ಮೈಸೂರು: ನಾಲ್ಕನೇ ಆಷಾಢ ಶುಕ್ರವಾರ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ (Chamundi Hills) ಸಿಎಂ ಪತ್ನಿ ಹಾಗೂ ಸೊಸೆ ಭೇಟಿ ನೀಡಿದ್ದಾರೆ.
ಇಂದು ನಾಲ್ಕನೇ ಆಷಾಢ ಶುಕ್ರವಾರ ಹಿನ್ನೆಲೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ (Parvathi Siddaramaiah) ಹಾಗೂ ಸೊಸೆ ಸ್ಮಿತಾ ರಾಕೇಶ್ ಅವರು ಒಟ್ಟಿಗೆ ಮೈಸೂರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ದೇವಸ್ಥಾನದ ಹಿಂಬಾಗಿಲಿನಿಂದ ಪ್ರವೇಶ ಪಡೆದು ತಾಯಿ ಚಾಮುಂಡಿಯ ದರ್ಶನ ಪಡೆದಿದ್ದಾರೆ. ಬಳಿಕ ಅದೇ ದಾರಿಯಲ್ಲಿ ನಿರ್ಗಮಿಸಿದ್ದಾರೆ. ಸಿಎಂ ಪತ್ನಿ ಹಾಗೂ ಸೊಸೆಗೆ ಪೊಲೀಸರು ಎಸ್ಕಾರ್ಟ್ ಮೂಲಕ ದೇವಸ್ಥಾನಕ್ಕೆ ಕರೆದುಕೊಂಡು ಬಂದರು.ಇದನ್ನೂ ಓದಿ: ಮಗ ಯಾವುದೇ ತಪ್ಪು ಮಾಡಿಲ್ಲ, ನನ್ನನ್ನು ರಾಜಕೀಯವಾಗಿ ಮುಗಿಸಲು ನಮ್ಮ ಮೇಲೆ ಆರೋಪ: ಪ್ರಭು ಚೌಹಾಣ್
ಇಂದು ಆಷಾಢ ಮಾಸದ ನಾಲ್ಕನೇ ಶುಕ್ರವಾರದ ಹಿನ್ನೆಲೆ ನಾಡದೇವಿ ಚಾಮುಂಡಿಗೆ ಸಿಂಹವಾಹಿನಿ ಅಲಂಕಾರ ಮಾಡಲಾಗಿದೆ. ಉತ್ಸವ ಮೂರ್ತಿಗೆ ವಿವಿಧ ಬಗೆಯ ಹೂ ಹಾಗೂ ನವಿಲಿನಗರಿ ಹಾರದ ಅಲಂಕಾರ ಮಾಡಲಾಗಿದೆ. ದೇವಾಲಯದ ಆವರಣಕ್ಕೆ ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಲಾಗಿದೆ. ಮುಂಜಾನೆ 4:30ರಿಂದ ತಾಯಿಗೆ ವಿಶೇಷ ಪೂಜೆ ನೆರವೇರುತ್ತಿದೆ.
ಬೆಂಗಳೂರು: ಹೈಕಮಾಂಡ್ ನಿರ್ಧಾರವನ್ನು ನಾನು, ಡಿಕೆ ಶಿವಕುಮಾರ್ ಇಬ್ಬರೂ ಪಾಲಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪುನರುಚ್ಚರಿಸಿದ್ದಾರೆ.
ಸಿಎಂ ಬದಲಾವಣೆ ವಿಚಾರ ಎಐಸಿಸಿ, ಒಬಿಸಿ ಸಲಹಾ ಮಂಡಳಿ ಸಭೆಯ ಸುದ್ದಿಗೋಷ್ಟಿ ಸಂದರ್ಭದಲ್ಲಿ ಮತ್ತೆ ಸದ್ದು ಮಾಡಿದೆ. ಒಬಿಸಿ ನಾಯಕ ಇರುವ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಆಗುತ್ತಾ? ಸಿಎಂ ಬದಲಾವಣೆ ಚರ್ಚೆ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಎಐಸಿಸಿ ಒಬಿಸಿ ಅಧ್ಯಕ್ಷ ಅನಿಲ್ ಜೈ ಹಿಂದ್ ಅವರು ತಬ್ಬಿಬ್ಬಾದರು.ಇದನ್ನೂ ಓದಿ: ನೆಕ್ಸ್ಟ್ ಉತ್ತರ ಕರ್ನಾಟಕದಲ್ಲಿ ಸಾಧನಾ ಸಮಾವೇಶ: ಸಚಿವ ಶಿವಾನಂದ ಪಾಟೀಲ್
ಪ್ರಶ್ನೆಗೆ ತಡವರಿಸಿದಾಗ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಬಂದು ಅನಿಲ್ ಜೈ ಹಿಂದ್ ಕಿವಿಯಲ್ಲಿ ಏನೋ ಹೇಳಿದರು. ಬಳಿಕ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನೀತಿ, ಸಿದ್ಧಾಂತ ನಿಮಗೆ ಗೊತ್ತಿದೆ, ಹಿಂದುಳಿದ ವರ್ಗಗಳ ಭಾಗೀದಾರರನ್ನ ಉತ್ತೇಜಿಸುತ್ತದೆ. ನಿಮ್ಮ ಪ್ರಶ್ನೆ ಆಶ್ಚರ್ಯ ತಂದಿದೆ ಜಾರಿಕೊಂಡರು.
ಇದೇ ವೇಳೆ ಅನಿಲ್ ಜೈ ಹಿಂದ್‌ಗೆ ಅದು ಹೈಕಮಾಂಡ್ ತೀರ್ಮಾನ ಅಂತೇಳಿ ಎಂದು ಸಿದ್ದರಾಮಯ್ಯ ಅವರೇ ಹೇಳಿಕೊಟ್ಟ ಘಟನೆಯೂ ನಡೆಯಿತು. ಬಳಿಕ ಹೈಕಮಾಂಡ್ ತೀರ್ಮಾನ ಎಂದು ಹೇಳಿ ಅವರು ಸುಮ್ಮನಾದರು. ಆದರೆ ಅಷ್ಟಕ್ಕೆ ಬಿಡದ ಸಿಎಂ ಸಿದ್ದರಾಮಯ್ಯ, ತಾವೇ ಮೈಕ್ ತೆಗೆದುಕೊಂಡು ಮತ್ತೊಮ್ಮೆ ಸ್ಪಷ್ಟನೆ ಕೊಟ್ಟರು. ಏನೇ ಇದ್ದರೂ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ನಾನು, ಡಿಕೆಶಿ ಇಬ್ಬರೂ ಹೈಕಮಾಂಡ್ ಏನೇ ನಿರ್ಧಾರ ಮಾಡಿದರೂ ಪಾಲಿಸುತ್ತೇವೆ ಎಂದರು.ಇದನ್ನೂ ಓದಿ:ಪ ತ್ನಿ ಬೇರೆಯವ್ರ ಜೊತೆಗಿದ್ದ ಖಾಸಗಿ ದೃಶ್ಯ ಸೆರೆ ಹಿಡಿದಿದ್ದ ಪತಿ – ಬೆದರಿಸಿ ಹತ್ತಾರು ಜನ್ರ ಜೊತೆ ಸೆಕ್ಸ್‌ಗೆ ಒತ್ತಾಯ
ವಿಜಯಪುರ: ಬಿ.ಸರೋಜಾದೇವಿ ಅವರ ಸಾವಿನಿಂದ ಇಂದು ಕಲಾಜಗತ್ತು ಬಡವಾಗಿದೆ. ಅವರ ಆತ್ಮಕ್ಕೆ ಶಾಂತಿಸಿಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸಂತಾಪ ಸೂಚಿಸಿದರು.
ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನ್ನಡ ನಾಡು ಕಂಡಂತಹ ಪ್ರತಿಭಾವಂತೆ. ಅವರು ಕನ್ನಡ, ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳಲ್ಲಿ ನಟಿಸಿದ್ದಾರೆ. ಅವರು ಒಬ್ಬ ಅಪ್ರತಿಮ ಕಲಾವಿದೆ. ಬಿ.ಸರೋಜಾದೇವಿ ಅವರ ಸಾವಿನಿಂದ ಇಂದು ಕಲಾಜಗತ್ತು ಬಡವಾಗಿದೆ. ಅವರ ಆತ್ಮಕ್ಕೆ ಶಾಂತಿಸಿಗಲಿ ಹಾಗೂ ಕುಟುಂಬ ವರ್ಗದವರಿಗೆ ಅವರ ಸಾವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದರು.ಇದನ್ನೂ ಓದಿ: ಪುದುಚೆರಿಯಲ್ಲಿ ಖ್ಯಾತ ಮಾಡೆಲ್ ಸ್ಯಾನ್ ರೆಚಲ್ ಆತ್ಮಹತ್ಯೆ
ಇದೇ ವೇಳೆ ಶಕ್ತಿ ಯೋಜನೆಯ ಬಗ್ಗೆ ಮಾತನಾಡಿ, 5 ಗ್ಯಾರಂಟಿ ಯೋಜನೆಗಳನ್ನು 2023ರ ವಿಧಾನಸಭಾ ಚುನಾವಣೆಯಲ್ಲಿ ಘೋಷಣೆ ಮಾಡಿದ್ದೆವು. ನಾವು ಕ್ಯಾಬಿನೆಟ್ ಸಭೆ ಮಾಡಿ ಕೂಡಲೇ ಅವುಗಳನ್ನು ಜಾರಿಗೆ ತರುತ್ತೇವೆ ಎಂದು ತೀರ್ಮಾನೆ ಮಾಡಿದ್ದೆವು. ಅದರಂತೆ 2023ರ ಮೇ 20ರಂದು ಅಧಿಕಾರಕ್ಕೆ ಬಂದೆವು. ಬಳಿಕ ಜೂ.11ಕ್ಕೆ ಶಕ್ತಿ ಯೋಜನೆಯನ್ನು ಜಾರಿಗೆ ತಂದೆವು. ಅಂದಿನಿಂದ ಈವರೆಗೂ ರಾಜ್ಯದ ಎಲ್ಲಾ ಹೆಣ್ಣು ಮಕ್ಕಳು ಸರ್ಕಾರಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಇಂದು 500 ಕೋಟಿ ಮಹಿಳೆಯರು ಸಂಚರಿಸಿದ್ದಾರೆ. ಇದಕ್ಕೆ ಸಾಂಕೇತಿಕವಾಗಿ ಟಿಕೆಟ್ ಹಂಚಿಕೆ ಮಾಡಿದ್ದೇವೆ ಎಂದು ಹೇಳಿದರು.
ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕನ್ನಡ ಚಿತ್ರರಂಗವು ಸೇರಿದಂತೆ ತಮಿಳು, ತೆಲುಗು ಮತ್ತು ಹಿಂದಿಯ ಸುಮಾರು 200 ಚಿತ್ರಗಳಲ್ಲಿ ನಟಿಸಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದರು.
ಸರೋಜಾದೇವಿ ಎಂದಾಕ್ಷಣ ಕಿತ್ತೂರು ಚೆನ್ನಮ್ಮ, ಬಬ್ರುವಾಹನ, ಅಣ್ಣತಂಗಿ ಮುಂತಾದ ಚಿತ್ರಗಳಲ್ಲಿನ ಅವರ ಮನೋಜ್ಞ ಅಭಿನಯ… pic.twitter.com/ZOVdrXGqlp
ಸಿಗಂದೂರು ಸೇತುವೆ ವಿಚಾರವಾಗಿ ನಿತಿನ್ ಗಡ್ಕರಿಗೆ ಪತ್ರ ಬರೆದ ಬಗ್ಗೆ ಮಾತನಾಡಿ, ಇಂದು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಯಾರು ಭಾಗಿಯಾಗಿಲ್ಲ, ನನಗೆ ಆಹ್ವಾನಿಸಿಲ್ಲ, ಹಾಗಾಗಿ ಗಡ್ಕರಿಯವರಿಗೆ ಕರೆ ಮಾಡಿದೆ. ಆಗ ಅವರು ಕಾರ್ಯಕ್ರಮ ಮುಂದಕ್ಕೆ ಹಾಕುವುದಾಗಿ ತಿಳಿಸಿದರು. ಬಳಿಕ ಪತ್ರ ಬರೆದೆ. ಬಿಜೆಪಿ ನಾಯಕರು ಒತ್ತಾಯಿಸಿರಬಹುದು, ನನಗೆ ಏನು ಹೇಳದೇ ಮಾಡಿದ್ದಾರೆ. ಸದ್ಯ ನಾನು ಇಂಡಿ ತಾಲೂಕಿನಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಹೊರಟಿದ್ದೇನೆ. ಸದ್ಯ ಸಿಗಂದೂರು ಕಾರ್ಯಕ್ರಮಕ್ಕೆ ನಾವ್ಯಾರು ಹೋಗುವುದಿಲ್ಲ ಎಂದು ತಿಳಿಸಿದರು.ಇದನ್ನೂ ಓದಿ: ಸರೋಜಾದೇವಿ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ನಟಿಯರಲ್ಲಿ ಒಬ್ಬರು – ಬಿವೈವಿ
ನವದೆಹಲಿ: ಮೈಸೂರು ದಸರಾ (Mysuru Dasara) ಉತ್ಸವದಲ್ಲಿ ವೈಮಾನಿಕ ಪ್ರದರ್ಶನ (Air Show) ಹಾಗೂ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್ (Defence Corridor) ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಸರ್ಕಾರದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.
ಉತ್ತರಪ್ರದೇಶ ಹಾಗೂ ತಮಿಳುನಾಡು ಮಾದರಿಯಲ್ಲಿ ಕರ್ನಾಟಕದಲ್ಲಿಯೂ ರಕ್ಷಣಾ ಕಾರಿಡಾರ್ ಸ್ಥಾಪನೆ ಹಾಗೂ ಟನಲ್ ಯೋಜನೆ, ಬಳ್ಳಾರಿ ರಸ್ತೆಯಲ್ಲಿ ಲಿಂಕ್ ರೋಡ್ ಯೋಜನೆ, ಡಬಲ್ ಡೆಕ್ಕರ್ ಫ್ಲೈಓವರ್ ಯೋಜನೆಯ ನಿರ್ಮಾಣಕ್ಕೆ ಅವಶ್ಯವಿರುವ ಕೇಂದ್ರ ರಕ್ಷಣಾ ಇಲಾಖೆಗೆ ಸೇರಿದ ಜಾಗವನ್ನು ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ನೀಡುವಂತೆ ಕೋರಿ ಮನವಿ ಸಲ್ಲಿಸಿರುವ ಬಗ್ಗೆ ವಿವರಿಸಿದರು. ಇದನ್ನೂ ಓದಿ:ಕಾಡಾನೆ ದಾಳಿಗೆ ಮಾಜಿ ಶಾಸಕ ಬಲಿ
ರಾಹುಲ್ ಗಾಂಧಿಯನ್ನು ಭೇಟಿಯಾಗುವ ಕಾರ್ಯಕ್ರಮವಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ರಾಹುಲ್ ಗಾಂಧಿಯವರನ್ನು ಸಾಧ್ಯವಾದರೆ ಭೇಟಿಯಾಗುವುದಾಗಿ ತಿಳಿಸಿದರು. ಕಾಂಗ್ರೆಸ್‌ನ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ನಾಳೆ ನವದೆಹಲಿಗೆ ಆಗಮಿಸಲಿದ್ದು, ಅವರೊಂದಿಗೆ ವಿಧಾನಪರಿಷತ್ ಸದಸ್ಯರು ಹಾಗೂ ನಿಗಮಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಬಗ್ಗೆ ಚರ್ಚಿಸಲಾಗುವುದು. ಅಂತೆಯೇ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಭೇಟಿಗೆ ಸಮಯವನ್ನು ಕೋರಲಾಗಿದ್ದು, ನಾಳೆ ಭೇಟಿಯಾಗುವ ಸಾಧ್ಯತೆಯಿದೆ ಎಂದರು. ಇದನ್ನೂ ಓದಿ: ಉತ್ತರ ಭಾರತದ ಹಲವು ರಾಜ್ಯಗಳಿಗೆ ಪ್ರವಾಹ ಎಚ್ಚರಿಕೆ – ಹಿಮಾಚಲ ಪ್ರದೇಶದಲ್ಲಿ ಯೆಲ್ಲೋ ಅಲರ್ಟ್
ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ (Chinnaswamy Stampede) ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ (IPS) ಅಧಿಕಾರಿಗಳ ಅಮಾನತು ಆದೇಶವನ್ನು ರದ್ದು ಮಾಡಿರುವ ಸಿಎಟಿಗೆ (ಕೇಂದ್ರೀಯ ಆಡಳಿತ ನ್ಯಾಯಮಂಡಳಿ) ಮೇಲ್ಮನವಿ ಸಲ್ಲಿಸುವ ಅವಕಾಶವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.
ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೇಂದ್ರ ಕಚೇರಿ ವಾರ್ತಾ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿಗಳ ಅಮಾನತು ಆದೇಶವನ್ನು ರದ್ದು ಮಾಡಿರುವ ಕೇಂದ್ರೀಯ ಆಡಳಿತ ನ್ಯಾಯಮಂಡಳಿಗೆ ಮೇಲ್ಮನವಿ ಸಲ್ಲಿಸುವ ಅವಕಾಶವಿದ್ದು, ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ಇದನ್ನೂ ಓದಿ: ಸಿದ್ದು ಫುಲ್ ಟರ್ಮ್ ಸಿಎಂ ಅಸ್ತ್ರಕ್ಕೆ ಡಿಕೆಶಿ ನೆಕ್ಸ್ಟ್ ಸಿಎಂ ಬ್ರಹ್ಮಾಸ್ತ್ರ: ಸಂಖ್ಯಾಬಲ ಡಿಸಿಎಂಗೆ ಇದೆ – ಇಕ್ಬಾಲ್ ಹುಸೇನ್
ಶಾಸಕ ಬಿ.ಆರ್.ಪಾಟೀಲ್ (BR Patil) ಅವರ ಸಿದ್ದರಾಮಯ್ಯನವರು ಅದೃಷ್ಟದಿಂದ ಮುಖ್ಯಮಂತ್ರಿಯಾಗಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಅವರ ಹೇಳಿಕೆ ಬಗ್ಗೆ ಮಾಹಿತಿಯಿಲ್ಲ. ಬಿ.ಆರ್.ಪಾಟೀಲ್ ಹಾಗೂ ನಾನು ಒಟ್ಟಿಗೆ ಶಾಸಕರಾಗಿದ್ದರಿಂದ ಹಾಗೂ ನನಗೆ ಮುಖ್ಯಮಂತ್ರಿಯಾಗಲು ಅವಕಾಶ ದೊರೆತಿದ್ದರಿಂದ, ಬಿ.ಆರ್.ಪಾಟೀಲ್‌ರವರು ಈ ರೀತಿ ಹೇಳಿಕೆ ನೀಡಿರಬಹುದು ಎಂದರು.
ಇದೇ ವೇಳೆ ಜಾತಿಗಣತಿ (Caste Census) ನಡೆಸಲಾಗಿದೆ ಎಂಬ ಪೋಸ್ಟರ್‌ಗಳನ್ನು ಮನೆಗಳಿಗೆ ಭೇಟಿ ನೀಡದೇ, ಮನೆಯ ಮುಂದೆ ಅಂಟಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸುವ ಬಗ್ಗೆ, ಜಾತಿಗಣತಿ ನಡೆಸಲು ಹಲವು ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಆನ್‌ಲೈನ್ ಮೂಲಕವೂ ಜಾತಿವಿವರಗಳನ್ನು ನೀಡಬಹುದು ಅಥವಾ ಮನೆಗಳಿಗೆ ಭೇಟಿ ನೀಡಿ ವಿವರಗಳನ್ನು ಪಡೆಯಬಹುದು. ಈ ಬಗ್ಗೆ ಸತ್ಯಾಸತ್ಯತೆ ತಿಳಿದು ಮಾಧ್ಯಮದವರು ಪ್ರಶ್ನಿಸಬೇಕು ಎಂದರು.ಇದನ್ನೂ ಓದಿ: ಪ್ರಾಥಮಿಕ ಶಾಲಾ ಶಿಕ್ಷಕರನ್ನು ಬಿಎಲ್‌ಓಗಳಾಗಿ ನೇಮಿಸದಂತೆ ಚುನಾವಣೆ ಆಯೋಗಕ್ಕೆ ಶಿಕ್ಷಣ ಇಲಾಖೆ ಪತ್ರ
ಬೆಂಗಳೂರು: ಕಲಬುರಗಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿಯಿಂದ ಸ್ಪರ್ಧೆ ಮಾಡಿ ಸೋಲನುಭವಿಸಿದ್ದ ಬಿಜೆಪಿ ಅಭ್ಯರ್ಥಿ ಮಣಿಕಂಡ ರಾಥೋಡ್ ವಿರುದ್ಧ ಸರಿಯಾಗಿ ಒಂದು ಕೇಸ್ ಹಾಕೋದಕ್ಕೆ ಆಗ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇಂದು ನೃಪತುಂಗ ರಸ್ತೆಯಲ್ಲಿರುವ ಡಿ.ಜಿ.ಐಜಿಪಿ ಕಚೇರಿಯಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಕಲಬುರಗಿ ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ಮಾತನಾಡಿ, ಮಣಿಕಂಠ ರಾಥೋಡ್ ಬಹಿರಂಗವಾಗಿ ಅವರನ್ನು ಕೊಲೆ ಮಾಡುತ್ತೇನೆ, ಇವರನ್ನು ಕೊಲೆ ಮಾಡುತ್ತೇನೆ ಎಂದು ಹೇಳಿ ವಿಡಿಯೋ ಮಾಡಿ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಮಾಡಿದ್ದ. ಆತನ ವಿರುದ್ಧ ಕೇಸ್ ಹಾಕೋದಕ್ಕೆ ನಿಮಗೆ ಸಾಧ್ಯವಾಗ್ತಿಲ್ಲ ಎಂದಿದ್ದಾರೆ.ಇದನ್ನೂ ಓದಿ: ಹೊಸ ಆದಾಯ ತೆರಿಗೆ ನಿಯಮ ಜಾರಿ – ಸುಳ್ಳು ಮಾಹಿತಿ ನೀಡಿದ್ರೆ 200% ದಂಡ, ಜೈಲು
ಅಂಥವನ ಮೇಲೆ ನೀವು ಕಠಿಣ ಕ್ರಮಕೈಗೊಳ್ಳದೇ ಹೋದರೆ, ಬೇರೆಯವರಿಗೆ ಅವನು ಪ್ರೇರಣೆಯಾಗುತ್ತಾನೆ. ಅವನ ರೀತಿ ಮತ್ತಷ್ಟು ಮಂದಿ ಹುಟ್ಟಿಕೊಳ್ಳುತ್ತಾರೆ, ಹಾಗಾಗಿ ಮತ್ತೆ ಹಾಗೇನಾದರೂ ಮಾಡಿದ್ದು ಕಂಡುಬಂದರೆ ಕಠಿಣ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ಪೊಲೀಸರಿಗೆ ಹೊಸ ಮಾದರಿಯ ಟೋಪಿಗೆ ಸಮ್ಮತಿ ಸೂಚಿಸಿದ್ದಾರೆ. ಐದಾರು ರಾಜ್ಯದ ಟೋಪಿಗಳನ್ನು ಪರಿಶೀಲನೆ ಮಾಡಿದ ಸಿಎಂ ತೆಲಂಗಾಣ ರಾಜ್ಯದ ಟೋಪಿಯನ್ನು ಆಯ್ಕೆ ಮಾಡಿದ್ದಾರೆ. ತೆಲಂಗಾಣ ರಾಜ್ಯದ ಟೋಪಿಯನ್ನ ಹೆಡ್ ಕಾನ್ಸಟೇಬಲ್‌ಗೆ ಹಾಕಿಸಿ, ಪರಿಶೀಲನೆ ಮಾಡಿ ಅಂತಿಮಗೊಳಿಸಿದ್ದಾರೆ.
ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗಿರುವುದು ಸಮಾಧಾನದ ಸಂಗತಿಯಾದರೂ ಪೊಲೀಸರ ತನಿಖೆಯ ಗುಣಮಟ್ಟ ಕಡಿಮೆಯಾಗಿದ್ದು ಇದನ್ನು ಕೂಡ ಹೆಚ್ಚಿಸಬೇಕಿದೆ.
ಬೀದರ್ ನಲ್ಲಿ ನಡೆದ ದರೋಡೆ ಪ್ರಕರಣದ ಆರೋಪಿ ಯಾರು ಎಂದು ಗೊತ್ತಾಗಿದ್ದರೂ 5 ತಿಂಗಳುಗಳಿಂದ ಆತನನ್ನು ಬಂಧಿಸಲು ಸಾಧ್ಯವಾಗಲಿಲ್ಲ ಎನ್ನುವುದನ್ನು ಒಪ್ಪಲು ಸಾಧ್ಯವಿಲ್ಲ.
ಕಳೆದ ಅಧಿವೇಶನದಲ್ಲಿ ಶಾಸಕ ಸಿ.ಎನ್ ಮಂಜೇಗೌಡ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವವರಿಗೆ ಒಂದೇ ರೀತಿಯ ಟೋಪಿ ನೀಡಬೇಕೆಂದು ಪ್ರಶ್ನೆ ಮಾಡಿದ್ದರು. ಇದನ್ನು ಪರಿಶೀಲನೆ ನಡೆಸಿ ವರದಿ ನೀಡುವಂತೆ ಗೃಹ ಸಚಿವ ಡಾ.ಪರಮೇಶ್ವರ್ ಅಂದಿನ ಡಿಜಿಐಜಿಪಿ ಅಲೋಕ್ ಮೋಹನ್‌ಗೆ ಸೂಚಿಸಿದ್ದರು. ಕೆಎಸ್‌ಆರ್‌ಪಿ ಉಮೇಶ್ ಕುಮಾರ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿತ್ತು. ಟೋಪಿ ಬದಲಾವಣೆ ಕುರಿತು ಸಿವಿಲ್, ಕೆಎಸ್‌ಆರ್‌ಪಿ, ಸಿಎಆರ್, ಡಿಎಆರ್, ಹಾಗೂ ಐಎಸ್‌ಡಿ ಸೇರಿ ಪೊಲೀಸ್ ಇಲಾಖೆಯ ಎಲ್ಲಾ ವಿಭಾಗಗಳ ಹೆಡ್‌ಕಾನ್ಸಟೇಬಲ್ ಹಾಗೂ ಕಾನ್ಸಟೇಬಲ್‌ಗಳಿಂದ ಸಮಿತಿ ಅಭಿಪ್ರಾಯ ಸಂಗ್ರಹಿಸಿತ್ತು, ಅಲ್ಲದೆ ಕೇರಳ, ಮಹಾರಾಷ್ಟ್ರ, ಆಂದ್ರಪ್ರದೇಶ, ತಮಿಳುನಾಡು ಸೇರಿ ಹೊರ ರಾಜ್ಯದ ಪೊಲೀಸರ ಟೋಪಿ ಕುರಿತು ಮಾಹಿತಿ ಕಲೆ ಹಾಕಲಾಗಿತ್ತು.
ಬೆಂಗಳೂರು: ಯಾವಾಗ ಏನಾಗುತ್ತೆ? ಯಾರ ಕುರ್ಚಿ ಇರುತ್ತೆ.. ಯಾರದ್ದು ಹೋಗುತ್ತೆ. ಇದು ಕಾಂಗ್ರೆಸ್ (Congress) ಒಳಗಿನ ಕದನ ಕುತೂಹಲ. ಗುರುವಾರ ರಾಜಣ್ಣ (K.N Rajanna) ಸೆಪ್ಟೆಂಬರ್ ಕ್ರಾಂತಿ ಬಾಂಬ್, ಇವತ್ತು ರಾಯರೆಡ್ಡಿ ಫುಲ್ ಟರ್ಮ್ ಸಿಎಂ ಗೇಮ್ ಚಾಲೂ ಮಾಡಿದ್ದಾರೆ. ಹಾಗಾಗಿ ಕಾಂಗ್ರೆಸ್ ಮತ್ತೆ ಡಿಸ್ಟರ್ಬ್ ಆಗಿದ್ದು, ಸಿಎಂ ಆಪ್ತರ ಸಮರ್ಥನೆಗೆ ಇಳಿದ್ರೆ, ಡಿಸಿಎಂ (D.K Shivakumar) ಜಾರಿಕೊಂಡಿದ್ದಾರೆ. ರಾಜಕೀಯ ಶಾಂತಿ- ಕ್ರಾಂತಿ ರಾಜಕೀಯ ಅಸಲಿ ಸ್ಟೋರಿ ಕುತೂಹಲ ಮೂಡಿಸಿದೆ.
ರಾಜಣ್ಣ ಸೆಪ್ಟೆಂಬರ್ ಕ್ರಾಂತಿ ಹೇಳಿಕೆಗೆ ಕಾಂಗ್ರೆಸ್ ಡಿಸ್ಟರ್ಬ್ ಆಯ್ತಾ ಎಂಬ ಚರ್ಚೆ ಜೋರಾಗಿದೆ. ರಾಜಣ್ಣ ಕ್ಲಿಯರ್ ಆಗಿ ಕ್ರಾಂತಿ ಆಗುತ್ತೆ ಎಂದು ಹೇಳಿದ್ರೂ ತೇಪೆ ಹಚ್ಚಲು ಸಿಎಂ ಸಿದ್ದರಾಮಯ್ಯ (CM Siddaramaiah) ಮುಂದಾಗಿದ್ದಾರೆ. ಈ ನಡುವೆಯೇ ಶಾಸಕ ಬಸವರಾಜ ರಾಯರೆಡ್ಡಿ ಹೊಸ ಆಟ ಹಾಕಿದ್ದಾರೆ. ರಾಜಣ್ಣ ಹೇಳಿಕೆಯನ್ನ ರಾಯರೆಡ್ಡಿ ತಳ್ಳಿ ಹಾಕಿದ್ದು, ಕಾಂಗ್ರೆಸ್ ನಲ್ಲಿ ಸೆಪ್ಟೆಂಬರ್ ಕ್ರಾಂತಿ ಇಲ್ಲ ಯಾವ ಕ್ರಾಂತಿಯೂ ಆಗಲ್ಲ. ಸಿದ್ದರಾಮಯ್ಯ ಸಿಎಂ ಆಗಿಯೇ ಪೂರ್ಣಾವಧಿ ಪೂರ್ಣಗೊಳಿಸ್ತಾರೆ. ಅವರನ್ನ ಬಿಟ್ಟರೆ ಇನ್ಯಾರು ಇದಾರೆ ಹೇಳಿ..? ಸಿಎಂ ಆಯ್ಕೆ ಮಾಡೋದು ನಾವೇ ಎಂದು ಮತ್ತಷ್ಟು ತುಪ್ಪ ಸುರಿದಿದ್ದಾರೆ. ನೋಡ್ತಾ ಇರಿ ಸಿದ್ದರಾಮಯ್ಯ ಚೇಂಜ್ ಆಗ್ತಾರೆ.. ಸ್ಟ್ರಾಂಗ್ ಆಗ್ತಾರೆ ಎನ್ನುವ ಮೂಲಕ ಡಿಕೆಶಿ ಪವರ್ ಸೆಂಟರ್‌ಗೆ ಚೆಕ್ ಮೇಟ್ ಇಡುವ ಸುಳಿವು ನೀಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ 2 ವರ್ಷ 11 ತಿಂಗಳು ಸಿಎಂ ಆಗಿರ್ತಾರೆ, ಇನ್ನೂ ಸ್ಟ್ರಾಂಗ್ ಆಗ್ತಾರೆ: ಬಸವರಾಜ ರಾಯರೆಡ್ಡಿ ಬಾಂಬ್
ಇನ್ನು ಆಪ್ತನಿಂದ ಕ್ರಾಂತಿ ಏಟಿನಿಂದ ಸಿಎಂಗೆ ಮತ್ತೆ ಫಜೀತಿ ತಂದಿದ್ದು, ಸಮರ್ಥಿಸಿಕೊಳ್ಳುವ ನೆಪದಲ್ಲಿ ಮಾಧ್ಯಮಗಳತ್ತ ಸಿಎಂ ಬೊಟ್ಟು ಮಾಡಿದ್ದಾರೆ. ರಾಜಣ್ಣ ಬದಲಾವಣೆ ಆಗುತ್ತೆ ಅಂತಾ ಹೇಳಿದ್ದಾರೆ. ಇಂತಹದ್ದೇ ಬದಲಾವಣೆ ಅಂತಾ ಹೇಳಿಲ್ಲ. ಸಣ್ಣಪುಟ್ಟ ಬದಲಾವಣೆ ಆಗುತ್ತೆ ಅಂತಾ ಹೇಳಿದ್ದಾರೆ ಅಷ್ಟೇ. ಅದನ್ನ ನೀವು ಹೇಗೆ ಬೇಕೋ ಹಾಗೆ ಬರೆದುಕೊಂಡರೆ ಹೇಗೆ? ಐ ಆಮ್ ನಾಟ್ ಎ ಜರ್ನಲಿಸ್ಟ್ ಅಂದ್ರು. ಆದ್ರೆ ಡಿಸಿಎಂ ಡಿಕೆಶಿ ಜಾರಿಕೊಳ್ಳುವ ತಂತ್ರಕ್ಕೆ ಮೊರೆ ಹೋಗಿದ್ದು, ಈ ಬಗ್ಗೆ ನನಗೆ ಗೊತ್ತಿಲ್ಲ. ರಾಜಣ್ಣನ ಹತ್ತಿರವೇ ಮಾತನಾಡಿ ತಿಳಿಸುತ್ತೇವೆ. ನೀವೇ ಅವರನ್ನ ಕೇಳಿ ಅಂದ್ರು. ಗೃಹ ಸಚಿವ ಪರಮೇಶ್ವರ್ ಮಾತ್ರ ರಾಜಣ್ಣಗೆ ಮಾಹಿತಿ ಇರುತ್ತೆ, ಜವಾಬ್ದಾರಿಯುತ ಸ್ಥಾನದಲ್ಲಿ ಇರೋರು ಹೀಗೆಲ್ಲ ಮಾತಾಡಕ್ಕೆ ಆಗಲ್ಲ ಎಂದಿದ್ದಾರೆ.
ಇನ್ನು ಶಾಸಕರು, ಸಚಿವರ ಶಾಂತಿ-ಕ್ರಾಂತಿಯ ಹೇಳಿಕೆಗಳ ನಡುವೆಯೇ ಜೂನ್ 30 ಸುರ್ಜೇವಾಲಾ ಬೆಂಗಳೂರಿಗೆ ಎಂಟ್ರಿ ಕೊಡ್ತಿದ್ದು, ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗ್ತಿದ್ದಾರೆ. ಒಟ್ನಲ್ಲಿ ಕಾಂಗ್ರೆಸ್ ಒಳಗಿನ ಕುರ್ಚಿ ಕದನ ದಿನೇ ದಿನೇ ವೆರೈಟಿ ಗೇಮ್ ಗೆ ವೇದಿಕೆ ಆಗಿದ್ದು, ಯಾರ ಚದುರಂಗದಾಟದಲ್ಲಿ ಯಾರು ಮಕಾಡೆ ಮಲಗ್ತಾರೆ ಅನ್ನೋದು ಈ ವರ್ಷದ ಅಂತ್ಯಕ್ಕೆ ಸ್ಪಷ್ಟ ಆಗಬಹುದು. ಇದನ್ನೂ ಓದಿ: I’m not a journalist ಎಂದು ಹೇಳಿ ರಾಜಣ್ಣ ಪರ ಸಿಎಂ ಬ್ಯಾಟಿಂಗ್
ಡಿಕೆಶಿ (DK Shivakumar) ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 6-7 ಬಾರಿ ಗೆದ್ದಿದ್ದಾರೆ, ಹಿರಿಯ ಶಾಸಕರಿದ್ದಾರೆ. ಮನೆ ಮಂಜೂರು ಮಾಡಲು ಹಣ ಪಡೆಯುವಷ್ಟು ದರಿದ್ರ ನಮ್ಮ ಸರ್ಕಾರಕ್ಕೆ ಬಂದಿಲ್ಲ. 2022ರಲ್ಲಿ ಆಯ್ಕೆಯಾದವರಿಗೆ ಈಗ ಮನೆ ನೀಡಲಾಗುತ್ತಿದೆ. ಆಗ ಮನೆ ಮಂಜೂರಾಗಿದ್ದನ್ನು ಈಗ ಬದಲಾವಣೆ ಮಾಡಲು ಸಾಧ್ಯವಿಲ್ಲ. ಬಡವರಿಂದ ಹಣ ಪಡೆಯುವ ದರಿದ್ರ ಜಮೀರ್‌ಗಿಲ್ಲ. ಜಮೀರ್ (Zameer Ahmed) ಸಾಕಷ್ಟು ದಾನ-ಧರ್ಮ ಮಾಡಿದ್ದಾರೆ ಎಂದು ಸಚಿವರ ಪರ ಬ್ಯಾಟಿಂಗ್ ಮಾಡಿದರು.
ಇದೇ ವೇಳೆ ಅನುದಾನಕ್ಕೆ ಡಿಕೆಶಿ ಕೃಪಾಶೀರ್ವಾದ ಎಂಬ ಶಾಸಕ ಬಾಲಕೃಷ್ಣ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಡಿಕೆಶಿ, ಸಿಎಂ ಅವರು ಅನುದಾನ ಕೊಟ್ಟಿದ್ದಾರೆ. ಒಂದು ಸಾವಿರ ಕೋಟಿ ರೂ. ಅನುದಾನ ಕ್ಷೇತ್ರಕ್ಕೆ ಸಿಕ್ಕಿದೆ. ದಿನ ಗುದ್ದಲಿ ಪೂಜೆ ಆಗುತ್ತಿದೆ. ಸಿಎಂ ಹಣಕಾಸು ಸಚಿವರು, ಅವರು ಸಹಿ ಹಾಕದೇ ಡಿಸಿಎಂ ಸಹಿ ಹಾಕೋಕೆ ಆಗುತ್ತಾ? ಯಾರಿಗೆ ಯಾವ ಹೊಟ್ಟೆನೋವು ಇದೆಯೋ ಗೊತ್ತಿಲ್ಲ. ಅದನ್ನ ಈ ರೀತಿ ಕಕ್ಕುತ್ತಿದ್ದಾರೆ. ಪಕ್ಷದ ವೇದಿಕೆಯಲ್ಲಿ ಕಕ್ಕೋದು ಒಳ್ಳೆಯದು. ಒಂದಿಬ್ಬರು ಶಾಸಕರು ಮಾತಾಡ್ತಿದ್ದಾರೆ. ನಿಮ್ಮ ಏನೇ ಸಮಸ್ಯೆಯಿದ್ರೂ ಸಿಎಂ, ಡಿಸಿಎಂ ಜೊತೆ ಮಾತಾಡಿ. ಸಿಎಲ್‌ಪಿ ಸಭೆಯಿದೆ, ಅಲ್ಲಿ ಚರ್ಚೆ ಮಾಡಿ ಎಂದರು.ಇದನ್ನೂ ಓದಿ: ಸರಿ ಮಾತಾಡ್ಸಲ್ಲ ಅಂತ ರಾಜು ಕಾಗೆ ಆರೋಪ – ಶಾಸಕರಿಗೆ ನಮ್ಮ ಮೇಲೆ ಪ್ರೀತಿ ಜಾಸ್ತಿ ಎಂದ ಡಿಕೆಶಿ
ನವದೆಹಲಿ: ರಾಷ್ಟ್ರಪತಿ ಭೇಟಿಗಾಗಿ ಸಿಎಂ ಸಿದ್ದರಾಮಯ್ಯ (CM Siddaramaiah) ರಾಷ್ಟ್ರಪತಿ ಭವನಕ್ಕೆ ತೆರಳಿದಾಗ ಬಾಲಿವುಡ್ ನಟ, ನಿರ್ದೇಶಕ ಆಮೀರ್ ಖಾನ್ (Aamir Khan) ಮುಖಾಮುಖಿಯಾದರು.
ರಾಜ್ಯದ ಏಳು ಮಸೂದೆಗಳಿಗೆ ಅನುಮೋದನೆ ನೀಡುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಭೇಟಿಗಾಗಿ ನವದೆಹಲಿ ತೆರಳಿದ್ದರು. ಇಂದು ರಾಷ್ಟ್ರಪತಿ ಭವನಕ್ಕೆ ತೆರಳಿದಾಗ ಬಾಲಿವುಡ್ ನಟ, ನಿರ್ದೇಶಕ ಮುಖಾಮುಖಿಯಾದರು. ಈ ವೇಳೆ ಪರಸ್ಪರ ಕುಶಲೋಪರಿ ವಿಚಾರಿಸಿ, ಶುಭ ಹಾರೈಸಿದರು.ಇದನ್ನೂ ಓದಿ: 24 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ಕಾಮುಕ ಶಿಕ್ಷಕ ಅರೆಸ್ಟ್
ಸಿಎಂ ಸಿದ್ದರಾಮಯ್ಯ ಅವರು ಸಚಿವರಾದ ಮಹದೇವಪ್ಪ, ಕೆ.ಜೆ ಚಾರ್ಜ್, ಸತೀಶ್ ಜಾರಕಿಹೊಳಿ ಸಮ್ಮುಖದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ರಾಜ್ಯಪಾಲರಿಂದ ಬಂದಿರುವ ರಾಜ್ಯದ ಏಳು ಮಸೂದೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಏಳು ಮಸೂದೆಗೆಳು ಯಾವವು?
1. ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು (ಕರ್ನಾಟಕ ತಿದ್ದುಪಡಿ) ಮಸೂದೆ, 2015
2. ಕರ್ನಾಟಕ (ಖನಿಜ ಹಕ್ಕುಗಳು ಮತ್ತು ಖನಿಜ ಹೊಂದಿರುವ ಭೂಮಿ) ತೆರಿಗೆ ಮಸೂದೆ 2024.
3. ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆ, 2024.
4. ನೋಟರಿಗಳು (ಕರ್ನಾಟಕ ತಿದ್ದುಪಡಿ) ಮಸೂದೆ, 2025
5. ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆ, 2025
6. ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ಕಾಯ್ದೆ, 2025.
7. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ (ತಿದ್ದುಪಡಿ) ಕಾಯ್ದೆ, 2024.ಇದನ್ನೂ ಓದಿ: ಸುದೀಪ್ `ಬಿಲ್ಲ ರಂಗ ಬಾಷ’ ಸೆಟ್ ರಿವೀಲ್!
– ಕೇಂದ್ರದಿಂದ ನಮಗೆ 11,495 ಕೋಟಿ ರೂ. ನಷ್ಟವಾಗಿದೆ; ಸಿಎಂ
ರಾಯಚೂರು: ಸಿಎಂ ಅನುದಾನ ಅಂತ ಬಜೆಟ್‌ನಲ್ಲಿ ಇಲ್ಲ, ನಾವು ಗ್ರ‍್ಯಾಂಟ್ ಕೊಡುವುದೆಲ್ಲಾ ವಿಶೇಷ ಅನುದಾನ ಅಂತಿರುತ್ತದೆ. ಅವರು ಹೇಳುತ್ತಾರೆ, ಶಾಸಕ ರಾಜು ಕಾಗೆಯನ್ನ (Raju Kage) ಕರೆದು ಮಾತನಾಡ್ತಿನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದರು.
ಜಿಲ್ಲೆಯ ಯರಗೇರಾದಲ್ಲಿ ಸರ್ಕಾರದ ವಿರುದ್ಧ ಮತ್ತೊಬ್ಬ ಕಾಂಗ್ರೆಸ್ (Congress) ಶಾಸಕ ರಾಜು ಕಾಗೆ ಆಕ್ರೋಶ ವ್ಯಕ್ತಪಡಿಸಿರುವ ವಿಚಾರವಾಗಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅನುದಾನದ ವರ್ಕ್ ಆರ್ಡರ್ ಸಿಗುತ್ತಿಲ್ಲ ಎಂದು ಎರಡು ದಿನದಲ್ಲಿ ರಾಜೀನಾಮೆ ನೀಡಿದ್ದರೂ ಅಚ್ಚರಿಯಿಲ್ಲ ಎಂದಿದ್ದಾರೆ. ಅವರು ಹೇಳುತ್ತಾರೆ, ಅವರಿಗೇನು? ಸಿಎಂ ಅನುದಾನ ಅಂತಾ ಇದೀಯಾ? ರಾಜು ಕಾಗೆಯನ್ನು ಕರೆದು ಮಾತಾಡುತ್ತೇನೆ ಎಂದರು.ಇದನ್ನೂ ಓದಿ: ಭಾರತದ ವಾಯುಸೀಮೆಯನ್ನು ಅಮೆರಿಕ ಬಳಸಿ ಇರಾನ್ ಮೇಲೆ ದಾಳಿ ಮಾಡಿತ್ತಾ? – ಉತ್ತರ ನೀಡಿದ ಪಿಐಬಿ
ಇನ್ನೂ ವಸತಿ ಸಚಿವರ ರಾಜೀನಾಮೆಗೆ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಆಗ್ರಹ ವಿಚಾರಕ್ಕೆ ಪ್ರತಿಕ್ರಿಯಿಸಿ, ಅದು ನನಗೆ ಗೊತ್ತಿಲ್ಲ. ಯಾವ ಸನ್ನಿವೇಶದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಅದರ ಬಗ್ಗೆ ಮಾತನಾಡುತ್ತೇನೆ ಎಂದು ತಿಳಿಸಿದರು. ಇದೇ ವೇಳೆ ರಾಯಚೂರಿನಲ್ಲಿ ಆಯೋಜಿಸಿರುವ ಕಾರ್ಯಕ್ರಮಕ್ಕೆ ಬಿ.ಆರ್ ಪಾಟೀಲ್ (BR Patil) ಅವರನ್ನ ಸಿಎಂ ಕರೆದರೂ ಬಂದಿಲ್ಲ ಎನ್ನುವ ವಿಚಾರವಾಗಿ ಮಾತನಾಡಿದ ಅವರು, ನಾನು ಅವರನ್ನು ಇಲ್ಲಿಗೆ ಕರೆದಿದ್ದೆ, ಆದರೆ ಅವರು ಆಯೋಜಕರು ನನ್ನನ್ನು ಕರೆದಿಲ್ಲ ಬರಲ್ಲ ಎಂದರು. ಜೂ.25ಕ್ಕೆ ಭೇಟಿ ಮಾಡುತ್ತೇನೆ ಎಂದಿದ್ದಾರೆ ಎಂದು ಹೇಳಿದರು.
ಸಚಿವ ಹೆಚ್‌ಕೆ ಪಾಟೀಲ್ (HK Patil) ಪತ್ರ ಬರೆದ ವಿಚಾರವಾಗಿ ಮಾತನಾಡಿದ ಅವರು, ಅದು ನಮ್ಮ ಕಾಲದಲ್ಲಿ ನಡೆದಿಲ್ಲ. ವಿಶೇಷ ಕೋರ್ಟ್ ಮಾಡಿ ತ್ವರಿತಗತಿಯಲ್ಲಿ ಇತ್ಯರ್ಥ ಮಾಡಿ ಎಂದಿದ್ದಾರೆ. ಅಕ್ರಮ ಗಣಿಗಾರಿಗೆ ನಡೆಯುತ್ತಿರುವುದಕ್ಕಾಗಿ ಪಾದಯಾತ್ರೆ ಮಾಡಿದ್ದಾರೆ. ಲೋಕಾಯುಕ್ತ ಸಂತೋಷ ಹೆಗಡೆ ವರದಿ ಆಧರಿಸಿ ನಾನು ಅಸೆಂಬ್ಲಿ ಅಲ್ಲಿ ಪ್ರಸ್ತಾಪಿಸಿದ್ದೆ. ಆದರೆ ಅಂದಿನ ಸರ್ಕಾರದಿಂದ ಸರಿಯಾದ ಉತ್ತರ ಬರಲಿಲ್ಲ. ಹೀಗಾಗಿ ನಡೆದುಕೊಂಡೇ ಬರುತ್ತೇನೆ ಅಂತ ಬಳ್ಳಾರಿಗೆ ಪಾದಯಾತ್ರೆ ಮಾಡಿದ್ದೆವು ಎಂದರು.
ದೆಹಲಿಗೆ ತೆರಳಿ ರಾಷ್ಟ್ರಪತಿ ಹಾಗೂ ಪ್ರಧಾನಿಯನ್ನ ಭೇಟಿ ಮಾಡಬೇಕು ಅಂದುಕೊಂಡಿದ್ದೀನಿ. 16ನೇ ಹಣಕಾಸಿನ ಸಂಬಂಧ ಬಿಲ್‌ಗಳು ಬಾಕಿಯಿವೆ. ಅವುಗಳ ಬಗ್ಗೆ ಮಾತನಾಡಲು ನಾಳೆ ರಾಷ್ಟ್ರಪತಿ ಸಮಯ ಕೊಟ್ಟಿದ್ದಾರೆ ಎಂದು ತಿಳಿಸಿದರು.
ರಾಜ್ಯಕ್ಕೆ ಪ್ರಹ್ಲಾದ್ ಜೋಶಿ (Prahlad Joshi) ಏನೆಲ್ಲಾ ಮಾಡಿದ್ದಾರಂತೆ? ಅವರನ್ನು ಪವರ್ ಫುಲ್ ಅಂತಾರೆ, ಪ್ರಧಾನಿಗೆ ಬಹಳ ಹತ್ತಿರವಿದ್ದಾರೆ. 15ನೇ ಹಣಕಾಸಿನಲ್ಲಿ 5,435 ಕೋಟಿ ರೂ. ವಿಶೇಷ ಅನುದಾನ ಶಿಫಾರಸು ಮಾಡಿದ್ದರು. ಶಿಫಾರಸು ಮಾಡಿ ಆಮೇಲೆ ಏನು ಮಾಡಿದರು? ಕರ್ನಾಟಕದ ಬಗ್ಗೆ ಮಾತನಾಡಲು ಅವರಿಗೆ ಯಾವ ನೈತಿಕ ಹಕ್ಕಿದೆ? ಬಿಜೆಪಿಯ ಒಬ್ಬ ಸಂಸದನಾದರೂ ಮಾತನಾಡಿದ್ದಾರಾ? 11,495 ಕೋಟಿ ರೂ. ನಮಗೆ ನಷ್ಟವಾಗಿದೆ. 14 ರಿಂದ 15ನೇ ಹಣಕಾಸು ಯೋಜನೆಗೆ ಲೆಕ್ಕ ಹಾಕಿದರೆ, ರಾಜ್ಯಕ್ಕೆ 89 ಸಾವಿರ ಕೋಟಿ ರೂ. ನಷ್ಟವಾಗಿದೆ ಎಂದು ಜೋಶಿ ವಿರುದ್ಧ ಕಿಡಿಕಾರಿದರು.ಇದನ್ನೂ ಓದಿ: ಸರ್ದಾರ್ ಜಿ 3 ಸಿನಿಮಾ ವಿರುದ್ಧ ಭುಗಿಲೆದ್ದ ಆಕ್ರೋಶ