Tag: cm mohan yadav

  • ಮಧ್ಯಪ್ರದೇಶ ಸಿಎಂ ಬೆಂಗಾವಲು ಪಡೆಯ 19 ವಾಹನಗಳಿಗೆ ನೀರು ಮಿಶ್ರಿತ ಡೀಸೆಲ್ ತುಂಬಿದ ಬಂಕ್ ಸಿಬ್ಬಂದಿ!

    ಮಧ್ಯಪ್ರದೇಶ ಸಿಎಂ ಬೆಂಗಾವಲು ಪಡೆಯ 19 ವಾಹನಗಳಿಗೆ ನೀರು ಮಿಶ್ರಿತ ಡೀಸೆಲ್ ತುಂಬಿದ ಬಂಕ್ ಸಿಬ್ಬಂದಿ!

    ಭೋಪಾಲ್‌: ಮಧ್ಯಪ್ರದೇಶದ (Madhya Pradesh) ಮುಖ್ಯಮಂತ್ರಿ ಮೋಹನ್ ಯಾದವ್ (CM Mohan Yadav) ಅವರ ಬೆಂಗಾವಲು ಪಡೆಯ 19 ವಾಹನಗಳಿಗೆ ಪೆಟ್ರೋಲ್ ಬಂಕ್ ಸಿಬ್ಬಂದಿ ನೀರು ಮಿಶ್ರಿತ ಡೀಸೆಲ್‌ (Diesel) ತುಂಬಿದ ಘಟನೆ ಇಂದೋರ್‌ನಲ್ಲಿ ನಡೆದಿದೆ.

    ಇದರಿಂದಾಗಿ ಕೆಲ ಕಾರುಗಳು ಸ್ವಲ್ಪ ದೂರ ಚಲಿಸಿ ಹೆದ್ದಾರಿಯಲ್ಲೇ ನಿಂತಿವೆ. ಇನ್ನೂ ಕೆಲವು ಪೆಟ್ರೋಲ್ ಬಂಕ್ ಬಿಟ್ಟು ಹೊರಗೆ ಬಂದಿಲ್ಲ. ಇದರಿಂದಾಗಿ ಕಾರುಗಳನ್ನು ಸಿಬ್ಬಂದಿ ಬದಿಗೆ ತಳ್ಳಿದ್ದಾರೆ. ಬಳಿಕ ಇಂಧನ ಪರಿಶೀಲನೆ ನಡೆಸಿದಾಗ ಡೀಸೆಲ್‌ಗೆ ನೀರು ಮಿಶ್ರಣವಾಗಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ – ಸಾವಿನ ಸಂಖ್ಯೆ 7ಕ್ಕೆ ಏರಿಕೆ

    ಕೂಡಲೇ ಅಧಿಕಾರಿಗಳು ಸಿಎಂ ಬೆಂಗಾವಲು ಪಡೆಗೆ ಬದಲಿ ವ್ಯವಸ್ಥೆ ಮಾಡಿದ್ದಾರೆ. ಪೆಟ್ರೋಲ್ ಬಂಕ್‌ನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಇನ್ನೂ ಕಲಬೆರಕೆ ಡೀಸೆಲ್‌ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: 2,000 ರೂ.ಗೆ ಸೆಕ್ಸ್ ಲೈವ್‌ಸ್ಟ್ರೀಮ್ – ಹೆಣ್ಣು ಮಕ್ಕಳಿಬ್ಬರ ಕಾಲೇಜು ಫೀಸ್‌ ಕಟ್ಟಲಾಗದೇ ಕೃತ್ಯಕ್ಕಿಳಿದಿದ್ದ ದಂಪತಿ

  • ಮಧ್ಯಪ್ರದೇಶ ಸಿಎಂ ಭೇಟಿಯಾದ ರಾಕಿಂಗ್ ಸ್ಟಾರ್ ಯಶ್

    ಮಧ್ಯಪ್ರದೇಶ ಸಿಎಂ ಭೇಟಿಯಾದ ರಾಕಿಂಗ್ ಸ್ಟಾರ್ ಯಶ್

    ರಾಕಿಂಗ್ ಸ್ಟಾರ್ ಯಶ್ (Yash) ಅವರು ಮಧ್ಯಪ್ರದೇಶದ ಸಿಎಂ ಮೋಹನ್ ಯಾದವ್‌ರನ್ನು (CM Mohan Yadav) ಭೇಟಿಯಾಗಿದ್ದಾರೆ. ರಾಕಿಭಾಯ್ ಯಶ್‌ಗೆ ಸಿಎಂ ಹೂಗುಚ್ಛ ಕೊಟ್ಟು ಸ್ವಾಗತಿಸಿದ್ದಾರೆ. ಇದನ್ನೂ ಓದಿ:ನಾನು ಚಿಕ್ಕಂದಿನಿಂದ ಶಿವನ ಭಕ್ತ: ಉಜ್ಜಯಿನಿಯ ಮಹಾಕಾಳೇಶ್ವರ ದೇಗುಲದಲ್ಲಿ ಯಶ್

    ಇಂದು (ಏ.21) ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ ದೇಗುಲಕ್ಕೆ ಯಶ್ ಭೇಟಿ ನೀಡಿದ್ದರು. ಈ ವಿಚಾರ ತಿಳಿದು ಯಶ್‌ಗೆ ಖುದ್ದಾಗಿ ಸಿಎಂ ಮೋಹನ್ ಯಾದವ್ ಆಹ್ವಾನ ನೀಡಿದ್ದಾರೆ. ಅದರಂತೆ ಅವರನ್ನು ನಟ ಭೇಟಿಯಾಗಿದ್ದಾರೆ. ಇಬ್ಬರೂ ಖುಷಿಯಾಗಿ ಕುಳಿತು ಮಾತುಕತೆ ನಡೆಸುತ್ತಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ.

    ಯಶ್ ‘ರಾಮಾಯಣ’ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಈ ಹಿನ್ನೆಲೆ ಚಿತ್ರೀಕರಣಕ್ಕೆ ಭಾಗಿಯಾಗುವ ಮುನ್ನ ಯಶ್ ಇಂದು (ಏ.21) ಶಿವನ ದೇಗುಲಕ್ಕೆ ಭೇಟಿ ನೀಡಿದ್ದಾರೆ. ದೇವರ ದರ್ಶನದ ಬಳಿನ ನಟ ಮಾತನಾಡಿ, ಬಹಳ ಖುಷಿ ಆಗುತ್ತಿದೆ. ಶಿವನ ಆಶೀರ್ವಾದ ಪಡೆಯಲು ಬಂದೆ. ನಾನು ಚಿಕ್ಕಂದಿನಿಂದ ಶಿವನ ದೊಡ್ಡ ಭಕ್ತ. ನಾವು ಮನೆದೇವರು ಎಂದು ಕರೆಯುತ್ತೇನೆ. ನಮ್ಮ ಕುಲದೇವರು ಶಿವ. ಇಲ್ಲಿಗೆ ಬಂದಿರುವುದು ಸಂತಸ ತಂದಿದೆ. ದೇವರ ಸನ್ನಿಧಿಯಲ್ಲಿ ಧ್ಯಾನ ಮಾಡುತ್ತಾ ಕುಳಿತಾಗ ಸಮಯ ಕಳೆದಿದ್ದೇ ಗೊತ್ತಾಗಲಿಲ್ಲ. ಅದ್ಭುತ ಅನುಭವ ಸಿಕ್ಕಿದೆ ಎಂದು ಯಶ್ ಹೇಳಿದ್ದಾರೆ. ಇದನ್ನೂ ಓದಿ:ಪ್ರಣಿತಾ ಮಗನ ನಾಮಕರಣದ ಸಂಭ್ರಮದಲ್ಲಿ ಸ್ಯಾಂಡಲ್‌ವುಡ್ ತಾರೆಯರು

    ಅಂದಹಾಗೆ, ಶೀಘ್ರದಲ್ಲೇ ‘ರಾಮಾಯಣ’ ಸಿನಿಮಾ ಶೂಟಿಂಗ್‌ನಲ್ಲಿ ಯಶ್ ಭಾಗಿಯಾಗಲಿದ್ದಾರೆ. ಇದರಲ್ಲಿ ಯಶ್ ರಾವಣನಾಗಿ ಅಬ್ಬರಿಸಲಿದ್ದಾರೆ. ಅದಷ್ಟೇ ಅಲ್ಲ, ಈ ಸಿನಿಮಾಗೆ ಸಹ-ನಿರ್ಮಾಪಕನಾಗಿ ಕೂಡ ಸಾಥ್ ನೀಡಿದ್ದಾರೆ. ರಾಮನಾಗಿ ರಣಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲಿವಿ ನಟಿಸುತ್ತಿದ್ದಾರೆ. ಎರಡು ಭಾಗಗಳಲ್ಲಿ ‘ರಾಮಾಯಣ’ ಮೂಡಿ ಬರಲಿದೆ.