Tag: code of conduct

  • ಚಿಕ್ಕೋಡಿಯಲ್ಲಿ 16 ಲಕ್ಷ ನಗದು ಸೀಜ್- ಇಬ್ಬರನ್ನು ವಶಕ್ಕೆ ಪಡೆದ ಪೊಲೀಸ್ರು

    ಚಿಕ್ಕೋಡಿಯಲ್ಲಿ 16 ಲಕ್ಷ ನಗದು ಸೀಜ್- ಇಬ್ಬರನ್ನು ವಶಕ್ಕೆ ಪಡೆದ ಪೊಲೀಸ್ರು

    ಚಿಕ್ಕೋಡಿ: ಲೋಕಸಭಾ ಚುನಾವಣೆಯ (Loksabha Elections 2024) ದಿನಾಂಕ ಘೋಷಣೆಯಾದ ಬೆನ್ನಲ್ಲೇ ನೀತಿ ಸಂಹಿತೆ (Code Of Conduct) ಕೂಡ ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆಕ್ಟೀವ್ ಆಗಿದ್ದಾರೆ. ಅಂತೆಯೇ ಚಿಕ್ಕೋಡಿಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಬಸ್ ಮೂಲಕ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 16 ಲಕ್ಷ 31 ಸಾವಿರ ರೂ. ವಶಕ್ಕೆ ಪಡೆದಿದ್ದಾರೆ.

    ತಡರಾತ್ರಿ ಚಿಕ್ಕೋಡಿ ಬಸ್ ನಿಲ್ದಾಣದಲ್ಲಿ ಪೊಲೀಸರ ತಪಾಸಣೆ ವೇಳೆ ಹಣ ಪತ್ತೆಯಾಗಿದೆ. ಚಿಕ್ಕೋಡಿಯಿಂದ ಮಹಾರಾಷ್ಟ್ರದ ಇಚಲಕರಂಜಿ ನಗರಕ್ಕೆ ತೆರಳುತ್ತಿದ್ದ ಬಸ್ ತಪಾಸಣೆ ವೇಳೆ ದಾಖಲೆ ಇಲ್ಲದ ಹಣ ಪತ್ತೆಯಾಗಿದೆ. ಅಕ್ರಮ ಹಣದ ಜೊತೆಗೆ ಇಬ್ಬರನ್ನ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ.

    ಹಣ ಸಾಗಾಟ ಮಾಡುವರು ಮಹಾರಾಷ್ಟ್ರದ ಇಚಲಕರಂಜಿ ನಗರದ ನಿವಾಸಿಗಳಾಗಿದ್ದಾರೆ. ಪ್ರಕರಣವನ್ನ ಆದಾಯ ತೆರಿಗೆ ಇಲಾಖೆಗೆ ಪೊಲೀಸರು ಹಸ್ತಾಂತರಿಸಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಮಂಗಳೂರಿನಲ್ಲಿ ಎಳನೀರು ಕುಡಿದು 15 ಮಂದಿ ಅಸ್ವಸ್ಥ!

  • ರೈತ ಬಂಧು ಯೋಜನೆ ಮುಂದೂಡುವಂತೆ ತೆಲಂಗಾಣ ಸರ್ಕಾರಕ್ಕೆ ಚು.ಆಯೋಗ ಸೂಚನೆ

    ರೈತ ಬಂಧು ಯೋಜನೆ ಮುಂದೂಡುವಂತೆ ತೆಲಂಗಾಣ ಸರ್ಕಾರಕ್ಕೆ ಚು.ಆಯೋಗ ಸೂಚನೆ

    ನವದೆಹಲಿ: ಚುನಾವಣಾ ಮಾದರಿ ನೀತಿ ಸಂಹಿತೆ (Code Of Conduct) ಉಲ್ಲಂಘನೆ ಆರೋಪ ಹಿನ್ನೆಲೆ ರೈತ ಬಂಧು ಯೋಜನೆ (Rythu Bandhu Scheme) ಮುಂದೂಡುವಂತೆ ತೆಲಂಗಾಣ (Telangana) ಸರ್ಕಾರಕ್ಕೆ ಕೇಂದ್ರ ಚುನಾವಣಾ ಆಯೋಗ (Election Commission) ಸೂಚನೆ ನೀಡಿದೆ.

    ಮತದಾನಕ್ಕೂ (Voting) ಮುನ್ನ ರೈತರ ಅಕೌಂಟ್‌ಗೆ ಹಣ ಹಾಕಿ ಅದರ ಲಾಭ ಪಡೆಯಲು ಬಿಆರ್‌ಎಸ್ (BRS) ಚಿಂತಿಸಿತ್ತು. ಇದಕ್ಕೂ ಮೊದಲು ಯೋಜನೆಗೆ ಅನುಮತಿ ನೀಡಿದ್ದ ಕೇಂದ್ರ ಚುನಾವಣಾ ಆಯೋಗ ಪ್ರಚಾರಕ್ಕೆ ಬಳಸಿಕೊಳ್ಳದಂತೆ ಷರತ್ತು ವಿಧಿಸಿತ್ತು. ಅದಾಗ್ಯೂ ಬಿಆರ್‌ಎಸ್‌ನಿಂದ ಸ್ಪರ್ಧಿಸಿರುವ ರಾಜ್ಯ ಹಣಕಾಸು ಸಚಿವ ಟಿ ಹರೀಶ್ ರಾವ್ ಚುನಾವಣಾ ಪ್ರಚಾರಗಳಿಗೆ ಯೋಜನೆಯನ್ನು ಬಳಸಿಕೊಂಡಿದ್ದರು. ಈ ಬಗ್ಗೆ ಪ್ರತಿಪಕ್ಷಗಳಿಂದ ದೂರು ದಾಖಲಾದ ಹಿನ್ನೆಲೆ ಯೋಜನೆಗೆ ತಾತ್ಕಾಲಿಕ ತಡೆ ನೀಡಿದೆ. ಇದನ್ನೂ ಓದಿ: ಡಿಸೆಂಬರ್ 1ರಿಂದ ಭಾರತೀಯರಿಗೆ ಮಲೇಷ್ಯಾಕ್ಕೆ ವೀಸಾ ಮುಕ್ತ ಪ್ರಯಾಣ

    2018ರಲ್ಲಿ ಪ್ರಾರಂಭವಾದ ರೈತ ಬಂಧು ಯೋಜನೆಯು ರೈತರಿಗೆ ಅನಿಶ್ಚಿತತೆಗಳನ್ನು ಪೂರೈಸಲು ಮತ್ತು ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ಅನುವು ಮಾಡಿಕೊಡಲು ಒಂದು ಬೆಳೆ ಋತುವಿಗೆ ಎಕರೆಗೆ 5,000 ರೂ. ನಗದು ಹಣವನ್ನು ರೈತರ ಬ್ಯಾಂಕ್ ಖಾತೆಗೆ ಸರ್ಕಾರ ವರ್ಗಾಯಿಸುತ್ತದೆ. ಕೆಲವು ಷರತ್ತುಗಳ ಅಡಿಯಲ್ಲಿ ಅಕ್ಟೋಬರ್-ಜನವರಿ ಅವಧಿಯಲ್ಲಿ ತಮ್ಮ ರಾಬಿ ಬೆಳೆಗಳನ್ನು ಬೆಳೆಯಲು ರೈತರಿಗೆ ಹಣಕಾಸಿನ ನೆರವು ವಿತರಣೆಗಾಗಿ ತೆಲಂಗಾಣ ಸರ್ಕಾರಕ್ಕೆ ಆಯೋಗ ಅನುಮತಿ ನೀಡಿತ್ತು. ಇದನ್ನೂ ಓದಿ: ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ಪ್ರಧಾನಿ ಮೋದಿ ಭೇಟಿ

    ನೀತಿ ಸಂಹಿತೆ ಅಸ್ತಿತ್ವಕ್ಕೆ ಬಂದ ನಂತರ ಹಣ ನೀಡಿರುವುದನ್ನು ಪ್ರಚಾರ ಮಾಡದಂತೆ ಚುನಾವಣಾ ಸಂಸ್ಥೆ ರಾಜ್ಯ ಸರ್ಕಾರವನ್ನು ಕೋರಿತ್ತು. ಆದರೆ ಹಲವು ನಾಯಕರು ಈ ಬಗ್ಗೆ ಉಲ್ಲೇಖಿಸಿದ ಹಿನ್ನೆಲೆ ಯೋಜನೆಯಡಿ ಯಾವುದೇ ವಿತರಣೆಯನ್ನು ನೀಡದಂತೆ ತೆಲಂಗಾಣ ಸರ್ಕಾರಕ್ಕೆ ಆಯೋಗ ಆದೇಶಿಸಿದೆ. ಸೋಮವಾರ ಮಧ್ಯಾಹ್ನ 3 ಗಂಟೆಯೊಳಗೆ ಅನುಪಾಲನಾ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಲಾಗಿದೆ. ಇದನ್ನೂ ಓದಿ: Constitution Day: ರಾಷ್ಟ್ರಪತಿಯಿಂದ ಸುಪ್ರೀಂ ಕೋರ್ಟ್ ಆವರಣದಲ್ಲಿ ಅಂಬೇಡ್ಕರ್ ಪ್ರತಿಮೆ ಅನಾವರಣ

    119 ವಿಧಾನಸಭಾ ಸ್ಥಾನಗಳನ್ನು ಹೊಂದಿರುವ ತೆಲಂಗಾಣದಲ್ಲಿ ನವೆಂಬರ್ 30 ರಂದು ಚುನಾವಣೆ ನಡೆಯಲಿದೆ. ಚುನಾವಣೆಯಲ್ಲಿ ಬಿಆರ್‌ಎಸ್, ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ನಡುವೆ ಮೂರು ಪಕ್ಷಗಳ ತೀವ್ರ ಪೈಪೋಟಿ ಕಂಡುಬರುವ ನಿರೀಕ್ಷೆಯಿದೆ. ಇದನ್ನೂ ಓದಿ: ಚೀನಾದಲ್ಲಿ ಮತ್ತೊಂದು ವೈರಸ್; ಆಸ್ಪತ್ರೆಗಳಲ್ಲಿ ತುರ್ತುಕ್ರಮ ಪರಿಶೀಲಿಸುವಂತೆ ರಾಜ್ಯಗಳಿಗೆ ಖಡಕ್‌ ವಾರ್ನಿಂಗ್‌

  • ಕೆಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿ – ಸಾವಿರಾರು ಸೀರೆ, ಡಿಮಾಂಡ್ ಡ್ರಾಫ್ಟ್ ವಶಕ್ಕೆ

    ಕೆಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿ – ಸಾವಿರಾರು ಸೀರೆ, ಡಿಮಾಂಡ್ ಡ್ರಾಫ್ಟ್ ವಶಕ್ಕೆ

    ಬೆಂಗಳೂರು: ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ತುರುಸುನ ಸಿದ್ಧತೆ ನಡೆಸುತ್ತಿದ್ದು, ಈ ನಡುವೆ ಐಟಿ (IT) ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಬುಧವಾರ ಬೆಂಗಳೂರಿನ (Bengaluru) ಕೆಜಿಎಫ್ ಬಾಬು (KGF Babu) ಮನೆ ಸೇರಿದಂತೆ ರಾಜ್ಯಾದ್ಯಂತ 50 ಕಡೆಗಳಲ್ಲಿ ಐಟಿ ದಾಳಿ ನಡೆಸಿದೆ. ಈ ವೇಳೆ ಅಧಿಕಾರಿಗಳಿಗೆ ಅಕ್ರಮವಾಗಿ ಸಂಗ್ರಹಿಸಿಟ್ಟ ಕೋಟ್ಯಂತರ ಮೌಲ್ಯದ ವಸ್ತುಗಳು ದೊರಕಿವೆ.

    ಕೆಜಿಎಫ್ ಬಾಬುಗೆ ಸಂಬಂಧಪಟ್ಟ ಬೆಂಗಳೂರಿನ ಹೈಗ್ರೌಂಡ್ ಬಳಿ ಇರುವ ರುಕ್ಸಾನಾ ಪ್ಯಾಲೆಸ್ ಮೇಲೆ ಬುಧವಾರ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ 2,000ಕ್ಕೂ ಹೆಚ್ಚು ಡಿಮಾಂಡ್ ಡ್ರಾಫ್ಟ್ (ಡಿಡಿ), 5,000ಕ್ಕೂ ಹೆಚ್ಚು ರೇಶ್ಮೆ ಸೀರೆಗಳು ದೊರಕಿವೆ.

    ಕೆಜಿಎಫ್ ಬಾಬು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಬಯಸಿ ಪ್ರಚಾರವನ್ನು ನಡೆಸಿದ್ದರು. ಆದರೆ ಕಾಂಗ್ರೆಸ್‌ನಿಂದ ಟಿಕೆಟ್ ಸಿಕ್ಕಿರದ ಕಾರಣ ಅವರ ಪತ್ನಿಯನ್ನು ಪಕ್ಷೇತರ ಅಭ್ಯರ್ಥಿಯಾಗಿ ಕೆಜಿಎಫ್ ಬಾಬು ಕಣಕ್ಕೆ ಇಳಿಸಿದ್ದಾರೆ. ಐಟಿ ದಾಳಿ ವೇಳೆ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ 1,925 ವೋಟರ್ ಐಡಿಗಳು ಪತ್ತೆಯಾಗಿವೆ. ಪ್ರತಿ ವೋಟರ್ ಐಡಿಗಳನ್ನು ತಲಾ 5,000 ರೂ. ಚೆಕ್‌ಗಳೊಂದಿಗೆ ಶೇಖರಿಸಿಡಲಾಗಿತ್ತು ಎನ್ನಲಾಗಿದೆ. ಇದನ್ನೂ ಓದಿ: ವರಿಷ್ಠರ ಆಯ್ಕೆಯನ್ನು ಯಾರು ಪ್ರಶ್ನೆ ಮಾಡುವ ಹಾಗೆ ಇಲ್ಲ : ಈಶ್ವರಪ್ಪ

    ನಿವಾಸದ ಮೊದಲ ಮಹಡಿಯ ಕೊಠಡಿಯಲ್ಲಿ ವೋಟರ್ ಐಡಿ ಹಾಗೂ ಚೆಕ್‌ಗಳು ದೊರೆತರೆ, ಮನೆಯ ನೆಲಮಹಡಿಯಲ್ಲಿ ಸುಮಾರು 26 ಬ್ಯಾಗ್‌ಗಳಲ್ಲಿ ಸೀರೆಗಳು ದೊರಕಿವೆ. ಸುಮಾರು 5,000 ಸೀರೆಗಳು ಪತ್ತೆಯಾಗಿದ್ದು, ಕಾಂಚಿಪುರಂ ರೇಷ್ಮೆ ಸೀರೆಗಳು ಇವಾಗಿವೆ ಎನ್ನಲಾಗಿದೆ.

    ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಈ ಎಲ್ಲಾ ವಸ್ತುಗಳ ಮೇಲೆ ಕೆಜಿಎಫ್ ಬಾಬು ಅವರಿಂದ ಉಡುಗೊರೆ ಎಂದು ಬರೆಯಲಾಗಿದ್ದು, ಅವರ ಫೋಟೋಗಳು ಕೂಡಾ ಕಂಡುಬಂದಿದೆ. ಈ ಎಲ್ಲಾ ವಸ್ತುಗಳನ್ನು ಮತದಾರರಿಗೆ ಹಂಚಲು ಸಂಗ್ರಹಿಸಿಡಲಾಗಿದ್ದು, ಇದೀಗ ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಹಿನ್ನೆಲೆ ಶಿವಾಜಿನಗರ ವಲಯ ಚುನಾವಣಾ ಉಸ್ತುವಾರಿಯಿಂದ ಹೈ ಗ್ರೌಡ್ಸ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್‌ನ ಅಂತಿಮ ಪಟ್ಟಿ ಬಿಡುಗಡೆ – 5 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆ

  • ನಾಮಪತ್ರ ಸಲ್ಲಿಕೆ ವೇಳೆ ನಿಯಮ ಉಲ್ಲಂಘನೆ – AAP ಅಭ್ಯರ್ಥಿ ವಿರುದ್ಧ ಮೊಕದ್ದಮೆ ದಾಖಲು

    ನಾಮಪತ್ರ ಸಲ್ಲಿಕೆ ವೇಳೆ ನಿಯಮ ಉಲ್ಲಂಘನೆ – AAP ಅಭ್ಯರ್ಥಿ ವಿರುದ್ಧ ಮೊಕದ್ದಮೆ ದಾಖಲು

    ಬೆಂಗಳೂರು: ನಾಮಪತ್ರ ಸಲ್ಲಿಕೆ ವೇಳೆ ನಿಯಮ ಉಲ್ಲಂಘಿಸಿದ ಕಾರಣಕ್ಕಾಗಿ ಆಮ್‌ ಆದ್ಮಿ ಪಕ್ಷದ (Aam Aadmi Party) ಅಭ್ಯರ್ಥಿ ವಿರುದ್ಧ ಮೊಕದ್ದಮ್ಮೆ ದಾಖಲಾಗಿದೆ.

    ಎಎಪಿ ಅಭ್ಯರ್ಥಿ ಶ್ರೀನಿವಾಸ ರೆಡ್ಡಿ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ. ನಾಮಪತ್ರ ಸಲ್ಲಿಸುವಾಗ ರ‍್ಯಾಲಿಯಲ್ಲಿ ವಾಹನಗಳನ್ನು ಬಳಸಿಕೊಂಡಿದ್ದರು. ಇದಕ್ಕಾಗಿ ಪಕ್ಷದ ಚಿಹ್ನೆ ಮತ್ತು ಬಾವುಟವುಳ್ಳ 14 ವಾಹನಗಳು, ಟೀ ಶರ್ಟ್‌ ಬಳಕೆ ಮಾಡಲಾಗಿತ್ತು. ಇದನ್ನೂ ಓದಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಗೂಳಿಹಟ್ಟಿ ಶೇಖರ್- ಪಕ್ಷೇತರನಾಗಿ ಸ್ಪರ್ಧೆ

    ನಾಮಪತ್ರ ಸಲ್ಲಿಕೆ ವೇಳೆ ನಿಯಮ ಉಲ್ಲಂಘಿಸಿದ್ದಾರೆಂದು ಚುನಾವಣಾಧಿಕಾರಿಗಳು ವಾಹನಗಳು ಮತ್ತು ಟೀ ಶರ್ಟ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆಡುಗೋಡಿ ಪೊಲೀಸ್‌ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿದ್ದಾರೆ.

    ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಮೇ 10 ರಂದು ಮತದಾನ ನಡೆಯಲಿದ್ದು, ಗೆಲುವಿಗಾಗಿ ಅಭ್ಯರ್ಥಿಗಳು ಕಸರತ್ತು ನಡೆಸುತ್ತಿದ್ದಾರೆ. ಈಗಾಗಲೇ ಮನೆಮನೆಗೆ ತೆರಳಿ ಮತಯಾಚನೆ ಮಾಡುತ್ತಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಬುಧವಾರದಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಇದನ್ನೂ ಓದಿ: ಒಂದು ಲಕ್ಷ ಮತಗಳೊಂದಿಗೆ ಗೆಲುವು ಸಾಧಿಸುವೆ: ಪ್ರೀತಂ ಗೌಡ

  • ನಂದಿನಿ ಹಾಲು ಖರೀದಿ ಮಾಡಿ ಹಂಚಿದ್ದ ಡಿಕೆಶಿಗೆ ನೀತಿ ಸಂಹಿತೆ ಉಲ್ಲಂಘನೆಯ ಬಿಸಿ

    ನಂದಿನಿ ಹಾಲು ಖರೀದಿ ಮಾಡಿ ಹಂಚಿದ್ದ ಡಿಕೆಶಿಗೆ ನೀತಿ ಸಂಹಿತೆ ಉಲ್ಲಂಘನೆಯ ಬಿಸಿ

    ಹಾಸನ: ಗುಜರಾತ್ ಮೂಲದ ಅಮುಲ್ (Amul) ಹಾಲು ಉತ್ಪನ್ನಗಳನ್ನು ವಿರೋಧಿಸಿ ಕೆಪಿಸಿಸಿ (KPCC) ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಸೋಮವಾರ ನಂದಿನಿ (Nandini) ಹಾಲಿನ ಉತ್ಪನ್ನಗಳನ್ನು ಖರೀದಿ ಮಾಡಿ ಅದನ್ನು ಹಂಚಿದ್ದರು. ಇದೀಗ ಹಾಲು ಖರೀದಿ ಮಾಡಿ ಹಂಚಿರುವ ಡಿಕೆಶಿಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ (Violation of Code of Conduct) ಬಿಸಿ ತಟ್ಟಿದೆ.

    ಸೋಮವಾರ ಡಿಕೆ ಶಿವಕುಮಾರ್ ಅವರು ಹಾಸನದ (Hassan) ಮಹಾರಾಜ ಪಾರ್ಕ್ ಬಳಿಯ ನಂದಿನಿ ಡೈರಿಯಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಖರೀದಿ ಮಾಡಿದ್ದರು. ಸುಮಾರು ಎರಡೂವರೆ ಸಾವಿರ ರೂ. ಮೌಲ್ಯದ ಹಾಲಿನ ಉತ್ಪನ್ನಗಳನ್ನು ಡಿಕೆಶಿ ಖರೀದಿ ಮಾಡಿದ್ದರು. ಇದೀಗ ಸಾರ್ವಜನಿಕ ದೂರು ವಿಭಾಗದ ರಾಜ್ಯ ನೋಡಲ್ ಅಧಿಕಾರಿಯಿಂದ ಹಾಸನ ಜಿಲ್ಲಾ ಎಂಸಿಎಂಸಿ ತಂಡಕ್ಕೆ ಈ ಬಗ್ಗೆ ನಿರ್ದೇಶನ ನೀಡಲಾಗಿದೆ.

    ಡಿಕೆಶಿ ನಂದಿನಿ ಹಾಲನ್ನು ಹಂಚುತ್ತಿರುವ ವೀಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿವೆ. ಈ ವೀಡಿಯೋವನ್ನಾಧರಿಸಿ ಪರಿಶೀಲನೆ ಮಾಡಿ ವರದಿ ನೀಡಲು ನಿರ್ದೇಶಿಸಲಾಗಿದೆ. ಹಾಲು ಖರೀದಿ ಮಾಡಿ ಹಂಚಿರುವಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆಯೇ ಎಂಬ ಬಗ್ಗೆ ಪರಿಶೀಲನೆಗೆ ಪತ್ರ ಬರೆಯಲಾಗಿದೆ. ಇದನ್ನೂ ಓದಿ: ವರದಕ್ಷಿಣೆ ಕಿರುಕುಳ ಆರೋಪ- IAS ಅಧಿಕಾರಿ ವಿರುದ್ಧ ಪತ್ನಿಯಿಂದ ದೂರು

    ಆದರೆ ವರದಿ ಕೇಳಿರುವ ಪತ್ರದಲ್ಲಿ ಡಿಕೆ ಶಿವಕುಮಾರ್ ಹೆಸರು ಉಲ್ಲೇಖಿಸದೆ ರಾಜಕೀಯ ಪಕ್ಷ ಎಂದು ಉಲ್ಲೇಖಿಸಿ ಆಯೋಗ ವರದಿ ಕೇಳಿದೆ. ಈ ಬಗ್ಗೆ ಪರಿಶೀಲನೆ ಮಾಡಿ 24 ಗಂಟೆಯೊಳಗೆ ವರದಿ ನೀಡಲು ಸೂಚನೆ ನೀಡಿದೆ. ಇದನ್ನೂ ಓದಿ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಆಗುವುದಿಲ್ಲ: ಹೆಚ್‌.ಡಿ.ಕುಮಾರಸ್ವಾಮಿ

  • ನೂರು ಕೋಟಿ ಕ್ಲಬ್ ಸೇರಿದ ಚುನಾವಣೆ ಅಕ್ರಮ- ಹಣಕ್ಕಿಂತ ಕುಕ್ಕರ್, ತವಾಗಳದ್ದೇ ಮೇಲುಗೈ

    ನೂರು ಕೋಟಿ ಕ್ಲಬ್ ಸೇರಿದ ಚುನಾವಣೆ ಅಕ್ರಮ- ಹಣಕ್ಕಿಂತ ಕುಕ್ಕರ್, ತವಾಗಳದ್ದೇ ಮೇಲುಗೈ

    ಬೆಂಗಳೂರು: ಕಳೆದ ಹನ್ನೆರಡು ದಿನಗಳಲ್ಲಿ ಚುನಾವಣೆ ಅಧಿಕಾರಿಗಳು (Election Officer) ಹಾಗೂ ಪೊಲೀಸರು ಚುನಾವಣಾ (Election) ಅಕ್ರಮಗಳ ಮೇಲೆ ದಾಳಿ ನಡೆಸಿ ಬರೋಬ್ಬರಿ ನೂರು ಕೋಟಿಯಷ್ಟು ಹಣ, ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಅಚ್ಚರಿಯ ವಿಚಾರ ಎಂದರೆ ಇದರಲ್ಲಿ ಹಣಕ್ಕಿಂತ ಕುಕ್ಕರ್, ತವಾ ಮತ್ತು ಸೀರೆಗಳೇ ಮೇಲುಗೈ ಸಾಧಿಸಿದೆ.

    ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ (Congress), ಬಿಜೆಪಿ (BJP), ಜೆಡಿಎಸ್ (JDS) ಪಕ್ಷಗಳು ಇನ್ನಿಲ್ಲದಂತೆ ಕಸರತ್ತು ನಡೆಸಿದ್ದಾರೆ. ಒಂದು ಕಡೆ ಟಿಕೆಟ್ ಗೊಂದಲ, ಮತ್ತೊಂದು ಕಡೆ ಮತದಾರರನ್ನು ಓಲೈಸಿಕೊಳ್ಳಲು ಆಮಿಷಗಳು. ಇದನ್ನು ಮನಗಂಡ ಚುನಾವಣಾ ಆಯೋಗ ಮಾರ್ಚ್ 29 ರಂದು ನೀತಿ ಸಂಹಿತೆ (Code Of Conduct) ಜಾರಿ ಮಾಡಿ ಆದೇಶ ಹೊರಡಿಸಿತ್ತು. ಅಂದಿನಿಂದಲೇ ಅಲರ್ಟ್ ಆದ ಚುನಾವಣಾಧಿಕಾರಿಗಳು ಹಾಗೂ ಸ್ಥಳೀಯ ಪೊಲೀಸರು ಆಯಾ ವಿಭಾಗದಲ್ಲಿ ಚೆಕ್ ಪೋಸ್ಟ್‌ಗಳನ್ನು (Check Post) ಹಾಕಿ ವಾಹನಗಳ ಪರಿಶೀಲನೆ ಶುರುಮಾಡಿದರು. ಇದನ್ನೂ ಓದಿ: ನಂದಿನಿ ಬೇಕು; ಅಮುಲ್ ಬೇಡ- ಕನ್ನಡ ಪರ ಸಂಘಟನೆಗಳಿಂದ ಭುಗಿಲೆದ್ದ ಆಕ್ರೋಶ 

    ಮತ್ತೊಂದು ಕಡೆ ರಾಜಕೀಯ ನಾಯಕರು ಮತ್ತು ಬೆಂಬಲಿಗರ ಮನೆಗಳಲ್ಲಿ ಅಕ್ರಮವಾಗಿ ಮತದಾರರಿಗೆ ಹಂಚಲು ಹಣ, ದಿನಸಿ ವಸ್ತುಗಳು, ಗಿಫ್ಟ್‌ಗಳ ಶೇಖರಣೆ ಬಗ್ಗೆ ಕಣ್ಣಿಟ್ಟು ದಾಳಿ ನಡೆಸಿ ವಶಕ್ಕೆ ಪಡೆದು ಕೇಸ್ ದಾಖಲಿಸುತ್ತಿದ್ದಾರೆ. ಬಹುತೇಕ ಪತ್ತೆಯಾದ ಕಡೆಗಳಲ್ಲೆಲ್ಲಾ ಸಾವಿರಾರು ಸಂಖ್ಯೆಯಲ್ಲಿ ಕುಕ್ಕರ್‌ಗಳು ಮತ್ತು ತವಾಗಳು ಪತ್ತೆಯಾಗುತ್ತಿವೆ. ಇದನ್ನೂ ಓದಿ: ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೂ ಮೊದಲೇ ಬಿಜೆಪಿ ಕಚೇರಿಗೆ ಬಿಗಿ ಭದ್ರತೆ 

    ನಾಮಿನೇಷನ್ ಹಾಕಿದ ನಂತರವಷ್ಟೇ ಹಣ, ಮದ್ಯ, ಗೃಹಬಳಕೆ ವಸ್ತುಗಳು ಹೆಚ್ಚಾಗಿ ಸಿಗುತ್ತವೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಕೂಡ ಸೂಕ್ತ ತಯಾರಿ ನಡೆಸಿದ್ದಾರೆ. ಆದರೆ ನಾಮೀನೇಷನ್ ಹಾಕುವ ಮುನ್ನವೇ ರಾಜ್ಯಾದ್ಯಂತ ಮೂರು ಪಕ್ಷಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಸೇರಿದ ಬರೋಬ್ಬರಿ ನೂರು ಕೋಟಿ ಅಕ್ರಮ ಹಣ, ವಸ್ತುಗಳು ಪತ್ತೆಯಾಗಿದ್ದು, ಸ್ವತಃ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಇದನ್ನೂ ಓದಿ: 20ಕ್ಕೂ ಹೆಚ್ಚು ಬಿಜೆಪಿ ಶಾಸಕರಿಗೆ ಕೊಕ್‌ – ಲಿಸ್ಟ್‌ನಲ್ಲಿ ಯಾರಿದ್ದಾರೆ?

  • ರಾಜ್ಯದಲ್ಲಿ ಒಟ್ಟು 22.79 ಕೋಟಿ ನಗದು, 1,52 ಕೋಟಿ ಮೌಲ್ಯದ ಲಿಕ್ಕರ್ ವಶ

    ರಾಜ್ಯದಲ್ಲಿ ಒಟ್ಟು 22.79 ಕೋಟಿ ನಗದು, 1,52 ಕೋಟಿ ಮೌಲ್ಯದ ಲಿಕ್ಕರ್ ವಶ

    ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣಾ (Karnataka Vidhanasabha Election 2023) ದಿನಾಂಕ ಘೋಷಣೆಯಾದ ಬೆನ್ನಲ್ಲೇ ನೀತಿ ಸಂಹಿತೆ ಜಾರಿಯಾದ ಮೇಲೆ ಒಟ್ಟು 22.79 ಕೋಟಿ ನಗದು (Money) ಹಾಗೂ 1,52 ಕೋಟಿ ಮೌಲ್ಯದ ಲಿಕ್ಕರ್ (Liquor) ವಶಕ್ಕೆ ಪಡೆಯಲಾಗಿದೆ.

    ಬೆಂಗಳೂರು ನಗರ ಚುನಾವಣಾಧಿಕಾರಿಗಳು ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಅದರಲ್ಲಿ ನೀತಿ ಸಂಹಿತೆ (Code Of Conduct) ಉಲ್ಲಂಘನೆಯಾಗಿ ನಗದು, ಲಿಕ್ಕರ್, ಗಾಂಜಾ ವೆಹಿಕಲ್ ವಶಕ್ಕೆ ಪಡೆದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕಿಚ್ಚ ಸುದೀಪ್ ನಡೆಗೆ ಅಚ್ಚರಿಯಲ್ಲ, ನೋವು ತಂದಿದೆ : ಪ್ರಕಾಶ್ ರಾಜ್

    ಬುಧವಾರ ಒಂದೇ ದಿನ 6,52, 510 ನಗದು, 11,441,376 ಮೌಲ್ಯದ ಲಿಕ್ಕರ್, 2,001250 ಮೌಲ್ಯದ ಡ್ರಗ್ಸ್ ಹಾಗೂ 5 ವೆಹಿಕಲ್ ಗಳಲ್ಲಿ 38,5000 ನಗದು ಪತ್ತೆಯಾಗಿದೆ. ಒಟ್ಟಿನಲ್ಲಿ ನೀತೆ ಸಂಹಿತೆ ಜಾರಿಯಾದ ಮೇಲೆ ಇದ ಒಟ್ಟು 22.79 ಕೋಟಿ ನಗದು ಹಾಗೂ 3.14 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.

    ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್, ಏಪ್ರಿಲ್ 13 ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಆಯಾ ಜಿಲ್ಲಾ ಚುನಾವಣಾಧಿಕಾರಿಗಳು ಚುನಾವಣಾ ಅಧಿಸೂಚನೆ ಪ್ರಕಟಿಸಲಿದ್ದಾರೆ. ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏಪ್ರಿಲ್ 20 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏಪ್ರಿಲ್ 21 ನಾಮಪತ್ರ ಪರಿಶೀಲನೆ ನಡೆಲಿದ್ದು, ಏಪ್ರಿಲ್ 24 ನಾಮಪತ್ರ ವಾಪಸ್ಸಿಗೆ ಕೊನೆಯ ದಿನವಾಗಿದೆ. ಮೇ 10ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದ್ದು, ಮೇ 13 ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯುತ್ತದೆ ಎಂದು ತಿಳಿಸಿದ್ದರು.

  • ಜನಾರ್ದನ ರೆಡ್ಡಿ ಸಮ್ಮುಖದಲ್ಲೇ ಅಭ್ಯರ್ಥಿಗೆ 1 ಲಕ್ಷ ಹಣ ನೀಡಿದ ಸ್ವಾಮೀಜಿ

    ಜನಾರ್ದನ ರೆಡ್ಡಿ ಸಮ್ಮುಖದಲ್ಲೇ ಅಭ್ಯರ್ಥಿಗೆ 1 ಲಕ್ಷ ಹಣ ನೀಡಿದ ಸ್ವಾಮೀಜಿ

    ಚಿಕ್ಕೋಡಿ: ಕಲ್ಯಾಣ ರಾಜ್ಯ ಪ್ರಗತಿ (KRPP) ಸಮಾವೇಶದಲ್ಲಿ ಸ್ವಾಮೀಜಿಯೊಬ್ಬರು ಗಾಲಿ ಜನಾರ್ದನ ರೆಡ್ಡಿ (Janardhana Reddy) ಸಮ್ಮುಖದಲ್ಲಿಯೇ ಅಭ್ಯರ್ಥಿಗೆ 1 ಲಕ್ಷ ರೂ. ಹಣವನ್ನು (Money) ನೀಡುವ ಮೂಲಕ ಚುನಾವಣಾ ನೀತಿ ಸಂಹಿತೆ (Code of Conduct) ಉಲ್ಲಂಘಿಸಿದ್ದಾರೆ.

    ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದಲ್ಲಿ ಆಯೋಜಿಸಿದ್ದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಮಾವೇಶದಲ್ಲೇ ಬಹಿರಂಗವಾಗಿ 1 ಲಕ್ಷ ರೂ. ಹಣವನ್ನು ಹೊನ್ಯಾಳದ ರೇವನಸಿದ್ದಯ್ಯ ಶ್ರೀಶೈಲಯ್ಯ ಶ್ರೀಗಳು ಕುಡಚಿ ಮತಕ್ಷೇತ್ರದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಶ್ರೀಶೈಲ ಭಜಂತ್ರಿಯವರಿಗೆ ಸಲ್ಲಿಕೆ ಮಾಡಿದ್ದಾರೆ. ಇದನ್ನೂ ಓದಿ: 70 ಸೀಟ್ ಬಂದ್ರೆ ಲಿಂಗಾಯತರು ಸಿಎಂ ಆಗ್ತಾರೆ: ಶಾಮನೂರು ಸ್ಫೋಟಕ ಹೇಳಿಕೆ

     

    ಸಮಾವೇಶದಲ್ಲಿ ಬಹಿರಂಗವಾಗಿ ನೀತಿ ಸಂಹಿತೆ ಉಲ್ಲಂಘಿಸಿದರೂ ರಾಯಬಾಗಾ ತಾಲೂಕಾಡಳಿತ ಯಾವುದೇ ಶಿಸ್ತು ಕ್ರಮ ಕೈಗೊಂಡಿಲ್ಲ. ಚೆಕ್ ಪೋಸ್ಟ್‌ಗಳ ಕಣ್ಣು ತಪ್ಪಿಸಿ 1 ಲಕ್ಷ ರೂ. ಬಂದಿದ್ದಾರೂ ಹೇಗೆ ಎಂದು ಅಧಿಕಾರಿಗಳ ಬೇಜವಾಬ್ದಾರಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕೊಂಕಣಿ ಭಾಷಿಗರೇ ಶಾಸಕರಾಗಿರುವ ಮಂಗಳೂರು ದಕ್ಷಿಣದಲ್ಲಿ ಈ ಬಾರಿ ಗೆಲ್ಲೋದ್ಯಾರು?

  • ನೀತಿ ಸಂಹಿತೆ ಉಲ್ಲಂಘನೆ – ಬಿಜೆಪಿ ಜಿಲ್ಲಾಧ್ಯಕ್ಷನ ವಿರುದ್ಧ ಎಫ್‌ಐಆರ್ ದಾಖಲು

    ನೀತಿ ಸಂಹಿತೆ ಉಲ್ಲಂಘನೆ – ಬಿಜೆಪಿ ಜಿಲ್ಲಾಧ್ಯಕ್ಷನ ವಿರುದ್ಧ ಎಫ್‌ಐಆರ್ ದಾಖಲು

    ಕಲಬುರಗಿ: ಬಿಜೆಪಿ (BJP) ಪಕ್ಷದ ಚಿಹ್ನೆ ಹಾಗೂ ಜಿಲ್ಲಾಧ್ಯಕ್ಷನ ಹೆಸರಿನಲ್ಲಿ ಕ್ರಿಕೆಟ್ ಪಂದ್ಯಾವಳಿ (Cricket Tournament) ಆಯೋಜನೆ ಮಾಡಿದ್ದಕ್ಕಾಗಿ ಬಿಜೆಪಿ ಕಲಬುರಗಿ (Kalaburagi) ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವರಾಜ್ ಪಾಟೀಲ್ ರದ್ದೇವಾಡಗಿ (Shivaraj Patil Raddewadgi) ಮೇಲೆ ಎಫ್‌ಐಆರ್ ದಾಖಲಾಗಿದೆ.

    ರಾಜ್ಯಾದ್ಯಂತ ನೀತಿ ಸಂಹಿತೆ (Code of Conduct) ಜಾರಿಗೊಳಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಈ ನಡುವೆ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಮಾಡಿದ ಶಿವರಾಜ್ ಪಾಟೀಲ್ ರದ್ದೇವಾಡಗಿ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗ್ಲಿ- ಅಭಿಮಾನಿಗಳಿಂದ ಶಬರಿಮಲೆಗೆ ಹರಕೆ  

    ಶಿವರಾಜ್ ಪಾಟೀಲ್ ರದ್ದೇವಾಡಗಿ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ (Election) ಜಿಲ್ಲೆಯ ಜೇವರ್ಗಿ ಮತಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇದನ್ನೂ ಓದಿ: ಚಿನ್ನ ಕಳ್ಳತನ – ಸೋಷಿಯಲ್ ಮೀಡಿಯಾ ಸ್ಟಾರ್ ಅರೆಸ್ಟ್

  • ಶಾಸಕರ ಪುತ್ರನ ಕಾರನ್ನು ತಪಾಸಣೆ ಮಾಡದೆ ಬಿಟ್ಟು ಕಳಿಸಿದ ಚೆಕ್ ಪೋಸ್ಟ್ ಸಿಬ್ಬಂದಿ

    ಶಾಸಕರ ಪುತ್ರನ ಕಾರನ್ನು ತಪಾಸಣೆ ಮಾಡದೆ ಬಿಟ್ಟು ಕಳಿಸಿದ ಚೆಕ್ ಪೋಸ್ಟ್ ಸಿಬ್ಬಂದಿ

    – ತರಾಟೆಗೆ ತೆಗೆದುಕೊಂಡ ತಹಶೀಲ್ದಾರ್

    ಚಿಕ್ಕೋಡಿ: ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆ (Assembly Election) ಹಿನ್ನೆಲೆ ನೀತಿ ಸಂಹಿತೆ (Code of Conduct) ಜಾರಿಯಲ್ಲಿದೆ. ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಚುನಾವಣೆ ಆಯೋಗದ ಪ್ರತಿ ತಾಲೂಕಿನ ಸರಹದ್ದಿನಲ್ಲಿ ಚೆಕ್ ಪೋಸ್ಟ್ (Check Post) ನಿರ್ಮಿಸಿ ಪ್ರತಿಯೊಂದು ವಾಹನ ಹಾಗೂ ವ್ಯಕ್ತಿಗಳ ಮೇಲೆ ಅಧಿಕಾರಿಗಳು ನಿಗಾ ಇಡುವಂತೆ ಸೂಚನೆ ನೀಡಲಾಗುತ್ತಿದೆ. ಇದನ್ನು ಕಟ್ಟುನಿಟ್ಟಿನಿಂದ ರಾಜ್ಯಾದ್ಯಂತ ಅಧಿಕಾರಿಗಳು ಪಾಲನೆ ಮಾಡುತ್ತಿದ್ದಾರೆ. ಆದರೆ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ (Shrimant Patil) ಅವರ ಪುತ್ರನ ಕಾರನ್ನು ಅಧಿಕಾರಿಗಳು ಪರಿಶೀಲನೆ ಮಾಡದೆ ಕರ್ತವ್ಯ ಲೋಪ ಎಸಿಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಸ್ಥಳದಲ್ಲಿದ್ದ ಚೆಕ್ ಪೋಸ್ಟ್ ಸಿಬ್ಬಂದಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಪ್ರಸಂಗ ನಡೆದಿದೆ.

    ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದ ಹೊರವಲಯದ ಮಹಾರಾಷ್ಟ್ರ ಹಾಗೂ ಕರ್ನಾಟಕಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದ ಮಧ್ಯದಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡಿದ್ದು, ಇಲ್ಲಿ ಪ್ರತಿಯೊಂದು ವಾಹನಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ ಕಾಗವಾಡ ಶಾಸಕ ಶ್ರೀಮಂತ್ ಪಾಟೀಲ್ ಅವರ ಪುತ್ರ ಶ್ರೀನಿವಾಸ ಪಾಟೀಲ್ ಆಗಮಿಸುತ್ತಿದ್ದಂತೆ ಅಧಿಕಾರಿಗಳು ಅವರ ಕಾರನ್ನು ಪರಿಶೀಲನೆ ಮಾಡದೆ ಹಾಗೆ ಬಿಟ್ಟಿದ್ದಾರೆ. ಇದರಿಂದ ಕೆಲವು ಸ್ಥಳೀಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಮೇಲಾಧಿಕಾರಿಗಳಿಗೆ ಮೌಖಿಕವಾಗಿ ದೂರು ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕಾಗವಾಡ ತಹಶೀಲ್ದಾರ್ ಎಂಎಂ ಬಳೇಗಾರ ಆಗಮಿಸಿ ಕರ್ತವ್ಯದಲ್ಲಿದ್ದ ಅಧಿಕಾರಿಗಳನ್ನು ತೀವ್ರವಾಗಿ ತರಾಟೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಮೇಲೆ FIR ದಾಖಲು

    ಕಾಗವಾಡ ಶಾಸಕರ ಮನೆ ಮಹಾರಾಷ್ಟ್ರದ ಸಾಂಗ್ಲಿ ನಗರದಲ್ಲಿ ಇದೆ. ಇದರಿಂದ ಕಾಗವಾಡ ಸಾಂಗ್ಲಿಯಲ್ಲಿ ದಿನನಿತ್ಯ ಅವರು ಸಂಚಾರ ಬೆಳೆಸುವುದರಿಂದ ಅಧಿಕಾರಿಗಳು ಅವರ ಕಾರು ತಪಾಸಣೆಗೆ ಮುಂದೆ ಹೋಗಿರಲಿಲ್ಲ. ಇದರಿಂದ ಕೆಲವು ಸ್ಥಳೀಯರು ಅಸಮಾಧಾನಗೊಂಡಿದ್ದಾರೆ. ಕಾನೂನು ಎಲ್ಲರಿಗೂ ಸಮನಾಗಿದೆ. ಇಲ್ಲಿ ರಾಜಕೀಯ ಮಕ್ಕಳಿಗೆ ಬೇರೆ ಕಾನೂನು ಇಲ್ಲ ಎಂದು ಹಿರಿಯ ಅಧಿಕಾರಿಗಳನ್ನು ಕೆಲವು ಸ್ಥಳೀಯರು ತರಾಟೆ ತೆಗೆದುಕೊಂಡಿದ್ದಾರೆ.

    ಈ ಹಿನ್ನೆಲೆಯಲ್ಲಿ ಕಾಗವಾಡ ತಹಶೀಲ್ದಾರ್ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿ ಚೆಕ್ ಪೋಸ್ಟ್‌ನಲ್ಲಿ ಕರ್ತವ್ಯದಲ್ಲಿರುವ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಯಾಕೆ ಶಾಸಕರ ಮಗನ ವಾಹನವನ್ನು ತಪಾಸಣೆ ಮಾಡಿಲ್ಲ? ನಿಮಗೆ ನೋಟಿಸ್ ನೀಡಲಾಗುವುದು. ಪ್ರತಿಯೊಂದು ವಾಹನ ತಪಾಸಣೆ ಮಾಡುವಂತೆ ನಿಮಗೆ ಈಗಾಗಲೇ ಹೇಳಿದ್ದೇವೆ. ಆದರೂ ನೀವು ಕರ್ತವ್ಯ ಲೋಪ ಮಾಡಿದ್ದೀರಿ. ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳಿ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಕಾರ್ಕಳ ಅಖಾಡದಲ್ಲಿ ಮುಟ್ಟಾಳ ಫೈಟ್- ಮುತಾಲಿಕ್ ಪೋಸ್ಟರ್‌ಗೆ ಬಿಜೆಪಿ ಕೌಂಟರ್