Tag: CM BS Yediyurappa

  • ಸಂಪುಟ ವಿಸ್ತರಣೆ ನಡುವೆಯೂ ಕೂಲ್ – ಹೋಟೆಲ್‍ನಲ್ಲಿ ದೋಸೆ ಸವಿದ ಸಿಎಂ

    ಸಂಪುಟ ವಿಸ್ತರಣೆ ನಡುವೆಯೂ ಕೂಲ್ – ಹೋಟೆಲ್‍ನಲ್ಲಿ ದೋಸೆ ಸವಿದ ಸಿಎಂ

    ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಟೆನ್ಷನ್ ಮಧ್ಯೆಯೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಲ್ ಆಗಿದ್ದು, ರೇಸ್‍ಕೋರ್ಸ್ ರಸ್ತೆ ಬಳಿ ಇರುವ ಜನಾರ್ದನ ಹೋಟೆಲ್‍ಗೆ ತೆರಳಿ ದೋಸೆ ಸವಿದಿದ್ದಾರೆ.

    ಬೆಳಗ್ಗೆಯಿಂದಲೂ ಸಚಿವ ಸಂಪುಟ ವಿಸ್ತರಣೆಯ ಜಂಜಾಟದಲ್ಲಿದ್ದ ಸಿಎಂ ಸಂಜೆಯಾಗುತ್ತಿದ್ದಂತೆ ದೋಸೆ ಸವಿಯಲು ಜನಾರ್ದನ ಹೋಟೆಲ್‍ಗೆ ತೆರಳಿದ್ದಾರೆ. ಸಚಿವ ಆರ್.ಅಶೋಕ್, ಶಾಸಕರಾದ ಎಸ್.ಆರ್.ವಿಶ್ವನಾಥ್, ಕೃಷ್ಣಪ್ಪ ಜೊತೆ ದೋಸೆ ಸವಿದಿದ್ದಾರೆ.

    ಕ್ಯಾಬಿನೆಟ್ ಕಡೇ ಆಟ ಕುತೂಹಲ ಮೂಡಿಸಿದ್ದು, ವಲಸಿಗರ ಕೋಟಾದಲ್ಲಿ ಎಂಟಿಬಿ ನಾಗರಾಜ್, ಆರ್.ಶಂಕರ್, ಮುನಿರತ್ನ. ಬಿಜೆಪಿ ಕೋಟಾದಲ್ಲಿ ಉಮೇಶ್ ಕತ್ತಿ, ಎಸ್.ಅಂಗಾರ, ಮುರುಗೇಶ್ ನಿರಾಣಿ ಹಾಗೂ ಸಿಪಿ ಯೋಗೇಶ್ವರ್. ಕಡೇ ಸ್ಥಾನದಲ್ಲಿ ಹಾಲಪ್ಪ ಆಚಾರ್ ಅಥವಾ ಅರವಿಂದ ಲಿಂಬಾವಳಿ ಅವರನ್ನು ಆಯ್ಕೆ ಮಾಡಲಾಗುತ್ತಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಈಗಾಗಲೇ ಮೂವರು ಶಾಸಕರಿಗೆ ಕರೆ ಮಾಡಿ ಬೆಂಗಳೂರಿಗೆ ಬರುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದ್ದಾರೆ ಎನ್ನಲಾಗಿದೆ. ನಾಳೆ ನೀವು ಬೆಂಗಳೂರಿನಲ್ಲೇ ಇರಿ, ಎಲ್ಲೂ ಹೋಗಬೇಡಿ ಎಂದು ಸೂಚಿಸಿದ್ದಾರೆ. ಅಲ್ಲದೆ ಬೆಂಗಳೂರಿನಲ್ಲಿ ಇಲ್ಲದ ಶಾಸಕರಿಗೆ ಬೆಂಗಳೂರಿಗೆ ಬರುವಂತೆ ಸೂಚಿಸಿದ್ದಾರೆ. ಹುಕ್ಕೇರಿಯ ಉಮೇಶ್ ಕತ್ತಿ, ಸುಳ್ಯದ ಅಂಗಾರ, ವಿಧಾನ ಪರಿಷತ್ ಸದಸ್ಯ ಆರ್.ಶಂಕರ್ ಅವರಿಗೆ ಯಡಿಯೂರಪ್ಪ ಕರೆ ಮಾಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

  • ನಾಳೆ ಬೆಂಗಳೂರಿಗೆ ಬನ್ನಿ- ಮೂವರು ಶಾಸಕರಿಗೆ ಸಿಎಂ ಕರೆ

    ನಾಳೆ ಬೆಂಗಳೂರಿಗೆ ಬನ್ನಿ- ಮೂವರು ಶಾಸಕರಿಗೆ ಸಿಎಂ ಕರೆ

    – ಇನ್ನಿಬ್ಬರ ಹೆಸರು ಸೇರ್ಪಡೆಗೆ ಕಡೇ ಹಂತದ ಕಸರತ್ತು

    ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಕಸರತ್ತು ಮುಂದುವರಿದಿದ್ದು, ಮೂವರು ಶಾಸಕರಿಗೆ ಕರೆ ಮಾಡಿ ಬೆಂಗಳೂರಿಗೆ ಬರುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದ್ದಾರೆ.

    ನಾಳೆ ನೀವು ಬೆಂಗಳೂರಿನಲ್ಲೇ ಇರಿ, ಎಲ್ಲೂ ಹೋಗಬೇಡಿ ಎಂದು ಸೂಚಿಸಿದ್ದಾರೆ. ಅಲ್ಲದೆ ಬೆಂಗಳೂರಿನಲ್ಲಿ ಇಲ್ಲದ ಶಾಸಕರಿಗೆ ಬೆಂಗಳೂರಿಗೆ ಬರುವಂತೆ ಸೂಚಿಸಿದ್ದಾರೆ. ಹುಕ್ಕೇರಿಯ ಉಮೇಶ್ ಕತ್ತಿ, ಸುಳ್ಯದ ಅಂಗಾರ, ವಿಧಾನ ಪರಿಷತ್ ಸದಸ್ಯ ಆರ್.ಶಂಕರ್ ಅವರಿಗೆ ಯಡಿಯೂರಪ್ಪ ಕರೆ ಮಾಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಇನ್ನಿಬ್ಬರ ಹೆಸರಿನ ಬಗ್ಗೆ ಇನ್ನೂ ಬಹಿರಂಗವಾಗಿಲ್ಲ ಕೊನೇ ಕ್ಷಣದ ವರೆಗೆ ಸಸ್ಪೆನ್ಸ್ ಕಾಪಾಡಿಕೊಳ್ಳಲಾಗಿದ್ದು, ಯೋಗೇಶ್ವರ್, ಲಿಂಬಾವಳಿ ಹೆಸರು ಸೇರ್ಪಡೆಗೆ ಕಡೇ ಹಂತದ ಕಸರತ್ತು ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಈ ಕುರಿತು ಯಾವುದೇ ರೀತಿಯ ಸ್ಪಷ್ಟನೆ ಲಭ್ಯವಾಗಿಲ್ಲ.

    ಇಂದು ಬೆಳಗ್ಗೆಯಷ್ಟೇ ಪ್ರತಿಕ್ರಿಯಿಸಿದ್ದ ಸಿಎಂ, ಬುಧವಾರ ಸಂಜೆ 4 ಗಂಟೆಗೆ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭಾಗವಹಿಸುವ ಸಾಧ್ಯತೆಗಳಿವೆ ಎಂದಿದ್ದರು.

    ಬುಧವಾರ ಸಂಜೆ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು, ಇಂದು ಸಾಯಂಕಾಲ ಅಥವಾ ನಾಳೆ ಬೆಳಗ್ಗೆ ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಮಾಧ್ಯಮಗಳಲ್ಲಿ ಹಲವರ ಹೆಸರು ಬರುತ್ತಿರೋದನ್ನ ಗಮನಿಸಿದ್ದೇನೆ. ನಾನೇ ಸಂಜೆ ಅವರ ಹೆಸರು ಹೇಳುತ್ತೇನೆ ಎಂದಿದ್ದರು. ಅಲ್ಲದೆ ಸಂಪುಟ ವಿಸ್ತರಣೆನಾ ಅಥವಾ ಪುನರ್ ರಚನೆ ಎಂಬುದರ ಬಗ್ಗೆ ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದ ಸಿಎಂ, ನಾಳೆ ಎಲ್ಲವೂ ಗೊತ್ತಾಗಲಿದೆ ಎಂದು ತಿಳಿಸಿದ್ದರು.

    ಸಿಎಂ ದೆಹಲಿ ಪ್ರವಾಸದಿಂದ ಬಂದ ಬಳಿಕ ಏಳು ಸಚಿವ ಸ್ಥಾನಕ್ಕಾಗಿ ಸುಮಾರು 20ಕ್ಕೂ ಅಧಿಕ ಶಾಸಕರು ರೇಸ್ ನಲ್ಲಿದ್ದಾರೆ. ಮೂವರು ವಲಸಿಗರು ಮತ್ತು ಮೂಲ ನಾಲ್ಕು ಶಾಸಕರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಸಿಎಂ ಪ್ಲಾನ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ನಡುವೆ ಎಂಎಲ್‍ಸಿ ಸಿ.ಪಿ.ಯೋಗೇಶ್ವರ್ ಮತ್ತು ಬಿಎಸ್‍ಪಿ ಉಚ್ಛಾಟಿತ ಕೊಳ್ಳೆಗಾಲ ಶಾಸಕ ಎನ್.ಮಹೇಶ್ ಹೆಸರು ಸಂಪುಟ ಸೇರ್ಪಡೆಯಾಗುವ ಪಟ್ಟಿಯಲ್ಲಿ ಮುನ್ನಲೆಗೆ ಬಂದಿದೆ ಎನ್ನಲಾಗಿದೆ.

  • ಎಸ್ಮಾ ಜಾರಿ ಮಾಡುವ ಚಿಂತನೆ ಇದೆ: ಬಸವರಾಜ್ ಬೊಮ್ಮಾಯಿ

    ಎಸ್ಮಾ ಜಾರಿ ಮಾಡುವ ಚಿಂತನೆ ಇದೆ: ಬಸವರಾಜ್ ಬೊಮ್ಮಾಯಿ

    – ಮುಷ್ಕರ ಕೈ ಬಿಟ್ಟು ಕರ್ತವ್ಯಕ್ಕೆ ಹಾಜರಾಗಿ: ಸಿಎಂ ಕರೆ

    ಬೆಂಗಳೂರು: ಕರ್ನಾಟಕದಲ್ಲಿ ಈ ಹಿಂದೆಯೂ ಎಸ್ಮಾ ಕಾಯ್ದೆ ಜಾರಿಯಾಗಿತ್ತು. ಈಗಲೂ ಜಾರಿ ಮಾಡುವ ಚಿಂತನೆ ಇದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

    ಸಿಎಂ ಕರೆದ ತುರ್ತುಸಭೆಗೆ ಆಗಮಿಸಿದ್ದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಬಸವರಾಜ್ ಬೊಮ್ಮಾಯಿ, ಬೆಳಗ್ಗೆ 10 ಗಂಟೆಯಿಂದ ಮಾತುಕತೆ ನಡೆಸಲಾಗಿತ್ತು. ಎಲ್ಲರೂ ಸಂಧಾನದಲ್ಲಿ ಒಪ್ಪಿಗೆ ಕೊಟ್ಟು, ಮಾಧ್ಯಮಗಳ ಮುಂದೆ ಸಕಾರಾತ್ಮಕವಾಗಿದೆ ಅಂತ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದರು. ಅಲ್ಲಿ ಹೋಗಿ ಕೆಲವರ ಮಾತು ಕೇಳಿರುವ ಕೋಡಿಹಳ್ಳಿ ಚಂದ್ರಶೇಖರ್ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಕೋವಿಡ್-19 ಸಂದರ್ಭದಲ್ಲಿಯೂ ಸಾರಿಗೆ ನೌಕರರಿಗೆ ಸಂಬಳ ಕೊಟ್ಟಿದ್ದೇವೆ. ಕೋಡಿಹಳ್ಳಿ ಚಂದ್ರಶೇಖರ್ ಪ್ರತಿಷ್ಠೆಗೆ ಸಾರಿಗೆ ನಿಗಮ ಹಾಳಾಗುತ್ತದೆ. ಕೋಡಿಹಳ್ಳಿ ಚಂದ್ರಶೇಖರ್ ಇಲ್ಲೊಂದು, ಅಲ್ಲೊಂದು ಹೇಳೋದನ್ನ ಖಂಡಿಸುತ್ತೇನೆ ಎಂದು ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದರು.

    ಇತ್ತ ಸಿಎಂ ಬಿ.ಎಸ್.ಯಡಿಯೂರಪ್ಪ ಸಾರಿಗೆ ಸಿಬ್ಬಂದಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡಿಕೊಂಡಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್ ಜೊತೆಗೂಡಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್ ಅವರು ಅನಗತ್ಯವಾಗಿ ನೌಕರರ ದಾರಿತಪ್ಪಿಸುತ್ತಿರುವುದು ಸರಿಯಲ್ಲ. ಅವರ ದುರುದ್ದೇಶಪೂರಿತ ನಡೆ ಖಂಡನೀಯ. ಮುಷ್ಕರದಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ, ಸಾರಿಗೆ ಸಂಸ್ಥೆಗೆ ನಷ್ಟ ಹಾಗೂ ಸಾರಿಗೆ ಸಂಸ್ಥೆಯ ನೌಕರರಿಗೂ ತೊಂದರೆಯಾಗುತ್ತದೆ. ನೌಕರರು ಮುಷ್ಕರವನ್ನು ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕೆಂದು ಸಿಎಂ ಕರೆ ನೀಡಿದ್ದಾರೆ.

  • ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ಅನುದಾನ: ಸರ್ಕಾರ ಆದೇಶ

    ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ಅನುದಾನ: ಸರ್ಕಾರ ಆದೇಶ

    ಬೆಂಗಳೂರು: ಇತ್ತೀಚೆಗಷ್ಟೇ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆದೇಶ ಹೊರಡಿಸಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಇದೀಗ ನಿಗಮಕ್ಕೆ ಆರಂಭಿಕ ಅನುದಾನವಾಗಿ 500 ಕೋಟಿ ರೂ.ಗಳ ಬಿಡುಗಡೆಗೆ ಅನುಮತಿ ನೀಡಿದ್ದಾರೆ.

    ಈ ಕುರಿತು ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, 500 ಕೋಟಿ ರೂ. ಆರಂಭಿಕ ಅನುದಾನ ನೀಡಿದೆ. ತಾತ್ಕಾಲಿಕವಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರಿಗೆ ನಿಗಮದ ಹೊಣೆ ನೀಡಲಾಗಿದೆ. ಇತ್ತೀಚೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆದೇಶ ಹೊರಡಿಸಿದ್ದರು.

    ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಬೆನ್ನಲ್ಲೇ ವೀರಶೈವ ಲಿಂಗಾಯತ ಸಮುದಾಯದ ನಾಯಕರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಮಾಡುವಂತೆ ಸಿಎಂ ಯಡಿಯೂರಪ್ಪ ಅವರಿಗೆ ಒತ್ತಡ ಹೇರಿದ್ದರು. ಈ ಒತ್ತಡಕ್ಕೆ ಮಣಿದ ಯಡಿಯೂರಪ್ಪನವರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಮಾಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ವಾರದ ಹಿಂದೆ ಆದೇಶ ನೀಡಿದ್ದರು.

    ರಾಜ್ಯದಲ್ಲೀಗ ಪ್ರಾಧಿಕಾರ ಮತ್ತು ಮೀಸಲು ಪಾಲಿಟಿಕ್ಸ್ ಜೋರಾಗ್ತಿದೆ. ಬೈ ಎಲೆಕ್ಷನ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುತ್ತಲೇ, ವೀರಶೈವ ಲಿಂಗಾಯತರು ಧ್ವನಿ ಮುನ್ನಲೆಗೆ ಬಂದಿದೆ. ವೀರಶೈವ ಲಿಂಗಾಯತ ಸಮುದಾಯದ ಅಭಿವೃದ್ಧಿಗೆ ಪ್ರಾಧಿಕಾರ ರಚನೆ ಮಾಡಬೇಕೆಂದು ಡಿಸಿಎಂ ಲಕ್ಷ್ಮಣ ಸವದಿ, ಸಚಿವರಾದ ಸೋಮಣ್ಣ, ಬಿಸಿ ಪಾಟೀಲ್, ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರು ಅವರಿದ್ದ ನಿಯೋಗ ಮುಖ್ಯಮಂತ್ರಿಗೆ ಮನವಿ ಮಾಡಿತ್ತು.

    ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದ ನಂತರ ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಯುವ ಘಟಕದ ರಾಜ್ಯಾಧಕ್ಷರು ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದರು. ನಮ್ಮ ಸಮಾಜದ ಕಡು ಬಡವರು, ಸಮಾಜದ ಹಿಂದುಳಿದ ವರ್ಗಕ್ಕೆ ಮತ್ತು ಯುವಕರಿಗೆ ಸಹಾಯ ಆಗಬೇಕು. ಹೀಗಾಗಿ ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವಂತೆ ಆಗ್ರಹಿಸಿದ್ದರು.

  • ಕನ್ನಡಿಗರ ಸ್ಟಾರ್ಟಪ್ ಹೊಯ್ಸಳ ಕ್ಯಾಬ್ ರಾಜ್ಯಾದ್ಯಂತ ಸೇವೆ: ಸಿಎಂ

    ಕನ್ನಡಿಗರ ಸ್ಟಾರ್ಟಪ್ ಹೊಯ್ಸಳ ಕ್ಯಾಬ್ ರಾಜ್ಯಾದ್ಯಂತ ಸೇವೆ: ಸಿಎಂ

    – ಕಿರುತೆರೆ ನಟಿ ದೀಪಿಕಾ ದಾಸ್ ಭಾಗಿ

    ಬೆಂಗಳೂರು: ಕನ್ನಡಿಗರ ಸ್ಟಾರ್ಟಪ್ ಆ್ಯಪ್ ಆಧಾರಿತ ಹೊಯ್ಸಳ ಕ್ಯಾಬ್ ಗಳಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಿದರು.

    ಈ ವೇಳೆ ಮಾತನಾಡಿದ ಸಿಎಂ, ಹೊಯ್ಸಳ ಕ್ಯಾಬ್ ಕನ್ನಡಿಗರ ಸ್ಟಾರ್ಟಪ್ ಆಗಿದ್ದು, ಕನ್ನಡತಿ ಸುಧಾ ಉಮಾಶಂಕರ್ ಅವರು ಈ ಕ್ಯಾಬ್ ಸೇವೆ ಅರ್ಪಿಸಿದ್ದಾರೆ. ನಗರಗಳಲ್ಲಿದ್ದ ಕ್ಯಾಬ್ ಸೇವೆ ಇನ್ನು ರಾಜ್ಯದ ಎಲ್ಲೆಡೆ ಸೇವೆಗೆ ಆರಂಭಿಸಲಿದೆ. ಈ ಕ್ಯಾಬ್‍ಗಳು ಕಡಿಮೆ ದರದಲ್ಲಿ ಸುಭದ್ರ ಸೇವೆ ನೀಡಲಿವೆ. ಹೊಯ್ಸಳ ಕ್ಯಾಬ್ ಯಶಸ್ಸು ಕಾಣಲಿ ಎಂದು ಹಾರೈಸಿದರು.

    ನಂತರ ಮಾತನಾಡಿದ ಸುಧಾ ಉಮಾಶಂಕರ್, ವಿದೇಶ ಹಾಗೂ ಹೊರ ರಾಜ್ಯದ ಕ್ಯಾಬ್ ಸಂಸ್ಥೆಗಳಿವೆ. ಇಲ್ಲಿಯೂ ಒಂದು ಕ್ಯಾಬ್ ಸಂಸ್ಥೆ ಇರಬೇಕು. ಅಲ್ಲದೆ ಇತರೆ ಸಂಸ್ಥೆಗಳು ಹೆಚ್ಚಿನ ದರದಲ್ಲಿ ಸೇವೆ ಒದಗಿಸುತ್ತಿವೆ. ಇದರಿಂದ ಜನರಿಗೆ ಸಮಸ್ಯೆಯಾಗುತ್ತಿದೆ. ಅಲ್ಲದೆ ಕೆಲವರಿಗೆ ಭಾಷೆ ಸಮಸ್ಯೆ ಸಹ ಕಾಡುತ್ತಿದೆ. ಹೀಗಾಗಿ ನಮ್ಮ ರಾಜ್ಯದ್ದೇ ಒಂದು ಕ್ಯಾಬ್ ಸಂಸ್ಥೆ ಇರಬೇಕು ಎಂಬ ಉದ್ದೇಶದಿಂದ ಈ ಸಾಹಸಕ್ಕೆ ಕೈ ಹಾಕಿದೆವು. ಅಲ್ಲದೆ ಇದು ನನ್ನ ಕನಸಾಗಿತ್ತು ಎಂದರು.

    ಕಳೆದ ಒಂದು ವರ್ಷದಿಂದ ಯೋಜನೆ ರೂಪಿಸಿ, ವ್ಯವಸ್ಥಿತವಾಗಿ ಕಾರ್ಯರೂಪಕ್ಕೆ ತರುತ್ತಿದ್ದೇವೆ. ಇದಕ್ಕೆ ಸಿಎಂ ಯಡಿಯೂರಪ್ಪನವರು ಬೆಂಬಲ ಸೂಚಿಸಿರುವುದು ಸಂತಸ ತಂದಿದೆ. ಡಿಸೆಂಬರ್ ಮೊದಲ ವಾರದಿಂದ ಕ್ಯಾಬ್ ಸೇವೆ ಕಾರ್ಯಾರಂಭವಾಗಲಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕಿರುತೆರೆ ನಟಿ ದೀಪಿಕಾ ದಾಸ್ ಸಹ ಭಾಗಿಯಾಗಿದ್ದರು.

  • ರಂಗನಾಥ್ ಪ್ರಯತ್ನ ಮಾಡಿದರೆ ಯಾವುದೂ ಅಸಾಧ್ಯವಲ್ಲ: ಸಿಎಂ

    ರಂಗನಾಥ್ ಪ್ರಯತ್ನ ಮಾಡಿದರೆ ಯಾವುದೂ ಅಸಾಧ್ಯವಲ್ಲ: ಸಿಎಂ

    ಬೆಂಗಳೂರು: ಪಬ್ಲಿಕ್ ಟಿವಿ ಮುಖ್ಯಸ್ಥ ಹೆಚ್.ಆರ್ ರಂಗನಾಥ್ ಅವರು ಪ್ರಯತ್ನಿಸಿದರೆ ಯಾವುದು ಅಸಾಧ್ಯವಲ್ಲ ಎಂಬುದು ತಿಳಿದಿರುವ ಸಂಗತಿ. ತುಂಬಾ ಚಿಂತನೆ ಮಾಡಿ ‘ಜ್ಞಾನ ದೀವಿಗೆ’ ಅಭಿಯಾನ ಆರಂಭಿಸಿದ್ದೀರಿ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

    ಜ್ಞಾನದೀವಿಗೆ ಕಾರ್ಯಕ್ರಮ ಸಂಬಂಧ ಮಾತನಾಡಿದ ಅವರು, ಜ್ಞಾನದೀವಿಗೆ ಕಾರ್ಯಕ್ರಮದ ಮೂಲಕ ಡಿಜಿಟಲ್ ಶಿಕ್ಷಣ ಪಡೆಯಲು ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಅವರು ಯಶಸ್ಸು ಕಾಣಲಿ ಎಂದು ಆಶಿಸುತ್ತೇನೆ ಎಂದು ಹಾರೈಸಿದರು.

    ಈ ಅಭಿಯಾನಕ್ಕೆ ಸರ್ಕಾರದ ಸಂಪೂರ್ಣ ಸಹಕಾರ ಇದೆ. ಎಲ್ಲ ರೀತಿಯ ಸಹಕಾರವನ್ನು ನೀಡುತ್ತೇನೆ. ನಿಮ್ಮೊಂದಿಗೆ ನಾನು ವೈಯಕ್ತಿಕವಾಗಿ ಸಹ ಮಾತನಾಡುತ್ತೇನೆ. ಈ ಅಭಿಯಾನವನ್ನು ಸಮರ್ಥವಾಗಿ ಜಾರಿಗೆ ತರುವ ಪ್ರಯತ್ನ ಮಾಡೋಣ ಎಂದು ಅಭಯ ನೀಡಿದರು.

    ಕೊರೊನಾದಿಂದಾಗಿ ರಾಜ್ಯದ ಆರ್ಥಿಕತೆ ಹಿನ್ನಡೆ ಜೊತೆಗೆ ಎಲ್ಲ ಕ್ಷೇತ್ರಗಳಲ್ಲಿಯೂ ವ್ಯತಿರಿಕ್ತ ಪರಿಣಾಮ ಬೀರಿದೆ. ಹಾಗೆಯೇ ಶಿಕ್ಷಣ ಕ್ಷೇತ್ರದ ಮೇಲೂ ಪರಿಣಾಮ ಬೀರಿದ್ದು, ಪರ್ಯಾಯ ಕ್ರಮಗಳನ್ನು ಅನುಷ್ಠಾನಗೊಳಿಸಲಾಗಿದೆ. ಇದರಲ್ಲಿ ಆನ್‍ಲೈನ್ ಶಿಕ್ಷಣ ಕ್ರಮ ಸಹ ಒಂದು. ಆದರೆ ಅಂತರ್ಜಾಲ ಸಮಸ್ಯೆಯಿಂದ ಆನ್‍ಲೈನ್ ಶಿಕ್ಷಣದಿಂದ ಮಕ್ಕಳು ವಂಚಿತರಾಗಿತ್ತಿದ್ದಾರೆ. ಹೀಗಾಗಿ ಆನ್‍ಲೈನ್ ಶಿಕ್ಷಣ ವಂಚಿತ ಮಕ್ಕಳಿಗೆ ರೋಟರಿ ಸಂಸ್ಥೆ ಹಾಗೂ ಪಬ್ಲಿಕ್ ಟಿವಿ ‘ಜ್ಞಾನ ದೀವಿ’ಗೆ ಕಾರ್ಯಕ್ರಮದ ಮೂಲಕ ಗ್ರಾಮೀಣ ಮಕ್ಕಳಿಗೆ ಉಚಿತ ಟ್ಯಾಬ್‍ಗಳನ್ನು ನೀಡಲಾಗುತ್ತಿರುವುದು ಶ್ಲಾಘನೀಯ.

    ಇದರಿಂದ ಆನ್‍ಲೈನ್ ಶಿಕ್ಷಣ ವಂಚಿತ ಮಕ್ಕಳಿಗೆ ಸಹಾಯವಾಗಲಿದೆ. ಪ್ರತಿ ಇಬ್ಬರು ಎಸ್‍ಎಸ್‍ಎಲ್‍ಸಿ ಮಕ್ಕಳಿಗೆ ಒಂದರಂತೆ ಟ್ಯಾಬ್ ವಿತರಿಸುತ್ತಿರುವುದು ಅಭಿನಂದನೀಯ. ಅಂದಾಜು 2.68 ಲಕ್ಷ ಮಕ್ಕಳು ಇದರಿಂದ ಪ್ರಯೋಜನ ಪಡೆಯಲಿದ್ದಾರೆ. ರಾಜ್ಯದ ಎಲ್ಲ 30 ಜಿಲ್ಲೆಗಳ ಬಹುತೇಕ ಎಲ್ಲ ಸರ್ಕಾರಿ ಪ್ರೌಢ ಶಾಲೆಗಳು ಈ ಅಭಿಯಾನದ ವ್ಯಾಪ್ತಿಗೆ ಬರಲಿವೆ. ಕೊರೊನಾ ನಿರ್ವಹಣೆ ಸಂದರ್ಭದಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ ವಹಿಸಿವೆ.

    ರೋಟರಿ ಸಂಸ್ಥೆ ಹಾಗೂ ಪಬ್ಲಿಕ್ ಟಿವಿ ಸಾಮಾಜಿಕ ಕಳಕಳಿಯ ಕಾರ್ಯಕ್ರಮ ಹಮ್ಮಿಕೊಡು ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ನೆರವಾಗುತ್ತಿರುವುದು ಶ್ಲಾಘನೀಯ. ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಖಾಸಗಿ ಸಂಸ್ಥೆಗಳು ಕೈ ಜೋಡಿಸುವ ಮೂಲಕ ಸಮಾಜದ ಏಳಿಗೆಗೆ ಪ್ರಯತ್ನಿಸಬೇಕು ಎಂದು ಕರೆ ನೀಡಿದರು.

  • ಸಿಗಂದೂರು ದೇವಾಲಯವನ್ನು ಮುಜರಾಯಿ ವ್ಯಾಪ್ತಿಗೆ ತರಲ್ಲ- ಸಿಎಂ ಅಭಯ

    ಸಿಗಂದೂರು ದೇವಾಲಯವನ್ನು ಮುಜರಾಯಿ ವ್ಯಾಪ್ತಿಗೆ ತರಲ್ಲ- ಸಿಎಂ ಅಭಯ

    ಬೆಂಗಳೂರು: ಸಿಗಂದೂರು ಶ್ರೀ ಚೌಡೇಶ್ವರಿ ದೇವಾಲಯವನ್ನು ಯಾವುದೇ ಕಾರಣಕ್ಕೂ ಮುಜರಾಯಿ ವ್ಯಾಪ್ತಿಗೆ ತರುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.

    ಸಿಂಗದೂರು ಶ್ರೀ ಚೌಡೇಶ್ವರಿ ದೇವಾಲಯದ ಸಂಘರ್ಷದ ಕುರಿತು ಸಾಗರ ಶಾಸಕ ಹರತಾಳು ಹಾಲಪ್ಪ ನೇತೃತ್ವದಲ್ಲಿ ಈಡಿಗ ಸಮುದಾಯದ ನಿಯೋಗ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿತು. ಈ ವೇಳೆ ಮುಖ್ಯಮಂತ್ರಿಗಳು ಭರವಸೆ ನೀಡಿದ್ದು, ದೇವಸ್ಥಾನವನ್ನು ಯಾವುದೇ ಕಾರಣಕ್ಕೂ ಮುಜರಾಯಿ ಇಲಾಖೆ ವ್ಯಾಪ್ತಿಗೆ ತರುವುದಿಲ್ಲ ಎಂದು ಹೇಳಿದರು.

    ದೇವಾಲಯದ ಮೇಲುಸ್ತುವಾರಿ ಸಮಿತಿ ಕುರಿತ ಗೊಂದಲ ಹಾಗೂ ಭಕ್ತರು ನೀಡುವ ಹಣಕಾಸು, ದೇಣಿಗೆ ವಿಚಾರದಲ್ಲಿ ಪಾರದರ್ಶಕತೆ ತರುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಈ ವೇಳೆ ಸಿಂಗದೂರು ಚೌಡೇಶ್ವರಿ ದೇವಾಲಯಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ರಚನೆ ಮಾಡಿರುವ ಸಲಹಾ ಸಮಿತಿ ಮಾರ್ಪಾಡಿಗೆ ಮನವಿ ಮಾಡಲಾಯಿತು. ಅಲ್ಲದೆ ಈ ಹಿಂದೆ ದೇವಾಲಯ ನಡೆಯುತ್ತಿದ್ದ ರೀತಿಯಲ್ಲೇ ಇನ್ನು ಮುಂದೆ ನಡೆಸಿಕೊಂಡು ಹೋಗಲು ಅನುವು ಮಾಡಿಕೊಡಿ ಎಂದು ನಿಯೋಗ ಸಿಎಂಗೆ ಮನವಿ ಮಾಡಿತು. ಇದಕ್ಕೆ ಉತ್ತರಿಸಿದ ಸಿಎಂ, ಸಿಗಂದೂರು ದೇವಾಲಯವನ್ನು ಯಾವುದೇ ಕಾರಣಕ್ಕೂ ಮುಜರಾಯಿ ವ್ಯಾಪ್ತಿಗೆ ತರುವ ಪ್ರಶ್ನೆಯೇ ಇಲ್ಲ ಎಂದು ಭರವಸೆ ನೀಡಿದರು.

    ಜಿಲ್ಲಾಡಳಿತ ನೇತೃತ್ವದ ಸಲಹಾ ಸಮಿತಿಗೆ ಈಡಿಗ ಸಮುದಾಯದ ಶ್ರೀ ರೇಣುಕಾನಂದ ಸ್ವಾಮೀಜಿ ಸೇರ್ಪಡೆ ಮಾಡಿಕೊಳ್ಳಲು ಸಿಎಂ ಸೂಚಿಸಿದ್ದಾರೆ. ಇವರ ಸಲಹೆ, ಮಾರ್ಗದರ್ಶನವನ್ನು ತೆಗೆದುಕೊಂಡು ಸಮಿತಿ ಕಾರ್ಯ ನಿರ್ವಹಿಸಲಿದೆ. ಈಗ ರಚನೆಯಾಗಿರುವ ಸಮಿತಿ ನಾಲ್ಕು ತಿಂಗಳವರೆಗೆ ಮುಂದುವರೆಯಲಿದೆ. ಬಳಿಕ ಸಮಿತಿ ಇರಬೇಕೋ ಅಥವಾ ಕೈ ಬಿಡಬೇಕೋ ಎಂಬ ಕುರಿತು ನಿರ್ಧರಿಸಲಾಗುತ್ತದೆ ಎಂದು ಸಭೆಯಲ್ಲಿ ಸಿಎಂ ತಿಳಿಸಿದರು.

  • ವೀಕೆಂಡ್‍ನಲ್ಲಿ ಚರ್ಚ್ ಸ್ಟ್ರೀಟ್‍ಗೆ ವಾಹನಗಳು ನೋ ಎಂಟ್ರಿ

    ವೀಕೆಂಡ್‍ನಲ್ಲಿ ಚರ್ಚ್ ಸ್ಟ್ರೀಟ್‍ಗೆ ವಾಹನಗಳು ನೋ ಎಂಟ್ರಿ

    – ಮಾಲಿನ್ಯ ತಡೆಯಲು ಕ್ರಮ

    ಬೆಂಗಳೂರು: ವೀಕೆಂಡ್ ನಲ್ಲಿ ಸಿಲಿಕಾನ್ ಸಿಟಿಯ ಹೈಫೈ ಏರಿಯಾಗೆ ಹೋಗುವ ಮುನ್ನ ಯೋಚಿಸಿ, ಚರ್ಚ್ ಸ್ಟ್ರೀಟ್ ನಲ್ಲಿ ಇನ್ನು ವೀಕೆಂಡ್ ವೆಹಿಕಲ್ಸ್ ನಿಷೇಧ ಮಾಡಲಾಗಿದೆ. ಹೀಗಾಗಿ ಇನ್ಮುಂದೆ ವಿಕೇಂಡ್ ಬಂತೆಂದು ಚರ್ಚ್ ಸ್ಟ್ರೀಟ್ ಕಡೆಗೆ ಗಾಡಿ ತಗೋಂಡು ಜಾಲಿ ರೌಂಡ್ ಹೋಗಲು ಆಗಲ್ಲ.

    ಇಂದಿನಿಂದ ಫೆಬ್ರವರಿ 28ರ ವರೆಗೆ ಚರ್ಚ್ ಸ್ಟ್ರೀಟ್ ಕ್ಲೀನ್ ಏರ್ ಸ್ಟ್ರೀಟ್ ಎಂದು ಘೊಷಿಸಲಾಗಿದ್ದು, ಭಾರತದ ಮೊದಲ ಸ್ವಚ್ಛ ವಾಯು ಸ್ಟ್ರೀಟ್ ಚರ್ಚ್ ಸ್ಟ್ರೀಟ್ ಫಸ್ಟ್- ಟೆಸ್ಟ್ ಬೆಡ್ ಗೆ ಬೆಳಗ್ಗೆ 11ಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ಕಾಲ್ನಡಿಗೆಯಲ್ಲಿ ತೆರಳುವವರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ವಾಯು ಮಾಲಿನ್ಯ ಕಡಿಮೆ ಮಾಡಲು ಹೊಸ ಪ್ರಯೋಗ ಮಾಡಲಾಗುತ್ತಿದ್ದು, ಭೂ ಸಾರಿಗೆ ನಿರ್ದೇಶನಾಲಯ, ಡಲ್ಟ್(ಡೈರೆಕ್ಟರೇಟ್ ಆಫ್ ಅರ್ಬನ್ ಲ್ಯಾಂಡ್ ಟ್ರಾನ್ಸ್‍ಪೋರ್ಟ್) ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ, ಪೊಲೀಸ್ ಇಲಾಖೆಗಳ ಸಹಯೋಗದಲ್ಲಿ ಈ ಯೋಜನೆ ರೂಪಿಸಲಾಗಿದೆ. ಅಲ್ಲದೆ ಚರ್ಚ್ ಸ್ಟ್ರೀಟ್ ನಲ್ಲಿ ಯುರೋಪ್ ಮಾದರಿಯನ್ನು ಅಳವಡಿಕೆ ಮಾಡಲಾಗುತ್ತದೆಯಂತೆ.

    ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗಮಿಸಿ ಚಾಲನೆ ನೀಡಿದ್ದಾರೆ. ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಸಾತ್ ನೀಡಿದ್ದಾರೆ. ಚರ್ಚ್ ಸ್ಟ್ರೀಟ್ ನ ರಸ್ತೆಗಳನ್ನು ಮುಖ್ಯಮಂತ್ರಿಗಳು ಪರಿಶೀಲಿಸಿದ್ದು, ಭಾರತದ ಮೊದಲ ಸ್ವಚ್ಛ ವಾಯು ಬೀದಿ(ಕ್ಲೀನ್ ಏರ್ ಸ್ಟ್ರೀಟ್) ಎಂದಿದ್ದಾರೆ. ಚರ್ಚ್ ಸ್ಟ್ರೀಟ್ ನಲ್ಲಿ ವೀಕೆಂಡ್ ನಲ್ಲಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ವಾರದಲ್ಲಿ ಎರಡು ದಿನ ಪಾದಚಾರಿಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಸ್ವಚ್ಛ ಗಾಳಿ, ನೀರು ಪ್ರತಿಯೊಬ್ಬರ ಹಕ್ಕು. ಸೈಕಲ್ ಹೆಚ್ಚು ಉಪಯೋಗಿಸಿ, ನಡಿಯಿರಿ ಎಂದು ಸಿಎಂ ಸಲಹೆ ನೀಡಿದ್ದಾರೆ.

    ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಮಾತನಾಡಿ, ಶನಿವಾರ ಹಾಗೂ ಭಾನುವಾರ ಎರಡು ದಿನ ಚರ್ಚ್ ಸ್ಟ್ರೀಟ್ ನಲ್ಲಿ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಎರಡು ದಿನ ಈ ರಸ್ತೆಯಲ್ಲಿ ವಾಯುಮಾಲಿನ್ಯದ ಪ್ರಮಾಣ ಅಳೆಯಲಾಗುತ್ತೆದೆ. ನಂತರದ ದಿನಗಳಲ್ಲಿ ಹೆಚ್ಚಿನ ದಿನಗಳನ್ನು ವಿಸ್ತರಿಸುವ ಕುರಿತು ಚಿಂತಿಸಲಾಗುತ್ತದೆ. ಇದು ಮೊದಲ ಹಂತ, ನಂತರ ಬೇರೆ ಪ್ರದೇಶಗಳಲ್ಲಿ ವಿಸ್ತರಿಸಲು ಆಲೋಚನೆ ನಡೆಸಲಾಗುತ್ತಿದೆ ಎಂದರು.

  • ಕಾಂಗ್ರೆಸ್‍ನಲ್ಲಿ ಪವರ್ ಸೆಂಟರ್‌ಗಳು ಹೆಚ್ಚಾಗುತ್ತಿವೆ- ರೇಣುಕಾಚಾರ್ಯ ಲೇವಡಿ

    ಕಾಂಗ್ರೆಸ್‍ನಲ್ಲಿ ಪವರ್ ಸೆಂಟರ್‌ಗಳು ಹೆಚ್ಚಾಗುತ್ತಿವೆ- ರೇಣುಕಾಚಾರ್ಯ ಲೇವಡಿ

    ಬೆಂಗಳೂರು: ಕಾಂಗ್ರೆಸ್‍ನಲ್ಲಿ ಪವರ್ ಸೆಂಟರ್‌ಗಳು ಹೆಚ್ಚುತ್ತಿವೆ ಎಂದು ಹೇಳುವ ಮೂಲಕ ಶಾಸಕ ರೇಣುಕಾಚಾರ್ಯ ಲೇವಡಿ ಮಾಡಿದ್ದಾರೆ.

    ವಿಕಾಸಸೌಧದಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್ ನಲ್ಲಿ ಪವರ್ ಸೆಂಟರ್ ಗಳು ಹೆಚ್ಚಾಗುತ್ತಿವೆ. ಡಿಕೆಶಿ ಪವರ್ ಸೆಂಟರ್, ಸಿದ್ದರಾಮಯ್ಯ ಪವರ್ ಸೆಂಟರ್ ಹೀಗೆ ಅನೇಕ ಪವರ್ ಸೆಂಟರ್ ಗಳಿವೆ. ಹೀಗಾಗಿ ಸಿದ್ದರಾಮಯ್ಯನವರಿಗೆ ವಿಪಕ್ಷ ನಾಯಕ ಸ್ಥಾನ ಹೋಗಬಹುದು ಎಂಬ ಭಯ ಶುರುವಾಗಿದೆ. ಈ ಕಾರಣಕ್ಕಾಗಿ ಯಡಿಯೂರಪ್ಪ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಹರಿಹಾಯ್ದರು.

    ಸಿಎಂ ಯಡಿಯೂರಪ್ಪ ಬಿಜೆಪಿ ಕಟ್ಟಿ ಬೆಳಸಿದವರು. ಈ ಅವಧಿಯನ್ನು ಪೂರ್ಣಗೊಳಿಸುತ್ತಾರೆ ಎಂದು ವರಿಷ್ಠರೇ ಹೇಳಿದ್ದಾರೆ. ಸಿದ್ದರಾಮಯ್ಯ ಅವರು ಭ್ರಮಾಲೋಕದಿಂದ ಹೊರಗೆ ಬರಬೇಕಿದೆ. ಅವರು ಮತ್ತೆ ಸಿಎಂ ಆಗುತ್ತೇನೆ ಎಂಬ ಭ್ರಮೆಯಲ್ಲಿ ತೇಲುತ್ತಿದ್ದಾರೆ. ಯಡಿಯೂರಪ್ಪನವರನ್ನು ಟೀಕೆ ಮಾಡಿದರೆ ನಾನು ಸಿಎಂ ಆಗಬಹುದು ಎಂಬ ಭ್ರಮೆಯಿಂದ ಹೊರಗೆ ಬನ್ನಿ ಎಂದು ಸಿದ್ದರಾಮಯ್ಯನವರಿಗೆ ಟಾಂಗ್ ನೀಡಿದ್ದಾರೆ.

    ಯಡಿಯೂರಪ್ಪನವರು ಕೇವಲ ವೀರಶೈವ ಸಮುದಾಯಕ್ಕೆ ಸೇರಿದವರಲ್ಲ. ಎಲ್ಲ ಸಮಾಜಕ್ಕೂ ಸೇರಿದ ಪ್ರಶ್ನಾತೀತ ನಾಯಕ. ಕೆಲ ವೀರಶೈವ ಮುಖಂಡರು ಸಿಎಂ ಬದಲಾವಣೆ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ. ಇವರಿಗೆ ಅಧಿಕಾರ ನೀಡಿದವರು ಯಾರು, ಬಸನಗೌಡ ಪಾಟೀಲ್ ಯತ್ನಾಳ್ ಹುಚ್ಚರಂತೆ ಮಾತನಾಡುತ್ತಿದ್ದಾರೆ. ಸಚಿವ ಸ್ಥಾನ ಸಿಗದೆ ಹತಾಶರಾಗಿ ಈ ರೀತಿ ಹುಚ್ಚು ಹುಚ್ಚಾಗಿ ಹೇಳಿಕೆ ನೀಡುತ್ತಿದ್ದಾರೆ. ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಾಸಕರೆಲ್ಲರೂ ಒತ್ತಾಯ ಮಾಡುತ್ತೇವೆ ಎಂದರು.

    ಈ ಬಾರಿ ಸಚಿವ ಸಂಪುಟದಲ್ಲಿ ನನಗೆ ಅವಕಾಶ ನೀಡುತ್ತಾರೆ ಎನ್ನುವ ಭರವಸೆ ಇದೆ. ಹಾದಿ ಬೀದಿಯಲ್ಲಿ ನಾನು ಸಚಿವ ಸ್ಥಾನದ ಬಗ್ಗೆ ಮಾತನಾಡುವುದಿಲ್ಲ, ಕೇಳುವುದಿಲ್ಲ. ಆದರೆ ಈ ಬಗ್ಗೆ ಪಕ್ಷದ ಮುಖಂಡರ ಜತೆ ಚರ್ಚಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು.

    ವಿಜಯೇಂದ್ರ ಅವರು ಬಸವಕಲ್ಯಾಣದಿಂದ ಸ್ಪರ್ಧಿಸುವ ಕುರಿತು ಕಾರ್ಯಕರ್ತರು, ಮುಖಂಡರು ಅಪೇಕ್ಷೆ ವ್ಯಕ್ತಪಡಿಸಿದ್ದಾರೆ. ಆದರೆ ವಿಜಯೇಂದ್ರ ಸ್ಪರ್ಧೆ ಮಾಡುವ ಬಗ್ಗೆ ಎಲ್ಲೂ ಹೇಳಿಲ್ಲ. ಯುವ ನಾಯಕರಾಗಿ ವಿಜಯೇಂದ್ರ ಬೆಳೆಯುತ್ತಿದ್ದಾರೆ. ಪಕ್ಷ ತೀರ್ಮಾನ ಮಾಡಿದರೆ ಸ್ಪರ್ಧೆ ಮಾಡಬಹುದು. ಸ್ಪರ್ಧೆ ಮಾಡಿದರೆ ಗೆಲುವು ಖಚಿತ. ಆದರೆ ಅವರು ಸ್ಪರ್ಧೆ ಮಾಡಲಿ ಎಂದು ಹೇಳುವ ಅಧಿಕಾರ ನನಗಿಲ್ಲ. ಬಸವಕಲ್ಯಾಣದಿಂದ ಸ್ಪರ್ಧಿಸಿದರೆ ಖಂಡಿತ ಗೆಲ್ಲುತ್ತಾರೆ. ಆದರೆ ವಿಜಯೇಂದ್ರ ಹಾಗೂ ಮುಖ್ಯಮಂತ್ರಿಗಳಿಗೆ ಆ ಬಗ್ಗೆ ಮನಸ್ಸಿಲ್ಲ ಎಂದರು.

    ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಪಾತ್ರ ಇದೆ. ಹೀಗಾಗಿಯೇ ಸಿಬಿಐ ತನಿಖೆ ನಡೆಸುತ್ತಿದೆ. ಇದರಲ್ಲಿ ಬಿಜೆಪಿ ಪಾತ್ರ ಇಲ್ಲ. ಸಿಬಿಐ ದುರುಪಯೋಗ ಪಡಿಸಿಕೊಂಡಿರುವುದು ಕಾಂಗ್ರೆಸ್ ಎಂದು ಆಕ್ರೋಶ ವ್ಯಕ್ತಪಡಿಸಿದರು.

  • ಸಿಎಂ ಅಸಹಾಯಕ ಸ್ಥಿತಿಗೆ ತಂದು, ಆಡಿಸುತ್ತಿರುವ ಶಕ್ತಿ ಬಗ್ಗೆ ಕಾಲ ಬಂದಾಗ ತಿಳಿಸ್ತೇನೆ: ಶಿವಲಿಂಗೇಗೌಡ

    ಸಿಎಂ ಅಸಹಾಯಕ ಸ್ಥಿತಿಗೆ ತಂದು, ಆಡಿಸುತ್ತಿರುವ ಶಕ್ತಿ ಬಗ್ಗೆ ಕಾಲ ಬಂದಾಗ ತಿಳಿಸ್ತೇನೆ: ಶಿವಲಿಂಗೇಗೌಡ

    ಹಾಸನ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಸಹಾಯಕ ಸ್ಥಿತಿ ತಲುಪಿದ್ದು, ಅವರನ್ನು ಈ ಸ್ಥಿತಿಗೆ ತಂದ ಶಕ್ತಿ ಹೆಸರನ್ನು ಸಮಯ ಬಂದಾಗ ತಿಳಿಸುತ್ತೇನೆ ಎಂದು ಶಾಸಕ ಶಿವಲಿಂಗೇಗೌಡ ತಿಳಿಸಿದ್ದಾರೆ.

    ಅರಸೀಕೆರೆ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಬಳಿಕ ಮಾತನಾಡಿದ ಅವರು, ಅರಸೀಕೆರೆ ನಗರದ ಅಭಿವೃದ್ಧಿ ಕುಲಗೆಡಿಸಲು ಮಾಡಿದ ಅನೈತಿಕ ಮೀಸಲಾತಿಯಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದೆ. ಅವರು ರಾಜಕೀಯದ ಒತ್ತಡದಿಂದ ಇದೆಲ್ಲ ಆಗುತ್ತಿದೆ ಎಂದು ಅಸಹಾಯಕತೆ ತೋಡಿಕೊಂಡರು. ಅವರನ್ನು ಅಸಹಾಯಕ ಸ್ಥಿತಿಗೆ ತಂದು, ಹಿಡಿದು ಆಡಿಸುತ್ತಿರುವ ಶಕ್ತಿ ಯಾವುದು ಎಂದು ಕಾಲ ಬಂದಾಗ ತಿಳಿಸುತ್ತೇನೆ ಎಂದರು.

    ಅರಸೀಕೆರೆ ನಗರಸಭೆಯಲ್ಲಿ ಅಧ್ಯಕ್ಷ ಸ್ಥಾನ ಎಸ್‍ಟಿಗೆ ಮೀಸಲಾಗಿದೆ. ಒಟ್ಟು 31 ಸದಸ್ಯರಿದ್ದು, ಜೆಡಿಎಸ್ ನಿಂದ 22, ಬಿಜೆಪಿ 5, ಕಾಂಗ್ರೆಸ್ 1, ಪಕ್ಷೇತರ 3 ಮಂದಿ ಸದಸ್ಯ ಬಲವಿದೆ. ಬಿಜೆಪಿಯಲ್ಲಿ ಮಾತ್ರ ಎಸ್‍ಟಿ ಸಮುದಾಯದ ಅಭ್ಯರ್ಥಿ ಗೆದ್ದಿದ್ದು, ಕೇವಲ 5 ಮಂದಿ ಸದಸ್ಯರಿರುವ ಬಿಜೆಪಿಗೆ ಅಧ್ಯಕ್ಷ ಸ್ಥಾನ ಮೀಸಲಾಗಿದೆ. ಹೀಗಾಗಿ ಬಿಜೆಪಿ ಸರ್ಕಾರ ಅಧಿಕಾರ ಹಿಡಿಯುವ ಉದ್ದೇಶದಿಂದ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿ ಕಾನೂನು ಬಾಹಿರವಾಗಿ ಎಸ್‍ಟಿ ಜನಾಂಗಕ್ಕೆ ಅಧ್ಯಕ್ಷಗಾದಿ ಮೀಸಲಾತಿ ನೀಡಿದ್ದಾರೆ ಆಕ್ರೋಶ ವ್ಯಕ್ತಪಡಿಸಿದರು.

    ಬಿಜೆಪಿಯ ಅನಂತಕುಮಾರ್ ಹೆಗಡೆ ನಾವು ಮೀಸಲಾತಿ ತೆಗೆಯಲು ಅಧಿಕಾರಕ್ಕೆ ಬಂದಿದ್ದೇವೆ ಎಂದು ಹೇಳಿದ್ದರು. ಅಂತಹ ಮೀಸಲಾತಿ ವಿರೋಧಿ ಸರ್ಕಾರ ಮೀಸಲಾತಿ ಪರ ಎಂದು ಹೇಳಿಕೊಂಡು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ. ನಾನು ಮೀಸಲಾತಿ ಸ್ವಾಗತಿಸುವವರಲ್ಲಿ ಮೊದಲಿಗ. ಆದರೆ ಕಾನೂನಿಗೆ ವಿರುದ್ಧವಾಗಿ ಮೀಸಲಾತಿ ಮಾಡಿದಕ್ಕೆ ವಿರೋಧವಿದೆ ಎಂದು ತಿಳಿಸಿದರು.

    ಇದೇ ವೇಳೆ ಮಾತನಾಡಿದ ಅಧ್ಯಕ್ಷ ಸ್ಥಾನದ ಸ್ಪರ್ಧಿ ಗಿರೀಶ್, ಇಂದು ಚುನಾವಣೆ ನಡೆದರೂ ಫಲಿತಾಂಶ ಪ್ರಕಟಿಸದಂತೆ ಶಾಸಕ ಶಿವಲಿಂಗೇಗೌಡ ಕೋರ್ಟ್‍ನಿಂದ ತಡೆಯಾಜ್ಞೆ ತಂದಿದ್ದಾರೆ. ಅವರ ನಡೆ ಮೀಸಲಾತಿ ವಿರುದ್ಧವಾಗಿದೆ ಎಂದು ಕಿಡಿಕಾರಿದ್ದಾರೆ.