ನವದೆಹಲಿ: ದೇಶದಲ್ಲಿ 2025ರ ವೇಳೆಗೆ ಸುಮಾರು 1.5 ಲಕ್ಷ ತೋಟಗಾರಿಕಾ ಪದವಿಧರರ ಅವಶ್ಯಕತೆಯಿದ್ದು, ಪ್ರಸ್ತುತ 57 ತೋಟಗಾರಿಕಾ ಕಾಲೇಜುಗಳಲ್ಲಿ 10 ಸಾವಿರಕ್ಕೂ ಕಡಿಮೆ ಪದವಿಧರರು ಹೊರಬರುತ್ತಿದ್ದಾರೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ, ರೈತರಿಗೆ, ಮಾರಾಟಗಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ICAR-IIHR ಅನ್ನು ಡೀಮ್ಡ್ ವಿಶ್ವವಿದ್ಯಾಲಯವನ್ನಾಗಿ ಮೇಲ್ದರ್ಜೆಗೇರಿಸಬೇಕು ಎಂದು ಸಂಸದ ಡಾ.ಸಿ.ಎನ್ ಮಂಜುನಾಥ್ ಮನವಿ ಮಾಡಿದ್ದಾರೆ.
ಬೆಂಗಳೂರಿನ ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ICAR-IIHR ಸಂಸ್ಥೆಯು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತೋಟಕಾರಿಕಾ ವಲಯದಲ್ಲಿ ಅಧಿಕ ಇಳುವರಿ ನೀಡುವ ಬೆಳೆಗಳು, ಹೆಚ್ಚು ರೋಗ ನಿರೋಧಕ ಶಕ್ತಿ ಇರುವ ಬೆಳೆಗಳ ಸಂಶೋಧನೆ, ಹೊಸ ತಂತ್ರಜ್ಞಾನಗಳ ಆವಿಷ್ಕಾರ ಮೂಲಕ ರೈತರ ಆರ್ಥಿಕ ಪ್ರಗತಿಗೆ ಸಹಕರಿಸುತ್ತಿದೆ ಎಂದು ಸಚಿವರಿಗೆ ತಿಳಿಸಿದರು. ಇದನ್ನೂ ಓದಿ: ಮೈಸೂರು| 11 ವರ್ಷಗಳ ನಂತರ ಮಾರಮ್ಮ ದೇವಸ್ಥಾನದ ಬಾಗಿಲು ಓಪನ್
ರಾಮನಗರ ಜಿಲ್ಲೆಯಾದ್ಯಂತ ಮಾವು ಹಾಗೂ ತೆಂಗು ಬೆಳೆ 90% ರಷ್ಟು ಹಾನಿಯಾಗಿದ್ದು, 50,000ಕ್ಕೂ ಅಧಿಕ ರೈತರು ನಷ್ಟ ಅನುಭವಿಸಿದ್ದಾರೆ. ಮಾವು ಬೆಳೆಗೆ 57.67 ಕೋಟಿ ರೂ. ಹಾಗೂ ತೆಂಗು ಬೆಳೆಗೆ 30.65 ಕೋಟಿ ಹಣದ ನೆರವನ್ನು ಎನ್‌ಡಿಆರ್‌ಎಫ್ (NDRF) ಅಡಿಯಲ್ಲಿ ಕಲ್ಪಿಸುವ ಮೂಲಕ ನಮ್ಮ ರೈತರ ಸಂಕಷ್ಟಕ್ಕೆ ಸ್ಪಂದಿಸುವಂತೆ ಮನವಿ ಮಾಡಿದರು. ಇದನ್ನೂ ಓದಿ: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು
– ಮತ್ತೆ ಜೈಲಿಗೆ ಹೋಗುವ ಪರಿಸ್ಥಿತಿ ಬರಬಹುದು ಎಂದ ಮಾಜಿ ಸಿಎಂ
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ದಿನಕ್ಕೆ 50 ಕೋಟಿ ರೂ. ಇಲ್ಲದೇ ಮನೆಗೆ ಹೋಗಿ ನಿದ್ರೆ ಮಾಡೋದಿಲ್ಲವಂತೆ. ಇದನ್ನ ನಾನಲ್ಲ ಜನ ಹೇಳ್ತಾರೆ, ಕಾಂಗ್ರೆಸ್‌ನವರೇ ಮಾತಾಡ್ತಾರೆ ಅಂತ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಹೊಸ ಬಾಂಬ್ ಸಿಡಿಸಿದ್ದಾರೆ.
ಚುನಾವಣಾ ಪ್ರಚಾರದ ವೇಳೆ ʻಪಬ್ಲಿಕ್ ಟಿವಿʼಗೆ (Public TV) ನೀಡಿದ ಸಂದರ್ಶನದಲ್ಲಿ ಅವರು ಮೈತ್ರಿ ಅನಿವಾರ್ಯತೆ ಕುರಿತು ಮಾತನಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಾ. ಸಿ.ಎನ್ ಮಂಜುನಾಥ್ (Dr. CN Manjunath) ಗೆದ್ದೇ ಗೆಲ್ತಾರೆ ಎಂಬ ವಿಶ್ವಾಸ ವ್ಯಕ್ಯಪಡಿಸಿರುವ ಅವರು, ಡಿಕೆ ಶಿವಕುಮಾರ್ ಮತ್ತೆ ಜೈಲಿಗೆ ಹೋಗುವ ಪರಿಸ್ಥಿತಿ ಬರಬಹುದು ಎಂದು ಭವಿಷ್ಯ ನುಡಿದಿದ್ದಾರೆ.
ಮುಂದುವರಿದು, ಕಾಂಗ್ರೆಸ್‌ನವರು (Congress) 10 ವರ್ಷ ಈ ಸರ್ಕಾರ ಇರುತ್ತೆ ಅಂತಾ ಹೇಳಿದ್ದಾರೆ. ಈ ಹಿಂದೆಯೂ 20 ವರ್ಷ ನಮ್ಮ ಸರ್ಕಾರ ಇರುತ್ತೆ ಅಂತಾ ಹೇಳಿದ್ದರು. ಇತಿಹಾಸ ತೆಗೆದು ನೋಡಿದ್ರೆ, ಏನಾಗಿದೆ ಅಂತಾ ಗೊತ್ತಾಗುತ್ತೆ. ಈಗ 136 ಪ್ಲಸ್ ಪ್ಲಸ್ ಪ್ಲಸ್ ಸೀಟ್ ಇದೆ ಅಂತಾರೆ. ಈ ಹಿಂದೆ ನಮಗೆ ಕಾಂಗ್ರೆಸ್ ಬೆಂಬಲ ಕೊಟ್ಟಾಗ ಎಷ್ಟಿತ್ತು? ಲೋಕಸಭಾ ಚುನಾವಣೆ (Lok Sabha Elections) ಆದ್ಮೇಲೆ ಎಷ್ಟು ದಿನ ಸರ್ಕಾರ ಇರುತ್ತೆ ಅಂತ ಗೊತ್ತಾಗುತ್ತೆ ಎಂದು ಭವಿಷ್ಯ ನುಡಿದಿದ್ದಾರೆ.
ಬೆಂಗಳೂರಲ್ಲಿ (Bengaluru) ಸ್ಕ್ವೇರ್‌ಫಿಟ್‌ಗೆ 100 ರೂ. ಫಿಕ್ಸ್ ಮಾಡಿದ್ದಾರಂತೆ, ಪ್ರತಿ ದಿನಕ್ಕೆ 50 ಕೋಟಿ ರೂ. ಇಲ್ಲದೇ ಮನೆಗೆ ಹೋಗಿ ನಿದ್ರೆ ಮಾಡೋದಿಲ್ಲವಂತೆ. ಜನ ಮಾತ್ರ ಅಲ್ಲ, ಕಾಂಗ್ರೆಸ್‌ನವರೇ ಇದನ್ನ ಹೇಳ್ತಾರೆ. ಇಂಥವರು ಒಕ್ಕಲಿಗರನ್ನ ಉದ್ಧಾರ ಮಾಡ್ತಾರಾ? ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಅಣಕು ಮತ ಎಣಿಕೆ ವೇಳೆ ಬಿಜೆಪಿಗೆ ಹೆಚ್ಚುವರಿ ಮತ – ವರದಿ ಸುಳ್ಳೆಂದ ಚುನಾವಣಾ ಆಯೋಗ
ಮತ್ತೆ ಜೈಲಿಗೆ ಹೋಗಬಹುದು?
ಡಿಕೆ ಶಿವಕುಮಾರ್ ಮತ್ತೆ ಜೈಲಿಗೆ ಹೋಗುವ ಪರಿಸ್ಥಿತಿ ಬರಬಹುದು. ಅವರು ಎಲ್ಲ ಅರಗಿಸಿಕೊಳ್ಳುವ ಶಕ್ತಿ ಇದೆ ಅಂತಾ ಹೇಳ್ತಾರೆ. ಅವರಿಗೆ ಹಣದಿಂದ ಯಾರನ್ನ ಬೇಕಾದರೂ ಕೊಂಡುಕೊಳ್ಳಬಹುದು ಅನ್ನೋ ಉದ್ಧಟತನ ಇರೋದು ಸತ್ಯ. ಅದರಿಂದ ನಾನು ಏನೇ ತಪ್ಪು ಮಾಡಿದರೂ ಅರಗಿಸಿಕೊಳ್ಳುವ ಶಕ್ತಿಯಿದೆ ಅನ್ನೋದು ಅವರ ಅಭಿಪ್ರಾಯ. ಮುಂದೆ ಭಗವಂತ ಅವರನ್ನ ನೋಡಿಕೊಳ್ತಾನೆ. ಇದನ್ನೂ ಓದಿ: ಲಂಡನ್, ದುಬೈನಲ್ಲಿ ಮನೆ.. 5 ಕೋಟಿ ಮೌಲ್ಯದ ಚಿನ್ನ; ದ. ಗೋವಾ ಬಿಜೆಪಿ ಅಭ್ಯರ್ಥಿ 1,400 ಕೋಟಿ ಒಡತಿ
ಮೈತ್ರಿ ಯಾಕೆ ಅನಿವಾರ್ಯ ಆಯ್ತು?
ಇಂದಿನ ರಾಜಕೀಯ ಬೆಳವಣಿಗೆ ಹಾಗೂ ಕಳೆದ ವಿಧಾನಸಭಾ ಚುನಾವಣೆಯ ಫಲಿತಾಂಶದಿಂದ ಮೈತ್ರಿ ಅನಿವಾರ್ಯ ಅನ್ನಿಸಿತು. ಕಳೆದ ಬಾರಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ನಿರೀಕ್ಷೆ ಮಾಡಿತ್ತು. ನಾವೂ ಸಹ ಅದ್ಭುತವಾಗಿ ಪಂಚರತ್ನ ಯಾತ್ರೆ ಮಾಡಿದ್ದರಿಂದ ಹೆಚ್ಚಿನ ಸ್ಥಾನಗಳನ್ನ ನಿರೀಕ್ಷೆ ಮಾಡಿದ್ದೆವು. ಅದು ಸಾಧ್ಯವಾಗಲಿಲ್ಲ. ಆದ್ರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮರುಕ್ಷಣದಿಂದಲೇ ಭ್ರಷ್ಟ ವ್ಯವಸ್ಥೆ ಆರಂಭವಾಯಿತು. ಯಾವ ಸರ್ಕಾರದಲ್ಲೂ ಇಂತಹ ಕೆಟ್ಟ ಆಡಳಿತ ನೋಡಲಿಲ್ಲ. ಅಧಿಕಾರಕ್ಕೆ ಬಂದ ಮರುಕ್ಷಣದಿಂದಲೇ ಅಧಿಕಾರಿಗಳ ವರ್ಗಾವಣೆಗೆ ದುಡ್ಡು ಫಿಕ್ಸ್ ಮಾಡಿ ಲೂಟಿ ಮಾಡುವ ಕೆಲಸ ಶುರುವಾಯ್ತು. ಈ ರಾಜ್ಯವನ್ನ ಯಾವ ಮಟ್ಟಕ್ಕೆ ದಿವಾಳಿ ಮಾಡಬಹುದು ಅನ್ನೋದನ್ನ ನೆನಸಿಕೊಂಡಾಗ, ಪ್ರತಿಯೊಬ್ಬರಿಗೂ ಆತಂಕ ಆಗುತ್ತೆ. ಈ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳಿಗೂ ಮೈತ್ರಿ ಅನಿವಾರ್ಯವಾಯಿತು ಎಂದು ತಿಳಿಸಿದ್ದಾರೆ.
ಬೆಂಗಳೂರು/ಶಿವಮೊಗ್ಗ: ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಆಗಿದೆ. ಡಾ.ಸಿ.ಎನ್ ಮಂಜುನಾಥ್ (Dr. CN Manjunath) ಯಾವ ಪಕ್ಷದ ಸಿಂಬಲ್‌ನಲ್ಲಿ ನಿಂತರೂ ಒಂದೇ. ರಾಜಕೀಯ ತಂತ್ರಗಾರಿಕೆ ವರ್ಕೌಟ್ ಆಗಬೇಕು ಅನ್ನೋ ಕಾರಣಕ್ಕೆ ನಾವೇ ಮಂಜುನಾಥ್‌ರನ್ನ ಬಿಜೆಪಿಯಿಂದ ನಿಲ್ಲಿಸಿದ್ವಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.
ಶಿವಮೊಗ್ಗದಲ್ಲಿಂದು ಚುನಾವಣಾ ಪ್ರಚಾರಕ್ಕೆ (Shivamogga Election Campaign) ತೆರಳಿದ್ದ ವೇಳೆ ʻಪಬ್ಲಿಕ್ ಟಿವಿʼಗೆ (Public TV) ನೀಡಿದ ಸಂದರ್ಶನದಲ್ಲಿ ಅವರು ಮೈತ್ರಿ ಅನಿವಾರ್ಯತೆಗಳ ಕುರಿತು ಮಾತನಾಡಿದ್ದಾರೆ. ಅಲ್ಲದೇ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮಂಜುನಾಥ್ ಗೆದ್ದೇ ಗೆಲ್ಲುತ್ತಾರೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಲಂಡನ್, ದುಬೈನಲ್ಲಿ ಮನೆ.. 5 ಕೋಟಿ ಮೌಲ್ಯದ ಚಿನ್ನ; ದ. ಗೋವಾ ಬಿಜೆಪಿ ಅಭ್ಯರ್ಥಿ 1,400 ಕೋಟಿ ಒಡತಿ
ಈ ಬಾರಿ ಮಂಜುನಾಥ್ ಗೆಲ್ಲೋದ್ರಲ್ಲಿ ಸಂಶಯವೇ ಇಲ್ಲ. ಬೆಂಗಳೂರು ಗ್ರಾಮಾಂತರ (Bengalruu Rural) ಭಾಗದ ಜನರಿಗೆ ಮಂಜುನಾಥ್ ಅವರ ಬಗ್ಗೆ ವಿಶೇಷ ಅಭಿಮಾನ ಇದೆ. ಅವರು ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯೇ ಇದಕ್ಕೆ ಕಾರಣ. ಮಂಜುನಾಥ್ ಅವರಿಂದ ಆ ಭಾಗದಲ್ಲಿ ಜೀವ ಪಡೆದ ಜನ ಇಂದಿಗೂ ಅವರನ್ನು ನೆನಸುತ್ತಾರೆ. ಹಾಗಾಗಿ ಮಂಜುನಾಥ್ ಗೆದ್ದೇ ಗೆಲ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಬುದ್ಧಿವಂತ ಅಳಿಯನಿಗೆ ರಾಜಕೀಯ ಬೇಕಿತ್ತಾ?
ದೇವೇಗೌಡರ (HD Devegowda) ಬುದ್ಧಿವಂತ ಅಳಿಯ ಮಂಜುನಾಥ್ ರಾಜಕಾರಣಕ್ಕೆ ಬರಬೇಕು ಅಂತ ಇರಲಿಲ್ಲ. ಆದ್ರೆ ಬುದ್ಧಿವಂತ ದೇವೇಗೌಡರ ಕುಟುಂಬ ಲೆಕ್ಕಾಚಾರ ಮಾಡಿ ಬಿಜೆಪಿಯಿಂದ ನಿಲ್ಲಿಸಿದೆ ಎಂದು ಹೆಚ್‌ಡಿಕೆ ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಇದೊಂದು ಭಾವನಾತ್ಮಕ ಕ್ಷಣ- ಚುನಾವಣಾ ಪ್ರಚಾರದ ಬ್ಯುಸಿನಲ್ಲೂ ಸೂರ್ಯ ತಿಲಕ ವೀಕ್ಷಿಸಿದ PM
ಮಂಜುನಾಥ್ ಅವರು ರಾಜಕೀಯಕ್ಕೆ ಬರಬೇಕು ಅಂತಾ ಇರಲಿಲ್ಲ. ಹಲವು ಜನರು ರಾಜಕೀಯಕ್ಕೆ ಬರುವುದು ಸೂಕ್ತ ಅಂತಾ ವಿಶ್ಲೇಷಣೆ ಮಾಡಿದರು. ಆಗ ಮಂಜುನಾಥ್ ಹೆಸರು ಮುನ್ನೆಲೆಗೆ ಬಂತು. ಅಲ್ಲದೇ ಬಿಜೆಪಿಗೂ ಉತ್ತಮ ಅಭ್ಯರ್ಥಿಯನ್ನು ಕೊಟ್ಟ ಹೆಸರು ಬರುತ್ತೆ ಅಂತಾ ಹೇಳಿದಾಗ, ನಾನೇ ಅವರನ್ನು ಮನವೊಲಿಸುವ ಜವಾಬ್ದಾರಿ ತೆಗೆದುಕೊಂಡೆ. ದೇವೇಗೌಡರನ್ನೂ ಮನವೊಲಿಸುವ ಕೆಲಸ ಮಾಡಿದೆ. ರಾಜಕೀಯ ತಂತ್ರಗಾರಿಕೆ ವರ್ಕೌಟ್ ಆಗಬೇಕು ಅಂತ ನಾವೇ ಅವರನ್ನ ಬಿಜೆಪಿಯಿಂದ ನಿಲ್ಲಿಸಿದ್ವಿ ಎಂದು ತಿಳಿಸಿದ್ದಾರೆ.
ಮೈತ್ರಿ ಯಾಕೆ ಅನಿವಾರ್ಯ ಆಯ್ತು?
ಇಂದಿನ ರಾಜಕೀಯ ಬೆಳವಣಿಗೆ ಹಾಗೂ ಕಳೆದ ವಿಧಾನಸಭಾ ಚುನಾವಣೆಯ ಫಲಿತಾಂಶದಿಂದ ಮೈತ್ರಿ ಅನಿವಾರ್ಯ ಅನ್ನಿಸಿತು. ಕಳೆದ ಬಾರಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ನಿರೀಕ್ಷೆ ಮಾಡಿತ್ತು. ನಾವೂ ಸಹ ಅದ್ಭುತವಾಗಿ ಪಂಚರತ್ನ ಯಾತ್ರೆ ಮಾಡಿದ್ದರಿಂದ ಹೆಚ್ಚಿನ ಸ್ಥಾನಗಳನ್ನ ನಿರೀಕ್ಷೆ ಮಾಡಿದ್ದೆವು. ಅದು ಸಾಧ್ಯವಾಗಲಿಲ್ಲ. ಆದ್ರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮರುಕ್ಷಣದಿಂದಲೇ ಭ್ರಷ್ಟ ವ್ಯವಸ್ಥೆ ಆರಂಭವಾಯಿತು. ಯಾವ ಸರ್ಕಾರದಲ್ಲೂ ಇಂತಹ ಕೆಟ್ಟ ಆಡಳಿತ ನೋಡಲಿಲ್ಲ. ಅಧಿಕಾರಕ್ಕೆ ಬಂದ ಮರುಕ್ಷಣದಿಂದಲೇ ಅಧಿಕಾರಿಗಳ ವರ್ಗಾವಣೆಗೆ ದುಡ್ಡು ಫಿಕ್ಸ್ ಮಾಡಿ ಲೂಟಿ ಮಾಡುವ ಕೆಲಸ ಶುರುವಾಯ್ತು. ಈ ರಾಜ್ಯವನ್ನ ಯಾವ ಮಟ್ಟಕ್ಕೆ ದಿವಾಳಿ ಮಾಡಬಹುದು ಅನ್ನೋದನ್ನ ನೆನಸಿಕೊಂಡಾಗ, ಪ್ರತಿಯೊಬ್ಬರಿಗೂ ಆತಂಕ ಆಗುತ್ತೆ. ಈ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳಿಗೂ ಮೈತ್ರಿ ಅನಿವಾರ್ಯವಾಯಿತು ಎಂದು ತಿಳಿಸಿದ್ದಾರೆ.
ಬೆಂಗಳೂರು: ಬೆಂಗಳೂರು ಗ್ರಾಮಾಂತರ (Bengaluru Rural) ವಿಚಾರದಲ್ಲಿ ರಾಜಕೀಯ ಜೋರಾಗಿದೆ. ಕ್ಷೇತ್ರದಲ್ಲಿ ಭಯದ ವಾತಾವರಣವಿದ್ದರೂ ಜನರಿಗೆ ಅದನ್ನು ಎದುರಿಸುವ ಶಕ್ತಿಯಿದೆ ಎಂದು ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಹೇಳಿದ್ದಾರೆ.
ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್, ಜೆಡಿಎಸ್ ಗೆಲ್ಲಲು ಸಾಧ್ಯವಿಲ್ಲ ಎಂದು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ಅಳಿಯನನ್ನು ಬಿಜೆಪಿ ಸಿಂಬಲ್‌ನಲ್ಲಿ ನಿಲ್ಲಿಸುವ ಸ್ಥಿತಿ ದೇವೇಗೌಡರಿಗೆ ಬರಬಾರದಿತ್ತು ಎಂದು ಲೇವಡಿ ಮಾಡಿದರು.
ಗಿಫ್ಟ್ ವೋಚರ್ ಆರೋಪಕ್ಕೂ ತಿರುಗೇಟು ನೀಡಿದ ಅವರು, ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಕೋಲಾರ ಗೆದ್ದೇ ಗೆಲ್ಲುತ್ತೇವೆ ನೋಡುತ್ತಿರಿ ಎಂದು ಸವಾಲು ಹಾಕಿದರು.
ಇದಕ್ಕೆ ಕುಮಾರಸ್ವಾಮಿ, ನಾವು ನಾಲ್ಕು ಕ್ಷೇತ್ರಕ್ಕೆ ಸೀಮಿತವಾಗಿಲ್ಲ. ಡಿಕೆಶಿ ಬಾಯಿತಪ್ಪಿ 28 ಎಂದು ಹೇಳುವ ಬದಲು 4 ಅಂತ ಹೇಳಿರಬೇಕು ಎಂದು ವ್ಯಂಗ್ಯವಾಡಿದರು.
ರಾಮನಗರ: ಧರ್ಮಸ್ಥಳದ ಮಂಜುನಾಥ ನಂತೆ ನಮ್ಮ ಡಾ. ಸಿಎನ್ ಮಂಜುನಾಥ್ (CN Manjunat) ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಮಾಡಿದ ತಪ್ಪಿಗೆ ಈ ಬಾರಿ ಮಂಜುನಾಥ್ ಅವರಿಗೆ ವೋಟ್ ಹಾಕಿ ಋಣ ತೀರಿಸಿಕೊಳ್ಳಿ ಎಂದು ಮುನಿರತ್ನ (Munirathna) ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ನಾಮಪತ್ರ ಸಲ್ಲಿಕೆ ಹಿನ್ನೆಲೆ ಮೈತ್ರಿ ಅಭ್ಯರ್ಥಿ ಪರ ಬೃಹತ್ ಸಮಾವೇಶದಲ್ಲಿ ಶಾಸಕ ಮುನಿರತ್ನ ಅಬ್ಬರದ ಭಾಷಣ ಮಾಡಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮುಗ್ದ ಯುವಕನನ್ನ 5 ಸಾವಿರದ ಗಿಫ್ಟ್ ಕಾರ್ಡ್ ಕೊಟ್ಟು ಸೋಲಿಸಿದರು. ಆ ದೇವರು ನಿಮ್ಮನ್ನ ಕ್ಷಮಿಸಲ್ಲ. ಆ ಪಾಪಕ್ಕೆ ಪ್ರಾಯಶ್ಚಿತ್ತ ಆಗಬೇಕು ಅಂದ್ರೆ ಮಂಜುನಾಥ್ ಅವರನ್ನ ಗೆಲ್ಲಿಸಬೇಕು ಅಂತಾ ಜನತೆಗೆ ಕರೆ ನೀಡಿದ್ದಾರೆ. ಇದನ್ನೂ ಓದಿ: ನಾನೇನು ತಪ್ಪು ಮಾಡಿಲ್ಲ, 10 ತಿಂಗ್ಳು ಅಜ್ಞಾತವಾಸ ಅನುಭವಿಸಿದ್ದೇನೆ: ಸುಧಾಕರ್ ಕಣ್ಣೀರು
ಡಾ.ಮಂಜುನಾಥ್ ಅವರು 75 ಲಕ್ಷ ಆಪರೇಷನ್ ಮಾಡಿದ್ದಾರೆ. ಆರೋಗ್ಯ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ್ದಾರೆ. ಇವರ ಸ್ಪರ್ಧೆಯಿಂದ ಇಲ್ಲಿ ಅಣ್ಣತಮ್ಮಂದಿರ ಹೃದಯ ಬಡಿತ ಜಾಸ್ತಿ ಆಗಿದೆ. ಹೆಂಗೋ ಕುಕ್ಕರು, ತವ ಕೊಟ್ಟು ಗೆಲ್ತಿದ್ವಿ, ಈಗ ಡಾಕ್ಟರ್ ವಕ್ಕರಿಸಕೊಂಡ್ರು ಅಂತ ಟೆನ್ಷನ್ ಮಾಡಿಕೊಂಡಿದ್ದಾರೆ. ಧರ್ಮಸ್ಥಳದ ಮಂಜುನಾಥ ನಂತೆ ನಮ್ಮ ಡಾ.ಮಂಜುನಾಥ್. 91 ವರ್ಷ ವಯಸ್ಸಿನ ದೇವೆಗೌಡರ ಮಾತುಕೇಳಿದ್ರೆ ಮೈ ರೋಮಾಂಚನ ಆಗುತ್ತೆ. ಸಿದ್ದರಾಮಯ್ಯಗೆ (Siddaramaiah) ಜನತಾದಳ ಇರೋದನ್ನ ತೋರಿಸುತ್ತೇನೆ ಅಂತಾ ಎಚ್ಚರಿಸುತ್ತಾರೆ. ಅದಕ್ಕೆ ಕಾರಣ ರಾಮನಗರದ ಜನ. ಮಂಜುನಾಥ್‌ರಿಗೆ ವೋಟ್ ಮಾಡಿದ್ರೆ ದೇವಾನು ದೇವತೆಗಳು ತಥಾಸ್ತು ಅಂತಾರೆ. ಅವರಿಗೆ ವೋಟ್ ಹಾಕದಿದ್ದರೆ ಯಮ ನರಕಕ್ಕೆ ಕಳುಹಿಸ್ತಾನೆ ಎಂದು ನುಡಿದಿದ್ದಾರೆ. ಇದನ್ನೂ ಓದಿ: ಐಪಿಎಲ್‌ನಲ್ಲಿ ಮತ್ತೊಂದು ದಾಖಲೆ ಉಡೀಸ್ - ಬರೋಬ್ಬರಿ 35 ಕೋಟಿ ಮಂದಿ ವೀಕ್ಷಣೆ!
ಒಂದೇ ಒಂದು ಕಪ್ಪುಚುಕ್ಕೆ ಇಲ್ಲದ ಏಕೈಕ ಅಭ್ಯರ್ಥಿ ಡಾ. ಮಂಜುನಾಥ್, ಅವರ ಮೇಲೆ ಒಂದೇ ಒಂದು ಆರೋಪ ಇಲ್ಲ. ಅವರೂ ಸಹ ಒಂದು ದಿನ ದೇವೆಗೌಡರು, ಕುಮಾರಸ್ವಾಮಿ ಹೆಸರು ಹೇಳಿಲ್ಲ. ದೇವರು ಇಲ್ಲಿ ಪ್ರತ್ಯಕ್ಷ ಆಗಿ ನನಗೆ ವರ ನೀಡಿದ್ರೆ ನನ್ನ ಆಯಸ್ಸನ್ನೂ ಮಂಜುನಾಥ್‌ರಿಗೆ ಕೊಡು ಅಂತೀನಿ. ಕೆಲಸ ಮಾಡಿ ಇಲ್ಲಿ ಕೂಲಿ ಕೊಡಿ ಅಂತಾರೆ. ಆದ್ರೆ ಇಲ್ಲಿ ಕುಕ್ಕರ್, ಸೀರೆ ಕೊಟ್ಟು ಕೂಲಿ ಕೇಳ್ತಿದ್ದಾರೆ. 10 ವರ್ಷದ ಕೊಡುಗೆಗಳ ಪಟ್ಟಿ ಬಿಡುಗಡೆ ಮಾಡಲಿ. ಕೊವೀಡ್ ಟೈಂ ನಲ್ಲಿ ಹೋಗಿ ನಾನೇ ಹೆಣ ಮಣ್ಣು ಮಾಡಿದೆ ಅಂತಾರೆ, ಮಾಡಿದ್ರೆ ತೆಗಿಸಿ ನೋಡೋಣ. ಕೊವೀಡ್ ಸಮಯದಲ್ಲಿ ಏನಾದ್ರು ಕೊಟ್ಟಿದ್ರೆ ದಾಖಲೆ ಕೊಡಲಿ. ಈ ಲೋಕಸಭಾ ಕ್ಷೇತ್ರದಲ್ಲಿ ಈಗಾಗಲೇ ಮಂಜುನಾಥ್ ಗೆದ್ದಾಗಿದೆ ಚುನಾವಣಾ ಅಷ್ಟೆ ಬಾಕಿ ಇರೋದು ಎಂದು ಬೀಗಿದ್ದಾರೆ.
ಮೋದಿ, ಅಮಿತ್ ಶಾ ಅವರ ಮೆದಳು ಸ್ಯಾಟಲೈಟ್ ತರ, ಅದು ನಿಂತರೂ ಅವರ ಮೆದುಳು ನಿಲ್ಲಲ್ಲ. ಡಾ.ಮಂಜುನಾಥ್ ರನ್ನ ಗುರುತಿಸಿದ್ದು ಮೋದಿ, ಅಮಿತ್ ಶಾ. ನಾವ್ಯಾರು ಅಲ್ಲ. ಅವರ ಸೇವೆ ಮೆಚ್ಚಿ, ದೇಶಕ್ಕೆ ಅಗತ್ಯ ಅಂತ ಕರೆದಿದ್ದು. ನಿಖಿಲ್ ಅವರಿಗೆ ಮಾಡಿದ ತಪ್ಪಿಗೆ ಮಂಜುನಾಥ್‌ಗೆ ವೋಟ್ ಹಾಕಿ ಋಣ ತೀರಿಸಿಕೊಳ್ಳಿ ಎಂದು ಮುನಿರತ್ನ ಕರೆ ನೀಡಿದ್ದಾರೆ. ಇದನ್ನೂ ಓದಿ: ಗಿಫ್ಟ್ ಕಾರ್ಡ್ ಹಂಚಿ ನನಗೆ ಅನ್ಯಾಯ ಮಾಡಿದ್ರು: ಸೋಲಿನ ಬಗ್ಗೆ ನಿಖಿಲ್ ಭಾವುಕ
– ಡಾ. ಮಂಜುನಾಥ್ ಪರ ಮತಯಾಚನೆ – ರೋಡ್‌ಶೋನಲ್ಲಿ ಘಟಾನುಘಟಿ ನಾಯಕರು ಭಾಗಿ
ರಾಮನಗರ: ರಾಜ್ಯ ಬಿಜೆಪಿಯಲ್ಲೀಗ ಲೋಕಸಭೆ ಚುನಾವಣೆಯ ರಣೋತ್ಸಾಹ ಮೂಡಿದೆ. ಅಮಿತ್ ಶಾ (Amit Shah) ಅವರ ಮಿಂಚಿನ ಸಂಚಾರ ರಾಜ್ಯ ಬಿಜೆಪಿ-ಜೆಡಿಎಸ್ ಮೈತ್ರಿಗೆ ಬೂಸ್ಟ್ ನೀಡಿದೆ. ಅದರಲ್ಲೂ ಬೆಂಗಳೂರು ಗ್ರಾಮಾಂತರ (Bengaluru Rural) ಕ್ಷೇತ್ರವನ್ನು ಪ್ರತಿಷ್ಠೆಯ ಕಣವಾಗಿ ತೆಗೆದುಕೊಂಡಿರುವ ಅಮಿತ್ ಶಾ ಅವರು ಡಿಕೆ ಬ್ರದರ್ಸ್ ಭದ್ರ ಕೋಟೆಯಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ಪರ ಚುನಾವಣಾ ಪ್ರಚಾರದ ಭಾಗವಾಗಿ ಚನ್ನಪಟ್ಟಣದಲ್ಲಿಂದು ಭರ್ಜರಿ ರೋಡ್ ಶೋ (Amit Shah Road Show) ನಡೆಸಿದ್ದಾರೆ. ಅಮಿತ್ ಶಾ ಅವರಿಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಡಾ. ಮಂಜುನಾಥ್, ನಿಖಿಲ್ ಕುಮಾರಸ್ವಾಮಿ, ಸಿ.ಪಿ ಯೋಗೇಶ್ವರ್ ಅವರು ಸಾಥ್ ನೀಡಿದ್ದಾರೆ. ಇದನ್ನೂ ಓದಿ: ಯಾವ್ದೇ ಕಾರಣಕ್ಕೂ ಪಕ್ಷ ವಿರೋಧಿ ಚಟುವಟಿಕೆ ಮಾಡಬಾರದು – ಪಕ್ಷದ ಅಸಮಧಾನಿತರಿಗೆ ಅಮಿತ್ ಶಾ ವಾರ್ನಿಂಗ್
ರಾಮನಗರ: ಕುಮಾರಸ್ವಾಮಿ (HD Kumaraswamy) ಅವರಿಗೆ ಕಾಲಿನ ರಕ್ತನಾಳದ ಮೂಲಕ ಹೃದಯ ಕವಾಟ ಬದಲಾವಣೆ ಮಾಡಲಾಗಿದೆ. ಆಧುನಿಕ ತಂತ್ರಜ್ಞಾನದಲ್ಲಿ ಆಪರೇಷನ್ ಮಾಡಲಾಗಿದೆ. ಸಾಮಾನ್ಯ ವೈದ್ಯರಿಗೇ ಹೃದಯ ಶಸ್ತ್ರಚಿಕಿತ್ಸೆ ಬಗ್ಗೆ ಅಷ್ಟು ಮಾಹಿತಿ ಇರಲ್ಲ. ಇನ್ನೂ ಇದರ ಬಗ್ಗೆ ಸಾಮಾನ್ಯ ಜನಕ್ಕೆ ಹೇಗೆ ಗೊತ್ತಾಗುತ್ತೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ (CN Manjunath) ತಿರುಗೇಟು ನೀಡಿದ್ದಾರೆ.
ಹೆಚ್‌ಡಿಕೆಗೆ ಆಪರೇಷನ್ ಮಾಡುವಾಗ ನಾನೂ ಇದ್ದೆ. ಹೃದಯ ಶಸ್ತ್ರಚಿಕಿತ್ಸೆ ಬಗ್ಗೆ ತಿಳಿದುಕೊಳ್ಳಲು 13 ವರ್ಷ ಓದಬೇಕು. ಕುಮಾರಸ್ವಾಮಿ ಅವರಿಗೆ ಕಾಲಿನ ರಕ್ತನಾಳದ ಮೂಲಕ ಹೃದಯ ಕವಾಟ ಬದಲಾವಣೆ ಮಾಡಲಾಗಿದೆ. ಆಧುನಿಕ ತಂತ್ರಜ್ಞಾನದಲ್ಲಿ ಆಪರೇಷನ್ ಮಾಡಲಾಗಿದೆ. ಸಾಮಾನ್ಯ ವೈದ್ಯರಿಗೂ ಹೃದಯ ಶಸ್ತ್ರಚಿಕಿತ್ಸೆ ಬಗ್ಗೆ ಅಷ್ಟು ಮಾಹಿತಿ ಇರಲ್ಲ. ಇನ್ನೂ ಇದರ ಬಗ್ಗೆ ಸಾಮಾನ್ಯ ಜನಕ್ಕೆ ಏನು ಗೊತ್ತಾಗುತ್ತೆ? ಯಾವತ್ತೂ ಯಾವುದೇ ಮಾಹಿತಿ ಇಲ್ಲದೇ ಯಾವುದರ ಬಗ್ಗೆಯೂ ಮಾತನಾಡಬಾರದು. ಜ್ಞಾನಿಗಳು ಜ್ಞಾನಿಗಳಾಗೆಯೇ ಇರಬೇಕು, ಇನ್ನೊಂದು ಆಗಬಾರದು ಎಂದು ಕಾಂಗ್ರೆಸ್ ಶಾಸಕನಿಗೆ ತಿರುಗೇಟು ನೀಡಿದ್ದಾರೆ.
ಏಪ್ರಿಲ್ 2 ರಂದು ನಡೆಯಲಿರುವ ಅಮಿತ್ ಶಾ ರೋಡ್ ಶೋ ಬಗ್ಗೆ ಮಾತನಾಡಿದ ಮಂಜುನಾಥ್, ಅಮಿತ್ ಶಾ ಅವರು ಪ್ರಥಮಬಾರಿಗೆ ಚುನಾವಣಾ ಪ್ರಚಾರಕ್ಕೆ ಬರ್ತಿದ್ದಾರೆ. ರೋಡ್ ಶೋ ರೂಪದಲ್ಲಿ ಪ್ರಚಾರ ಮಾಡಲಿದ್ದಾರೆ. ಬೆಂಗಳೂರಲ್ಲಿ ಬೇರೆ-ಬೇರೆ ಕಾರ್ಯಕ್ರಮಗಳಿದ್ದು ಅದನ್ನ ಮುಗಿಸಿಕೊಂಡು ಬರ್ತಾರೆ. ಅವರ ಬರುವಿಕೆ ನಮಗೆ ಹೊಸ ಶಕ್ತಿ ತುಂಬಲಿದೆ. ಇದು ನನ್ನ ಗೆಲುವಿಗೆ ಮತ್ತಷ್ಟು ವಿಶ್ವಾಸ ಮೂಡಲಿದೆ ಎಂದಿದ್ದಾರೆ. ಇದನ್ನೂ ಓದಿ: ಚುನಾವಣೆ ಬಂದ್ರೆ ಸಾಕು ಆಸ್ಪತ್ರೆ ಸೇರ್ತಾರೆ: ಹೆಚ್‌ಡಿಕೆ ಹೃದಯ ಶಸ್ತ್ರಚಿಕಿತ್ಸೆ ಬಗ್ಗೆ ‘ಕೈ’ ಶಾಸಕ ಅನುಮಾನ
ಏಪ್ರಿಲ್ 4ರಂದು ನಾಮಪತ್ರ ಸಲ್ಲಿಕೆ:
ಇದೇ ಏಪ್ರಿಲ್ 4ರಂದು ನಾನು ನಾಪಪತ್ರ ಸಲ್ಲಿಸುತ್ತೇನೆ. ಅಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ. ಬಿಜೆಪಿ-ಜೆಡಿಎಸ್ ಎರಡೂ ಪಕ್ಷದ ಕಾರ್ಯಕರ್ತರು, ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಬರಲಿದ್ದಾರೆ. ಮೆರವಣಿಗೆ, ಸಮಾವೇಶದ ಕುರಿತು ರೂಪುರೇಷೆ ಮಾಡಲಾಗುತ್ತಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ಕೊಡ್ತೀವಿ ಎಂದು ಡಾ.ಮಂಜುನಾಥ್ ತಿಳಿಸಿದ್ದಾರೆ.
ರಾಮನಗರ: ಕಾಂಗ್ರೆಸ್ ಕುಟುಂಬ ರಾಜಕಾರಣ ಆರೋಪಕ್ಕೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಡಾ. ಸಿ.ಎನ್ ಮಂಜುನಾಥ್ (Dr. CN Manjunath) ತಿರುಗೇಟು ನೀಡಿದ್ದಾರೆ.
ರಾಮನಗರದಲ್ಲಿ (Ramanagara) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಟುಂಬ ರಾಜಕಾರಣ (Family Politics) ಅನ್ನೋದು ರಾಜ್ಯ, ದೇಶದಲ್ಲಿ ಅಪ್ರಸ್ತುತ. ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ (Congress Candidates List) ತೆಗೆದು ನೋಡಿದ್ರೆ ಗೊತ್ತಾಗುತ್ತೆ. ಮಗ-ಮಗಳು, ಸೊಸೆ-ಅಳಿಯ, ಅಣ್ಣ ಎಲ್ಲರೂ ಇದ್ದಾರೆ. ಅವರ ಟೀಕೆಗಳ ಬಗ್ಗೆ ಚರ್ಚೆ ಈಗ ಅಪ್ರಸ್ತುತ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಹಣವಿಲ್ಲದೇ ರಾಜಕೀಯ ಪಕ್ಷ ನಡೆಸುವುದು ಸುಲಭವಲ್ಲ: ನಿತಿನ್ ಗಡ್ಕರಿ
ಕಳೆದ 10 ದಿನಗಳಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದೇನೆ. 8 ವಿಧಾನಸಭಾ ಕ್ಷೇತ್ರಗಳಲ್ಲಿ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಒಟ್ಟಾಗಿ ಸರಣಿ ಸಭೆಗಳನ್ನ ಮಾಡ್ತಿದ್ದಾರೆ. ನಿನ್ನೆ ಬೆಂಗಳೂರು ದಕ್ಷಿಣ, ಆರ್.ಆರ್ ನಗರ, ಕುಣಿಗಲ್‌ಗೆ ಹೋಗಿದ್ದೆ. ಬಹುಮುಖ್ಯವಾಗಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಎರಡೂ ಹೃದಯ ಒಟ್ಟಾಗಿದೆ. ಇದನ್ನೆಲ್ಲ ನೋಡ್ತಿದ್ರೆ ನಮ್ಮ ಗೆಲುವು 100% ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದು ಧರ್ಮ ಮತ್ತು ಅಧರ್ಮ ನಡುವೆ ಈ ಚುನಾವಣೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿ, ಅದರ ಬಗ್ಗೆ ನಾನು ವ್ಯಾಖ್ಯಾನ ಮಾಡೋದಕ್ಕೆ ಹೋಗೋದಿಲ್ಲ. ಪ್ರತಿಯೊಂದು ಚುನಾವಣೆ ಆರೋಗ್ಯಕರವಾಗಿ ನಡೆಯಬೇಕು. ಮತದಾರರನ್ನ ಯಾವುದೇ ರೀತಿಯ ಅಡ್ಡ ದಾರಿಗೆ ಎಳೆಯಬಾರದು ಅಷ್ಟೇ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಲೋಕಸಭಾ ಚುನಾವಣೆ ಬಳಿಕ ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಖಚಿತ – ಜೋಶಿ ಭವಿಷ್ಯ
– ಬಿಜೆಪಿ ಕಾರ್ಯಕರ್ತರಿಗೆ 20 ರಿಂದ 30 ಲಕ್ಷ ರೂ. ಆಮಿಷ ಒಡ್ಡುತ್ತಿದ್ದಾರೆ
– ಡಿಕೆ ಸುರೇಶ್ ವಿರುದ್ಧ ಮುನಿರತ್ನ ಪರೋಕ್ಷ ವಾಗ್ದಾಳಿ
ಬೆಂಗಳೂರು: ಗ್ರಾಮಾಂತರ ಕ್ಷೇತ್ರದಲ್ಲಿ ಸಾಕಷ್ಟು ಚುನಾವಣಾ ಅವ್ಯವಹಾರ ನಡೆಯುತ್ತಿದೆ. ಚುನಾವಣೆಗೆ ಹಂಚೋದಕ್ಕಾಗಿ ಕಾಂಗ್ರೆಸ್‌ನವರು 8 ಲಕ್ಷ ಕುಕ್ಕರ್ ಸಂಗ್ರಹಿಸಿದ್ದಾರೆ. ಮನೆ-ಮನೆಗಳಿಗೆ ಹೋಗಿ ದುಡ್ಡು ಕೊಡ್ತಿದ್ದಾರೆ. ಈ ಅಕ್ರಮಗಳನ್ನು ತಡೆಯಲು ಪ್ಯಾರಾ ಮಿಲಿಟರಿ ಫೋರ್ಸ್ ಬರಬೇಕು ಎಂದು ಆರ್‌ಆರ್ ನಗರ ಶಾಸಕ ಮುನಿರತ್ನ ಆಗ್ರಹಿಸಿದ್ದಾರೆ.
ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡಿ.ಕೆ ಸುರೇಶ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಚುನಾವಣೆಗೆ ಹಂಚಲು ಕಾಂಗ್ರೆಸ್‌ನವರು ಕುಕ್ಕರ್, ಸೀರೆ ಸಂಗ್ರಹ ಮಾಡಿಕೊಂಡಿದ್ದಾರೆ. ಅಧಿಕಾರಿಗಳು ದಾಳಿ ಮಾಡಿ ವಶಪಡಿಸಿಕೊಳ್ತಿಲ್ಲ. ದಾಳಿ ಮಾಡಿದ್ರೆ ತೊಂದರೆ ಆಗುತ್ತೆ ಅಂತಾ ಹೆದರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರಿಗೆ ಲಕ್ಷ ಲಕ್ಷ ಆಮಿಷ:
ಡಾ.ಸಿ.ಎನ್ ಮಂಜುನಾಥ್ ಅವರು ಪ್ರಾಮಾಣಿಕ ವ್ಯಕ್ತಿ, ಅಂತಹ ವ್ಯಕ್ತಿ ನಮ್ಮ ಗ್ರಾಮಾಂತರಕ್ಕೆ ಅಭ್ಯರ್ಥಿಯಾಗಿ ಸಿಕ್ಕಿದ್ದಾರೆ. ಒಳ್ಳೆಯ ರೀತಿಯ ಚುನಾವಣೆ ಮಾಡೋದನ್ನು ಬಿಟ್ಟು, ಇಂತಹ ಕೆಲಸ ಮಾಡ್ತಿದ್ದಾರೆ. ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿಯವರು ಕಂಡರೆ ಹೊಡೆಯಿರಿ ಅಂತ ಕರೆ ಕೊಟ್ಟಿದ್ದಾರೆ. ನಮ್ಮ ಕಾರ್ಯಕರ್ತರ ಮನೆಗೆ ರಾತ್ರೋ ರಾತ್ರಿ ಹೋಗಿ 10-20-25 ಲಕ್ಷ ರೂ. ಕೊಟ್ಟು ಬಲವಂತವಾಗಿ ಅವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವ ಕೆಲಸ ಮಾಡ್ತಿದ್ದಾರೆ ಎಂದು ದೂರಿದ್ದಾರೆ.
ನಮ್ಮ ಕ್ಷೇತ್ರದಲ್ಲಿ ಕುಕ್ಕರ್, ಸೀರೆಗಳು, ದುಡ್ಡನ್ನು ಶೇಖರಣೆ ಮಾಡಿ ಇಡ್ತಿದ್ದಾರೆ. ಈ ಬಗ್ಗೆ ಯಾವ ಅಧಿಕಾರಿಗಳು ಗಮನ ಹರಿಸಿಲ್ಲ, ಅಧಿಕಾರಿಗಳನ್ನ ಕೇಳಿದ್ರೆ ಅವರು ಭಯದಲ್ಲೇ ಮಾತನಾಡ್ತಿದ್ದಾರೆ. ಇಂತಹ ಅಧಿಕಾರಿಗಳು ಬೇಡ ಅಂತ ಆಯೋಗಕ್ಕೆ ಪತ್ರ ಬರೆದರೂ ಅವರನ್ನು ವರ್ಗಾವಣೆ ಮಾಡುತ್ತಿಲ್ಲ. ಈ ಚುನಾವಣೆ ಪಾರದರ್ಶಕವಾಗಿ ನಡೆಯಬೇಕಿದ್ದರೆ, ಕೇಂದ್ರ ಸರ್ಕಾರವೇ ಕ್ರಮ ವಹಿಸಬೇಕು ಎಂದು ಮನವಿ ಮಾಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಗೋಮಾಂಸ ವ್ಯಾಪಾರಿಗಳೇ ರಸ್ತೆ ತೆರವು ಮಾಡಿಸಿದ್ದಾರೆ:
ಯಶವಂತಪುರ ರೈಲು ನಿಲ್ದಾಣಕ್ಕೆ ಎಲ್ಲ ಭಾಗಗಳಿಂದಲೂ ರೈಲುಗಳು ಬರುತ್ತವೆ. ನಮ್ಮ ಸರ್ಕಾರ ಇದ್ದಾಗ ಜನರು ಓಡಾಡಲು ಅಲ್ಲಿ ಅಲ್ಲಿ ಒಂದು ರಸ್ತೆ ಮಾಡಲಾಗಿತ್ತು. ಪಕ್ಕದಲ್ಲೇ ಹೆರಿಗೆ ಆಸ್ಪತ್ರೆ, ಕೋವಿಡ್ ಆಸ್ಪತ್ರೆ ಇದೆ. ಜನರು ಸಹ ಈ ರಸ್ತೆಯನ್ನು ಹೆಚ್ಚಾಗಿಯೇ ಸದ್ಬಳಕೆ ಮಾಡಿಕೊಳ್ಳುತ್ತಿದ್ದರು. ಆದ್ರೆ ಅಲ್ಲಿರುವ ಗೋಮಾಂಸ ವ್ಯಾಪಾರಿಗಳು ಈ ರಸ್ತೆಯಿಂದ ತೊಂದರೆ ಆಗ್ತಿದೆ. ತೆರವು ಮಾಡಿಸಿಕೊಡಿ ಅಂತಾ ಮನವಿ ಮಾಡಿದ್ರು. ಅವರ ಮನವಿಗೆ ಒಪ್ಪಿ ಸಂಸದರು ರಸ್ತೆಯ ಪರಿಶೀಲನೆ ಮಾಡಿದ್ರು. ಈಗ ಜನರಿಗೆ ಅನುಕೂಲ ಆಗುವ ಈ ರಸ್ತೆಯನ್ನೇ ತೆರವು ಮಾಡಲು ಹೊರಟಿದ್ದಾರೆ. ಗೋಮಾಂಸ ವ್ಯಾಪಾರಿಗಳಿಗೆ ಅನುಕೂಲವಾಗಲು ರಸ್ತೆ ತೆರವು ಮಾಡುವಂತೆ ಅಧಿಕಾರಿಗಳಿಗೆ ಸಂಸದರು ಮೌಖಿಕ ಆದೇಶ ಮಾಡ್ತಾರೆ. ಅಧಿಕಾರಿಗಳು ಈ ರಸ್ತೆ ತೆರವು ಮಾಡಕ್ಕಾಗಲ್ಲ ಅಂತ ಹೇಳಿದ್ದಾರೆ. ಈ ಮಧ್ಯೆ ದನದ ಮಾಂಸ ವ್ಯಾಪಾರಿಗಳೇ ಜೆಸಿಬಿ ತಂದು ರಸ್ತೆ ತೆರವು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಬೆಂಗಳೂರು: ಜಯದೇವ ಆಸ್ಪತ್ರೆಯ ನಿರ್ದೇಶಕರ (Jayadeva Hospital Director) ಸ್ಥಾನದಿಂದ ಡಾ. ಸಿಎನ್ ಮಂಜುನಾಥ್ (CN Manjunath) ಅವರು ನಿವೃತ್ತಿಯಾದ ಹಿನ್ನೆಲೆ, ಇದೀಗ ನಿರ್ದೇಶಕರ ಹುದ್ದೆಗಾಗಿ ವೈದ್ಯಕೀಯ ಶಿಕ್ಷಣ ಇಲಾಖೆಗೆ 21 ವೈದ್ಯರು ಅರ್ಜಿ ಸಲ್ಲಿಸಿದ್ದಾರೆ ಎಂದು ಇಲಾಖೆಯ ಉನ್ನತ ಅಧಿಕಾರಿಗಳು ʻಪಬ್ಲಿಕ್ ಟಿವಿʼಗೆ ಮಾಹಿತಿ ನೀಡಿದ್ದಾರೆ.
ವೈದ್ಯಕೀಯ ಕಾಲೇಜ್‍ಗಳಲ್ಲಿ ಪ್ರೊಫೆಸರ್ ಆಗಿ ಕಾರ್ಯ ನಿರ್ವಹಿಸಿದ, ಬೆಂಗಳೂರು ಮತ್ತು ಮೈಸೂರು ಭಾಗದವರಿಂದ ಅರ್ಜಿ ಸಲ್ಲಿಕೆಯಾಗಿದೆ. ಈ 21 ಅರ್ಜಿಯಲ್ಲಿ 11 ಅಭ್ಯರ್ಥಿಗಳು ಈ ಹುದ್ದೆಗೆ ಅರ್ಹತೆ ಹೊಂದಿದ್ದಾರೆ. ಇನ್ನುಳಿದ 10 ಅರ್ಜಿಗಳಿಗೆ ಹುದ್ದೆಗೆ ಬೇಕಾದ ಅರ್ಹತೆ ಇಲ್ಲ ಎಂದು ತಿಳಿದು ಬಂದಿದೆ. ಸರ್ಕಾರ ಮುಂದಿನವಾರ ಜಯದೇವ ಆಸ್ಪತ್ರೆಯ ನಿರ್ದೇಶಕರನ್ನ ಆಯ್ಕೆ ಮಾಡುವ ಸಾಧ್ಯತೆ ಇದೆ. ಇದನ್ನೂ ಓದಿ: ಡಾ.ಮಂಜುನಾಥ್‌ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸಿ: ಸಿಎಂಗೆ ಆರ್.ಅಶೋಕ್ ಮನವಿ
ಈಗ ಜಯದೇವ ಆಸ್ಪತ್ರೆಯ (Jayadeva Hospital) ಪ್ರಭಾರ ನಿರ್ದೇಶಕರಾಗಿ ಡಾ. ರವೀಂದ್ರ ಅವರನ್ನು ನೇಮಿಸಲಾಗಿದೆ. ಡಾ. ರವೀಂದ್ರ ಅವರು ನಿರ್ದೇಶಕರ ಹುದ್ದೆಗೆ ಅರ್ಜಿ ಸಲ್ಲಿಸಿಲ್ಲ. ಜಯದೇವ ಆಸ್ಪತ್ರೆ ನಿರ್ದೇಶಕ ಹುದ್ದೆ ಯಾರಿಗೆ ಒಲಿಯಲಿದೆ ಎಂಬುದೇ ಇದೀಗ ಕುತೂಹಲ ಮೂಡಿಸಿದೆ.
ಅರ್ಜಿ ಸಲ್ಲಿಸಲು ಅರ್ಹತೆ ಏನು?
ವೈದ್ಯಕೀಯ ಕಾಲೇಜ್‍ಗಳಲ್ಲಿ 5 ವರ್ಷ ಸೇವೆ ಸಲ್ಲಿಸಿರಬೇಕು ಹಾಗೂ ಪ್ರೊಫೆಸರ್ ಆಗಿರಬೇಕು. ಈ ಅರ್ಹತೆ ಇದ್ದವರು ಆಸ್ಪತ್ರೆಯ ನಿರ್ದೇಶಕರ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿತ್ತು. ಇದನ್ನೂ ಓದಿ: ಮಂಜುನಾಥ್‌ರಂತಹ ಅಳಿಯ ಸಿಕ್ಕಿದ್ದು ನನ್ನ ಪುಣ್ಯ: ಹೆಚ್.ಡಿ ದೇವೇಗೌಡ