Tag: CM Stalin

  • 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರ್ನಾಟಕ ಮುಂದಾಗುತ್ತಿದ್ದಂತೆ ಹೊಸೂರಿನಲ್ಲಿ ಏರ್ಪೋರ್ಟ್ ಘೋಷಿಸಿದ ಸ್ಟಾಲಿನ್

    2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರ್ನಾಟಕ ಮುಂದಾಗುತ್ತಿದ್ದಂತೆ ಹೊಸೂರಿನಲ್ಲಿ ಏರ್ಪೋರ್ಟ್ ಘೋಷಿಸಿದ ಸ್ಟಾಲಿನ್

    ಚೆನ್ನೈ: ಹೊಸೂರಿನಲ್ಲಿ (Hosur) ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು (International Airpor) ನಿರ್ಮಿಸುವುದಾಗಿ ತಮಿಳುನಾಡು (Tamil Nadu) ಸಿಎಂ ಸ್ಟಾಲಿನ್ (CM Stalin) ವಿಧಾನಸಭೆಯಲ್ಲಿ ಘೋಷಿಸಿದ್ದಾರೆ. ಪ್ರತಿ ವರ್ಷ 3 ಕೋಟಿ ಪ್ರಯಾಣಿಕರ ಸಂಚಾರ ಸಾಮರ್ಥ್ಯವನ್ನು ಹೊಂದಿರುವ ವಿಮಾನ ನಿಲ್ದಾಣ ಇದಾಗಲಿದ್ದು, 2,000 ಎಕರೆಗಳಷ್ಟು ವಿಸ್ತಾರವಾಗಲಿದೆ ಎಂದು ಅವರು ತಿಳಿಸಿದ್ದಾರೆ.

    ಹೊಸೂರು ಇತ್ತೀಚಿನ ವರ್ಷಗಳಲ್ಲಿ ಹೂಡಿಕೆದಾರರನ್ನು ಆಕರ್ಷಿಸುತ್ತಿದೆ. ಈ ಭಾಗದಲ್ಲಿ ಆಧುನಿಕ ಮೂಲಸೌಕರ್ಯಗಳ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಈ ಮೂಲಕ ಪ್ರಮುಖ ಆರ್ಥಿಕ ಕೇಂದ್ರವನ್ನಾಗಿ ಮಾಡುವ ಗುರಿಯನ್ನು ಸರ್ಕಾರ ಹೊಂದಿದೆ. ಹೊಸೂರು, ಕೃಷ್ಣಗಿರಿ ಮತ್ತು ಧರ್ಮಪುರಿ ಅಭಿವೃದ್ಧಿಗೆ ಹೊಸೂರಿನಲ್ಲಿ ವಿಮಾನ ನಿಲ್ದಾಣ ಸ್ಥಾಪಿಸುವುದು ಅಗತ್ಯವಾಗಿದೆ ಅವರು ತಿಳಿಸಿದ್ದಾರೆ.

    ಕರ್ನಾಟಕ ಸರ್ಕಾರ ಬೆಂಗಳೂರಿನಲ್ಲಿ (Bengaluru) ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಜಾಗದ ಹುಡುಕಾಟ ಪ್ರಾರಂಭಿಸಿದ ನಂತರ ತಮಿಳುನಾಡಿನಿಂದ ಈ ನಿರ್ಧಾರ ಹೊರ ಬಿದ್ದಿದೆ. ಬೆಂಗಳೂರಿನ ತುಮಕೂರು ರಸ್ತೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುವ ಸಾಧ್ಯತೆಯಿದೆ.

    ಹೊಸೂರಿನಲ್ಲಿ ಥಾಲಿ ವಿಮಾನ ನಿಲ್ದಾಣವನ್ನು ಹೊಂದಿರುವ ಮತ್ತು ನಿರ್ವಹಿಸುವ ತನೇಜಾ ಏರೋಸ್ಪೇಸ್ ಮತ್ತು ಏವಿಯೇಷನ್ ಲಿಮಿಟೆಡ್, ಕೇಂದ್ರ ಸರ್ಕಾರ ಮತ್ತು ಬೆಂಗಳೂರು ಇಂಟರ್‌ನ್ಯಾಶನಲ್ ಏರ್ಪೋಟ್ ಲಿಮಿಟೆಡ್ ನಡುವಿನ ರಿಯಾಯಿತಿ ಒಪ್ಪಂದದಿಂದಾಗಿ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಸಾಧ್ಯವಾಗಿಲ್ಲ. ಬೆಂಗಳೂರು ವಿಮಾನ ನಿಲ್ದಾಣದಿಂದ 150 ಕಿಲೋಮೀಟರ್ ವೈಮಾನಿಕ ಅಂತರದಲ್ಲಿ 25 ವರ್ಷಗಳವರೆಗೆ (2033 ರವರೆಗೆ) ಯಾವುದೇ ಹೊಸ ಅಥವಾ ಅಸ್ತಿತ್ವದಲ್ಲಿರುವ ದೇಶೀಯ ವಿಮಾನ ನಿಲ್ದಾಣಗಳನ್ನು ತೆರೆಯುವುದನ್ನು ಈ ಒಪ್ಪಂದವು ನಿಷೇಧಿಸುತ್ತದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು 2008ರ ಮೇ 24 ರಂದು ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು.

    ವಿಮಾನ ನಿಲ್ದಾಣ ನಿರ್ಮಾಣದ ನಿರ್ಧಾರದ ಘೋಷಣೆ ಬಳಿಕ, ಪ್ರತಿಕ್ರಿಯಿಸಿರುವ ತಮಿಳುನಾಡು ಕೈಗಾರಿಕಾ ಸಚಿವ ಟಿಆರ್‌ಬಿ ರಾಜಾ ಅವರು, ಬೆಂಗಳೂರು ಮತ್ತು ಚೆನ್ನೈಗೆ ಸಮೀಪದ ಹೊಸೂರು ಅಭಿವೃದ್ಧಿ ಹೊಂದುತ್ತಿದೆ. ಬೆಳೆಯುತ್ತಿರುವ ಉದ್ಯಮಗಳಿಂದಾಗಿ ಆರ್ಥಿಕತೆ ಉತ್ತೇಜನಕ್ಕೆ ವಿಮಾನ ನಿಲ್ದಾಣ ನೆರವಾಗಲಿದೆ ಎಂದಿದ್ದಾರೆ.

    ಹೊಸೂರಿನಲ್ಲಿ ಹೊಸ ವಿಮಾನ ನಿಲ್ದಾಣದ ಘೋಷಣೆ ಈ ಪ್ರದೇಶಕ್ಕೆ ಒಂದು ಹೆಗ್ಗುರುತಾಗಲಿದೆ. ಈ ಯೋಜನೆಯು ಸಂಪರ್ಕವನ್ನು ಹೆಚ್ಚಿಸುತ್ತದೆ ಮತ್ತು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಹೊಸೂರು ಮಾತ್ರವಲ್ಲದೆ ನೆರೆಯ ಜಿಲ್ಲೆಗಳಾದ ಧರ್ಮಪುರಿ ಮತ್ತು ಸೇಲಂಗೂ ಪ್ರಯೋಜನವಾಗಲಿದೆ. ಬೆಂಗಳೂರಿನ ವಿವಿಧ ಭಾಗಗಳಿಗೆ ಗಮನಾರ್ಹವಾದ ಉತ್ತೇಜನವನ್ನು ನೀಡುತ್ತದೆ ಎಂದು ಅವರು ಹೇಳಿದ್ದಾರೆ.

    ಹೊಸೂರ್ ಎಕ್ಸಿಮ್ ಗೇಟ್‍ವೇಗಳಿಗೆ ಅತ್ಯುತ್ತಮ ಸಂಪರ್ಕವನ್ನು ಹೊಂದಿದೆ. ಚೆನ್ನೈ, ತಿರುವಳ್ಳೂರ್, ಶ್ರೀಪೆರಂಬದೂರ್ ಮತ್ತು ಕೊಯಮತ್ತೂರು ಸೇರಿದಂತೆ ಇತರ ಪ್ರಮುಖ ವ್ಯಾಪಾರ ಕೇಂದ್ರಗಳು ಮತ್ತು ಕೈಗಾರಿಕಾ ಕ್ಲಸ್ಟರ್‍ಗಳಿಗೆ ಸಮೀಪದಲ್ಲಿದೆ. ಈ ಪ್ರದೇಶವು ಆಟೋ ಮತ್ತು ಇವಿ ಉತ್ಪಾದನೆ, ಲಾಜಿಸ್ಟಿಕ್ಸ್ ಸೇರಿದಂತೆ ಐಟಿ ಕೇಂದ್ರವಾಗಿಯೂ ಅಭಿವೃದ್ಧಿ ಹೊಂದುತ್ತಿದೆ. ಟಾಟಾ ಎಲೆಕ್ಟ್ರಾನಿಕ್ಸ್, ಟಿವಿಎಸ್, ಅಶೋಕ್ ಲೇಲ್ಯಾಂಡ್, ಟೈಟಾನ್ ಮತ್ತು ರೋಲ್ಸ್ ರಾಯ್ಸ್ (ಐಎಎಂಪಿಎಲ್) ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿವೆ.

    ವಿಮಾನ ನಿಲ್ದಾಣದ ನಿರ್ಮಾಣದ ಉದ್ದೇಶದಿಂದ, ಬೆಂಗಳೂರು ಮೆಟ್ರೋವನ್ನು ಹೊಸೂರಿಗೆ ವಿಸ್ತರಿಸಲು ತಮಿಳುನಾಡು ಒತ್ತಾಯಿಸುತ್ತಿದೆ. ಬೊಮ್ಮಸಂದ್ರ ಮತ್ತು ಆರ್‍ವಿ ರಸ್ತೆಯನ್ನು ಸಂಪರ್ಕಿಸುವ ಬೆಂಗಳೂರು ಮೆಟ್ರೋದ ಹಳದಿ ಮಾರ್ಗವು ಡಿಸೆಂಬರ್ 2024ರ ವೇಳೆಗೆ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ. ಪ್ರಸ್ತಾವಿತ ಬೊಮ್ಮಸಂದ್ರ-ಹೊಸೂರು ಮೆಟ್ರೋ ಕಾರಿಡಾರ್ ಒಟ್ಟು 20.5 ಕಿಮೀ ವ್ಯಾಪಿಸಿದೆ, ಕರ್ನಾಟಕದಲ್ಲಿ 11.7 ಕಿಮೀ ಮತ್ತು ಉಳಿದ 8.8 ಕಿಮೀ ತಮಿಳುನಾಡಿನಲ್ಲಿ ಇದೆ.

  • ದೇವಾಲಯದ ರಥ ಉರುಳಿ ಬಿದ್ದು ಇಬ್ಬರು ಸಾವು – ನಾಲ್ವರಿಗೆ ಗಾಯ

    ದೇವಾಲಯದ ರಥ ಉರುಳಿ ಬಿದ್ದು ಇಬ್ಬರು ಸಾವು – ನಾಲ್ವರಿಗೆ ಗಾಯ

    ಚೆನ್ನೈ: ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಜನಪ್ರಿಯ ದೇವಸ್ಥಾನದ ಬೃಹತ್ ರಥ ಸೋಮವಾರ ಉರುಳಿಬಿದ್ದು ಇಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.

    ಮೃತ ದುರ್ದೈವಿಯನ್ನು ಸಿ. ಮನೋಹರನ್ (57) ಮತ್ತು ಜಿ. ಸರವಣನ್ (50) ಎಂದು ಗುರುತಿಸಲಾಗಿದೆ. ವೈಕಾಶಿ ಹಬ್ಬದ ಅಂಗವಾಗಿ ಕಾಳಿಯಮ್ಮನ ದೇವಸ್ಥಾನದ 30 ಅಡಿ ಅಲಂಕೃತ ರಥವನ್ನು ದೇವಾಲಯದ ಸುತ್ತಮುತ್ತಲಿನ ಪ್ರಮುಖ ಬೀದಿಗಳಲ್ಲಿ ಎಳೆಯುವ ವೇಳೆ ಈ ಘಟನೆ ಸಂಭವಿಸಿದೆ. ಇದನ್ನೂ ಓದಿ: ಸ್ಟಾಲಿನ್‌ ರಾಜಕೀಯ ಸ್ಟಂಟ್‌ ಮಾಡುತ್ತಿದ್ದಾರೆ: ತಮಿಳುನಾಡು ಸಿಎಂ ವಿರುದ್ಧ ಬೊಮ್ಮಾಯಿ ಕಿಡಿ

    POLICE JEEP

    ರಥ ಕೆಳಗುರುಳಿ ಬಿದ್ದಾಗ ರಥದ ಚಕ್ರದಡಿ ಸಿಲುಕಿದ ಇಬ್ಬರನ್ನು ರಕ್ಷಿಸಲು ಮೆರವಣಿಗೆ ವೀಕ್ಷಿಸುತ್ತಿದ್ದವರು ತಕ್ಷಣ ಧಾವಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ರಥವನ್ನು ಎಳೆಯುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ರಥದ ಚಕ್ರವು ಕೆಳಗುರುಳಿ ಬಿದ್ದಿದ್ದು, ರಥದ ಚಕ್ರದಡಿ ಸಿಲುಕಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಘಟನೆಯಲ್ಲಿ ಗಾಯಗೊಂಡ ಮೂವರನ್ನು ಧರ್ಮಪುರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪಿಜ್ಜಾ ಉದ್ಯೋಗಿಯನ್ನು ಮನಬಂದಂತೆ ಥಳಿಸಿದ ನಾಲ್ವರು ಯುವತಿಯರ ಗುಂಪು

    ಇದೀಗ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರು ಘಟನೆಯಲ್ಲಿ ಸಾವನ್ನಪ್ಪಿರುವವವರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

  • ನಯನತಾರಾ ಮದುವೆಗೆ ಬರಲಿದ್ದಾರೆ ಸಿಎಂ ಸ್ಟಾಲಿನ್

    ನಯನತಾರಾ ಮದುವೆಗೆ ಬರಲಿದ್ದಾರೆ ಸಿಎಂ ಸ್ಟಾಲಿನ್

    ಕಾಲಿವುಡ್ ಲೇಡಿ ಸೂಪರ್ ಸ್ಟಾರ್ ನಯನತಾರಾ ಮತ್ತು ವಿಘ್ನೇಶ್ ಶಿವನ್ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಹಲವು ವರ್ಷಗಳಿಂದ ಪ್ರೀತಿಸಿ ಮದುವೆಯಾದ ಈ ಜೋಡಿ ಈಗ ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಮದುವೆ ದಿನಗಣನೆ ಶುರುವಾಗಿದ್ದು, ಯಾರಿಗೆಲ್ಲ ನಯನಾತಾರಾ ಮದುವೆಗೆ ಆಮಂತ್ರಣವಿದೆ ಯಾರೆಲ್ಲ ಈ ಮದುವೆಗೆ ಸಾಕ್ಷಿಯಾಗಲಿದ್ದಾರೆ ಎಂಬುದೇ ವಿಶೇಷ.

    ಕಾಲಿವುಡ್‌ನ ಮುದ್ದಾದ ಜೋಡಿಗಳಲ್ಲಿ ಒಂದಾಗಿರೋ ನಯನತಾರಾ ಮತ್ತು ವಿಘ್ನೇಶ್ ಶಿವನ್ ೭ ವರ್ಷಗಳ ಡೇಟಿಂಗ್ ನಂತರ ಈಗ ಗುರು ಹಿರಿಯರ ಸಮ್ಮುಖದಲ್ಲಿ ಜೂನ್ 9ರಂದು ತಿರುಪತಿ ಸನ್ನಿಧಿಯಲ್ಲಿ ಹಸೆಮನೆ ಏರಲು ಸಜ್ಜಾಗಿದ್ದಾರೆ. ಆಪ್ತರಿಗೆ ಈಗಾಗಲೇ ಆಹ್ವಾನಿಸುವುದರಲ್ಲಿ ಬ್ಯುಸಿಯಿರೋ ಈ ಜೋಡಿ ಈಗ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರಿಗೂ ಮದುವೆಗೆ ಆಮಂತ್ರಣ ನೀಡಿದ್ದಾರೆ. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಇದನ್ನೂ ಓದಿ: ಮೂಸೆವಾಲಾ ರೀತಿಯಲ್ಲೇ ಹತ್ಯೆ ಮಾಡೋದಾಗಿ ಸಲ್ಮಾನ್‌ಖಾನ್‌ಗೆ ಬೆದರಿಕೆ – ಕೃಷ್ಣಮೃಗ ಬೇಟೆಯೇ ಮುಳುವಾಯ್ತ?

     

    View this post on Instagram

     

    A post shared by Nayanthara Team (@nayantharateam)

    ಇನ್ನು ನಯನತಾರಾ ಅದ್ದೂರಿ ಮದುವೆಯಲ್ಲಿ ಕಮಲ್ ಹಾಸನ್, ರಜನೀಕಾಂತ್ ಸಮಂತಾ, ವಿಜಯ್ ಸೇತುಪತಿ, ಅನುಷ್ಕಾ ಶೆಟ್ಟಿ, ದಳಪತಿ ವಿಜಯ್ ಸೇರಿದಂತೆ ಸಾಕಷ್ಟು ಗಣ್ಯರಿಗೆ ಆಮಂತ್ರಣ ನೀಡಿಲಾಗಿದೆ. ಇನ್ನು ಮದುವೆಗೆ ಆಪ್ತರಿಗಷ್ಟೇ ಆಹ್ವಾನವಿದೆ. ಮದುವೆ ಪ್ರಸಾರದ ಹಕ್ಕನ್ನು ಓಟಿಟಿ ನೀಡಲಾಗಿದೆ ಎಂನ ಮಾಹಿತಿ ಹೊರಬಿದ್ದಿದೆ. ಇನ್ನು ಮದುವೆ ಸಿದ್ಧತೆ ಭರದಿಂದ ಸಾಗುತ್ತಿದ್ದು, ನೆಚ್ಚಿನ ಜೋಡಿಯ ಮದುವೆ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ.

  • ಭಾರೀ ಮಳೆಗೆ ಗೋಡೆ ಕುಸಿತ – ನಾಲ್ವರು ಮಕ್ಕಳು ಸೇರಿದಂತೆ 9 ಮಂದಿ ಸಾವು

    ಭಾರೀ ಮಳೆಗೆ ಗೋಡೆ ಕುಸಿತ – ನಾಲ್ವರು ಮಕ್ಕಳು ಸೇರಿದಂತೆ 9 ಮಂದಿ ಸಾವು

    ಚೆನ್ನೈ: ಭಾರೀ ಮಳೆಗೆ ಗೋಡೆ ಕುಸಿದು ನಾಲ್ವರು ಮಕ್ಕಳು ಸೇರಿದಂತೆ 9 ಮಂದಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ವೆರು ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.

    ತಮಿಳುನಾಡಿನ ವೆಲ್ಲೂರು ಜಿಲ್ಲೆಯ ಪೆನರ್ಂಪಟ್ಟು ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಘಟನೆ ಕುರಿತಂತೆ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಪೆನರ್ಂಪಟ್ಟು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಇದೀಗ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಹೋರಾಟದಿಂದ ಮೃತಪಟ್ಟ ರೈತರಿಗೆ 25 ಲಕ್ಷ ರೂಪಾಯಿ ಪರಿಹಾರ ಕೊಡಿ: ಸಿದ್ದರಾಮಯ್ಯ

    ಘಟನೆ ಕುರಿತಂತೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದು, ಘಟನೆಯಲ್ಲಿ ಮರತಪಟ್ಟ 9 ಮಂದಿ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಆಂಧ್ರದ ಕಡಪಾದಲ್ಲಿ ಪ್ರವಾಹ – ಮೂವರು ಸಾವು, 30 ಮಂದಿ ನಾಪತ್ತೆ

    ಕಳೆದೊಂದು ವಾರದಿಂದ ತಮಿಳುನಾಡಿನಲ್ಲಿ ನಿರಂತರ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಮಿಳುನಾಡಿನ ಉತ್ತರ ಜಿಲ್ಲೆಗಳಲ್ಲಿ ಶುಕ್ರವಾರವೂ ಕೂಡ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಶಾಲಾ – ಕಾಲೇಜುಗಳಿಗೆ ಸರ್ಕಾರ ರಜೆ ಘೋಷಿಸಿದೆ.

  • ರಜನಿ ಪುತ್ರಿಯಿಂದ ಸಿಎಂ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆ

    ರಜನಿ ಪುತ್ರಿಯಿಂದ ಸಿಎಂ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆ

    ಚೆನ್ನೈ: ಕಾಲಿವುಡ್ ನಟ ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಸೌಂದರ್ಯ ರಜನಿಕಾಂತ್ ಹಾಗೂ ಅವರ ಕುಟುಂಬಸ್ಥರು ತಮಿಳುನಾಡು ಮುಖ್ಯಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಈ ವಿಚಾರವನ್ನು ಸೌಂದರ್ಯ ರಜನಿಕಾಂತ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಸೌಂದರ್ಯ ರಜನಿಕಾಂತ್‍ರವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ನನ್ನ ಮಾವ ಶ್ರೀ ಎಸ್.ಎಸ್. ವನಂಗಮುಡಿ, ಪತಿ ವಿಶಾಗನ್, ಅವರ ಸಹೋದರಿ ಮತ್ತು ನಾನು ಇಂದು ಬೆಳಗ್ಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‍ರವರನ್ನು ಭೇಟಿ ಮಾಡಿ 1 ಕೋಟಿ ರೂವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದೇವೆ ಎಂದು ಹೇಳಿದ್ದಾರೆ.

    ನಟ ಸೂಪರ್ ಸ್ಟಾರ್ ರಜನಿಕಾಂತ್‍ರವರು ಗುರುವಾರ ಕೋವಿಶೀಲ್ಡ್ ಲಸಿಕೆಯ ಎರಡನೇ ಡೋಸ್‍ನನ್ನು ಪಡೆದಿದ್ದರು. ಈ ಫೋಟೋವನ್ನು ಕೂಡ ಸೌಂದರ್ಯ ರಜನಿಕಾಂತ್‍ರವರು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದರು.