Tag: Coldrif Syrup

  • ಕೆಮ್ಮಿನ ಸಿರಪ್ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳ ಸಾವು – ಫಾರ್ಮಾ ಕಂಪನಿ ಮಾಲೀಕ ಅರೆಸ್ಟ್

    ಕೆಮ್ಮಿನ ಸಿರಪ್ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳ ಸಾವು – ಫಾರ್ಮಾ ಕಂಪನಿ ಮಾಲೀಕ ಅರೆಸ್ಟ್

    ಚೆನ್ನೈ: ಮಧ್ಯಪ್ರದೇಶದಲ್ಲಿ (Madhya Pradesh) ಕೆಮ್ಮಿನ ಸಿರಪ್ (Cough Syrup)ಸೇವಿಸಿ ಮಕ್ಕಳು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿರಪ್ ತಯಾರಿಕ ಕಂಪನಿಯ ಮಾಲೀಕನನ್ನು ಪೊಲೀಸರು ಚೆನ್ನೈನಲ್ಲಿ (Chennai) ಬಂಧಿಸಿದ್ದಾರೆ.

    ಸಿರಪ್ ಕುಡಿದು ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ 20ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ ಬಳಿಕ ಕೋಲ್ಡ್ರಿಫ್ ಸಿರಪ್ ಅನ್ನು ನಿಷೇಧಿಸಲಾಯಿತು. ಈ ಬೆನ್ನಲ್ಲೇ ಸಿರಪ್ ತಯಾರಿಸುತ್ತಿದ್ದ ಸ್ರೆಸನ್ ಫಾರ್ಮಾ (Sresan Pharma) ಕಂಪನಿಯ ಮಾಲೀಕ ರಂಗನಾಥನ್ ಮೂರು ದಿನಗಳಿಂದ ತಲೆಮರೆಸಿಕೊಂಡಿದ್ದ. ಈತನ ಬಗ್ಗೆ ಮಾಹಿತಿ ನೀಡಿದವರಿಗೆ 20,000 ರೂ. ಬಹುಮಾನವನ್ನೂ ಘೋಷಿಸಲಾಗಿತ್ತು. ಇದನ್ನೂ ಓದಿ: ಹರ್ ಮಂದಿರ್ ಶಾಲೆಯಲ್ಲಿ ಅಗ್ನಿ ಅವಘಡ – ವಿದ್ಯಾರ್ಥಿ ಸಜೀವ ದಹನ

    ಅಂತಿಮವಾಗಿ ಬುಧವಾರ ತಡರಾತ್ರಿ ಚೆನ್ನೈನಲ್ಲಿ ರಂಗನಾಥನ್‌ನನ್ನು ಬಂಧಿಸಲಾಗಿದೆ. ಸಿರಪ್‌ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಿಷಕಾರಿ ಕೈಗಾರಿಕಾ ರಾಸಾಯನಿಕ ಡೈಥಿಲೀನ್ ಗ್ಲೈಕೋಲ್ ಇರುವುದು ಪತ್ತೆಯಾದ ಬಳಿಕ ಮಾಲೀಕನನ್ನು ಅರೆಸ್ಟ್ ಮಾಡಲಾಗಿದೆ. ಸದ್ಯ ರಂಗನಾಥನ್‌ನನ್ನು ಚೆನ್ನೈನಿಂದ ಛಿಂದ್ವಾರಕ್ಕೆ ಪೊಲೀಸರು ಕರೆ ತರುತ್ತಿದ್ದು, ನಂತರ ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ. ಇದನ್ನೂ ಓದಿ: ಡಿಕೆಶಿ ವೈಲ್ಡ್‌ ಕಾರ್ಡ್‌ಎಂಟ್ರಿ – ಬಿಗ್‌ಬಾಸ್‌ ಮನೆ ಓಪನ್‌ | ರಾತ್ರಿ ಏನೇನಾಯ್ತು? ಇಲ್ಲಿದೆ ಇನ್‌ಸೈಡ್‌ ಸ್ಟೋರಿ

    ಈ ಹಿಂದೆ ಸ್ರೆಸನ್ ಫಾರ್ಮಾ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಮಧ್ಯಪ್ರದೇಶವಲ್ಲದೆ ರಾಜಸ್ಥಾನದಲ್ಲೂ ಈ ಸಿರಪ್ ಸೇವಿಸಿದ ನಂತರ ಮಕ್ಕಳು ಸಾವನ್ನಪ್ಪಿರುವ ವರದಿಗಳಿವೆ. ಕೋಲ್ಡ್ರಿಫ್ ಹೆಸರಿನ ಈ ಸಿರಪ್ ಸೇವಿಸಿದ ಮಕ್ಕಳಲ್ಲಿ ಕಿಡ್ನಿ ಸೋಂಕು ಕಾಣಿಸಿಕೊಂಡು, ಹೆಚ್ಚಿನ ಸಂಖ್ಯೆಯ ಮಕ್ಕಳು ಸಾವನ್ನಪ್ಪಿದ್ದರು. ಇದನ್ನೂ ಓದಿ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಿ ಜಾತ್ರಾ ಮಹೋತ್ಸವ ಆರಂಭಕ್ಕೆ ಕ್ಷಣಗಣನೆ

    ತಪಾಸಣೆ ವೇಳೆ, ಫಾರ್ಮಾದ ಕಾರ್ಖಾನೆಯಲ್ಲಿ ಯಾವುದೇ ದಾಖಲೆಗಳಿಲ್ಲದ ಡಿಇಜಿ ಕಂಟೇನರ್‌ಗಳು ಪತ್ತೆಯಾಗಿದ್ದವು. ನಿಯಮಗಳ ಪ್ರಕಾರ ಕೇವಲ ಶೇ.0.1ರಷ್ಟು ಮಾತ್ರ ಡಿಇಜಿ ಬಳಸಲು ಅನುಮತಿ ಇದ್ದರೂ, ಈ ಕಂಪನಿಯು ಶೇ.46-48ರಷ್ಟು ಈ ವಿಷಕಾರಿ ರಾಸಾಯನಿಕವನ್ನು ಕೋಲ್ಡ್ರಿಫ್ ಕೆಮ್ಮಿನ ಸಿರಪ್‌ನಲ್ಲಿ ಬಳಸುತ್ತಿತ್ತು ಎಂಬ ಆಘಾತಕಾರಿ ಮಾಹಿತಿಯು ತನಿಖೆಯು ಬಹಿರಂಗವಾಗಿದೆ. ಇದನ್ನೂ ಓದಿ: ಬಿಗ್‌ ಬಾಸ್‌ ಓಪನ್‌ ಬೆನ್ನಲ್ಲೇ ಮುಂಜಾನೆ ಮನೆ ಪ್ರವೇಶಿಸಿದ ಸ್ಪರ್ಧಿಗಳು

    ಇಷ್ಟಲ್ಲದೆ, ಕಂಪನಿಯು ಉತ್ತಮ ಉತ್ಪಾದನಾ ಪದ್ಧತಿಗಳ (ಜಿಎಂಪಿ) ಪ್ರಮಾಣಪತ್ರವನ್ನು ಸಹ ಹೊಂದಿರಲಿಲ್ಲ. ಆದರೂ, ಜೆನೆರಿಕ್ ಔಷಧಿಗಳನ್ನು ತಯಾರಿಸಿ ಮಾರಾಟವನ್ನು ಮಾಡುತ್ತಿತ್ತು. ತಮಿಳುನಾಡಿನ ಕಾಂಚೀಪುರಂನ ಕಾರ್ಖಾನೆಯಲ್ಲಿ ಈ ಲೋಪಗಳು ಪತ್ತೆಯಾದ ನಂತರ, ರಾಜ್ಯ ಔಷಧಿ ನಿಯಂತ್ರಣ ಪ್ರಾಧಿಕಾರವು ತಕ್ಷಣವೇ ಉತ್ಪಾದನೆಯನ್ನು ನಿಲ್ಲಿಸುವಂತೆ ಆದೇಶಿಸಿ, ಎಲ್ಲಾ ದಾಸ್ತಾನುಗಳನ್ನು ವಶಕ್ಕೆ ಪಡೆದಿತ್ತು. ಕಂಪನಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿ, ಪರವಾನಗಿಯನ್ನು ಅಮಾನತುಗೊಳಿಸಿತ್ತು. ಈ ಘಟನೆಯ ನಂತರ, ಕನಿಷ್ಠ ಒಂಬತ್ತು ರಾಜ್ಯಗಳು ಈ ಸಿರಪ್ ಅನ್ನು ನಿಷೇಧಿಸಿವೆ. ಇದನ್ನೂ ಓದಿ:ಕಲಬುರಗಿ | ಪ್ರವಾಹ ಪೀಡಿತ ಪ್ರದೇಶಗಳಿಗೆ ಜೆಡಿಎಸ್ ನಿಯೋಗ ಭೇಟಿ

  • ಕೆಮ್ಮಿನ ಸಿರಪ್‌ ಸೇವಿಸಿ 11 ಮಕ್ಕಳು ಸಾವು ಕೇಸ್‌ – ಸಿರಪ್‌ಗಳನ್ನು ಶಿಫಾರಸು ಮಾಡ್ತಿದ್ದ ವೈದ್ಯ ಅರೆಸ್ಟ್‌

    ಕೆಮ್ಮಿನ ಸಿರಪ್‌ ಸೇವಿಸಿ 11 ಮಕ್ಕಳು ಸಾವು ಕೇಸ್‌ – ಸಿರಪ್‌ಗಳನ್ನು ಶಿಫಾರಸು ಮಾಡ್ತಿದ್ದ ವೈದ್ಯ ಅರೆಸ್ಟ್‌

    ಭೋಪಾಲ್: ಮಧ್ಯಪ್ರದೇಶದ (Madhya Pradesh) ಛಿಂದ್ವಾರಾದಲ್ಲಿ ಮಕ್ಕಳಿಗೆ ಕೋಲ್ಡ್ರಿಫ್ ಸಿರಪ್ (Coldrif Syrup) ಶಿಫಾರಸು ಮಾಡಿದ ವೈದ್ಯನನ್ನು ಬಂಧಿಸಲಾಗಿದೆ.

    ಕಲುಷಿತ ಕೆಮ್ಮಿನ ಸಿರಪ್ ಸೇವಿಸಿದ 11 ಮಕ್ಕಳ ಸಾವಿಗೆ ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಹೆಚ್ಚಿನ ಮಕ್ಕಳಿಗೆ ಪರಾಸಿಯಾದ ಮಕ್ಕಳ ತಜ್ಞ ಡಾ. ಪ್ರವೀಣ್ ಸೋನಿ ಅವರ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕಂದಮ್ಮಗಳ ಜೀವ ತೆಗೆದ ಕೆಮ್ಮಿನ ಸಿರಪ್ – ಕೇಂದ್ರ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ

    ಮಧ್ಯಪ್ರದೇಶ ಸರ್ಕಾರವು ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಿಸಿದ ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯಲ್ಲಿರುವ ಶ್ರೀಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ವಿರುದ್ಧವೂ ಪ್ರಕರಣ ದಾಖಲಿಸಿದೆ. ಸರ್ಕಾರವು ಈ ಹಿಂದೆ ಕೋಲ್ಡ್ರಿಫ್ ಮಾರಾಟವನ್ನು ನಿಷೇಧಿಸಿತ್ತು. ಔಷಧದ ಮಾದರಿಗಳಲ್ಲಿ 48.6% ಡೈಥಿಲೀನ್ ಗ್ಲೈಕೋಲ್ ಇದೆ. ಇದು ಅತ್ಯಂತ ವಿಷಕಾರಿ ವಸ್ತುವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

    ಚೆನ್ನೈನ ಔಷಧ ಪರೀಕ್ಷಾ ಪ್ರಯೋಗಾಲಯದಲ್ಲಿ ಸರ್ಕಾರಿ ಔಷಧ ವಿಶ್ಲೇಷಕರು ಪರೀಕ್ಷಿಸಿದ ಸಿರಪ್‌ನ ಮಾದರಿಯನ್ನು ತಮಿಳುನಾಡು ಔಷಧ ನಿಯಂತ್ರಣ ನಿರ್ದೇಶನಾಲಯವು ಪ್ರಮಾಣಿತ ಗುಣಮಟ್ಟದಲ್ಲಿಲ್ಲ ಎಂದು ಘೋಷಿಸಿತು.

    ಮುನ್ನೆಚ್ಚರಿಕೆ ಕ್ರಮವಾಗಿ, ಸ್ಥಳೀಯ ಆಡಳಿತವು ಸೋಮವಾರ ಕೋಲ್ಡ್ರಿಫ್ ಮತ್ತು ಇನ್ನೊಂದು ಕೆಮ್ಮಿನ ಸಿರಪ್ ‘ನೆಕ್ಟ್ರೋ-ಡಿಎಸ್’ ಮಾರಾಟವನ್ನು ನಿಷೇಧಿಸಿತು. ಕೋಲ್ಡ್ರಿಫ್‌ನ ಪರೀಕ್ಷಾ ವರದಿ ಶನಿವಾರ ಬಂದಿದ್ದು, ನೆಕ್ಸ್ಟ್ರಾ-ಡಿಎಸ್‌ನ ವರದಿಗಾಗಿ ಕಾಯಲಾಗಿದೆ. ಇದನ್ನೂ ಓದಿ: ಕೆಮ್ಮಿನ ಸಿರಪ್ ಸೇವನೆ – 15 ದಿನಗಳ ಅಂತರದಲ್ಲಿ ಕಿಡ್ನಿ ವೈಫಲ್ಯದಿಂದ 6 ಮಕ್ಕಳು ಸಾವು

    ಮಕ್ಕಳು ಶೀತ, ಜ್ವರದ ಲಕ್ಷಣಗಳಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಕೆಮ್ಮಿನ ಸಿರಪ್‌ಗಳು ಸೇರಿದಂತೆ ನಿಯಮಿತ ಔಷಧಿಗಳನ್ನು ಶಿಫಾರಸು ಮಾಡಲಾಗಿತ್ತು. ಅದನ್ನು ಸೇವಿಸಿ ಮಕ್ಕಳು ಆರಂಭದಲ್ಲಿ ಚೇತರಿಕೆ ಕಂಡಿದ್ದವು. ಆದರೆ, ಕೆಲವೇ ದಿನಗಳಲ್ಲಿ ಮತ್ತೆ ಲಕ್ಷಣಗಳು ಮರಳಿವೆ. ಮೂತ್ರ ವಿಸರ್ಜನೆ ಸರಿಯಾಗಿ ಆಗದೇ ಆರೋಗ್ಯ ಸ್ಥಿತಿಯು ಹದಗೆಟ್ಟಿದೆ. ಮೂತ್ರಪಿಂಡದಲ್ಲಿ ಸೋಂಕು ಕಾಣಿಸಿಕೊಂಡು ಕೊನೆಗೆ ಅನೇಕ ಮಕ್ಕಳು ಸಾವನ್ನಪ್ಪಿವೆ. ಈ ಬಗ್ಗೆ ಮಕ್ಕಳನ್ನು ಕಳೆದುಕೊಂಡ ಸಂತ್ರಸ್ತ ಕುಟುಂಬಗಳು ಹೇಳಿಕೊಂಡಿವೆ.

    ಮುಖ್ಯಮಂತ್ರಿ ಮೋಹನ್ ಯಾದವ್ ಅವರು, ಈ ಸಾವುಗಳು ಅತ್ಯಂತ ದುರಂತ ಎಂದು ವಿಷಾದಿಸಿದ್ದಾರೆ. ಹೊಣೆಗಾರರ ​​ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.