Tag: CM Basavarajabommai

  • ಕಾಂಗ್ರೆಸ್‍ನವರು ತಮ್ಮ ವಿಚಾರಗಳಲ್ಲಿ ದಿವಾಳಿಯಾಗಿದ್ದಾರೆ: ಬೊಮ್ಮಾಯಿ

    ಕಾಂಗ್ರೆಸ್‍ನವರು ತಮ್ಮ ವಿಚಾರಗಳಲ್ಲಿ ದಿವಾಳಿಯಾಗಿದ್ದಾರೆ: ಬೊಮ್ಮಾಯಿ

    ಬೆಂಗಳೂರು: ಕಾಂಗ್ರೆಸ್ (Congress) ಅವರು ತಮ್ಮ ವಿಚಾರಗಳಲ್ಲಿ ದಿವಾಳಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  (Basavaraj Bommai) ವಾಗ್ದಾಳಿ ನಡೆಸಿದ್ದಾರೆ.

    ಮತದಾರರ ಸಮೀಕ್ಷೆ ಹೆಸರಿನಲ್ಲಿ ಖಾಸಗಿತನಕ್ಕೆ ಕನ್ನ ಹಾಕಲಾಗಿದೆ ಎಂಬ ಕಾಂಗ್ರೆಸ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಚುನಾವಣಾ ಆಯೋಗ ಸ್ವೀಪ್ ಕಾರ್ಯಕ್ರಮ ಕೈಗೊಳ್ಳಲು ಬಿಬಿಎಂಪಿ (BBMP) ಹಾಗೂ ಸ್ಥಳೀಯ ಸಂಸ್ಥೆಗಳಿಗೆ ವಹಿಸಿರುತ್ತಾರೆ. ಅವರು ಸಮೀಕ್ಷಾ ಕೆಲಸವನ್ನು ಎನ್‍ಜಿಓಗಳಿಗೆ ನೀಡಿರುತ್ತಾರೆ. ಇದೇನು ಮೊದಲ ಬಾರಿ ನೀಡಿರುವುದಲ್ಲ. 2018ರಲ್ಲಿ ಇದ್ದ ಸರ್ಕಾರದ ಕಾಲದಲ್ಲಿಯೂ ನೀಡಿದ್ದಾರೆ ಎಂದಿದ್ದಾರೆ.

    ಎನ್‍ಜಿಒ, ಬಿ.ಎಲ್.ಡಿ ದುರ್ಬಳಕೆ ಮಾಡಿದ್ದಾರೆ. ಆದ್ದರಿಂದ ಚುನಾವಣಾ ಆಯೋಗ ನೀಡಿರುವ ಆದೇಶದಿಂದ ಮೊದಲುಗೊಂಡು ಇಡೀ ಪ್ರಕರಣದ ಸಮಗ್ರ ತನಿಖೆಗೆ ಸೂಚನೆ ನೀಡುತ್ತೇನೆ. ನಿಜ ಹೊರಗೆ ಬರಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಟಿಪ್ಪು ಪ್ರತಿಮೆ ಬೇಡ ಎಂದ ಸಿಎಂ ಇಬ್ರಾಹಿಂ ವಿರುದ್ಧ ಚೇತನ್‌ ಕಿಡಿ – ಟಿಪ್ಪು ಸುಲ್ತಾನ್ ಆಧುನಿಕ ಕರ್ನಾಟಕದ ಐಕಾನ್

    ಕಾಂಗ್ರೆಸ್ ನನ್ನ ರಾಜೀನಾಮೆಗೆ ಒತ್ತಾಯಿಸುವುದು ಹಾಸ್ಯಾಸ್ಪದ. ಸಂಬಂಧವಿಲ್ಲದ್ದನ್ನು ಕೇಳುತ್ತಿದ್ದಾರೆ. ಅದೇ ಮಾನದಂಡವಾದರೆ ಕಾಂಗ್ರೆಸ್ ಮುಖ್ಯಮಂತ್ರಿಗಳು ಈವರೆಗೆ ಮೂರು ಬಾರಿ ರಾಜೀನಾಮೆ ನೀಡಬೇಕಿತ್ತು. ಇದೊಂದು ಆಧಾರರಹಿತ ಆರೋಪ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಜನರ ಸರ್ವೇ ಮಾಡಿಸಿ ಚುನಾವಣೆಗೆ ಬಳಸಿಕೊಂಡಿದೆ: ಬೊಮ್ಮಾಯಿ

    Live Tv
    [brid partner=56869869 player=32851 video=960834 autoplay=true]

  • ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು: ಡಾ.ಕೆ.ಸುಧಾಕರ್

    ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು: ಡಾ.ಕೆ.ಸುಧಾಕರ್

    ಬೆಂಗಳೂರು: ಜನರು ಮಾಸ್ಕ್ ಧರಿಸುತ್ತಿಲ್ಲ. ಕೋವಿಡ್ ಹೊರಟು ಹೋಗಿದೆ ಅಂತ ಅಂದುಕೊಂಡಿದ್ದಾರೆ. ಆದರೆ ಜನರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

    ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ ಇದೆ. ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಇರುತ್ತಾರೆ. ನಾನು ಕೂಡಾ ಎರಡು ವಾರಗಳಿಂದ ನಮ್ಮ ಇಲಾಖೆ ಅಧಿಕಾರಿಗಳ ಜೊತೆ ಸತತವಾಗಿ ಸಂಪರ್ಕದಲ್ಲಿ ಇದ್ದೇನೆ. 4 ನೇ ಅಲೆ ಹೇಗೆ ರಿಯಾಕ್ಟ್ ಮಾಡುತ್ತದೆ. ಹೊಸ ಪ್ರಭೇಧ ಏನಾದರೂ ಇದೆಯಾ ಅಂತ ಇವತ್ತಿನ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಸಭೆಯಲ್ಲಿ ಮುನ್ನೆಚ್ಚರಿಕೆ ಕ್ರಮ, 4ನೇ ಅಲೆ ಎದುರಿಸಲು ಯಾವ ಕ್ರಮ ತೆಗೆದುಕೊಳ್ಳಬೇಕು ಅಂತ ಚರ್ಚಿಸುತ್ತೇವೆ ಎಂದು ತಿಳಿಸಿದ್ದಾರೆ.

    ಜನರು ಮಾಸ್ಕ್ ಧರಿಸುತ್ತಿಲ್ಲ. ಕೋವಿಡ್ ಹೊರಟು ಹೋಗಿದೆ ಅಂತ ಅಂದುಕೊಂಡಿದ್ದಾರೆ. ಆದರೆ ಜನರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು. ಅನೇಕ ಜನರು ಲಸಿಕೆ ಕೂಡಾ ಪಡೆದಿಲ್ಲ. 2ನೇ ಡೋಸ್ ಪಡೆದಿಲ್ಲದವರು ಎರಡನೇ ಡೋಸ್ ಪಡೆಯಬೇಕು. ಬೂಸ್ಟರ್ ಡೋಸ್ ಕೂಡಾ ಪಡೆಯಬೇಕು. 12 ವರ್ಷ ಮೇಲ್ಪಟ್ಟ ಮಕ್ಕಳಿಗೂ ಪೋಷಕರು ಲಸಿಕೆ ಕೊಡಿಸಬೇಕು. ಆದಷ್ಟು ಬೇಗ 5 ವರ್ಷ ಮೇಲ್ಪಟ್ಟವರಿಗೂ ಲಸಿಕೆ ಬರಲಿದೆ. ಈ ಎಲ್ಲಾ ಅಂಶಗಳನ್ನು ಇವತ್ತಿನ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಕೊರೊನಾ ತಡೆಗಟ್ಟಲು ಯಾವ ಕ್ರಮಕೈಗೊಳ್ಳಬೇಕು ಮತ್ತು ನಿಯಮಗಳ ಬಗ್ಗೆ ತಜ್ಞರ ಸಲಹೆ ಪಡೆಯುತ್ತೇವೆ ಎಂದಿದ್ದಾರೆ.

    ಟೆಸ್ಟಿಂಗ್ ಪ್ರಮಾಣ ಹೆಚ್ಚಳ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪಾಸಿಟಿವಿಟಿ ದರದ ಆಧಾರದಲ್ಲಿ ಟೆಸ್ಟಿಂಗ್ ಜಾಸ್ತಿ ಮಾಡುತ್ತೇವೆ. ತಾಂತ್ರಿಕ ಸಲಹಾ ಸಮಿತಿ ಸಲಹೆ ಮೇರೆಗೆ ನಾವು ಟೆಸ್ಟಿಂಗ್ ಮಾಡುತ್ತಿದ್ದೇವೆ. ಅನಗತ್ಯವಾಗಿ ಟೆಸ್ಟ್ ಮಾಡಬೇಕಾಗಿಲ್ಲ. ನಮಗೆ 4ನೇ ಅಲೆ ಬಂದರೆ ಆಸ್ಪತ್ರೆಗೆ ಸೇರುವವರು ಹೆಚ್ಚಾಗುತ್ತಾರಾ ಎಂಬ ಬಗ್ಗೆ ಚರ್ಚೆ ಮಾಡಬೇಕಿದೆ. ಈ ಬಗ್ಗೆಯೂ ಇವತ್ತು ಮಾಹಿತಿ ಕಲೆ ಹಾಕುತ್ತೇವೆ. ದೆಹಲಿ ಸೇರಿದಂತೆ ಕೆಲ ರಾಜ್ಯಗಳಲ್ಲಿ ಸೋಂಕು ಹೆಚ್ಚಾಗಿದೆ. ಅಲ್ಲಿನ ಎಲ್ಲಾ ಮಾಹಿತಿ ಪಡೆದು ರಾಜ್ಯದ ಕ್ರಮಗಳ ಬಗ್ಗೆ ಇವತ್ತು ಚರ್ಚೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

    ನಮ್ಮಲ್ಲಿ ಓಮಿಕ್ರಾನ್ ಸಬ್ ವೇರಿಯಂಟ್ ಕಂಡು ಬಂದಿಲ್ಲ. ಈಗಾಗಲೇ ಲ್ಯಾಬ್‍ನಿಂದ ಕೇಂದ್ರಕ್ಕೆ ಮಾಹಿತಿ ರವಾನೆ ಆಗಿದೆ. ಕೇಂದ್ರದಿಂದ ಇನ್ನೂ ಅಧಿಕೃತವಾಗಿ ಯಾವುದೇ ಮಾಹಿತಿ ಕೊಟ್ಟಿಲ್ಲ. ಹೀಗಾಗಿ ರಾಜ್ಯದಲ್ಲಿ ಹೊಸ ತಳಿ ಪತ್ತೆ ಬಗ್ಗೆ ಆತಂಕ ಇಲ್ಲ ಎಂದು ಹೇಳಿದ್ದಾರೆ. ಸೂರ್ಯ- ಚಂದ್ರ ಇರೋವರೆಗೂ ಸಂವಿಧಾನ ಬದಲಾವಣೆ ಅಸಾಧ್ಯ: ಆನಂದ್ ಸಿಂಗ್

    ಕೊರೊನಾ 4ನೇ ಅಲೆ ಭೀತಿ ಹಿನ್ನಲೆ ಏರ್ ಪೋರ್ಟ್‍ಗಳಲ್ಲಿ ಕಠಿಣ ನಿಯಮಗಳನ್ನು ಈಗಾಗಲೇ ಜಾರಿಗೊಳಿಸಲಾಗಿದೆ. ಸೋಂಕು ಹೆಚ್ಚು ಇರುವ 8 ದೇಶಗಳಿಂದ ಬರುವ ಪ್ರಯಾಣಿಕರಿಗೆ ನಿಯಮ ಜಾರಿ ಮಾಡಲಾಗಿದೆ. ಏರ್ ಪೋರ್ಟ್ ನಲ್ಲಿ ಈ ಹಿಂದೆ ಇದ್ದ ಮಾರ್ಗಸೂಚಿಗಳೇ ಮುಂದುವರಿಕೆ ಆಗುತ್ತವೆ. ದೆಹಲಿ ಸೇರಿದಂತೆ ಕೆಲ ರಾಜ್ಯದಲ್ಲಿ ಸೋಂಕು ಹೆಚ್ಚಳವಾಗಿದೆ. ನಾವು ದೆಹಲಿಗಿಂತ 2-3 ವಾರ ಹಿಂದೆ ಇದ್ದೇವೆ. 2-3 ವಾರ ಆದ ಮೇಲೆ ನಮ್ಮಲ್ಲಿ ಹೇಗೆ ಸೋಂಕು ಹೆಚ್ಚಳವಾಗುತ್ತದೆ ಎಂಬ ಬಗ್ಗೆ ಗೊತ್ತಾಗಲಿದೆ ಎಂದಿದ್ದಾರೆ. ಇದನ್ನೂ ಓದಿ: ಅಕ್ರಮದಲ್ಲಿ ಒಳಗಾಗಿದ್ದವರು ಎಷ್ಟೇ ದೊಡ್ಡವರಾದ್ರೂ ರಕ್ಷಿಸುವ ಪ್ರಶ್ನೆಯಿಲ್ಲ: ಆರಗ ಜ್ಞಾನೇಂದ್ರ

    ರಾಜ್ಯದಲ್ಲಿ ಔಷಧಿ ಕೊರತೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಔಷಧಿ ಕೊರತೆ ಇಲ್ಲ. ಈಗಾಗಲೇ DHO,THOಗಳ ಅಕೌಂಟ್‍ಗೆ ಹಣ ಹಾಕಿದ್ದೇವೆ. ಸ್ಥಳೀಯವಾಗಿ ಅವಶ್ಯಕವಾದ ಔಷಧಿಗಳನ್ನು ಖರೀದಿಗೆ ಅನುಮತಿ ಕೊಟ್ಟಿದ್ದೇವೆ. ಅವರು ಔಷಧಿ ಖರೀದಿ ಮಾಡಬಹುದು ಎಂದು ತಿಳಿಸಿದ್ದಾರೆ.

  • ಬೊಮ್ಮಾಯಿ ನಾಯಕತ್ವದಲ್ಲೇ 2023ರ ಚುನಾವಣೆ: ವಿ.ಸೋಮಣ್ಣ

    ಬೊಮ್ಮಾಯಿ ನಾಯಕತ್ವದಲ್ಲೇ 2023ರ ಚುನಾವಣೆ: ವಿ.ಸೋಮಣ್ಣ

    ಬೆಳಗಾವಿ: 2023 ರ ಚುನಾವಣೆ ಬೊಮ್ಮಾಯಿ ನಾಯಕತ್ವದಲ್ಲೇ ನಡೆಯುತ್ತದೆ. ಸರ್ಕಾರ ತೆಗೆಯಬೇಕೆಂಬ ಹುಚ್ಚರಿದ್ದಾರೆ. ಆದರೆ ಈ ಬಗ್ಗೆ ಕ್ರಮವಹಿಸಲಾಗುತ್ತದೆ ಎಂದು ಹೇಳುವ ಮೂಲಕ ನಾಯಕತ್ವ ಬದಲಾವಣೆ ಕನಸುಕಾಣುತ್ತಿದ್ದ ನಾಯಕರಿಗೆ ವಸತಿ ಸಚಿವ ವಿ. ಸೋಮಣ್ಣ ತಿರುಗೇಟು ನೀಡಿದ್ದಾರೆ.

    ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಪುಟ ಪುನರ್ ರಚನೆ ಎಲ್ಲವೂ ಸಿಎಂ ಪರಮಾಧಿಕಾರ. 2023 ರ ಚುನಾವಣೆ ಬೊಮ್ಮಾಯಿ ನಾಯಕತ್ವದಲ್ಲಿ ನಡೆಯುತ್ತದೆ. ಗೊಂದಲ ಇದ್ದರೆ ಅದು ಮಾಧ್ಯಮದಲ್ಲಿ, ನಮ್ಮಲ್ಲಿ ಅಲ್ಲ. ನಮ್ಮ ಪಕ್ಷ ಅದಕ್ಕೆ ಮನ್ನಣೆ ಕೊಡಲ್ಲ. ತಿರುಕನ ಕನಸು ಕಾಣುವ ಜನರಿದ್ದಾರೆ. ಬಸವರಾಜ್ ಬೊಮ್ಮಾಯಿ 4 ತಿಂಗಳಲ್ಲಿ ಒಳ್ಳೆಯ ಕೆಲಸ ಮಾಡಿದ್ದಾರೆ. ಸರ್ಕಾರ ತೆಗೆಯಬೇಕೆಂಬ ಹುಚ್ಚರಿದ್ದಾರೆ. ಅಂಥವರ ವಿರುದ್ಧ ಪಕ್ಷ ಕ್ರಮವಹಿಸುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಇನ್ಮುಂದೆ 21 ವಯಸ್ಸಿನವರೂ ʻಎಣ್ಣೆʼ ಹೊಡಿಯಬಹುದು – ಹರಿಯಾಣ

    ಇದೇ ವೇಳೆ ಮತಾಂತರ ನಿಷೇಧ ಮಸೂದೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪರಿಸ್ಥಿತಿ ಏನು ಎನ್ನುವುದಕ್ಕಿಂತ ಏನಿದೆ ಎನ್ನುವ ಬಗ್ಗೆ ಯೋಚಿಸಬೇಕು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಸಚಿವ ಸಂಪುಟದಲ್ಲಿ ಮತಾಂತರ ಮಸೂದೆ ಜಾರಿಗೆ ತರಲು ಅನುಮತಿ ನೀಡಿದ್ದಾರೆ. ನಾವು ಕೆಲವೊಂದು ಮಾರ್ಪಾಡು ಮಾಡಿದ್ದೇವೆ ಅಷ್ಟೇ. ಇಂತಹ ಅವ್ಯವಸ್ಥೆಗಳು ಸರಿಯಾಗಬೇಕು ಎಂದು ಈ ಕಾಯ್ದೆಯಲ್ಲಿ ತರಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗೋಣಿಚೀಲದಲ್ಲಿ ನವಜಾತ ಶಿಶುವಿನ ಶವ ಪತ್ತೆ – ತಾಯಿ, ಪ್ರಿಯಕರನ ಬಂಧನ

    ಕಾನೂನು ಸಚಿವ ಮಾಧುಸ್ವಾಮಿ ಈ ಬಗ್ಗೆ ಈಗಾಗಲೇ ಮಾಹಿತಿ ನೀಡಿದ್ದಾರೆ. ನಮಗೆ ಎಲ್ಲಕ್ಕಿಂತ ದೊಡ್ಡದು ರಾಜ್ಯ. ರಾಜ್ಯಕ್ಕಿಂತ ದೊಡ್ಡದು ದೇಶ. ದೇಶಕ್ಕಿಂತ ದೊಡ್ಡದು ಸಮಾಜ. ಸಮಾಜದಲ್ಲಿ ಮತಾಂತರ ಕಾಯ್ದೆ ತಂದಿರುವುದು ಒಳ್ಳೆಯದಕ್ಕಾಗಿ. ಅವರು ತಂದಿರುವುದನ್ನು ನಾವು ಒಪ್ಪಿಕೊಂಡಿದ್ದೇವೆ. ನೀವು ಮಾಡಿರುವುದು ಸಮಂಜಸವಾಗಿದೆ. ಚರ್ಚೆ ಇಲ್ಲದೆ ಕಾಯ್ದೆ ಒಪ್ಪಿಕೊಂಡರೆ ಸ್ವಲ್ಪ ಬೆಲೆ ಇರುತ್ತದೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.