Tag: CM BS Yediyurappa

  • ಯಡಿಯೂರಪ್ಪನವರಿಗೆ ಈಗ ಮದ್ವೆ ಮಾಡಿದ್ರೂ 2 ಮಕ್ಕಳು ಮಾಡುವ ಶಕ್ತಿ ಇದೆ: ಇಬ್ರಾಹಿಂ

    ಯಡಿಯೂರಪ್ಪನವರಿಗೆ ಈಗ ಮದ್ವೆ ಮಾಡಿದ್ರೂ 2 ಮಕ್ಕಳು ಮಾಡುವ ಶಕ್ತಿ ಇದೆ: ಇಬ್ರಾಹಿಂ

    – ಒತ್ತಡ ಹಾಕಿ ರಾಜೀನಾಮೆ ಪಡೆದಿರುವುದು ಸತ್‍ಸಂಪ್ರದಾಯವಲ್ಲ

    ಬೆಂಗಳೂರು: ಒತ್ತಡ ಹಾಕಿ ಯಡಿಯೂರಪ್ಪನವರ ರಾಜೀನಾಮೆ ಪಡೆದಿರುವುದು ಒಳ್ಳೆಯ ಸಂಪ್ರದಾಯವಲ್ಲ ಎಂದು ಕಾಂಗ್ರೆಸ್ ಮುಖಂಡ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.

    ಕಾವೇರಿ ನಿವಾಸಕ್ಕೆ ಆಗಮಿಸಿ ಯಡಿಯೂರಪ್ಪ ಭೇಟಿ ಮಾಡಿದ ಬಳಿಕ ಮಾಧ್ಯಮದವರೊಂಧಿಗೆ ಮಾತನಾಡಿದ ಅವರು, ಏಕಾಏಕಿ ಒತ್ತಡ ಹಾಕಿ ರಾಜೀನಾಮೆ ಪಡೆಯದಿರುವುದು ಒಳ್ಳೆಯ ಸಂಪ್ರದಾಯವಲ್ಲ. ಇದೀಗ ಯಡಿಯೂರಪ್ಪನವರನ್ನು ಭೇಟಿಯಾದ ಲವಲವಿಕೆಯಿಂದ ಇದ್ದಾರೆ. ನಮ್ಮ ಜಿಲ್ಲೆಯವರೇ ಅವರು. ಆರೋಗ್ಯ ಕಾಪಾಡಿಕೊಳ್ಳಿ, ರಾಜ್ಯಪಾಲ ಹುದ್ದೆಯನ್ನು ಬೇಡವೆಂದು ಹೇಳಿದ್ದೀರಿ. ಲೋಪದೋಷಗಳಿರಬಹುದು, ಆರೋಪ ಪ್ರತ್ಯಾರೋಪಗಳು ಇರಬಹುದು. ರಾಜ್ಯ ಹಿತದೃಷ್ಟಿಯಿಂದ ಸ್ವಾಭಿಮಾನ ಕಾಪಾಡಿಕೊಳ್ಳುವುದು ಮುಖ್ಯ ಎಂದರು.

    ಯಡಿಯೂರಪ್ಪನವರಿಗೆ ಈಗ ಮದುವೆ ಮಾಡಿದರೂ ಎರಡು ಮಕ್ಕಳು ಮಾಡುವ ಶಕ್ತಿ ಇದೆ. ಫುಲ್ ಆಕ್ಟಿವ್ ಆಗಿದ್ದಾರೆ. ಕೆಲವು ಲೋಪದೋಷಗಳು ಇರಬಹುದು. ಆದರೆ, ರಾಜ್ಯದ ದೃಷ್ಟಿಯಿಂದ ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದರು.

    ಸಿಎಂ ಆಗಿದ್ದಾಗ ಯಡಿಯೂರಪ್ಪನವರನ್ನು ಎಂದೂ ಭೇಟಿ ಮಾಡಿರಲಿಲ್ಲ. ನಮ್ಮ ಜಿಲ್ಲೆಯವರು, ಮಲೆನಾಡಿವರು ಎಂಬ ಕಾರಣಕ್ಕೆ ಬಂದಿದ್ದೇನೆ. ಓರಜಿನಲ್ ಗಿರಾಕಿ ಹೋದ ಮೇಲೆ ಡೂಪ್ಲಿಕೇಟ್ ಗಿರಾಕಿ ಬಂದರೇನು ಎಂದು ನಾಯಕತ್ವ ಬದಲಾವಣೆ ಕುರಿತು ವ್ಯಂಗ್ಯವಾಡಿದ್ದಾರೆ.

  • ಯಡಿಯೂರಪ್ಪ ರಾಜೀನಾಮೆಯಿಂದ ಕಾಂಗ್ರೆಸ್​ಗೆ ಲಾಭವಿಲ್ಲ: ರಮೇಶ್ ಕುಮಾರ್

    ಯಡಿಯೂರಪ್ಪ ರಾಜೀನಾಮೆಯಿಂದ ಕಾಂಗ್ರೆಸ್​ಗೆ ಲಾಭವಿಲ್ಲ: ರಮೇಶ್ ಕುಮಾರ್

    ಕೋಲಾರ: ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿದ್ದು ಕಾಂಗ್ರೆಸ್​ಗೆ ಪ್ಲಸ್ಸೂ ಆಗಲ್ಲ ಮೈನಸ್ಸೂ ಆಗಲ್ಲ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.

    ಜಿಲ್ಲಾ ಕಾಂಗ್ರೆಸ್​ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರ ಹೋದಾಗ ಬೇಸರ ಸಹಜ, ನಮಗೂ ನೋವಾಗುತ್ತೆ, ಅವರಿಗೂ ನೋವಾಗುತ್ತೆ. ಕಳೆದ 40 ವರ್ಷಗಳ ಕಾಲ ಸಾರ್ವಜನಿಕ ಜೀವನದಲ್ಲಿ ಸೇವೆ ಸಲ್ಲಿಸಿದ್ದಾರೆ, ಒಳ್ಳೆಯ ಅರೋಗ್ಯ ಅವರ ಎಲ್ಲಾ ಚಟುವಟಿಕೆಗಳು ಹೀಗೆ ಮುಂದುವರೆಯಲಿ ಎಂದು ಶುಭ ಹಾರೈಸುವೆ ಎಂದರು.

    ಯಡಿಯೂರಪ್ಪ ಅವರಿಗೆ 78 ವರ್ಷ ವಯಸ್ಸಾಗಿದೆ ಹಾಗಾಗಿ ಈಗ ಸಿಎಂ ಆಗಿದ್ದರೆ ಒತ್ತಡ ಇರುತ್ತೆ. ವಿಶ್ರಾಂತಿ ಅವಶ್ಯಕವಾಗಿದೆ, ರಾಜೀನಾಮೆ ನಂತರ ಬೇಸರ ಸಹಜ, ಒಂದೆರೆಡು ದಿನಗಳ ನಂತರ ಎಲ್ಲವೂ ಸರಿಯಾಗುತ್ತದೆ ಎಂದರು.

    ಸಿಎಂ ರಾಜಿನಾಮೆಗೆ ಮಠಾಧೀಶರ ವಿರೋಧ ಪ್ರಶ್ನೆಗೆ ಪ್ರತಿಕ್ರಿಯೆ ನೀಡದ ರಮೇಶ್ ಕುಮಾರ್, ಪಕ್ಷ ಅವರಿಗೆ ಅವಕಾಶ ಕೊಟ್ಟಿತ್ತು, ಪಕ್ಷ ಹೇಳಿದಂತೆ ಅವರು ನಡೆದುಕೊಂಡಿದ್ದಾರೆ ಎಂದರು.

    ರಾಜೀನಾಮೆಯಿಂದ ವಲಸಿಗ ಸಚಿವರು ಕಂಗಾಲಾಗಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ವಲಸಿಗ ಸಚಿವರು ಬಿಜೆಪಿ ಸಿದ್ಧಾಂತ ನಂಬಿ ಹೋಗಿದ್ದಾರೋ, ಯಡಿಯೂರಪ್ಪ ಸಿದ್ಧಾಂತ ನಂಬಿ ಹೋದ್ರೋ ಗೊತ್ತಿಲ್ಲ, ಕಂಗಾಲಾಗಿದ್ದಾರೆಯೋ, ದಿಕ್ಕಾಪಾಲಾಗಿದ್ದಾರೆಯೋ ನನಗೆ ಗೊತ್ತಿಲ್ಲ. ನನಗೆ ಯಾರೂ, ಏನೂ ಹೇಳಿಲ್ಲ ಎಂದು ವಲಸಿಗ ಸಚಿವರು ಸೇರಿದಂತೆ ಆರೋಗ್ಯ ಸಚಿವ ಸುಧಾಕರ್ ಕುರಿತು ವ್ಯಂಗ್ಯವಾಗಿಯೇ ಉತ್ತರಿಸಿದರು.

    ಕಾಂಗ್ರೇಸ್ ವಕ್ತಾರ ವಿ.ಆರ್.ಸುದರ್ಶನ್ ಮಾತನಾಡಿ, ಬಿಎಸ್‍ವೈ ಹೋರಾಟದ ಮೂಲಕ ಸಿಎಂ ಆದವರು, ನಾಲ್ಕು ಬಾರಿ ಸಿಎಂ ಆಗಿ ಸಾಕಷ್ಟು ಉತ್ತಮ ಕೆಲಸಗಳನ್ನ ಮಾಡಿದ್ದಾರೆ. ಅವರಿಗೆ ಬಂದಂತಹ ಅವಕಾಶಗಳಲ್ಲಿ ಬಹಳ ದೊಡ್ಡ ಕ್ರಾಂತಿ ಮಾಡಬಹುದಾಗಿತ್ತು. ಆದ್ರೆ ಅವರು ಮಾಡಿಲ್ಲ ಅವರಿಗೆ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು.

  • ಬಿಎಸ್‍ವೈ ರಾಜೀನಾಮೆಯಿಂದ ಲಿಂಗಾಯಿತ ಮತಗಳಲ್ಲಿ ಬದಲಾವಣೆ ಆಗಲ್ಲ: ಶಾಸಕ ರವೀಂದ್ರನಾಥ್

    ಬಿಎಸ್‍ವೈ ರಾಜೀನಾಮೆಯಿಂದ ಲಿಂಗಾಯಿತ ಮತಗಳಲ್ಲಿ ಬದಲಾವಣೆ ಆಗಲ್ಲ: ಶಾಸಕ ರವೀಂದ್ರನಾಥ್

    ದಾವಣಗೆರೆ: ಬಿ.ಎಸ್.ಯಡಿಯೂರಪ್ಪನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಲಿಂಗಾಯಿತ ಮತಗಳಲ್ಲಿ ಬದಲಾವಣೆ ಆಗಲ್ಲ. ಬಿಎಸ್‍ವೈ ಕೆಜೆಪಿ ಕಟ್ಟಿದಾಗ ಕೇವಲ ಆರು ಸೀಟ್ ಗೆದ್ದಿದ್ದರು, ನಾವು ಲಿಂಗಾಯಿತರು ಬಿಜೆಪಿಯಲ್ಲೇ ಇದ್ದು, 40 ಸ್ಥಾನ ಗೆದ್ದಿದ್ದೆವು ಎಂದು ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್.ಎ.ರವೀಂದ್ರನಾಥ್ ಹೇಳಿದರು.

    ಜಿಲ್ಲೆಯ ಶಿರಮಗೊಂಡನಹಳ್ಳಿಯಲ್ಲಿ ಮಾತನಾಡಿದ ಅವರು, ಲಿಂಗಾಯಿತ ಮತಗಳು ಅವರ ಕಡೆ ಇದ್ದಿದ್ದರೆ ಕೆಜೆಪಿಯಿಂದ ಜಾಸ್ತಿ ಸೀಟು ಗೆಲ್ಲಬೇಕಿತ್ತು. ಆ ರೀತಿ ಯಾವುದೇ ಬದಲಾವಣೆ ಆಗಲ್ಲ. ಎರಡು ವರ್ಷದ ನಿಯಮದಂತೆ ಬಿಎಸ್‍ವೈ ರಾಜೀನಾಮೆ ನೀಡಿದ್ದಾರೆ ಅಷ್ಟೇ ಎಂದರು.

    ಸ್ವಾಮಿಜಿಗಳು, ಶಾಮನೂರು ಶಿವಶಂಕರಪ್ಪ ಬೆಂಬಲ ನೀಡಿದ ಕುರಿತು ಮಾತನಾಡಿದ ಅವರು, ಸ್ವಾಮೀಜಿಗಳು ಈಗ ಬೆಂಬಲ ನೀಡಿದ್ದಾರೆ, ಮುಂದಿನ ನೂತನ ಸಿಎಂ ಬಂದರೆ ಅವರಿಗೂ ಹಾರ ಹಾಕಿ ಬೆಂಬಲ ವ್ಯಕ್ತಪಡಿಸುತ್ತಾರೆ. ಅವರ ಬಗ್ಗೆ ನಾನು ಮಾತನಾಡಲ್ಲ ಎಂದು ಟಾಂಗ್ ಕೊಟ್ಟರು.

    ಶಾಸಕ ರೇಣುಕಾಚಾರ್ಯ ಯಡಿಯೂರಪ್ಪನವರ ಮಾನಸ ಪುತ್ರ, ಬಿಎಸ್‍ವೈ ಸಿಎಂ ಇದ್ದಾಗ ಜಾಸ್ತಿ ಅನುದಾನ ಕೊಟ್ಟಿದ್ದಾರೆ. ಇನ್ನು ಮುಂದೆ ನಾವು ಹೆಚ್ಚು ಅನುದಾನ ತರುತ್ತೇವೆ ಎಂದು ಸವಾಲು ಹಾಕಿದರು.

    ಸಚಿವ ಸ್ಥಾನದ ಮೇಲೆ ಕಣ್ಣು:
    ನಾನು ಐದು ಬಾರಿ ಸೋತು, ಐದು ಬಾರಿ ಗೆದ್ದಿದ್ದೇನೆ. ಸಚಿವ ಸ್ಥಾನಕ್ಕೆ ಸೀನಿಯಾರಿಟಿ ನಂದೂ ಇದೆ. ಪಾರ್ಟಿ ನಿರ್ಣಯಕ್ಕೆ ಬದ್ಧವಾಗಿದ್ದೇನೆ ಎಂದು ಸಚಿವ ಸ್ಥಾನಕ್ಕೆ ಶಾಸಕ ರವೀಂದ್ರನಾಥ್ ಟವಲ್ ಹಾಕಿದರು. ಯಾವುದೇ ಸ್ಥಾನ ಕೊಟ್ಟರೂ ಮಾಡುತ್ತೇನೆ, ಆಶಾವಾದಿಯಾಗಿದ್ದೇನೆ. ಸಿಎಂ ರೇಸ್ ನಲ್ಲಿ ಪ್ರಹ್ಲಾದ್ ಜೋಶಿ, ಮುರುಗೇಶ್ ನಿರಾಣಿ, ಉಮೇಶ್ ಕತ್ತಿ, ಜಗದೀಶ್ ಶೆಟ್ಟರ್ ಹೆಸರು ಇದೆ. ಹೊಸಬರು ಎಂದರೆ ಸಂತೋಷ್ ಅವರೇ ಇದ್ದಾರೆ ಎಂದರು.

  • ರಾಜೀನಾಮೆಗೂ ಮುನ್ನ ಸರ್ಕಾರಿ ನೌಕರರಿಗೆ ಯಡಿಯೂರಪ್ಪ ಬಂಪರ್ ಗಿಫ್ಟ್

    ರಾಜೀನಾಮೆಗೂ ಮುನ್ನ ಸರ್ಕಾರಿ ನೌಕರರಿಗೆ ಯಡಿಯೂರಪ್ಪ ಬಂಪರ್ ಗಿಫ್ಟ್

    ಬೆಂಗಳೂರು: ರಾಜೀನಾಮೆಗೂ ಮುನ್ನ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಿಹಿ ಸುದ್ದಿ ಕೊಟ್ಟಿದ್ದು, ತುಟ್ಟಿ ಭತ್ಯೆ ಹೆಚ್ಚಳ ಮಾಡಿದ್ದಾರೆ.

    ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ ನೀಡಿರುವ ಸಿಎಂ ಯಡಿಯೂರಪ್ಪ, ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.11.25 ರಿಂದ ಶೇ.21.50ಕ್ಕೆ ಹೆಚ್ಚಿಸಲು ಅನುಮತಿ ನೀಡಿದ್ದರು. ಅಂದರೆ ಶೇ.10ರಷ್ಟು ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಲಾಗಿದೆ. ಜುಲೈ 1ರಿಂದ ಅನ್ವಯವಾಗುವಂತೆ ಆದೇಶ ಹೊರಡಿಸಲಾಗಿದೆ.

    ತಾವು ರಾಜೀನಾಮೆ ಕೊಡುವ ಮುನ್ನವೇ ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಲು ಸಿಎಂ ಯಡಿಯೂರಪ್ಪ ಹೇಳಿದ್ದರು. ಹೀಗಾಗಿ ಇಂದು ಆದೇಶಿಸಲಾಗಿದೆ. ವಾರದ ಹಿಂದೆ ತುಟ್ಟಿಭತ್ಯೆ ಪರಿಷ್ಕರಣೆಗೆ ಸಿಎಂ ಯಡಿಯೂರಪ್ಪ ಸಹಿ ಹಾಕಿದ್ದರು. ತಮ್ಮ ಭಾಷಣದಲ್ಲೂ ಸರ್ಕಾರಿ ನೌಕರರ ಬಗ್ಗೆ ಮಾತನಾಡಿ, ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ತುಟ್ಟಿ ಭತ್ಯೆ ಹೆಚ್ಚಳ ಆದೇಶ ಹೊರಬಿದ್ದಿದೆ.

  • ಬಿಜೆಪಿ ತೊಲಗದಿದ್ದರೆ ರಾಜ್ಯಕ್ಕೆ ಮುಕ್ತಿ ಇಲ್ಲ: ಸಿದ್ದರಾಮಯ್ಯ

    ಬಿಜೆಪಿ ತೊಲಗದಿದ್ದರೆ ರಾಜ್ಯಕ್ಕೆ ಮುಕ್ತಿ ಇಲ್ಲ: ಸಿದ್ದರಾಮಯ್ಯ

    ಗದಗ: ಯಡಿಯೂರಪ್ಪ ರಾಜ್ಯ ಕಂಡ ಕಡು ಭ್ರಷ್ಟ ಮುಖ್ಯಮಂತ್ರಿ, ಅವರು ರಾಜೀನಾಮೆ ಕೊಡುವುದರಿಂದ ಅಥವಾ ಇನ್ನೊಬ್ಬ ಮುಖ್ಯಮಂತ್ರಿ ಬರುವುದರಿಂದ ರಾಜ್ಯಕ್ಕೆ ಒಳ್ಳೆಯದಾಗುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

    ಸ್ವ ಕ್ಷೇತ್ರ ಬಾದಾಮಿಗೆ ಹೋಗುವ ಮುನ್ನ ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡುವ ವಿಚಾರವಾಗಿ ನಗರದಲ್ಲಿ ಪ್ರತಿಕ್ರಿಯಿಸಿದರು. ಬಿಜೆಪಿಯೇ ಒಂದು ಭ್ರಷ್ಟ ಪಕ್ಷ, ಬಿಜೆಪಿ ತೊಲಗದಿದ್ದರೆ ರಾಜ್ಯಕ್ಕೆ ಮುಕ್ತಿ ಇಲ್ಲ. ಯಡಿಯೂರಪ್ಪ ಕರ್ನಾಟಕ ಕಂಡ ಒಬ್ಬ ಭ್ರಷ್ಟ ಮುಖ್ಯಮಂತ್ರಿ, ಇನ್ನೊಬ್ಬ ಬಂದರೂ ಭ್ರಷ್ಟ ಮುಖ್ಯಮಂತ್ರಿಯೇ ಆಗಿರುತ್ತಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಭ್ರಷ್ಟ ಮುಖ್ಯಮಂತ್ರಿ ತೆಗೆದು ಭ್ರಷ್ಟನನ್ನು ಮಾಡಿದರೆ ಸಾಮಾನ್ಯ ಜನರಿಗೇನು ಲಾಭ: ಸಿದ್ದರಾಮಯ್ಯ

    ಮುಂದಿನ ಸಿಎಂ ಯಾರಾಗಬಹುದು ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾನೇನು ಬಿಜೆಪಿ ಅಧ್ಯಕ್ಷನೇ? ಅದು ಅವರ ಪಕ್ಷದ ವಿಚಾರ ಎಂದು ಉತ್ತರಿಸಿದರು. ಯಡಿಯೂರಪ್ಪನವರ ಪರ ಸ್ವಾಮೀಜಿಗಳು ನಿಂತಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಸ್ವಾಮೀಜಿಗಳು ರಾಜಕಾರಣದಲ್ಲಿ ಬರದೇ ಇರುವುದು ಒಳ್ಳೆಯದು, ಧರ್ಮ ಕ್ಷೇತ್ರಕ್ಕೆ ಮಾತ್ರ ಸೀಮಿತ ಇರಬೇಕು ಎಂದು ಹೇಳಿದರು. ಇದನ್ನೂ ಓದಿ: ಕೇಂದ್ರ ಸಚಿವರಾಗುವಂತೆ ವಾಜಪೇಯಿ ಹೇಳಿದ್ದನ್ನು ನೆನೆದು ಕಣ್ಣೀರಿಟ್ಟ ಸಿಎಂ ಯಡಿಯೂರಪ್ಪ

    ರಾಜ್ಯಕ್ಕೆ ಹೊಸ ಸಿಎಂ ಬಂದರೂ ಸರ್ಕಾರದ ಭ್ರಷ್ಟಾಚಾರ ಬಯಲು ಮಾಡವ ನಮ್ಮ ಹೋರಾಟ ಮುಂದುವರಿಯಲಿದೆ. ಕಾಂಗ್ರೆಸ್ ವಲಸಿಗರ ಪರಿಸ್ಥಿತಿ ನನಗೆ ಗೊತ್ತಿಲ್ಲ. ನಮ್ಮ ಪಕ್ಷ ಬಿಟ್ಟು ಬಿಜೆಪಿಗೆ ಹೋದವರಿಗೆ ಜನ ಪಾಠ ಕಲಿಸುತ್ತಾರೆ ಎಂದು ಗುಡುಗಿದರು.

  • ನಾನೇನೂ ಮಾತನಾಡಲ್ಲ ಎಂದ ಪ್ರಹ್ಲಾದ್ ಜೋಶಿ

    ನಾನೇನೂ ಮಾತನಾಡಲ್ಲ ಎಂದ ಪ್ರಹ್ಲಾದ್ ಜೋಶಿ

    ಬೆಂಗಳೂರು: ನಾಯಕತ್ವ ಬದಲಾವಣೆ ಸೇರಿದಂತೆ ಯಾವುದೇ ವಿಚಾರದ ಕುರಿತು ನಾನು ಮಾತನಾಡುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

    ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಪ್ರಹ್ಲಾದ್ ಜೋಶಿ ನಿರಾಕರಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಬದಲಾವಣೆ ನಂತರ ಸಂಭಾವ್ಯ ಸಿಎಂ ಅಂತಲೇ ಪ್ರಹ್ಲಾದ್ ಜೋಶಿಯವರ ಹೆಸರು ಮುನ್ನೆಲೆಗೆ ಬಂದಿದ್ದು, ಸಾಕಷ್ಟು ಚರ್ಚೆ ಸಹ ನಡೆಯುತ್ತಿದೆ. ಆದರೆ ಜೋಶಿ ಮಾತ್ರ ಯಾವುದಕ್ಕೂ ಪ್ರತಿಕ್ರಿಯಿಸುವುದಿಲ್ಲ ಎಂದಿದ್ದಾರೆ.

    ಸಿಎಂ ಹೇಳಿದ್ದೇನು?:
    ತಾವು ರಾಜೀನಾಮೆ ನೀಡುವ ಕುರಿತು ಪ್ರತಿಕ್ರಿಯಿಸಿದ ಸಿಎಂ, ಕೋವಿಡ್, ಪ್ರವಾಹ ಪರಿಸ್ಥಿತಿಯಲ್ಲಿ ಸಿಎಂ ಬದಲಾವಣೆ ಬೇಡ ಎಂಬ ರೀತಿಯಲ್ಲಿ ಪರೋಕ್ಷವಾಗಿ ಮುಖ್ಯಮಂತ್ರಿಗಳು ಕಾದು ನೋಡೋಣ ಅಂತಾ ಹೇಳಿದರು. ನಾಳೆ ಸಾಧ್ಯವಾದರೆ ಮಧ್ಯಾಹ್ನದ ಬಳಿಕ ಕಾರವಾರಕ್ಕೆ ಭೇಟಿ ನೀಡುವೆ. ಕೇಂದ್ರ ಸರ್ಕಾರ ಏನೇ ನಿರ್ಧಾರ ಕೈಗೊಂಡರೂ ಅದಕ್ಕೆ ಬದ್ಧನಿದ್ದೇನೆ. ಚುನಾವಣೆಗೆ ಒಂದು ಮುಕ್ಕಾಲು ವರ್ಷ ಇದೆ. ಹಾಗಾಗಿ ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರುವ ಕೆಲಸ ಮಾಡುತ್ತೇವೆ. ನೂರು ಸಿದ್ದರಾಮಯ್ಯ ಬಂದ್ರೂ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಬರಲಿದೆ ಎಂದು ಭವಿಷ್ಯ ನುಡಿದರು.

    ಇದೇ ವೇಳೆ ಮಾಜಿ ಸಚಿವ ಸಿ.ಟಿ.ರವಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಬಿಎಸ್‍ವೈ, ನಮ್ಮ ರಾಜ್ಯದಲ್ಲಿ ಬೇರೆ ಯಾರಿಗೂ ಸಿಗದ ಸ್ಥಾನಮಾನ ನನಗೆ ಸಿಕ್ಕಿದೆ. ಅದಕ್ಕಾಗಿ ಪ್ರಧಾನಿ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾ ಅವರಿಗೆ ವಂದನೆ ಸಲ್ಲಿಸುವೆ. ಪಕ್ಷದಲ್ಲಿ ನಾವೆಲ್ಲರೂ ಕಾರ್ಯಕರ್ತರಾಗಿದ್ದು, ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ ಎಂದು ಹೇಳಿದರು. ಇನ್ನೂ ಸಿಎಂ ಬದಲಾವಣೆ ಕುರಿತ ಪ್ರಶ್ನೆಗೆ, ಕಾದು ನೋಡೋಣ ಎಂದು ಮೂರು ಬಾರಿ ಹೇಳಿ ಹೊರಟರು.

  • ಯಡಿಯೂರಪ್ಪನವರಿಗೆ ಬಿಜೆಪಿ ಸಾಕಷ್ಟು ಅವಕಾಶಗಳನ್ನು ಕೊಟ್ಟಿದೆ: ಸಿ.ಟಿ.ರವಿ

    ಯಡಿಯೂರಪ್ಪನವರಿಗೆ ಬಿಜೆಪಿ ಸಾಕಷ್ಟು ಅವಕಾಶಗಳನ್ನು ಕೊಟ್ಟಿದೆ: ಸಿ.ಟಿ.ರವಿ

    ಪಣಜಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ಇದೀಗ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಸಾಕಷ್ಟು ಅವಕಾಶಗಳನ್ನು ನೀಡಿದೆ ಎಂದು ಹೇಳಿದ್ದಾರೆ. ಈ ಮೂಲಕ ಪರೋಕ್ಷವಾಗಿ ನಾಯಕತ್ವ ಬದಲಾವಣೆ ಪರವಾಗಿ ಮಾತನಾಡಿದ್ದಾರೆ.

    ಗೋವಾದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರು ಜನಪ್ರಿಯ ನಾಯಕರು, ಬಿಎಸ್‍ವೈ ಅವರ ಜನಪ್ರಿಯತೆಯನ್ನು ಎಲ್ಲರೂ ಒಪ್ಪಿಕೊಳ್ಳಲೇಬೇಕು. ಅವರೊಬ್ಬ ಉತ್ತಮ ನಾಯಕ, ಅದರಂತೆ ಪಕ್ಷ ಅವರಿಗೆ ಸಾಕಷ್ಟು ಅವಕಾಶಗಳನ್ನ ನೀಡಿದೆ. ಇದಕ್ಕಾಗಿಯೇ ನಾಲ್ಕು ಬಾರಿ ಮುಖ್ಯಮಂತ್ರಿ ಆಗಿ ಕರ್ನಾಟಕ ಜನತೆ ಸೇವೆ ಮಾಡಲು ಅವಕಾಶ ಸಿಕ್ಕಿದೆ. ವಿಪಕ್ಷ ನಾಯಕರಾಗಿ, ಉಪ ಮುಖ್ಯಮಂತ್ರಿಯಾಗಿ, ನಾಲ್ಕು ಬಾರಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಲು ಪಕ್ಷ ಅವಕಾಶ ನೀಡಲಾಗಿದೆ ಎಂದರು.

    ಕಾಂಗ್ರೆಸ್, ಜನತದಳ, ಕಮ್ಯೂನಿಸ್ಟ್ ಪಕ್ಷಗಳಲ್ಲಿ ಈ ರೀತಿ ಅವಕಾಶ ನೀಡಿಲ್ಲ, ಬಿಜೆಪಿ ಎಲ್ಲ ಅವಕಾಶವನ್ನು ಅವರಿಗೆ ನೀಡಿದೆ. ಬಿಜೆಪಿ ಕಾರ್ಯಕರ್ತನಿಂದ ಹಿಡಿದು ನಾಯಕನಾಗಿ ಬೆಳೆಯುವಂತೆ ಅವಕಾಶ ನೀಡಿದೆ. ಎಲ್ಲ ಕಾರ್ಯಕರ್ತರ ಶಕ್ತಿಯಿಂದ ಇಂದು ಬಿಜೆಪಿಗೆ ಶಕ್ತಿ ಬಂದಿದೆ ಎಂದು ಹೇಳಿದ್ದಾರೆ.

    ಯಡಿಯೂರಪ್ಪನವರ ಬಗ್ಗೆ ಸಚಿವರು, ಶಾಸಕರು ಬೇಸರ ವ್ಯಕ್ತಪಡಿಸುತ್ತಿರುವುದರ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಅದರ ಬಗ್ಗೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಮಾತನಾಡುತ್ತಾರೆ. ರಾಜಕಾರಣದಲ್ಲಿ ಇವೆಲ್ಲವೂ ಸಹಜ, ಈ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ ಎಂದಿದ್ದಾರೆ.

  • ಎರಡು ತಿಂಗಳ ಹಿಂದೆಯೇ ರಾಜೀನಾಮೆಗೆ ಮುಂದಾಗಿದ್ದೆ: ಸಿಎಂ ಬಿಎಸ್‍ವೈ

    ಎರಡು ತಿಂಗಳ ಹಿಂದೆಯೇ ರಾಜೀನಾಮೆಗೆ ಮುಂದಾಗಿದ್ದೆ: ಸಿಎಂ ಬಿಎಸ್‍ವೈ

    – ಹೈಕಮಾಂಡ್ ಸಂದೇಶಕ್ಕೆ ಕಾಯುತ್ತಿದ್ದೇನೆ

    ಬೆಂಗಳೂರು: ಎರಡು ತಿಂಗಳ ಹಿಂದೆಯೇ ರಾಜೀನಾಮೆಗೆ ಮುಂದಾಗಿದ್ದೆ ಎಂಬ ಸ್ಫೋಟಕ ಹೇಳಿಕೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

    ಸಂಪುಟ ಸಭೆಗೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಜುಲೈ 25ರಂದು ಬರು ಸಂದೇಶಕ್ಕಾಗಿ ಕಾಯುತ್ತಿದೇನೆ. ಹೈಕಮಾಂಡ್ ಯಾವಾಗ ಬೇಡ ಅನ್ನುತ್ತೋ ಆವತ್ತೆ ರಾಜೀನಾಮೆ ನೀಡುತ್ತೇನೆ. ಹೈಕಮಾಂಡ್ ಬೇಡ ಅಂದ್ರೆ ರಾಜೀನಾಮೆ ನೀಡಿ ಬೇರೆಯವರಿಗೆ ಅವಕಾಶ ನೀಡುತ್ತೇನೆ. ಕೇಂದ್ರದ ನಾಯಕತ್ವ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದು ತಮ್ಮ ಹೇಳಿಕೆಯನ್ನ ಪುನರುಚ್ಛಿಸಿದರು.

    ಮುಂದಿನ ವಿಧಾನಸಭಾ ಚುನಾವಣೆಯಲ್ಲಿಯೂ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂಬುವುದು ನನ್ನ ಉದ್ದೇಶ. ಹೈಕಮಾಂಡ್ ಹೇಳುವ ಕೊನೆ ಕ್ಷಣದವರೆಗೂ ನನ್ನ ಕರ್ತವ್ಯ ನಿರ್ವಹಿಸುತ್ತೇನೆ. ರಾಜೀನಾಮೆ ನೀಡಿದ ಮರುಕ್ಷಣವೇ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಈಗ ಬಿಟ್ಟುಬಿಡಿ, ಮುಂದಿನ ವಾರ ಸಿಗೋಣ – ಕೈ ಮುಗಿದು ತೆರಳಿದ್ರು ಅರುಣ್ ಸಿಂಗ್

    ಬಿಜೆಪಿ ಪರ್ಯಾಯ ನಾಯಕರು ಹಲವರಿದ್ದಾರೆ. ಆದ್ರೆ ನಾನು ಯಾರ ಹೆಸರನ್ನು ಹೈಕಮಾಂಡ್‍ಗೆ ಶಿಫಾರಸ್ಸು ಮಾಡೋದಿಲ್ಲ. ಮುಂದಿನ ನಾಯಕರನ್ನು ಆಯ್ಕೆ ಮಾಡೋದು ಹೈಕಮಾಂಡ್ ಕೆಲಸ. ಒಂದು ವೇಳೆ ಹೈಕಮಾಂಡ್ ಮುಂದಿನ ನಾಯಕರ ಬಗ್ಗೆ ಕೇಳಿದ್ರೂ ನಾನು ಯಾರ ಹೆಸರನ್ನು ಸೂಚಿಸಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ:‘ನನ್ನವರೇ ನನಗೆ ಶತ್ರುವಾದ್ರು..’ – ಆಪ್ತರ ಬಳಿ ಬಿಎಸ್‍ವೈ ಭಾವುಕ..!

    ಜುಲೈ 26ರಂದು ಬಿಜೆಪಿ ಸರ್ಕಾರ ರಚಿಸಿ ಎರಡು ವರ್ಷವಾಗಲಿದೆ. ಆವತ್ತು ನಮ್ಮ ಸರ್ಕಾರದ ಎರಡು ವರ್ಷದ ಸಾಧನೆಯನ್ನು ಜನರ ಮುಂದಿಡುವ ಕೆಲಸ ಮಾಡಲಿದ್ದೇವೆ. ನಮ್ಮ ಕಾರ್ಯಕ್ರಮಗಳ ಕುರಿತ ಕೈಪಿಡಿಯನ್ನು ಹೊರ ತರಲಾಗುತ್ತದೆ ಎಂದರು. ಇದನ್ನೂ ಓದಿ: ಭಾರೀ ಚರ್ಚೆಗೆ ಗ್ರಾಸವಾಗಿದೆ ಬಿಎಸ್‍ವೈ ಮನೆಯಲ್ಲಿ ಸ್ವಾಮೀಜಿಗಳಿಗೆ ನೀಡಿದ್ದ ಕವರ್..!

    ಇಂದು ಬೆಳಗ್ಗೆ ಹೇಳಿದ್ದೇನು?:
    ಜುಲೈ 25ರ ನಂತರ ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇನೆ. ನನ್ನ ಪರ ಪ್ರತಿಭಟನೆ ನಡೆಸುವುದು ಸರಿಯಲ್ಲ. ಹೈಕಮಾಂಡ್ ಏನು ಹೇಳುತ್ತದೆಯೋ ಅದರಂತೆ ನಡೆದುಕೊಳ್ಳುತ್ತೇನೆ ಎಂದು ಹೇಳುವ ಮೂಲಕ ರಾಜೀನಾಮೆ ನೀಡುವುದರ ಕುರಿತು ಸುಳಿವು ನೀಡಿದ್ದರು. ಇದನ್ನೂ ಓದಿ: ನನ್ನ ಪರವಾಗಿ ಯಾರೂ ಪ್ರತಿಭಟನೆಗೆ ಮುಂದಾಗಬಾರದು – ಬಿಎಸ್‍ವೈ ಮನವಿ

    ಹೈಕಮಾಂಡ್ ಏನು ಹೇಳುತ್ತದೆಯೋ ಅದೇ ಅಂತಿಮ. ಕಾರ್ಯಕರ್ತರು ಗೊಂದಲಕ್ಕೆ ಒಳಗಾಗಬಾರದು. ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ. ಜುಲೈ 25ರ ನಂತರ ಹೈಕಮಾಂಡ್ ಸಂದೇಶಕ್ಕೆ ಕಾಯುತ್ತಿದ್ದೇನೆ. ಕೆಲಸ ಮೆಚ್ಚಿ ವರಿಷ್ಠರು 75 ವರ್ಷ ಆದ ಬಳಿಕ 78 ರವರೆಗೂ ಅಧಿಕಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಮುಂದೆ ಪಕ್ಷ ಮತ್ತೆ ಅಧಿಕಾರಕ್ಕೆ ತರೋದು ನನ್ನ ಸಂಕಲ್ಪ. 26 ಕ್ಕೆ ಸರ್ಕಾರದ ಸಾಧನೆ ಬಗ್ಗೆ ವಿಶೇಷ ಕಾರ್ಯಕ್ರಮ ಇಟ್ಟುಕೊಂಡಿದ್ದೇವೆ. ಈ ಕಾರ್ಯಕ್ರಮ ಬಳಿಕ ವರಿಷ್ಠರ ಸೂಚನೆಯಂತೆ ನಡ್ಕೋತೇನೆ. ವರಿಷ್ಠರ ತೀರ್ಮಾನವೇ ನನ್ನ ತೀರ್ಮಾನ ಎಂದು ಬಿಎಸ್‍ವೈ ತಿಳಿಸಿದ್ದರು. ಇದನ್ನೂ ಓದಿ: ಹೈಕಮಾಂಡ್ ಕೈ ಸೇರಿದೆ ವರದಿ – ಜಾತಿ ಚೌಕಟ್ಟು ಮೀರುತ್ತಾ ಬಿಜೆಪಿ?

  • ಬಿಎಸ್‍ವೈ ಸಿಎಂ ಸ್ಥಾನದಿಂದ ಕೆಳಗಿಳಿದರೆ ದೇವೇಗೌಡರ ಜೊತೆ ಸೇರಿ ಪ್ರಾದೇಶಿಕ ಪಕ್ಷ ಕಟ್ಟಲಿ: ಜೆಡಿಎಸ್ ಶಾಸಕ

    ಬಿಎಸ್‍ವೈ ಸಿಎಂ ಸ್ಥಾನದಿಂದ ಕೆಳಗಿಳಿದರೆ ದೇವೇಗೌಡರ ಜೊತೆ ಸೇರಿ ಪ್ರಾದೇಶಿಕ ಪಕ್ಷ ಕಟ್ಟಲಿ: ಜೆಡಿಎಸ್ ಶಾಸಕ

    ಹಾಸನ: ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರು ಮತ್ತು ಯಡಿಯೂರಪ್ಪ ಸೇರಿ ಪ್ರಾದೇಶಿಕ ಪಕ್ಷ ಕಟ್ಟಬೇಕು ಎಂದು ಬೇಲೂರು ಕ್ಷೇತ್ರದ ಜೆಡಿಎಸ್ ಶಾಸಕ ಲಿಂಗೇಶ್ ಹೇಳಿದ್ದಾರೆ.

    ಬೇಲೂರಿನಲ್ಲಿ ಮಾತನಾಡಿದ ಅವರು, ಇತ್ತೀಚಿನ ರಾಜಕೀಯ ಬೆಳವಣಿಗೆ ಬೇಸರ ತರುವಂತಹದ್ದು. ಎರಡು ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳನ್ನು ಮುಗಿಸುತ್ತಿವೆ. ಸಂಪೂರ್ಣ ಅಧಿಕಾರವಿದ್ದರೆ ಯಾರಾದರೂ ಸಾಧನೆ ಮಾಡಬಹುದು. ಕೇಂದ್ರ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳಲು ನಾಯಕತ್ವ ಬದಲಾವಣೆ ತಂದು ರಾಜಕೀಯ ದೊಂಬರಾಟ ಸೃಷ್ಟಿಸಿದ್ದಾರೆ. ಸೈದ್ಧಾಂತಿಕವಾಗಿ ನಾವು ಬಿಜೆಪಿಯನ್ನು ವಿರೋಧಿಸುತ್ತೇವೆ. ಆದರೆ ವೈಯುಕ್ತಿಕವಾಗಿ ಅಧಿಕಾರ ಮುಗಿಯುವವರೆಗೂ ಯಡಿಯೂರಪ್ಪ ಅವರನ್ನು ಮುಂದುವರಿಸಬೇಕು ಎಂದರು.

    ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಬಾರದು. ಬದಲಾವಣೆ ಮಾಡಿದರೆ ದೇವೇಗೌಡರು ಹಾಗೂ ಯಡಿಯೂರಪ್ಪ ಸೇರಿ ಪ್ರಾದೇಶಿಕ ಪಕ್ಷ ಕಟ್ಟಬೇಕು. ಪಕ್ಷಗಳಿಂದ ಹೊರಬರುವ ಎಲ್ಲ ಶಾಸಕರನ್ನು ಪ್ರಾದೇಶಿಕ ಪಕ್ಷಕ್ಕೆ ಸೇರಿಸಿಕೊಳ್ಳಬೇಕು. ಬಳಿಕ ಪಕ್ಷವನ್ನು ಅಧಿಕಾರಕ್ಕೆ ತಂದು ಉತ್ತಮ ಆಡಳಿತ ನೀಡಬೇಕು ಎಂದು ಶಾಸಕ ಲಿಂಗೇಶ್ ಹೇಳಿದ್ದಾರೆ.