Tag: CM Yediurappa

  • ಕೊರೊನಾ 3ನೇ ಅಲೆಗೆ ಸಿದ್ಧತೆ ಮಾಡಿಕೊಳ್ಳಿ: ಸಿಎಂಗೆ ವಿನಯ್ ಗುರೂಜಿ ಸಲಹೆ

    ಕೊರೊನಾ 3ನೇ ಅಲೆಗೆ ಸಿದ್ಧತೆ ಮಾಡಿಕೊಳ್ಳಿ: ಸಿಎಂಗೆ ವಿನಯ್ ಗುರೂಜಿ ಸಲಹೆ

    ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬರುವ ಹೊತ್ತಿನಲ್ಲೆ 3ನೇ ಅಲೆಗೂ ರಾಜ್ಯ ಸರ್ಕಾರ ಸಕಲ ಸಿದ್ಧತೆಗಳನ್ನ ಮಾಡಿಕೊಳ್ಳಬೇಕು ಅಂತ ಅವಧೂತ ವಿನಯ್ ಗುರೂಜಿ ಸಿಎಂ ಯಡಿಯೂರಪ್ಪರಿಗೆ ಸಲಹೆ ನೀಡಿದ್ದಾರೆ.

    ಮುಖ್ಯಮಂತ್ರಿಗಳ ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ ವಿನಯ್ ಗುರೂಜಿ, 3ನೇ ಅಲೆ ಸಾಕಷ್ಟು ತೊಂದರೆ ಕೊಡುತ್ತೆ ಅಂತ ವಿಜ್ಞಾನ ವಲಯ ಹೇಳುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಎಚ್ಚರ ತಪ್ಪದೆ ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು. ಎರಡನೇ ಅಲೆಯಲ್ಲಿ ಆದ ಸಮಸ್ಯೆ ಆಗದಂತೆ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಅಂತ ಸಲಹೆ ನೀಡಿದರು. ಇದಲ್ಲದೆ ಪ್ರತಿ ತಾಲೂಕಿಗೂ ಒಂದೊಂದು ಮಲ್ಪಿ ಸ್ಪೆಷಲ್ ಆಸ್ಪತ್ರೆಗಳನ್ನು ಸರ್ಕಾರ ಪ್ರಾರಂಭ ಮಾಡಬೇಕು ಅಂತ ಮನವಿ ಮಾಡಿದ್ರು.

    ಇದೇ ವೇಳೆ ತಮ್ಮ ಜಿಲ್ಲೆಯ ಕೆಲ ಸಮಸ್ಯೆಗಳನ್ನ ಪರಿಹಾರ ಮಾಡುವಂತೆ ವಿನಯ್ ಗುರೂಜಿ ಅವರು ಸಿಎಂ ಯಡಿಯೂರಪ್ಪಗೆ ಮನವಿ ಮಾಡಿದರು. ಮಲೆನಾಡು ಸೇರಿದಂತೆ ಹಲವು ಕಡೆ ಅಂತರ್ಜಲದ ಮಟ್ಟ ಕುಸಿದಿದೆ. ನೀಲಗಿರಿ, ಅಕೇಶಿಯ ಪ್ಲಾಂಟೇಶ್ ನಿಂದ ಸಾಕಷ್ಟು ಸಮಸ್ಯೆ ಆಗಿದೆ. ಹೀಗಾಗಿ ಅಕೇಶಿಯಾ ಮತ್ತು ನೀಲಗಿರಿ ಮಗಳನ್ನ ತೆಗೆದು ಹಣ್ಣಿನ ಗಿಡಗಳನ್ನ ಬೆಳಿಸಿದ್ರೆ ಪ್ರಾಣಿ-ಪಕ್ಷಿಗಳಿಗೆ ಅನುಕೂಲ ಆಗುತ್ತೆ ಅಂತ ಮನವಿ ಮಾಡಿದರು.  ಇದನ್ನೂ ಓದಿ: ಪ್ರಯಾಣಿಕರ ಪಾಸ್ ಅವಧಿ ವಿಸ್ತರಿಸಿದ ಬಿಎಂಟಿಸಿ

    ಇದೇ ವೇಳೆ ಕೊಪ್ಪದಲ್ಲಿ ಇರೋ ಆಸ್ಪತ್ರೆಯನ್ನ ಮೇಲ್ದರ್ಜೆ ಏರಿಸಬೇಕು. ಕೊಪ್ಪದಿಂದ ಶಿವಮೊಗ್ಗ ಬರೋದಕ್ಕೆ ಒಂದೂವರೆ ಗಂಟೆಯಾಗುತ್ತೆ. ಇದ್ರಿಂದ ಸಾಕಷ್ಟು ಸಮಸ್ಯೆ ಆಗ್ತಿದೆ. ಹೀಗಾಗಿ ಅಲ್ಲಿನ ಆಸ್ಪತ್ರೆಯನ್ನ ಮೇಲ್ದರ್ಜೆಗೆ ಏರಿಸಬೇಕು ಅಂತ ಮನವಿ ಮಾಡಿಕೊಂಡರು. ಇದನ್ನೂ ಓದಿ: ಸೋಮವಾರದಿಂದ ಹೊಸ ರೂಲ್ಸ್, ಹೊಸ ಲೈಫ್ – ಅನ್‍ಲಾಕ್ 2.Oಗೆ ಬೆಂಗಳೂರಿಗರ ಸಿದ್ಧತೆ

  • ತಾಕತ್ತಿದ್ರೆ ಸಂಪೂರ್ಣ ಗೋಮಾಂಸ ರಫ್ತು ನಿಷೇಧಿಸಿ: ಸಿದ್ದರಾಮಯ್ಯ ಚಾಲೆಂಜ್

    ತಾಕತ್ತಿದ್ರೆ ಸಂಪೂರ್ಣ ಗೋಮಾಂಸ ರಫ್ತು ನಿಷೇಧಿಸಿ: ಸಿದ್ದರಾಮಯ್ಯ ಚಾಲೆಂಜ್

    – ಗೋ ಹತ್ಯೆ ನಿಷೇಧ ಮಸೂದೆ ಹಿಂದೆ 2 ದುರುದ್ದೇಶ
    – ಬಿಜೆಪಿ ಆಡಳಿತ ಇರುವ ಗೋವಾದಲ್ಲಿ ಏಕಿಲ್ಲ ಮಸೂದೆ?

    ಬೆಂಗಳೂರು: ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಗೋ ಹತ್ಯೆ ನಿಷೇಧ ಮಸೂದೆ ಜಾರಿಗೆ ತಂದಿರೋದಕ್ಕೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಮಗೆ ತಾಕತ್ತಿದ್ರೆ ಗೋಮಾಂಸ ರಫ್ತುಮಾಡುವುದನ್ನು ಸಂಪೂರ್ಣ ನಿಷೇಧಿಸಿ ಎಂದು ಓಪನ್ ಚಾಲೆಂಜ್ ಹಾಕಿದ್ದಾರೆ. ಗೋ ಹತ್ಯೆ ನಿಷೇಧ ಮಸೂದೆ ಬಗ್ಗೆ ಸಾಲು ಸಾಲು ಟ್ವೀಟ್ ಗಳ ಮೂಲಕ ಸಿದ್ದರಾಮಯ್ಯನವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಮಸೂದೆ ಹಿಂದೆ ಎರಡು ದುರುದ್ದೇಶ: ವಿಧಾನಮಂಡಲದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ಚರ್ಚೆಯನ್ನೇ ಮಾಡದೆ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವುದು ಸರ್ಕಾರದ ಹೇಡಿತನವನ್ನು ತೋರಿಸುತ್ತದೆ. ಚರ್ಚೆ ಮಾಡಿದರೆ ಈ ಮಸೂದೆಯ ಹಿಂದಿನ ದುರುದ್ದೇಶಗಳು ಅನಾವರಣಗೊಂಡು ತಮ್ಮ ಬಣ್ಣ ಬಯಲಾಗುತ್ತದೆ ಎಂಬ ಭಯ ಬಿಜೆಪಿ ನಾಯಕರಿಗೆ. ಮತೀಯ ಭಾವನೆಗಳನ್ನು ಕೆರಳಿಸಿ ರಾಜಕೀಯ ಲಾಭ ಪಡೆಯಬೇಕು ಮತ್ತು ಗೋರಕ್ಷಣೆಯ ಹೆಸರಲ್ಲಿ ಪುಂಡಾಟಿಕೆ ನಡೆಸುವವರಿಗೆ ರಕ್ಷಣೆ ಕೊಡಬೇಕು ಎಂಬ ಎರಡು ದುರುದ್ದೇಶಗಳನ್ನು ಬಿಟ್ಟರೆ ಗೋಹತ್ಯೆ ನಿಷೇಧ ಮಸೂದೆಗೆ ಗೋವಿನ ಬಗ್ಗೆ ಭಕ್ತಿಯಾಗಲಿ, ಕಾಳಜಿಯಾಗಲಿ ಇಲ್ಲ.

    ಇಷ್ಟೆಲ್ಲ ನಾಟಕ ಮಾಡಬೇಕೇ?: ಗೋಹತ್ಯೆಗೆ ನಿಷೇಧವಂತೆ, ಗೋಮಾಂಸ ಮಾರಾಟ ಮತ್ತು ಸೇವನೆಗೆ ನಿರ್ಬಂಧ ಇಲ್ಲವಂತೆ. ಇಂತಹದ್ದೊಂದು ಎಡಬಿಡಂಗಿ ಕಾನೂನು ಮಾಡಲು ಇಷ್ಟೆಲ್ಲ ನಾಟಕ ಮಾಡಬೇಕೇ? ಮುಖ್ಯಮಂತ್ರಿ ಯಡಿಯೂರಪ್ಪ ಅವರೇ, ಮಾರಾಟ ಮಾಡಲು ಗೋಮಾಂಸವನ್ನು ಆಮದು ಮಾಡಿಕೊಳ್ತಿರಾ? ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಿಂದಾಗಿ ರೈತರು ಮಾತ್ರ ಅಲ್ಲ, ಚರ್ಮದ ಉತ್ಪನ್ನಗಳ ತಯಾರಿಕೆಗೆ ಚರ್ಮದ ಕೊರತೆ ಎದುರಾಗಲಿದ್ದು, ಉತ್ಪಾದನೆ ಕುಂಠಿತಗೊಳ್ಳಲಿದೆ. ಇದರಿಂದ ನೇರವಾಗಿ ಮತ್ತು ಪರೋಕ್ಷವಾಗಿ ಈ ಕಸುಬನ್ನು ನಂಬಿ ಬದುಕುತ್ತಿರುವ ಸಾವಿರಾರು ಕುಟುಂಬಗಳು ಉದ್ಯೋಗ ಕಳೆದುಕೊಂಡು ಬೀದಿಪಾಲಾಗಲಿವೆ.

    ಗೋ ಶಾಲೆಗಳು ಎಷ್ಟಿವೆ?: ಒಂದು ದೇಶ, ಒಂದು ಧರ್ಮ, ಒಂದು ಭಾಷೆ ಎಂದೆಲ್ಲ ಹೇಳುವವರು ಕನಿಷ್ಠ ದೇಶಕ್ಕೆಲ್ಲ ಅನ್ವಯವಾಗುವಂತಹ ಸಮಾನ ಗೋಹತ್ಯೆ ನಿಷೇಧ ಕಾನೂನು ತರಬಾರದೇಕೆ? ನಿಮಗೆ ತಾಕತ್ತಿದ್ದರೆ ಬಿಜೆಪಿ ಆಡಳಿತ ಇರುವ ಗೋವಾ, ಈಶಾನ್ಯ ರಾಜ್ಯಗಳಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತನ್ನಿ. ಗೋಮಾಂಸ ರಫ್ತುಮಾಡುವುದನ್ನು ಸಂಪೂರ್ಣ ನಿಷೇಧಿಸಿ. ವಯಸ್ಸಾದ ಹಸುಗಳ ಪಾಲನೆಯ ಜವಾಬ್ದಾರಿಯನ್ನು ರಾಜ್ಯ ಸರ್ಕಾರವೇ ಹೊರಲಿದೆ ಎಂದು ಹೇಳಿದ್ದೀರಿ. ರಾಜ್ಯದಲ್ಲಿ ಎಷ್ಟು ಸರ್ಕಾರವೇ ನಡೆಸುತ್ತಿರುವ ಗೋಶಾಲೆಗಳಿವೆ? ಎಷ್ಟು ಹೊಸ ಗೋಶಾಲೆಗಳನ್ನು ತೆರೆಯಲಿದ್ದೀರಿ? ಇದಕ್ಕಾಗಿ ಎಷ್ಟು ಹಣ ಒದಗಿಸಿದ್ದೀರಿ? ಈ ವಿವರಗಳನ್ನು ಮೊದಲು ಬಹಿರಂಗಪಡಿಸಿ.