Tag: CM ibrahim

  • ಬೊಮ್ಮಾಯಿನೇ ಹಿಜಬ್ ಹಾಕಿದ್ದಾರೆ: ಸಿಎಂ ಇಬ್ರಾಹಿಂ

    ಬೊಮ್ಮಾಯಿನೇ ಹಿಜಬ್ ಹಾಕಿದ್ದಾರೆ: ಸಿಎಂ ಇಬ್ರಾಹಿಂ

    ಬೆಂಗಳೂರು: ತಲೆ ಮೇಲೆ ಬಟ್ಟೆ ಹಾಕೋದು ಹಿಜಬ್ ಅದು ಬುರ್ಖಾ ಅಲ್ಲ. ಅಯ್ಯೋ.. ಕೋವಿಡ್ ಗೆ ಹಾಕುವುದನ್ನೆ ಇವರು ಹಾಕಿದ್ದಾರೆ. ಬೊಮ್ಮಾಯಿನೇ ಹಿಜಬ್ ಹಾಕಿದ್ದಾರೆ. ಸಚಿವರು ಹಾಕಿದ್ದಾರೆ, ನಾನೂ ಹಾಕಿದ್ದೇನೆ ಎಂದು ಸಿಎಂ ಇಬ್ರಾಹಿಂ ಹೇಳಿದರು.

    ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ವಿವಾದಗಳ ಸೃಷ್ಟಿಯಲ್ಲಿ ಮುಂಚೂಣಿಯಲ್ಲಿ ಇದೆ. ಯಾವುದೇ ವಿವಾದ ಸೃಷ್ಟಿ ಮಾಡಿದರೂ ಸಕ್ಸಸ್ ಆಗ್ತಿಲ್ಲ. ಗೋಹತ್ಯೆ, ಧಾರ್ಮಿಕ ಬಿಲ್ ತಂದರು ಅಲ್ಲೆ ನಿಲ್ತು. ಈಗ ಹಿಜಬ್ ವಿವಾದ ತಂದಿದ್ದಾರೆ ಎಂದು ಗರಂ ಆದರು. ಇದನ್ನೂ ಓದಿ: ದಾವಣಗೆರೆಯಲ್ಲಿ ಜೆಡಿಎಸ್ ಸೇರುತ್ತೇನೆ: ಸಿಎಂ ಇಬ್ರಾಹಿಂ

    ಹಿಜಾಬ್ ಅನಾದಿ ಕಾಲದಿಂದಲೂ ಇದೆ. ಮೈಸೂರು ಮಹಾರಾಜರು ಅಂದಿನ ಶಾಲಾ-ಕಾಲೇಜಿಗೆ ಹೆಣ್ಣುಮಕ್ಕಳು ಹೋಗುವ ಗಾಡಿಗೆ ಪರದೆ ಹಾಕಿದ್ದರು. ಹೆಣ್ಣು ಮಕ್ಕಳಿಗೆ ಪರದೆ ಅಲ್ಲದೆ ಗಾಡಿಗೂ ಪರದೆ ಹಾಕಿದ್ದರು. ಉತ್ತರ ಕರ್ನಾಟಕದಲ್ಲಿ ತಲೆ ಮೇಲೆ ಸೆರಗು ಹಾಕದ ಹೆಣ್ಣು ಮಕ್ಕಳು ಸಿಗಲ್ಲ ಅದು ಅವರ ಸಂಸ್ಕೃತಿ ಎಂದರು.

    ಹೆಣ್ಣು ಮಕ್ಕಳು ಮುಖ ಮುಚ್ಚಿಕೊಂಡರೆ ನಿಮಗೇನು ಸಮಸ್ಯೆ. ಅವರ ಮುಖ ನೋಡೋ ಆನಂದ ನಿಮಗ್ಯಾಕೆ. ಅವರು ಬ್ಯೂಟಿ ಕಂಟೆಸ್ಟ್ ಗೆ ಬರುತ್ತಿಲ್ಲ. ಕೆಲವು ಮುಸ್ಲಿಂ ಹೆಣ್ಣು ಮಕ್ಜಳು ಹಿಜಬ್ ಹಾಕಲ್ಲ. ಅವರಿಗೆ ಹಾಕಿ ಅಂತ ಒತ್ತಾಯ ಮಾಡಲ್ಲ. ಹಾಕುವವರನ್ನ ಯಾಕೆ ತಡೆಯುತ್ತೀರಾ ಎಂದು ಪ್ರಶ್ನಿಸಿದರು.

  • ಇಬ್ರಾಹಿಂ ಒಂದು ಹೆಜ್ಜೆ ಧೂಳನ್ನೂ ನಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ: ಕೆ.ಎಸ್ ಈಶ್ವರಪ್ಪ

    ಇಬ್ರಾಹಿಂ ಒಂದು ಹೆಜ್ಜೆ ಧೂಳನ್ನೂ ನಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ: ಕೆ.ಎಸ್ ಈಶ್ವರಪ್ಪ

    ಶಿವಮೊಗ್ಗ: ಕಾಂಗ್ರೆಸ್ ಪಕ್ಷ ತೊರೆಯಲು ನಿರ್ಧರಿಸಿರುವ ಸಿ.ಎಂ ಇಬ್ರಾಹಿಂ ಅವರನ್ನು ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ. ಅಷ್ಟೇ ಅಲ್ಲ, ಇಬ್ರಾಹಿಂ ಅವರ ಒಂದು ಹೆಜ್ಜೆ ಧೂಳನ್ನು ಸಹ ನಮ್ಮ ಪಕ್ಷದೊಳಗೆ ಬಿಟ್ಟುಕೊಳ್ಳುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

    ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಿ.ಎಂ.ಇಬ್ರಾಹಿಂ ಏನು? ಅವರು ಎಷ್ಟರಮಟ್ಟಿಗೆ ಅನ್ಯಾಯ ಮಾಡಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿದೆ. ಈ ಹಿಂದೆ ಇಬ್ರಾಹಿಂ ಅವರು ಸಚಿವರಾಗಿದ್ದಾಗ ಅವರು ರಾಜೀನಾಮೆ ಕೊಡುವಂತೆ ಬಿಜೆಪಿ ಹೋರಾಟ ಮಾಡಿತ್ತು. ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಹೋರಾಟ ಮಾಡಿದ್ದೇ ನಮ್ಮ ಪಕ್ಷ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಯುಪಿ ಚುನಾವಣೆಯಲ್ಲಿ ಐತಿಹಾಸಿಕ ಸೋಲಿನ ಭಯದಿಂದ ‘ಬಾಬಾಜಿ’ ಒತ್ತಡದಲ್ಲಿದ್ದಾರೆ: ಅಖಿಲೇಶ್

    ಇಬ್ರಾಹಿಂ ಹಾಗೂ ಅವರ ಸಹೋದರ ಈ ಹಿಂದೆ ಭದ್ರಾವತಿಯಲ್ಲಿ ಏನೇನು ಅನ್ಯಾಯ ಮಾಡಿದ್ದಾರೆ ಎಂಬುದು ಗೊತ್ತಿದೆ. ಅವರ ಅನ್ಯಾಯವನ್ನು ಪೂರ್ತಿ ಜಿಲ್ಲೆ, ರಾಜ್ಯದ ಜನ ಗಮನಿಸಿದ್ದಾರೆ. ಹೀಗಾಗಿ ಯಾವುದೇ ಕಾರಣಕ್ಕೂ ಇಬ್ರಾಹಿಂ ಅವರನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

  • ಬಜೆಟ್‍ನಲ್ಲಿ ಮುಂದಿನ 25 ವರ್ಷಗಳ ಮುಂದಾಲೋಚನೆಯಿದೆ: ಬಿ.ಸಿ.ಪಾಟೀಲ್

    ಬಜೆಟ್‍ನಲ್ಲಿ ಮುಂದಿನ 25 ವರ್ಷಗಳ ಮುಂದಾಲೋಚನೆಯಿದೆ: ಬಿ.ಸಿ.ಪಾಟೀಲ್

    ಹಾವೇರಿ: ಮುಂದಿನ ಇಪ್ಪತ್ತೈದು ವರ್ಷಗಳ ಮುಂದಾಲೋಚನೆ ಇಟ್ಟುಕೊಂಡು ಕೇಂದ್ರ ಸರ್ಕಾರದ ಬಜೆಟ್ ಮಂಡನೆ ಆಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

    ನಿಟ್ಟೂರು ಗ್ರಾಮದಲ್ಲಿ ಬಜೆಟ್ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಬಜೆಟ್ ದೇಶದ ಅಭಿವೃದ್ಧಿಗೆ ಪೂರಕವಾಗಿದೆ. ಮುಂದಿನ ಇಪ್ಪತ್ತೈದು ವರ್ಷಗಳ ಮುಂದಾಲೋಚನೆ ಇಟ್ಟುಕೊಂಡು ಬಜೆಟ್ ಮಂಡನೆ ಆಗಿದೆ. ಬಜೆಟ್‍ನಲ್ಲಿ ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷ ಘೋಷಣೆ ಮಾಡಿದ್ದಾರೆ. ಬೆಳೆ ಸಮೀಕ್ಷೆಗೆ ಡ್ರೋಣ್ ತಂತ್ರಜ್ಞಾನದ ಅಳವಡಿಕೆಗೆ ಹೆಚ್ಚಿನ ಒತ್ತು ನೀಡಿದೆ. ಒಂಬತ್ತು ಲಕ್ಷ ಹೆಕ್ಟೇರ್ ಜಮೀನಿನ ನೀರಾವರಿಗೆ ಒತ್ತು ನೀಡಿದೆ. ನದಿಗಳ ಜೋಡಣೆ ಮೂಲಕ ನೀರಾವರಿ ಮಾಡುವ ವಿಚಾರ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಕಾಂಗ್ರೆಸ್ ಮುಖಂಡರು ಪಕ್ಷ ಬಿಡುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಕೂಡಾ ಕಾಂಗ್ರೆಸ್ ತ್ಯಜಿಸಿದರೆ ಆಶ್ಚರ್ಯವಿಲ್ಲ. ಅಲ್ಲಿ ಆ ರೀತಿಯ ವಾತಾವರಣವಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಒಬ್ಬರ ಮುಖವನ್ನೊಬ್ಬರು ನೋಡದ ಪರಿಸ್ಥಿತಿ ಅಲ್ಲಿದೆ. ಅವರ ಪಿಸುಮಾತು, ಇವರ ಪಿಸುಮಾತು ನೋಡಿದರೆ ಅಲ್ಲಿ ಆ ರೀತಿಯ ಪರಿಸ್ಥಿತಿ ಇದೆ. ಮುಂಬರುವ ಚುನಾವಣೆಯಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ ಅಂತ ಅವರು ಹಗಲುಗನಸು ಕಾಣುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಅನ್ನುವುದಕ್ಕಿಂತ ನಾನು ಸಿಎಂ ಆಗುತ್ತೇನೆ, ನಾನು ಸಿಎಂ ಆಗುತ್ತೇನೆ ಅಂತ ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವೆ ಪೈಪೋಟಿ ನಡೆದಿದೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಮೋದಿಯವರು ದೇವರ ಸ್ವರೂಪ: ಶಿವರಾಜ್ ಸಿಂಗ್ ಚೌಹಾಣ್

    ಸಿದ್ದರಾಮಯ್ಯ ಮತ್ತು ಸಿ.ಎಂ.ಇಬ್ರಾಹಿಂ ಜಿಗರಿ ದೋಸ್ತರು. ಇಬ್ರಾಹಿಂ ಸಾಹೇಬರು ಬಹಳ ಚೆನ್ನಾಗಿ ಪ್ರಾಸಬದ್ಧವಾಗಿ ಮಾತನಾಡ್ತಾರೆ. ಜಾತಿಯ ಅಧಾರದ ಮೇಲೆ ರಾಜಕೀಯ ಮಾಡುತ್ತೇವೆ ಅನ್ನುವುದು ಮೂರ್ಖತನದ ಪರಮಾವಧಿ ಎಂದರು. ಇದನ್ನೂ ಓದಿ: Budget 2022 : ಮೋದಿ ಸೂಚನೆಯಂತೆ ಜನರಿಂದ ಹೆಚ್ಚುವರಿ ತೆರಿಗೆ ಸಂಗ್ರಹ ಇಲ್ಲ

    ನದಿ ಜೋಡಣೆಗೆ ರಾಜ್ಯದಲ್ಲಿ ಕೆಲವರ ವಿರೋಧದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಡಿಪಿಆರ್ ನೋಡಿಕೊಂಡು ರಾಜ್ಯ ಸರ್ಕಾರ ಮುಂದಿನ ತೀರ್ಮಾನ ಮಾಡುತ್ತದೆ ಅಂತ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಡಿಪಿಆರ್‍ನಲ್ಲಿ ರಾಜ್ಯಕ್ಕೆ ಅನುಕೂಲ ಆಗುತ್ತದೆ ಇಲ್ಲವೋ ನೋಡುತ್ತಾರೆ. ಡಿಪಿಆರ್ ನಲ್ಲಿ ನಮ್ಮ ರಾಜ್ಯಕ್ಕೆ ಅನುಕೂಲ ಆಗುವುದಿಲ್ಲ ಅಂದರೆ ಅದರ ಬಗ್ಗೆ ತೀರ್ಮಾನ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

    ಕೆಲವು ಸಚಿವರು ಕರೆ ಮಾಡಿದರು ಕರೆಯನ್ನು ಎತ್ತುತ್ತಿಲ್ಲ, ಬಹಳ ದುರಹಂಕಾರಿಗಳಿದ್ದಾರೆ ಅನ್ನುವ ಶಾಸಕ ರೇಣುಕಾಚಾರ್ಯ ಹೇಳಿಕೆ ವಿಚಾರವಾಗಿ ಮಾತನಾಡಿ, ರೇಣುಕಾಚಾರ್ಯ ಅವರು ಯಾರು ಅಂಥವರಿದ್ದಾರೆ ಅವರ ಹೆಸರು ಹೇಳಬೇಕು. ಸುಮ್ಮನೆ ಕಂಬಳಕ್ಕೆ ಕಲ್ಲು ಕಟ್ಟಿ ಹೊಡೆಯೋದು ಸರಿಯಲ್ಲ. ಯತ್ನಾಳರು ಎಲ್ಲರೂ ಚೆನ್ನಾಗಿ ಕೆಲಸ ಮಾಡುತ್ತಾರೆ ಅಂತಾರೆ. ಆದರೆ ರೇಣುಕಾಚಾರ್ಯರು ಹೀಗೆ ಹೇಳುತ್ತಾರೆ. ಹೀಗೆ ಹೇಳಿಕೊಂಡು ಹೋಗೋದು ಒಳ್ಳೆಯದಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

  • ಈಗ ರಾಜಕೀಯ ನಾಯಕರಲ್ಲಿ ನಿಷ್ಠೆ ಇಲ್ಲ: ಹೆಚ್‍ಡಿಕೆ

    ಈಗ ರಾಜಕೀಯ ನಾಯಕರಲ್ಲಿ ನಿಷ್ಠೆ ಇಲ್ಲ: ಹೆಚ್‍ಡಿಕೆ

    ಬೆಂಗಳೂರು: ಈಗ ರಾಜಕೀಯ ನಾಯಕರಲ್ಲಿ ನಿಷ್ಠೆ ಇಲ್ಲ. ಇಂಥವರು ಇಂಥಹದ್ದೇ ಪಕ್ಷದಲ್ಲಿ ಇರುತ್ತಾರೆ ಎಂದು ಊಹೆ ಮಾಡಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ.

    ಜೆಪಿ ಭವನದಲ್ಲಿ ಮಾತನಾಡಿದ ಅವರು, ಸಿಎಂ ಇಬ್ರಾಹಿಂ ಜೆಡಿಎಸ್‍ಗೆ ಸೇರುವ ವಿಚಾರ ಅವರು ತೀರ್ಮಾನ ಮಾಡುತ್ತಾರೆ. ಈಗಾಗಲೇ ಅವರು ರಾಜ್ಯ ಪ್ರವಾಸ ಮಾಡಿದ್ದಾರೆ. ಕಾಂಗ್ರೆಸ್ ಬಿಟ್ಟಿದ್ದೇನೆ ಎಂದಿದ್ದಾರೆ. ಹುಬ್ಬಳ್ಳಿಯಲ್ಲಿ ನಿನ್ನೆ ಮಾತನಾಡಿದ್ದಾರೆ. ಮುಂದೆ ನೋಡೋಣ ಏನಾಗುತ್ತದೆ ಅಂತ ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಕಾಂಗ್ರೆಸ್ ಪಾಲಿನ ಭಸ್ಮಾಸುರ: ಎಚ್. ವಿಶ್ವನಾಥ್

    ಉತ್ತರ ಪ್ರದೇಶ, ಗೋವಾ, ಪಂಜಾಬ್‍ನಲ್ಲಿ ಚುನಾವಣೆ ನಡೆಯುತ್ತಿದೆ. ಬೆಳಗ್ಗೆ ಒಂದು ಪಾರ್ಟಿಲಿ ಇರುತ್ತಾರೆ. ಸಂಜೆ ಇನ್ನೊಂದು ಪಾರ್ಟಿಗೆ ಹೋಗುತ್ತಾರೆ. ಇಂದು ರಾಜಕೀಯ ನಾಯಕರಲ್ಲಿ ನಿಷ್ಠೆ ಇಲ್ಲ. ಇಂಥವರು ಇಂಥಹದ್ದೇ ಪಕ್ಷದಲ್ಲಿ ಇರುತ್ತಾರೆ ಎಂದು ಊಹೆ ಮಾಡಲು ಸಾಧ್ಯವಿಲ್ಲ. ನೋಡೋಣ ಚುನಾವಣೆ ಸಮಯದಲ್ಲಿ ಏನಾಗುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ.

    ಇದೇ ವೇಳೆ ಮಂಡ್ಯದಲ್ಲಿ ಶಿವರಾಮೇಗೌಡರು ಅವರ ದೂರವಾಣಿ ರೆಕಾರ್ಡ್ ವೈರಲ್ ಆಗಿರುವ ಬಗ್ಗೆ ಮಾತನಾಡಿದ ಅವರು, ಶಿವರಾಮೇಗೌಡರು ಸಂಬಂಧ ಇಲ್ಲದೇ ಇರುವ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಹಿರಿಯ ರಾಜಕಾರಣಿ ದಿ.ಮಾದೇಗೌಡರ ವಿಚಾರದಲ್ಲಿ ಮಾತನಾಡಿದ್ದಾರೆ. ನಮಗೆ ಅವರಿಗೆ ರಾಜಕೀಯ ಬೇರೆ. ಅವರು ಈಗ ಇಲ್ಲ. ಆದರೆ ಅವರ ಹೆಸರು ಯಾಕೆ ತಂದಿದ್ದಾರೋ ಗೊತ್ತಿಲ್ಲ. ಅವರ ವೈಯಕ್ತಿಕ ಹೀಗೆ ಹಲವಾರು ವಿಚಾರ ಬಗ್ಗೆ ಮಾತನಾಡಿದ್ದಾರೆ. ಇದು ಸಹಿಸಲು ಸಾಧ್ಯವಿಲ್ಲ. ನಮ್ಮ ಅಧ್ಯಕ್ಷರಿಗೆ ಸೂಚನೆ ಕೊಡುತ್ತೇನೆ. ನೋಟೀಸ್ ಕೊಟ್ಟು ಪಕ್ಷದಿಂದ ಹೊರ ಹಾಕಿ ಅಂತ ತಿಳಿಸಿದ್ದಾರೆ. ಅಂತವರು ಪಕ್ಷದಲ್ಲಿ ಇದ್ದರೆ ಶೋಭೆ ತರುವುದಿಲ್ಲ. ಹಣ ಇವರೊಬ್ಬರೇ ಕಂಡಿಲ್ಲ. ಪಾರ್ಲಿಮೆಂಟ್ ಚುನಾವಣೆಯಲ್ಲಿ ಹಣ ಖರ್ಚು ಮಾಡಿದ್ದು ಹೇಳಿದ್ದಾರೆ. 30 ಕೋಟಿ ಖರ್ಚು ಮಾಡಿರುವುದನ್ನು ಹೇಳಿದ್ದಾರೆ. ಅದ್ಯಾರಿಗೆ ಕೊಟ್ಟಿದ್ದಾರೋ ಗೊತ್ತಿಲ್ಲ ಅಂತ ಕಿಡಿಕಾರಿದ್ದಾರೆ.

    ಮಾದೇಗೌಡರ ಬಗ್ಗೆ ಮಾತನಾಡಿದ್ದು ಸರಿಯಲ್ಲ. ಅವರು ಈಗ ನಮ್ಮ ಮುಂದೆ ಇಲ್ಲ. ಇಲ್ಲದ ಸಮಯದಲ್ಲಿ ಈ ರೀತಿ ಪದಬಳಕೆ ಮಾಡಿರುವುದು ಸರಿಯಲ್ಲ. ಎಲ್ಲದ್ದಕ್ಕೂ ಒಂದು ಇತಿ ಮಿತಿ ಇದೆ. ಇಲ್ಲಿಯವರೆಗ ತಿದ್ದಿಕೊಳ್ಳುತ್ತಾರೆ ಅಂದುಕೊಂಡು ಸುಮ್ಮನಾಗಿದ್ವಿ. ಆದರೆ ಅದು ಆಗಲಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಅಸಮಾಧಾನ ಹೊರ ಹಾಕಿದ ಬೆನ್ನಲ್ಲೇ ಡಿಕೆಶಿಯನ್ನು ಭೇಟಿಯಾದ ಆನಂದ್ ಸಿಂಗ್

  • ಸಿದ್ದರಾಮಯ್ಯ ಕಾಂಗ್ರೆಸ್ ಪಾಲಿನ ಭಸ್ಮಾಸುರ: ಎಚ್. ವಿಶ್ವನಾಥ್

    ಸಿದ್ದರಾಮಯ್ಯ ಕಾಂಗ್ರೆಸ್ ಪಾಲಿನ ಭಸ್ಮಾಸುರ: ಎಚ್. ವಿಶ್ವನಾಥ್

    ಮೈಸೂರು: ಸಿದ್ದರಾಮಯ್ಯ ಯಾರನ್ನು ಬೆಳೆಯಲು ಬಿಡುವುದಿಲ್ಲ. ಅವರು ಕಾಂಗ್ರೆಸ್ ಪಾಲಿನ ಭಸ್ಮಾಸುರ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಕಿಡಿಕಾರಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ಮತ್ತೆ ಸ್ಪರ್ಧಿಸಿದರೆ 49 ಸಾವಿರ ಮತದಿಂದ ಸೋಲುತ್ತಾರೆ. ಇದರಿಂದಾಗಿ ಈಗ ಬೇರೆ ಕ್ಷೇತ್ರ ಹುಡುಕುತ್ತಿದ್ದಾರೆ ಎಂದ ಅವರು ಸಿದ್ದರಾಮಯ್ಯನಿಂದ ಅಹಿಂದದವರು ಮುಳುಗಿ ಹೋದರು. ಅಹಿಂದದವರನ್ನು ಉಪಯೋಗಿಸಿಕೊಂಡು ಸಿದ್ದರಾಮಯ್ಯ ದಡಕ್ಕೆ ಬಂದರು. ಸಿದ್ದರಾಮಯ್ಯ ಕುರುಬರನ್ನು ಬೆಳೆಸಲಿಲ್ಲ. ಎಲ್ಲರನ್ನು ಮುಗಿಸಿದರು. ಈಗ ಕಾಂಗ್ರೆಸ್‍ನ ಹಳ್ಳ ಹಿಡಿಸುವ ಕೆಲಸ ಸಿದ್ದರಾಮಯ್ಯ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    ಎಸ್.ಆರ್. ಪಾಟೀಲ್ ಅವರನ್ನು ಮುಗಿಸಿದ್ದು ಸಿದ್ದರಾಮಯ್ಯ. ಅವರಿಗೆ ಟಿಕೆಟ್ ಕೊಡಲಿಲ್ಲ. ಚಿಮ್ಮನಕಟ್ಟಿ ಮನೆ ಹಾಳಾಗಿದ್ದು ಸಿದ್ದರಾಮಯ್ಯರಿಂದ. ಯಾರ ಮನೆ ಹಾಳಾದರೂ ಸರಿ ನೀವು ಚೆನ್ನಾಗಿರಬೇಕು ಅಷ್ಟೇ. ಇದೇ ನಿಮ್ಮ ಸಿದ್ಧಾಂತ. ನಿನಗೆ ದೆಹಲಿಯಲ್ಲಿ ಯಾರು ಗೊತ್ತಿದ್ದರೂ ಖರ್ಗೆ, ಎಸ್.ಎಂ. ಕೃಷ್ಣ ಸಹಾಯ ಮಾಡಿದಕ್ಕೆ ಕಾಂಗ್ರೆಸ್ ಪಕ್ಷ ಸೇರಿದ್ದು. ನನ್ನನ್ನು ಸಿಎಂ ಇಬ್ರಾಹಿಂರನ್ನು ಸಿದ್ದರಾಮಯ್ಯ ಜೀವ ಇರುವವರೆಗೂ ನೆನಪಿಸಿಕೊಳ್ಳಬೇಕು. ಆದರೆ ಕೃತಜ್ಞತೆಯೇ ಇಲ್ಲದ ಜನ ನಾಯಕ ಅಂದರೆ ಅದು ಸಿದ್ದರಾಮಯ್ಯ ಮಾತ್ರ ಎಂದು ಕುಟುಕಿದರು. ಇದನ್ನೂ ಓದಿ: ಅಸಮಾಧಾನ ಹೊರ ಹಾಕಿದ ಬೆನ್ನಲ್ಲೇ ಡಿಕೆಶಿಯನ್ನು ಭೇಟಿಯಾದ ಆನಂದ್ ಸಿಂಗ್

    H. Vishwanath

    ನನ್ನ ಸಂಪರ್ಕದಲ್ಲಿ ಬೇರೆ ಪಕ್ಷದ ಶಾಸಕರು ಸಚಿವರು ಇದ್ದಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ 15 ಜನರಿಗೆ ಎಷ್ಟು ಕೋಟಿ ಕೊಟ್ಟು ಖರೀದಿ ಮಾಡುತ್ತಿದ್ದೀರಾ. ನಾವು 17 ಜನ ಹೋದಾಗ ಏನೆಲ್ಲಾ ಮಾತನಾಡಿದ್ದೀರಿ. ರಮೇಶ್ ಕುಮಾರ್ ಕೈಲಿ ಏನೆಲ್ಲಾ ಮಾಡಿಸಿದ್ದೀರಿ ಎನ್ನುವುದು ನೆನಪಿದೆಯಾ ಎಂದು ಪ್ರಶ್ನಿಸಿದ ಅವರು, ನಿಮ್ಮ ಜೊತೆ ಮಲಗಿದರೆ ಪಾವಿತ್ರ್ಯತೆ ನಮ್ಮ ಜೊತೆ ಮಲಗಿದರೆ ಅನೈತಿಕತೆನಾ ಎಂದು ತಿರುಗೇಟು ನೀಡಿದರು. ಸಿದ್ದರಾಮಯ್ಯ ಅವರು ಜನರನ್ನು ದಡ್ಡರು ಅಂದುಕೊಂಡಿದ್ದಾರೆ. ಆದರೆ ಜನರಿಗೆ ಎಲ್ಲಾ ಗೊತ್ತಿದೆ ಅವರೇ ನಿಮಗೆ ಪಾಠ ಕಲಿಸುತ್ತಾರೆ ಎಂದರು. ಇದನ್ನೂ ಓದಿ: ಕುಡಿತ ಬಿಟ್ಟರೆ ಮಾತ್ರ ಮನೆಗೆ ಬರುತ್ತೇನೆ ಎಂದಿದ್ದಕ್ಕೆ ಪತ್ನಿಯನ್ನೇ ಕೊಲೆಗೈದ

  • Wait and see, ಸಮಯ ಬಂದಾಗ ಎಲ್ಲಾ ಹೇಳುತ್ತೇನೆ: ಎಸ್.ಆರ್.ಪಾಟೀಲ್

    Wait and see, ಸಮಯ ಬಂದಾಗ ಎಲ್ಲಾ ಹೇಳುತ್ತೇನೆ: ಎಸ್.ಆರ್.ಪಾಟೀಲ್

    ಹುಬ್ಬಳ್ಳಿ: ಸಮಯ ಸಂದರ್ಭದಲ್ಲಿ ಎಲ್ಲಾ ಹೇಳುತ್ತೇನೆ. ವೇಟ್ ಆಂಡ್ ಸಿ ಎಂದು ಕಾಂಗ್ರೆಸ್ ಹಿರಿಯ ನಾಯಕ ಎಸ್.ಆರ್.ಪಾಟೀಲ್ ಹೇಳಿದ್ದಾರೆ.

    ಸಿಎಂ ಇಬ್ರಾಹಿಂ ಅವರನ್ನು ಭೇಟಿಯಾಗಿ ಮಾತನಾಡಿದ ಅವರು, ನನಗೆ ಇಲ್ಲಿಗೆ ಬಂದು ಇಬ್ರಾಹಿಂ ಜೊತೆಗೆ ಯಾರೂ ಮಾತನಾಡಲು ಹೇಳಿಲ್ಲ, ನಾನು ಸ್ವ ಇಚ್ಛೆಯಿಂದ ಪಕ್ಷದ ಹಿತದೃಷ್ಟಿಯಿಂದ ಮತ್ತು ಸ್ನೇಹಿತನ ನೋವನ್ನು ಆಲಿಸಲು ಬಂದಿದ್ದೇನೆ ಎಂದು ತಿಳಿಸಿದರು.

    ಇಬ್ರಾಹಿಂ ಅವರು ವಿಪಕ್ಷ ನಾಯಕನಾಗುವ ಆಸೆಯಿಟ್ಟುಕೊಂಡಿದ್ದರು. ಅವರು ಪಕ್ಷದಲ್ಲಿ ಇರಬೇಕು ಎಂದು ಮನವಿ ಮಾಡಿದ್ದೇನೆ. ಆದರೆ ಅವರು ಅದಕ್ಕೆ ಒಪ್ಪಲಿಲ್ಲ. ಅವರು ರಾಜ್ಯಾದ್ಯಂತ ಪ್ರವಾಸ ಮಾಡಿ ಜನರ ಅಭಿಪ್ರಾಯ ಪಡೆದುಕೊಳ್ಳುವ ಇಂಗಿತ ವ್ಯಕ್ತಪಡಿಸಿದ್ದಾರೆ. ನನಗೆ ಸದ್ಯ ಯಾವುದೇ ಅಸಮಾಧಾನ ಇಲ್ಲ ಎಂದರು. ಇದನ್ನೂ ಓದಿ: ಲೂಟಿ ಮಾಡಿರುವ ದುಡ್ಡಿದ್ದರೆ ಹೊಸ ಪಕ್ಷ ಮಾಡುತ್ತಿದ್ದೆವು: ಯತ್ನಾಳ್

    ಚುನಾವಣೆ ಸಮಯದಲ್ಲಿ ಒಬ್ಬ ಕಾರ್ಯಕರ್ತ ಪಕ್ಷ ಬಿಟ್ಟು ಹೋಗಬಾರದು. ಎಲ್ಲರನ್ನೂ ಒಗ್ಗೂಡಿಸಿಕೊಂಡು ಕೆಲಸ ಮಾಡಬೇಕು ಎಂದು ಹೇಳಿದರು.

    ಮುಗಿದ ಅಧ್ಯಾಯ: ಎಸ್‍ಆರ್ ಪಾಟೀಲ್ ಅವರು ನನ್ನನ್ನು ಪಕ್ಷದಲ್ಲಿ ಇರಬೇಕು ಎಂದು ಮನವಿ ಮಾಡಿದ್ದಾರೆ. ಆದರೆ ಅದು ಮುಗಿದ ಅಧ್ಯಾಯ. ಒಂದು ಸಲ ಡ್ಯಾಂ ಒಡೆದು ನೀರು ಹರಿದು ಹೋದರೆ ಮುಗಿಯಿತು ಎಂದು ವಿಧಾನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಹೇಳಿಕೆ ನೀಡಿ ಪಕ್ಷಕ್ಕೆ ಮರಳುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ನಮಗೆ ನಮ್ಮ ಜವಾಬ್ದಾರಿಯ ಅರಿವಿದೆ – ಸಿದ್ದರಾಮಯ್ಯ ವಿರುದ್ಧ ಬೊಮ್ಮಾಯಿ ವಾಗ್ದಾಳಿ

    ನನ್ನ ಜೊತೆಗೆ ಬಹಳಷ್ಟು ದೊಡ್ಡವರ ಬೆಂಬಲವಿದೆ. ಕಾಂಗ್ರೆಸ್‍ನವರು ನನ್ನ ಜೊತೆಗಿದ್ದಾರೆ. ಆದರೆ ಅವರ ಹೆಸರನ್ನು ಹೇಳಲ್ಲ. ಅದಕ್ಕೆ ಸರಿಯಾದ ಸಮಯಕ್ಕಾಗಿ ಕಾಯುತ್ತಿದ್ದೆನೆ ಎಂದರು.

    ಅಲ್ಪಸಂಖ್ಯಾತ ಲಿಂಗಾಯತ ಚಳುವಳಿ ವಿಜಯಪುರದಿಂದ ಆರಂಭ ಮಾಡುತ್ತೇವೆ. ಚಳುವಳಿಗೆ ಎಸ್‍ಆರ್ ಪಾಟೀಲ್ ಬರುತ್ತಾರೆ ಎಂದು ತಿಳಿಸಿದ್ದಾರೆ. ಎಸ್‍ಆರ್‍ಪಾಟೀಲ್ ಕಾಂಗ್ರೆಸ್ ಬಿಟ್ಟು ಬರುತ್ತಾರಾ ಎಂದು ಕಾದುನೋಡಿ ಎಂದರು. ಇದನ್ನೂ ಓದಿ: ಮಹಾತ್ಮಾ ಗಾಂಧಿ  ಆದರ್ಶಗಳು ಭಾರತದ ಆಧಾರಸ್ಥಂಭಗಳು: ಬಸವರಾಜ ಬೊಮ್ಮಾಯಿ

    ಐದಾರು ದಿನಗಳಲ್ಲಿ ಕೊಪ್ಪಳ, ಕಲಬುರಗಿ, ಬಳ್ಳಾರಿ, ರಾಯಚೂರು ಮತ್ತು ಬೆಳಗಾವಿ ಪ್ರವಾಸ ಮಾಡಲಿದ್ದೇನೆ. ನಾನು ನಿರೀಕ್ಷೆ ಮಾಡಿದ್ದಕ್ಕಿಂತ ಹೆಚ್ಚು ಬೆಂಬಲ ಸಿಗುತ್ತಿದೆ. ನನಗೆ ಸಿದ್ಧರಾಮಯ್ಯರಿಂದ ಯಾವುದೇ ಫೋನ್ ಕಾಲ್ ಬಂದಿಲ್ಲ. ಅದನ್ನು ನಾನು ನಿರೀಕ್ಷೆ ಕೂಡಾ ಮಾಡುವುದಿಲ್ಲ. ನನಗೆ ಜೆಡಿಎಸ್, ಮಮತಾ ಬ್ಯಾನರ್ಜಿ, ಅಖಿಲೇಶ್ ಯಾದವ್‍ರ ಮೇಲೆ ಒಲವು ಇದೆ ಎಂದು ಸ್ಪಷ್ಟನೆ ನೀಡಿದರು.

  • ಕಾಂಗ್ರೆಸ್‍ನಿಂದ ಹೊರಬಂದಿದ್ದೇನೆ ಮತ್ತೆ ವಾಪಸ್ ಹೋಗುವ ಪ್ರಶ್ನೆಯೇ ಇಲ್ಲ ಎಂದು ಶಾಪ ಹಾಕಿದ: ಇಬ್ರಾಹಿಂ

    ಕಾಂಗ್ರೆಸ್‍ನಿಂದ ಹೊರಬಂದಿದ್ದೇನೆ ಮತ್ತೆ ವಾಪಸ್ ಹೋಗುವ ಪ್ರಶ್ನೆಯೇ ಇಲ್ಲ ಎಂದು ಶಾಪ ಹಾಕಿದ: ಇಬ್ರಾಹಿಂ

    ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಿಂದ ಹೊರಬಂದಿದ್ದೇನೆ ವಾಪಸ್ ಹೋಗುವ ಪ್ರಶ್ನೆಯೇ ಇಲ್ಲ. ಮುಂದಿನ ದಾರಿ ನೋಡೋಣ, ನನ್ನ ಶಾಪ ಭಾರೀ ಕೆಟ್ಟದ್ದು, ಇವಾಗ ತಟ್ಟುತ್ತೀದೆ. ನಾನು ವಿಷಕಂಠ ಇದ್ದಂಗೆ ಎಲ್ಲವೂ ನುಂಗಿಕೊಂಡು ಇದ್ದೆ ಎಂದು ಸಿ.ಎಂ ಇಬ್ರಾಹಿಂ ಕಾಂಗ್ರೆಸ್ ಪಕ್ಷಕ್ಕೆ ಶಾಪ ಹಾಕಿದ್ದಾರೆ.

    ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನನ್ನು ಎಂಎಲ್‍ಸಿ ಮಾಡಿರುವುದು ಸಿದ್ದರಾಮಯ್ಯ ಎಂದು ಹೇಳುತ್ತಾರೆ. ನಾಳೆನೇ ರಾಜೀನಾಮೆ ಕೊಡುತ್ತೇನೆ. ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ಪರ್ಧೆ ಮಾಡಲಿ ಯಾರು ಗೆಲ್ಲುತ್ತಾರೆ ನೋಡೋಣ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಮುಗಿದ ಅಧ್ಯಾಯ – ಕಾಂಗ್ರೆಸ್‍ಗೆ ಸಿಎಂ ಇಬ್ರಾಹಿಂ ಗುಡ್‍ಬೈ

    ಡಿಕೆಶಿ ಬಹಳ ದೊಡ್ಡವರು ನಮ್ಮಂತವರನ್ನು ಯಾಕೆ ಮಾತನಾಡಿಸುತ್ತಾರೆ. ಆರು ತಿಂಗಳ ಹಿಂದೆ ಎಲ್ಲವೂ ಸರಿ ಮಾಡುತ್ತೇನೆ ಎಂದರು ಆದ್ರೆ ಏನು ಆಗಿಲ್ಲ. ಇವತ್ತು ಎಸ್.ಆರ್ ಪಾಟೀಲ್ ಬೇಟಿಯಾಗುತ್ತಾರೆ. ಏನ್ ಆಗುತ್ತೆ ನೋಡೋಣ ನಮ್ಮ ಜೊತೆ ಯಾರ ಬರ್ತಾರೋ ಅವರನ್ನು ಕರೆದುಕೊಂಡು ಹೋಗುತ್ತೇನೆ. ಇಲ್ಲಿ ಅಲಿಂಗ ಮಾಡುತ್ತೇನೆ (ಅಲ್ಪಸಂಖ್ಯಾತ-ಲಿಂಗಾಯತರು), ಅಲ್ಲಿ ಅಗೌ (ಗೌಡ-ಅಲ್ಪಸಂಖ್ಯಾತರು) ಮಾಡುತ್ತೇನೆ. ಅವರು ಅಹಿಂದ ಮಾಡಿದ್ದರು ಎಂದು ಸಿದ್ದರಾಮಯ್ಯರಿಗೆ ಟಕ್ಕರ್ ನೀಡಿದರು. ಇದನ್ನೂ ಓದಿ: ಜೆಡಿಎಸ್ ಸೇರುವಂತೆ ಸಿಎಂ ಇಬ್ರಾಹಿಂಗೆ ಹೆಚ್‍ಡಿಕೆ ಆಹ್ವಾನ

    ನನ್ನನ್ನ ನೀವು ಬೆಳೆಸಿದ್ದೀರಿ ಇನ್ನೂ ಮುಂದೆಯೂ ನೀವೆ ಕೈ ಹಿಡಿಯಬೇಕು ಎಂದು ಮಾಧ್ಯಮದವರ ಮುಂದೆ ಇಬ್ರಾಹಿಂ ಭಾವಕರಾಗಿ ಕಣ್ಣೀರು ಹಾಕಿದರು.

  • ಅವಕಾಶವಾದ ರಾಜಕಾರಣಕ್ಕೆ ಇನ್ನೊಂದು ಹೆಸರು ಇಬ್ರಾಹಿಂ, ಸಿದ್ದರಾಮಯ್ಯ:  ಈಶ್ವರಪ್ಪ

    ಅವಕಾಶವಾದ ರಾಜಕಾರಣಕ್ಕೆ ಇನ್ನೊಂದು ಹೆಸರು ಇಬ್ರಾಹಿಂ, ಸಿದ್ದರಾಮಯ್ಯ: ಈಶ್ವರಪ್ಪ

    ಶಿವಮೊಗ್ಗ: ಅವಕಾಶವಾದ ರಾಜಕಾರಣಕ್ಕೆ ಇನ್ನೊಂದು ಹೆಸರು ಸಿದ್ದರಾಮಯ್ಯ ಹಾಗೂ ಸಿ.ಎಂ. ಇಬ್ರಾಹಿಂ ಎಂದು ಗ್ರಾಮೀಣಾಭಿವೃದ್ಧಿ ಕೆ.ಎಸ್. ಈಶ್ವರಪ್ಪ ಟೀಕಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹಾಗೂ ಸಿ.ಎಂ.ಇಬ್ರಾಹಿಂ ಇಬ್ಬರು ಒಂದೇ. ಇಬ್ರಾಹಿಂ ಅವರು ಪರಿಷತ್‍ನಲ್ಲಿ ವಿಪಕ್ಷ ಸ್ಥಾನ ಸಿಗಲಿಲ್ಲ ಎಂದು ಕಾಂಗ್ರೆಸ್‍ನ್ನು ತೊರೆದು ಜೆಡಿಎಸ್‍ಗೆ ಹೋಗುತ್ತಿದ್ದಾರೆ. ಅದೇ ರೀತಿ ಸಿದ್ದರಾಮಯ್ಯ ಅವರೂ ಅಷ್ಟೇ. ವಿಪಕ್ಷ ಸ್ಥಾನ, ಮುಖ್ಯಮಂತ್ರಿ ಸ್ಥಾನ ಸಿಗಲಿಲ್ಲ ಅಂದರೆ ಅವರು ಸಹ ಪಕ್ಷದಲ್ಲಿ ಇರುವುದಿಲ್ಲ ಎಂದು ವ್ಯಂಗ್ಯವಾಡಿದರು.

    ಸಿದ್ದರಾಮಯ್ಯ ಹಾಗೂ ಇಬ್ರಾಹಿಂ ಅವಳಿ, ಜವಳಿ ಇದ್ದ ಹಾಗೆ. ಅವರಿಗೆ ಆ ಪಕ್ಷ, ಈ ಪಕ್ಷ ಅಂತಾ ಇಲ್ಲ. ಅವರಿಬ್ಬರಿಗೆ ಯಾವ ಪಕ್ಷದಲ್ಲಿ ಅಧಿಕಾರ ಸಿಗುತ್ತದೋ ಆ ಪಕ್ಷದಲ್ಲಿ ಇರುವಂತಹ ಜನ ಅವರು. ಹಾಗಾಗಿ ಇಬ್ರಾಹಿಂ ಯಾವ ಪಕ್ಷಕ್ಕೆ ಹೋಗುತ್ತಾರೆ ಎಂಬ ಬಗ್ಗೆ ಮಹತ್ವ ಇಲ್ಲ. ಸಿದ್ದರಾಮಯ್ಯ ಅವರು ಯಾವ ಪಕ್ಷಕ್ಕೆ ಹೋಗ್ತಾರೋ ಅದಕ್ಕೂ ಮಹತ್ವ ಇಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬಾಕಿ ವೇತನ ಪಾವತಿಗೆ ಆಗ್ರಹಿಸಿ ಸಿಬ್ಬಂದಿಯಿಂದ ಗ್ರಾ.ಪಂ ಕಚೇರಿಗೆ ಬೀಗ

    siddaramaiah

    ಶೀಘ್ರದಲ್ಲೇ ತಾಪಂ, ಜಿಪಂ ಚುನಾವಣೆ: ತಾ.ಪಂ. ಹಾಗೂ ಜಿ.ಪಂ. ಚುನಾವಣೆ ವಿಚಾರವಾಗಿ ಮಾತನಾಡಿದ ಅವರು, ತಾ.ಪಂ. ಹಾಗೂ ಜಿ.ಪಂ. ಚುನಾವಣೆಯನ್ನು ರಾಜ್ಯ ಸರ್ಕಾರದಿಂದ ಆದಷ್ಟು ಬೇಗ ಮಾಡಬೇಕು ಎನ್ನುವ ಉದ್ದೇದಿಂದ ಕಳೆದ ಬಾರಿಯೇ ಚುನಾವಣೆ ಆಯೋಗಕ್ಕೆ ಚುನಾವಣೆ ನಡೆಸಲು ಮನವಿ ಸಲ್ಲಿಸಿದ್ದೇವೆ ಎಂದರು.

    ಮೀಸಲಾತಿ ಹಾಗು ಕ್ಷೇತ್ರ ವಿಂಗಡಣೆ ಸರಿ ಇಲ್ಲ ಎಂದು ಸುಮಾರು 780 ಅಬ್ಜೇಕ್ಷನ್‍ಗಳು ಬಂದಿದ್ದವು. ಇದರ ತಿದ್ದುಪಡಿಗಾಗಿ ಲಕ್ಷ್ಮಿನಾರಾಯಣ ಅವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದ್ದೇವೆ. ಡಿಲಿಮಿಟೇಷನ್ ರಿಪೋರ್ಟ್ ಅನ್ನು ಎಲ್ಲಾ ಜಿಲ್ಲೆಗಳಿಂದ ಸಂಗ್ರಹ ಮಾಡುತ್ತಿದ್ದಾರೆ. ಆ ರಿಪೋರ್ಟ್ ಬರುತ್ತಿದ್ದ ಹಾಗೆ ಮೀಸಲಾತಿಯನ್ನು ಬೇಗ ಮಾಡಿ ಆದಷ್ಟು ಬೇಗ ತಾ.ಪಂ. ಹಾಗೂ ಜಿ.ಪಂ. ಚುನಾವಣೆ ಮಾಡುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಯಾರನ್ನೂ ನಂಬಲ್ಲ, ಭದ್ರತಾ ಅಧಿಕಾರಿಯೇ ನನ್ನನ್ನು ಶೂಟ್ ಮಾಡ್ಬೋದು: ಅಬ್ದುಲ್ಲಾ ಆಝಂ ಖಾನ್

  • ಜೆಡಿಎಸ್ ಸೇರುವಂತೆ ಸಿಎಂ ಇಬ್ರಾಹಿಂಗೆ ಹೆಚ್‍ಡಿಕೆ ಆಹ್ವಾನ

    ಜೆಡಿಎಸ್ ಸೇರುವಂತೆ ಸಿಎಂ ಇಬ್ರಾಹಿಂಗೆ ಹೆಚ್‍ಡಿಕೆ ಆಹ್ವಾನ

    ಬೆಂಗಳೂರು: ಮೇಲ್ಮನೆ ಪ್ರತಿಪಕ್ಷ ನಾಯಕನ ಸ್ಥಾನ ಸಿಗದಿರೋದ್ರಿಂದ ಬೇಸರಗೊಂಡು ಕಾಂಗ್ರೆಸ್ಸಿಗೆ ಗುಡ್‍ಬೈ ಹೇಳಲು ಮುಂದಾಗಿರುವ ಸಿ.ಎಂ. ಇಬ್ರಾಹಿಂಗೆ ಜೆಡಿಎಸ್ ಸೇರುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಹ್ವಾನ ನೀಡಿದ್ದಾರೆ.

    ಇಬ್ರಾಹಿಂ ಮನೆಗೆ ಖುದ್ದು ಭೇಟಿಕೊಟ್ಟ ಕುಮಾರಸ್ವಾಮಿಗೆ ಜೆಡಿಎಸ್ ಸೇರೋದಾಗಿ ಇಬ್ರಾಹಿಂ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಇನ್ನು, ಕೋಪಗೊಂಡಿರೋ ಸಿಎಂ ಇಬ್ರಾಹಿ ಜೊತೆ ಮಾತಾಡ್ತೀನಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇದನ್ನೂ ಓದಿ: ರಾಮನಗರದಲ್ಲಿ 3 ವರ್ಷದಿಂದ ಮಲಗಿದ್ದವರು ಈಗ ಎದ್ದು ರಾಜಕೀಯ ಮಾಡ್ತಿದ್ದಾರೆ: ಹೆಚ್‌ಡಿಕೆ

    ಬೆಂಗಳೂರಲ್ಲಿ ಮಾತಾಡಿದ ಅವರು, ಇಬ್ರಾಹಿಂ ನನ್ನ ಒಳ್ಳೆ ಸ್ನೇಹಿತ. ಏನೋ ಕೋಪದಲ್ಲಿ ಮಾತನಾಡಿದ್ದಾರೆ ಅಷ್ಟೆ. ಗೆಳೆಯ ಏನೇ ಹೇಳಿದ್ರೂ ಹಾರೈಸಿದಂತೆ ಅಂದ್ರು. ಇಬ್ರಾಹಿಂ ಪಕ್ಷ ಬಿಟ್ಟು ಹೋಗಲ್ಲ. ನಾನು ಅವರ ಜೊತೆ ಮಾತನಾಡುತ್ತೇನೆ ಅಂದ್ರು. ಇನ್ನು, ನನ್ನನ್ನು ಜೆಡಿಎಸ್‍ನಿಂದ ಉಚ್ಛಾಟನೆ ಮಾಡಿದಾಗ ಇಬ್ರಾಹಿಂ ನನ್ನ ಜೊತೆ ಬಂದಿದ್ದು ಹೌದು. ಆದರೆ ನನಗಾಗಿ ಇಬ್ರಾಹಿಂ ಕಾಂಗ್ರೆಸ್‍ಗೆ ಬರಲಿಲ್ಲ ಎಂದರು. ಇದನ್ನೂ ಓದಿ: ಸಿ.ಎಂ ಇಬ್ರಾಹಿಂ ಕಾಂಗ್ರೆಸ್ ಬಿಟ್ಟು ಎಲ್ಲಿಗೂ ಹೋಗಲ್ಲ: ಸಿದ್ದರಾಮಯ್ಯ

    ಗೌಡ್ರು ರಾಜ್ಯಸಭೆ ಸದಸ್ಯರನ್ನಾಗಿ ಮಾಡಲಿಲ್ಲ ಎಂಬ ಕಾರಣಕ್ಕೆ ಅವರು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ರು ಎಂದು ವಿವರಣೆ ನೀಡಿದ್ರು. ಇದಕ್ಕೆ ಸಚಿವ ಅಶೋಕ್ ಟಾಂಗ್ ನೀಡಿದ್ರು. ಸಿದ್ದರಾಮಯ್ಯನವರು 20 ಜನ ನನ್ನ ಸಂಪರ್ಕದಲ್ಲಿ ಇದ್ದಾರೆ ಅಂದಿದ್ರು. ಆದ್ರೇ ಈಗ ಅವ್ರ ಪಕ್ಷದ ದಿಡ್ಡಿ ಬಾಗಿಲು ಕಿತ್ಕೊಂಡು ಹೋಗಿದೆ ಅಂತಾ ಲೇವಡಿ ಮಾಡಿದ್ರು.

  • ಸಿ.ಎಂ ಇಬ್ರಾಹಿಂ ಕಾಂಗ್ರೆಸ್ ಬಿಟ್ಟು ಎಲ್ಲಿಗೂ ಹೋಗಲ್ಲ: ಸಿದ್ದರಾಮಯ್ಯ

    ಸಿ.ಎಂ ಇಬ್ರಾಹಿಂ ಕಾಂಗ್ರೆಸ್ ಬಿಟ್ಟು ಎಲ್ಲಿಗೂ ಹೋಗಲ್ಲ: ಸಿದ್ದರಾಮಯ್ಯ

    ಬೆಂಗಳೂರು: ಸಿ.ಎಂ ಇಬ್ರಾಹಿಂ ಕಾಂಗ್ರೆಸ್ ಬಿಟ್ಟು ಹೊಗಲ್ಲ. ಅವರು ಎಲ್ಲಿಗೂ ಹೋಗಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

    ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿ.ಎಂ ಇಬ್ರಾಹಿಂ ಕಾಂಗ್ರೆಸ್ ಬಿಟ್ಟು ಹೊಗಲ್ಲ. ಅವರು ಎಲ್ಲಿಗೂ ಹೋಗಲ್ಲ. ಬಹಳ ಸಾರಿ ಪಕ್ಷ ಬಿಡುವ ಬಗ್ಗೆ ಮಾತನಾಡಿದ್ದಾರೆ. ಕೋಪದಲ್ಲಿ ಆ ತರಹ ಮಾತನಾಡಿದ್ದಾರೆ. ನಾನು ಅವರ ಜೊತೆ ಮಾತನಾಡುತ್ತೇನೆ ಎಂದಿದ್ದಾರೆ.

    ದೇವೇಗೌಡರು ರಾಜ್ಯಸಭಾ ಸ್ಥಾನ ಇಬ್ರಾಹಿಂಗೆ ತಪ್ಪಿಸಿದ್ದರು. ಈಗ ಜೆಡಿಎಸ್ ಹೋಗುವ ಬಗ್ಗೆ ಗೊತ್ತಿಲ್ಲ. ಅವನು ನನಗೆ ಒಳ್ಳೆಯ ಸ್ನೇಹಿತ ಏನೇ ಹೇಳಿದರೂ ಹಾರೈಸಿದ ಹಾಗೆ, ನಾವೆಲ್ಲ ಜನಾತಾ ದಳದಲ್ಲಿ ಇದ್ದೇವು. ಹಾಗಾಗಿ ಮುಲಾಯಂ ಸಿಂಗ್, ದೇವೇಗೌಡ ಜೊತೆ ಮಾತನಾಡಿರಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಯಡಿಯೂರಪ್ಪ ಮೊಮ್ಮಗಳು ನೇಣು ಬಿಗಿದು ಆತ್ಮಹತ್ಯೆ

    ಬಾದಾಮಿಗೆ ನಿಲ್ಲುವ ಬಗ್ಗೆ ಹಲವು ಜನರು ಹೇಳಿದ್ದಾರೆ. ಅದರಲ್ಲಿ ಇವರು ಒಬ್ಬರು ಅಷ್ಟೇ ಎಂದರು. ಇನ್ನೂ ಹಣಬಲ ತೊಲ್ಬಲ ಇದ್ದವರಿಗೆ ಮಾತ್ರ ಸ್ಥಾನಮಾನ ಎಂಬ ಸಿಎಂ ಇಬ್ರಾಹಿಂ ಆರೋಪಕ್ಕೆ ಹಾಗಾದರೆ ಇಬ್ರಾಹಿಂಗೆ ಎರಡು ಬಾರಿ ಪರಿಷತ್ತು ಸ್ಥಾನ ನೀಡಿದ್ದೇವೆ. ಪ್ಲಾನಿಂಗ್ ಕಮಿಷನ್ ಉಪಾಧ್ಯಕ್ಷ ಮಾಡಿದ್ದೆ ಎಂದು ತಿರುಗೇಟಿ ನೀಡಿದ್ದಾರೆ.

    ಬೇರೆ ಸಂಬಂಧಗಳು ಮುಂದುವರೆಯುತ್ತದೆ ಪಕ್ಷದ ವಿಚಾರ ಇಲ್ಲಿಗೆ ಮುಗಿಯಿತು ಎಂದು ಸಿಎಂ ಇಬ್ರಾಹಿಂ ಕೋಪದಲ್ಲಿ ಮಾತನಾಡಿದ್ದಾನೆ. ನಾನು ಸಮಾಧಾನ ಮಾಡುತ್ತೇನೆ. ಪಕ್ಷ ಬಿಟ್ಟು ಹೋಗದ ಹಾಗೆ ನಾನು ಮಾತನಾಡುತ್ತೇನೆ. ಕೋಪ ತಣ್ಣಗಾದ ನಂತರ ಅವನೇ ನನಗಾಗಿ ಸ್ಪೆಷಲ್ ಬಿರಿಯಾನಿ ಮಾಡಿ ತಿನ್ನಲು ಕರೆದೇ ಕರೆಯುತ್ತಾನೆ ಎಂದಿದ್ದಾರೆ. ಇದನ್ನೂ ಓದಿ: ಕನ್ನಡದ ಎದೆ ಮೇಲೆ ಕಾಲಿಡುವ ದುಷ್ಟ ಸಂಚು ಕೇಂದ್ರ ಸರ್ಕಾರ ಮಾಡುತ್ತಿದೆ: ಎಚ್‍ಡಿಕೆ ವಾಗ್ದಾಳಿ

    ಸುನೀಲ್ ಕುಮಾರ ಟ್ವೀಟ್ ವಿಚಾರ: ಆರ್‍ಎಸ್‍ಎಸ್‍ನಿಂದ ಬಂದವರು ಹಾಗೆ ಮಾತನಾಡುತ್ತಾರೆ. ಹಿಂದೂ ಹಿಂದೂತ್ವದ ಬಗ್ಗೆ ಮಾತನಾಡುತ್ತಾರೆ. ಆರ್‍ಎಸ್‍ಎಸ್‍ನಿಂದ ಏನು ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದರು.