Tag: collapse

  • ಆಲೂಗಡ್ಡೆ ಕೋಲ್ಡ್ ಸ್ಟೋರೇಜ್‍ನ ಮೇಲ್ಛಾವಣಿ ಕುಸಿತ – 8 ಮಂದಿ ದುರ್ಮರಣ

    ಆಲೂಗಡ್ಡೆ ಕೋಲ್ಡ್ ಸ್ಟೋರೇಜ್‍ನ ಮೇಲ್ಛಾವಣಿ ಕುಸಿತ – 8 ಮಂದಿ ದುರ್ಮರಣ

    ಲಕ್ನೋ: ಆಲೂಗಡ್ಡೆ ಕೋಲ್ಡ್ ಸ್ಟೋರೇಜ್‍ನ (Potato Cold Storage) ಮೇಲ್ಛಾವಣಿ (Roof) ಕುಸಿದು ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ (Uttar Pradesh) ಸಂಭಾಲ್ ಚಂದೌಸಿ ಪ್ರದೇಶದಲ್ಲಿ ನಡೆದಿದೆ.

    ಆಲೂಗಡ್ಡೆ ಕೋಲ್ಡ್ ಸ್ಟೋರೇಜ್‍ನ ಮಾಲೀಕರನ್ನು ಅಂಕುರ್ ಅಗರ್ವಾಲ್ ಮತ್ತು ರೋಹಿತ್ ಅಗರ್ವಾಲ್ ಎಂದು ಗುರುತಿಸಲಾಗಿದ್ದು, ಘಟನೆಗೆ ಸಂಬಂಧಿಸಿ ಇಬ್ಬರ ವಿರುದ್ಧವೂ ಪ್ರಕರಣ ದಾಖಲಾಗಿದೆ. ಈ ಹಿಂದೆಯೇ ಕೋಲ್ಡ್ ಸ್ಟೋರೇಜ್‍ ಶಿಥಿಲಾವಸ್ಥೆಯಲ್ಲಿದೆ ಎಂದು ವರದಿಯಾಗಿತ್ತು. ಆದರೆ ಕಟ್ಟಡ ಕುಸಿತಕ್ಕೆ ನಿಜವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

    ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಈ ಬಗ್ಗೆ ಮೊರಾಬಾದ್ ಡಿಐಜಿ ಶಲಭ್ ಮಾಥುರ್ ಮಾತನಾಡಿ, ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. 11 ಮಂದಿಯನ್ನು ರಕ್ಷಿಸಲಾಗಿದೆ. ಕಟ್ಟಡದಲ್ಲಿ ನೆಲಮಾಳಿಗೆಯಿದ್ದು, ಅಲ್ಲಿಯೂ ಯಾರಾದರೂ ಸಿಲುಕಿಕೊಂಡಿದ್ದಾರಾ ಎಂದು ಹುಡುಕುವ ಪ್ರಯತ್ನ ನಡೆಸುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮದುವೆಯಾಗಿ ಮೂರೇ ದಿನಕ್ಕೆ ಪರಾರಿ – ಇದು ಫೋಟೋಶೂಟ್ ಮದ್ವೆ ಎಂದ ಪತಿ

    ಅವಶೇಷಗಳಡಿ ಸಿಲುಕಿರುವ ಜನರನ್ನು ಹುಡುಕಲು ಅಧಿಕಾರಿಗಳು ಸ್ನಿಫರ್ ಡಾಗ್‍ಗಳನ್ನು ಬಳಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು. ಘಟನೆಗೆ ಸಂಬಂಧಿಸಿ ಕೋಲ್ಡ್ ಸ್ಟೋರೇಜ್‍ನ ಮಾಲೀಕ ಹಾಗೂ ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಜೊತೆಗೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಾಪತ್ತೆಯಾದ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬೇಸಿಗೆಯಲ್ಲಿ ಆಲಿಕಲ್ಲು ಮಳೆ – ಕಲಬುರಗಿಯಲ್ಲಿ ‘ಹಿಮಾಲಯದ ರಸ್ತೆ’!

  • ಕಲ್ಲು ಕ್ವಾರಿ ಕುಸಿತ – 8ಕ್ಕೇರಿದ ಸಾವಿನ ಸಂಖ್ಯೆ, ನಾಲ್ವರಿಗಾಗಿ ಹುಡುಕಾಟ

    ಕಲ್ಲು ಕ್ವಾರಿ ಕುಸಿತ – 8ಕ್ಕೇರಿದ ಸಾವಿನ ಸಂಖ್ಯೆ, ನಾಲ್ವರಿಗಾಗಿ ಹುಡುಕಾಟ

    ಐಜ್ವಾಲ್: ಮಿಜೋರಾಂನಲ್ಲಿ ಸೋಮವಾರ ಕಲ್ಲು ಕ್ವಾರಿಯೊಂದು ಕುಸಿದು ಬಿದ್ದ ಪರಿಣಾಮ ಹಲವು ಕಾರ್ಮಿಕರು ಮಣ್ಣಿನಡಿ ಸಿಲುಕಿಕೊಂಡಿದ್ದರು. ಬಳಿಕ ರಕ್ಷಣಾ ತಂಡ ಕಾರ್ಯಾಚರಣೆ ನಡೆಸಿ, ಮಂಗಳವಾರ ಬಿಹಾರದ 8 ಕಾರ್ಮಿಕರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಇನ್ನೂ 4 ಕಾರ್ಮಿಕರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

    ಸೋಮವಾರ ಮಿಜೋರಾಂನ ಹ್ನಾಥಿಯಾಲ್ ಗ್ರಾಮದ ಬಳಿ ಇದ್ದ ಕಲ್ಲು ಕ್ವಾರಿ ಕುಸಿದು ಬಿದ್ದಿದೆ. ಇದರ ಪರಿಣಾಮ 12 ಕಾರ್ಮಿಕರು ಮಣ್ಣಿನಡಿ ಸಿಲುಕಿಕೊಂಡಿದ್ದರು.

    ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಅವರ ಗುರುತು ಪತ್ತೆಹಚ್ಚಲಾಗುತ್ತಿದೆ. ನಾಪತ್ತೆಯಾದವರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಅವರ ಪತ್ತೆಯಾಗುವವರೆಗೂ ಶೋಧ ಮುಂದುವರಿಸಲಾಗುವುದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಿಳಿಸಿದೆ. ಇದನ್ನೂ ಓದಿ: ಬೇಕಂತಲೇ ಕಾರಿಗೆ ಡಿಕ್ಕಿ- ಓವರ್ ಟೇಕ್ ಮಾಡಿ ಸಾರಿ ಕೇಳುವ ನೆಪದಲ್ಲಿ ದೋಚಿ ಎಸ್ಕೇಪ್

    ಮೂಲಗಳ ಪ್ರಕಾರ, ಹ್ನಾಥಿಯಾಲ್ ಜಿಲ್ಲೆಯ ಮೌದರ್ಹ್‌ನಲ್ಲಿರುವ ಖಾಸಗಿ ಕಂಪನಿಯ ಕಾರ್ಮಿಕರು ತಮ್ಮ ಊಟದ ವಿರಾಮದ ಬಳಿಕ ಕಲ್ಲು ಕ್ವಾರಿ ಬಳಿಗೆ ಮರಳಿದ್ದರು. ಈ ವೇಳೆ ಏಕಾಏಕಿ ಕಲ್ಲು ಕ್ವಾರಿ ಕುಸಿತಗೊಂಡಿದೆ. ಕಾರ್ಮಿಕರೊಂದಿಗೆ 5 ಹಿಟಾಚಿ ಅಗೆಯುವ ಯಂತ್ರಗಳು ಮತ್ತು ಇತರ ಡ್ರಿಲ್ಲಿಂಗ್ ಯಂತ್ರಗಳು ಮಣ್ಣಿನಡಿ ಹೂತುಹೋಗಿವೆ.

    ತಕ್ಷಣ ಲೀಟ್ ಗ್ರಾಮ ಮತ್ತು ಹ್ನಾಥಿಯಾಲ್ ಪಟ್ಟಣದ ಸ್ವಯಂಸೇವಕರು ರಕ್ಷಣಾ ಕಾರ್ಯಾಚರಣೆಗೆ ಸ್ಥಳಕ್ಕೆ ಧಾವಿಸಿದರು. ರಾಜ್ಯ ವಿಪತ್ತು ನಿರ್ವಹಣಾ ಪಡೆ, ಗಡಿ ಭದ್ರತಾ ಪಡೆ ಮತ್ತು ಅಸ್ಸಾಂ ರೈಫಲ್ಸ್ ಸಹ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡುತ್ತಿದೆ. ಇದನ್ನೂ ಓದಿ: ನೀಟ್‍ನಲ್ಲಿ ರ‍್ಯಾಂಕ್ ಗಳಿಸಿದ ಕೊಪ್ಪಳ ಪ್ರತಿಭಾವಂತನಿಗೆ ಬೇಕಿದೆ ಸಹಾಯ ಹಸ್ತ

    Live Tv
    [brid partner=56869869 player=32851 video=960834 autoplay=true]

  • ನಿರ್ಮಾಣ ಹಂತದ ಕಟ್ಟಡದ ಲಿಫ್ಟ್ ಕುಸಿತ – 7 ಸಾವು, ಒಬ್ಬರ ಸ್ಥಿತಿ ಗಂಭೀರ

    ನಿರ್ಮಾಣ ಹಂತದ ಕಟ್ಟಡದ ಲಿಫ್ಟ್ ಕುಸಿತ – 7 ಸಾವು, ಒಬ್ಬರ ಸ್ಥಿತಿ ಗಂಭೀರ

    ಗಾಂಧೀನಗರ: ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್(Lift) ಕುಸಿದು(Collapse) 7 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಗುಜರಾತ್‌ನ(Gujarat) ಅಹಮದಾಬಾದ್‌ನಲ್ಲಿ(Ahmedabad) ಬುಧವಾರ ಸಂಭವಿಸಿದೆ. ಘಟನೆಯಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

    ಗುಜರಾತ್ ವಿಶ್ವವಿದ್ಯಾನಿಲಯದ ಬಳಿ ಸುಮಾರು 10 ಗಂಟೆಯ ವೇಳೆಗೆ ನಿರ್ಮಾಣ ಹಂತದಲ್ಲಿದ್ದ ಬಹುಮಹಡಿ ಕಟ್ಟಡದ ಲಿಫ್ಟ್ ಕುಸಿದಿದೆ. ಲಿಫ್ಟ್ ಕುಸಿತದ ವೇಳೆ ಅದರಲ್ಲಿ 8 ಕಾರ್ಮಿಕರಿದ್ದರು ಎನ್ನಲಾಗಿದೆ.

    ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್(ಎಎಂಸಿ)ಯ ಅಗ್ನಿಶಾಮಕ ದಳ ಅಥವಾ ತುರ್ತು ಸೇವೆಗಳ ಇಲಾಖೆಯ ಅಧಿಕಾರಿಗಳಿಗೆ ಘಟನೆಯ ಬಗ್ಗೆ ಯಾವುದೇ ಕರೆಗಳು ಬಂದಿಲ್ಲ ಎನ್ನಲಾಗಿದೆ. ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳ ತಲುಪಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಕಂದಕಕ್ಕೆ ಉರುಳಿದ ಮಿನಿಬಸ್‌ – 10 ಮಂದಿ ದುರ್ಮರಣ, 28 ಮಂದಿಗೆ ಗಾಯ

    ನಮಗೆ ಘಟನೆಯ ಬಗ್ಗೆ ಯಾವುದೇ ಏಜೆನ್ಸಿ ಅಥವಾ ಡೆವೆಲಪರ್‌ಗಳಿಂದ ಕರೆ ಬಂದಿರಲಿಲ್ಲ. ಮಾಧ್ಯಮಗಳ ವರದಿ ಹಾಗೂ ಪ್ರತಿನಿಧಿಗಳಿಂದ ಬಂದ ದೂರವಾಣಿ ಮೂಲಕ ಘಟನೆ ಬಗ್ಗೆ ತಿಳಿದುಕೊಂಡೆವು. ಬಳಿಕ ಘಟನೆ ಬಗ್ಗೆ ಪರಿಶೀಲಿಸಲು ಸ್ಥಳಕ್ಕೆ ಬಂದೆವು ಎಂದು ಮುಖ್ಯ ಅಗ್ನಿಶಾಮಕ ಅಧಿಕಾರಿ ಜಯೇಶ್ ಖಾಡಿಯಾ ತಿಳಿಸಿದ್ದಾರೆ.

    ಇದು ಖಾಸಗಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡವಾಗಿದ್ದು, ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡಿರುವ ಕಾರ್ಮಿಕನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಬೇಗುಸರಾಯ್‍ನಲ್ಲಿ ಗುಂಡಿನ ದಾಳಿ – 11 ಮಂದಿಗೆ ಗಂಭೀರ ಗಾಯ, ಓರ್ವ ಸಾವು

    Live Tv
    [brid partner=56869869 player=32851 video=960834 autoplay=true]

  • ಉದ್ಘಾಟನೆ ಮಾಡುತ್ತಿದ್ದಂತೆಯೇ ಕುಸಿದುಬಿಡ್ತು ಸೇತುವೆ

    ಉದ್ಘಾಟನೆ ಮಾಡುತ್ತಿದ್ದಂತೆಯೇ ಕುಸಿದುಬಿಡ್ತು ಸೇತುವೆ

    ಕಿನ್ಶಾಸಾ: ಸಾರ್ವಜನಿಕರ ಅನುಕೂಲಕ್ಕಾಗಿ ಮಾಡಲಾಗುವ ಕಾಮಗಾರಿಗಳು ಕೆಲವೊಮ್ಮೆ ಕೆಲವೇ ದಿನಗಳಲ್ಲಿ ಕಳಪೆಯೆಂದು ಗೊತ್ತಾಗುತ್ತದೆ. ಆಗಾಗ ಜನರು ಅದರ ಸಿಟ್ಟನ್ನು ಸರ್ಕಾರದ ಮೇಲೆ ತೆಗೆಯುವುದುಂಟು. ಇಲ್ಲೊಂದು ಸೇತುವೆ ಉದ್ಘಾಟನೆಯ ಸಮಯವೇ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಇದರ ವೀಡಿಯೋಗಳು ವೈರಲ್ ಆಗಿರುವುದು ಮಾತ್ರವಲ್ಲದೇ ಸೇತುವೆ ನಿರ್ಮಾಣದ ಗುಣಮಟ್ಟದ ಬಗ್ಗೆ ಜನರು ಅಪಹಾಸ್ಯ ಮಾಡುತ್ತಿದ್ದಾರೆ.

    ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದಲ್ಲಿ(ಡಿಆರ್‌ಸಿ) ಸೇತುವೆಯೊಂದನ್ನು ಉದ್ಘಾಟಿಸಲು ಅಧಿಕಾರಿಗಳು ತಯಾರಾಗಿದ್ದು, ಉದ್ಘಾಟನೆಗೆ ರಿಬ್ಬನ್ ಕತ್ತರಿಸುವ ವೇಳೆಗೆ ಸರಿಯಾಗಿ ಸೇತುವೆ ಕುಸಿದಿದೆ. ಈ ಕಿರು ಸೇತುವೆಯನ್ನು ಮಳೆಗಾಲದಲ್ಲಿ ಸ್ಥಳೀಯರಿಗೆ ನದಿ ದಾಟಲು ನಿರ್ಮಿಸಲಾಗಿತ್ತು ಎಂದು ವರದಿಗಳು ತಿಳಿಸಿವೆ.

    ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವೀಡಿಯೋದಲ್ಲಿ ಸೇತುವೆಯನ್ನು ಉದ್ಘಾಟಿಸಲು ಅಧಿಕಾರಿಗಳು ಸೇತುವೆ ಮೇಲೆ ನಿಂತಿರುವುದು ಕಾಣಿಸುತ್ತದೆ. ಸೇತುವೆಯ ಒಂದು ಬದಿಯಲ್ಲಿ ಕೆಂಪು ರಿಬ್ಬನ್ ಅನ್ನು ಕಟ್ಟಲಾಗಿದ್ದು, ಅದನ್ನು ಮಹಿಳಾ ಅಧಿಕಾರಿಯೊಬ್ಬರು ಕತ್ತರಿಸಿದ್ದಾರೆ. ಆದರೆ ರಿಬ್ಬನ್‌ಗೆ ಕತ್ತರಿ ತಾಗುತ್ತಲೇ ಸೇತುವೆ ಕುಸಿಯಲಾರಂಭಿಸಿದೆ. ಇದನ್ನೂ ಓದಿ: ಮಂಗೋಲಿಯಾ ಅಧ್ಯಕ್ಷನಿಂದ ರಾಜನಾಥ್ ಸಿಂಗ್‍ಗೆ ವಿಭಿನ್ನ ಉಡುಗೊರೆ

    ಸೇತುವೆ ಕುಸಿಯುತ್ತಿದ್ದಂತೆ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಅಧಿಕಾರಿಗಳನ್ನು ಸೇತುವೆಯಿಂದ ಎಳೆದು ರಕ್ಷಿಸಿದ್ದಾರೆ. ಸದ್ಯ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎನ್ನಲಾಗಿದೆ. ಆದರೆ ಉದ್ಘಾಟನೆಯಾಗಿ ಒಂದು ಕ್ಷಣವೂ ನಿಲ್ಲದ ಸೇತುವೆ ಕುಸಿದು 2 ಭಾಗವಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಚೀನಾ ಭೂಕಂಪ – ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ ವೀಡಿಯೋಗಳು

    Live Tv
    [brid partner=56869869 player=32851 video=960834 autoplay=true]

  • ಗುಂಡ್ಲುಪೇಟೆಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ಗುಡ್ಡ ಕುಸಿತ – ಇಬ್ಬರು ಗಣಿ ಕಾರ್ಮಿಕರು ಸಾವು?

    ಗುಂಡ್ಲುಪೇಟೆಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ಗುಡ್ಡ ಕುಸಿತ – ಇಬ್ಬರು ಗಣಿ ಕಾರ್ಮಿಕರು ಸಾವು?

    ಚಾಮರಾಜನಗರ: ಗಣಿಗಾರಿಕೆ ನಡೆಯುತ್ತಿದ್ದ ಕ್ವಾರಿಯಲ್ಲಿ ಗುಡ್ಡ ಕುಸಿತವಾಗಿದೆ. ಘಟನೆಯಲ್ಲಿ 2 ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಮೂರು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗ್ರಾಮದ ಗುಮ್ಮಕಲ್ಲು ಗುಡ್ಡದಲ್ಲಿ, ಗುಡ್ಡ ಕುಸಿತ ಉಂಟಾಗಿದೆ. ಜೆಸಿಬಿ, ಟಿಪ್ಪರ್ ವಾಹನ, ಟ್ರಾಕ್ಟರ್‌ಗಳು ನಜ್ಜುಗುಜ್ಜುಗಿದೆ. ದೊಡ್ಡ ಬಂಡೆಗಳು ಉರುಳಿವೆ. ಗಾಯಾಳುಗಳು ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ನಿತ್ಯವೂ ಕೂಡ ಶ್ರೀರಾಮ ಗುಡ್ಡದಲ್ಲಿ ಗಣಿಗಾರಿಕೆ ನಡೆಯುತ್ತಿದ್ದು, ಈ ಗುಡ್ಡದಲ್ಲಿ 30ಕ್ಕೂ ಹೆಚ್ಚು ಜನರು ಕಾರ್ಯನಿರ್ವಹಿಸುತ್ತಿದ್ದರು. ಕೇರಳ, ತಮಿಳುನಾಡು ಸೇರಿ ಇತರ ರಾಜ್ಯದ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: Karnataka Budget: ಈ ವರ್ಷ ಯಾವುದೇ ತೆರಿಗೆ ಹೆಚ್ಚಳ ಇಲ್ಲ

    ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಸ್ಥಳಕ್ಕೆ ಎಸ್ಪಿ ಶಿವಕುಮಾರ್, ಡಿಸಿ ಚಾರುಲತಾ ಸೋಮಲ್ ಬಂದಿದ್ದಾರೆ.

  • ಕಲ್ಲಿದ್ದಲು ಗಣಿ ಕುಸಿತ – 13 ಮಂದಿ ಬಲಿ

    ರಾಂಚಿ: ಅಕ್ರಮ ಕಲ್ಲಿದ್ದಲು ಗಣಿ ಕುಸಿದಿರುವ ಪರಿಣಾಮ 13 ಮಂದಿ ಸಾವನ್ನಪ್ಪಿ ಹಲವರು ಅವಶೇಷಗಳಡಿ ಸಿಲುಕಿರುವ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ.

    ಜಾರ್ಖಂಡ್ ರಾಜ್ಯದ ಧನ್‌ಬಾದ್‌ನ ನಿರ್ಸಾ ಬ್ಲಾಕ್‌ನ ಇಸಿಎಲ್ ಮುಗ್ಮಾ ಪ್ರದೇಶದಲ್ಲಿರುವ ಅಕ್ರಮ ಗಣಿಯಲ್ಲಿ ಈ ಘಟನೆ ನಡೆದಿದೆ. ಗಣಿಗಾರಿಕೆಗೆ ಬಳಸುತ್ತಿದ್ದ ಉಪಕರಣ 20 ಅಡಿ ಎತ್ತರದಿಂದ ಬಿದ್ದ ಪರಿಣಾಮ ಕೊರೆದಿದ್ದ ಗಣಿ ಕುಸಿದಿದೆ. ಇದರಿಂದ ಅವಶೇಷಗಳಡಿ ಸಿಲುಕಿದ 13 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ 10 ಕ್ಕೂ ಹೆಚ್ಚು ಮಂದಿ ಸಿಲುಕಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

    ಘಟನೆ ನಡೆದ ತಕ್ಷಣ ಕೆಲವರನ್ನು ರಕ್ಷಿಸಲಾಗಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಅವಶೇಷಗಳಡಿ ಸಿಕ್ಕಿಬಿದ್ದಿರುವವರನ್ನು ರಕ್ಷಣಾ ಪಡೆಗಳು ಹೊರತೆಗೆಯಲು ಪ್ರಯತ್ನ ಪಡುತ್ತಿದ್ದಾರೆ. ಇದನ್ನೂ ಓದಿ: ಬಿಜೆಪಿ ಶಾಸಕ ನಿತೇಶ್ ರಾಣೆಗೆ ಜಾಮೀನು ನಿರಾಕರಿಸಿದ ಕೋರ್ಟ್

     

    ಅಕ್ರಮ ಗಣಿಯಲ್ಲಿ ಕೆಲಸ ಮಾಡಲು ಪ್ರತೀ ದಿನ ಹಲವು ಮಹಿಳೆಯರು, ಪರುಷರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಬರುತ್ತಿದ್ದರು ಎಂದು ತಿಳಿದುಬಂದಿದೆ. ಧನ್‌ಬಾದ್‌ನ ನಿರ್ಸಾ ಪೊಲೀಸರು ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿ, ಹೂತು ಹೋದವರನ್ನು ರಕ್ಷಿಸಲು ಜೆಸಿಬಿ ನಿಯೋಜಿಸಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಇದನ್ನೂ ಓದಿ: Budget 2022 : ಮೋದಿ ಸೂಚನೆಯಂತೆ ಜನರಿಂದ ಹೆಚ್ಚುವರಿ ತೆರಿಗೆ ಸಂಗ್ರಹ ಇಲ್ಲ

    ಘಟನೆಯ ಬಗ್ಗೆ ಸ್ಥಳೀಯರು ದೂರು ನೀಡಲು ಮುಂದಾಗಿಲ್ಲವಾದರೂ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

  • ಶಾಲಾ ಗೇಟ್ ಕುಸಿದು ಬಿದ್ದು 6 ವರ್ಷದ ಬಾಲಕ ಸಾವು

    ಶಾಲಾ ಗೇಟ್ ಕುಸಿದು ಬಿದ್ದು 6 ವರ್ಷದ ಬಾಲಕ ಸಾವು

    ಲಕ್ನೋ: ಸರ್ಕಾರಿ ಪ್ರಾಥಮಿಕ ಶಾಲೆಯ ಕಬ್ಬಿಣದ ಗೇಟ್ ಕುಸಿದು ಬಿದ್ದು, 6 ವರ್ಷದ ಬಾಲಕ ಅವಶೇಷಗಳಡಿ ಹೂತುಹೊಗಿ ಮೃತಪಟ್ಟ ಘಟನೆ ನಡೆದಿದೆ. ಕಬ್ಬಿಣದ ಗೇಟ್ ಅನ್ನು ಕೇವಲ 2 ತಿಂಗಳ ಹಿಂದೆಯಷ್ಟೇ ಜೋಡಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಉತ್ತರ ಪ್ರದೇಶದ ಬರುವಾ ಹುಸೇನಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು, ಮೃತ ಬಾಲಕ ಅಖಿಲೇಶ್(6) ಎಂಬುದು ತಿಳಿದು ಬಂದಿದೆ.

    ಸರ್ಕಾರಿ ಕಾರ್ಯಕ್ರಮವೊಂದರ ಅಡಿಯಲ್ಲಿ 2021ರ ಅಕ್ಟೋಬರ್ ತಿಂಗಳಿನಲ್ಲಿ ಗೇಟ್ ಅನ್ನು ಸ್ಥಾಪಿಸಲಾಗಿತ್ತು. ಗುರುವಾರ ಮಧ್ಯಾಹ್ನ ಅಖಿಲೇಶ್ ಶಾಲೆಯ ಗೇಟ್ ಬಳಿ ಆಟವಾಡುತ್ತಿದ್ದಾಗ ಏಕಾಏಕಿ ಬಿದ್ದಿದೆ. ಇದನ್ನೂ ಓದಿ: ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ BSF ಯೋಧನ ಅಂತ್ಯಕ್ರಿಯೆ

    ಬಾಲಕ ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದಾನೆ. ಆತನ ದೇಹವನ್ನು ಮರಣೋತ್ತರ ಪರೀಕ್ಷೆಗೆ ರಾವಾನಿಸಲಾಗಿದೆ. ಶಾಲೆಯ ಗೇಟ್ ಕುಸಿದು ಬಾಲಕ ಸಾವನ್ನಪ್ಪಿರುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಹಿಜಾಬ್ ಧರಿಸಿ ತರಗತಿಯಲ್ಲಿ ಕುಳಿತುಕೊಳ್ಳಲು ಅವಕಾಶ ನೀಡುವಂತೆ ಬೇಡಿಕೆ

    ಘಟನೆಯ ಹಿಂದೆ ಕಿಡಿಗೇಡಿಗಳ ಕೈವಾಡವಿದ್ದರೆ, ಅವರಿಗೆ ಖಂಡಿತವಾಗಿಯೂ ಶಿಕ್ಷೆಯಾಗುತ್ತದೆ. ಸಂತ್ರಸ್ತರ ಕುಟುಂಬಕ್ಕೆ ಸರ್ಕಾರ ನೆರವು ನೀಡಲಾಗುವುದು ಎಂದು ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ. ಘಟನೆ ಭೂತಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

  • ಕುಸಿದು ಬಿದ್ದ ಮನೆ ಗೋಡೆ- ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

    ಕುಸಿದು ಬಿದ್ದ ಮನೆ ಗೋಡೆ- ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

    ಶಿವಮೊಗ್ಗ: ಸತತವಾಗಿ ಸುರಿಯುತ್ತಿರುವ ಅಕಾಲಿಕ ಮಳೆಗೆ ಮನೆಯೊಂದರ ಗೋಡೆ ಕುಸಿದು ಬಿದ್ದಿದೆ. ಈ ಘಟನೆ ತಾಲೂಕಿನ ಕೂಡಲಿ ಗ್ರಾಮ ಪಂಚಾಯ್ತಿ ವ್ಯಾಪ್ತಿ ಚಿಕ್ಕ ಕೂಡ್ಲಿ ಗ್ರಾಮದಲ್ಲಿ ನಡೆದಿದೆ. ಪಾರ್ವತಮ್ಮ ಅವರಿಗೆ ಸೇರಿದ ಮನೆಯೇ ಕುಸಿದು ಬಿದ್ದಿದೆ.

    ಮುಂಜಾನೆ ನಿದ್ರೆಯಲ್ಲಿದ್ದ ಕುಟುಂಬ ಸದಸ್ಯರಿದ್ದರು. ಈ ವೇಳೆ ಮಣೆ ಗೋಡೆ ಕುಸಿದು ಬಿದ್ದಿದೆ. ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಮನೆ ಬಿದ್ದು ಕುಟುಂಬಸ್ಥರು ಅತಂತ್ರರಾಗಿದ್ದರೂ ಸ್ಥಳಕ್ಕೆ ಇಲ್ಲಿಯವರೆಗೂ ಯಾವುದೇ ಅಧಿಕಾರಿಗಳಾಗಲಿ, ಗ್ರಾಮ ಪಂಚಾಯಿತಿ ಸಿಬ್ಬಂದಿ ಆಗಲಿ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ. ಇದನ್ನೂ ಓದಿ: ಹೆಸರುವಾಸಿಯಾಗಿದ್ದ ಕೇರಳದ ಟೀ ಮಾರಾಟಗಾರ ನಿಧನ

    ಸಂತ್ರಸ್ಥ ಕುಟುಂಬಕ್ಕೆ ಗ್ರಾಮದ ಸಮುದಾಯ ಭವನದಲ್ಲಿ ಆಶ್ರಯ ಕಲ್ಪಿಸಲಾಗಿದೆ. ಸಂತ್ರಸ್ಥ ಕುಟುಂಬಕ್ಕೆ ಸೂಕ್ತ ಪರಿಹಾರ ಕಲ್ಪಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಬಾತ್ ಟಬ್‍ನಲ್ಲಿ ಕುಳಿತು ಹಾಟ್ ಪೋಸ್ ಕೊಟ್ಟ ಹೀನಾ ಖಾನ್

  • ಮನೆ ಮೇಲ್ಛಾವಣಿ, ಗೋಡೆ ಕುಸಿತ- ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರು

    ಮನೆ ಮೇಲ್ಛಾವಣಿ, ಗೋಡೆ ಕುಸಿತ- ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರು

    ಚಿತ್ರದುರ್ಗ: ಕೆಲ ದಿನಗಳಿಂದ ತುಂತುರು ಮಳೆಯಿಂದಾಗಿ, ನೆನೆದಿದ್ದ ಮನೆಯ ಮೇಲ್ಛಾವಣಿ ಹಾಗೂ ಗೋಡೆ ಕುಸಿತವಾಗಿರುವ ಘಟನೆ ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ನಡೆದಿದೆ.

    ಹೊಳಲ್ಕೆರೆಯ ಟಿಪ್ಪು ನಗರದ 1ನೇ ಕ್ರಾಸ್ ನಲ್ಲಿರುವ ಮುಮ್ತಾಜ್ ಅವರ ಮನೆ ದಿಡೀರ್ ಕುಸಿದಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದ ಮಹಿಳೆ ಮಮ್ತಾಜ್ ಹಾಗೂ ಅವರ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಕೋರಮಂಗಲದಲ್ಲಿ ಭೀಕರ ಅಪಘಾತ – ಹೊಸೂರು ಶಾಸಕನ ಪುತ್ರ ಸಾವು

    ಮನೆ ಕಳೆದುಕೊಂಡು ಕಂಗಾಲಾಗಿರುವ ಕುಟುಂಬ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಸರ್ಕಾರ ನಮಗೆ ಶೀಘ್ರ ಪರಿಹಾರ, ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಮುಮ್ತಾಜ್ ಆಗ್ರಹಿಸಿದ್ದಾರೆ. ಹೊಳಲ್ಕೆರೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ತೌಕ್ತೆ ಚಂಡಮಾರುತದ ಅಬ್ಬರ- ಬೆಳಗಾವಿಯಲ್ಲಿ ಮನೆ ಕುಸಿದು ಅಜ್ಜಿ, ಮೊಮ್ಮಗ ಸಾವು

    ತೌಕ್ತೆ ಚಂಡಮಾರುತದ ಅಬ್ಬರ- ಬೆಳಗಾವಿಯಲ್ಲಿ ಮನೆ ಕುಸಿದು ಅಜ್ಜಿ, ಮೊಮ್ಮಗ ಸಾವು

    ಬೆಳಗಾವಿ: ತೌಕ್ತೆ ಚಂಡಮಾರುತದ ಅಬ್ಬರ ಜೋರಾಗಿದ್ದು, ರಾಜ್ಯದ ಬಹುತೇಕ ಕಡೆ ಮಳೆ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ಭಾರೀ ಮಳೆಯಿಂದಾಗಿ ಜಿಲ್ಲೆಯ ಖಾನಾಪುರ ತಾಲೂಕಿನ ಇಟಗಿ ಗ್ರಾಮದಲ್ಲಿ ಮನೆ ಕುಸಿದು ಬಿದ್ದಿದ್ದು, ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ.

    ಕಳೆದ ರಾತ್ರಿಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಭಾರೀ ಅನಾಹುತ ಸೃಷ್ಟಿಸಿದೆ. ಎಡಬಿಡದೆ ಸುರಿಯುತ್ತಿರುವ ಮಳೆಗೆ ಮನೆ ಕುಸಿದು ಬಿದ್ದಿದ್ದು, ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ದೊಡ್ಡವ್ವಾ ರುದ್ರಪ್ಪಾ ಪಟ್ಟೆದ್(54) ಹಾಗೂ ಮೊಮ್ಮಗ ಅಭಿಷೇಕ್ ಪಟ್ಟೆದ್(3) ಸಾವನ್ನಪ್ಪಿದ್ದಾರೆ.

    ದೊಡ್ಡವ್ವ ಹಾಗೂ ಮೊಮ್ಮಗ ಮನೆಯಲ್ಲೇ ಇದ್ದರು, ಅದೃಷ್ಟವಶಾತ್ ಅಭಿಷೇಕ್ ತಂದೆ, ತಾಯಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರೇ ಶವಗಳನ್ನು ಹೊರ ತೆಗೆದಿದ್ದು, ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.