (Raid) ಮಾಡಿ ವೈದ್ಯಾಧಿಕಾರಿಗಳು ನಕಲಿ ವೈದ್ಯರಿಗೆ ಶಾಕ್ ನೀಡಿದ್ದಾರೆ.

    ನಕಲಿ ಕ್ಲಿನಿಕ್‌ಗಳಾದ ಡಾ. ಬಿಹಾರಿ ಕ್ಲಿನಿಕ್, ಲಕ್ಷ್ಮೀ ಕ್ಲಿನಿಕ್ ಸೇರಿದಂತೆ ಒಟ್ಟು 6 ಕ್ಲಿನಿಕ್‌ಗಳ ಮೇಲೆ ತಾಲೂಕಿನ ಆರೋಗ್ಯಾಧಿಕಾರಿ ಡಾ. ಗಾಯತ್ರಿ ವಿಜಯಕುಮಾರ್ ಮತ್ತು ತಂಡದಿಂದ ದಾಳಿ ಮಾಡಲಾಗಿದೆ. ಇದನ್ನೂ ಓದಿ: ಡಾಲಿ ‘ಲಿಡ್ಕರ್’ಗೆ ರಾಯಭಾರಿ: ಸಿಎಂ ಅಧಿಕೃತ ಘೋಷಣೆ

    ದಾಳಿ ಮಾಡಿ ನಕಲಿ ವೈದ್ಯರ ಮೇಲೆ ಪ್ರಕರಣ ದಾಖಲಿಸಿದ ಜಿಲ್ಲಾ ಆರೋಗ್ಯಾಧಿಕಾರಿಗಳು ಲಕ್ಷಾಂತರ ಮೌಲ್ಯದ ಔಷಧಿಗಳನ್ನು ಜಪ್ತಿ ಮಾಡಿದ್ದಾರೆ. ಜೊತೆಗೆ ಯಾವುದೇ ಪರವಾನಿಗೆ ಇಲ್ಲದ ಕಮಲನಗರ ಗ್ರಾಮೀಣ ಭಾಗದ 2 ಕ್ಲಿನಿಕ್ ಹಾಗೂ ಪಟ್ಟಣದಲ್ಲಿ 4 ನಕಲಿ ಕ್ಲಿನಿಕ್‌ಗಳಿಗೆ ಬೀಗ ಹಾಕಲಾಗಿದೆ.

    ಸಾರ್ವಜನಿಕರು ನಕಲಿ ವೈದ್ಯರ ಹತ್ತಿರ ಚಿಕಿತ್ಸೆ ಪಡೆಯದೆ ನೊಂದಾಯಿತ ವೈದ್ಯರ ಬಳಿ ಚಿಕಿತ್ಸೆ ಪಡೆಯಬೇಕು ಎಂದು ಟಿಎಚ್‌ಒ ಮನವಿ ಮಾಡಿದ್ದಾರೆ. ಇದನ್ನೂ ಓದಿ: ‘ಮಿಚಾಂಗ್’‌ ಎಫೆಕ್ಟ್‌; 5,060 ಕೋಟಿ ಪರಿಹಾರ ನೀಡಿ – ಪ್ರಧಾನಿಗೆ ತ.ನಾಡು ಸಿಎಂ ಪತ್ರ

  • ಸಿಕ್ಕಿಬೀಳೋ ಭಯದಲ್ಲಿ ಕದ್ದಿದ್ದ 30 ಲಕ್ಷದ ವಜ್ರದ ಉಂಗುರವನ್ನು ಟಾಯ್ಲೆಟ್‌ನಲ್ಲಿ ಫ್ಲಶ್ ಮಾಡಿದ್ಳು!

    ಸಿಕ್ಕಿಬೀಳೋ ಭಯದಲ್ಲಿ ಕದ್ದಿದ್ದ 30 ಲಕ್ಷದ ವಜ್ರದ ಉಂಗುರವನ್ನು ಟಾಯ್ಲೆಟ್‌ನಲ್ಲಿ ಫ್ಲಶ್ ಮಾಡಿದ್ಳು!

    ಹೈದರಾಬಾದ್: ಚರ್ಮ ಹಾಗೂ ಕೂದಲಿಗೆ ಚಿಕಿತ್ಸೆ ನೀಡೋ ಕ್ಲಿನಿಕ್‌ನ ಮಹಿಳಾ ಸಿಬ್ಬಂದಿಯೊಬ್ಬಳು ಗ್ರಾಹಕರೊಬ್ಬರ 30 ಲಕ್ಷ ರೂ. ಮೌಲ್ಯದ ವಜ್ರದ ಉಂಗುರವನ್ನು (Diamond Ring) ಕದ್ದು, ಬಳಿಕ ಸಿಕ್ಕಿಬೀಳೋ ಭಯದಲ್ಲಿ ಅದನ್ನು ಟಾಯ್ಲೆಟ್‌ನಲ್ಲಿ ಫ್ಲಶ್ ಮಾಡಿರೋ ಘಟನೆ ಹೈದರಾಬಾದ್‌ನಲ್ಲಿ (Hyderabad) ನಡೆದಿದೆ.

    ವರದಿಗಳ ಪ್ರಕಾರ, ದೂರುದಾರ ಮಹಿಳೆ ಚಿಕಿತ್ಸೆಗೆಂದು ನಗರದ ಜುಬಿಲಿ ಹಿಲ್ಸ್‌ನಲ್ಲಿರುವ ಕ್ಲಿನಿಕ್‌ಗೆ ಭೇಟಿ ನೀಡಿದ್ದರು. ಚಿಕಿತ್ಸೆ ವೇಳೆ ಕ್ಲಿನಿಕ್‌ನ ಮಹಿಳಾ ಸಿಬ್ಬಂದಿ ಅವರಿಗೆ ಉಂಗುರವನ್ನು ಕಳಚಿ ಪೆಟ್ಟಿಗೆಯಲ್ಲಿ ಇಡುವಂತೆ ಹೇಳಿದ್ದಳು. ಚಿಕಿತ್ಸೆಯ ಬಳಿಕ ಮಹಿಳೆ ಮನೆ ತಲುಪಿದ್ದು, ನಂತನ ಅವರಿಗೆ ತನ್ನ ಉಂಗುರವನ್ನು ಕ್ಲಿನಿಕ್‌ನಲ್ಲಿ ಮರೆತಿರುವುದು ಅರಿವಾಗಿದೆ.

    ಬಳಿಕ ಮಹಿಳೆ ಸಿಬ್ಬಂದಿಯನ್ನು ವಿಚಾರಿಸಿದ್ದಾಳೆ. ಆದರೆ ತನ್ನ ಉಂಗುರದ ಬಗ್ಗೆ ಏನೂ ಮಾಹಿತಿ ಸಿಗದ ಹಿನ್ನೆಲೆ ಪೊಲೀಸರಿಗೆ ದೂರು ನೀಡಿದ್ದಾಳೆ. ತನಿಖೆಯನ್ನು ಕೈಗೆತ್ತಿಕೊಂಡ ಪೊಲೀಸರು ಸಿಬ್ಬಂದಿಯನ್ನು ಪ್ರಶ್ನಿಸಿದಾಗ ಆಕೆ ಉಂಗುರವನ್ನು ಕದ್ದು, ತನ್ನ ಪರ್ಸ್‌ನಲ್ಲಿ ಇಟ್ಟಿರುವುದಾಗಿ ಬಾಯಿಬಿಟ್ಟಿದ್ದಾಳೆ. ಇಷ್ಟಾದ ಬಳಿಕವೂ ಸಿಬ್ಬಂದಿ ಸಿಕ್ಕಿ ಬೀಳುವ ಭಯದಲ್ಲಿ ಉಂಗುರವನ್ನು ಟಾಯ್ಲೆಟ್‌ಗೆ ಎಸೆದು ಫ್ಲಶ್ ಮಾಡಿದ್ದಾಳೆ. ಇದನ್ನೂ ಓದಿ: ಮಹಿಳೆಯರ ಬ್ಯೂಟಿ ಸಲೂನ್‌ಗಳನ್ನ ನಿಷೇಧಿಸಿ – ತಾಲಿಬಾನ್‌ ಸರ್ಕಾರ

    ವಿಚಾರ ತಿಳಿದ ಪೊಲೀಸರು ಪ್ಲಂಬರ್ ಸಹಾಯದಿಂದ ಕಮೋಡ್ ಅನ್ನು ಸಂಪರ್ಕಿಸುವ ಪೈಪ್‌ನಿಂದ ಉಂಗುರವನ್ನು ತೆಗೆದು ಅದನ್ನು ವಶಪಡಿಸಿಕೊಂಡಿದ್ದಾರೆ. ಬಳಿಕ ಕಳ್ಳತನ ನಡೆಸಿದ್ದಕ್ಕಾಗಿ ಕ್ಲಿನಿಕ್‌ನ ಮಹಿಳಾ ಸಿಬ್ಬಂದಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಪತಿ, ಆತನ ಗರ್ಲ್‍ಫ್ರೆಂಡ್ ವಿರುದ್ಧ ಡೆತ್‍ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿಬ್ಬಂದಿ ಕೊರತೆ, ಸ್ಥಳದ ಕೊರತೆ ನೆಪ- ಬೆಂಗಳೂರಿಗೆ ಸದ್ಯಕ್ಕಿಲ್ಲ ನಮ್ಮ ಕ್ಲಿನಿಕ್ ಭಾಗ್ಯ

    ಸಿಬ್ಬಂದಿ ಕೊರತೆ, ಸ್ಥಳದ ಕೊರತೆ ನೆಪ- ಬೆಂಗಳೂರಿಗೆ ಸದ್ಯಕ್ಕಿಲ್ಲ ನಮ್ಮ ಕ್ಲಿನಿಕ್ ಭಾಗ್ಯ

    ಬೆಂಗಳೂರು: ಮುಖ್ಯಮಂತ್ರಿಗಳ ಮಹತ್ವಾಕಾಂಕ್ಷೆಯ ಯೋಜನೆ ಇದು. ಈ ಯೋಜನೆ ಜಾರಿಗೆ ಸಿಬ್ಬಂದಿ ಕೊರತೆ ಎದುರಾಗಿದೆ. ಸಿಬ್ಬಂದಿ ಕೊರತೆ ನೀಗಿಸಲು ಬಿಬಿಎಂಪಿ (BBMP) ಹೊಸ ಹೊಸ ಪ್ಲಾನ್ ಮಾಡಿದೆ. ಈ ವಿಶೇಷ ಸೌಲಭ್ಯ ನೀಡಲು ಪಾಲಿಕೆ ಸರ್ಕಾರಕ್ಕೆ ಪತ್ರ ಬರೆದಿದೆ.

    ಮುಖ್ಯಮಂತ್ರಿಗಳ ಮಹತ್ವಾಕಾಂಕ್ಷೆಯ ಯೋಜನೆ ನಮ್ಮ ಕ್ಲಿನಿಕ್ (Namma Clinic) ಆರಂಭ ಬೆಂಗಳೂರಿನಲ್ಲಿ ತಡ ಆಗ್ತಿದೆ. ಡಿಸೆಂಬರ್ 2ನೇ ವಾರದಿಂದ ರಾಜ್ಯದಲ್ಲಿ 114 ಕಡೆ ನಮ್ಮ ಕ್ಲಿನಿಕ್ ಆರಂಭ ಆಗಿದೆ. ಆದರೆ ಬೆಂಗಳೂರಿನಲ್ಲಿ ಜಾಗದ ಕೊರತೆ ಮತ್ತು ಸಿಬ್ಬಂದಿ ಕೊರತೆಯಿಂದ ಯೋಜನೆ ಜಾರಿ ನಿಧಾನವಾಗ್ತಿದೆ. ಇದೀಗ ಜಾಗ ಸಿಕ್ಕಿದ್ರೂ ನಮ್ಮ ಕ್ಲಿನಿಕ್‍ಗೆ ವೈದ್ಯಕೀಯ ಸಿಬ್ಬಂದಿ ನೇಮಕ ಮಾಡಿಕೊಳ್ಳಲು ಸಿಬ್ಬಂದಿಯೇ ಸಿಕ್ತಿಲ್ಲ. ಇದನ್ನೂ ಓದಿ: ಬೆಂಗಳೂರಿನಲ್ಲಿ ಹೆಚ್ಚಾಯ್ತು ಬೆಕ್ಕುಗಳ ಕಾಟ- ಬೆಕ್ಕಿಗೂ ಸಂತಾನಹರಣ ಚಿಕಿತ್ಸೆ ಮಾಡಲು ಮನವಿ

    ಬಿಬಿಎಂಪಿ ಗುತ್ತಿಗೆ ಆಧಾರದ ಮೇಲೆ ವೈದ್ಯಕೀಯ ಸಿಬ್ಬಂದಿಯನ್ನ ನೇಮಕ ಮಾಡಿಕೊಳ್ತಿದ್ರೂ ನಮ್ಮ ಕ್ಲಿನಿಕ್‍ಗಳಲ್ಲಿ ಕೆಲಸ ಮಾಡಲು ಮುಂದೆ ಬರುತ್ತಿಲ್ಲ. ಹೀಗಾಗಿ ಬಿಬಿಎಂಪಿಗೆ ಸವಾಲಾಗಿದೆ. ಸರ್ಕಾರಕ್ಕೆ ವಿಶೇಷ ಸೌಲಭ್ಯ ಕಲ್ಪಿಸುವಂತೆ ಪತ್ರ ಬರೆದಿದೆ. ಸರ್ಕಾರಿ ಕೋಟಾದಡಿ ವೈದ್ಯಕೀಯ ಕೋರ್ಸ್ ವ್ಯಾಸಂಗ ಮಾಡ್ತಾ ಇರುವವರನ್ನ ಒಂದು ವರ್ಷದ ಮಟ್ಟಿಗೆ ನಮ್ಮ ಕ್ಲಿನಿಕ್‍ನಲ್ಲಿ ಕಾರ್ಯ ನಿರ್ವಹಿಸಲು ಅವಕಾಶ ಕೊಡಿ. ವೈದ್ಯಕೀಯ ಕೋರ್ಸ್ (Medical Course) ಮುಗಿಸಿರೋ ವೈದ್ಯರನ್ನ ನೀಡಲು ಪತ್ರ ಬರೆಯಲಾಗಿದ್ಯಂತೆ. ಇದಕ್ಕೆ ಸರ್ಕಾರ ಸ್ಪಂದಿಸಿದ್ದು ವೈದ್ಯರನ್ನ ನೀಡುವ ಭರವಸೆ ನೀಡಿದೆಯಂತೆ.

    ಗುತ್ತಿಗೆ ಅಧಾರದ ಮೇಲೆ ವೈದ್ಯಕೀಯ ಸಿಬ್ಬಂದಿ ನೇಮಕಕ್ಕೆ ನೀಟ್ ಪರೀಕ್ಷೆ ಕೂಡ ಅಡ್ಡಿ ಆಗ್ತಿದ್ಯಂತೆ. ನೀಟ್ ಪರೀಕ್ಷೆಗೆ ರೆಡಿಯಾಗ್ತಿರೋ ವೈದ್ಯಕೀಯ ವಿದ್ಯಾರ್ಥಿಗಳು ಯಾರು ನಮ್ಮ ಕ್ಲಿನಿಕ್‍ಗಳಲ್ಲಿ ಕೆಲಸ ಮಾಡಲು ಮುಂದಾಗ್ತಾ ಇಲ್ವಂತೆ ಜೊತೆಗೆ ಉದ್ಯೋಗ (Job) ಖಾಲಿ ಇದೆ ಬನ್ನಿ ಅಂದರು ಬರ್ತಾ ಇಲ್ವಂತೆ. ಹೀಗಾಗಿ ಸರ್ಕಾರಿ ಕೋಟಾದ ವೈದ್ಯರ ಮೊರೆ ಹೋಗಿದ್ದು ಜನವರಿ ಅಂತ್ಯದ ಒಳಗೆ ಬೆಂಗಳೂರಿನಲ್ಲಿ ನಮ್ಮ ಕ್ಲಿನಿಕ್ ಆರಂಭಕ್ಕೆ ಮುಂದಾಗಿರುವುದಾಗಿ ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ತ್ರಿಲೋಕ್ ಚಂದ್ರ ಹೇಳಿದ್ದಾರೆ.

    ಒಟ್ಟಾರೆ ನಮ್ಮ ಕ್ಲಿನಿಕ್‍ನಲ್ಲಿ ಕೆಲಸ ಮಾಡುವ ಸಿಬ್ಬಂದಿ ನೇಮಕಕ್ಕೆ ಬಿಬಿಎಂಪಿ ಹರಸಾಹಸ ಪಡುತ್ತಿದ್ದು, ಜನವರಿಯಲ್ಲೇ ಬೆಂಗಳೂರಿನಲ್ಲಿ ನಮ್ಮ ಕ್ಲಿನಿಕ್ ಆರಂಭ ಆಗುತ್ತಾ ಇಲ್ಲ ಮತ್ತಷ್ಟು ದಿನಕ್ಕೆ ಮುಂದೂಡಲಾಗುತ್ತಾ ಕಾದು ನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನ್ಯೂಸ್ ಪೇಪರ್ ಓದುತ್ತಿದ್ದಂತೆಯೇ ವ್ಯಕ್ತಿ ಸಾವು

    ನ್ಯೂಸ್ ಪೇಪರ್ ಓದುತ್ತಿದ್ದಂತೆಯೇ ವ್ಯಕ್ತಿ ಸಾವು

    ಜೈಪುರ: ದಿನಪತ್ರಿಕೆ (News Paper) ಓದುತ್ತಿದ್ದಂತೆಯೇ ವ್ಯಕ್ತಿಯೊಬ್ಬರು ಕ್ಲಿನಿಕ್‍ನಲ್ಲಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

    ಶನಿವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಮೃತ ವ್ಯಕ್ತಿಯನ್ನು ದಿಲೀಪ್ ಕುಮಾರ್ ಮದನಿ(61) ಎಂದು ಗುರುತಿಸಲಾಗಿದೆ. ಹಲ್ಲು ನೋವಿನ ಸಮಸ್ಯೆಯಿಂದ ಡೆಂಟಿಸ್ಟ್ ಕ್ಲಿನಿಕ್‍ಗೆ ವ್ಯಕ್ತಿ ಭೇಟಿ ನೀಡಿದ್ದರು. ಈ ವೇಳೆ ಕುರ್ಚಿ ಮೇಲೆ ಕುಳಿತು ತಮ್ಮ ಸರದಿಗಾಗಿ ಕಾಯುತ್ತಿದ್ದ ವ್ಯಕ್ತಿ ದಿನಪತ್ರಿಕೆಯನ್ನು ಓದುತ್ತಿದ್ದರು. ಆಗ ಇದ್ದಕ್ಕಿದ್ದಂತೆ ಅಸ್ವಸ್ಥರಾಗಿ ನಿಮಿಷದಲ್ಲಿಯೇ ಕುಸಿದು ಬಿದ್ದಿದ್ದಾರೆ. ಈ ವೇಳೆ ದಿಲೀಪ್ ಕುಮಾರ್ ಅವರ ಸಹಾಯಕ್ಕೆ ಬಂದ ಕ್ಲಿನಿಕ್ ಸಿಬ್ಬಂದಿ, ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ವ್ಯಕ್ತಿ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿಗೆ ಅವಕಾಶ ಕೇಳಿದ್ದ ಬೆನ್ನಲ್ಲೇ ಇದೀಗ ಕನಕದಾಸ ಜಯಂತಿಗೂ ಮನವಿ

    ಈ ಘಟನೆಯ ಸಂಪೂರ್ಣ ದೃಶ್ಯ ಕ್ಲಿನಿಕ್‍ನಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ದಿಲೀಪ್ ಕುಮಾರ್ ಮದನಿ ಅವರು ಗಾರ್ಮೆಂಟ್ಸ್ ನಡೆಸುತ್ತಿದ್ದು, ಗುಜರಾತ್‍ನ (Gujrat) ಸೂರತ್ (Surat) ನಿವಾಸಿಯಾಗಿದ್ದಾರೆ. ಆದರೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ನವೆಂಬರ್ 4 ರಂದು ಬಾರ್ಮರ್‌ಗೆ (Barmer)  ಬಂದಿದ್ದರು. ಹಲ್ಲು ನೋವಿದ್ದರಿಂದ ನವೆಂಬರ್ 5 ರಂದು ಚೇಕ್ ಅಪ್‍ಗೆಂದು ಕ್ಲಿನಿಕ್‍ಗೆ ಭೇಟಿ ನೀಡಿದ್ದರು. ಆದರೆ ವೈದ್ಯರನ್ನು ಭೇಟಿಯಾಗುವುದಕ್ಕೂ ಮುನ್ನವೇ ಪ್ರಜ್ಞೆ ತಪ್ಪಿ ನೆಲದ ಮೇಲೆ ಕುಸಿದು ಬಿದ್ದಿದ್ದರು.

    ಈ ಘಟನೆ ಸಂಬಂಧ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಕ್ಲಿನಿಕ್ ಮಾಲೀಕ ಡಾ ಕಪಿಲ್ ಜೈನ್ ಅವರು, ಮೊದಲು ಈ ಬಗ್ಗೆ ದಿಲೀಪ್ ಕುಮಾರ್ ಮದನಿ ಕುಟುಂಬಸ್ಥರೊಂದಿಗೆ ಮಾತನಾಡದೇ ಏನನ್ನೂ ಹೇಳಲು ಸಾಧ್ಯವಿಲ್ಲ. ವ್ಯಕ್ತಿ ಕುಸಿದು ಬಿದ್ದ ತಕ್ಷಣ ಕ್ಲಿನಿಕ್ ಸಿಬ್ಬಂದಿ ಅವರನ್ನು ಟ್ಯಾಕ್ಸಿಯಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಂಗಳೂರು ಸೆಂಟ್ರಲ್ ಮಾರ್ಕೆಟ್‌ನ ನೀಲನಕ್ಷೆಯಲ್ಲಿ ಬೀಫ್ ಸ್ಟಾಲ್ – ಬಿಜೆಪಿ ವಿರುದ್ಧ ಹಿಂದೂ ಸಂಘಟನೆಗಳ ಆಕ್ರೋಶ

    Live Tv
    [brid partner=56869869 player=32851 video=960834 autoplay=true]

  • ಕ್ಲಿನಿಕ್‌ನಲ್ಲಿ ಬೆಂಕಿ – ವೈದ್ಯ, ಆತನ ಇಬ್ಬರು ಮಕ್ಕಳು ದಾರುಣ ಸಾವು

    ಕ್ಲಿನಿಕ್‌ನಲ್ಲಿ ಬೆಂಕಿ – ವೈದ್ಯ, ಆತನ ಇಬ್ಬರು ಮಕ್ಕಳು ದಾರುಣ ಸಾವು

    ಅಮರಾವತಿ: ಕ್ಲಿನಿಕ್ (Clinic) ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿ ವೈದ್ಯ (Doctor) ಹಾಗೂ ಆತನ ಇಬ್ಬರು ಮಕ್ಕಳು (Children)ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ (Andhra Pradesh) ತಿರುಪತಿ ಜಿಲ್ಲೆ ರೇಣಿಗುಂಟಾ ಪ್ರದೇಶದಲ್ಲಿ ಭಾನುವಾರ ನಡೆದಿದೆ.

    ಇಂದು ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ವೈದ್ಯನ ಮನೆಯ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿರುವುದಾಗಿ ರೇಣಿಗುಂಟಾ ಪೊಲೀಸರು (Renigunta Police) ತಿಳಿಸಿದ್ದಾರೆ.

    ವರದಿಗಳ ಪ್ರಕಾರ ವೈದ್ಯನ ಮನೆಯ ನೆಲದ ಮಹಡಿಯನ್ನು ಕ್ಲಿನಿಕ್ ಆಗಿ ಮಾಡಿಕೊಳ್ಳಲಾಗಿತ್ತು. ಕಟ್ಟಡದ ಮೊದಲ ಹಾಗೂ 2ನೇ ಮಹಡಿಯಲ್ಲಿ ವೈದ್ಯನ ಕುಟುಂಬ ವಾಸವಾಗಿತ್ತು ಎನ್ನಲಾಗಿದೆ. ಇದನ್ನೂ ಓದಿ: ತಾತ್ಕಾಲಿಕವಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಆರೋಗ್ಯ ಇಲಾಖೆಯಿಂದ ಕ್ರಮ: ಸುಧಾಕರ್

    ಮನೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ರಕ್ಷಣಾ ಕಾರ್ಯದಲ್ಲಿ ವೈದ್ಯನ ಪತ್ನಿ ಹಾಗೂ ತಾಯಿಯನ್ನು ರಕ್ಷಿಸಲಾಗಿದೆ. ಗಂಭೀರ ಸುಟ್ಟ ಗಾಯಗಳಿಂದ ಡಾ. ರವಿ ಶಂಕರ್, ಅವರ 12 ವರ್ಷದ ಮಗ ಹಾಗೂ 7 ವರ್ಷದ ಮಗಳು ಸಾವನ್ನಪ್ಪಿದ್ದಾರೆ.

    ಘಟನೆಯ ಬಗ್ಗೆ ರೇಣಿಗುಂಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: PFI ಶಂಕಿತರ ಮೊಬೈಲ್‌ನಲ್ಲಿತ್ತು ಸಾಕ್ಷಿಗಳನ್ನೇ ನಾಶ ಮಾಡುವ ಆಪ್

    Live Tv
    [brid partner=56869869 player=32851 video=960834 autoplay=true]

  • ಕೋಲಾರದಲ್ಲಿ ನಕಲಿ ಡಾಕ್ಟರ್ ಹಾವಳಿ- 10ನೇ ತರಗತಿ ಫೇಲ್ ಆದವ್ರು ಇಲ್ಲಿ ವೈದ್ಯರು

    ಕೋಲಾರದಲ್ಲಿ ನಕಲಿ ಡಾಕ್ಟರ್ ಹಾವಳಿ- 10ನೇ ತರಗತಿ ಫೇಲ್ ಆದವ್ರು ಇಲ್ಲಿ ವೈದ್ಯರು

    ಕೋಲಾರ: ಜಿಲ್ಲೆಯ ಗಡಿ ಭಾಗದಲ್ಲಿ ನಕಲಿ ವೈದ್ಯರ (Doctor) ಹಾವಳಿ ಹೆಚ್ಚಾಗಿದೆ. 10ನೇ ತರಗತಿ ಕೂಡ ಪಾಸು ಮಾಡದ ಇವರು ರೋಗಿಗಳ (Patient) ಜೀವದ ಜೊತೆ ಚೆಲ್ಲಾಟವಾಡ್ತಿದ್ದಾರೆ.

    ಮುಳಬಾಗಿಲು ತಾಲೂಕಿನ ತಾಯಲೂರು, ನಂಗಲಿ ಗ್ರಾಮದಲ್ಲಿ ನಕಲಿ ಕ್ಲಿನಿಕ್‍ಗಳು (Clinic) ಹೆಚ್ಚಿದೆ. ಕೈಯಲ್ಲಿ ಸ್ಟೆತಸ್ಕೋಪ್‌ ಇಟ್ಟುಕೊಂಡು, ರೋಗಿಗಳು ಯಾವುದೇ ರೋಗ ಎಂದು ಬಂದರೂ ಸ್ಟಿರಾಯ್ಡ್‌ ಇಂಜೆಕ್ಷನ್ ಹಾಕಿ, ಎಲ್ಲಾ ವಾಸಿಯಾಗುತ್ತೆ ಅಂತಾ ಕಡಿಮೆ ಹಣ (Money) ಪಡೆದು ಚಿಕಿತ್ಸೆ ನೀಡುತ್ತಾರೆ. ಇದನ್ನೂ ಓದಿ: ಕಲಬುರಗಿಯಲ್ಲಿ ಮಕ್ಕಳ ಕಳ್ಳರೆಂದು ಮಹಿಳೆಯರಿಗೆ ಥಳಿತ

    ಇಷ್ಟು ಮಾತ್ರವಲ್ಲದೆ ತೀರ ಜ್ವರ ಇದ್ದರೆ ರಕ್ತ ಪರೀಕ್ಷೆ, ಮೂತ್ರ ಪರೀಕ್ಷೆ ಕೂಡ ಮಾಡಿ ರಿಪೋರ್ಟ್ ನೀಡಿ ಥೇಟ್ ವೈದ್ಯರಂತೆ ಚಿಕಿತ್ಸೆ ಕೊಡುತ್ತಾರೆ. ಇತ್ತ, ಪಬ್ಲಿಕ್ ಟಿವಿ ಕ್ಯಾಮೆರಾ ಕಾಣಿಸಿಕೊಳ್ಳುತ್ತಿದ್ದಂತೆ ಕಕ್ಕಾಬಿಕ್ಕಿಯಾದರು. ಇಷ್ಟೆಲ್ಲ ಗೋಲ್‍ಮಾಲ್ ನಡೆಯುತ್ತಿದ್ದರೂ ಜಿಲ್ಲಾ ಆರೋಗ್ಯ ಇಲಾಖೆ ತಲೆಕೆಡಿಸಿಕೊಂಡಿಲ್ಲ. ಇದನ್ನೂ ಓದಿ: PayCM ಪೋಸ್ಟರ್‌ ಅಂಟಿಸಲು ಕಾಲೇಜು ವಿದ್ಯಾರ್ಥಿಗಳ ಬಳಕೆ – ಸ್ಟೂಡೆಂಟ್ಸ್‌ ಸೇರಿ 6 ಮಂದಿ ವಿರುದ್ಧ ಎಫ್‌ಐಆರ್‌

    Live Tv
    [brid partner=56869869 player=32851 video=960834 autoplay=true]

  • ಕ್ಲಿನಿಕ್ ಬಾಗಿಲು ತೆಗೆಯಲು ತಡ- ಡಾಕ್ಟರ್ ಮೇಲೆ ಹಲ್ಲೆ

    ಕ್ಲಿನಿಕ್ ಬಾಗಿಲು ತೆಗೆಯಲು ತಡ- ಡಾಕ್ಟರ್ ಮೇಲೆ ಹಲ್ಲೆ

    ಮುಂಬೈ: ಕ್ಲಿನಿಕ್(Clinic) ಬಾಗಿಲನ್ನು ತೆರೆಯಲು ತಡ ಮಾಡಿದ್ದಕ್ಕೆ ಗುಂಪೊಂದು ವೈದ್ಯರಿಗೆ ಥಳಿಸಿದ ಘಟನೆ ಮಹಾರಾಷ್ಟ್ರದ(Maharashtra) ಬಾರಾಮತಿಯಲ್ಲಿ ನಡೆದಿದೆ.

    ಯುವರಾಜ್ ಗಾಯಕ್ವಾಡ್ ಅವರ ಮನೆಯಿಂದ ಹೊರಗಿರುವ ಕ್ಲಿನಿಕ್‍ನಲ್ಲಿ ಈ ಘಟನೆ ನಡೆದಿದೆ. ವೈದ್ಯರು(Doctor) ಕ್ಲಿನಿಕ್‍ನ ಬಾಗಿಲನ್ನು ಸ್ವಲ್ಪ ತಡವಾಗಿ ತೆರೆದಿದ್ದರಿದ್ದಾರೆ. ಇದರಿಂದಾಗಿ ರೋಗಿಯ ಸಂಬಂಧಿಗಳು ಸೇರಿ ವೈದ್ಯರಿಗೂ ಹಾಗೂ ಅವರ ಮಗನ ಮೇಲೂ ಹಲ್ಲೆ ನಡೆಸಿದ್ದಾರೆ. ಘಟನೆ ಸಂಬಂಧಿಸಿ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ.

    crime

    ಘಟನೆಗೆ ಸಂಬಂಧಿಸಿ ಗಾಯಕ್ವಾಡ್ ಕುಟುಂಬಸ್ಥರು ದೂರು ನೀಡಿದ್ದಾರೆ. ದೂರಿನಲ್ಲಿ ಗಾಯಕ್ವಾಡ್ ಅವರು, ತಮ್ಮ ಕುಟುಂಬದೊಂದಿಗೆ ರಾತ್ರಿ ಊಟ ಮಾಡುತ್ತಿದ್ದಾಗ ಅವರ ಮನೆಯ ಬಾಗಿಲನ್ನು ಯಾರೋ ಜೋರಾಗಿ ಬಡಿಯುತ್ತಿರುವುದು ಕೇಳಿದ್ದಾರೆ. ಆದರೆ ಬಾಗಿಲು ತೆರೆಯಲು ತಡವಾಗಿತ್ತು. ಇದರಿಂದಾಗಿ ಗುಂಪೊಂದು ಕಿಟಕಿಯ ಗಾಜು ಒಡೆದರು. ಆದರೂ ವೈದ್ಯರು ಬಾಗಿಲನ್ನು ತೆರೆದಾಗ, ಆನಂದ್ ಅಲಿಯಾಸ್ ಅನಿಲ್ ಜಗತಾಪ್, ವಿಶ್ವಜೀತ್ ಜಗತಾಪ್, ಅಶೋಕ್ ಜಗತಾಪ್ ಮತ್ತು ಭೂಷಣ್ ಜಗತಾಪ್ ಅವರ ಮನೆಗೆ ನುಗ್ಗಿ ಅವರನ್ನು ಥಳಿಸಲು ಪ್ರಾರಂಭಿಸಿದರು. ಇದನ್ನೂ ಓದಿ: ರಸ್ತೆ ಪಕ್ಕದ ಚರಂಡಿಗೆ ಬಿದ್ದು ಯುವತಿ ದುರ್ಮರಣ

    ಸಿಸಿಟಿವಿಯಲ್ಲಿ ಏನಿದೆ?: ಗಾಯಕ್ವಾಡ ತಮ್ಮ ಕ್ಲಿನಿಕ್ ಬಾಗಿಲನ್ನು ತೆರೆದಿದ್ದಾರೆ. ಆಗ ಕ್ಲಿನಿಕ್‍ನೊಳಗೆ ಪ್ರವೇಶಿಸಿದ 4-5 ಮಂದಿ ಗಾಯಕ್ವಾಡ್‍ಗೆ ಹೊಡೆಯಲು ಪ್ರಾರಂಭಿಸುತ್ತಾರೆ. ಅಧೆ ಸಮಯಕ್ಕೆ ಮನೆಯಿಂದ ಹೊರ ಬಂದ ಮಗನನ್ನು ನೋಡಿ ಅವನ ಶರ್ಟ್‍ನ್ನು ಹಿಡಿದು ಅವನ ಮೇಲೂ ಹಲ್ಲೆ ನಡೆಸುತ್ತಾರೆ. ಇಬ್ಬರೂ ತಪ್ಪಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಪಡುತ್ತಾರೆ. ಅಷ್ಟೇ ಅಲ್ಲದೇ ಕೊಣೆಯಲ್ಲಿ ಇಬ್ಬರು ಮಹಿಳೆಯರು ಘಟನೆಯನ್ನು ವೀಕ್ಷಿಸುತ್ತಿರುವುದು ಸಿಸಿಟಿವಿಯಲ್ಲಿ ಸೆರೆ ಆಗಿದೆ. ಘಟನೆಗೆ ಸಂಬಂಧಿಸಿ ಮಾಲೆಗಾಂವ್ ಪೊಲೀಸರು ವೈದ್ಯರ ಮೇಲೆ ಹಲ್ಲೆ ನಡೆಸಿದ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ‘ಕುದುರೆ ವ್ಯಾಪಾರ’ ಆರೋಪ – ಕಾಂಗ್ರೆಸ್ ಶಾಸಕ, ಬಿಜೆಪಿ ನಾಯಕಿಯ ಹಾದಿಬೀದಿ ರಂಪಾಟ

    Live Tv 
    [brid partner=56869869 player=32851 video=960834 autoplay=true]

  • ಸಿನಿಮಾ ರಂಗ ತೊರೆದು, ಕ್ಲಿನಿಕ್ ಮಾಡ್ತಾರಂತೆ ಖ್ಯಾತ ನಟಿ ಸಾಯಿ ಪಲ್ಲವಿ

    ಸಿನಿಮಾ ರಂಗ ತೊರೆದು, ಕ್ಲಿನಿಕ್ ಮಾಡ್ತಾರಂತೆ ಖ್ಯಾತ ನಟಿ ಸಾಯಿ ಪಲ್ಲವಿ

    ಕ್ಷಿಣದ ಖ್ಯಾತ ನಟಿ ಸಾಯಿ ಪಲ್ಲವಿ ಬಗ್ಗೆ ಮತ್ತೊಂದು ಗಾಸಿಪ್ ಹರಡಿದೆ. ಇವರ ಮುಖ್ಯ ಭೂಮಿಕೆಯ ಗಾರ್ಗಿ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಅಷ್ಟೇನೂ ಸದ್ದು ಮಾಡಲಿಲ್ಲ. ಅಲ್ಲದೇ, ಸಾಯಿ ಪಲ್ಲವಿ ಅವರು ಕಾಶ್ಮೀರ ಹತ್ಯೆಯನ್ನು, ಗೋ ಹತ್ಯೆ ಮಾಡುವವರಿಗೆ ಹೋಲಿಸಿದರು ಎನ್ನುವ ಕಾರಣಕ್ಕಾಗಿ ಅವರ ಮೇಲೆ ದೂರನ್ನು ಕೂಡ ನೀಡಲಾಯಿತು. ಇದರಿಂದ ಬೇಸತ್ತು, ಅವರು ಸಿನಿಮಾ ರಂಗವನ್ನೇ ತೊರೆಯಲಿದ್ದಾರೆ ಎನ್ನುವ ಸುದ್ದಿ ಹರಡಿದೆ.

    ಸಿನಿಮಾ ರಂಗದಲ್ಲಿ ಗಾಸಿಪ್ ಕಾಮನ್. ಸಾಯಿ ಪಲ್ಲವಿ ಸಿನಿಮಾ ರಂಗದಿಂದ ದೂರವಾಗುತ್ತಾರಾ ಎನ್ನುವುದು ಕೂಡ ಗಾಸಿಪ್ ಇರಬಹುದು ಎಂದೇ ನಂಬಲಾಗಿತ್ತು. ಆದರೆ, ಅವರು ಕ್ಲಿನಿಕ್ ತೆರೆಯುವ ಕುರಿತು ಮನೆಯಲ್ಲಿ ಚರ್ಚೆ ಮಾಡಿದ್ದರಿಂದ ಇದು, ಇಂದಲ್ಲ ನಾಳೆ ನಿಜವೂ ಆಗಬಹುದು ಎನ್ನಲಾಗುತ್ತಿದೆ. ಇದಕ್ಕೆ ಪೂರಕ ಎನ್ನುವಂತೆ ಸಾಯಿ ಪಲ್ಲವಿ ಕೂಡ ತುಂಬಾ ಸಿನಿಮಾಗಳನ್ನು ಒಪ್ಪಿಕೊಂಡಿಲ್ಲ. ಇದನ್ನೂ ಓದಿ:ಪೊರಕೆ ಹಿಡಿದ ಮತ್ತೋರ್ವ ಕನ್ನಡದ ನಟ : ‘ಆಮ್ ಆದ್ಮಿ ಪಾರ್ಟಿ’ಗೆ ಸೇರ್ಪಡೆಯಾದ ಟೆನ್ನಿಸ್ ಕೃಷ್ಣ

    ಸಾಯಿ ಪಲ್ಲವಿ ಉತ್ತಮ ನಟಿ. ದಕ್ಷಿಣದ ಸ್ಟಾರ್ ನಟಿಯರಿಗೆ ನಿದ್ದೆ ಕೆಡಿಸಿದಾಕೆ. ಅತೀ ಕಡಿಮೆ ಸಮಯದಲ್ಲೇ ಅತ್ಯುತ್ತಮ ಸಿನಿಮಾಗಳನ್ನು ಪಡೆದವರು. ಸ್ಟಾರ್ ನಟರ ಜೊತೆ ತೆರೆ ಹಂಚಿಕೊಂಡವರು. ಪ್ರತಿಷ್ಠಿತ ಪ್ರಶಸ್ತಿಗಳು ಕೂಡ ಅವರನ್ನು ಹುಡುಕಿಕೊಂಡು ಬಂದವು. ಆದರೂ, ಒಂದಿಲ್ಲೊಂದು ರೀತಿಯಲ್ಲಿ ಅವರಿಗೆ ಕಿರುಕುಳ ನಡೆಯುತ್ತಲೇ ಬಂದಿವೆ. ಹೀಗಾಗಿ ಮೂಲತಃ ವೈದ್ಯಯೂ ಆಗಿರುವ ಸಾಯಿ ಪಲ್ಲವಿ ಹೊಸದೊಂದು ಕ್ಲಿನಿಕ್ ಶುರು ಮಾಡಿ, ವೈದ್ಯ ವೃತ್ತಿಯಲ್ಲಿ ಮುಂದುವರೆಯಲಿದ್ದಾರೆ ಎನ್ನಲಾಗುತ್ತಿದೆ. ಹಾಗೊಂದು ವೇಳೆ ಅವರು ಸಿನಿಮಾ ರಂಗವನ್ನು ತೊರೆಯುವುದಾದರೆ, ಅಭಿಮಾನಿಗಳಿಗೆ ನಿಜಕ್ಕೂ ಶಾಕ್ ಆಗುವುದರಲ್ಲಿ ಎರಡು ಮಾತಿಲ್ಲ.

    Live Tv
    [brid partner=56869869 player=32851 video=960834 autoplay=true]

  • ಆಸ್ಪತ್ರೆ, ಕ್ಲಿನಿಕ್‌ಗಳಲ್ಲೂ ಕೋವಿಶೀಲ್ಡ್‌, ಕೋವ್ಯಾಕ್ಸಿನ್‌ ಲಭ್ಯ

    ಆಸ್ಪತ್ರೆ, ಕ್ಲಿನಿಕ್‌ಗಳಲ್ಲೂ ಕೋವಿಶೀಲ್ಡ್‌, ಕೋವ್ಯಾಕ್ಸಿನ್‌ ಲಭ್ಯ

    ನವದೆಹಲಿ: ಭಾರತ ಔಷಧ ನಿಯಂತ್ರಕದಿಂದ ಕೋವಿಡ್‌ ವಿರೋಧಿ ಲಸಿಕೆ ಕೋವಿಶೀಲ್ಡ್‌ ಮತ್ತು ಕೋವ್ಯಾಕ್ಸಿನ್‌ ಇನ್ಮುಂದೆ ಮಾರುಕಟ್ಟೆಯಲ್ಲಿ ಸಿಗಲಿವೆ ಎಂದು ಮೂಲಗಳು ತಿಳಿಸಿವೆ.

    ಈ ಲಸಿಕೆಗಳ ಮಾರುಕಟ್ಟೆ ಮಾರಾಟವನ್ನು ʻಹೊಸ ಔಷಧಗಳು ಮತ್ತು ಕ್ಲಿನಿಕಲ್‌ ಪ್ರಯೋಗಗಳ ನಿಯಮಗಳು, 2019’ರ ಅಡಿಯಲ್ಲಿ ಅನುಮೋದಿಸಲಾಗಿದೆ. ಮಾರುಕಟ್ಟೆಯಲ್ಲಿ ಲಭ್ಯವೆಂದ ಮಾತ್ರಕ್ಕೆ ಅಂಗಡಿಗಳಲ್ಲೆಲ್ಲ ಸಿಗುತ್ತೆ ಎಂದರ್ಧವಲ್ಲ. ಈ ಎರಡೂ ಲಸಿಕೆಗಳು ಆಸ್ಪತ್ರೆಗಳು ಮತ್ತು ಕ್ಲಿನಿಕ್‌ಗಳಲ್ಲಿ ಲಭ್ಯವಿರುತ್ತವೆ ಎಂದು ಸ್ಪಷ್ಟಪಡಿಸಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಇಂದು 185 ಓಮಿಕ್ರಾನ್ ಕೇಸ್ ಪತ್ತೆ – ಒಟ್ಟು ಪ್ರಕರಣಗಳ ಸಂಖ್ಯೆ 1,115ಕ್ಕೆ ಏರಿಕೆ

    ಕೋವ್ಯಾಕ್ಸಿನ್‌ ತಯಾರಕಾ ಸಂಸ್ಥೆ ಭಾರತ್‌ ಬಯೋಟೆಕ್‌ ಮತ್ತು ಕೋವಿಶೀಲ್ಡ್‌ ತಯಾರಕಾ ಸಂಸ್ಥೆ ಸೀರಂ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ, ಕ್ಲಿನಿಕಲ್‌ ಪ್ರಯೋಗಕ್ಕೆ ಸಂಬಂಧಿಸಿದ ಡೇಟಾವನ್ನು ಭಾರತ ಔಷಧ ನಿಯಂತ್ರಕಕ್ಕೆ ಸಲ್ಲಿಸಿವೆ. ಕೋವಿಡ್-‌19 ವಿಷಯ ತಜ್ಞರ ಸಮಿತಿಯು ಜ.19 ರಂದು ಅನುಮೋದನೆಯನ್ನು ಶಿಫಾರಸು ಮಾಡಿದ ನಂತರ ಮಾರುಕಟ್ಟೆಗೆ ಮಾರಾಟಕ್ಕೆ ಅನುಮತಿಸಲಾಗಿದೆ.

    ಕೋವಿಶೀಲ್ಡ್‌ಗೆ ನಿಯಮಿತ ಮಾರುಕಟ್ಟೆ ಅಧಿಕಾರವನ್ನು ಕೋರಿ ಅ.25 ರಂದು ಡಿಸಿಜಿಐಗೆ ಸೀರಮ್‌ ಇನ್‌ಸ್ಟಿಟ್ಯೂಟ್‌ ಅರ್ಜಿ ಸಲ್ಲಿಸಲಾಗಿತ್ತು. ಅಂತೆಯೇ ಕೋವ್ಯಾಕ್ಸಿನ್‌ಗೆ ನಿಯಮಿತ ಮಾರುಕಟ್ಟೆ ಅನುಮೋದನೆಗೆ ಭಾರತ್‌ ಬಯೋಟೆಕ್‌ ಅರ್ಜಿ ಸಲ್ಲಿಸಿತ್ತು. ಇದನ್ನೂ ಓದಿ: ಕೊರೊನಾ ನಿಯಮ ಮರೆತು ಕ್ರಿಕೆಟ್ ಪಂದ್ಯಾಟ – ಬ್ಯಾಟ್‍ಬೀಸಿ ಸಂಭ್ರಮಿಸಿದ ಜಮೀರ್

    ಭಾರತದಲ್ಲಿ ಈವರೆಗೆ ಕೋವಿಡ್‌ ಲಸಿಕೆ ಅಭಿಯಾನದಲ್ಲಿ 163.84 ಕೋಟಿ ಡೋಸ್‌ ನೀಡಲಾಗಿದೆ. ದೇಶದಲ್ಲಿ ಶೇ.72 ರಷ್ಟು ವಯಸ್ಕರು ಲಸಿಕೆಗಳ ಎರಡೂ ಡೋಸ್‌ಗಳನ್ನು ಪಡೆದುಕೊಂಡಿದ್ದಾರೆ. 15-18 ವಯಸ್ಸಿನ ಮಕ್ಕಳಲ್ಲಿ ಶೇ.52 ಮಂದಿ ಮೊದಲ ಡೋಸ್‌ ಪಡೆದುಕೊಂಡಿದ್ದಾರೆ.

  • ‘ಮಣಿಪಾಲ್ ಡೆಂಟಲ್ ಕ್ಲೀನಿಕ್’ ಹೆಸ್ರಲ್ಲಿ ಅಕ್ರಮ ದಂಧೆ – ಸೈಕೋ ಡಾಕ್ಟರ್‌ಗೆ ಬಿತ್ತು ಭರ್ಜರಿ ಗೂಸಾ

    ‘ಮಣಿಪಾಲ್ ಡೆಂಟಲ್ ಕ್ಲೀನಿಕ್’ ಹೆಸ್ರಲ್ಲಿ ಅಕ್ರಮ ದಂಧೆ – ಸೈಕೋ ಡಾಕ್ಟರ್‌ಗೆ ಬಿತ್ತು ಭರ್ಜರಿ ಗೂಸಾ

    ಚಿತ್ರದುರ್ಗ: ಆಸ್ಪತ್ರೆ ಅಂದ್ರೆ ಮೆಡಿಸಿನ್, ಆರೋಗ್ಯ ಕುರಿತ ಮಾಹಿತಿ ಇರೋದು ಸಹಜ. ಆದರೆ ಇಲ್ಲೊಂದು ಖಾಸಗಿ ಕ್ಲೀನಿಕ್‍ನಲ್ಲಿ ಮಹಿಳೆಯರ ಪ್ರೊಫೈಲ್ ಹಾಗೂ ನೂರಾರು ಮೊಬೈಲ್‍ಗಳು ಪತ್ತೆಯಾಗಿದೆ.

    ವೈದ್ಯೋ ನಾರಾಯಣ ಹರಿ ಅಂತಾರೆ. ಆದರೆ ಕೋಟೆನಾಡು ಚಿತ್ರದುರ್ಗದ ಖಾಸಗಿ ಬಸ್ ನಿಲ್ದಾಣದ ಪಕ್ಕದಲ್ಲಿಯೇ ಮಣಿಪಾಲ್ ಸಂಸ್ಥೆಯ ಹೆಸರನ್ನು ಬಳಸಿಕೊಂಡು ನಕಲಿ ಡಾಕ್ಟರ್ ಒಬ್ಬ ಹುಟ್ಟಿಕೊಂಡಿದ್ದಾನೆ. ಈ ಹೆಲ್ತ್ ಕ್ಲೀನಿಕ್ ಮಾತ್ರ ರೋಗಿಗಳ ಪಾಲಿಗೆ ಯಮಲೋಕ ಎನಿಸಿದೆ. 37 ವರ್ಷದ ಪೋಷಕ್ ಗೆ ಮದುವೆ ಆಗಿಲ್ಲ. ಹಾಗಾಗಿ ಈತ ಮ್ಯಾಟ್ರಿಮೋನಿ ಡಾಟ್ ಕಾಂನಲ್ಲಿ ತಾನೊಬ್ಬ ಸರ್ಕಾರಿ ವೈದ್ಯ ಅಂತ ನಕಲಿ ಪ್ರೊಫೈಲ್ ಕ್ರಿಯೇಟ್ ಮಾಡಿ ಒಂದೂವರೆ ಸಾವಿರಕ್ಕೂ ಹೆಚ್ಚು ಯುವತಿಯರ ಮೊಬೈಲ್ ನಂಬರ್‍ಗಳ ಸಹಿತ ವೆಬ್‍ಸೈಟ್‍ಗಳಿಂದ ರೆಸ್ಯುಮ್ ಕೂಡ ಸಂಗ್ರಹಿಸಿಟ್ಟಿದ್ದಾನೆ.

    ನಾಮಕಾವಸ್ಥೆಗೆ ಡೆಂಟಲ್ ಕ್ಲೀನಿಕ್ ಅಂತ ಬೋರ್ಡ್ ನೇತಾಕಿ ಮಹಿಳೆಯರು ಹಾಗೂ ಯುವತಿಯರಿಗೆ ವಂಚಿಸಿ ಕಿರುಕುಳ ನೀಡ್ತಾನಂತೆ. ಹೀಗಾಗಿ ನೊಂದ ಯುವತಿಯರಿಂದ ಮಾಹಿತಿ ಪಡೆದ ಸ್ಥಳಿಯ ಯುವಕರು, ಈ ಸೈಕೊ ಡಾಕ್ಟರ್‍ಗೆ ಭರ್ಜರಿ ಗೂಸಾ ಕೊಟ್ಟಿದ್ದಾರೆ.

    ಇವನ ಅಚಾತುರ್ಯದ ಬಗ್ಗೆ ಹಲವು ಬಾರಿ ಪೊಲೀಸ್ ಹಾಗೂ ಆರೋಗ್ಯ ಇಲಾಖೆ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ವಂತೆ. ಮಹಿಳೆಯರ ರೆಸ್ಯುಮ್ ಸಂಗ್ರಹದ ಬಗ್ಗೆ ಕೇಳಿದಾಗ, ನಾನು ಮದುವೆಯಾಗಲು ವಧು ಅನ್ವೇಷಣೆಗಾಗಿ ಯುವತಿಯರ ರೆಸ್ಯುಮ್ ಸಂಗ್ರಹಿಸಿರುವುದಾಗಿ ಹೇಳಿದ್ದಾನೆ. ಇನ್ನು ಡಿಹೆಚ್‍ಓ ಡಾ.ಪಾಲಾಕ್ಷ ಮಾತನಾಡಿ, ಪೋಷಕ್ ಸರ್ಕಾರಿ ವೈದ್ಯರಲ್ಲ. ಹೀಗಾಗಿ ಕ್ಲೀನಿಕ್‍ಗೆ ವಿಸಿಟ್ ಮಾಡಿ ಅಗತ್ಯ ಕ್ರಮ ಕೈಗೊಳ್ತೀವಿ ಅಂತ ಭರವಸೆ ನೀಡಿದ್ದಾರೆ.

    ಪ್ರತಿಷ್ಠಿತ ಮಣಿಪಾಲ್ ಆಸ್ಪತ್ರೆ ಹೆಸರು ಬಳಸಿಕೊಂಡು ಕಸದ ತೊಟ್ಟಿಯಂತಿರುವ ಕ್ಲೀನಿಕ್ ನಡಸಲಾಗ್ತಿದೆ. ಮಾತ್ರವಲ್ಲ ಆಸ್ಪತ್ರೆಯಲ್ಲಿ ಮಹಿಳೆಯರಿಗೆ ಕಿರುಕುಳ ನೀಡಲಾಗ್ತಿದೆ. ಹೀಗಾಗಿ ಆರೋಗ್ಯ ಇಲಾಖೆ ಈ ಸೈಕೊ ಡಾಕ್ಟರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಸಾರ್ವಜನಿಕರ ಹಿತ ಕಾಯಬೇಕಿದೆ.