Tag: CM Mamata Banerjee

  • Darjeeling Flood | ರಣಭೀಕರ ಮಳೆಗೆ ಭೂಕುಸಿತ – ಸಾವಿನ ಸಂಖ್ಯೆ 23ಕ್ಕೆ ಏರಿಕೆ

    Darjeeling Flood | ರಣಭೀಕರ ಮಳೆಗೆ ಭೂಕುಸಿತ – ಸಾವಿನ ಸಂಖ್ಯೆ 23ಕ್ಕೆ ಏರಿಕೆ

    – ಇಂದು ಡಾರ್ಜಿಲಿಂಗ್‌ಗೆ ಸಿಎಂ ಮಮತಾ ಬ್ಯಾನರ್ಜಿ ಭೇಟಿ

    ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ಡಾರ್ಜಿಲಿಂಗ್‌ನಲ್ಲಿ (Darjeeling) ಸುರಿಯುತ್ತಿರುವ ರಣಭೀಕರ ಮಳೆಗೆ ಹಲವೆಡೆ ಭೂಕುಸಿತ “(Landslide) ಉಂಟಾಗಿದ್ದು, ಸಾವಿನ ಸಂಖ್ಯೆ 23ಕ್ಕೆ ಏರಿಕೆಯಾಗಿದೆ.

    ಭಾನುವಾರ (ಸೆ.6) ಸುರಿದ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿ, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. 23 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಸರ್ಸಾಲಿ, ಜಸ್ಬೀರ್‌ಗಾಂವ್, ನಾಗರಕಟಾ, ಮಿರಿಕ್ ಬಸ್ತಿ, ಧಾರ್‌ಗಾವ್ (ಮೆಚಿ), ಮತ್ತು ಮಿರಿಕ್ ಲೇಕ್ ಪ್ರದೇಶ ಸೇರಿದಂತೆ ಹಲವೆಡೆ ಜನ ಪ್ರಾಣಕಳೆದುಕೊಂಡಿದ್ದಾರೆ.ಇದನ್ನೂ ಓದಿ: Darjeeling Flood | 24/7 ಕಂಟ್ರೋಲ್‌ ರೂಮ್‌ ಓಪನ್‌ – ನಾಳೆ ಡಾರ್ಜಿಲಿಂಗ್‌ಗೆ ದೀದಿ ಭೇಟಿ

    ಕೇವಲ 12 ಗಂಟೆಯಲ್ಲಿ 300 ಮಿ.ಮೀ ಮಳೆಯಾಗಿದ್ದರಿಂದ ಪ್ರವಾಹ, ಭೂಕುಸಿತ ಉಂಟಾಗಿದೆ ಎನ್ನಲಾಗಿದೆ. ಸದ್ಯ ಘಟನಾ ಸ್ಥಳದಲ್ಲಿ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಚರಣೆ ನಡೆಸುತ್ತಿವೆ. ನಾಗರಕಟಾದ ಧಾರ್‌ಗಾವ್‌ನಲ್ಲಿ ಭೂಕುಸಿತದಿಂದಾಗಿ ನೆಲಸಮವಾದ ಮನೆಗಳ ಅವಶೇಷಗಳಡಿಯಿಂದ ಕನಿಷ್ಠ 40 ಜನರನ್ನು ರಕ್ಷಿಸಲಾಗಿದೆ.

    ಇನ್ನೂ ಬಂಗಾಳ-ಸಿಕ್ಕಿಂ ಡಾರ್ಜಿಲಿಂಗ್-ಸಿಲಿಗುರಿ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಭೂಕುಸಿತಸಂಭವಿಸಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಅಹಿತಕರ ಘಟನೆಗಳನ್ನು ತಡೆಗಟ್ಟುವ ಸಲುವಾಗಿ, ಗೂರ್ಖಾಲ್ಯಾಂಡ್ ಪ್ರಾದೇಶಿಕ ಆಡಳಿತವು ಡಾರ್ಜಿಲಿಂಗ್‌ನ ಟೈಗರ್‌ಹಿಲ್ ಮತ್ತು ರಾಕ್ ಗಾರ್ಡನ್ ಸೇರಿದಂತೆ ಪ್ರವಾಸಿ ತಾಣಗಳನ್ನು ಮುಚ್ಚಲು ನಿರ್ಧರಿಸಿದೆ. ಜೊತೆಗೆ ರೈಲು ಸೇವೆಗಳನ್ನು ಸಹ ಸ್ಥಗಿತಗೊಳಿಸಲಾಗಿದೆ. ಸೋಮವಾರದವರೆಗೂ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರೆಡ್ ಅಲರ್ಟ್ ಘೋಷಿಸಿದೆ. ಸ್ಥಳೀಯರು ಮತ್ತು ಪ್ರವಾಸಿಗರಿಗಾಗಿ 9147889078 ಸಹಾಯವಾಣಿ ಸಂಖ್ಯೆಯನ್ನು ಆರಂಭಿಸಲಾಗಿದೆ.

    ಸಾರ್ವಜನಿಕರ ಸಹಾಯಕ್ಕಾಗಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ 24/7 ಕಂಟ್ರೋಲ್ ರೂಮ್ ತೆರೆದಿದ್ದಾರೆ. ಈಗಾಗಲೇ ಪರಿಸ್ಥಿತಿಯನ್ನು ಕಂಟ್ರೋಲ್ ರೂಮ್ ಮೂಲಕ ಮೇಲ್ವಿಚಾರಣೆ ಮಾಡುತ್ತಿದ್ದು, ಇಂದು (ಅ.6) ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ.

    ಸಿಕ್ಕಿಂ ಸಂಪರ್ಕ ಕಡಿತ:
    ಡಾರ್ಜಿಲಿಂಗ್‌ನಲ್ಲಿ ಸಂಭವಿಸಿದ ಈ ವಿಪತ್ತು ಹಿಮಾಲಯ ರಾಜ್ಯವಾದ ಸಿಕ್ಕಿಂ ಜೊತೆಗಿನ ಸಂಪರ್ಕ ಕಡಿತಗೊಳಿಸಿದೆ. ಮಿರಿಕ್ ಮತ್ತು ಸುಖಿಯಾ ಪೋಖಾರಿಯಂತಹ ಪ್ರದೇಶಗಳಲ್ಲಿ ಭೂಕುಸಿತ ಉಂಟಾಗಿದ್ದು, ಪೊಲೀಸರು ಮತ್ತು ಸ್ಥಳೀಯ ಆಡಳಿತವು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

    ಬಂಗಾಳ ಮತ್ತು ಸಿಕ್ಕಿಂ ಅನ್ನು ಸಂಪರ್ಕಿಸುವ ರಸ್ತೆ, ಡಾರ್ಜಿಲಿಂಗ್ ಮತ್ತು ಸಿಲಿಗುರಿಯನ್ನು ಸಂಪರ್ಕಿಸುವ ರಸ್ತೆ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಭೂಕುಸಿತಗಳು ರಸ್ತೆ ತಡೆಗಳಿಗೆ ಕಾರಣವಾಗಿವೆ. ದುರ್ಗಾ ಪೂಜೆಯ ನಂತರ ಕೋಲ್ಕತ್ತಾ ಮತ್ತು ಬಂಗಾಳದ ಇತರ ಭಾಗಗಳಿಂದ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಡಾರ್ಜಿಲಿಂಗ್‌ಗೆ ಪ್ರಯಾಣಿಸುತ್ತಾರೆ. ಈ ವಿಪತ್ತಿನಲ್ಲಿ ಅನೇಕ ಪ್ರವಾಸಿಗರು ಸಿಲುಕಿಕೊಳ್ಳುವ ಸಾಧ್ಯತೆಯಿದೆ.ಇದನ್ನೂ ಓದಿ: ಜೈಪುರ ಆಸ್ಪತ್ರೆಯ ಐಸಿಯುನಲ್ಲಿ ಬೆಂಕಿ ಅವಘಡ – 6 ರೋಗಿಗಳು ಸಜೀವ ದಹನ

     

  • ದೆಹಲಿ ಚುನಾವಣೆಗೆ ಆಪ್‌ಗೆ ಟಿಎಂಸಿ ಬೆಂಬಲ – ಧನ್ಯವಾದ ಎಂದ ಕೇಜ್ರಿವಾಲ್

    ದೆಹಲಿ ಚುನಾವಣೆಗೆ ಆಪ್‌ಗೆ ಟಿಎಂಸಿ ಬೆಂಬಲ – ಧನ್ಯವಾದ ಎಂದ ಕೇಜ್ರಿವಾಲ್

    ನವದೆಹಲಿ: ಮುಂಬರುವ ದೆಹಲಿ ಚುನಾವಣೆ ಹಿನ್ನೆಲೆ ಆಪ್‌ಗೆ ಟಿಎಂಸಿ ಬೆಂಬಲ ನೀಡಿದ್ದು, ಅರವಿಂದ್ ಕೇಜ್ರಿವಾಲ್ (Arvind Kejriwal) ಧನ್ಯವಾದ ತಿಳಿಸಿದ್ದಾರೆ.

    ಫೆ.5 ರಂದು ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಗೆ (Delhi Assembly Election) ಇಂದು (ಜ.08) ಆಮ್ ಆದ್ಮಿ ಪಕ್ಷಕ್ಕೆ ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ (Trinamool Congress) ಪಕ್ಷ ಬೆಂಬಲ ನೀಡಿದೆ.ಇದನ್ನೂ ಓದಿ: ಡಿನ್ನರ್ ಹೊಸತೇನು ಅಲ್ಲ, ಮುಸುಕಿನ ಗುದ್ದಾಟ ಏನಿಲ್ಲ: ಸಚಿವ ಸತೀಶ್ ಜಾರಕಿಹೊಳಿ

    ಇದಕ್ಕೆ ಪ್ರತಿಕ್ರಿಯಿಸಿ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರವಾಲ್ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಆಮ್ ಆದ್ಮಿ ಪಕ್ಷಕ್ಕೆ ತಮ್ಮ ಬೆಂಬಲ ಸೂಚಿಸಿದ್ದಕ್ಕಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರಿಗೆ ವೈಯಕ್ತಿಕವಾಗಿ ಕೃತಜ್ಞರಾಗಿರುತ್ತೇನೆ ಎಂದು ಬರೆದುಕೊಂಡಿದ್ದಾರೆ.

    ಟ್ವೀಟ್‌ನಲ್ಲಿ ಏನಿದೆ?
    ದೆಹಲಿ ಚುನಾವಣೆಯಲ್ಲಿ ಎಎಪಿ ಪಕ್ಷಕ್ಕೆ ಟಿಎಂಸಿ ಬೆಂಬಲ ಘೋಷಿಸಿದೆ. ಮಮತಾ ದೀದಿ ಅವರಿಗೆ ಧನ್ಯವಾದಗಳು. ನಾನು ನಿಮಗೆ ವೈಯಕ್ತಿಕವಾಗಿ ಆಭಾರಿಯಾಗಿದ್ದೇನೆ. ನಮ್ಮ ಒಳ್ಳೆಯ ಮತ್ತು ಕೆಟ್ಟ ಸಮಯದಲ್ಲಿ ನೀವು ಯಾವಾಗಲೂ ನಮ್ಮನ್ನು ಬೆಂಬಲಿಸಿದ್ದೀರಿ ಮತ್ತು ಆಶೀರ್ವದಿಸಿದ್ದೀರಿ ಎಂದು ಉಲ್ಲೇಖಿಸಿದ್ದಾರೆ.

    ಆಡಳಿತಾರೂಢ ಎಎಪಿ 2015 ಹಾಗೂ 2020ರಲ್ಲಿ ಕ್ರಮವಾಗಿ 67 ಹಾಗೂ 62 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಕಾಂಗ್ರೆಸ್, ಆಪ್ ಹಾಗೂ ಬಿಜೆಪಿ ಮಧ್ಯೆ ತ್ರಿಕೋನ ಸ್ಪರ್ಧೆ ಏರ್ಪಡಲಿದ್ದು, ಎಎಪಿ ಹ್ಯಾಟ್ರಿಕ್ ಗೆಲುವನ್ನು ಸಾಧಿಸುವ ಗುರಿಯನ್ನು ಹೊಂದಿದೆ. 2025ರ ದೆಹಲಿ ವಿಧಾನಸಭಾ ಚುನಾವಣೆಯು ಫೆ.05 ರಂದು ನಡೆಯಲಿದ್ದು, ಫೆ.08 ರಂದು ಮತ ಎಣಿಕೆ ನಡೆಯಲಿದೆ.ಇದನ್ನೂ ಓದಿ: Naxal Surrender | ಶಸ್ತ್ರ ತ್ಯಜಿಸಿ ಶರಣಾದ ನಕ್ಸಲರ ಬದುಕು ರೋಚಕ – ಇಲ್ಲಿದೆ ಕಂಪ್ಲೀಟ್‌ ವಿವರ!

  • ನ್ಯಾಯ ಸಿಕ್ಕರೆ ಚಹಾ ಸ್ವೀಕಾರ: ಟ್ರೈನಿ ವೈದ್ಯೆ ಸಾವಿಗೆ ನ್ಯಾಯಕ್ಕಾಗಿ ಒತ್ತಾಯ

    ನ್ಯಾಯ ಸಿಕ್ಕರೆ ಚಹಾ ಸ್ವೀಕಾರ: ಟ್ರೈನಿ ವೈದ್ಯೆ ಸಾವಿಗೆ ನ್ಯಾಯಕ್ಕಾಗಿ ಒತ್ತಾಯ

    ಕೋಲ್ಕತ್ತಾ: ಮೊದಲು ನ್ಯಾಯ ದೊರಕಿಸಿಕೊಡಿ, ಬಳಿಕ ಇದೆಲ್ಲವನ್ನು ಕೊಡಿ ಎಂದು ಆರ್‌ಜಿ ಕರ್ ಕಾಲೇಜಿನ (RG Kar College) ವೈದ್ಯರು ಪ್ರತಿಭಟನೆಯಲ್ಲಿ ಮಮತಾ ಬ್ಯಾನರ್ಜಿ (Mamata Banerjee) ವಿರುದ್ಧ ಚಹಾ ಆಹ್ವಾನ ನಿರಾಕರಿಸಿ ಹೇಳಿದರು.

    ಶನಿವಾರ ಕಾಳಿಘಾಟ್‌ನಲ್ಲಿ ನಡೆದ ಸಭೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ಆರ್‌ಜಿ ಕರ್ ಕಾಲೇಜಿನ ಟ್ರೈನಿ ವೈದ್ಯೆ ಸಾವಿಗೆ ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನೆಯಲ್ಲಿದ್ದ ವೈದ್ಯರು ಪಾಲ್ಗೊಂಡಿದ್ದರು. ಇದನ್ನೂ ಓದಿ: ನಾಗಮಂಗಲದಲ್ಲಿ ಹಿಂದೂಗಳಿಗೆ ಒಂದು ರೀತಿ, ಮುಸಲ್ಮಾನರಿಗೆ ಇನ್ನೊಂದು ನೀತಿ: ಎನ್ ರವಿಕುಮಾರ್

    ಸಿಎಂ ಮಮತಾ ಬ್ಯಾನರ್ಜಿ ಚಹಾ ಕುಡಿಯಲು ಪ್ರತಿಭಟನಾನಿರತ ವೈದ್ಯರನ್ನು ಆಹ್ವಾನಿಸಿದ್ದರು. ಮೊದಲು ನ್ಯಾಯ ದೊರಕಿಸಿಕೊಡಿ, ಬಳಿಕ ಇದನ್ನೆಲ್ಲಾ ಕೊಡಿ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಬರ್ಬರವಾಗಿ ಅತ್ಯಾಚಾರ, ಹತ್ಯೆಗೀಡಾದ 31 ವರ್ಷದ ಸ್ನಾತಕೋತ್ತರ ಟ್ರೈನಿ ವೈದ್ಯೆ ಸಾವಿಗೆ ನ್ಯಾಯ ಬೇಕು. ನ್ಯಾಯ ಸಿಕ್ಕರೆ ಮಾತ್ರ ಚಹಾವನ್ನು ಸ್ವೀಕರಿಸಲಾಗುತ್ತದೆ ಎಂದು ಪ್ರತಿಭಟನಾಕಾರರು ಹೇಳಿದರು.

    ಕೋಲ್ಕತ್ತಾದಲ್ಲಿ ಮಳೆಯ ನಡುವೆಯೂ ತಮ್ಮ ಮನೆಯ ಹೊರಗೆ ಪ್ರತಿಭಟನೆ ನಡೆಸುತ್ತಿರುವ ವೈದ್ಯರೊಂದಿಗೆ ಮಮತಾ ಬ್ಯಾನರ್ಜಿ ಮಾತನಾಡಿದರು.ಇದನ್ನೂ ಓದಿ: ಮಾನವ ಸರಪಳಿ: ಗಡಿ ಜಿಲ್ಲೆಯಲ್ಲಿ 1 ಕಿಮೀ ಧ್ವಜ, ವಿವಿಧತೆಯಲ್ಲಿ ಏಕತೆಯ ಪ್ರತಿಬಿಂಬ ಅನಾವರಣ

    ಎಫ್‌ಐಆರ್ ದಾಖಲಿಸುವಲ್ಲಿ ವಿಳಂಬ ಮತ್ತು ಸಾಕ್ಷ್ಯವನ್ನು ತಿರುಚಿದ್ದಕ್ಕಾಗಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನು ಕೇಂದ್ರೀಯ ತನಿಖಾ ದಳ ಬಂಧಿಸಿದೆ.

  • ಪ್ರತಿಭಟನೆ ನಿಲ್ಲಿಸಿ, ದುರ್ಗಾಪೂಜೆಗೆ ಗಮನ ಹರಿಸಿ – ದೀದಿ ಹೇಳಿಕೆಗೆ ಮೃತ ಟ್ರೈನಿ ವೈದ್ಯೆಯ ತಾಯಿ ಆಕ್ರೋಶ

    ಪ್ರತಿಭಟನೆ ನಿಲ್ಲಿಸಿ, ದುರ್ಗಾಪೂಜೆಗೆ ಗಮನ ಹರಿಸಿ – ದೀದಿ ಹೇಳಿಕೆಗೆ ಮೃತ ಟ್ರೈನಿ ವೈದ್ಯೆಯ ತಾಯಿ ಆಕ್ರೋಶ

    ಕೋಲ್ಕತ್ತಾ: ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ನಿಲ್ಲಿಸಿ, ದುರ್ಗಾ ಪೂಜೆಯ ಕಡೆಗೆ ಗಮನ ಹರಿಸಿ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರು ಕರೆ ನೀಡಿದ್ದಾರೆ.

    ಸಿಎಂ ಹೇಳಿಕೆಗೆ ಕೋಲ್ಕತ್ತಾ ಪ್ರಕರಣದ ಮೃತ ಟ್ರೈನಿ ವೈದ್ಯೆಯ ತಾಯಿ ಮಮತಾ ಬ್ಯಾನರ್ಜಿಯವರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ನಾವು ನಮ್ಮ ಮಗಳ ಜೊತೆ ದುರ್ಗಾಪೂಜೆಯನ್ನು ಆಚರಿಸುತ್ತಿದ್ದೆವು. ಮುಂದೆ ಇನ್ಯಾವುದೇ ಹಬ್ಬ ಅಥವಾ ದುರ್ಗಾಪೂಜೆಯನ್ನು ಆಚರಣೆ ಮಾಡುವುದಿಲ್ಲ. ಅವರು ನಮ್ಮ ಮಗಳನ್ನು ಹಿಂದಿರುಗಿಸಲಿ. ಒಂದು ವೇಳೆ ಇದೇ ರೀತಿಯ ಘಟನೆ ಅವರ ಮನೆಯಲ್ಲಿಯೇ ಆಗಿದ್ದರೆ ಇದೇ ರೀತಿಯಾಗಿ ಹೇಳುತ್ತಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.

    ಇತ್ತೀಗಷ್ಟೇ ಬ್ಯಾನರ್ಜಿ ಅವರು ಕುಟುಂಬಕ್ಕೆ ಹಣವನ್ನು ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಕಳೆದ ಒಂದು ದಿನದ ಹಿಂದೆಯಷ್ಟೇ ಸಂತ್ರಸ್ತೆ ತಾಯಿ ಕೂಡ ಹಣದ ಆಫರ್ ಬಂದಿದೆ ಎಂದು ಒಪ್ಪಿಕೊಂಡಿದ್ದರು. ಆದ್ರೆ ಮಮತಾ ಬ್ಯಾನರ್ಜಿ ತಮ್ಮ ಮೇಲಿನ ಆರೋಪಗಳನ್ನು ತಳ್ಳಿಹಾಕಿದ್ದರು.

    ಹಣ ನೀಡಿರುವ ಆರೋಪ ಕುರಿತು ಸಿಎಂ ಹೇಳಿದ್ದೇನು?

    ಆರ್‌ಜಿಕರ್‌ ಕಾಲೇಜಿನಲ್ಲಿ ನಡೆದ ಟ್ರೈನಿ  ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನಜಿ ಸೇರಿ ಪೊಲೀಸರು ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿದರು. ಶವವನ್ನು ನೋಡಲು ನಮಗೆ ಅವಕಾಶ ನೀಡಲಿಲ್ಲ. ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯುವಾಗ ಪೊಲೀಸ್ ಠಾಣೆಯಲ್ಲಿ ಕಾಯಬೇಕಾಯಿತು. ನಂತರ, ಶವವನ್ನು ನಮಗೆ ಹಸ್ತಾಂತರಿಸಿದಾಗ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ನಮಗೆ ಹಣವನ್ನು ನೀಡಿದರು. ಅದನ್ನು ನಾವು ತಕ್ಷಣ ನಿರಾಕರಿಸಿದ್ದೇವೆ ಎಂದು ಮೃತ ವೈದ್ಯೆಯ ತಂದೆ ಆರೋಪಿಸಿದ್ದರು.

    ಇದಕ್ಕೆ ತಿರುಗೇಟು ನೀಡಿರುವ ಸಿಎಂ ಮಮತಾ ಬ್ಯಾನರ್ಜಿ, ಮೃತ ವೈದ್ಯೆಯ ಕುಟುಂಬಕ್ಕೆ ನಾನು ಯಾವತ್ತೂ ಹಣ ನೀಡಿಲ್ಲ. ಇದು ಅಪಪ್ರಚಾರವಲ್ಲದೆ ಬೇರೇನೂ ಅಲ್ಲ. ಹಣವು ಎಂದಿಗೂ ಜೀವನವನ್ನು ಸರಿದೂಗಿಸಲು ಸಾಧ್ಯವಿಲ್ಲ ಎಂದು ನಾನು ಪೋಷಕರಿಗೆ ಈ ಹಿಂದೆ ಹೇಳಿದ್ದೆ. ತಮ್ಮ ಮಗಳ ನೆನಪಿಗಾಗಿ ಏನಾದರೂ ಅರ್ಥಪೂರ್ಣವಾದದ್ದನ್ನು ಮಾಡಲು ಅವರು ಬಯಸಿದರೆ ಸರ್ಕಾರವು ಅವರ ಪರವಾಗಿ ನಿಂತಿದೆ ಎಂದು ತಿಳಿಸಲಾಗಿತ್ತು ಎಂದು ಹೇಳಿದ್ದಾರೆ.

  • ಇಂದಿರಾ ಗಾಂಧಿಯಂತೆ ಮಮತಾ ಬ್ಯಾನರ್ಜಿಯನ್ನೂ ಶೂಟ್ ಮಾಡಿ ಎಂದಿದ್ದ ವಿದ್ಯಾರ್ಥಿನಿ ಅರೆಸ್ಟ್

    ಇಂದಿರಾ ಗಾಂಧಿಯಂತೆ ಮಮತಾ ಬ್ಯಾನರ್ಜಿಯನ್ನೂ ಶೂಟ್ ಮಾಡಿ ಎಂದಿದ್ದ ವಿದ್ಯಾರ್ಥಿನಿ ಅರೆಸ್ಟ್

    ಕೊಲ್ಕತ್ತಾ: ಟ್ರೈನಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ವಿಚಾರವಾಗಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ (Mamata Banerjee) ವಿರುದ್ಧ ನಾಲಿಗೆ ಹರಿಬಿಟ್ಟಿದ್ದ ದ್ವಿತೀಯ ಬಿಕಾಂ ವಿದ್ಯಾರ್ಥಿನಿಯನ್ನು ಕೊಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ.

    ಕೊಲ್ಕತ್ತಾದ (Kolkata) ಆರ್.ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಅತ್ಯಾಚಾರ ಹಾಗೂ ಹತ್ಯೆಗೀಡಾದ 31 ವರ್ಷದ ಸ್ನಾತಕ್ಕೋತ್ತರ ತರಬೇತಿ ವೈದ್ಯೆಯ ಗುರುತು ಹಾಗೂ ಫೋಟೋವನ್ನು ವಿದ್ಯಾರ್ಥಿ ಬಹಿರಂಗ ಪಡಿಸಿದ್ದಾರೆ ಎಂದು ಕೊಲ್ಕತ್ತಾ ಪೊಲೀಸರು ಆರೋಪಿಸಿದ್ದಾರೆ. ಇದನ್ನೂ ಓದಿ: ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ ಸೇಫ್

    ಕೃತಿ ಶರ್ಮಾ ಬಂಧಿತ ವಿದ್ಯಾರ್ಥಿ. ಈಕೆ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ `ಕೃತಿ ಸೋಶಿಯಲ್’ (kirtisocial) ಎಂಬ ಖಾತೆಯನ್ನು ನಿರ್ವಹಿಸುತ್ತಿದ್ದಳು ಎಂದು ಪೊಲೀಸರಿಂದ ತಿಳಿದು ಬಂದಿದೆ. ಸಿಎಂ ಮಮತಾ ಬ್ಯಾನರ್ಜಿಯನ್ನ ಇಂದಿರಾಗಾಂಧಿ (Indira Gandhi) ಮಾದರಿಯಲ್ಲೇ ಹತ್ಯೆ ಮಾಡಬೇಕು ಎಂದು ಕರೆ ನೀಡಿದ್ದರು. ಇದಕ್ಕೆ ಸಂಬಂಧಪಟ್ಟಂತೆ 2 ಪೋಸ್ಟ್ ಗಳನ್ನೂ ಹಾಕಿದ್ದಳು ಎಂದು ಪೊಲೀಸರು ಆರೋಪಿಸಿದ್ದಾರೆ. ಈ ಪೋಸ್ಟ್ ಗಳು  ಪ್ರಚೋದನಕಾರಿ, ಅಶಾಂತಿ ಉಂಟುಮಾಡುವಲ್ಲಿ ಹಾಗೂ ದ್ವೇಷ ಭಾವನೆ ಮೂಡಿಸುವಂತಿದೆ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯಪಾಲರ ವಿರುದ್ಧ ಸುದ್ದಿಗೋಷ್ಠಿ – ಸಿಎಂ ಬೆಂಬಲಿಗನಿಗೆ ಹೃದಯಾಘಾತ, ಸಾವು

    ಇದಕ್ಕೂ ಮುನ್ನ ಘಟನೆಗೆ ಸಂಬಂಧಿಸಿದಂತೆ ಮತ್ತೋರ್ವ ಯುವಕನನ್ನು ಬಂಗಾಳ (Bengal) ಪೊಲೀಸರು ಬಂಧಿಸಿದ್ದರು. ಸಾದ್ನಿಕ್ ಲಾಹಾ (23) ಬಂಧಿತ ಆರೋಪಿಯಾಗಿದ್ದಾನೆ. ಈತ ಪಾಲಿಟೆಕ್ನಿಕ್ ವಿದ್ಯಾರ್ಥಿಯಾಗಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ತೃಣಮೂಲ ಕಾಂಗ್ರೆಸ್(Congress) (ಟಿಎಂಸಿ) ನಾಯಕನನ್ನು ಗುರಿಯಾಗಿಸಿಕೊಂಡಿದ್ದಾನೆ. ವಿದ್ಯಾರ್ಥಿ ಮಮತಾ ಬ್ಯಾನರ್ಜಿ ಬಗ್ಗೆ ಅವಹೇಳನ ವಿಚಾರಗಳನ್ನು ಮಾತನಾಡಿದ್ದಾನೆ ಎಂದು ಪೊಲೀಸರು ಆರೋಪಿಸಿದ್ದಾರೆ. ಇದನ್ನೂ ಓದಿ: ಬೆಸ್ಕಾಂ ಎಡವಟ್ಟು; 1 ತಿಂಗಳಿಗೆ ಬರೋಬ್ಬರಿ 5.86 ಲಕ್ಷ ರೂ. ವಿದ್ಯುತ್‌ ಬಿಲ್‌ – ಹೌಹಾರಿದ ಮನೆ ಮಾಲೀಕ

  • ಪ್ರತಿಭಟನೆ ನಿಲ್ಲಿಸಲು ಮಮತಾ ಬ್ಯಾನರ್ಜಿ ಪ್ರಯತ್ನ – ಸಂತ್ರಸ್ತೆ ತಂದೆ ಆರೋಪ

    ಪ್ರತಿಭಟನೆ ನಿಲ್ಲಿಸಲು ಮಮತಾ ಬ್ಯಾನರ್ಜಿ ಪ್ರಯತ್ನ – ಸಂತ್ರಸ್ತೆ ತಂದೆ ಆರೋಪ

    ಕೋಲ್ಕತ್ತಾ: ಕೋಲ್ಕತ್ತಾದ (Kolkatta) ಆರ್‌ಜಿ ಕರ್ ಮೆಡಿಕಲ್ ಕಾಲೇಜಿನಲ್ಲಿ (RG Kar Medical College) ನಡೆದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಸಂತ್ರಸ್ತೆ ತಂದೆ ಮಾತನಾಡಿ, ಈ ಪ್ರಕರಣದಲ್ಲಿ ಮಮತಾ ಬ್ಯಾನರ್ಜಿ (Mamata Banerjee) ಹಾಗೂ ಕೋಲ್ಕತ್ತಾ ಪೊಲೀಸರ ಪಾತ್ರದ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ತಮ್ಮ ಮಗಳಿಗೆ ನ್ಯಾಯಕ್ಕಾಗಿ ಆಗ್ರಹಿಸಿ ದೇಶವ್ಯಾಪಿಯಾಗಿ ಪ್ರತಿಭಟನೆಗಳು ನಡೆಯುತ್ತಿವೆ. ಆದ್ರೆ ಸಿಎಂ ಮಮತಾ ಬ್ಯಾನರ್ಜಿ ಅವರು ಪ್ರತಿಭಟನೆ ನಿಲ್ಲಿಸುವ ಪ್ರಯತ್ನ ಮಾಡುತ್ತಿದ್ದಾರೆ. ಜೊತೆಗೆ ಸಾಧ್ಯವಾದಷ್ಟು ಈ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಂತ್ರಸ್ತೆಯ ಪೋಷಕರು ಆರೋಪಿಸಿದ್ದಾರೆ.ಇದನ್ನೂ ಓದಿ : ಯುಎಸ್ ಕಾರು ಅಪಘಾತ; ಭಾರತೀಯ ಮೂಲದ ಒಂದೇ ಕುಟುಂಬದ ಮೂವರು ಸಾವು

    ಸಿಎಂ ಮಾಡುತ್ತಿರುವುದರ ಕುರಿತು ತೃಪ್ತಿಯಿಲ್ಲ ಹಾಗೂ ನಮಗೆ ಇದು ಅಸಂತೋಷವನ್ನುಂಟು ಮಾಡಿದೆ. ಆದ ಕಾರಣ ನಾವು ಯಾವುದೇ ಪರಿಹಾರ ಸ್ವೀಕರಿಸುವುದನ್ನು ನಿರಾಕರಿಸಿದ್ದೇವೆ ಎಂದು ಸಂತ್ರಸ್ತೆಯ ತಂದೆ ಮಾಧ್ಯಮದ ಬಳಿ ಹೇಳಿಕೊಂಡಿದ್ದಾರೆ.

    ಪ್ರಕರಣದ ತನಿಖೆ ನಡೆಯುತ್ತಿದೆ. ಆದಷ್ಟು ಬೇಗ ಪ್ರಕರಣದ ಹಿಂದಿರುವ ಆರೋಪಿಗಳನ್ನು ಬಂಧಿಸುತ್ತಾರೆ ಎಂದು ನಾವು ನಂಬಿದ್ದೆವು. ಆದ್ರೆ ಈವರೆಗೆ ಏನೂ ನಡೆದಿಲ್ಲ. ಈ ಅಪರಾಧದಲ್ಲಿ ಆಸ್ಪತ್ರೆಯ ಎದೆ ಔಷಧ ವಿಭಾಗವು ಇದರಲ್ಲಿ ಭಾಗಿಯಾಗಿರುವ ಅನುಮಾನವಿದೆ. ಈ ಪ್ರಕರಣದಲ್ಲಿ ಇಲಾಖೆಯಾಗಲಿ, ಕಾಲೇಜಾಗಲಿ ನಮಗೆ ಸಹಕರಿಸಿಲ್ಲ. ಒಬ್ಬ ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದೆ. ಆದರೆ ಇದರಲ್ಲಿ ಇನ್ನೂ ಕೆಲವರ ಪಾತ್ರವಿದೆ. ಈ ಪ್ರಕರಣಕ್ಕೆ ಸಂಪೂರ್ಣ ತನಿಖೆಯ ಜವಾಬ್ದಾರಿಯನ್ನು ಇಲಾಖೆಯೆ ನಿರ್ವಹಿಸಬೇಕು ಎಂದು ಸಂತ್ರಸ್ತೆಯ ಪೋಷಕರು ಆಗ್ರಹಿಸಿದ್ದಾರೆ. ಇದನ್ನೂ ಓದಿ : ಸಾರಿಗೆ ಬಸ್‍ನಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್‍ರೇಪ್ – ಐವರು ಕಾಮುಕರು ಅರೆಸ್ಟ್

    ಸದ್ಯ ಟ್ರೈನಿಯ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸಿಬಿಐನ (CBI) ತನಿಖಾಧಿಕಾರಿಗಳು ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಸಿಬ್ಬಂದಿಗಳನ್ನ ವಿಚಾರಣೆ ನಡೆಸುತ್ತಿದ್ದಾರೆ.

  • ದೀದಿ ಆಡಳಿತದ ಬಂಗಾಳ ಭಯೋತ್ಪಾದಕರಿಗೆ ಸುರಕ್ಷಿತ ಸ್ವರ್ಗ: ರಾಮೇಶ್ವರಂ ಕೆಫೆ ಬಾಂಬರ್‌ ಅರೆಸ್ಟ್‌ ಬಗ್ಗೆ ಅಮಿತ್‌ ಮಾಳವಿಯ ಮಾತು

    ದೀದಿ ಆಡಳಿತದ ಬಂಗಾಳ ಭಯೋತ್ಪಾದಕರಿಗೆ ಸುರಕ್ಷಿತ ಸ್ವರ್ಗ: ರಾಮೇಶ್ವರಂ ಕೆಫೆ ಬಾಂಬರ್‌ ಅರೆಸ್ಟ್‌ ಬಗ್ಗೆ ಅಮಿತ್‌ ಮಾಳವಿಯ ಮಾತು

    ನವದೆಹಲಿ: ಮಮತಾ ಬ್ಯಾನರ್ಜಿ (Mamata Banerjee) ಆಡಳಿತದಲ್ಲಿ ಭಯೋತ್ಪಾದಕರಿಗೆ ಪಶ್ಚಿಮ ಬಂಗಾಳ (West Bengal) ಸುರಕ್ಷಿತ ಸ್ವರ್ಗವಾಗಿದೆ ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವಿಯ (Amit Malviya) ಗಂಭೀರ ಆರೋಪ ಮಾಡಿದ್ದಾರೆ.

    ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ (Rameshwaram Cafe Blast) ಪ್ರಕರಣದ ಬಾಂಬರ್‌ ಪಶ್ಚಿಮ ಬಂಗಾಳದಲ್ಲಿ ಬಂಧನಕ್ಕೊಳಗಾಗಿರುವ ಬಗ್ಗೆ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿದ ಅಮಿತ್‌, ಸ್ಫೋಟಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕೊಲ್ಕತ್ತಾದಲ್ಲಿ ಬಂಧಿಸಲಾಗಿದೆ. ದುರದೃಷ್ಟವಶಾತ್ ಮಮತಾ ಬ್ಯಾನರ್ಜಿ ಆಡಳಿತದಲ್ಲಿ ಭಯೋತ್ಪಾದಕರಿಗೆ ಪ.ಬಂಗಾಳ ಸುರಕ್ಷಿತ ಸ್ವರ್ಗವಾಗಿದೆ ಎಂದು ದೀದಿ ಸರ್ಕಾರವನ್ನು ಟೀಕಿಸಿದ್ದಾರೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬರ್ ಪಶ್ಚಿಮ ಬಂಗಾಳದಲ್ಲಿ ಅರೆಸ್ಟ್

    ಅಮಿತ್ ಮಾಳವಿಯ ಟೀಕೆಗೆ ಬಂಗಾಳ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಬಂಗಾಳವು ಎಂದಿಗೂ ಭಯೋತ್ಪಾದಕರಿಗೆ ಸುರಕ್ಷಿತ ಸ್ವರ್ಗವಾಗಿಲ್ಲ. ರಾಜ್ಯ ಪೊಲೀಸರು ತನ್ನ ಜನರನ್ನು ಕೆಟ್ಟ ಚಟುವಟಿಕೆಗಳಿಂದ ಸುರಕ್ಷಿತವಾಗಿರಿಸುವಲ್ಲಿ ಸದಾ ಜಾಗರೂಕತೆಯಿಂದ ಕೆಲಸ ಮಾಡುತ್ತಿದ್ದಾರೆ. ಅಸತ್ಯವು ಅತ್ಯಂತ ಕೆಟ್ಟದಾಗಿದೆ. ಆರೋಪಿಗಳ ಬಂಧನಕ್ಕೆ ಬಂಗಾಳ ಪೊಲೀಸರೂ ಕೆಲಸ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೇಂದ್ರ ಗುಪ್ತಚರ ಸಂಸ್ಥೆಗಳ ಜಂಟಿ ಕಾರ್ಯಾಚರಣೆಯಲ್ಲಿ ಪುರ್ಬಾ ಮೇದಿನಿಪುರದಿಂದ ಆರೋಪಿಗಳನ್ನು ಬಂಧಿಸಲಾಗಿದೆ. ಪಶ್ಚಿಮ ಬಂಗಾಳ ಸುರಕ್ಷಿತವಾಗಿಲ್ಲ ಎಂಬ ಬಿಜೆಪಿ ಆರೋಪಕ್ಕೆ ಸಿಎಂ ಮಮತಾ ಬ್ಯಾನರ್ಜಿ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ- ತಲೆಮರೆಸಿಕೊಂಡಿದ್ದ ಇಬ್ಬರ ಬಂಧನ

    ಕೂಚ್‌ಬೆಹಾರ್‌ನಲ್ಲಿ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಆ ಜನರು ಬಂಗಾಳ ಸುರಕ್ಷಿತವಲ್ಲ ಎಂದು ಹೇಳುತ್ತಾರೆ. ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ ಮತ್ತು ದೆಹಲಿ ಸುರಕ್ಷಿತವಾಗಿದೆಯೇ? ಅವರು ಏನು ಕೆಲಸ ಮಾಡಿದ್ದಾರೆಂದು ಅವರನ್ನು ಕೇಳಿ ಎಂದು ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.

  • ಪತ್ನಿಗೆ ಕೋವಿಡ್‌ ಬಂದಿದ್ರೂ ನೀನು ಹೊರಗಡೆ ಸುತ್ತಾಡ್ತಿದ್ದೀಯಾ: ತಮ್ಮನಿಗೆ ಛೀಮಾರಿ ಹಾಕಿದ ಬ್ಯಾನರ್ಜಿ

    ಪತ್ನಿಗೆ ಕೋವಿಡ್‌ ಬಂದಿದ್ರೂ ನೀನು ಹೊರಗಡೆ ಸುತ್ತಾಡ್ತಿದ್ದೀಯಾ: ತಮ್ಮನಿಗೆ ಛೀಮಾರಿ ಹಾಕಿದ ಬ್ಯಾನರ್ಜಿ

    ಕೋಲ್ಕತ್ತಾ: ಮನೆಯವರಿಗೆ ಕೋವಿಡ್‌ ದೃಢಪಟ್ಟಿದ್ದರೂ ಲೆಕ್ಕಿಸದೇ ನೀನು ಹೊರಗಡೆ ಸುತ್ತಾಡುತ್ತಿದ್ದೀಯಾ ಎಂದು ಸಹೋದರನಿಗೆ ಸಾರ್ವಜನಿಕ ವೇದಿಕೆಯಲ್ಲೇ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಛೀಮಾರಿ ಹಾಕಿದ್ದಾರೆ.

    ನಮ್ಮ ಮನೆಯಲ್ಲೇ ಒಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ಅವರ ಸಂಪರ್ಕದಲ್ಲಿದ್ದವರು ಕ್ವಾರಂಟೈನ್‌ ಆಗದೇ ಕೋವಿಡ್‌ ನಿಯಮ ಉಲ್ಲಂಘಿಸಿ ಹೊರಗಡೆ ಸುತ್ತಾಡುತ್ತಿದ್ದಾರೆ. ಈ ನಡೆಯಿಂದ ನನ್ನ ಮನಸ್ಸಿಗೆ ನೋವುಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಶಬರಿಮಲೆ ಪ್ರವೇಶಿಸಿದ್ದ ಬಿಂದು ಮೇಲೆ ನಡು ರಸ್ತೆಯಲ್ಲಿ ದಾಳಿ – ಆರೋಪಿ ಅರೆಸ್ಟ್

    ನನ್ನ ಕಿರಿಯ ಸಹೋದರನ ಹೆಂಡತಿಗೆ ಕೋವಿಡ್‌ ದೃಢಪಟ್ಟಿದೆ. ಆದರೆ ನನ್ನ ಸಹೋದರ ಬಾಬುನ್‌ ಹೊರಗಡೆ ಸುತ್ತಾಡುತ್ತಿದ್ದಾನೆ. ಈ ನಡೆ ನನಗೆ ಹಿಡಿಸುವುದಿಲ್ಲ. ನಾನು ತುಂಬಾ ಮುಕ್ತವಾಗಿ ಮಾತನಾಡುವ ವ್ಯಕ್ತಿ. ನಾಳೆಯಿಂದ ಎಲ್ಲಿಯೂ ಹೋಗಬೇಡ ಎಂದು ತಮ್ಮನಿಗೆ ಸಿಎಂ ಬ್ಯಾನರ್ಜಿ ಖಡಕ್‌ ಸೂಚನೆ ನೀಡಿದ್ದಾರೆ.

    ನನ್ನ ಏಳು ದಿನಗಳ ಪ್ರತ್ಯೇಕ ವಾಸ ಮುಗಿದಿದೆ ಎಂದು ಹೊರಗಡೆ ಓಡಾಡುವುದಲ್ಲ. ಪರೀಕ್ಷೆ ವರದಿಯಲ್ಲಿ ನೆಗೆಟಿವ್‌ ಬಂದಿರಬಹುದು. ಆದರೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಮಾಸ್ಕ್‌ ಧರಿಸಬೇಕು, ಆಗಾಗ ಕೈ ತೊಳೆಯಬೇಕು. ನಾಳೆ ನಮಗೇ ಕೋವಿಡ್‌ ಬಂದರೆ? ಕೋವಿಡ್‌ ಬಂದರೆ ನಾವು ಜವಾಬ್ದಾರರಾಗುತ್ತೇವೆಯೇ? ಇಲ್ಲ, ಅದಾಗಬಾರದು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಮೋದಿ ಮೇಲೆ ಅಲ್ಲ ಇದು ಪ್ರತಿಯೊಬ್ಬ ಭಾರತೀಯನ ಮೇಲೆ ನಡೆದ ದಾಳಿ: ಕಂಗನಾ

    ಮುಂದಿನ 15 ದಿನಗಳು ಪ್ರಮುಖವಾಗಿವೆ. ಈ ಸಂದರ್ಭದಲ್ಲಿ ಕೋವಿಡ್‌ ನಿರ್ಬಂಧಗಳು ಕಠಿಣವಾಗಬಹುದು ಎಂದು ಸಿಎಂ ತಿಳಿಸಿದ್ದಾರೆ.

    ಕೋವಿಡ್‌ ಸ್ಥಿತಿಗತಿ ಕುರಿತು ನಾಳೆ ಪ್ರಧಾನಿ ಮೋದಿ ಅವರು ಸಿಎಂಗಳೊಂದಿಗೆ ವರ್ಚುವಲ್‌ ಸಭೆ ಕರೆದಿದ್ದಾರೆ. ರಾಜ್ಯದಲ್ಲಿ ದಿನದ ಕೋವಿಡ್‌ ಪ್ರಕರಣಗಳ ಸಂಖ್ಯೆ 14,022ಕ್ಕೆ ಏರಿಕೆಯಾಗಿದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.

  • ಬಿಜೆಪಿ ನನ್ನ ಕೊಲೆಗೆ ಸಂಚು ರೂಪಿಸುತ್ತಿರಬಹುದು: ದೀದಿ ಗಂಭೀರ ಆರೋಪ

    ಬಿಜೆಪಿ ನನ್ನ ಕೊಲೆಗೆ ಸಂಚು ರೂಪಿಸುತ್ತಿರಬಹುದು: ದೀದಿ ಗಂಭೀರ ಆರೋಪ

    ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣಾ ರಣ ಕಣ ನಾನಾ ನೀನಾ ಅನ್ನೋ ಹಂತಕ್ಕೆ ತಲುಪಿದೆ. ಕಾಲಿಗೆ ಪ್ಲಾಸ್ಟರ್ ಹಾಕಿಕೊಂಡು ವೀಲ್ ಚೇರ್ ಮೇಲೆ ಕುಳಿತು ಪ್ರಚಾರದ ಅಖಾಡಕ್ಕೆ ಧುಮುಕಿರುವ ಸಿಎಂ ಮಮತಾ ಬ್ಯಾನರ್ಜಿ, ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಚುನಾವಣಾ ಆಯೋಗ ನನ್ನ ಭದ್ರತಾ ಸಿಬ್ಬಂದಿ ಮತ್ತು ಜೊತೆಯಲ್ಲಿರುತ್ತಿದ್ದ ನಿರ್ದೇಶಕರನ್ನ ತೆಗೆದುಹಾಕಿದೆ. ಬಹುಶಃ ಬಿಜೆಪಿ ನನ್ನ ಕೊಲೆಗೆ ಸಂಚು ರೂಪಿಸಿರಬಹುದು ಎಂದು ಆರೋಪಿಸಿದ್ದಾರೆ.

    ಚುನಾವಣೆ ಪ್ರಚಾರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ ಮಮತಾ ಬ್ಯಾನರ್ಜಿ, ಗೃಹ ಸಚಿವರು ದೇಶವನ್ನ ನಡೆಸುತ್ತಿದ್ದು, ಯಾರು ಸಾಯಬೇಕು ಅಥವಾ ಯಾರನ್ನ ಬಂಧಿಸಬೇಕು ಅನ್ನೋದನ್ನು ನಿರ್ಧರಿಸುತ್ತಿದ್ದಾರೆ. ಯಾರ ಹಿಂದೆ ಯಾವ ಏಜೆನ್ಸಿಯನ್ನ ಬಿಡಬೇಕು ತೀರ್ಮಾನಿಸುತ್ತಾರೆ. ಚುನಾವಣಾ ಆಯೋಗದ ಹಿಂದೆ ಯಾರಿದ್ದಾರೆ ಎಂಬುವುದು ಗೊತ್ತು ಎಂದು ಹೆಸರು ಹೇಳದೇ ವಾಗ್ದಾಳಿ ನಡೆಸಿದರು.

    ಚುನಾವಣಾ ಆಯೋಗ ನನ್ನ ಭದ್ರತಾ ಸಿಬ್ಬಂದಿ ಮತ್ತು ನಿರ್ದೇಶಕರನ್ನ ತೆಗೆದಿದೆ. ಬಿಜೆಪಿ ನನ್ನನ್ನ ಕೊಲ್ಲಲು ಸಂಚು ರೂಪಿಸುತ್ತಿರುವ ಅನುಮಾನಗಳು ಹುಟ್ಟಿಕೊಂಡಿದೆ. ಆದ್ರೆ ನಾವು ಯಾವುದಕ್ಕೂ ಭಯಪಡಲ್ಲ. ರಾಜ್ಯದಲ್ಲಿ ನಿಷ್ಪಕ್ಷಪಾತ ಮತ್ತು ಸ್ವತಂತ್ರ ಚುನಾವಣೆ ನಡೆಯಲಿ. ಕೊರೊನಾ ಮತ್ತು ಅಂಫಾನ್ ವೇಳೆ ಕೇಂದ್ರ ನಮಗೆ ಸಹಾಯ ಮಾಡಲಿಲ್ಲ. ಹೊರಗಿನಿಂದ ಬಂದ ಗೂಂಡಾಗಳಿಗೆ ಚುನಾವಣೆ ನಡೆಸಲು ನಾವು ಬಿಡಲ್ಲ. ಬಂಗಾಳದಲ್ಲಿ ಎಷ್ಟೇ ಹಿಂಸೆ ಸೃಷ್ಟಿಸಲು ಮುಂದಾದ್ರೂ ಅದು ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: ಮಮತಾ ನಾಮಪತ್ರ ತಿರಸ್ಕರಿಸಿ – ದಾಖಲೆಯೊಂದಿಗೆ ಆಯೋಗಕ್ಕೆ ಸುವೇಂದು ದೂರು

    ಪಶ್ಚಿಮ ಬಂಗಾಳದ 294 ಕ್ಷೇತ್ರಗಳಿಗೆ ಎಂಟು ಹಂತದಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್ 27 ಮೊದಲ ಹಂತದ ಮತದಾನ ನಡೆಯಲಿದೆ. ತದನಂತರ ಏಪ್ರಿಲ್ 1, 6, 10, 17, 22, 26, 29 ಮತದಾನ ನಡೆಯಲಿದೆ. ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ: ಮಮತಾ ಬ್ಯಾನರ್ಜಿ ಮೇಲೆ ಯಾವುದೇ ದಾಳಿ ನಡೆದಿಲ್ಲ – ಪ್ರತ್ಯಕ್ಷದರ್ಶಿ ಸ್ಪಷ್ಟನೆ

  • ಪಶ್ಚಿಮ ಬಂಗಾಳದಲ್ಲಿ ‘ಮಾ ಕೀ ರಸೋಯಿ’ ಆರಂಭ

    ಪಶ್ಚಿಮ ಬಂಗಾಳದಲ್ಲಿ ‘ಮಾ ಕೀ ರಸೋಯಿ’ ಆರಂಭ

    ಕೋಲ್ಕತ್ತಾ: ಕರ್ನಾಟಕದ ಇಂದಿರಾ ಕ್ಯಾಂಟೀನ್ ಮಾದರಿಯಲ್ಲಿಯೇ ಪಶ್ಚಿಮ ಬಂಗಾಳ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ‘ಮಾ ಕೀ ರಸೋಯಿ’ (ಅಮ್ಮನ ಅಡುಗೆ ಮನೆ) ಇಂದಿನಿಂದ ಆರಂಭವಾಗಲಿದೆ.

    ಬಡವರಿಗಾಗಿ ಐದು ರೂಪಾಯಿಗೆ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರ ಮುಂದಾಗಿದೆ. ಊಟದಲ್ಲಿ ಅನ್ನ-ಸಾಂಬಾರ್, ಪಲ್ಯ ಮತ್ತು ಒಂದು ಮೊಟ್ಟೆ ಸಿಗಲಿದೆ. ಈಗಾಗಲೇ ಮಾ ಕೀ ರಸೋಯಿ 16 ಬ್ಯೂರೋ ಕಚೇರಿಗಳಿಗೆ ಊಟ ಸರಬರಾಜು ಮಾಡುತ್ತಿದೆ. ಇಂದು ನಗರದ ಕೆಲ ಭಾಗಗಳಲ್ಲಿ ಆರಂಭವಾಗುತ್ತಿರುವ ಕ್ಯಾಂಟೀನ್ ಗಳಿಗೆ ಮಮತಾ ಬ್ಯಾನರ್ಜಿ ವರ್ಚ್ಯೂವಲ್ ಸಭೆ ಮೂಲಕ ಚಾಲನೆ ನೀಡಲಿದ್ದಾರೆ.

    ಮುಂದಿನ ದಿನಗಳಲ್ಲಿ ರಾಜ್ಯದ ಪ್ರತಿ ನಗರಗಳಿಗೂ ಮಾ ಕೀ ರಸೋಯಿ ವಿಸ್ತರಿಸುವ ಗುರಿಯನ್ನ ದೀದಿ ಸರ್ಕಾರ ಹೊಂದಿದೆ. ಚುನಾವಣೆ ಹಿನ್ನೆಲೆ ಸರ್ಕಾರ ಈ ಯೋಜನೆ ಆರಂಭಿಸಿದೆ ಎಂದು ಬಿಜೆಪಿ ಟೀಕಿಸಿದೆ.