Tag: CM Change

  • ಕಾಂಗ್ರೆಸ್‍ನವರಿಗೆ ತಲೆ ಕೆಟ್ಟಿದೆ ಅದಕ್ಕೆ ಸಿಎಂ ಬದಲಾವಣೆ ಎನ್ನುತ್ತಿದ್ದಾರೆ: ಆರಗ ಜ್ಞಾನೇಂದ್ರ

    ಕಾಂಗ್ರೆಸ್‍ನವರಿಗೆ ತಲೆ ಕೆಟ್ಟಿದೆ ಅದಕ್ಕೆ ಸಿಎಂ ಬದಲಾವಣೆ ಎನ್ನುತ್ತಿದ್ದಾರೆ: ಆರಗ ಜ್ಞಾನೇಂದ್ರ

    ಬೆಂಗಳೂರು: ಕಾಂಗ್ರೆಸ್‍ನವರಿಗೆ ತಲೆ ಕೆಟ್ಟಿದೆ. ಅದಕ್ಕೆ ಸಿಎಂ ಬದಲಾವಣೆ ಅಂತ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುವ ಅಧಿಕಾರ ಅವರಿಗೆ ಯಾರು ಕೊಟ್ಟಿರುವುದು. ಬೊಮ್ಮಾಯಿ ಆಡಳಿತ ನೋಡಿ ಕಾಂಗ್ರೆಸ್‍ನವರಿಗೆ ತಲೆ ಕೆಟ್ಟಿದೆ. ಬೊಮ್ಮಾಯಿ ಅವರ ಅಭಿವೃದ್ಧಿ ಕೆಲಸ ನೋಡಿ ಕಾಂಗ್ರೆಸ್‍ಗೆ ಭಯ ಆಗುತ್ತಿದೆ. ಹೀಗಾಗಿ ಕಾಂಗ್ರೆಸ್‍ನವರು ಹೀಗೆ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಪ್ರವೀಣ್ ಕುಮಾರ್ ಬಿಡುಗಡೆಗೆ ವಿರೋಧ – ವಿಶೇಷ ಸಭೆ ಕರೆದ ಆರಗ ಜ್ಞಾನೇಂದ್ರ

    ಕಾಂಗ್ರೆಸ್ ನಾಯಕರ ಹೇಳಿಕೆ ಮತ್ತು ಟ್ವೀಟ್ ಮೂರ್ಖತನದ್ದು. ಬಿಜೆಪಿ ಮುಖ್ಯಮಂತ್ರಿಯನ್ನು ಕಾಂಗ್ರೆಸ್ ಅವರು ಹೇಗೆ ಬದಲಾವಣೆ ಮಾಡ್ತಾರೆ. ಅವರಿಗೆ ಭಯ ಬಂದಿದೆ. ಬೊಮ್ಮಾಯಿ ಅಭಿವೃದ್ಧಿ ಕೆಲಸ ಅವರಿಗೆ ನಡುಕ ಹುಟ್ಟಿಸಿದೆ. ಸುಳ್ಳು ಹೇಳಿ ಇಮೇಜ್ ಜಾಸ್ತಿ ಮಾಡಿಕೊಳ್ಳಲು ಕಾಂಗ್ರೆಸ್‍ನವರು ಪ್ರಯತ್ನಿಸುತ್ತಿದ್ದಾರೆ. ಜನ ಕಾಂಗ್ರೆಸ್‍ನವರ ಮಾತು ಕೇಳಿ ನಗುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ನನ್ನ ಮಗ ಕಾಂಗ್ರೆಸ್ ಸೇರ್ಪಡೆ ಆಗ್ತಿರೋದು ನಿಜ: ಬಿಜೆಪಿ MLC ವಿಶ್ವನಾಥ್

    Live Tv
    [brid partner=56869869 player=32851 video=960834 autoplay=true]

  • ಬಿಜೆಪಿ ಅಧಿಕಾರಕ್ಕೆ ಬಂದಾಗ ಸಿಎಂ ಬದಲಾವಣೆ ಅನ್ನೋದು ಅಂಟು ರೋಗ: ರಾಜೂಗೌಡ

    ಬಿಜೆಪಿ ಅಧಿಕಾರಕ್ಕೆ ಬಂದಾಗ ಸಿಎಂ ಬದಲಾವಣೆ ಅನ್ನೋದು ಅಂಟು ರೋಗ: ರಾಜೂಗೌಡ

    ಯಾದಗಿರಿ: ಬಿಜೆಪಿ ಅಧಿಕಾರಕ್ಕೆ ಬಂದಾಗ ಸಿಎಂ ಬದಲಾವಣೆ ಎನ್ನುವುದು ಒಂದು ಅಂಟು ರೋಗವಾಗಿದೆ. ನನಗೂ ಸಿಎಂ ಆಗುವ ಆಸೆಯಿದೆ ಎಂದು ಬಿಜೆಪಿ ಶಾಸಕ ರಾಜೂಗೌಡ ಹೇಳಿದ್ದಾರೆ.

    ಜಿಲ್ಲೆಯ ಕಕ್ಕೆರಿಯಲ್ಲಿ ಮಾತನಾಡಿದ ಅವರು, ನಾನು ಸಮರ್ಥ ಅಂತ ಜನರಿಗೆ ಗೊತ್ತಾದಾಗ ಜನರು ನನ್ನ ಸಿಎಂ ಮಾಡ್ತಾರೆ. ಅದಕ್ಕೆ ಅನುಭವ, ವಯಸ್ಸು ಎಲ್ಲ ಬೇಕು. ಆದರೆ ನನಗೆ ದುರಾಸೆ ಇಲ್ಲ. ನಮ್ಮ ಸಿಎಂ ಬಸವರಾಜ್ ಬೊಮ್ಮಾಯಿಯವರೇ ಎನ್ನುವ ಮೂಲಕ ಸ್ವಪಕ್ಷದವರ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಈ ಪರಿಸ್ಥಿತಿ ಮುಂದುವರಿದರೆ ಪ್ರತ್ಯೇಕ ರಾಜ್ಯದ ಕೂಗು ಅನಿವಾರ್ಯ: ಈಶ್ವರ್‌ ಖಂಡ್ರೆ

    ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಹತ್ತಿರದಿಂದ ಬಲ್ಲೆ. ತಮ್ಮ ಕ್ಷೇತ್ರಕ್ಕೆ ಹೋದಾಗಲೆಲ್ಲ ಬಹಳ ಪ್ರೀತಿ, ಭಾವನಾತ್ಮಕವಾಗಿ ಮಾತನಾಡುತ್ತಾರೆ. ಅವರು ಮಾತನಾಡಿರುವುದಕ್ಕೂ ಸಿಎಂ ಬದಲಾವಣೆ ವದಂತಿಗೂ ಸಂಬಂಧವಿಲ್ಲ. ಸಿಎಂ ಬದಲಾವಣೆ ಅಂತ ನಮ್ಮ ಪಕ್ಷದ ಕೆಲವರು ಮತ್ತು ವಿರೋಧ ಪಕ್ಷದವರು ಗುಸುಗುಸು ಮಾತನಾಡುತ್ತಿದ್ದಾರೆ. ಸಿಎಂ ಬದಲಾವಣೆ ಇಲ್ಲ ಅಂತ ಸ್ವತಃ ಅಮಿತ್ ಶಾ ಅವರೇ ಹೇಳಿದ್ದಾರೆ ಎಂದಿದ್ದಾರೆ.

    ಬಸವರಾಜ್ ಬೊಮ್ಮಾಯಿ ಕೇಂದ್ರ ಸಚಿವರಾಗುತ್ತಾರೆ ಎಂಬ ನಿರಾಣಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಇದು ಮಾತನಾಡುವ ಸಂದರ್ಭವೇ ಅಲ್ಲ. ವೇದಿಕೆ ಮೇಲೆ ಯಾರನ್ನೋ ಖುಷಿಪಡಿಸಲು ಹೋಗಿ ಏನೋ ಅರ್ಥ ಆಗುತ್ತದೆ. ನಿರಾಣಿಯವರು ಸಿಎಂ ಸ್ಥಾನದ ಪ್ರಮುಖ ಆಕಾಂಕ್ಷಿಗಳಿದ್ದರು ನಿಜ. ಆದರೆ ಅವರು ಇಂತಹ ಹೇಳಿಕೆಗಳನ್ನು ನೀಡಬಾರದು. ಈಗಾಗಲೇ ನಮ್ಮ ಪಕ್ಷದ ಹೈಕಮಾಂಡ್ ಅನಾವಶ್ಯಕ ಮಾತುಗಳನ್ನು ಆಡದಂತೆ ಖಡಕ್‌ ಸೂಚನೆ ನೀಡಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಯುವತಿಯರ ಮದುವೆ ವಯಸ್ಸು 21ಕ್ಕೆ ಏರಿಕೆ ಕೇವಲ ಹಿಂದೂ ಧರ್ಮಕ್ಕೆ ಮಾತ್ರ ಅಲ್ಲ: ಶೋಭಾ ಕರಂದ್ಲಾಜೆ

  • ಸಿಎಂ ಬದಲಾವಣೆ ಮಾತು ಕಪೋಲ ಕಲ್ಪಿತವಾದದ್ದು: ಬಿ.ವೈ ವಿಜಯೇಂದ್ರ

    ಸಿಎಂ ಬದಲಾವಣೆ ಮಾತು ಕಪೋಲ ಕಲ್ಪಿತವಾದದ್ದು: ಬಿ.ವೈ ವಿಜಯೇಂದ್ರ

    ದಾವಣಗೆರೆ: ಸಿಎಂ ಬದಲಾವಣೆ ಮಾತು ಕಪೋಲ ಕಲ್ಪಿತವಾದದ್ದು ಎಂದು ಸಂಸದ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.

    ರಾಜ್ಯದಲ್ಲಿ ಬಿಟ್ ಕಾಯಿನ್ ವಿಚಾರ ಭಾರೀ ಸದ್ದು ಮಾಡುತ್ತಿದೆ. ಈ ಮಧ್ಯೆ ರಾಜ್ಯಕ್ಕೆ ಹೊಸ ಸಿಎಂ ಬರಲಿದ್ದಾರೆ ಎಂಬ ವಿಚಾರ ಕುರಿತಂತೆ ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಮಾತು ಕಪೋಲ ಕಲ್ಪಿತವಾದದ್ದು, ಚುನಾವಣೆಗೆ ಇನ್ನೂ ಒಂದುವರೆ ವರ್ಷಗಳ ಕಾಲ ಸಮಯವಿದೆ. ಅಲ್ಲಿಯವರೆಗೂ ಬೊಮ್ಮಯಿ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ. ಸಿಎಂ ಬದಲಾವಣೆ ವಿಚಾರ, ಇದೆಲ್ಲ ಕಾಂಗ್ರೆಸ್ ಪಕ್ಷದ ಪಿತೂರಿ ಅಷ್ಟೇ. ಈ ರೀತಿ ಹೇಳಿಕೆ ಕೊಡುವ ಮೂಲಕ ಆಡಳಿತವನ್ನು ಕುಂಠಿತ ಮಾಡುವ ಪ್ರಯತ್ನವನ್ನು ಕಾಂಗ್ರೆಸ್‍ನವರು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

    basavaraj bommai

    ಇದೇ ವೇಳೆ ದಲಿತ ನಾಯಕ ಸಿಎಂ ಆಗುತ್ತಾರಾ ಎಂಬ ಮಾಧ್ಯಮದವರ ಪ್ರಶ್ನೆಗೆ, ಯಾರು ಸಿಎಂ ಆಗುತ್ತಾರೆ ಎನ್ನುವುದನ್ನು ಜನ ನಿರ್ಧಾರ ಮಾಡುತ್ತಾರೆ. ಇನ್ನೂ ಈಗ ಚುನಾವಣೆ ಬಂದಿಲ್ಲ. ಸಿದ್ದರಾಮಯ್ಯ, ಡಿಕೆಶಿ ಹಾಗೂ ಕಾಂಗ್ರೆಸ್ ಮುಖಂಡರ ನಡುವಿನ ಗೊಂದಲ ಇದರಲ್ಲಿ ಕಾಣಿಸುತ್ತಿದೆ. ಕಾಂಗ್ರೆಸ್ ಸಂಸೃತಿ ಕಾಲೇಳೆಯುವುದು ಅದು ಇದರಲ್ಲಿ ಎಂಬುವುದು ಗೊತ್ತಾಗುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ:  ಯಾವುದೇ ಕಾಯಿನ್ ವಿಚಾರಕ್ಕೂ, ನನ್ನ ಮಗನಿಗೂ ಸಂಬಂಧ ಇಲ್ಲ: ಎನ್.ಎ.ಹ್ಯಾರಿಸ್

    ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಬಿಟ್ ಕಾಯಿನ್ ಬಗ್ಗೆ ಮಾತನಾಡಿದ ಅವರು, ಇದು ಬೊಮ್ಮಾಯಿ ಅವರು ಸಿಎಂ ಆದ ನಂತರ ನಡೆಯುತ್ತಿರುವ ಘಟನೆ ಅಲ್ಲ. ಮೂನ್ನಾಲ್ಕು ವರ್ಷಗಳ ಹಿಂದೆ ನಡೆದ ಘಟನೆಯಾಗಿದೆ. ಬಿಟ್ ಕಾಯನ್ ಬಗ್ಗೆ ಕಾಂಗ್ರೆಸ್ ಮುಖಂಡರು ಆರೋಪ ಮಾಡುತ್ತಿದ್ದಾರೆ. ಆ ಆರೋಪಗಳಿಗೆ ಯಾವುದೇ ಆಧಾರ ಇಲ್ಲ. ವಿನಾಕಾರಣ ಆರೋಪ ಮಾಡುತ್ತಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಬಿರುಗಾಳಿ – ಹ್ಯಾರಿಸ್, ಲಮಾಣಿ ಪುತ್ರರ ಹೆಸರು ಹೇಳಿರೋ ಹ್ಯಾಕರ್ ಶ್ರೀಕಿ

    ವಿಚಿತ್ರ ಏನು ಅಂದ್ರೆ ಕಾಂಗ್ರೆಸ್ ಮುಖಂಡರೇ ಅದರಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಈ ಕುರಿತಂತೆ ಮುಖ್ಯಮಂತ್ರಿಗಳು ಸ್ಪಷ್ಟವಾಗಿ ತನಿಖೆ ನಡೆಸಲು ಸೂಚಿಸಿದ್ದಾರೆ. ಇದರಲ್ಲಿ ಯಾರೇ ಪ್ರಭಾವಿಗಳಿದ್ದರು ಅವರ ವಿರುದ್ಧ ತನಿಖೆಯಾಗುತ್ತದೆ. ಯಾರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್ ಮುಖಂಡರು ಬಿಜೆಪಿಯವರು ಬಿಟ್ ಕಾಯಿನ್ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳುವ ಮೂಲಕ ರಾಜ್ಯದ ಜನತೆಯ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.