Tag: cm relief funds

  • ಸಿಎಂ ಪರಿಹಾರ ನಿಧಿಗೆ 50 ಲಕ್ಷ ದೇಣಿಗೆ ನೀಡಿದ ಪವರ್ ಸ್ಟಾರ್

    ಸಿಎಂ ಪರಿಹಾರ ನಿಧಿಗೆ 50 ಲಕ್ಷ ದೇಣಿಗೆ ನೀಡಿದ ಪವರ್ ಸ್ಟಾರ್

    ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಭೀತಿ ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಡೀ ರಾಜ್ಯ ಮಾತ್ರವಲ್ಲದೇ ದೇಶವೇ ಲಾಕ್ ಡೌನ್ ಆಗಿದೆ. ಈ ಹಿನ್ನೆಲೆಯಲ್ಲಿ ಇಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ದೇಣಿಗೆ ನೀಡಿದ್ದಾರೆ.

    ಇಂದು ಬೆಳಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಪುನೀತ್, ಮುಖ್ಯಮಂತ್ರಿಗಳಿಗೆ 50 ಲಕ್ಷ ಚೆಕ್ ಹಸ್ತಾಂತರಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಎಸ್‍ವೈ, ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರು ಕೋವಿಡ್_19 ಮುಖ್ಯಮಂತ್ರಿಗಳ ಪರಿಹಾರ ನಿಧಿಯನ್ನು ಬಲಪಡಿಸುವ ಕೋರಿಕೆಗೆ ಸ್ಪಂದಿಸಿ, 50 ಲಕ್ಷ ರೂಪಾಯಿಗಳ ದೇಣಿಗೆಯ ಚೆಕ್ ಹಸ್ತಾಂತರಿಸಿದರು ಎಂದು ಫೋಟೋ ಸಮೇತ ಬರೆದುಕೊಂಡಿದ್ದಾರೆ.

    ಈ ಹಿಂದೆ ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್ 50 ಲಕ್ಷ ದೇಣಿಗೆ ನೀಡಿದ್ದರು. ಅವರು ಈ ಬಗ್ಗೆ ಟ್ವೀಟ್ ಮಾಡಿದ್ದ ಸಂಸದೆ, ಕೋವಿಡ್ -19 ಮಹಾಮಾರಿ ದೇಶದಲ್ಲಿ ಹರಡುತ್ತಿದ್ದು, ಅದರ ವಿರುದ್ಧದ ಹೋರಾಟದ ಸಂದರ್ಭದಲ್ಲಿ ನನ್ನ ಕಳಕಳಿಯ ಕೊಡುಗೆಯಾಗಿದೆ. ಮೊದಲಿಗೆ ಮಂಡ್ಯದ ಮಿಮ್ಸ್ ಗೆ ಕೊರೊನ ವಿರುದ್ಧ ಹೊರಾಡುವ ಸಲುವಾಗಿ ವೆಂಟಿಲೇಟರ್ ಮತ್ತು ಅಗತ್ಯ ಸಲಕರಣೆಗಳನ್ನು ಖರೀದಿಸಲು ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ 50 ಲಕ್ಷ ರೂ. ಗಳನ್ನು ನೀಡಿದ್ದೇನೆ ಎಂದು ಲೆಟರ್ ಪೋಸ್ಟ್ ಮಾಡಿದ್ದರು.

    ಇನ್ನೊಂದು ಟ್ವೀಟ್ ಮಾಡಿ, ಪ್ರಧಾನ ಮಂತ್ರಿಗಳ ತುರ್ತು ಪರಿಹಾರ ನಿಧಿಗೆ ನನ್ನ ಎರಡು ತಿಂಗಳ ವೇತನ 2 ಲಕ್ಷ ರೂ. ಗಳನ್ನು ದೇಣಿಗೆಯಾಗಿ ನೀಡಿದ್ದೇನೆ. ಅಲ್ಲದೆ ಎರಡು ತಿಂಗಳ ವೇತನ 2 ಲಕ್ಷ ರೂ. ಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿ ಕೋವಿಡ್-19ಕ್ಕೆ ನೀಡಿದ್ದೇನೆ ಎಂದು ಬರೆದುಕೊಂಡು ನರೇಂದ್ರ ಮೋದಿ, ಬಿಎಸ್ ಯಡಿಯೂರಪ್ಪ, ಶ್ರೀರಾಮುಲುಗೆ ಟ್ಯಾಗ್ ಮಾಡಿದ್ದರು.