Tag: collapse

  • ಕೋಲ್ಕತ್ತಾದಲ್ಲಿ ಸೇತುವೆ ಕುಸಿತ – 8 ಮಂದಿಗೆ ಗಾಯ

    ಕೋಲ್ಕತ್ತಾದಲ್ಲಿ ಸೇತುವೆ ಕುಸಿತ – 8 ಮಂದಿಗೆ ಗಾಯ

    ಕೋಲ್ಕತ್ತಾ: ದಕ್ಷಿಣ ಕೋಲ್ಕತ್ತಾದ ಡೈಮಂಡ್ ಹರ್ಬರ್ ರಸ್ತೆಯಲ್ಲಿರುವ ಮಜರತ್ ಸೇತುವೆ ಕುಸಿದು ಬಿದ್ದ ಪರಿಣಾಮ, ಓರ್ವ ಸಾವನ್ನಪ್ಪಿ, ಹಲವು ಜನ ಅವಶೇಷಗಳ ಅಡಿಯಲ್ಲಿ ಸಿಲುಕೊಂಡಿದ್ದಾರೆ.

    ರಾಜಧಾನಿಯ ಹಳೆಯ ನಗರ ಹಾಗೂ ಜನಜಂಗುಳಿ ಹೆಚ್ಚಿರುವ ಡೈಮಂಡ್ ಹರ್ಬರ್ ರಸ್ತೆಯಲ್ಲಿರುವ ಮಜರತ್ ಸೇತುವೆಯು ಸಂಜೆ 4.45ರ ಸುಮಾರಿಗೆ ಏಕಾಏಕಿ ಕುಸಿದು ಬಿದ್ದಿದ್ದು, ಪರಿಣಾಮವಾಗಿ ಅದರ ಮೇಲೆ ಸಂಚರಿಸುತ್ತಿದ್ದ ಹಲವು ವಾಹನಗಳು ಸೇರಿದಂತೆ 10 ಕ್ಕೂ ಹೆಚ್ಚು ಬೈಕುಗಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿವೆ. ಅಲ್ಲದೇ ಸ್ಥಳದಲ್ಲೇ ಓರ್ವ ಸಾವನ್ನಪ್ಪಿ 8ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

    ಅವಶೇಷಗಳ ಅಡಿಯಲ್ಲಿ ಹಲವು ಮಂದಿ ಸಿಲುಕಿ ಹಾಕಿಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಆಗಮಿಸಿದ ರಕ್ಷಣಾ ತಂಡ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು, ಸಿಲುಕಿಕೊಂಡಿರುವ ಜನರನ್ನು ರಕ್ಷಿಸುತ್ತಿದ್ದು, ಗಾಯಗೊಂಡಿದ್ದ 8 ಮಂದಿಯನ್ನು ಎಸ್‍ಎಸ್‍ಕೆಎಂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೇತುವೆ ಬಿದ್ದ ಪರಿಣಾಮ ವಾಹನಗಳು ಸಂಪೂರ್ಣ ನಜ್ಜು-ಗುಜ್ಜಾಗಿವೆ ಎಂದು ರಕ್ಷಣಾ ಸಿಬ್ಬಂದಿ ತಿಳಿಸಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸೇತುವೆ ಕುಸಿದು ಬಿದ್ದು, ಹಲವರು ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿರುವುದು ಮಾಹಿತಿ ಸಿಕ್ಕಿದೆ. ಈಗಾಗಲೇ ರಕ್ಷಣಾ ತಂಡ ಹಾಗೂ ಅಗ್ನಿಶಾಮಕದಳ ಸಿಬ್ಬಂದಿಯು ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಾನು ತುರ್ತು ಭೇಟಿಗಾಗಿ ಡಾರ್ಜಿಲಿಂಗ್ ಗೆ ಭೇಟಿ ನೀಡಿದ್ದು, ಯಾವುದೇ ವಿಮಾನಗಳು ಇಲ್ಲದ ಕಾರಣ ಘಟನಾ ಸ್ಥಳಕ್ಕೆ ತೆರಳಲು ಸಾಧ್ಯವಾಗಿಲ್ಲ. ಶೀಘ್ರವೇ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ. ಅಲ್ಲದೇ ಈ ಕುರಿತು ಸಮಗ್ರ ತನಿಖೆ ನಡೆಸುವಂತೆ ಆದೇಶ ನೀಡಿದ್ದೇನೆ ಎಂದು ಹೇಳಿದ್ದಾರೆ.

    ಬಿಜೆಪಿಯ ಮುಖಂಡ ಮುಕುಲ್ ರಾಯ್ ಪ್ರತಿಕ್ರಿಯಿಸಿ, ಸೇತುವೆ ಕುಸಿತಕ್ಕೆ ಸಿಎಂ ಮಮತಾ ಬ್ಯಾನರ್ಜಿಯವರೇ ನೇರ ಹೊಣೆ. ಕೇವಲ ಅವರು ನಗರವನ್ನು ಸುಂದರವಾಗಿಸುವುದಾಗಿ ಆಶ್ವಾಸನೆ ನೀಡುತ್ತಿದ್ದಾರೆಯೇ ಹೊರತು, ಯಾವುದೇ ಹಳೆಯ ಕಾಮಗಾರಿಗಳನ್ನು ಸರಿಪಡಿಸುವಲ್ಲಿ ಗಮನಹರಿಸಿಲ್ಲ. ಇದರ ಹೊಣೆಯನ್ನು ರಾಜ್ಯ ಸರ್ಕಾರ ಹೊತ್ತುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮನೆ ಗೋಡೆ ಕುಸಿದು 2 ಹಸು ಸಾವು -2 ಎತ್ತುಗಳಿಗೆ ಗಂಭೀರ ಗಾಯ

    ಮನೆ ಗೋಡೆ ಕುಸಿದು 2 ಹಸು ಸಾವು -2 ಎತ್ತುಗಳಿಗೆ ಗಂಭೀರ ಗಾಯ

    ಚಿತ್ರದುರ್ಗ: ತಡರಾತ್ರಿ ಇದ್ದಕ್ಕಿದಂತೆ ಮನೆಯ ಗೋಡೆಗಳು ಕುಸಿದು ಬಿದ್ದಿದರಿಂದ ಎರಡು ಹಸುಗಳು ಸಾವನ್ನಪ್ಪಿದ್ದು, ಅಲ್ಲೇ ಇದ್ದ ಎರಡು ಎತ್ತುಗಳಿಗೆ ಗಂಭೀರ ಗಾಯವಾಗಿರುವ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಮದ್ದೇರು ಗ್ರಾಮದಲ್ಲಿ ನಡೆದಿದೆ.

    ರೇಣುಕಮ್ಮ ಎಂಬವರಿಗೆ ಸೇರಿದ್ದ ಮನೆಯ ಗೋಡೆ ಕುಸಿದಿದೆ. ಗೋಡೆ ಕುಸಿಯುತ್ತಿದಂತೆ ಕುಟುಂಬಸ್ಥರು ಹೊರಗೆ ಓಡಿ ಬಂದಿದ್ದಾರೆ. ಹಾಗಾಗಿ ಅದೃಷ್ಟವಶಾತ್ ಮನೆಯಲ್ಲಿ ಮಲಗಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಮನೆಯಲ್ಲಿದ್ದ ಜಾನುವಾರಗಳಲ್ಲಿ 2 ಹಸು ಸಾವನ್ನಪ್ಪಿದೆ ಮತ್ತು 2 ಎತ್ತುಗಳಿಗೆ ಗಂಭೀರ ಗಾಯಗಳಾಗಿವೆ. ಮಳೆಗೆ ಒದ್ದೆಯಾಗಿ ಗೋಡೆ ಕುಸಿದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

    ಹೊಳಲ್ಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮೇಲ್ಛಾವಣಿ ಕುಸಿದು ತಾಯಿ ಮಗ ದುರ್ಮರಣ

    ಮೇಲ್ಛಾವಣಿ ಕುಸಿದು ತಾಯಿ ಮಗ ದುರ್ಮರಣ

    ಬಳ್ಳಾರಿ: ಮೇಲ್ಚಾವಣಿ ಕುಸಿದು ಬಿದ್ದ ಪರಿಣಾಮ ಮನೆಯಲ್ಲಿ ಮಲಗಿದ್ದ ತಾಯಿ ಮಗ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಗರದ ಕೌಲಬಜಾರ್ ಪ್ರದೇಶದಲ್ಲಿ ನಡೆದಿದೆ.

    ಹೇಮಲತಾ ಹಾಗೂ ದರ್ಶನ್ ಮೃತ ದುರ್ದೈವಿಗಳು. ಶನಿವಾರ ತಡರಾತ್ರಿ ಮನೆಯಲ್ಲಿ ಮಲಗಿದ್ದ ತಾಯಿ ಹಾಗೂ ಮಗನ ಮೇಲೆ ಏಕಾಏಕಿ ಮನೆಯ ಮೇಲ್ಛಾವಣೆ ಕುಸಿದು ಬಿದ್ದಿದೆ. ಬಿದ್ದ ರಭಸಕ್ಕೆ ಸ್ಥಳದಲ್ಲೇ ಇಬ್ಬರು ಅಸುನೀಗಿದ್ದಾರೆ. ಇಂದು ಬೆಳಗ್ಗೆ ಮನೆ ಕುಸಿದಿರುವುದನ್ನು ಕಂಡ ಸ್ಥಳೀಯರು ಅವಶೇಷಗಳಡಿಯಲ್ಲಿ ಸಿಲುಕಿದ್ದ ಮೃತ ದೇಹಗಳನ್ನು ಹೊರತೆಗೆದಿದ್ದಾರೆ.

    ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರೀಶೀಲನೆ ನಡೆಸಿ, ಮನೆಯು ತುಂಬಾ ಹಳೆಯದಾಗಿದ್ದರಿಂದ ಕುಸಿದು ಬಿದ್ದಿದೆ ಎಂದು ತಿಳಿಸಿದ್ದಾರೆ. ಘಟನೆ ಸಂಬಂಧ ಕೌಲ್‍ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದೇವೇಗೌಡ್ರಿಗೇ ಮೋಸ ಮಾಡ್ದೋರು ಕುಮಾರಸ್ವಾಮಿನ ಬಿಡ್ತರಾ: ಸುರೇಶ್ ಅಂಗಡಿ

    ದೇವೇಗೌಡ್ರಿಗೇ ಮೋಸ ಮಾಡ್ದೋರು ಕುಮಾರಸ್ವಾಮಿನ ಬಿಡ್ತರಾ: ಸುರೇಶ್ ಅಂಗಡಿ

    ಬೆಳಗಾವಿ: ಮಾಜಿ ಪ್ರಧಾನಿ ದೇವೇಗೌಡ ಅವರಿಗೇ ಮೋಸ ಮಾಡಿರುವ ಕಾಂಗ್ರೆಸ್ಸಿನವರು ಇನ್ನು ಕುಮಾರಸ್ವಾಮಿಯವರನ್ನು ಬಿಡುತ್ತಾರೆಯೇ ಎಂದು ಬಿಜೆಪಿ ಸಂಸದ ಸುರೇಶ್ ಅಂಗಡಿ ಪ್ರಶ್ನಿಸಿದ್ದಾರೆ.

    ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ಹಾಗೂ ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿಯವರ ಅಸ್ಥಿ ವಿಸರ್ಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಸುದ್ದಿಗಾರರು ಸಿಎಂ ಸಿದ್ದರಾಮಯ್ಯನರ ಹೇಳಿಕೆ ಕುರಿತು ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ ಸುರೇಶ್, ಸಿದ್ದರಾಮಯ್ಯನವರು ಮತ್ತೆ ಸಿಎಂ ಆಗುತ್ತೇನೆ ಎನ್ನುವ ಮೂಲಕ ಸಮ್ಮಿಶ್ರ ಸರ್ಕಾರದಲ್ಲಿ ಹೊಸದಾದ ಅಲೆಯನ್ನು ಎಬ್ಬಿಸಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರಿಗೇ ಮೋಸ ಮಾಡಿರುವ ಕಾಂಗ್ರೆಸ್ಸಿನವರು ಇನ್ನು ಕುಮಾರಸ್ವಾಮಿಯವರನ್ನು ಬಿಡುತ್ತಾರಾ. ಇನ್ನು ಕೆಲವೇ ದಿನಗಳಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗಲಿದೆ ಎಂದು ಹೇಳಿದ್ರು.

    ಈಗಾಗಲೇ ಸಮ್ಮಿಶ್ರ ಸರ್ಕಾರದಲ್ಲಿ ಹಗ್ಗ-ಜಗ್ಗಾಟ ಪ್ರಾರಂಭವಾಗಿದೆ. ಇವರಿಬ್ಬರ ಕಿತ್ತಾಟದಿಂದ ರಾಜ್ಯದಲ್ಲಿ ಯಾವುದೇ ಕೆಲಸ-ಕಾರ್ಯಗಳು ನಡೆಯುತ್ತಿಲ್ಲ. ಖುದ್ದು ಸಿದ್ದರಾಮಯ್ಯನವರೇ ಚಾಪೆ ಜಗ್ಗುವ ಕೆಲಸ ಮಾಡುತ್ತಿದ್ದಾರೆ. ಎರಡು ಪಕ್ಷಗಳ ಸಮ್ಮಿಶ್ರ ಮ್ಯಾರೇಜ್ ಯಾವಾಗ ಬೇಕಾದರೂ ಡೈವರ್ಸ್ ಆಗಬಹುದು. 15 ದಿನಗೊಳಗಾಗಿ ಈ ಸಮ್ಮಿಶ್ರ ಸರ್ಕಾರ ಪತನವಾಗಿ ನೂತನ ಸರ್ಕಾರಿ ಅಧಿಕಾರಕ್ಕೆ ಬರುತ್ತದೆ ಎಂದು ಭವಿಷ್ಯ ನುಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮನೆಗೋಡೆ ಕುಸಿದು ಗರ್ಭಿಣಿ ಸಹಿತ ಇಬ್ಬರು ಸಾವು!

    ಮನೆಗೋಡೆ ಕುಸಿದು ಗರ್ಭಿಣಿ ಸಹಿತ ಇಬ್ಬರು ಸಾವು!

    ಧಾರವಾಡ: ಜಿಲ್ಲೆಯ ಪಶ್ಚಿಮ ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮನೆಯ ಗೋಡೆ ಕುಸಿದು ಗರ್ಭಿಣಿ ಸಹಿತ ಇಬ್ಬರು ಸಾವನ್ನಪ್ಪಿದ್ದಾರೆ.

    ಈ ಘಟನೆ ಅಳ್ನಾವರ ಪಟ್ಟಣದಲ್ಲಿ ನಡೆದಿದ್ದು, ಕುಸಿದು ಬಿದ್ದ ಮನೆ ಪ್ರಕಾಶ್ ಸುರೋಜಿ ಅವರದ್ದು ಎಂದು ಹೇಳಲಾಗಿದೆ. ಮನೆಯ ಗೋಡೆ ಕುಸಿದ ಪರಿಣಾಮ ಮನೆಯಲ್ಲಿದ್ದ ಮೂವರು ಮಣ್ಣಿನಲ್ಲಿ ಸಿಲುಕಿದ್ದು, 20 ವರ್ಷದ ಗೃಹಿಣಿ ಶಶಿಕಲಾ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮತ್ತೊರ್ವ ಯುವತಿ 17 ವರ್ಷದ ಮುಕ್ತಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಪ್ರಕಾಶ ಸುರೋಜಿ ಅವರ ಪತ್ನಿ ಭಾರತಿ ಅವರಿಗೂ ಕೂಡ ಗಾಯವಾಗಿದ್ದು, ಚಿಕಿತ್ಸೆಗಾಗಿ ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

    ಜಿಲ್ಲೆಯ ತಹಶೀಲ್ದಾರ್ ಪ್ರಕಾಶ ಕುದರಿ ಹಾಗೂ ಅಧಿಕಾರಿಗಳು ಧಾರವಾಡ ಜಿಲ್ಲಾಸ್ಪತ್ರೆಯ ಶವಗಾರಕ್ಕೆ ಭೇಟಿ ನೀಡಿದರು. ಬಳಿಕ ಅವಘಡ ಸಂಭವಿಸಿದ ಸ್ಥಳಕ್ಕೂ ಭೇಟಿ ನೀಡಿ ಪರಿಶೀಲಿಸಿ ಪರಿಹಾರ ನೀಡುವುದಾಗಿ ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮತ್ತೆ ಜೋಡುಪಾಲ, ಮದೆನಾಡಿನಲ್ಲಿ ಗುಡ್ಡ ಕುಸಿತ ಸಾಧ್ಯತೆ: ವಿಜ್ಞಾನಿಗಳು ಹೇಳೋದು ಏನು? ವಿಡಿಯೋ ನೋಡಿ

    ಮತ್ತೆ ಜೋಡುಪಾಲ, ಮದೆನಾಡಿನಲ್ಲಿ ಗುಡ್ಡ ಕುಸಿತ ಸಾಧ್ಯತೆ: ವಿಜ್ಞಾನಿಗಳು ಹೇಳೋದು ಏನು? ವಿಡಿಯೋ ನೋಡಿ

    ಮಡಿಕೇರಿ: ಕೊಡಗಿನ ಜೋಡುಪಾಲ, ಮದೆನಾಡು ಪ್ರದೇಶಗಳು ವಾಸಕ್ಕೆ ಯೋಗ್ಯವಾಗಿಲ್ಲ ಎಂದು ರಾಜ್ಯ ನೈಸರ್ಗಿಕ ನಿರ್ವಹಣೆ ಉಸ್ತುವಾರಿ ಕೇಂದ್ರದ ವಿಜ್ಞಾನಿಗಳು ಹೇಳಿದ್ದಾರೆ.

    ಭೂ ಕುಸಿತಗೊಂಡ ಪ್ರದೇಶಕ್ಕೆ ಭೇಟಿ ನೀಡಿ ಮಾತನಾಡಿದ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣೆ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ ರೆಡ್ಡಿ, ಗುಡ್ಡ ಪ್ರದೇಶದಲ್ಲಿ ನೀರು ಇಂಗಿ ಸ್ಫೋಟಗೊಂಡು ಹೊರಬಂದಿದೆ. ಮತ್ತೆ ಕೆಲವು ಕಡೆ ಗುಡ್ಡಗಳು ಕುಸಿದು ಬೀಳುವ ಸಾಧ್ಯತೆಗಳಿವೆ ಎಂದು ತಿಳಿಸಿದರು.

    ಭಾರೀ ಮಳೆಯಿಂದಾಗಿ ಮಣ್ಣು ಮಳೆ ನೀರನ್ನು ಹಿಡಿದಿಟ್ಟುಕೊಳ್ಳುವ ಶಕ್ತಿ ಕಳೆದುಕೊಂಡ ಪರಿಣಾಮ ಅಂತರ್ಜಲ ಮಟ್ಟ ಏರಿ ಈ ಕುಸಿತ ಸಂಭವಿಸಿದೆ. ಸದ್ಯಕ್ಕೆ ಜಿಲ್ಲೆಯಲ್ಲಿ ಮಳೆ ಕಡಿಮೆಯಾಗಿದ್ದು, ಮುಂದೆ ಪರಿಸ್ಥಿತಿಯನ್ನು ಯಾವ ರೀತಿ ಎದುರಿಸಬೇಕು ಎಂಬುದಕ್ಕೆ ಕ್ರಮ ಕೈಗೊಳ್ಳಬೇಕಿದೆ. ಇಲ್ಲಿನ ವಾತಾವರಣವನ್ನು ನೋಡಿದರೆ ಜನರಿಂದ ಯಾವುದೇ ರೀತಿಯ ತೊಂದರೆ ಆಗಿಲ್ಲ. ಈಗ ನಾವು ಪ್ರಾಥಮಿಕ ಮಾಹಿತಿ ಕಲೆ ಹಾಕಲು ಬಂದಿದ್ದು ಮುಂದೆ ಸಮಗ್ರ ಅಧ್ಯಯನಕ್ಕೆ ತಂಡ ಬರಲಿದೆ. ಘಟನೆಗೆ ಏನು ಕಾರಣ ಎಂಬ ಬಗ್ಗೆ 2 ತಿಂಗಳು ಅಧ್ಯಯನ ನಡೆಸಿ ವರದಿ ನೀಡಲಾಗುತ್ತದೆ ಎಂದು ವಿವರಿಸಿದರು.

    ಇಲ್ಲಿ ಜನರು ವಾಸಿಸಬಹುದೇ ಇಲ್ಲವೇ ಎಂಬುದನ್ನು ನೋಡಲು ಬಂದಿದ್ದೇವೆ. ಬಳಿಕ ಪರಿಸ್ಥಿತಿಯನ್ನು ಹೇಗೆ ಸರಿಪಡಿಸಲಾಗುತ್ತದೆ ಎಂಬುದನ್ನು ಕಂಡು ಕೊಳ್ಳಬೇಕಿದೆ ಪ್ರಕೃತಿ ವಿಕೋಪವನ್ನು ತಡೆಯಲು ಸಾಧ್ಯವಿಲ್ಲ. ಆದರೆ ನಾವು ಮಾಡಿರುವ ತಪ್ಪನ್ನು ಮುಂದೆ ಮಾಡದೇ ಇರುವ ಹಾಗೇ ನೋಡಿಕೊಳ್ಳಬೇಕಿದೆ ಎಂದು ಶ್ರೀನಿವಾಸರೆಡ್ಡಿ ಹೇಳಿದರು.

    ಬೋಪಯ್ಯ ತಿರುಗೇಟು: ಜೋಡುಪಾಲ ವಾಸ ಯೋಗ್ಯ ಅಲ್ಲವೆಂಬ ತಜ್ಞರ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶಾಸಕ ಬೋಪಯ್ಯ ಹತ್ತಾರು ವರ್ಷಗಳಿಂದ ವಾಸವಿದ್ದವರನ್ನು ಎಬ್ಬಿಸುವುದು ಸರಿಯಲ್ಲ ಎಂದಿದ್ದಾರೆ.

    ಸಂಪಾಜೆಯಲ್ಲಿರುವ ನಿರಾಶ್ರಿತರ ಕೇಂದ್ರಕ್ಕೆ ಭೇಟಿ ನೀಡಿ ಪ್ರತಿಕ್ರಿಯಿಸಿದ ಅವರು, ಯಾವುದೇ ಹೋಮ್ ಸ್ಟೇಗಳಿದ್ದಲ್ಲಿ ಭೂ ಕುಸಿತ ಆಗಿಲ್ಲ, ಬರೀ ಬಡವರ ಮನೆಗಳಿರುವಲ್ಲಿ ಹೆಚ್ಚು ಭೂಕುಸಿತವಾಗಿ ನಾಶ ಆಗಿದೆ. ಹೋಮ್ ಸ್ಟೇ ಇಲ್ಲದ ಮೊಣ್ಣಂಗೇರಿ ಸ್ಥಳಗಳಲ್ಲಿ ಪೂರ್ತಿ ನಾಶವಾಗಿದೆ. ಒಂದು ವರ್ಷದಲ್ಲಿ ಬೀಳಬೇಕಾಗಿದ್ದ ಮಳೆ 15 ದಿನದಲ್ಲಿ ಬಿದ್ದ ಪರಿಣಾಮ ಈ ದುರ್ಘಟನೆಯಾಗಿದೆ ಎಂದು ಎಂದು ವಿಜ್ಞಾನಿಗಳ ಹೇಳಿಕೆಗೆ ತಿರುಗೇಟು ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದಟ್ಟಾರಣ್ಯದಲ್ಲಿ ಭೀಕರ ಸ್ಫೋಟ- 40 ಎಕರೆಯಷ್ಟು ಅರಣ್ಯ ಪ್ರದೇಶ ನೀರಿನಲ್ಲಿ ಕೊಚ್ಚಿ ಹೋಯ್ತು!

    ದಟ್ಟಾರಣ್ಯದಲ್ಲಿ ಭೀಕರ ಸ್ಫೋಟ- 40 ಎಕರೆಯಷ್ಟು ಅರಣ್ಯ ಪ್ರದೇಶ ನೀರಿನಲ್ಲಿ ಕೊಚ್ಚಿ ಹೋಯ್ತು!

    ಮಂಗಳೂರು: ಕೊಡಗಿನ ಗಡಿಭಾಗ ಜೋಡುಪಾಲ ದುರಂತದ ಮಾದರಿಯಲ್ಲೇ ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಟ್ಟಕಡೆಯ ಗ್ರಾಮವಾಗಿರುವ ಕಲ್ಮಕಾರಿನ ಬಳಿಯಿರುವ ಕಡಮಕಲ್ ಎಸ್ಟೇಟ್ ವ್ಯಾಪ್ತಿಯಲ್ಲಿ ಬೃಹತ್ ಬೆಟ್ಟ ಕುಸಿದು ಅವಾಂತರ ಸೃಷ್ಟಿಯಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ.

    ಬೃಹತ್ ಬೆಟ್ಟ ಕುಸಿದ ಪರಿಣಾಮ ಎಸ್ಟೇಟ್ ಒಳಗಿರುವ ಹೊಳೆಯ ಸೇತುವೆ ಕೊಚ್ಚಿ ಹೋಗಿದ್ದು, ಬೃಹತ್ ಮರಗಳು ಛಿದ್ರಗೊಂಡು ಬಿದ್ದಿವೆ. ಮೂರು ದಿನಗಳ ಹಿಂದೆ ಬಾಂಬ್ ಸ್ಫೋಟದ ರೀತಿಯಲ್ಲಿ ಭಾರೀ ಸದ್ದು ಕೇಳಿದ್ದು, ಇದರಿಂದ ಎಸ್ಟೇಟ್ ಕಾರ್ಮಿಕರು ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ನಿವಾಸಿಗಳು ಭಯ ಭೀತರಾಗಿದ್ದಾರೆ. ಅಲ್ಲದೇ ಎಸ್ಟೇಟ್ ನಲ್ಲಿರುವ 40 ಕ್ಕೂ ಹೆಚ್ಚು ತಮಿಳು ಕಾರ್ಮಿಕರು ಭಯದಿಂದ ಸ್ಥಳ ಬಿಟ್ಟು ಓಡಿಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ. ಭೀಕರ ಸ್ಫೋಟದಿಂದಾಗಿ ಸುಮಾರು 40 ಎಕರೆಯಷ್ಟು ಅರಣ್ಯ ಪ್ರದೇಶದಲ್ಲಿರುವ ಮರಗಳು ಬುಡ ಸಮೇತ  ನೀರಿನಲ್ಲಿ ಕೊಚ್ಚಿ ಹೋಗಿದೆ.

    ಆದರೆ, ಈ ಘಟನೆಯನ್ನು ಜಿಲ್ಲಾಡಳಿತ ಮುಚ್ಚಿಟ್ಟಿದ್ದಲ್ಲದೇ, ಕುಗ್ರಾಮವಾಗಿರುವ ಕಾರಣಕ್ಕೆ ಯಾವುದೇ ಅಧಿಕಾರಿಗಳು ಸ್ಥಳಕ್ಕೆ ತೆರಳಿರಲಿಲ್ಲ. ಸ್ಥಳೀಯರ ಮಾಹಿತಿ ಮೇರೆಗೆ ಮಾಧ್ಯಮದಲ್ಲಿ ವರದಿ ಬಂದ ಹಿನ್ನೆಲೆಯಲ್ಲಿ, ಎಚ್ಚೆತ್ತಗೊಂಡಿರುವ ಪುತ್ತೂರು ವಿಭಾಗಾಧಿಕಾರಿ ಕೃಷ್ಣಮೂರ್ತಿ ಸ್ಥಳಕ್ಕೆ ತೆರಳಿದ್ದು, ಬೆಟ್ಟಗಳ ಮೇಲೆ ಏನೋ ದುರಂತ ಸಂಭವಿಸಿರುವ ಸಾಧ್ಯತೆಯಿದೆ ಎಂದು ಒಪ್ಪಿಕೊಂಡಿದ್ದಾರೆ.

    ಸದ್ಯ ಕೂಜುಮಲೆ ಅರಣ್ಯ ವ್ಯಾಪ್ತಿಯಲ್ಲಿ ಭೂಮಿ ಬಿರುಕು ಬಿಟ್ಟಿದ್ದು, ಆಸುಪಾಸಿನ ಕಲ್ಮಕಾರು, ಬಾಳುಗೋಡು ಗ್ರಾಮಗಳ 30ಕ್ಕೂ ಹೆಚ್ಚು ಮನೆಗಳ ನಿವಾಸಿಗಳನ್ನು ಸ್ಥಳಾಂತರ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಲೆನಾಡಲ್ಲಿ ಗುಡ್ಡ ಕುಸಿತ: ಕುದುರೆಮುಖ ಸಂಪೂರ್ಣ ಬಂದ್

    ಮಲೆನಾಡಲ್ಲಿ ಗುಡ್ಡ ಕುಸಿತ: ಕುದುರೆಮುಖ ಸಂಪೂರ್ಣ ಬಂದ್

    ಚಿಕ್ಕಮಗಳೂರು: ಮಲೆನಾಡಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದ್ದು, ಮೂರು ಗ್ರಾಮಗಳಲ್ಲಿ ಮನೆಪಕ್ಕದಲ್ಲೇ ಗುಡ್ಡ ಕುಸಿದಿದೆ.

    ಕೊಪ್ಪ ತಾಲೂಕಿನ ಹುಲುಗರಡಿ, ಬೈರೇದೇವರು, ಸಂಪಾನೆ ಗ್ರಾಮದಲ್ಲಿ ಗುಡ್ಡ ಕುಸಿದು ಮಣ್ಣು ಮನೆಗೆ ಅಪ್ಪಳಿಸಿದೆ. ರವಿಶಂಕರ್, ಶ್ರೀಪಾಲ್, ವರ್ಧಮಾನಯ್ಯಾನವರ ನಿವಾಸಕ್ಕೆ ಮಣ್ಣು ಅಪ್ಪಳಿಸಿದ್ದು, ಮನೆಯವರಲ್ಲಿ ಆತಂಕ ಉಂಟಾಗಿದೆ.

    ರಾಜ್ಯ ಹೆದ್ದಾರಿ 66ರಲ್ಲಿ ನಾಲ್ಕು ಕಡೆ ರಸ್ತೆಯ ಮೇಲೆ ಗುಡ್ಡದ ಮಣ್ಣು ಕುಸಿದು ಬಿದ್ದಿದೆ. ಕುಸಿತದಿಂದಾಗಿ ರಾಜ್ಯ ಹೆದ್ದಾರಿ ಸಂಚಾರ ಬಂದ್ ಮಾಡಲಾಗಿದೆ. ಪರಿಣಾಮ ಕಳಸ ಸಂಚಾರ ಕೂಡ ಬಂದ್ ಆಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

    ಕುದುರೆಮುಖ ಸಮೀಪದ ರಸ್ತೆಯಲ್ಲಿ ಗುಡ್ಡ ಕುಸಿದು ಬೀಳುತ್ತಿದೆ. ಹಾಗಾಗಿ ಸ್ಥಳಕ್ಕೆ ಕುದುರೆಮುಖ ಪೊಲೀಸರು ಭೇಟಿ ನೀಡಿ ವಾಹನ ಸಂಚಾರ ಮಾಡದಂತೆ ತಡೆಯುತ್ತಿದ್ದಾರೆ. ಚಾರ್ಮಾಡಿ ಘಾಟ್ ನಲ್ಲಿ ಲಾರಿಗಳಿಗೆ ನಿಷೇಧವಾದ ಹಿನ್ನೆಲೆಯಲ್ಲಿ ಶನಿವಾರದಿಂದ ಭಾರೀ ಗಾತ್ರದ ವಾಹನಗಳು ಈ ಮಾರ್ಗವಾಗಿ ಮಂಗಳೂರು ತಲುಪುತ್ತಿದ್ದವು. ಆದರೆ ಆದರೆ ಈಗ ಗುಡ್ಡ ಕುಸಿದು ಬೀಳುತ್ತಿರುವ ಕಾರಣ ಕುದುರೆಮುಖ ಮಾರ್ಗವನ್ನು ಸಂಪೂರ್ಣ ಬಂದ್ ಮಾಡಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಹಾಮಳೆಗೆ ಧರೆ ಕುಸಿತ – ಹತ್ತಾರು ಗ್ರಾಮಗಳ ಸಂಪರ್ಕ ಕಟ್

    ಮಹಾಮಳೆಗೆ ಧರೆ ಕುಸಿತ – ಹತ್ತಾರು ಗ್ರಾಮಗಳ ಸಂಪರ್ಕ ಕಟ್

    ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಕಳೆದೆರಡು ತಿಂಗಳಿನಿಂದ ಸುರಿಯುತ್ತಿದ್ದ ವರುಣ ದೇವ, ಒಂಬತ್ತು ದಿನಗಳಿಂದ್ಲೂ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಪರಿಣಾಮ ಮಹಾಮಳೆಗೆ ಭೂ ಕುಸಿತ ಉಂಟಾಗಿದೆ.

    ಕೊಪ್ಪ ತಾಲೂಕಿನ ಮೇಲ್ಪಾಲ್ ಗ್ರಾಮದಲ್ಲಿ ಧರೆ ಕುಸಿತ ಉಂಟಾಗಿದ್ದು, ಇದರಿಂದ ಹತ್ತಾರು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಮೇಲ್ಪಾಲ್, ಹೊದಸಾಳು ಮತ್ತು ಕೆರೆಹಕ್ಲು ಗ್ರಾಮಕ್ಕೆ ದಾರಿಯೇ ಇಲ್ಲದಂತಾಗಿದೆ. ರಸ್ತೆ ಸಂಪೂರ್ಣ ಕುಸಿದಿರುವುದರಿಂದ ಬದಲಿ ಮಾರ್ಗವಿಲ್ಲದ ಕಾರಣ ಗ್ರಾಮಸ್ಥರು ಕಂಗಾಲಾಗಿದ್ದಾರೆ.

    ಕೂಡಲೇ ರಸ್ತೆ ದುರಸ್ಥಿಗೊಳಿಸುವಂತೆ ಜಿಲ್ಲಾಡಳಿತ ಮತ್ತು ಶಾಸಕರಿಗೆ ಸ್ಥಳೀಯರು ಆಗ್ರಹಿಸಿದ್ದಾರೆ. ಪುನರ್ವಸು ಹಾಗೂ ಕುಂಭದ್ರೋಣ ಮಳೆ ಕಂಡು ಕಂಗಾಲಾಗಿದ್ದ ಮಲೆನಾಡಿಗರು ಇದೀಗ, ಆಶ್ಲೇಷನ ಆರ್ಭಟಕ್ಕೆ ಕಂಗೆಟ್ಟಿದ್ದಾರೆ. ಜಿಲ್ಲೆಯ ಕೊಪ್ಪ, ಮೂಡಿಗೆರೆಯಲ್ಲಿ ಜೋರು ಮಳೆ ಇದ್ದರೆ, ಕಳಸ, ಕುದುರೆಮುಖ, ಕೆರೆಕಟ್ಟೆ ಹಾಗೂ ಶೃಂಗೇರಿ ಘಟ್ಟ ಪ್ರದೇಶಗಳಲ್ಲಿ ವರುಣನ ಅಬ್ಬರ ಹೇಳತೀರದ್ದಾಗಿದೆ.

    ಬುಧವಾರ ಭದ್ರಾ ಅಣೆಕಟ್ಟಿನಿಂದ 1 ಲಕ್ಷಕ್ಕೂ ಅತಿ ಹೆಚ್ಚು ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಜಿಲ್ಲೆಯ ತರೀಕೇರಿ ತಾಲೂಕಿನ ಲಕ್ಕವಳ್ಳಿ ಹೋಬಳಿಯ ಸೋಂಪುರ ಗ್ರಾಮದ ಸೇತುವೆಯ ಮುಳುಗಡೆಯಾಗಿದೆ. ಭಾರೀ ಮಳೆಯಿಂದ ಜೀವನದಿಗಳಾದ ತುಂಗಾ, ಭದ್ರಾ ಹಾಗೂ ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿದ್ದು, ಸಾಕಷ್ಟು ಅನಾಹುತಗಳನ್ನ ಸೃಷ್ಟಿಸಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಏಕಾಏಕಿ ಕುಸಿದು ಬಿತ್ತು ನಿರ್ಮಾಣ ಹಂತದಲ್ಲಿದ್ದ ನಾಲ್ಕಂತಸ್ತಿನ ಕಟ್ಟಡ!

    ಏಕಾಏಕಿ ಕುಸಿದು ಬಿತ್ತು ನಿರ್ಮಾಣ ಹಂತದಲ್ಲಿದ್ದ ನಾಲ್ಕಂತಸ್ತಿನ ಕಟ್ಟಡ!

    ಚೆನ್ನೈ: ನಿರ್ಮಾಣ ಹಂತದ ಕಟ್ಟಡವೊಂದು ಕುಸಿದ ಪರಿಣಾಮ ಓರ್ವ ಸಾವನ್ನಪ್ಪಿ, 38 ಮಂದಿ ಕಟ್ಟಡ ಅವಶೇಷಗಳಡಿ ಸಿಲುಕಿರುವ ಘಟನೆ ತಮಿಳುನಾಡು ರಾಜಧಾನಿ ಚೆನ್ನೈನ ಕಂದನ್‍ಚವಡಿ ಎಂಬಲ್ಲಿ ಸಂಭವಿಸಿದೆ.

    ಶನಿವಾರ ರಾತ್ರಿ ಕಂದನ್‍ಚವಡಿ ಪ್ರದೇಶದಲ್ಲಿ ನಿರ್ಮಾಣ ಹಂತದ ನಾಲ್ಕಂತಸ್ತಿನ ಕಟ್ಟಡ ಏಕಾಏಕಿ ಕುಸಿದು ಬಿದ್ದಿದೆ. ಕಟ್ಟಡ ಕುಸಿತದಿಂದಾಗಿ ಸ್ಥಳದಲ್ಲೇ ಓರ್ವ ಕೂಲಿ ಕಾರ್ಮಿಕ ಸಾವನ್ನಪ್ಪಿದ್ದು, 38 ಮಂದಿ ಕೂಲಿ ಕಾರ್ಮಿಕರು ಕಟ್ಟಡದ ಅವಶೇಷಗಳಡಿ ಸಿಲುಕಿದ್ದಾರೆ.

    ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ರಕ್ಷಣಾ ಪಡೆಗಳು ತಡರಾತ್ರಿ ಕಾರ್ಯಾಚರಣೆ ನಡೆಸಿವೆ. ಕಾರ್ಯಾಚರಣೆಯಲ್ಲಿ ಸುಮಾರು 28 ಮಂದಿಯನ್ನು ರಕ್ಷಿಸಲಾಗಿದ್ದು, ಉಳಿದವರಿಗಾಗಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ಕೂಲಿ ಕಾರ್ಮಿಕರ ಪೈಕಿ ಹಲವರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿಸಲಾಗಿದೆ. ರಕ್ಷಣಾ ಕಾರ್ಯಾ ಭರದಿಂದ ಸಾಗುತ್ತಿದ್ದು, ಜೆಸಿಬಿಗಳ ಮೂಲಕ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸುವ ಕಾರ್ಯ ಮುಂದುವರೆದಿದೆ.

    ಘಟನೆ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಡಳಿತ, ಬಹುತೇಕ ಕೂಲಿ ಕಾರ್ಮಿಕರು ದಕ್ಷಿಣ ತಮಿಳುನಾಡು ಪ್ರದೇಶಕ್ಕೆ ಸೇರಿದವರು ಎನ್ನಲಾಗಿದೆ. ಆದರೆ ಕಟ್ಟಡದ ಅವಶೇಷಗಳಡಿ ಇನ್ನೂ ಎಷ್ಟು ಮಂದಿ ಸಿಲುಕಿದ್ದಾರೆ ಎಂಬ ಬಗ್ಗೆ ಸ್ಪಷ್ಟ ಚಿತ್ರಣ ಸಿಕ್ಕಿಲ್ಲ. ಕಟ್ಟಡವು ತಂಜಾವೂರ್ ನ ಆಸ್ಪತ್ರೆಯೊಂದಕ್ಕೆ ಸೇರಿದ್ದಾಗಿದೆ. ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದೆ.