Tag: CM Yogi Adithyanath

  • 28 ಲಕ್ಷಕ್ಕೂ ಹೆಚ್ಚು ದೀಪಗಳಿಂದ ಬೆಳಗಿದ ರಾಮಜನ್ಮಭೂಮಿ- 2 ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಬರೆದ ದೀಪೋತ್ಸವ

    28 ಲಕ್ಷಕ್ಕೂ ಹೆಚ್ಚು ದೀಪಗಳಿಂದ ಬೆಳಗಿದ ರಾಮಜನ್ಮಭೂಮಿ- 2 ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಬರೆದ ದೀಪೋತ್ಸವ

    – ಸರಯು ಘಾಟ್‌ನಲ್ಲಿ 1,100 ಜನರಿಂದ ಆರತಿ

    ಲಕ್ನೋ: ಅಯೋಧ್ಯೆಯ (Ayodhya) ರಾಮಮಂದಿರ ಇಂದು ಸುಮಾರು 28 ಲಕ್ಷಕ್ಕೂ ಹೆಚ್ಚಿನ ದೀಪಗಳಿಂದ ಬೆಳಗಿದೆ. ಆರತಿಯ ಸಮಯದಲ್ಲಿ 1,100 ಕ್ಕೂ ಹೆಚ್ಚು ಜನರು ಸರಯು ಘಾಟ್‌ನಲ್ಲಿ ಒಟ್ಟಾಗಿ ಆರತಿಯನ್ನು ಮಾಡುವ ಮೂಲಕ ಎರಡು ಗಿನ್ನಿಸ್ ವರ್ಲ್ಡ್ ರೆಕಾರ್ಡ್ (Guinness World Record) ದಾಖಲೆಯನ್ನು ಬರೆದಿದ್ದು, ಸಿಎಂ ಯೋಗಿ ಆದಿತ್ಯನಾಥ್ (Yogi Adithyanath) ಪ್ರಮಾಣ ಪತ್ರವನ್ನು ಸ್ವೀಕರಿಸಿದ್ದಾರೆ.

    ಅಯೋಧ್ಯೆಯ ರಾಮಮಂದಿರದ ಪ್ರಾಣಪ್ರತಿಷ್ಠೆಯ ನಂತರ ಇದು ಮೊದಲ ದೀಪೋತ್ಸವವಾಗಿದೆ. ಕಾರ್ಯಕ್ರಮದಲ್ಲಿ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಗಣ್ಯರು ಭಾಗಿಯಾಗಿದ್ದರು. 500 ವರ್ಷಗಳ ಬಳಿಕ ಅಯೋಧ್ಯೆಯ ರಾಮಲಲ್ಲಾನ ಜನ್ಮಸ್ಥಳದಲ್ಲಿ ನಿರ್ಮಿಸಲಾದ ದೇವಾಲಯವನ್ನು ಸಾವಿರಾರು ದೀಪಗಳಿಂದ ಬೆಳಗಿಸುವ ಮೂಲಕ ಈ ವರ್ಷದ ದೀಪಾವಳಿಯು ಐತಿಹಾಸಿಕವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದರು. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ – A8 ಆರೋಪಿ ರವಿಶಂಕರ್ ಬಿಡುಗಡೆ

    ಎರಡು ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಬರೆದ ದೀಪೋತ್ಸವ:
    ಗಿನ್ನೆಸ್ ವರ್ಲ್ಡ್ ರೆಕಾರ್ಡ್ ತಂಡವು ದೀಪೋತ್ಸವದ ಮೇಲ್ವಿಚಾರಣೆಯನ್ನು ನಡೆಸಿದ್ದು, ಇದೀಗ ಎರಡು ದಾಖಲೆಗಳನ್ನು ಅಯೋಧ್ಯೆ ದೀಪಾವಳಿ ಬರೆದಿದೆ. 1,100 ಜನರ ಸರಯು ಆರತಿ ಮತ್ತು 28 ಲಕ್ಷಕ್ಕೂ ಅಧಿಕ ದೀಪಗಳನ್ನು ಬೆಳಗಿಸುವ ಮೂಲಕ ಇದು ರಾಮಮಂದಿರ ನಿರ್ಮಾಣದ ನಂತರದ ಮೊದಲ ದೀಪೋತ್ಸವವಾಗಿದೆ. ಮಂಗಳವಾರ, ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಸಲಹೆಗಾರ ನಿಶ್ಚಲ್ ಬರೋಟ್ ನೇತೃತ್ವದ 30 ಸದಸ್ಯರ ತಂಡವು ಡ್ರೋನ್‌ಗಳನ್ನು ಬಳಸಿಕೊಂಡು ಸರಯುವಿನ 55 ಘಾಟ್‌ಗಳಲ್ಲಿ ದಿಯಾಗಳನ್ನು ಎಣಿಸಲು ಪ್ರಾರಂಭಿಸಿದ್ದರು. ಇದನ್ನೂ ಓದಿ: ರೈತರ ಆಸ್ತಿ ವಕ್ಫ್ ಪಾಲಾಗುತ್ತಿದೆ ಎಂಬುದು ತಪ್ಪು ಕಲ್ಪನೆ: ಹೆಚ್.ಕೆ ಪಾಟೀಲ್
    ರಾಮಾಯಣದ ಘಟನೆಗಳನ್ನು ಚಿತ್ರಿಸುವ ಲೇಸರ್ ಮತ್ತು ಡ್ರೋನ್ ಪ್ರದರ್ಶನ ಕೂಡ ನಡೆಯಿತು. ಈ ಆಚರಣೆಯು ಆರು ದೇಶಗಳನ್ನು ಪ್ರತಿನಿಧಿಸುವ ಮ್ಯಾನ್ಮಾರ್, ನೇಪಾಳ, ಥೈಲ್ಯಾಂಡ್, ಮಲೇಷ್ಯಾ, ಕಾಂಬೋಡಿಯಾ ಮತ್ತು ಇಂಡೋನೇಷ್ಯಾವನ್ನು ಪ್ರತಿನಿಧಿಸುವ ಕಲಾವಿದರಿಂದ ಸಾಂಸ್ಕೃತಿಕ ಪ್ರದರ್ಶನಗಳನ್ನು ಒಳಗೊಂಡಿತ್ತು. ಹಾಗೆಯೇ ಉತ್ತರಾಖಂಡದ ರಾಮ್ ಲೀಲಾ ಪ್ರಸ್ತುತಿ ಕೂಡ ನಡೆಯಿತು. ಇದನ್ನೂ ಓದಿ: ಬ್ರಿಟನ್‌ ಕಿಂಗ್ ಚಾರ್ಲ್ಸ್ ದಂಪತಿಯಿಂದ ಬೆಂಗಳೂರಿಗೆ 4 ದಿನದ ರಹಸ್ಯ ಭೇಟಿ – ಇಂದು ವಾಪಸ್

    ಸಾರ್ವಜನಿಕ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು, ಸರಿಸುಮಾರು 10,000 ಭದ್ರತಾ ಸಿಬ್ಬಂದಿಯನ್ನು ನಗರದಾದ್ಯಂತ ನಿಯೋಜಿಸಲಾಗಿದೆ. ವಿಶೇಷ ವ್ಯವಸ್ಥೆಯಲ್ಲಿ 80,000 ದಿಯಾಗಳನ್ನು ಸ್ವಸ್ತಿಕದ ಆಕಾರದಲ್ಲಿ ಘಾಟ್ ನಂ. 10, ಮಂಗಳಕರ ಸಂಕೇತ ಮತ್ತು ಈವೆಂಟ್‌ನ ಕೇಂದ್ರ ಆಕರ್ಷಣೆ.

    ಭದ್ರತಾ ಕ್ರಮಗಳಲ್ಲಿ ರಾಮ್ ಕಿ ಪೈಡಿಗೆ ಹೋಗುವ 17 ಮಾರ್ಗಗಳನ್ನು ಮುಚ್ಚಲಾಗಿದೆ. ಪಾಸ್ ಹೊಂದಿರುವವರಿಗೆ ಮಾತ್ರ ಪ್ರವೇಶವನ್ನು ಅನುಮತಿಸಲಾಗಿದೆ. ರಾಮಾಯಣದ ರೋಮಾಂಚಕ ಟ್ಯಾಬ್ಲೋ ಹೊಂದಿರುವ ಮೆರವಣಿಗೆಯು ದೇವಾಲಯದ ಪಟ್ಟಣದ ಮೂಲಕ ಸಾಗಿತು. ರಾಮ, ಸೀತೆ, ಲಕ್ಷ್ಮಣ ಮತ್ತು ಹನುಮಾನ್ ಪಾತ್ರಧಾರಿ ಕಲಾವಿದರು ಕುಳಿತಿದ್ದ ರಥವನ್ನು ಯೋಗಿ ಆದಿತ್ಯನಾಥ್ ಅವರು ಆರತಿ ಬೆಳಗುವುದರೊಂದಿಗೆ ಬರಮಾಡಿಕೊಂಡರು. ಇದನ್ನೂ ಓದಿ: ವಯಸ್ಸಿನ ಅಂತರವಿಲ್ಲದೇ ಆಚರಿಸುವ ಹಬ್ಬ ದೀಪಾವಳಿ!

    ರಾಮಾಯಣದಲ್ಲಿ ಉಲ್ಲೇಖಿಸಲಾದ ಪೌರಾಣಿಕ ಪುಷ್ಪಕ ವಿಮಾನಕ್ಕೆ ನಮನ ಸಲ್ಲಿಸಲು ಪಾತ್ರಗಳನ್ನು ಮೊದಲು ಹೆಲಿಕಾಪ್ಟರ್‌ನಲ್ಲಿ ಅಯೋಧ್ಯೆಗೆ ಕರೆತರಲಾಯಿತು. ಪ್ರವಾಸೋದ್ಯಮ ಇಲಾಖೆಯ ಸ್ತಬ್ಧಚಿತ್ರವು ತುಳಸಿದಾಸರ ರಾಮಚರಿತಮಾನಸದಿಂದ ತೆಗೆದ ಬಾಲ್‌ಕಾಂಡ್, ಅಯೋಧ್ಯಾಕಾಂಡ್, ಅರಣ್ಯಕಾಂಡ್, ಕಿಷ್ಕಿಂಧಾ ಕಾಂಡ್, ಸುಂದರ್ ಕಾಂಡ್, ಲಂಕಾಕಾಂಡ್ ಮತ್ತು ಉತ್ತರ ಕಾಂಡದ ದೃಶ್ಯಗಳನ್ನು ಚಿತ್ರಿಸಿದೆ. ಇದನ್ನೂ ಓದಿ: ಭಾರತ-ಚೀನಾ ಸೇನಾ ವಾಪಸಾತಿ ಪ್ರಕ್ರಿಯೆ ಪೂರ್ಣ – ದೀಪಾವಳಿಯಂದು ಉಭಯ ದೇಶಗಳ ಸೈನಿಕರಿಂದ ಸಿಹಿ ವಿನಿಮಯ

    ರಾಮನ ಜೀವನದ ಪ್ರಮುಖ ಘಟನೆಗಳನ್ನು ವಿವರಿಸಿದ ವಿಶೇಷ ಪ್ರದರ್ಶನಗಳು, ಅವನ ಶಿಕ್ಷಣ, ಸೀತೆಯೊಂದಿಗಿನ ವಿವಾಹ, 14 ವರ್ಷಗಳ ವನವಾಸ, ಭಾರತ್ ಮಿಲಾಪ್, ಶಬರಿಯ ಭಕ್ತಿ, ಹನುಮಂತನ ಲಂಕಾ ಪ್ರಯಾಣ, ರಾವಣನ ಸೋಲು ಮತ್ತು ಅಯೋಧ್ಯೆಗೆ ಮತ್ತೆ ಅವನ ಆಗಮನ ಕುರಿತ ಮೆರವಣಿಗೆಯು ಎಲ್ಲರ ಕಣ್ಮನ ಸೆಳೆಯಿತು. ಇದನ್ನೂ ಓದಿ: ವಿಜಯಪುರ ವಕ್ಫ್ ವಿವಾದ – ರೈತರ ಹೋರಾಟಕ್ಕೆ ಜಯ, ನೋಟಿಸ್ ಹಿಂಪಡೆದ ಜಿಲ್ಲಾಡಳಿತ

  • ಸಿಎಂ ಯೋಗಿ ಆದಿತ್ಯನಾಥ್ ಜೊತೆ ‘ಜೈಲರ್’ ಸಿನಿಮಾ ವೀಕ್ಷಿಸಲಿರುವ ತಲೈವಾ

    ಸಿಎಂ ಯೋಗಿ ಆದಿತ್ಯನಾಥ್ ಜೊತೆ ‘ಜೈಲರ್’ ಸಿನಿಮಾ ವೀಕ್ಷಿಸಲಿರುವ ತಲೈವಾ

    ಕಾಲಿವುಡ್ ನಟ ರಜನಿಕಾಂತ್ (Rajanikanth) ಅವರು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಜೊತೆ ಇಂದು (ಆಗಸ್ಟ್ 19) ಜೈಲರ್ (Jailer) ಚಿತ್ರವನ್ನ ವೀಕ್ಷಿಸಲಿದ್ದಾರೆ. ಲಕ್ನೋದಲ್ಲಿ ಸಿಎಂ ಮತ್ತು ಅಭಿಮಾನಿಗಳ ಜೊತೆಗೆ ‘ಜೈಲರ್’ ಸಿನಿಮಾ ವೀಕ್ಷಣೆ ಮಾಡಲಿದ್ದಾರೆ.

    ತಲೈವಾ-ಶಿವಣ್ಣ ಕಾಂಬೋ ‘ಜೈಲರ್’ (Jailer) ಸಿನಿಮಾ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ತಲೈವಾ ಸಿನಿಮಾವನ್ನ ಒಪ್ಪಿ ಜನ ಮೆಚ್ಚಿಕೊಂಡಿದ್ದಾರೆ. ಸದ್ಯ ಸಿನಿಮಾ ಪ್ರಚಾರಕ್ಕಾಗಿ ಲಕ್ನೋದಲ್ಲಿ ತಲೈವಾ ಬೀಡು ಬಿಟ್ಟಿದ್ದಾರೆ. ಯುಪಿ ಸಿಎಂ ಯೋಗಿ ಆದಿತ್ಯನಾಥ್ ಜೊತೆ ಇಂದು ಸಂಜೆ 7ಕ್ಕೆ ‘ಜೈಲರ್’ ಸಿನಿಮಾ ನೋಡೋದು ಫಿಕ್ಸ್ ಆಗಿದೆ. ಅಷ್ಟೇ ಅಲ್ಲ, ಇದೀಗ ರಾಜ್ಯಪಾಲರಾದ ಆನಂದಿಬೇನ್ ಪಟೇಲ್ ಅವರನ್ನು ಕೂಡ ತಲೈವಾ ಭೇಟಿಯಾಗಿದ್ದಾರೆ.

    ಇಂದು ಸಿಎಂ ಜೊತೆಗೆ ಸಿನಿಮಾ ವೀಕ್ಷಣೆಯ ನಂತರ ನಾಳೆ (ಆಗಸ್ಟ್ 20) ಅಯೋಧ್ಯೆಗೆ ತಲೈವಾ ಭೇಟಿ ನೀಡಲಿದ್ದಾರೆ. ನಿರ್ಮಾಣ ಹಂತದ ದೇವಸ್ಥಾನವನ್ನ ನಟ ವೀಕ್ಷಣೆ ಮಾಡಲಿದ್ದಾರೆ. ಬಳಿಕ ಶ್ರೀರಾಮನ ದರ್ಶನ ಪಡೆಯಲಿದ್ದಾರೆ. ಇದನ್ನೂ ಓದಿ:ಪ್ರಭಾಸ್ ಮುಂದಿನ ಚಿತ್ರಕ್ಕೆ ನಾಯಕಿಯಾದ ಬೆಂಗಳೂರಿನ ಬೆಡಗಿ

    ಜೈಲರ್ ಸಿನಿಮಾದಲ್ಲಿ ತಲೈವಾಗೆ ಶಿವಣ್ಣ, ಮೋಹನ್ ಲಾಲ್, ಜಾಕಿ ಶ್ರಾಫ್ ಸಾಥ್ ನೀಡಿದ್ದಾರೆ. ಸಿನಿಮಾ ಕಥೆ, ಡೈಲಾಗ್, ಸಾಂಗ್ಸ್ ಎಲ್ಲವೂ ಫ್ಯಾನ್ಸ್‌ಗೆ ಮೋಡಿ ಮಾಡಿದೆ. ಆಗಸ್ಟ್ 10ಕ್ಕೆ ರಿಲೀಸ್ ಆಗಿದ್ದು, 350 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಈ ಮೂಲಕ ಭರ್ಜರಿ ಕಲೆಕ್ಷನ್ ಮಾಡ್ತಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉಚಿತ ಊಟ ನೀಡಲು ಮುಂದಾದ ಯೋಗಿ ಸರ್ಕಾರ

    ಉಚಿತ ಊಟ ನೀಡಲು ಮುಂದಾದ ಯೋಗಿ ಸರ್ಕಾರ

    ಲಕ್ನೋ: ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್, ಉತ್ತರ ಪ್ರದೇಶದಲ್ಲಿ ಉಚಿತ ಪಡಿತರ ನಂತರ, ಉಚಿತ ಊಟ ನೀಡಲು ಸರ್ಕಾರ ಸಿದ್ಧತೆ ಮಾಡಲಾಗುತ್ತಿದೆ.

    ಯೋಗಿ ಆದಿತ್ಯನಾಥ್ ಮೊದಲ ಸಂಪುಟ ಸಭೆಯಲ್ಲಿ ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸಿದ್ದರು. ಇದೀಗ ಬಡವರು ಮತ್ತು ವಂಚಿತರಿಗೆ ಉಚಿತ ಅಥವಾ ಹೆಚ್ಚಿನ ಸಬ್ಸಿಡಿಯೊಂದಿಗೆ ಊಟ ನೀಡುವ ಸಲುವಾಗಿ ರಾಜ್ಯಾದ್ಯಂತ ಸಮುದಾಯ ಅಡುಗೆಮನೆಗಳನ್ನು ಸ್ಥಾಪಿಸುವ ಯೋಜನೆ ಹೋದಿದ್ದಾರೆ.

    ಉತ್ತರ ಪ್ರದೇಶ ಸರ್ಕಾರ 2020ರಿಂದ ಪ್ರತಿ ತಿಂಗಳು 15 ಕೋಟಿ ಫಲಾನುಭವಿಗಳಿಗೆ ಉಚಿತ ಪಡಿತರವನ್ನು ವಿತರಿಸುತ್ತಿದೆ. ಈ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ 1 ಕೆಜಿ ಸಂಪೂರ್ಣ ಚನಾ, 1 ಲೀಟರ್ ಅಡಿಗೆ ಎಣ್ಣೆ, 1 ಕೆಜಿ ಉಪ್ಪು ಜೊತೆಗೆ 5 ಕೆಜಿ ಗೋಧಿ ಮತ್ತು ಅಕ್ಕಿಯನ್ನು ಒಳಗೊಂಡ ಪ್ಯಾಕ್ ನೀಡಲಾಗುತ್ತಿದೆ.

    ಉಚಿತ ಊಟ: ಅಧಿಕೃತ ಮೂಲಗಳ ಪ್ರಕಾರ, ಯೋಗಿ ಸರ್ಕಾರವು ಬಡವರಿಗೆ ಉಚಿತವಾಗಿ ಅಥವಾ ಅತ್ಯಲ್ಪ ಬೆಲೆಯಲ್ಲಿ ಬೇಯಿಸಿದ ಪೌಷ್ಟಿಕಾಂಶದ ಆಹಾರವನ್ನು ಒದಗಿಸಲು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಮುದಾಯ ಅಡುಗೆ ಮನೆಗಳನ್ನು ಸ್ಥಾಪಿಸಲು ಸಿದ್ಧತೆ ನಡೆಸಿದೆ. ಈ ಸಂಬಂಧ ಈ ವಾರದಲ್ಲೇ ಸಂಬಂಧಿಸಿದ ಎಲ್ಲಾ ಇಲಾಖೆಗಳನ್ನು ಒಳಗೊಂಡ ಉನ್ನತ ಮಟ್ಟದ ಸಭೆ ನಡೆಯಲಿದ್ದು, ಯೋಜನೆ ಪ್ರಾರಂಭಿಸುವ ವಿಧಾನಗಳನ್ನು ವಿವರಿಸಲಾಗುವುದು ಮತ್ತು ಸಮುದಾಯ ಅಡುಗೆಮನೆಗಳನ್ನು ನಡೆಸುವಲ್ಲಿ ವಿವಿಧ ಇಲಾಖೆಗಳಿಗೆ ವಿಭಿನ್ನ ಪಾತ್ರಗಳನ್ನು ನೀಡಬಹುದು ಎಂದು ಮೂಲಗಳು ತಿಳಿಸಿವೆ.

  • ಹತ್ರಾಸ್ ಗ್ಯಾಂಗ್‍ರೇಪ್ ಪ್ರಕರಣ ಸಿಬಿಐಗೆ ವರ್ಗಾವಣೆ

    ಹತ್ರಾಸ್ ಗ್ಯಾಂಗ್‍ರೇಪ್ ಪ್ರಕರಣ ಸಿಬಿಐಗೆ ವರ್ಗಾವಣೆ

    ಲಕ್ನೋ: ಹತ್ರಾಸ್ ಪ್ರದೇಶದ ದಲಿತ ಯುವತಿ ಮೇಲಿನ ಗ್ಯಾಂಗ್‍ರೇಪ್ ಪ್ರಕರಣವನ್ನು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಸಿಬಿಐಗೆ ವರ್ಗಾಯಿಸಿದ್ದಾರೆ.

    ಮುಖ್ಯಮಂತ್ರಿಗಳ ಕಚೇರಿ ಟ್ವೀಟ್ ಮೂಲಕ ಈ ಮಾಹಿತಿಯನ್ನು ಖಚಿತ ಪಡಿಸಿದೆ. ವಿಪಕ್ಷಗಳು ಸೇರಿದಂತೆ ದೇಶದ ಜನತೆ ಪ್ರಕರಣದ ತನಿಖೆಯನ್ನು ಸಿಬಿಐನಿಂದ ನಡೆಯಬೇಕೆಂದು ಆಗ್ರಹಿಸಿದ್ದವು. ಆದ್ರೆ ಸಂತ್ರಸ್ತೆಯ ಕುಟುಂಬಸ್ಥರು ಸಿಬಿಐ ತನಿಖೆಗೆ ಆಗ್ರಹಿಸಿರಲಿಲ್ಲ ಎಂದು ವರದಿಯಾಗಿದೆ.

    ಇಂದು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಹತ್ರಾಸ್ ಗ್ರಾಮಕ್ಕೆ ತೆರಳಿ ಸಂತ್ರಸ್ತೆಯ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದರು. ಈ ವೇಳೆ ರಾಹುಲ್ ಗಾಂಧಿ ಕುಟುಂಬಸ್ಥರ ಜೊತೆ ಮಾತನಾಡುವಾಗ, ಸಿಬಿಐ ತನಿಖೆಗೆ ಆಗ್ರಹಿಸುವ ಕುರಿತು ಮಾತನಾಡಿದ್ದರು. ಆದ್ರೆ ಸಂತ್ರಸ್ತೆಯ ಕುಟುಂಬಸ್ಥರು ನ್ಯಾಯಾಂಗ ತನಿಖೆಗೆ ಆಗ್ರಹಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇನ್ನು ಭೇಟಿ ವೇಳೆ ರಾಹುಲ್ ಗಾಂಧಿ ಸಂತ್ರಸ್ತೆಯ ಕುಟುಂಬಕ್ಕೆ ಚೆಕ್ ನೀಡಿದ್ದಾರೆ ಎನ್ನಲಾಗಿದೆ.

    ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಆಗಮನ ಹಿನ್ನೆಲೆ ಸಂತ್ರಸ್ತೆ ಮನೆಯ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ್ದರು. ಮುಂಜಾಗ್ರತ ಕ್ರಮವಾಗಿ ಪೊಲೀಸರು ನಾಯಕರ ಆಗಮನ ಮತ್ತು ನಿರ್ಗಮನಕ್ಕಾಗಿ ತಾತ್ಕಲಿಕ ಮಾರ್ಗ ನಿರ್ಮಿಸಿದ್ದಾರೆ. ಇನ್ನು ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರೇ ಕೊಠಡಿಯಲ್ಲಿ ನಾಯಕರ ಭೇಟಿಗೆ ಪೊಲೀಸರು ಅವಕಾಶ ಕಲ್ಪಿಸಿದ್ದರು.

    ಅಕ್ಟೋಬರ್ 1ರಂದು ಉತ್ತರ ಪ್ರದೇಶದ ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂತ್ರಸ್ತೆಯ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಸಂತ್ವಾನ ಹೇಳಲು ಮುಂದಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಗ್ರೇಟರ್ ನೋಯ್ಡಾ ಬಳಿಯೇ ತಡೆದ ಪೊಲೀಸರು ಬಳಿಕ ವಶಕ್ಕೆ ಪಡೆದಿದ್ದರು.

    ಪ್ರಕರಣ ಸಿಬಿಐಗೆ ವರ್ಗಾವಣೆಯಾಗಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಸಂತ್ರಸ್ತೆಯ ಸೋದರ, ಸುಪ್ರೀಂಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕೆಂದು ನಮ್ಮ ಆಪೇಕ್ಷೆ ಆಗಿತ್ತು. ಆದ್ರೆ ಸಿಬಿಐ ತನಿಖೆಗೂ ನಮ್ಮ ಸಮ್ಮತಿ ಇದೆ ಎಂದು ಹೇಳಿದ್ದಾರೆ. ಈ ಮೊದಲು ಉತ್ತರ ಪ್ರದೇಶ ಸರ್ಕಾರ ತನಿಖೆಯ ಜವಾಬ್ದಾರಿಯನ್ನು ಎಸ್‍ಐಟಿಗೆ ನೀಡಿತ್ತು. ಕಳೆದ ಎರಡ್ಮೂರು ದಿನಗಳಿಂದ ಸಂತ್ರಸ್ತೆಯ ಗ್ರಾಮದಲ್ಲಿ ಬೀಡು ಬಿಟ್ಟಿದ್ದ ಎಸ್‍ಐಟಿ ತಂಡ ಮಹತ್ವದ ಮಾಹಿತಿಗಳನ್ನು ಕಲೆ ಹಾಕಿತ್ತು.

  • 10 ರೂಪಾಯಿಗೆ ಸಿಗಲಿದೆ ಯೋಗಿ ಥಾಲಿ!

    10 ರೂಪಾಯಿಗೆ ಸಿಗಲಿದೆ ಯೋಗಿ ಥಾಲಿ!

    ಲಕ್ನೋ: ಬಡಜನರಿಗೆ ಕಡಿಮೆ ದರದಲ್ಲಿ ಊಟ ಸಿಗುವ ಯೋಜನೆಯನ್ನು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಾರಿಗೆ ತಂದಿದ್ದಾರೆ.

    ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ಖಾಸಗಿ ಸಹಭಾಗಿತ್ವದಲ್ಲಿ ಬಡವರಿಗೆ ಕಡಿಮೆ ದರದಲ್ಲಿ ಊಟವನ್ನು ನೀಡುವ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಪ್ರಾರಂಭಿಕವಾಗಿ ಅಲಹಾಬಾದ್‍ನಲ್ಲಿ 10 ರೂಪಾಯಿಗೆ ಊಟ ನೀಡುವ ಕ್ಯಾಂಟಿನನ್ನು ಆರಂಭಿಸಿದ್ದಾರೆ. ಭಾನುವಾರ ನೂತನ ಕ್ಯಾಂಟಿನನ್ನು  ಮೇಯರ್ ಅಭಿಲಾಷ ಗುಪ್ತಾರವರು ಉದ್ಘಾಟಿಸಿದ್ದಾರೆ. ಈ ಯೋಜನೆಗೆ ಯೋಗಿ ಥಾಲಿ ಎಂದು ಹೆಸರಿಡಲಾಗಿದೆ.

    ಉದ್ಘಾಟನೆಯ ನಂತರ ಮಾತನಾಡಿದ ಮೇಯರ್ ಗುಪ್ತರವರು, ಖಾಸಗಿ ಸಹಭಾಗಿತ್ವದಲ್ಲಿ ಈ ಯೋಜನೆ ಜಾರಿಗೊಳಿಸಲಾಗಿದ್ದು, ಬಡ ವರ್ಗ ಹಾಗೂ ಅಂಗವೈಕಲ್ಯಕ್ಕೆ ತುತ್ತಾದ ಜನರಿಗೆ ಇದರಿಂದ ಹೆಚ್ಚಿನ ಪ್ರಯೋಜನವಾಗಲಿದೆ ಎಂದು ತಿಳಿಸಿದರು.

    ಈ ಕುರಿತು ಪ್ರತಿಕ್ರಿಯಿಸಿರುವ ಯೋಜನೆ ರೂವಾರಿ ದಿಲೀಪ್ ಅಲಿಯಾಸ್ ಕಾಕೆ, ಖಾಲಿ ಹೊಟ್ಟೆಯಲ್ಲಿ ಯಾರೂ ಮಲಗಬಾರದು ಎಂಬ ಉದ್ಧೇಶದಿಂದ ಈ ಯೋಜನೆ ಜಾರಿಗೊಳಿಸಲಾಗಿದೆ. ಬಡ ಜನರಿಗಾಗಿ ದುಡಿಯುತ್ತಿರುವ ಸಿಎಂ ಯೋಗಿ ಆದಿತ್ಯನಾಥ್ ಅವರ ಹೆಸರಲ್ಲಿ ಯೋಜನೆ ಜಾರಿಗೆ ತರಲಾಗಿದ್ದು, ಪ್ರಾರಂಭಿಕವಾಗಿ ಅಲಹಾಬಾದ್‍ನ ಅಟಾರ್ಸುಯಿಯಾ ಭಾಗದಲ್ಲಿರುವ ಮಳಿಗೆಯಲ್ಲಿ ಕ್ಯಾಂಟೀನ್ ಆರಂಭಗೊಳಿಸಲಾಗಿದ್ದೇವೆ ಎಂದು ತಿಳಿಸಿದರು.

    ಈಗಾಗಲೇ ಕರ್ನಾಟಕದಲ್ಲಿ ಇಂದಿರಾ, ತಮಿಳುನಾಡಿನಲ್ಲಿ ಅಮ್ಮಾ, ಆಂಧ್ರಪ್ರದೇಶದಲ್ಲಿ ಅಣ್ಣಾ ಕ್ಯಾಂಟೀನ್ ಆರಂಭಗೊಂಡಿದ್ದು, ಕಡಿಮೆ ಬೆಲೆಗೆ ಬಡವರಿಗೆ ಆಹಾರ ಪೂರೈಕೆ ಮಾಡಲಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವಸತಿ ಕಟ್ಟಡಗಳು ಕುಸಿದು 3 ಮಂದಿ ಸಾವು, 50 ಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ!

    ವಸತಿ ಕಟ್ಟಡಗಳು ಕುಸಿದು 3 ಮಂದಿ ಸಾವು, 50 ಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ!

    ನವದೆಹಲಿ: ಎರಡು ವಸತಿ ಕಟ್ಟಡಗಳು ಕುಸಿದು ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿ 50 ಮಂದಿ ಅವಶೇಷಗಳಡಿ ಸಿಲುಕಿರುವ ಘಟನೆ ಉತ್ತರಪ್ರದೇಶದ ಗ್ರೇಟರ್ ನೊಯ್ಡಾದ ಶಾಹಬೆರಿ ಗ್ರಾಮದಲ್ಲಿ ನಡೆದಿದೆ.

    ಮಂಗಳವಾರ ತಡರಾತ್ರಿ ಗ್ರೇಟರ್ ನೊಯ್ಡಾದ ಶಾಹಬೆರಿ ಗ್ರಾಮದಲ್ಲಿರುವ ಎರಡು ಕಟ್ಟಡಗಳು ಉರುಳಿಬಿದ್ದ ಪರಿಣಾಮ 3 ಮಂದಿ ಸಾವನ್ನಪ್ಪಿದ್ದಾರೆ. ಕಟ್ಟಡದ ಅವಶೇಷಗಳಲ್ಲಿ ಸುಮಾರು 50ಕ್ಕೂ ಹೆಚ್ಚು ಮಂದಿ ಸಿಲುಕಿದ್ದಾರೆ ಎಂದು ತಿಳಿದು ಬಂದಿದೆ.

    ಕಟ್ಟಡ ಕುಸಿದು ಬಿದ್ದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್‍ಡಿಆರ್‍ಎಫ್) ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸುತ್ತಿವೆ. ಕಾರ್ಯಾಚರಣೆ ವೇಳೆ ಈವರೆಗೂ ಮೂರು ಮೃತದೇಹಗಳನ್ನು ಹೊರೆ ತೆಗೆದಿದ್ದು, ಕಟ್ಟಡ ಅವಶೇಷಗಳಡಿ 50ಕ್ಕೂ ಹೆಚ್ಚು ಮಂದಿ ಸಿಲುಕಿದ್ದಾರೆ ಎಂದು ವರದಿಯಾಗಿದೆ.

    ಕಟ್ಟಡ ನಿರ್ಮಾಣದ ವೇಳೆ ಕಳಪೆ ಗುಣಮಟ್ಟದ ವಸ್ತುಗಳನ್ನು ಬಳಸಿದ್ದರ ಪರಿಣಾಮ ದುರಂತ ಸಂಭವಿಸಿದೆ ಎಂದು ರಕ್ಷಣಾ ಸಿಬ್ಬಂದಿ ತಿಳಿಸಿದ್ದಾರೆ. ಘಟನೆ ಸಂಬಂಧ ಪೊಲೀಸರು ಕಟ್ಟಡ ಮಾಲೀಕನಾದ ಗಂಗಾ ಶರಣ್ ದ್ವೀವೇದಿ, ಬ್ರೋಕರ್ ಕಾಸೀಮ್ ಹಾಗೂ ಮತ್ತೊರ್ವನನ್ನು ಬಂಧಿಸಿದ್ದಾರೆ. ಅಲ್ಲದೇ ಮಾಲೀಕರ ವಿರುದ್ಧ ಕಳಪೆ ಕಾಮಗಾರಿ ನಡೆಸಿ ಕಟ್ಟಡ ನಿರ್ಮಾಣ ಮಾಡಿದ್ದರ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಘಟನೆ ಸಂಬಂಧ ಪ್ರತಿಕ್ರಿಯಿಸಿದ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೂಡಲೇ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳುವಂತೆ ಸೂಚಿಸಿದ್ದು, ಜಿಲ್ಲಾ ಪೊಲೀಸರು ರಕ್ಷಣಾ ಕಾರ್ಯದಲ್ಲಿ ನೆರವಾಗುವಂತೆ ಆದೇಶಿಸಿದ್ದಾರೆ. ಘಟನಾ ಸ್ಥಳದಲ್ಲಿ ಜಿಲ್ಲಾ ಅಧಿಕಾರಿಗಳ ತಂಡಗಳನ್ನು ನಿಯೋಜಿಸುವಂತೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

    ರಕ್ಷಣಾ ಪಡೆಯ ಅಧಿಕಾರಿಯಾದ ಪಿ.ಕೆ.ಶ್ರೀವತ್ಸವ್ ಮಾತನಾಡಿ, ಘಟನಾ ಸ್ಥಳದಲ್ಲಿ ಒಟ್ಟು 4 ಎನ್‍ಡಿಆರ್‍ಎಫ್ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸುತ್ತಿದ್ದು, ಶ್ವಾನ ದಳವು ಸಹ ಕಾರ್ಯ ನಿರ್ವಹಿಸುತ್ತಿದೆ. ಒಟ್ಟು ಮೂವರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ 50 ಕ್ಕೂ ಹೆಚ್ಚು ಮಂದಿ ಸಿಲುಕಿದ್ದಾರೆ ಎಂದು ತಿಳಸಿದ್ದಾರೆ.