Tag: coaching centre

  • Delhi Coaching Centre Flooded: ಯುಪಿಎಸ್‌ಸಿ ವಿದ್ಯಾರ್ಥಿಗಳ ಸಾವಿನ ತನಿಖೆಗೆ ಸಮಿತಿ ರಚಿಸಿದ ಗೃಹ ಇಲಾಖೆ

    Delhi Coaching Centre Flooded: ಯುಪಿಎಸ್‌ಸಿ ವಿದ್ಯಾರ್ಥಿಗಳ ಸಾವಿನ ತನಿಖೆಗೆ ಸಮಿತಿ ರಚಿಸಿದ ಗೃಹ ಇಲಾಖೆ

    ನವದೆಹಲಿ: ಮಳೆ ನೀರು ನುಗ್ಗಿ ಮೂವರು ಯುಪಿಎಸ್‌ಸಿ ವಿದ್ಯಾರ್ಥಿಗಳ (UPSC Students) ಸಾವಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಕೇಂದ್ರ ಗೃಹ ಇಲಾಖೆ ಸಮಿತಿ ರಚಿಸಿದೆ. ಮುಂದೆ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲು ಸಲಹೆಗಳನ್ನೂ ನೀಡುವಂತೆ ಸೂಚಿಸಿದ್ದು, 30 ದಿನಗಳಲ್ಲಿ ಇದಕ್ಕೆ ಸಂಬಂಧಿಸಿದಂತೆ ವಿಸ್ತೃತ ವರದಿ ನೀಡುವಂತೆ ಹೇಳಿದೆ.

    ಸಮಿತಿಯು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ (ಗೃಹ), ದೆಹಲಿ ಸರ್ಕಾರ, ವಿಶೇಷ ಸಿಪಿ, ದೆಹಲಿ ಪೊಲೀಸ್, ಅಗ್ನಿಶಾಮಕ ಸಲಹೆಗಾರ ಮತ್ತು ಜಂಟಿ ಕಾರ್ಯದರ್ಶಿಗಳನ್ನು ಒಳಗೊಂಡಿದೆ. ಇದನ್ನೂ ಓದಿ: ಮುಸ್ಲಿಮರ ಓಲೈಕೆಗೆ ರಾಮನಗರ ಹೆಸರು ಬದಲಾವಣೆ: ಈಶ್ವರಪ್ಪ

    ರಚನೆಯಾಗಿರುವ ಸಮಿತಿ ಘಟನೆಗೆ ಕಾರಣಗಳನ್ನು ಪರಿಶೀಲಿಸುತ್ತದೆ. ಜವಾಬ್ದಾರಿಯನ್ನು ನಿರ್ಧರಿಸುತ್ತದೆ. ಕ್ರಮಗಳನ್ನು ಸೂಚಿಸುತ್ತದೆ ಮತ್ತು ನೀತಿ ಬದಲಾವಣೆಗಳನ್ನು ಶಿಫಾರಸು ಮಾಡುತ್ತದೆ ಎಂದು ಗೃಹ ಸಚಿವಾಲಯ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ತಿಳಿಸಿದೆ‌. ಇದನ್ನೂ ಓದಿ: ಭ್ರಷ್ಟಾಚಾರ ಆರೋಪ – ಸಿಎಂ ವಿರುದ್ಧ ಕೋಟಾ ಶ್ರೀನಿವಾಸ್ ಪೂಜಾರಿ ಮೌನ ಪ್ರತಿಭಟನೆ

    ರಾವ್ ಅವರ ಐಎಎಸ್ ಸ್ಟಡಿ ಸರ್ಕಲ್ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನ ಕಟ್ಟಡದ ನೆಲಮಾಳಿಗೆಯಲ್ಲಿ ಶನಿವಾರ ಸಂಜೆ ಪ್ರವಾಹದಿಂದಾಗಿ ಮೂವರು ಐಎಎಸ್ ಆಕಾಂಕ್ಷಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಈ ಬಗ್ಗೆ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸಹ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕುಡಿಯುವ ನೀರಿಗಾಗಿ ಜನ ಮತ ಹಾಕಿದ್ದಾರೆ; ಬೆಂಗಳೂರಿಗೆ ನೀರು ಕೊಡಿ – ರಾಜ್ಯಸಭೆಯಲ್ಲಿ ಹೆಚ್‌ಡಿಡಿ ಮನವಿ

  • 10ಕ್ಕೂ ಹೆಚ್ಚು ಅನಧಿಕೃತ ಕೋಚಿಂಗ್‌ ಸೆಂಟರ್‌ಗಳ ಮೇಲೆ ದಾಳಿ – ಸೋಮವಾರದ ಒಳಗೆ ಬಂದ್‌ಗೆ ಸೂಚನೆ!

    10ಕ್ಕೂ ಹೆಚ್ಚು ಅನಧಿಕೃತ ಕೋಚಿಂಗ್‌ ಸೆಂಟರ್‌ಗಳ ಮೇಲೆ ದಾಳಿ – ಸೋಮವಾರದ ಒಳಗೆ ಬಂದ್‌ಗೆ ಸೂಚನೆ!

    – ಗಡುವು ಮೀರಿದ್ರೆ ಕ್ರಿಮಿನಲ್‌ ಕೇಸ್‌ ಎಚ್ಚರಿಕೆ!

    ರಾಯಚೂರು: ಇಲ್ಲಿನ ಲಿಂಗಸುಗೂರು ಪಟ್ಟಣದಲ್ಲಿ ಅನಧಿಕೃತವಾಗಿ ನಡೆಯುತ್ತಿದ್ದ ಅನಧಿಕೃತ ಕೋಚಿಂಗ್‌ ಸೆಂಟರ್‌ಗಳ (Coaching Centre) ಮೇಲೆ ದಾಳಿ ನಡೆಸಿರುವ ಘಟನೆ ನಡೆದಿದೆ.

    ಲಿಂಗಸೂಗೂರು ಎಸಿ ಅವಿನಾಶ್ ಶಿಂಧೆ ನೇತೃತ್ವದಲ್ಲಿ 10ಕ್ಕೂ ಹೆಚ್ಚು ಕೋಚಿಂಗ್‌ ಸೆಂಟರ್‌ಗಳ ಮೇಲೆ ದಾಳಿ ನಡೆಸಿದ್ದಾರೆ. ಸೋಮವಾರದೊಳಗಾಗಿ ಎಲ್ಲಾ ಕೋಚಿಂಗ್ ಸೆಂಟರ್‌ಗಳು ಬಂದ್ ಆಗಬೇಕು. ಗಡುವು ಮೀರಿದ ಬಳಿಕ ಕ್ಲಾಸ್ (Coaching Class) ನಡೆಸಿದ್ರೆ ಕ್ರಿಮಿನಲ್ ಕೇಸ್ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.

    ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ ಅನುಮತಿ ಪಡೆಯದೇ ರಾಜಾರೋಷವಾಗಿ ಕೋಚಿಂಗ್‌ ಸೆಂಟರ್‌ ನಡೆಸುತ್ತಿದ್ದದ್ದು ಕಂಡುಬಂದಿದೆ. ಕೆಲವು ವಸತಿ ಸಹಿತವಾಗಿದ್ದರೆ, ಇನ್ನೂ ಕೆಲವು ವಸತಿ ರಹಿತವಾಗಿ ನಡೆಸುತ್ತಿದ್ದದ್ದು ಪತ್ತೆಯಾಗಿದೆ. ಹಾಗಾಗಿ ದಾಳಿ ನಡೆಸಿದ ಅಧಿಕಾರಿಗಳ ತಂಡ ಸೋಮವಾರದ ಒಳಗೆ ಕೋಚಿಂಗ್‌ ಸೆಂಟರ್‌ಗಳನ್ನು ಬಂದ್‌ ಮಾಡುವಂತೆ ಸೂಚಿಸಿದೆ.

    ಎಲ್ಲಾ ಕೇಂದ್ರಗಳನ್ನು ಬಂದ್‌ ಮಾಡಿದ ಮಕ್ಕಳನ್ನು ತಮ್ಮ ತಮ್ಮ ಪೋಷಕರ ಬಳಿ ಕಳುಹಿಸಬೇಕು. ಗಡುವು ಮೀರಿದ ಬಳಿಕ ಕ್ಲಾಸ್ ನಡೆಸಿದ್ರೆ ಕ್ರಿಮಿನಲ್ ಕೇಸ್ ಹಾಕುವುದಾಗಿ ಲಿಂಗಸುಗೂರು ಸಹಾಯಕ ಆಯುಕ್ತ ಅವಿನಾಶ್ ಶಿಂಧೆ ಎಚ್ಚರಿಕೆ ನೀಡಿದ್ದಾರೆ.

  • ದೆಹಲಿಯ ಕೋಚಿಂಗ್ ಸೆಂಟರ್‌ನಲ್ಲಿ ಭಾರೀ ಬೆಂಕಿ – ಕಿಟಕಿಯಿಂದ ಹಾರಿ ಜೀವ ಉಳಿಸಿಕೊಂಡ ವಿದ್ಯಾರ್ಥಿಗಳು

    ದೆಹಲಿಯ ಕೋಚಿಂಗ್ ಸೆಂಟರ್‌ನಲ್ಲಿ ಭಾರೀ ಬೆಂಕಿ – ಕಿಟಕಿಯಿಂದ ಹಾರಿ ಜೀವ ಉಳಿಸಿಕೊಂಡ ವಿದ್ಯಾರ್ಥಿಗಳು

    ನವದೆಹಲಿ: ಕೋಚಿಂಗ್ ಸೆಂಟರ್ (Coaching Centre) ಒಂದರಲ್ಲಿ ಭಾರೀ ಬೆಂಕಿ (Fire) ಕಾಣಿಸಿಕೊಂಡಿದ್ದು, ವಿದ್ಯಾರ್ಥಿಗಳು (Students) ಕಿಟಕಿಯಿಂದ (Window) ಹಾರಿ ಜೀವ ಉಳಿಸಿಕೊಂಡಿರುವ ಘಟನೆ ದೆಹಲಿಯ (Delhi) ಮುಖರ್ಜಿ ನಗರ ಪ್ರದೇಶದಲ್ಲಿ ನಡೆದಿದೆ.

    ನಗರದ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ಗುರುವಾರ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಮಧ್ಯಾಹ್ನ 12:30ರ ವೇಳೆ ಬೆಂಕಿ ಕಾಣಿಸಿಕೊಂಡಿದ್ದು, 11 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಬೆಂಕಿ ನಂದಿಸಲು ಹಾಗೂ ರಕ್ಷಣಾ ಕಾರ್ಯಗಳನ್ನು ಮುಂದುವರಿಸಲಾಗಿದೆ.

    ಘಟನೆಗೆ ಸಂಬಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋಗಳು ಹರಿದಾಡುತ್ತಿವೆ. ಜನರು, ವಿದ್ಯಾರ್ಥಿಗಳನ್ನು ಅಗ್ನಿಶಾಮಕ ಸಿಬ್ಬಂದಿ ಕಿಟಕಿಗಳ ಮೂಲಕ ರಕ್ಷಣೆ ಮಾಡುತ್ತಿರುವುದು ಕಾಣಿಸಿಕೊಂಡಿದೆ. ಜನರು ಹಗ್ಗಗಳನ್ನು ಬಳಸಿ ಬೆಂಕಿಯಿಂದ ತಪ್ಪಿಸಿಕೊಳ್ಳುತ್ತಿರುವುದು ವೀಡಿಯೋದಲ್ಲಿ ಕಂಡುಬಂದಿದೆ. ಸದ್ಯ ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ. ಇದನ್ನೂ ಓದಿ: ಬ್ರಿಜ್ ಭೂಷಣ್ ವಿರುದ್ಧ 1,000 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ – ಪೋಕ್ಸೊ ಕೇಸ್‌ ರದ್ದಿಗೆ ದೆಹಲಿ ಪೊಲೀಸರ ಶಿಫಾರಸ್ಸು

    ಕಟ್ಟಡದ ವಿದ್ಯುತ್ ಮೀಟರ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಬೆಂಕಿ ಹೊತ್ತಿಕೊಂಡ ಕಟ್ಟಡದಿಂದ ತಪ್ಪಿಸಿಕೊಳ್ಳುತ್ತಿದ್ದಾಗ 4 ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಸದ್ಯ ಯಾವುದೇ ವ್ಯಕ್ತಿ ಬೆಂಕಿ ತಗುಲಿದ ಕಟ್ಟಡದಲ್ಲಿ ಸಿಲುಕಿಕೊಂಡಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: KRS ಡ್ಯಾಂ ನೀರಿನ ಮಟ್ಟ 5 ವರ್ಷದಲ್ಲಿ ದಾಖಲೆ ಪ್ರಮಾಣದಲ್ಲಿ ಕುಸಿತ

  • ಕೊರೊನಾ ನಿಯಮ ಉಲ್ಲಂಘಿಸಿ ಕೋಚಿಂಗ್ ಸೆಂಟರ್ ಓಪನ್- ಮಾಲೀಕ ಅರೆಸ್ಟ್

    ಕೊರೊನಾ ನಿಯಮ ಉಲ್ಲಂಘಿಸಿ ಕೋಚಿಂಗ್ ಸೆಂಟರ್ ಓಪನ್- ಮಾಲೀಕ ಅರೆಸ್ಟ್

    ಅಹಮದಾಬಾದ್: ಕೊರೊನಾ ನಿಮಯವನ್ನು ಉಲ್ಲಂಘಿಸಿ ಕೋಚಿಂಗ್ ಸೆಂಟರ್ ಓಪನ್ ಮಾಡಿ 555 ವಿದ್ಯಾರ್ಥಿಗಳಿಗೆ ಒಂದು ಕಡೆ ಸೇರಿಸಿ ಕೊಚಿಂಗ್ ನೀಡುತ್ತಿದ್ದ ಕೋಚಿಂಗ್ ಸೆಂಟರ್ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.

    ಕೋವಿಡ್ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಗುಜರಾತ್‍ನ ರಾಜ್ ಕೋಟ್ ಜಿಲ್ಲೆಯ ಜಸ್ದಾನ್ ನಗರದ ಕೋಚಿಂಗ್ ಸೆಂಟರ್ ಮೇಲೆ ಪೊಲೀಸರು ಭಾನುವಾರ ದಾಳಿ ನಡೆಸಿದ್ದು,  ಮಾಲೀಕ ಜಯ್ ಸುಖ್ ಸಂಖಾಲ್ವಾ(39 )ಎಂದು ಗುರುತಿಸಲಾಗಿದೆ. ಸೋಮವಾರ ಜಯ್ ಸುಖ್‍ನನ್ನು ಬಂಧಿಸಲಾಗಿದೆ. ದಾಳಿ ನಡೆಸಿದ ವೇಳೆ 550ಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಿದ್ದರು ಎಂದು ರಾಜ್ ಕೋಟ್ ಪೊಲೀಸ್ ವರಿಷ್ಠಾಧಿಕಾರಿ ಬಲರಾಮ್ ಮೀನಾ ತಿಳಿಸಿದ್ದಾರೆ.

    ಕೋವಿಡ್ 19 ಮಾರ್ಗಸೂಚಿ ಹಾಗೂ ಪೊಲೀಸ್ ಅಧಿಸೂಚನೆಯನ್ನು ಉಲ್ಲಂಘಿಸಿ ಸೋಂಕನ್ನು ಹರಡಲು ಕಾರಣಕರ್ತನಾಗಿರುವ ಜಯ್ ಸುಖ್ ನನ್ನು ಐಪಿಸಿ ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಬಂಧಿಸಲಾಗಿದ್ದು, ವಿದ್ಯಾರ್ಥಿಗಳನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ ಎಂದು ಮೀನಾ ವಿವರಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಜವಾಹರ್ ನವೋದಯ ವಿದ್ಯಾಲಯ ಮತ್ತು ಬಾಲಚಾಡಿ ಸೈನಿಕ್ ಶಾಲೆಯ ವಿದ್ಯಾರ್ಥಿಗಳಿಗೆ ಜಯ್ ಸುಖ್ ಪ್ರವೇಶ ಪರೀಕ್ಷೆಯ ಕೋಚಿಂಗ್ ನೀಡುತ್ತಿದ್ದು, ಈತ ಕೋಚಿಂಗ್ ಕಮ್ ಹಾಸ್ಟೆಲ್ ನಡೆಸುತ್ತಿದ್ದ ಎಂದು ತಿಳಿಸಿದ್ದಾರೆ.