Tag: Cogress

  • ಸೋನಿಯಾ ಗಾಂಧಿ ಹೇಳಿಕೆಯಿಂದ ರಾಷ್ಟ್ರಪತಿ ಹುದ್ದೆಯ ಘನತೆಗೆ ಘಾಸಿ – ರಾಷ್ಟ್ರಪತಿ ಭವನ ಪ್ರತಿಕ್ರಿಯೆ

    ಸೋನಿಯಾ ಗಾಂಧಿ ಹೇಳಿಕೆಯಿಂದ ರಾಷ್ಟ್ರಪತಿ ಹುದ್ದೆಯ ಘನತೆಗೆ ಘಾಸಿ – ರಾಷ್ಟ್ರಪತಿ ಭವನ ಪ್ರತಿಕ್ರಿಯೆ

    ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಉಭಯ ಸದನಗಳನ್ನುದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಮಾತನಾಡಿದರು. ಈ ಬಗ್ಗೆ ಸಂಸತ್‌ನ ಹೊರಗೆ ಮಾತನಾಡಿದ ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ ʻPoor Ladyʼ ಎಂದು ಕರೆದಿದ್ದು, ಬಿಜೆಪಿ ಕಟುವಾಗಿ ಟೀಕಿಸಿದೆ. ಈ ಬೆನ್ನಲ್ಲೇ ರಾಷ್ಟ್ರಪತಿ ಭವನ ಸೋನಿಯಾ ಗಾಂಧಿ ಅವರ ಹೆಸರು ಉಲ್ಲೇಖಿಸದೇ ಪ್ರತಿಕ್ರಿಯೆ ನೀಡಿದೆ.

    ಬಜೆಟ್​ ಅಧಿವೇಶನ ಭಾಷಣದ ವೇಳೆ ಎಲ್ಲಿಯೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುಸ್ತಾಗಿಲ್ಲ. ಇದು ಉನ್ನತ ಹುದ್ದೆಯನ್ನು ಘಾಸಿಗೊಳಿಸುವ ಹೇಳಿಕೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದೆ. ಇದನ್ನೂ ಓದಿ: ದ್ರೌಪದಿ ಮುರ್ಮುಗೆ Poor Lady ಎಂದ ಸೋನಿಯಾ – ಮುಗಿಬಿದ್ದ ಬಿಜೆಪಿ ನಾಯಕರು

    ಮುಂದುವರಿದು… ಸತ್ಯದಿಂದ ದೂರವಿರಲು ಸಾಧ್ಯವಿಲ್ಲ ಎಂದು ರಾಷ್ಟ್ರಪತಿ ಭವನ ಸ್ಪಷ್ಟಪಡಿಸಲು ಬಯಸುತ್ತದೆ. ರಾಷ್ಟ್ರಪತಿಗಳು ಯಾವುದೇ ಹಂತದಲ್ಲೂ ದಣಿದಿಲ್ಲ, ಆದರೆ ವಾಸ್ತವವಾಗಿ, ಅವರು ತಮ್ಮ ಭಾಷಣದ ಸಂದರ್ಭದಲ್ಲಿ ಅಳಿವಿನ ಅಂಚಿನಲ್ಲಿರುವ ಸಮುದಾಯಗಳ ಪರವಾಗಿ, ಮಹಿಳೆಯರು ಮತ್ತು ರೈತರ ಪರವಾಗಿ ಮಾತನಾಡುವುದು ಎಂದಿಗೂ ಆಯಾಸವಾಗುವುದಿಲ್ಲ ಎಂದು ನಂಬುತ್ತಾರೆ ಎಂದು ಸಹ ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿದೆ.

    ರಾಷ್ಟ್ರಪತಿ ಭವನ ಪ್ರಕಟಣೆಯಲ್ಲೇನಿದೆ?
    ರಾಷ್ಟ್ರಪತಿಗಳು ಸಂಸತ್ತಿನಲ್ಲಿ ಮಾಡಿದ ಭಾಷಣದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸುವಾಗ, ಕಾಂಗ್ರೆಸ್ ಪಕ್ಷದ ಕೆಲವು ಪ್ರಮುಖ ನಾಯಕರು ಉನ್ನತ ಹುದ್ದೆಯ ಘನತೆಯನ್ನು ಘಾಸಿಗೊಳಿಸುವ ಹೇಳಿಕೆ ನೀಡಿದ್ದಾರೆ. ರಾಷ್ಟ್ರಪತಿಗಳು ಭಾಷಣದ ಕೊನೆಯಲ್ಲಿ ಸುಸ್ತಾಗಿದ್ದರು, ಮಾತನಾಡಲು ಕಷ್ಟಪಟ್ಟರು ಎಂದೂ ಹೇಳಿದ್ದಾರೆ. ಇಂತಹ ಹೇಳಿಕೆಗಳು ಸ್ವೀಕಾರಾರ್ಹವಲ್ಲ.

    ಸತ್ಯದಿಂದ ದೂರವಿರಲು ಸಾಧ್ಯವಿಲ್ಲ ಎಂದು ರಾಷ್ಟ್ರಪತಿ ಭವನ ಸ್ಪಷ್ಟಪಡಿಸಲು ಬಯಸುತ್ತದೆ. ಅವರು ಯಾವುದೇ ಹಂತದಲ್ಲೂ ದಣಿದಿರಲಿಲ್ಲ. ವಾಸ್ತವವಾಗಿ ಅಳಿವಿನ ಅಂಚಿನಲ್ಲಿರುವ ಸಮುದಾಯ, ಮಹಿಳೆಯರು ಮತ್ತು ರೈತರ ಪರವಾಗಿ ಮಾತನಾಡುವಾಗ ಎಂದಿಗೂ ಆಯಾಸವಾಗುವುದಿಲ್ಲ ಎಂದು ಅವರು ನಂಬಿದ್ದರು. ಆದ್ರೆ ಈ ನಾಯಕರು ಹಿಂದಿಯಂತಹ ಭಾರತೀಯ ಭಾಷೆಗಳಲ್ಲಿನ ಭಾಷಾವೈಶಿಷ್ಟ್ಯ ಮತ್ತು ಪ್ರವಚನದ ಬಗ್ಗೆ ತಮ್ಮನ್ನು ತಾವು ಪರಿಚಯಿಸಿಕೊಂಡಿಲ್ಲ. ಇದರಿಂದಾಗಿ ತಪ್ಪು ಅನಿಸಿಕೆ ಉಂಟಾಗಿರಬಹುದು ಎಂದು ರಾಷ್ಟ್ರಪತಿಗಳ ಕಚೇರಿ ನಂಬುತ್ತದೆ. ದುರದೃಷ್ಟವಶಾತ್‌ ಅವರು ಕಳಪೆ ಅಭಿರುಚಿಯಲ್ಲಿದ್ದರೆ ಅದನ್ನು ತಪ್ಪಿಸಬಹುದು ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

    ಸೋನಿಯಾ ಗಾಂಧಿ ಹೇಳಿದ್ದೇನು?
    ರಾಷ್ಟ್ರಪತಿಗಳ ಭಾಷಣ ಮುಕ್ತಾಯದ ಬಳಿಕ ಸಂಸತ್‌ ಹೊರಗಡೆ ಬಂದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕ ಗಾಂಧಿ ಅವರನ್ನು ಮಾಧ್ಯಮಗಳು ಮಾತನಾಡಿಸಿವೆ. ಈ ವೇಳೆ ಸೋನಿಯಾ ಗಾಂಧಿ, Poor Lady ಭಾಷಣ ಮುಗಿಸುವ ಹೊತ್ತಿಗೆ ಸುಸ್ತಾಗಿ ಹೋಗಿದ್ದರು. ಅವರಿಗೆ ಮಾತನಾಡಲು ಕಷ್ಟವಾಗುತ್ತಿತ್ತು ಎಂದು ಹೇಳಿದರು. ಈ ಸಂದರ್ಭದಲ್ಲಿ ರಾಹುಲ್‌ ಗಾಂಧಿ ಭಾಷಣ ತುಂಬಾ ಬೋರ್‌ ಆಗಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಸೋನಿಯಾ ಗಾಂಧಿ ದ್ರೌಪತಿ ಮುರ್ಮು ಅವರನ್ನು Poor Lady ಎಂದು ಕರೆದಿದ್ದಕ್ಕೆ ಬಿಜೆಪಿ (BJP) ನಾಯಕರು ಕಾಂಗ್ರೆಸ್‌ ವಿರುದ್ಧ ಮುಗಿಬಿದ್ದಿದ್ದಾರೆ. ಬುಡಕಟ್ಟು ಮಹಿಳೆ ರಾಷ್ಟ್ರಪತಿ ಸ್ಥಾನವನ್ನು ಅಲಂಕರಿಸಿದ್ದನ್ನು ಸಹಿಸಲು ಕಾಂಗ್ರೆಸ್‌ಗೆ ಆಗುತ್ತಿಲ್ಲ. ಕೂಡಲೇ ಸೋನಿಯಾ ಗಾಂಧಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರ ಹಾಕುತ್ತಿದ್ದಾರೆ.

    ಕೇಂದ್ರ ಸಚಿವ ಜೆಪಿ ನಡ್ಡಾ ಕಿಡಿ
    ಕೇಂದ್ರ ಸಚಿವ ಜೆ.ಪಿ. ನಡ್ಡಾ ಸಹ ತಮ್ಮ ಎಕ್ಸ್‌ ಖಾತೆ ಮೂಲಕ ಸೋನಿಯಾ ಗಾಂಧಿ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಾರ್ಟಿಯು ಭಾರತದ ಬುಡಕಟ್ಟು ಸಮುದಾಯಗಳ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ. ಇಂತಹ ಪದಗಳನ್ನು ಉದ್ದೇಶಪೂರ್ವಕವಾಗಿ ಬಳಸುವ ಮೂಲಕ ಕಾಂಗ್ರೆಸ್ ಪಕ್ಷದ ಬಡವರ ವಿರೋಧಿ ಮತ್ತು ಬುಡಕಟ್ಟು ವಿರೋಧಿ ನೀತಿಯನ್ನು ತೋರಿಸುತ್ತದೆ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

  • ಸಮಾಜ ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ, ರಾಷ್ಟ್ರೀಯ ಶತ್ರುಗಳ ವಿರುದ್ಧ ಹೋರಾಡಬೇಕಿದೆ – ಮೋದಿ ವಾಗ್ದಾಳಿ

    ಸಮಾಜ ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ, ರಾಷ್ಟ್ರೀಯ ಶತ್ರುಗಳ ವಿರುದ್ಧ ಹೋರಾಡಬೇಕಿದೆ – ಮೋದಿ ವಾಗ್ದಾಳಿ

    ನವದೆಹಲಿ: ಪಟ್ಟಭದ್ರ ಹಿತಾಸಕ್ತಿಗಳಿಗಳು ಸಮಾಜವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ, 2047ರ ವೇಳೆಗೆ ಭಾರತವನ್ನು (India) ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ತನ್ನ ʻರಾಷ್ಟ್ರೀಯ ಶತ್ರುಗಳʼ ವಿರುದ್ಧ ಒಗ್ಗಟ್ಟಾಗಿ ಹೋರಾಡಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Modi) ಕರೆ ನೀಡಿದ್ದಾರೆ.

    ಶ್ರೀ ಸ್ವಾಮಿನಾರಾಯಣ ದೇವಸ್ಥಾನದ 200ನೇ ವಾರ್ಷಿಕೋತ್ಸವದ ಹಿನ್ನಲೆ ಗುಜರಾತ್‌ನ (Gujarat) ವಡ್ತಾಲ್‌ನಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಸಮಾಜವನ್ನು ಜಾತಿ, ಧರ್ಮ, ಭಾಷೆ, ಮೇಲೂ, ಕೀಳು, ಗಂಡು-ಹೆಣ್ಣು, ಗ್ರಾಮ, ನಗರಗಳ ಆಧಾರದಲ್ಲಿ ವಿಭಜಿಸುವ ಷಡ್ಯಂತ್ರ ನಡೆಯುತ್ತಿದೆ. ರಾಷ್ಟ್ರ ವೈರಿಗಳ ಈ ಪ್ರಯತ್ನದ ಗಂಭೀರತೆಯನ್ನು ಅರ್ಥ ಮಾಡಿಕೊಳ್ಳುವ ಅಗತ್ಯವಿದೆ ನಾವೆಲ್ಲರೂ ಒಟ್ಟಾಗಿ ಇಂತಹ ಕೃತ್ಯವನ್ನು ಸೋಲಿಸಬೇಕಾಗಿದೆ ಎಂದು ಮೋದಿ ಎಚ್ಚರಿಸಿದರು.

    ಜಾತಿ ಜನಗಣತಿಗೆ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಬೇಡಿಕೆಯ ನಡುವೆಯೇ ಪ್ರಧಾನಿ ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗಷ್ಟೇ ಪ್ರಧಾನಿಯವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿಯನ್ನು ತೀವ್ರಗೊಳಿಸಿದ್ದು, ಜಾತಿ ಮತ್ತು ಧರ್ಮದ ಆಧಾರದ ಮೇಲೆ ಅದು ಬಿರುಕು ಮೂಡಿಸುತ್ತಿದೆ ಎಂದು ಆರೋಪಿಸಿದ್ದಾರೆ. ಮಹಾರಾಷ್ಟ್ರ ಚುನಾವಣೆಯ ಪ್ರಚಾರದ ವೇಳೆ ಪ್ರಧಾನಿ ಮೋದಿ ಅವರು, ʻಏಕ್ ಹೈ, ತೋ ಸೇಫ್ ಹೈʼ ಎಂದು ಘೋಷಣೆ ನೀಡಿದ್ದರು. ಇದನ್ನೂ ಓದಿ: ರಾಹುಲ್‌ ಗಾಂಧಿಗೆ ಮತ್ತೆ ಸಂಕಷ್ಟ – FIR ದಾಖಲಿಸುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

    ಕಾಂಗ್ರೆಸ್ ಆಡಳಿತದಲ್ಲಿ ಒಬಿಸಿಗಳು ಒಗ್ಗಟ್ಟಾಗಿರಲಿಲ್ಲ. ಕಾಂಗ್ರೆಸ್ ಅಧಿಕಾರದಿಂದ ಹೊರಗಿರುವಾಗ ಮಾತ್ರ ಒಬಿಸಿಗಳಿಗೆ ಮೀಸಲಾತಿ ಸಿಕ್ಕಿತು. ಒಬಿಸಿಗಳು ಒಗ್ಗೂಡಿದ ತಕ್ಷಣ, ಅಂತಿಮ ಪರಿಣಾಮವೆಂದರೆ ದೇಶದಲ್ಲಿ ಕಾಂಗ್ರೆಸ್ ತನ್ನ ಸರಳ ಬಹುಮತವನ್ನು ಕಳೆದುಕೊಂಡಿತು ಎಂದು ಪ್ರಧಾನಿ ಮೋದಿ ಹೇಳಿದರು. ಇದನ್ನೂ ಓದಿ: ದೆಹಲಿ, ಮುಂಬೈನಲ್ಲಿ ಈರುಳ್ಳಿ ದರ ಕೆ.ಜಿ. 80 ರೂ.ಗೆ ಏರಿಕೆ – 5 ವರ್ಷಗಳಲ್ಲೇ ಗರಿಷ್ಠ

  • ಠೇವಣಿ ಉಳಿಸಿಕೊಳ್ಳಲು ಕಾಂಗ್ರೆಸ್ ಕಾರ್ಯಕರ್ತರಿಂದ ನಕಲಿ ಮತದಾನ- ಜೆಡಿಎಸ್ ಆರೋಪ

    ಠೇವಣಿ ಉಳಿಸಿಕೊಳ್ಳಲು ಕಾಂಗ್ರೆಸ್ ಕಾರ್ಯಕರ್ತರಿಂದ ನಕಲಿ ಮತದಾನ- ಜೆಡಿಎಸ್ ಆರೋಪ

    ಕೊಪ್ಪಳ: ನಕಲಿ ಮತದಾರನ್ನು ಕರೆತಂದ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವಿನ ಜಗಳವನ್ನು ನಿಲ್ಲಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ ಘಟನೆ ನಗರದ ಹಮಾಲರ ಕಾಲೊನಿಯ 3ನೇ ವಾರ್ಡ್ ನಲ್ಲಿ ನಡೆದಿದೆ.

    ಇಂದು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾಂಗ್ರೆಸ್ ಕಾರ್ಯಕರ್ತರು ಕೊಪ್ಪಳ ಸಮೀಪದ ಹಾಲರ್ತಿ, ಹೂವಿನಾಳ ಹಾಗೂ ಕುನಿಕೇರಿ ಗ್ರಾಮದಿಂದ ಜನರು ಕರೆಸಿ ಮತದಾನ ಮಾಡಿಸುತ್ತಿದ್ದಾರೆ. ಮತದಾರ ಪಟ್ಟಿಯಲ್ಲಿ ಬೇರೆ ಗ್ರಾಮಗಳ ಜನರ ಹೆಸರು ಇದೆ, ಅದನ್ನು ಪರೀಶಿಲನೆ ಮಾಡಬೇಕೆಂದು ಜಿಲ್ಲಾ ಚುನಾವಣೆ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದೇವು. ಆದರೆ ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ಈಗ ಅಕ್ರಮ ಮತದಾನ ನಡೆಯುತ್ತಿದೆ ಎಂದು ಜೆಡಿಎಸ್ ಅಭ್ಯರ್ಥಿ ಮಹ್ಮದ್ ಶಫಿ ಆರೋಪಿಸಿದ್ದಾರೆ.

    ಕಾಂಗ್ರೆಸ್ ಅಭ್ಯರ್ಥಿಯು ಸೋಲುವುದು ಖಚಿತವಾಗಿದ್ದು, ಠೇವಣಿ ಉಳಿಯಬೇಕು ಎನ್ನುವ ಉದ್ದೇಶದಿಂದ ನಕಲಿ ಮತದಾನಕ್ಕೆ ಮುಂದಾಗಿದ್ದಾರೆ. ಗ್ರಾಮೀಣ ಪ್ರದೇಶದ ಜನರಿಗೆ ಹಣ ನೀಡಿ, ಕರೆಸಲಾಗುತ್ತಿದೆ. ಅವರನ್ನು ನಾವು ಹಿಡಿದು ಪೊಲೀಸರಿಗೆ ಒಪ್ಪಿಸಿದರೂ, ಪೊಲೀಸರು ವಶಕ್ಕೆ ಪಡೆದು ಬಳಿಕ ಕೈಬಿಡುತ್ತಿದ್ದಾರೆ. ಅಕ್ರಮವಾಗಿ ನಡೆಯುತ್ತಿರುವ ಚುನಾವಣೆಯನ್ನು ರದ್ದುಗೊಳಿಸಿ, ಮರು ಚುನಾವಣೆಗೆ ಆದೇಶ ಹೊರಡಿಸಬೇಕು ಎಂದು ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ.

    ಬೇರೆ ಗ್ರಾಮಗಳಿಂದ ಮತಗಟ್ಟೆಗೆ ಬಂದಿದ್ದ ಕೆಲವರನ್ನು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದರು. ಈ ವೇಳೆ ಭಾರೀ ಪ್ರಮಾಣದಲ್ಲಿ ಜನರು ಗಲಾಟೆ ಮಾಡಿದ್ದರಿಂದ ಅವರನ್ನು ಚದುರಿಸಲು ಲಾಠಿ ಚಾರ್ಜ್ ಮಾಡಿದ್ದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಆಪರೇಷನ್ ಕಮಲ ಅಂದ್ರೆ ಕುರಿ, ದನಗಳನ್ನು ಖರೀದಿಸಿದಂತೆ: ಬಿಎಸ್‍ವೈಗೆ ಸಿದ್ದರಾಮಯ್ಯ ಟಾಂಗ್

    ಆಪರೇಷನ್ ಕಮಲ ಅಂದ್ರೆ ಕುರಿ, ದನಗಳನ್ನು ಖರೀದಿಸಿದಂತೆ: ಬಿಎಸ್‍ವೈಗೆ ಸಿದ್ದರಾಮಯ್ಯ ಟಾಂಗ್

    -ಬಿಜೆಪಿ ಶಾಸಕರು ಕಾಂಗ್ರೆಸ್‍ಗೆ ಬರೋದು ಬೇಡ

    ವಿಜಯಪುರ: ಆಪರೇಷನ್ ಕಮಲ ಅಂದರೆ ಕುರಿ, ದನ, ಎಮ್ಮೆಗಳನ್ನು ದುಡ್ಡು ಕೊಟ್ಟು ಖರೀದಿಸಿದಂತೆ. ಯಾವ ಶಾಸಕರು ಮಾರಾಟಕ್ಕೆ ಇರುತ್ತಾರೆ ಅವರನ್ನು ಖರೀದಿಸಿ ಮುಂದಿನ ಚುನಾವಣೆಯಲ್ಲಿ ಹಣ ಖರ್ಚು ಮಾಡಿ ಗೆಲ್ಲಿಸುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಕಾಲೆಳೆದ್ದಿದ್ದಾರೆ.

    ಆಲಮಟ್ಟಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ, ಬಿ.ಎಸ್.ಯಡಿಯೂರಪ್ಪ 20 ರಿಂದ 25 ಕೋಟಿ ರೂ. ನೀಡಿ ಶಾಸಕರನ್ನು ಖರೀದಿಸಿ, ಸರ್ಕಾರ ರಚಿಸಲು ಮುಂದಾಗಿದ್ದರು. ಹೀಗಾಗಿ ಮೊದಲ ಅನೈತಿಕ ರಾಜಕಾರಣ ಮಾಡಿದ್ದು ಅವರೇ ಎಂದು ವಾಗ್ದಾಳಿ ನಡೆಸಿದರು.

    ಬಿಜೆಪಿ ಅನೇಕ ಮುಖಂಡರು ಕಾಂಗ್ರೆಸ್ಸಿಗೆ ಬರುವುತ್ತೇವೆ ಎಂದು ಕೇಳುತ್ತಿದ್ದಾರೆ. ಆದರೆ ಅವರು ಬರುವುದು ಬೇಡ ಅಂತಾ ಅವರಿಗೆ ಅಲ್ಲೆ ಇರುವಂತೆ ನಾವೇ ಹೇಳಿದ್ದೇವೆ ಎಂದು ಯಡಿಯೂರಪ್ಪಗೆ ಟಾಂಗ್ ನೀಡಿದ ಅವರು, ರಾಜ್ಯದ ಜನರು ಸಮ್ಮಿಶ್ರ ಸರ್ಕಾರ ರಚನೆಯಾಗಲಿ ಅಂತಾ ಜನರು ಮತ ಹಾಕಿದ್ದಾರೆ. ಅದರಂತೆ ಸಮ್ಮಿಶ್ರ ಸರ್ಕಾರ ನಡೆಯುತ್ತಿದೆ ಎಂದರು.

    ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ, ಕರಾವಳಿ ಕರ್ನಾಟಕ ಎಂದು ಪ್ರತ್ಯೇಕ ಮಾಡುವುದು ಸರಿಯಲ್ಲ. ರಾಜ್ಯವನ್ನು ನಾನು ಅಖಂಡ ಕರ್ನಾಟಕವಾಗಿ ನೋಡಲು ಬಯಸುತ್ತೇನೆ. ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒತ್ತಾಯಿಸಿ ನಡೆಸುವ ಹೋರಾಟವನ್ನು ನಾನು ಬೆಂಬಲಿಸುತ್ತೇನೆ. ಆದರೆ ಪ್ರತ್ಯೇಕ ರಾಜ್ಯ ಬೇಡಿಕೆಗೆ ನನ್ನ ವಿರೋಧವಿದೆ ಎಂದು ಹೇಳಿದರು.