Tag: code of conduct

  • ಬೆಂಗಳೂರಿನಲ್ಲಿ ರೇಣುಕಾಚಾರ್ಯಗೆ ಶಾಕ್ – ನೀತಿ ಸಂಹಿತೆ ಉಲ್ಲಂಘನೆ ಕೇಸ್?

    ಬೆಂಗಳೂರಿನಲ್ಲಿ ರೇಣುಕಾಚಾರ್ಯಗೆ ಶಾಕ್ – ನೀತಿ ಸಂಹಿತೆ ಉಲ್ಲಂಘನೆ ಕೇಸ್?

    ಬೆಂಗಳೂರು: ಶಾಸಕ ಎಂ.ಪಿ ರೇಣುಕಾಚಾರ್ಯ (MP Renukacharya) ಅವರಿಗೆ ಚುನಾವಣಾಧಿಕಾರಿಗಳು ಭಾನುವಾರ ಬಿಸಿ ಮುಟ್ಟಿಸಿದ್ದಾರೆ.

    ಕೇಂದ್ರ ಚುನಾವಣಾ ಆಯೋಗವು (Election Commission of India) ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕ ಪ್ರಕಟಿಸುತ್ತಿದ್ದಂತೆ, ನೀತಿ ಸಂಹಿತೆ (Code Of Conduct) ಜಾರಿಗೊಂಡಿದೆ. ಇದರ ಹೊರತಾಗಿಯೂ ರೇಣುಕಾಚಾರ್ಯ ಅವರು ಚುನಾವಣಾಧಿಕಾರಿಗಳ ಅನುಮತಿಯಿಲ್ಲದೆ ಭಾನುವಾರ ಬೆಂಗಳೂರಿನ (Bengaluru) ಗುರುರಾಜ ಕಲ್ಯಾಣಮಂಟಪದಲ್ಲಿ ಸಭೆ ನಡೆಸಿದ್ದಾರೆ. ಇದನ್ನೂ ಓದಿ: ಮತ್ತೆ ರಾಜ್ಯಕ್ಕೆ ಮೋದಿ – ಕಾಂಗ್ರೆಸ್‌, ಜೆಡಿಎಸ್‌ ಭದ್ರಕೋಟೆಯಲ್ಲೇ ನಡೆಯಲಿದೆ ಸಮಾವೇಶ

    ಸಭೆ ನಡೆಸಲು ಚುನಾವಣಾ ಆಯೋಗ ಹಾಗೂ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ಗುರುರಾಜ ಕಲ್ಯಾಣ ಮಂಟಪಕ್ಕೆ ಎಂಟ್ರಿ ಕೊಟ್ಟು ಕಾರ್ಯಕ್ರಮ ನಿಲ್ಲಿಸಲು ಮುಂದಾಗಿದ್ದಾರೆ. ಅಧಿಕಾರಿಗಳು ಭೇಟಿ ನೀಡಿದ ಬಳಿಕವೂ ರೇಣುಕಾಚಾರ್ಯ ಅವರು ಮಾತು ಮುಂದುವರಿಸಲು ಯತ್ನಿಸಿದಾಗ ಅಧಿಕಾರಿಗಳು ಮೈಕ್ ಕಸಿದುಕೊಳ್ಳಲು ಪ್ರಯತ್ನಿಸಿದ್ದಾರೆ. ಅಷ್ಟರಲ್ಲಿ ರೇಣುಕಾಚಾರ್ಯ ಅವರು ಸರ್ ಇರಿ ಸ್ವಲ್ಪ ಇರಿ ಅಂತಾ ಭಾಷಣ ಮುಂದುವರಿಸಿದ್ದಾರೆ. ಬಳಿಕ ನೆರೆದಿದ್ದ ಸಭೀಕರಿಗೆ ನೀತಿ ಸಂಹಿತೆ ಉಲ್ಲಂಘನೆಯಾಗುತ್ತೆ ಅಂತಾ ಹೇಳಿ ಕಾರ್ಯಕ್ರಮವನ್ನ ಅರ್ಧಕ್ಕೆ ಮೊಟಕುಗೊಳಿಸಿದ್ದಾರೆ.

    ಸಭೆಯ ಸಂಪೂರ್ಣ ವೀಡಿಯೋ ಮಾಡಿಕೊಂಡಿರುವ ಚುನಾವಣಾಧಿಕಾರಿಗಳು ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆ ಕೇಸ್ ಹಾಕಲು ಸಿದ್ಧತೆ ನಡೆಸಿದ್ದಾರೆ. ಇದನ್ನೂ ಓದಿ: ಸ್ಮಶಾನದಲ್ಲಿ ಪೂಜೆ ಮಾಡಿ ಚುನಾವಣಾ ಪ್ರಚಾರ ವಾಹನಕ್ಕೆ ಚಾಲನೆ: ಸತೀಶ್‌ ಜಾರಕಿಹೊಳಿ‌

  • ನೀತಿ ಸಂಹಿತೆ ಉಲ್ಲಂಘನೆ – ಶಶಿಕಲಾ ಜೊಲ್ಲೆ ವಿರುದ್ಧ ಪ್ರಕರಣ ದಾಖಲು

    ನೀತಿ ಸಂಹಿತೆ ಉಲ್ಲಂಘನೆ – ಶಶಿಕಲಾ ಜೊಲ್ಲೆ ವಿರುದ್ಧ ಪ್ರಕರಣ ದಾಖಲು

    ಚಿಕ್ಕೋಡಿ: ನೀತಿ ಸಂಹಿತೆ ಉಲ್ಲಂಘನೆ (Violation of Code of Conduct) ಮಾಡಿರುವುದಕ್ಕಾಗಿ ಸಚಿವೆ ಶಶಿಕಲಾ ಜೊಲ್ಲೆ (Shashikala Jolle) ವಿರುದ್ಧ ಪ್ರಕರಣ ದಾಖಲಾಗಿದೆ. ನಿಪ್ಪಾಣಿ (Nipani) ಮತಕ್ಷೇತ್ರದಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ.

    ನೀತಿ ಸಂಹಿತೆ ಘೋಷಣೆಯ ಮೊದಲ ದಿನವೇ ಸಚಿವೆ ಶಶಿಕಲಾ ಜೊಲ್ಲೆ ಸಮ್ಮುಖದಲ್ಲೇ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ನಿಪ್ಪಾಣಿಯ ರಣರಾಗಿಣಿ ಮಹಿಳಾ ಮಂಡಳದಿಂದ ಅರಿಶಿನ ಕುಂಕುಮ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಬಿಜೆಪಿ ಚಿಹ್ನೆ ಹಾಗೂ ಲೋಕಸಭಾ ಸದಸ್ಯ ಅಣ್ಣಾಸಾಬ ಜೊಲ್ಲೆ ಅವರ ಫೋಟೋ ಬಳಕೆ ಮಾಡಲಾಗಿತ್ತು. ಇದನ್ನೂ ಓದಿ: ಬಿಜೆಪಿ-ಕಾಂಗ್ರೆಸ್‍ನ ಹೊಸ ಮುಖಗಳ ಪ್ರಯೋಗ ಶಾಲೆಯಾಗುತ್ತಾ ರಾಜ್ಯದ ಏಕೈಕ ಮೀಸಲು ಕ್ಷೇತ್ರ ಸುಳ್ಯ?

    ಈ ಕಾರ್ಯಕ್ರಮದಲ್ಲಿ 4-5 ಸಾವಿರ ಮಹಿಳೆಯರು ಭಾಗವಹಿಸಿದ್ದು, ಶಶಿಕಲಾ ಜೊಲೆ ಕೂಡಾ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ನೀತಿಸಂಹಿತೆ ಉಲ್ಲಂಘನೆಯಾಗಿರುವ ಹಿನ್ನೆಲೆ ರಣರಾಗಿಣಿ ಮಹಿಳಾ ಮಂಡಳ ಅಧ್ಯಕ್ಷೆ ಹಾಗೂ ಶಶಿಕಲಾ ಜೊಲ್ಲೆ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಚೆಕ್‍ಬೌನ್ಸ್ ಕೇಸ್- ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಬಂಧನದ ಭೀತಿ?

  • ಬೆಳಗಾವಿಯಲ್ಲಿ ಬಾಡೂಟ ರಾಜಕೀಯಕ್ಕೆ ಬಿಸಿ- ನೀತಿ ಸಂಹಿತೆ ಉಲ್ಲಂಘನೆ ಅಡಿ ಕೇಸ್

    ಬೆಳಗಾವಿಯಲ್ಲಿ ಬಾಡೂಟ ರಾಜಕೀಯಕ್ಕೆ ಬಿಸಿ- ನೀತಿ ಸಂಹಿತೆ ಉಲ್ಲಂಘನೆ ಅಡಿ ಕೇಸ್

    – ಜಾರಕಿಹೊಳಿ ಆಪ್ತ ಸೇರಿ ಇಬ್ಬರ ವಿರುದ್ಧ ಎಫ್‍ಐಆರ್

    ಬೆಳಗಾವಿ: ಚುನಾವಣೆ (Election) ಸಮೀಪಿಸುತ್ತಿದಂತೆ ವಿವಿಧ ರಾಜಕೀಯ ಪಕ್ಷಗಳಿಂದ ಯಾವುದಾದರೂ ನೆಪದಲ್ಲಿ ಅಮಿಷಗಳ ಮಹಾಪೂರವೇ ಹರಿದು ಬರುತ್ತಿದೆ. ಅದರಲ್ಲೂ ಈ ಬಾರಿಯ ಚುನಾವಣೆಯಲ್ಲಿ ಬಾಡೂಟಗಳು ಭರ್ಜರಿಯಾಗಿ ಆಯೋಜಿಸಲಾಗುತ್ತಿದೆ. ಇದನ್ನು ಸೂಕ್ಷ್ಮವಾಗಿ ಗಮನಿಸಿದ ಚುನಾವಣಾ ಆಯೋಗ (Election Commission) ಬ್ರೇಕ್ ಹಾಕಲು ಮುಂದಾಗಿದೆ. ಮೊದಲ ಆರಂಭವೆಂಬಂತೆ ಕುಂದಾನಗರಿನಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಮುನ್ನವೇ ಒಂದು ಪ್ರಕರಣ ದಾಖಲಿಸಲಾಗಿದೆ.

    ರಾಜ್ಯದಲ್ಲಿ ಚುನಾವಣಾ ಕಾವು ರಂಗೇರಿದೆ. ಮೂರು ಪಕ್ಷದ ಟಿಕೆಟ್ ಆಕಾಂಕ್ಷಿಗಳು ಮತದಾರರನ್ನು ಸಳೆಯಲು ಹಬ್ಬ-ಆಚರಣೆ-ಮದುವೆ ನೆಪಗಳಲ್ಲಿ ವಿವಿಧ ವಸ್ತುಗಳ ಅಮಿಷಗಳೂಂದಿಗೆ ಭರ್ಜರಿ ಬಾಡೂಟಗಳ ಆಯೋಜಿಸಲಾಗುತ್ತಿದೆ. ದಕ್ಷಿಣ ಕರ್ನಾಟಕ ಭಾಗದಲ್ಲೇ ಹೇಚ್ಚಾಗಿ ಕಂಡು ಬರುತ್ತಿದ್ದ ಬಾಡೂಟ ಅಮಿಷ ಇದೀಗ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಹೆಚ್ಚಾಗಿ ಆಯೋಜಿಸಲಾಗುತ್ತಿದೆ.

    ಮೊನ್ನೆ ಬೆಂಗಳೂರಿನಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಅಧಿಕಾರಿಗಳೂಂದಿಗೆ ಸಭೆ ನಡೆಸಿದ ಕೇಂದ್ರ ಚುನಾವಣಾ ಆಯೋಗ ಆಮಿಷ ನೀಡಿದ್ರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ರು. ಹಬ್ಬ-ಹರಿದಿನಗಳ ನೆಪಗಳಲ್ಲಿ ಮತದಾರರರಿಗೆ ಅಮಿಷಗಳ ನೀಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುದೆಂದು ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೆ ಚುನಾವಣಾ ನೀತಿ ಸಂಹಿತೆ ಜಾರಿ (Code Of Conduct) ಮುನ್ನವೇ ಬೆಳಗಾವಿಯಲ್ಲಿ ಮೊದಲ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬಿಜೆಪಿಗಿಂತ ಮೊದಲೇ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಡಿಕೆಶಿ

    ಮಾ.15 ರಂದು ರಮೇಶ್ ಜಾರಕಿಹೊಳಿ (Ramesh Jarakiholi) ಅಭಿಮಾನಿ ಬಳಗದಿಂದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಂತಿ ಬಸ್ತವಾಡ ಗ್ರಾಮದಲ್ಲಿ ಎಸ್‍ಸಿ, ಎಸ್‍ಟಿ ಸಮಾವೇಶ ಆಯೋಜನೆ ಮಾಡಲಾಗಿತ್ತು. ಟಿಕೆಟ್ ಆಕಾಂಕ್ಷಿ ನಾಗೇಶ್ ಮನ್ನೋಳಕರ್ ನೇತೃತ್ವದಲ್ಲಿ ಸುಮಾರು 3 ಸಾವಿರ ಜನರಿಗೆ ಬಾಡೂಟ ವ್ಯವಸ್ಥೆ ಮಾಡಲಾಗಿತ್ತು. ಬಾಡೂಟ ಆಯೋಜಿಸಿದವರ ವಿರುದ್ಧ ಇದೀಗ ಚಾಟಿ ಬೀಸಿರುವ ಜಿಲ್ಲಾಡಳಿತ ರಮೇಶ್ ಜಾರಕಿಹೊಳಿ ಆಪ್ತ ಸೇರಿ ಇಬ್ಬರ ವಿರುದ್ಧ ಎಫ್‍ಐಆರ್ ದಾಖಲು ಮಾಡಿದೆ. ಆಯೋಜಕ ನಾಗೇಂದ್ರ ನಾಯಕ್, ನಾಗೇಶ್ ಮನ್ನೋಳ್ಕರ್ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ.

    ಬೆಳಗಾವಿ ಡಿಸಿ ನಿತೇಶ್ ಪಾಟೀಲ್ ಚುನಾವಣಾ ಘೋಷಣೆಗೂ ಮುನ್ನ ಮತದಾರರಿಗೆ ಆಮಿಷ ಒಡ್ಡದಂತೆ ಅದೇಶ ಹೊರಡಿಸಿದ್ದರು. ಆದರೂ ಸಮಾವೇಶದಲ್ಲಿ ಬಾಡೂಟದ ಅಮಿಷ ಆಯೋಜಿಸಿದ ಹಿನ್ನೆಲೆ ನೀತಿ ಸಂಹಿತೆ ಉಲ್ಲಂಘನೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಮೂಲಕ ಇದು ರಾಜ್ಯದಲ್ಲಿ ಮೊದಲ ಪ್ರಕರಣವಾಗಿದೆ.

  • ಸಿದ್ದರಾಮಯ್ಯ ಕಾರು ಚಾಲಕ, ಕೈ ಅಭ್ಯರ್ಥಿ ಕುಸುಮಾ ವಿರುದ್ಧ ಎಫ್‌ಐಆರ್‌ ದಾಖಲು

    ಸಿದ್ದರಾಮಯ್ಯ ಕಾರು ಚಾಲಕ, ಕೈ ಅಭ್ಯರ್ಥಿ ಕುಸುಮಾ ವಿರುದ್ಧ ಎಫ್‌ಐಆರ್‌ ದಾಖಲು

    ಬೆಂಗಳೂರು: ರಾಜರಾಜೇಶ್ವರಿ ನಗರದ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಮತ್ತು ಸಿದ್ದರಾಮಯ್ಯನವರ ಕಾರು ಚಾಲಕ, ಪೈಲೆಟ್‌ ವಾಹನದಲ್ಲಿದ್ದ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

    ಚುನಾವಣಾಧಿಕಾರಿ ನಾಗರಾಜ ಎನ್‌ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 353 (ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿ), 188 (ಸರ್ಕಾರಿ ಅಧಿಕಾರಿಯ ಆದೇಶ ಪಾಲಿಸದಿರುವುದು) ಅಡಿ ಪ್ರಕರಣ ದಾಖಲಾಗಿದೆ.

    ಏನಿದು ಪ್ರಕರಣ?
    ಇಂದು ಬೆಳಗ್ಗೆ ಬಿಬಿಎಂಪಿ ಕಚೇರಿಯಲ್ಲಿ ಕುಸುಮಾ ಅವರ ನಾಮಪತ್ರ ಸಲ್ಲಿಕೆ ಮಾಡುವ ಸಂದರ್ಭದಲ್ಲಿ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್‌ ನಾಯಕರು ಆಗಮಿಸಿದ್ದರು. ಚುನಾವಣೆಯ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಕಚೇರಿಯ 100 ಮೀಟರ್‌ ದೂರದಲ್ಲಿ ಯಾವುದೇ ವಾಹನಗಳು ಬಾರದಂತೆ ಬ್ಯಾರಿಕೇಡ್‌ ಹಾಕಲಾಗಿತ್ತು.

    ಬ್ಯಾರಿಕೇಡ್‌ ಹಾಕಲಾಗಿದ್ದರೂ ಕಾಂಗ್ರೆಸ್‌ ನಾಯಕರು ಒಳಬರಲು ಪ್ರಯತ್ನಿಸಿದ್ದಾಗ ಚುನಾವಣಾ ಕರ್ತವ್ಯದಲ್ಲಿದ್ದ ಪೊಲೀಸರು ಅವರನ್ನು ತಡೆದಿದ್ದಾರೆ. ಈ ವೇಳೆ ಸಿದ್ದರಾಮಯ್ಯನವರ ಬೆಂಗಾವಲು ಪಡೆಯ ಪೈಲಟ್‌ ವಾಹನದಲ್ಲಿದ್ದ ಪೊಲೀಸರು ಕರ್ತವ್ಯ ನಿರತ ಪೊಲೀಸರನ್ನು ತಳ್ಳಿ ಬ್ಯಾರಿಕೇಡ್‌ ಸರಿಸಿ ಬಿಬಿಎಂಪಿ ಕಚೇರಿಗೆ ವಾಹನಗಳನ್ನು ಹೋಗಲು ಅನುವು ಮಾಡಿಕೊಟ್ಟಿದ್ದಾರೆ.

    ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರ ಬೆಂಗಾವಲು ಪಡೆಯ ಪೊಲೀಸರು, ಅ‍ಭ್ಯರ್ಥಿ ಕುಸುಮಾ ಮತ್ತು ಕಾಂಗ್ರೆಸ್‌ ಬೆಂಬಲಿಗರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ನಾಗರಾಜ ಎನ್‌ ದೂರು ನೀಡಿದ್ದರು.

  • ಗುಬ್ಬಿ ಮೇಲೆ ಬ್ರಹ್ಮಾಸ್ತ್ರ-ಗೃಹ ಸಚಿವರು ಕಾರು ನಿಲ್ಲಿಸದಿದ್ದರೂ ಪೇದೆಗಳಿಗೆ ಶಿಕ್ಷೆ

    ಗುಬ್ಬಿ ಮೇಲೆ ಬ್ರಹ್ಮಾಸ್ತ್ರ-ಗೃಹ ಸಚಿವರು ಕಾರು ನಿಲ್ಲಿಸದಿದ್ದರೂ ಪೇದೆಗಳಿಗೆ ಶಿಕ್ಷೆ

    -ನೀತಿ ಸಂಹಿತಿ ಉಲ್ಲಂಘಿಸಿದ್ದು ಸಚಿವರು, ಪೇದೆಗಳಿಗೆ ಅಮಾನತು ಶಿಕ್ಷೆ

    ಮಂಡ್ಯ: ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರ ಕಾರ್ ತಪಾಸಣೆ ನಡೆಸಿಲ್ಲ ಎಂದು ಕರ್ತವ್ಯ ಲೋಪ ಆರೋಪದಡಿ ಇಬ್ಬರು ಪೇದೆಗಳನ್ನು ಎಸ್‍ಪಿ ಪರಶುರಾಮ್ ಅಮಾನತು ಮಾಡಿದ್ದಾರೆ.

    ಶ್ರೀನಿವಾಸ್ ಮತ್ತು ಗೌರಮ್ಮ ಅಮಾನುತುಗೊಂಡ ಮದ್ದೂರು ಸಂಚಾರಿ ಠಾಣೆ ಪೇದೆಗಳು. ನವೆಂಬರ್ 20ರಂದು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ನಿಡಘಟ್ಟ ಸಮೀಪದ ಚೆಕ್ ಪೋಸ್ಟ್ ಬಳಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ತೆರಳುತ್ತಿದ್ದರು. ಈ ವೇಳೆ ಪೇದೆ ಕಾರ್ ನಿಲ್ಲಿಸುವಂತೆ ಸೂಚಿಸಿದ್ದರು. ಪೇದೆ ಹೇಳದನ್ನ ಲೆಕ್ಕಿಸದ ಸಚಿವರು ಕಾರು ನಿಲ್ಲಿಸದೇ ಹೋಗಿದ್ದರು. ಈ ಸಂಬಂಧ ಗೃಹ ಸಚಿವರ ಕಾರು ಚಾಲಕನ ವಿರುದ್ಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಇದೀಗ ಮಂಡ್ಯ ಎಸ್‍ಪಿ, ಸಚಿವರ ಕಾರ್ ಪರಿಶೀಲನೆ ನಡೆಸಿಲ್ಲ ಎಂದು ಅಮಾನತುಗೊಳಿಸಿ ಆದೇಶ ನೀಡಿದ್ದಾರೆ. ನವೆಂಬರ್ 20ರಂದು ಎರಡು ಕಡೆ ಚೆಕ್ ಪೋಸ್ಟ್ ಸಿಬ್ಬಂದಿ ಬೆಂಗಳೂರಿಂದ ಮೈಸೂರಿನತ್ತ ತೆರಳುತ್ತಿದ್ದ ಬಸವರಾಜ್ ಅವರ ವಾಹವನ್ನು ತಡೆದಿದ್ದರು. ಸಚಿವರು ವಾಹನ ನಿಲ್ಲಿಸದೇ ನಿಡಘಟ್ಟ ಹಾಗೂ ಮಂಡ್ಯ ತಾಲೂಕಿನ ಹನಕೆರೆ ಬಳಿ ನೀತಿ ಸಂಹಿತೆ ಉಲ್ಲಂಘಿಸಿದ್ದರು. ಇದೀಗ ಮಾಡದ ತಪ್ಪಿಗೆ ಪೇದೆಗಳು ಅಮಾನತುಗೊಂಡಿದ್ದಾರೆ.

  • ಬೆಂಗಳೂರಿನ 4 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ – ಇಂದಿನಿಂದ ನೀತಿ ಸಂಹಿತೆ ಜಾರಿ

    ಬೆಂಗಳೂರಿನ 4 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ – ಇಂದಿನಿಂದ ನೀತಿ ಸಂಹಿತೆ ಜಾರಿ

    – ಇವಿಎಂ ಜೊತೆ ವಿವಿ ಪ್ಯಾಟ್ ಇರಲಿದೆ
    – 4 ಕ್ಷೇತ್ರಗಳಲ್ಲಿ 1361 ಮತಗಟ್ಟೆ ಸ್ಥಾಪನೆ

    ಬೆಂಗಳೂರು: ಸಿಲಿಕಾನ್ ಸಿಟಿಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ 5ರಂದು ಮತದಾನ ನಡೆಯಲಿದ್ದು, ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದೆ ಎಂದು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಬಿ.ಹೆಚ್.ಅನಿಲ್ ಕುಮಾರ್ ಮಾಹಿತಿ ನೀಡಿದರು.

    ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಗರದ ಕೆ.ಆರ್ ಪುರ, ಮಹಾಲಕ್ಷ್ಮಿ ಲೇಔಟ್, ಯಶವಂತಪುರ, ಶಿವಾಜಿನಗರಗಳಿಗೆ ಡಿಸೆಂಬರ್ 5 ಮತದಾನ ನಡೆಯಲಿದ್ದು, ಚುನಾವಣಾ ಸಿದ್ಧತೆ ಆರಂಭಗೊಂಡಿದೆ. ನೀತಿ ಸಂಹಿತೆ ಸಹ ಇಂದಿನಿಂದಲೇ ಜಾರಿಯಾಗಲಿದೆ ಎಂದು ತಿಳಿಸಿದರು.

    ಉಪ ಚುನಾವಣೆಯಲ್ಲಿ ಈ ಬಾರಿಯೂ ಇವಿಎಂ ಜೊತೆ ವಿವಿ ಪ್ಯಾಟ್ ಕಡ್ಡಾಯವಾಗಿದ್ದು, ಬೆಂಗಳೂರಿನ ಆಯಾ ವಿಧಾನಸಭಾ ಕ್ಷೇತ್ರಗಳ ಭದ್ರತಾಕೊಠಡಿಯಲ್ಲೇ ಇವಿಎಂ ಶೇಖರಿಸಿಡಲಾಗಿದೆ. ಮಾದರಿ ನೀತಿ ಸಂಹಿತೆ ಇಂದಿನಿಂದ ಡಿ.11ರ ವರೆಗೆ ಜಾರಿಯಲ್ಲಿರಲಿದೆ. ಪ್ರತಿ ಮತಗಟ್ಟೆಗೆ ಒಬ್ಬ ಅಧ್ಯಕ್ಷಾಧಿಕಾರಿ, ಮೂವರು ಮತಗಟ್ಟೆ ಅಧಿಕಾರಿ ನೇಮಕವಾಗಿದ್ದಾರೆ. 4 ಕ್ಷೇತ್ರಗಳಿಗೆ ಒಟ್ಟು 5,988 ಚುನಾವಣಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮೈಕ್ರೋ ಅಬ್ಸರ್ವರ್ಸ್ ಗಳನ್ನೂ ಮತದಾನ ಪ್ರಕ್ರಿಯೆಗೆ ನಿಯೋಜನೆ ಮಾಡಲಾಗಿದ್ದು, ಚುನಾವಣಾ ಸಿಬ್ಬಂದಿ ಹಾಗೂ ಮೈಕ್ರೋ ಅಬ್ಸರ್ವರ್ಸ್ ಗೆ ಎರಡು ಹಂತದಲ್ಲಿ ತರಬೇತಿ ನೀಡಲಾಗುತ್ತದೆ ಎಂದು ವಿವರಿಸಿದರು.

    ಉಪಚುನಾವಣೆ ದೂರುಗಳಿಗೆ ಸಂಬಂಧಿಸಿದಂತೆ ನಿಯಂತ್ರಣ ಕೊಠಡಿ ಸ್ಥಾಪನೆ ಮಾಡಲಾಗಿದೆ. ಚುನಾವಣೆಗೆ ಸಂಬಂಧಿಸಿದ ಯಾವುದೇ ದೂರುಗಳಿದ್ದರೂ 080 22975561 ಅಥವಾ 88841 18033 ಗೆ ಕರೆ ಮಾಡಿ ದೂರು ಸಲ್ಲಿಸಬಹುದಾಗಿದೆ. ಚುನಾವಣಾ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಸಿಬ್ಬಂದಿ ಜೊತೆಗೂ ಸಭೆ ನಡೆಸಲಾಗುವುದು ಎಂದರು.

    ಇಂದಿನಿಂದ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ನಾಮಪತ್ರ ಸಲ್ಲಿಸಲು ನ.18 ಕೊನೆಯ ದಿನವಾಗಿದೆ. ನ.19 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನ.21 ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದೆ.

    ಡಿ.5 ರಂದು ಮತದಾನ ನಡೆಯಲಿದ್ದು, ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಡಿ.9 ರಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಡಿ.11ಕ್ಕೆ ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.

    4 ಕ್ಷೇತ್ರಗಳಿಂದ ಈಗಾಗಲೇ 6 ನಾಮಪತ್ರ ಸಲ್ಲಿಕೆಯಾಗಿದ್ದು, ಕೆ.ಆರ್ ಪುರ ಕ್ಷೇತ್ರದಲ್ಲಿ 437 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಯಶವಂತಪುರ ಕ್ಷೇತ್ರದಲ್ಲಿ 461, ಮಹಾಲಕ್ಷ್ಮಿ ಲೇಔಟ್ 270, ಶಿವಾಜಿನಗರ 193 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 4 ಕ್ಷೇತ್ರದಲ್ಲಿ ಒಟ್ಟು 1361 ಮತಗಟ್ಟೆಗಳನ್ನು ಗುರುತಿಸಲಾಗಿದೆ. ಕೆಆರ್ ಪುರ ಕ್ಷೇತ್ರದಲ್ಲಿ ಒಟ್ಟು 4,81,132, ಯಶವಂತಪುರದಲ್ಲಿ 4,75,759, ಮಹಾಲಕ್ಷ್ಮಿ ಲೇಔಟ್ ನಲ್ಲಿ 2,83,885, ಶಿವಾಜಿನಗರದಲ್ಲಿ 1,91,618 ಮತದಾರರಿದ್ದಾರೆ.

  • ಮೋದಿ, ಶಾ ವಿರುದ್ಧ ಕ್ರಮಕ್ಕೆ ಕೈ ಆಗ್ರಹ – ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್

    ಮೋದಿ, ಶಾ ವಿರುದ್ಧ ಕ್ರಮಕ್ಕೆ ಕೈ ಆಗ್ರಹ – ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ವಿರುದ್ಧ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.

    ಕಾಂಗ್ರೆಸ್ ಸಂಸದೆ ಸುಶ್ಮಿತಾ ದೇವ್ ಅವರು ಮೋದಿ ಹಾಗೂ ಅಮಿತ್ ಬಿಜೆಪಿ ಸಮಾವೇಶಗಳಲ್ಲಿ ಸೇನೆಯ ಬಗ್ಗೆ ಹೇಳಿಕೆಗಳನ್ನು ನೀಡಿ, ಪ್ರಚೋದನಕಾರಿ ಭಾಷಣ ಮಾಡುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಸೋಮವಾರ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.

    ಈ ಬಗ್ಗೆ ಆದಷ್ಟು ಬೇಗ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಕೋರ್ಟ್ ಸೂಚನೆ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದರು. ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಪೀಠ ದೂರುಗಳ ಬಗ್ಗೆ ಪರಿಶೀಲಿಸಿ ನಡೆಸಿ, ಕೋರ್ಟ್ ಗೆ ಉತ್ತರಿಸುವಂತೆ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿದೆ.

    ಈ ಅರ್ಜಿಯ ಮುಂದಿನ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 2ಕ್ಕೆ ಮುಂದೂಡಿದೆ.

  • ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌‌ರಿಂದ ನೀತಿ ಸಂಹಿತೆ ಉಲ್ಲಂಘನೆ

    ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌‌ರಿಂದ ನೀತಿ ಸಂಹಿತೆ ಉಲ್ಲಂಘನೆ

    ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮತಗಟ್ಟೆಯ ಒಳಗಡೆ ಮತಯಾಚಣೆ ಮಾಡುವ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ.

    ಬೆಳಗಾವಿಯ ಹಿಂಡಲಗಾ 60ರ ಮತಗಟ್ಟೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಮತದಾನ ಮಾಡಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ತನ್ನ ತಾಯಿ, ಪುತ್ರ ಮತ್ತು ಸಹೋದರನ ಜೊತೆಗೆ ಬಂದು ಮತದಾನ ಮಾಡಿದ್ದಾರೆ.

    ಲಕ್ಷ್ಮೀ ಹೆಬ್ಬಾಳ್ಕರ್ ಮತದಾನ ಮಾಡಿದ ಬಳಿಕ ಮತಗಟ್ಟೆ ಆವರಣದಲ್ಲಿ ಮತದಾರರಿಗೆ ಕೈಮುಗಿದು ಇದೊಂದು ಬಾರಿ ಮತ ಹಾಕಿ ಎಂದು ಮನವಿ ಮಾಡಿಕೊಂಡಿದ್ದಾರೆ.

    ಮತಗಟ್ಟೆಯ ಆವರಣದ ಒಳಗಡೆ ಮತಯಾಚನೆ ಮಾಡುವಂತಿಲ್ಲ. ಹೀಗಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಮತಯಾಚನೆ ಮಾಡಿರುವುದು ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ.

  • ಹೆಲಿಕಾಪ್ಟರ್‌ನಲ್ಲಿದ್ದ ಬಿಎಸ್‍ವೈ ಬ್ಯಾಗ್ ಕೆಳಗಿಳಿಸಿ ಪರಿಶೀಲನೆ

    ಹೆಲಿಕಾಪ್ಟರ್‌ನಲ್ಲಿದ್ದ ಬಿಎಸ್‍ವೈ ಬ್ಯಾಗ್ ಕೆಳಗಿಳಿಸಿ ಪರಿಶೀಲನೆ

    ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೂ ಇಂದು ನೀತಿ ಸಂಹಿತೆಯ ಬಿಸಿ ತಟ್ಟಿದೆ.

    ಶಿವಮೊಗ್ಗದಿಂದ ಚಳ್ಳಕೆರೆಗೆ ಪ್ರಚಾರ ಸಭೆಗೆಂದು ಹೆಲಿಕಾಪ್ಟರ್ ಮೂಲಕ ಯಡಿಯೂರಪ್ಪ ಹೊರಟಿದ್ದರು. ಆದರೆ ಅವರ ಲಗೇಜನ್ನು ಚುನಾವಣಾಧಿಕಾರಿಗಳು ಅಮೂಲಾಗ್ರವಾಗಿ ಪರಿಶೀಲನೆ ನಡೆಸಿದ್ದಾರೆ. ಯಡಿಯೂರಪ್ಪ ಹೆಲಿಪ್ಯಾಡ್‍ಗೆ ಬಂದು ಹೆಲಿಕಾಪ್ಟರ್ ಏರಿ ಕುಳಿತ ನಂತರ ಚುನಾವಣಾ ಅಧಿಕಾರಿಗಳು ಬಂದಿದ್ದಾರೆ.

    ಹೆಲಿಕಾಪ್ಟರ್‌ನಲ್ಲಿಟ್ಟಿದ್ದ ಯಡಿಯೂರಪ್ಪ ಬ್ಯಾಗ್‍ಗಳನ್ನು ಮತ್ತೆ ಕೆಳಗಿಳಿಸಿದ್ದಾರೆ. ನಂತರ ಬ್ಯಾಗ್ ಒಳಗಿದ್ದ ಬಟ್ಟೆ – ಬುಕ್ ಇನ್ನಿತರ ವಸ್ತುಗಳನ್ನು ಹೊರ ತೆಗೆದು ಫ್ಲೈಯಿಂಗ್ ಸ್ಕ್ವಾಡ್ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ಬಳಿಕೆ ಮತ್ತೆ ವಸ್ತುಗಳನ್ನು ಒಳಗಡೆ ಇಟ್ಟಿದ್ದಾರೆ. ಇಷ್ಟು ಪ್ರಕ್ರಿಯೆ ಸುಮಾರು 10 ನಿಮಿಷಗಳ ಕಾಲ ನಡೆದಿದೆ. ಅಷ್ಟು ಹೊತ್ತಿನವರೆಗೂ ಬಿ.ಎಸ್.ಯಡಿಯೂರಪ್ಪ ಅವರು ಹೆಲಿಕಾಪ್ಟರ್ ನಲ್ಲೇ ಕುಳಿತಿದ್ದರು.

  • ಪ್ರಚಾರದ ಭರದಲ್ಲಿ ಸಿಎಂರಿಂದ ನೀತಿ ಸಂಹಿತೆ ಉಲ್ಲಂಘನೆ!

    ಪ್ರಚಾರದ ಭರದಲ್ಲಿ ಸಿಎಂರಿಂದ ನೀತಿ ಸಂಹಿತೆ ಉಲ್ಲಂಘನೆ!

    ತುಮಕೂರು: ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಹಲವು ಯೋಜನೆಗಳ ಘೋಷಣೆ ಮಾಡುವ ಮೂಲಕ ಸಿಎಂ ಕುಮಾರಸ್ವಾಮಿ ಅವರು ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

    ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು, ಒಣಗಿ ಹೋದ ತೆಂಗಿನ ಮರಕ್ಕೆ 400 ರೂ ಪರಿಹಾರ ಈಗಾಗಲೇ ಕೊಡುತಿದ್ದೇವೆ. ಅದು ಸಾಕಾಗಲ್ಲ ಎಂದು ಹೇಳಿದ್ದರು.

    ಜಯಚಂದ್ರ ಅವರ ಮಾತಿಗೆ ಪ್ರತಿಕ್ರಿಯಿಸಿದ ಸಿಎಂ, ಜಯಚಂದ್ರ ಅವರು 400 ರಿಂದ 1000 ರೂ. ಗೆ ಏರಿಕೆ ಮಾಡಬೇಕು ಅಂದಿದ್ದಾರೆ. ಆ ಕುರಿತು ಚುನಾವಣೆ ಮುಗಿದ ಬಳಿಕ ನೋಡೋಣ ಎಂದು ಪರೋಕ್ಷವಾಗಿ 1000 ರೂ. ಕೊಡುವ ಭರವಸೆ ಸಿಎಂ ನೀಡಿದರು. ಹಾಗೆಯೇ ಭದ್ರಾ ಮೇಲ್ದಂಡೆ ನೀರನ್ನು ಶಿರಾ ಚಿಕ್ಕನಾಯಕನಹಳ್ಳಿಗೆ ಹರಿಸುತ್ತೇನೆ. 8 ರಿಂದ 10 ತಿಂಗಳ ಅವಕಾಶ ಕೊಡಿ. ಚಿಕ್ಕನಾಯಕನಹಳ್ಳಿ ತಾಲೂಕಿನ ಕೆರೆಕಟ್ಟೆ ತುಂಬಿಸುವ ಕೆಲಸ ಮಾಡಬೇಕಿದೆ. ನೀತಿ ಸಂಹಿತೆ ಇರುವುದರಿಂದ ಹೆಚ್ಚಿಗೆ ಹೇಳಿಕೆ ಆಗೋಲ್ಲ ಎಂದಿದ್ದರು.

    ಹೀಗಾಗಿ ಚುನಾವಣಾ ವೇಳೆಯಲ್ಲಿ ಈ ಆಶ್ವಾಸನೆಗಳನ್ನು ನೀಡುವ ಮೂಲಕ ಸಿಎಂ ಅವರು ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ  ಎಂದು ಕುಮಾರಸ್ವಾಮಿ ವಿರುದ್ಧ ಆರೋಪ ವ್ಯಕ್ತವಾಗುತ್ತಿದೆ.