ಉಡುಪಿ: ಕರಾವಳಿ ಜಿಲ್ಲೆಗಳನ್ನು ರಾಜ್ಯ ಸರ್ಕಾರ ಸಂಪೂರ್ಣ ನಿರ್ಲಕ್ಷಿಸುತ್ತಿದೆ ಎಂದು ಬಿಜೆಪಿ ಪ್ರತಿಭಟನೆ ಮಾಡಿದೆ.
ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಉಡುಪಿ ಜಿಲ್ಲೆಯನ್ನು ಸಂಪೂರ್ಣವಾಗಿ ಕಡೆಗಣಿಸಿ, ಜಿಲ್ಲೆಗೆ ಮಲತಾಯಿ ಧೋರಣೆ ಅನುಸರಿಸಿದ್ದಾರೆಂದು ಬಿಜೆಪಿ ಖಂಡಿಸಿತು.
ಧರ್ಮಾಧಾರಿತವಾಗಿ ಸಂವಿಧಾನ ಬಾಹಿರವಾಗಿ, ಸಾರ್ವಜನಿಕ ಗುತ್ತಿಗೆಯಲ್ಲಿ ಮುಸ್ಲಿಮರಿಗೆ 4% ಮೀಸಲಾತಿಯನ್ನು ನೀಡಿದೆ ಎಂದು ಸರ್ಕಾರದ ಸಂವಿಧಾನ ವಿರೋಧಿ ನಡೆಯ ವಿರುದ್ಧ ಘೋಷಣೆಗಳನ್ನು ಕೂಗಲಾಯ್ತು. ಬಿಜೆಪಿ ಕಚೇರಿಯಿಂದ ಕಲ್ಸಂಕದವರೆಗೆ ಪಾದಯಾತ್ರೆ ಮಾಡಿ ಪ್ರತಿಭಟಿಸಲಾಯಿತು.
ಬೆಂಗಳೂರು: ರಾಜ್ಯದಲ್ಲಿ ನಿರಂತರ ಮಳೆಯಿಂದ (Rain) ಜನಜೀವನ ಅಸ್ತವ್ಯಸ್ತವಾಗಿದೆ. ಸದ್ಯ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಮಳೆಯಿಂದ ಬಿಡುವಿಲ್ಲದಂತಾಗಿದ್ದು, ಕರಾವಳಿ ಜಿಲ್ಲೆಗಳಿಗೆ ಇಂದು ರೆಡ್ ಅಲರ್ಟ್ (Red Alert) ಘೋಷಿಸಲಾಗಿದೆ.
ಈ ಮೊದಲು ಕರಾವಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಇದೀಗ ಮತ್ತೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಜಿಲ್ಲೆಗಳಿಗೆ ಗುರುವಾರ ಆರೆಂಜ್ ಅಲರ್ಟ್ ಘೋಷಿಸಲಾಗಿತ್ತು. ಇಂದು ಮತ್ತೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈಗಾಗಲೇ ಕೇರಳ (Kerala) ಭಾಗದಲ್ಲಿ ವರುಣ ಅಬ್ಬರಿಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಇಂದು ಆರೆಂಜ್ ಅಲರ್ಟ್ ನೀಡಲಾಗಿದೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್ | ವಿಡಿಯೋಗಳು ಅಸಲಿ – ಎಫ್‌ಎಸ್‌ಎಲ್ ವರದಿಯಲ್ಲಿ ಏನಿದೆ?
ಉಳಿದಂತೆ ಮಲೆನಾಡು ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದೆ. ಸದ್ಯ ಮಲೆನಾಡು ಜಿಲ್ಲೆಗಳು ರೆಡ್ ಅಲರ್ಟ್ನಿಂದ ಯೆಲ್ಲೋ ಅಲರ್ಟ್ಗೆ ಮರಳಿದೆ. ಇಂದಿನಿಂದ ಮುಂದಿನ ಮೂರ್ನಾಲ್ಕು ದಿನ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತವರಣ ಮುಂದುವರಿಯಲಿದ್ದು, ಕೆಲವೊಮ್ಮೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ; ಐವರು ಸಾವು, 50 ಮಂದಿ ಕಣ್ಮರೆ
ಬೆಂಗಳೂರು: ಇಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆಯನ ಅಬ್ಬರ ಜೋರಾಗಿದೆ. ನಗರದ ಹಲವು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ನಾಳೆಯೂ ಮಳೆ ಮುಂದುವರೆಯುವ ಕಾರಣದಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ಸಂಬಂಧ ಮಾಹಿತಿ ನೀಡಿದ ಭಾರತೀಯ ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ.ಎಸ್. ಪಾಟೀಲ್, ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 23ರಿಂದ 25ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಅಕ್ಟೋಬರ್ 26ರಂದು ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಅಕ್ಟೋಬರ್ 27ರಂದು ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗುತ್ತದೆ. ಅಕ್ಟೋಬರ್ 23ರಿಂದ 26ರವರೆಗೆ ದಕ್ಷಿಣ ಕರ್ನಾಟಕದ ಕೆಲವು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 24ರಂದು ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗುತ್ತದೆ. ಜೊತೆಗೆ ನಾಳೆಯೂ ಬೆಂಗಳೂರಿನಲ್ಲಿ ಮಳೆ ಮುಂದುವರೆಯಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇಂದು ಬೆಂಗಳೂರು, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಕೆಲವು ಭಾಗದಲ್ಲಿ ಭಾರೀ ಮಳೆಯಾಗುತ್ತದೆ. ಜೊತೆಗೆ ಅಕ್ಟೋಬರ್ 24ರಂದು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಬ್ಬರ ಮಳೆ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ಬೆಂಗಳೂರು, ರಾಮನಗರ, ಮಂಡ್ಯ, ತುಮಕೂರು, ಕೋಲಾರ, ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಸಿ.ಎಸ್. ಪಾಟೀಲ್ ಮಾಹಿತಿ ನೀಡಿದರು.
ಎಷ್ಟು ಮಳೆಯಾಗುತ್ತೆ?
64.5 ಮಿ.ಮೀ ನಿಂದ 115.5 ಮಿ.ಮೀ ಒಳಗಡೆ ಮಳೆಯಾಗುವ ಸಾಧ್ಯತೆ ಇದ್ದರೆ ಯೆಲ್ಲೋ ಅಲರ್ಟ್ ಘೋಷಣೆಯಾಗುತ್ತದೆ. 115.6 ಮಿ.ಮೀ ನಿಂದ 204.4 ಮಿ.ಮೀ. ಒಳಗಡೆ ಮಳೆಯಾಗಲಿದ್ದರೆ ಆರೆಂಜ್ ಅಲರ್ಟ್ ಎಂದು ಪ್ರಕಟಿಸಲಾಗುತ್ತದೆ. 204.5 ಮಿ.ಮೀಗಿಂತ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದ್ದರೆ ರೆಡ್ ಅಲರ್ಟ್ ಘೋಷಣೆ ಮಾಡಲಾಗುತ್ತದೆ.