Tag: college

  • ಬೆಂಗಳೂರಿನ ಎಂಜಿನಿಯರಿಂಗ್‌ ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿನಿ ಮೇಲೆ ರೇಪ್‌ – ಕೃತ್ಯ ಎಸಗಿ ಮಾತ್ರೆ ಕೊಡ್ಬೇಕಾ ಎಂದಿದ್ದ ಆರೋಪಿ

    ಬೆಂಗಳೂರಿನ ಎಂಜಿನಿಯರಿಂಗ್‌ ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿನಿ ಮೇಲೆ ರೇಪ್‌ – ಕೃತ್ಯ ಎಸಗಿ ಮಾತ್ರೆ ಕೊಡ್ಬೇಕಾ ಎಂದಿದ್ದ ಆರೋಪಿ

    ಬೆಂಗಳೂರು: ನಗರದ ಪ್ರತಿಷ್ಠಿತ ಎಂಜಿನಿಯರಿಂಗ್‌ (Engineering) ಕಾಲೇಜಿನ ಶೌಚಾಲಯದಲ್ಲಿ (Toilet) ತನ್ನ ಸಹಪಾಠಿಯ ಮೇಲೆ 21 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ಅತ್ಯಾಚಾರ (Rape) ಎಸಗಿದ್ದಾನೆ.

    ಅ.10 ರಂದು ಕೃತ್ಯ ನಡೆದಿದ್ದು ಸಂತ್ರಸ್ತೆ 5 ದಿನಗಳ ನಂತರ ದೂರು ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಹನಮಂತನಗರ ಪೊಲೀಸರು ಈಗ ವಿದ್ಯಾರ್ಥಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

    ಘಟನೆ ಹೇಗಾಯ್ತು?
    ಆರೋಪಿ 6ನೇ ಸೆಮಿಸ್ಟರ್‌ ವಿದ್ಯಾರ್ಥಿಯಾಗಿದ್ದರೆ ಸಂತ್ರಸ್ತೆ ಏಳನೇ ಸೆಮಿಸ್ಟರ್‌ ವಿದ್ಯಾರ್ಥಿನಿಯಾಗಿದ್ದಾಳೆ. ಇವರಿಬ್ಬರು ಮೊದಲು ಒಂದೇ ತರಗತಿಯಲ್ಲಿ ಓದುತ್ತಿದ್ದರು. ಆದರೆ ಆರೋಪಿ ಒಂದು ಸೆಮಿಸ್ಟರ್‌ನಲ್ಲಿ ಫೇಲ್‌ ಆಗಿದ್ದ.

     

    ಕಾಲೇಜಿನ ಊಟದ ವಿರಾಮದ ಸಮಯದಲ್ಲಿ ಆರೋಪಿ ಹಲವು ಬಾರಿ ಕರೆ ಮಾಡಿ ಏಳನೇ ಮಹಡಿಯಲ್ಲಿರುವ ಆರ್ಕಿಟೆಕ್ಚರ್ ಬ್ಲಾಕ್ ಬಳಿ ತನ್ನನ್ನು ಭೇಟಿಯಾಗುವಂತೆ ಕೇಳಿಕೊಂಡಿದ್ದಾನೆ. ಆಕೆ ಬಂದಾಗ ಬಲವಂತವಾಗಿ ಚುಂಬಿಸಲು ಪ್ರಯತ್ನಿಸಿದ್ದಾನೆ. ನಂತರ ಆಕೆ ಲಿಫ್ಟ್ ಬಳಸಿ ಹೊರಡಲು ಮುಂದಾದಾಗ ಆರನೇ ಮಹಡಿವರೆಗೆ ಆಕೆಯನ್ನು ಹಿಂಬಾಲಿಸಿ ಪುರುಷರ ಶೌಚಾಲಯಕ್ಕೆ ಎಳೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

    ಶೌಚಾಲಯದ ಬಾಗಿಲನ್ನು ಲಾಕ್ ಮಾಡಿ ಕೃತ್ಯ ಎಸಗಿದ್ದಾನೆ. ಈ ವೇಳೆ ಸಂತ್ರಸ್ತೆಯ ಮೊಬೈಲಿಗೆ ಕರೆ ಬಂದಾಗ ಫೋನ್‌ ವಶಪಡಿಸಿಕೊಂಡಿದ್ದಾನೆ. ಮಧ್ಯಾಹ್ನ 1:30 ರಿಂದ 1:50 ರ ನಡುವೆ ಈ ಕೃತ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

    ಬೆಳಕಿಗೆ ಬಂದಿದ್ದು ಹೇಗೆ?
    ಘಟನೆಯ ನಂತರ ವಿದ್ಯಾರ್ಥಿನಿ ತನ್ನ ಇಬ್ಬರು ಸ್ನೇಹಿತರಿಗೆ ಈ ವಿಚಾರವನ್ನು ತಿಳಿಸಿದ್ದಾಳೆ. ಅಷ್ಟೇ ಅಲ್ಲದೇ ಆರೋಪಿ ಕರೆ ಮಾಡಿ ಮಾತ್ರೆ ಬೇಕೇ ಎಂದು ಕೇಳಿದ್ದಾನೆ.

    ಈ ಕೃತ್ಯದಿಂದ ಶಾಕ್‌ಗೆ ಒಳಗಾಗಿದ್ದ ವಿದ್ಯಾರ್ಥಿನಿ ಆರಂಭದಲ್ಲಿ ದೂರು ನೀಡಲು ಹಿಂದೇಟು ಹಾಕಿದ್ದಳು. ನಂತರ ಧೈರ್ಯ ಮಾಡಿ ಪೋಷಕರಿಗೆ ತಿಳಿಸಿದ ಬಳಿಕ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

    ಘಟನೆ ನಡೆದ ಸ್ಥಳದಲ್ಲಿ ಯಾವುದೇ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿಲ್ಲ. ಪೊಲೀಸರು ಈಗ ವಿಧಿವಿಜ್ಞಾನ ಮತ್ತು ಡಿಜಿಟಲ್ ಪುರಾವೆಗಳನ್ನು ಪರಿಶೀಲಿಸುತ್ತಿದ್ದಾರೆ.

  • ಬೆಂಗಳೂರಿನಲ್ಲಿ ಹಾಡಹಗಲೇ ಪ್ರಿಯಕರನಿಂದ ವಿದ್ಯಾರ್ಥಿನಿಯ ಬರ್ಬರ ಕೊಲೆ

    ಬೆಂಗಳೂರಿನಲ್ಲಿ ಹಾಡಹಗಲೇ ಪ್ರಿಯಕರನಿಂದ ವಿದ್ಯಾರ್ಥಿನಿಯ ಬರ್ಬರ ಕೊಲೆ

    ಬೆಂಗಳೂರು: ಕಾಲೇಜು ವಿದ್ಯಾರ್ಥಿನಿಯನ್ನು ಪ್ರಿಯಕರ ಬರ್ಬರವಾಗಿ ಹತ್ಯೆ (Murder) ಮಾಡಿದ ಘಟನೆ ಶ್ರೀರಾಮಪುರ ರೈಲ್ವೇ ಟ್ರ‍್ಯಾಕ್ ಬಳಿ ನಡೆದಿದೆ.

    ಯಾಮಿನಿ ಪ್ರಿಯ (20) ಕೊಲೆಯಾದ ವಿದ್ಯಾರ್ಥಿನಿ. ಬನಶಂಕರಿಯ ಕಾಲೇಜಿನಲ್ಲಿ ಬಿ ಫಾರ್ಮಸಿ ಓದುತ್ತಿದ್ದ ವಿದ್ಯಾರ್ಥಿನಿ (Student) ಇಂದು ಬೆಳಗ್ಗೆ ಸ್ವತಂತ್ರ್ಯಪಾಳ್ಯದಲ್ಲಿರುವ ಮನೆಯಿಂದ ಕಾಲೇಜಿಗೆ ತೆರಳಿದ್ದಳು.

     

    ಮಧ್ಯಾಹ್ನ ಕಾಲೇಜಿನಿಂದ (College) ಪರೀಕ್ಷೆ ಮುಗಿಸಿ ಮನೆಗೆ ಬರುತ್ತಿದ್ದಳು. ಮಲ್ಲೇಶ್ವರದ ಮಂತ್ರಿ ಮಾಲ್ ಬಳಿ ಇಳಿದು ರೈಲ್ವೆ ಟ್ರ‍್ಯಾಕ್ ಬಳಿ ಹೋಗ್ತಿದ್ದಾಗ ಹಿಂದಿನಿಂದ ಬಂದು ವಿಘ್ನೇಶ್‌ ಕತ್ತುಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದನೆ. ಇದನ್ನೂ ಓದಿ:  ಚಿಕ್ಕಮಗಳೂರು | ಸಂಸಾರದಲ್ಲಿ ಕಲಹ – ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ

    ಯಾಮಿನಿಯ ಹಿಂದೆ ಪ್ರಿಯಕರ ವಿಘ್ನೇಶ್‌ ಬಿದ್ದಿದ್ದ. ವಿಫ್ನೇಶ್‌ ಪ್ರೀತಿಯನ್ನು ಯಾಮಿನಿ ತಿರಸ್ಕರಿಸಿದ್ದಳು. ಇಂದು ಮನೆಗೆ ಹೋಗುತ್ತಿದ್ದಾಗ ವಿಘ್ನೇಶ್‌ ಯಾಮಿನಿಯನ್ನು ಹಿಂಬಾಲಿಸಿದ್ದಾನೆ. ಇದನ್ನೂ ಓದಿ:  ಮಹೇಂದ್ರ ರೆಡ್ಡಿಗೆ ಬೇರೆ ಯುವತಿ ಜೊತೆ ಸಂಬಂಧ ಶಂಕೆ – ವೈದ್ಯೆ ಕೃತಿಕಾ ಸಾವಿನ ಹಿಂದೆ ಅವಳ ನೆರಳು?

    ರೈಲ್ವೇ ಟ್ರ‍್ಯಾಕ್ ಬಳಿ ಬರುವಾಗ ಕಣ್ಣಿಗೆ ಖಾರದ ಪುಡಿ ಹಾಕಿ ಮನಸೋ ಇಚ್ಚೆ ದಾಳಿ ನಡೆಸಿದ್ದಾನೆ. ಕುತ್ತಿಗೆ ಹಾಗೂ ಮುಖದ ಭಾಗಕ್ಕೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದರಿಂದ ತೀವ್ರ ರಕ್ತಸ್ರಾವದಿಂದ ಯಾಮಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಸ್ಥಳಕ್ಕೆ ಆಗಮಿಸಿದ ಶ್ರೀರಾಂಪುರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

    ಇದೇ ಸ್ವತಂತ್ರ್ಯಪಾಳ್ಯದ ನಿವಾಸಿ ವಿಘ್ನೇಶ್ ಕೆಲ ವರ್ಷಗಳಿಂದ ಯಾಮಿನಿ ಪ್ರಿಯ ಹಿಂದೆ ಬಿದ್ದು ಪ್ರೀತಿ ಮಾಡುವಂತೆ ಒತ್ತಾಯಿಸುತ್ತಿದ್ದ.  ಒಮ್ಮೆ ಈಕೆಗೆ ಬಲವಂತವಾಗಿ ತಾಳಿ ಕೂಡ ಕಟ್ಟಿದ್ದ. ಇಷ್ಟವಿಲ್ಲದ ಯಾಮಿನಿ ಪಾಗಲ್ ಪ್ರೇಮಿಯ ತಾಳಿ ಕಿತ್ತೆಸೆದು ಈತನನ್ನ ದೂರ ಇಟ್ಟಿದ್ದ. ಈತನ ಮೇಲೆ ಈ ಹಿಂದೆ  ಮಾರ್ಕೆಟ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿತ್ತು.

  • ಕೊಡಗಿನಲ್ಲಿ ಮಳೆ ಆರ್ಭಟ – ಮಹಾವಿದ್ಯಾಲಯಗಳಿಗೆ 2 ದಿನ ರಜೆ ಘೋಷಣೆ

    ಕೊಡಗಿನಲ್ಲಿ ಮಳೆ ಆರ್ಭಟ – ಮಹಾವಿದ್ಯಾಲಯಗಳಿಗೆ 2 ದಿನ ರಜೆ ಘೋಷಣೆ

    ಕೊಡಗು: ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂಧ ಮಳೆ ಬಿರುಸುಗೊಂಡಿದೆ. ಜಿಲ್ಲೆಯ ಕಾವೇರಿ ನದಿಯ ನೀರಿನ ಮಟ್ಟ ಏರಿಕೆಯಾಗುತ್ತಿದ್ದರೆ, ಮತ್ತೊಂದೆಡೆ ಅವಾಂತರಗಳು ಮುಂದುವರಿದು ಜನಜೀವನ ಅಸ್ತವ್ಯಸ್ತಗೊಂಡಿದೆ. ಹೀಗಾಗಿ ಮೇ 26, 27ರಂದು ಎರಡು ದಿನಗಳ ಕಾಲ ಮಹಾವಿದ್ಯಾಲಯ ವ್ಯಾಪ್ತಿಗೆ ಒಳಪಡುವ ಎಲ್ಲಾ ಘಟಕ ಸರ್ಕಾರಿ ಹಾಗೂ ಸಂಯೋಜಿತ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

    ಕೊಡಗು ಜಿಲ್ಲಾಡಳಿತದೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಮಹಾವಿದ್ಯಾಲಯಗಳಿಗೆ ಎರಡು ದಿನ ರಜೆ ಘೋಷಿಸಿ ಕೊಡಗು ವಿವಿ ಕುಲಪತಿ ಡಾ.ಅಶೋಕ್ ಸಂಗಪ್ಪ ಆಲೂರ ಆದೇಶ ಹೊರಡಿಸಿದ್ದಾರೆ.

    ಮಳೆಯ ಆರ್ಭಟದಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಅಲ್ಲದೇ ಕಾವೇರಿ ಉಗಮಸ್ಥಾನ ತಲಕಾವೇರಿ ಭಾಗಮಂಡದಲ್ಲಿ ಧಾರಕಾರವಾಗಿ ಮಳೆಯಾಗುತ್ತಿರುವ ಪರಿಣಾಮದಿಂದ ತ್ರಿವೇಣಿ ಸಂಗಮದಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ತ್ರಿವೇಣಿ ಸಂಗಮದ ಉದ್ಯಾನ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಅಲ್ಲದೇ ಕ್ಷಣಕ್ಕೂ ಕ್ಷಣಕ್ಕೂ ಕಾವೇರಿ ನದಿಯ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ನಾಪೋಕ್ಲು- ಅಯ್ಯಂಗೇರಿ – ಸಣ್ಣಪುಲಿಕೋಟ್ಟು ರಸ್ತೆ ಸಂಪರ್ಕ ಕಡತಗೊಳ್ಳುವ ಭೀತಿ ಎದುರಾಗಿದೆ. ಆದ್ರೆ ಈ ಬಾರಿ ಮೇಲುಸೇತುವೆ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕಾವೇರಿ ಭಕ್ತರು ಹಾಗೂ ಭಾಗಮಂಡಲದ ಗ್ರಾಮೀಣ ಭಾಗದ ಜನರು ಸೇತುವೆ ಮೇಲೆ ಸಂಚಾರ ಮಾಡುತ್ತಿದ್ದಾರೆ.

    ಇನ್ನೂ ಕೊಡಗು ಜಿಲ್ಲೆಯ ಹಲವೆಡೆ ಮಳೆ ಅರ್ಭಟದಿಂದ ಗ್ರಾಮೀಣ ಪ್ರದೇಶಗಳಲ್ಲಿ ಬೃಹತ್ ಮರಗಳು ಹಾಗೂ ವಿದ್ಯುತ್ ಕಂಬಗಳು ಧರಶಾಹಿಯಾಗುತ್ತಿದ್ದು ಕಳೆದ ಎರಡು ಮೂರು ದಿನಗಳಿಂದ ಗ್ರಾಮೀಣ ಭಾಗದ ಜನರು ಕತ್ತಲೆಯಲ್ಲೇ ಬದುಕು ಕಳೆಯುತ್ತಿದ್ದಾರೆ. ನಿರಂತರವಾಗಿ ಮಳೆಯಾಗುತ್ತಿರುವ ಪರಿಣಾಮದಿಂದ ಕಾವೇರಿ ನದಿ ನೀರಿನ ಮಟ್ಟ ನಿಧಾನವಾಗಿ ಏರಿಕೆಯಾಗುತ್ತಿದೆ. ಇನ್ನೂ ವಿಪರೀತ ಗಾಳಿ ಮಳೆಯಿಂದ ಸೆಸ್ಕ್ ಮಡಿಕೇರಿ ವಿಭಾಗದಲ್ಲಿ ಸುಮಾರು 197 ವಿದ್ಯುತ್ ಕಂಬಗಳಿಗೆ ಹಾನಿ ಉಂಟಾಗಿದೆ.

  • Tamil Nadu | ಕಳ್ಳತನದ ಆರೋಪ – ಸೀನಿಯರ್ ಮೇಲೆ ಜೂನಿಯರ್ಸ್ ಹಲ್ಲೆ, 13 ವಿದ್ಯಾರ್ಥಿಗಳು ಸಸ್ಪೆಂಡ್

    Tamil Nadu | ಕಳ್ಳತನದ ಆರೋಪ – ಸೀನಿಯರ್ ಮೇಲೆ ಜೂನಿಯರ್ಸ್ ಹಲ್ಲೆ, 13 ವಿದ್ಯಾರ್ಥಿಗಳು ಸಸ್ಪೆಂಡ್

    ಚೆನ್ನೈ: ಹಿರಿಯ ವಿದ್ಯಾರ್ಥಿಯ (Senior) ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ 13 ಪದವಿಪೂರ್ವ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದ ಘಟನೆ ತಮಿಳುನಾಡಿನ (Tamil Nadu) ಕೊಯಮತ್ತೂರಿನ (Coimbatore) ಕಾಲೇಜೊಂದರಲ್ಲಿ ನಡೆದಿದೆ.

    ಮಾರ್ಚ್ 20 ರಂದು ಕ್ಯಾಂಪಸ್‌ನಲ್ಲಿ ಕಳ್ಳತನ ಮಾಡಿದ ಆರೋಪದ ಮೇಲೆ ಜೂನಿಯರ್‌ಗಳು ಸೀನಿಯರ್ ಮೇಲೆ ಹಲ್ಲೆ ನಡೆಸಿದ್ದಾರೆ. ಸಂಸ್ಥೆಯ ಉಪಮುಖ್ಯ ವಾರ್ಡನ್ ಡಾ. ಮಹೇಶ್ವರನ್ ಘಟನೆಯನ್ನು ದೃಢಪಡಿಸಿದ್ದು, ಕಾಲೇಜು ಆಡಳಿತ ಮಂಡಳಿ ಈ ಕುರಿತು ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಜಸ್ಥಾನದಲ್ಲೂ ಕರ್ನಾಟಕ ಮಾದರಿ ಪಿಎಸ್‌ಐ ಹಗರಣ – ತಪ್ಪು ರಜಾ ಚೀಟಿ ಬರೆದು ಸಿಕ್ಕಿಬಿದ್ದ ಟಾಪರ್!

    ಘಟನೆ ಸಂಬಂಧ ಪ್ರತಿಕ್ರಿಯಿಸಿದ ಮಹೇಶ್ವರನ್, ಈ ವಿಷಯದ ಬಗ್ಗೆ ತನಿಖೆ ನಡೆಸಲು ಪ್ರಾಂಶುಪಾಲರು ಮತ್ತು ಮುಖ್ಯ ವಾರ್ಡನ್ ತನಿಖಾ ಸಮಿತಿಯನ್ನು ರಚಿಸಿದ್ದಾರೆ. ಘಟನೆಯಲ್ಲಿ ಭಾಗಿಯಾಗಿದ್ದ 13 ವಿದ್ಯಾರ್ಥಿಗಳನ್ನು ಗುರುತಿಸಿ ಸಸ್ಪೆಂಡ್ ಮಾಡಲಾಗಿದೆ. ಪೊಲೀಸರಿಗೆ ಸಹ ಈ ಕುರಿತು ಮಾಹಿತಿ ನೀಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಹೇಮಾವತಿ ಕೆನಾಲ್ ಕದನ | ಮಂತ್ರಿ ಮಗನಿಗೆ ಬೆದರಿಕೆ ಹಾಕೋಕಾಗುತ್ತಾ? – ರಾಜಣ್ಣ ಪುತ್ರನಿಗೆ ಕುಣಿಗಲ್‌ ರಂಗನಾಥ್‌ ತಿರುಗೇಟು

    ಇನ್ನು ಅಮಾನತುಗೊಂಡ ವಿದ್ಯಾರ್ಥಿಗಳು ಮತ್ತು ಅವರ ಪೋಷಕರನ್ನು ಮಾರ್ಚ್ 24ರಂದು ವಿಚಾರಣೆಗೆ ಹಾಜರಾಗುವಂತೆ ನಿರ್ದೇಶಿಸಲಾಗಿದೆ. ಕೊಯಮತ್ತೂರು ಜಿಲ್ಲಾ ಪೊಲೀಸರು ಕ್ರಿಮಿನಲ್ ಕ್ರಮವನ್ನು ಸಹ ಪ್ರಾರಂಭಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಕಲಬುರಗಿಯಲ್ಲಿ ಬಾಣಂತಿ, ನವಜಾತ ಶಿಶು ಸಾವು – ಕುಟುಂಬಸ್ಥರಿಂದ ಆಸ್ಪತ್ರೆ ಗಾಜು ಪುಡಿ ಪುಡಿ, ಪೀಠೋಪಕರಣ ಧ್ವಂಸ

  • ಉಪನ್ಯಾಸಕನ ಮೇಲೆ ವಿದ್ಯಾರ್ಥಿ, ಪೋಷಕರಿಂದ ಹಲ್ಲೆ – ದೂರು ದಾಖಲು

    ಉಪನ್ಯಾಸಕನ ಮೇಲೆ ವಿದ್ಯಾರ್ಥಿ, ಪೋಷಕರಿಂದ ಹಲ್ಲೆ – ದೂರು ದಾಖಲು

    ಶಿವಮೊಗ್ಗ: ಹಾಜರಾತಿ ಕೊರತೆಯಿಂದ ಪರೀಕ್ಷೆ ಬರೆಯಲು ಅನುಮತಿ ಕೊಡಲಿಲ್ಲ ಎನ್ನುವ ಕಾರಣಕ್ಕೆ ವಿದ್ಯಾರ್ಥಿ (Student) ಹಾಗೂ ಆತನ ಪೋಷಕರು ಕಾಲೇಜಿನಲ್ಲಿಯೇ ಉಪನ್ಯಾಸಕರೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಸಾಗರದ (Sagar) ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ (College) ನಡೆದಿದೆ.

    ಹಲ್ಲೆಗೊಳಗಾದ ಉಪನ್ಯಾಸಕರನ್ನು ಪ್ರೊ.ರಾಜು ಎಂದು ಗುರುತಿಸಲಾಗಿದೆ. ಇನ್ನೂ ರಾಜು ಅವರೇ ಮೊದಲು ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವಿದ್ಯಾರ್ಥಿಯ ಪೋಷಕ ವಿಜಯ್‍ಕುಮಾರ್ ಆರೋಪಿಸಿದ್ದಾರೆ.

    ಘಟನೆ ಕುರಿತು ಸಾಗರ ಪಟ್ಟಣ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿದೆ. ಹಲ್ಲೆಗೊಳಗಾದ ಉಪನ್ಯಾಸಕರನ್ನು ಸಾಗರದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

  • ಫೆಂಗಲ್ ಚಂಡಮಾರುತದ ಎಫೆಕ್ಟ್ – ಡಿ.2ರಂದು ಚಿಕ್ಕಬಳ್ಳಾಪುರ, ಕೋಲಾರದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ಫೆಂಗಲ್ ಚಂಡಮಾರುತದ ಎಫೆಕ್ಟ್ – ಡಿ.2ರಂದು ಚಿಕ್ಕಬಳ್ಳಾಪುರ, ಕೋಲಾರದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ಚಿಕ್ಕಬಳ್ಳಾಪುರ/ಕೋಲಾರ: ಫೆಂಗಲ್ ಚಂಡಮಾರುತದ (Cyclone Fengal) ಪರಿಣಾಮ ಜಿಟಿ ಜಿಟಿ ಮಳೆಯಾಗುತ್ತಿದ್ದು, ವಿಪರೀತ ಚಳಿ ಇರುವ ಹಿನ್ನೆಲೆಯಲ್ಲಿ ಸೋಮವಾರ (ಡಿ.2 ರಂದು) ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಶಾಲಾ (School) ಕಾಲೇಜುಗಳಿಗೆ (College) ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಅವರು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.

    ಕೋಲಾರ (Kolar) ಜಿಲ್ಲೆಯಲ್ಲೂ ಸಹ ಕಳೆದ ಎರಡು ದಿನಗಳಿಂದ‌ ನಿರಂತರ ಮಳೆ ಹಾಗೂ ಶೀತ ಗಾಳಿ ಬೀಸುತ್ತಿರುವ ಹಿನ್ನೆಲೆ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಸಿ ಜಿಲ್ಲಾಧಿಕಾರಿ ಅಕ್ರಂ ಪಾಷ ರಜೆ ಆದೇಶ ಹೊರಡಿಸಿದ್ದಾರೆ.

    ಮಕ್ಕಳ ಆರೋಗ್ಯದ ಹಿತ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಿ ಆದೇಶಿಸಿಸಲಾಗಿದೆ. ಈ ರಜೆಯನ್ನು ಮುಂದಿನ ದಿನಗಳ ಯಾವುದಾದರೂ ರಜೆಯ ದಿನ ತರಗತಿ ನಡೆಸುವ ಮೂಲಕ ಸರಿದೂಗಿಸುವ ಷರತ್ತಿನೊಂದಿಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

  • ಬಾಂಗ್ಲಾದಲ್ಲಿ ಈಗ ವಿದ್ಯಾರ್ಥಿಗಳ ಮಧ್ಯೆ ಘರ್ಷಣೆ, ಮೂವರು ಸಾವು – ಆಸ್ಪತ್ರೆಗೆ 35 ಕೋಟಿ ನಷ್ಟ

    ಬಾಂಗ್ಲಾದಲ್ಲಿ ಈಗ ವಿದ್ಯಾರ್ಥಿಗಳ ಮಧ್ಯೆ ಘರ್ಷಣೆ, ಮೂವರು ಸಾವು – ಆಸ್ಪತ್ರೆಗೆ 35 ಕೋಟಿ ನಷ್ಟ

    – ಆಸ್ಪತ್ರೆಯ ದಿಂಬು, ಹಾಸಿಗೆ, ಫ್ಯಾನ್‌ ಎತ್ತಿಕೊಂಡು ಹೋದ ವಿದ್ಯಾರ್ಥಿಗಳು
    – ಸಾಮಾಜಿಕ ಜಾಲತಾಣದಲ್ಲಿ ವಿಡಿಯೋಗಳು ವೈರಲ್‌

    ಢಾಕಾ: ಬಾಂಗ್ಲಾದೇಶದಲ್ಲಿ (Bangladesh) ಮತ್ತೆ ವಿದ್ಯಾರ್ಥಿಗಳು ಬೀದಿಗೆ ಇಳಿದಿದ್ದಾರೆ. ಈ ಬಾರಿ ಆಸ್ಪತ್ರೆಯ (Hospital) ವಿರುದ್ಧ ನಡೆಸಿದ ಪ್ರತಿಭಟನೆ (Protest) ಕೊನೆಗೆ ಹಲವು ಕಾಲೇಜುಗಳ ವಿದ್ಯಾರ್ಥಿಗಳ ಮಧ್ಯೆ ತಿರುಗಿ ಘರ್ಷಣೆ ಉಂಟಾಗಿ ಮೂವರು ಸಾವನ್ನಪ್ಪಿದ್ದಾರೆ.

    ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿ ಸಾವಪ್ಪಿದ್ದಕ್ಕೆ ವಿದ್ಯಾರ್ಥಿಗಳು ಆಸ್ಪತ್ರೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ವಾಹನಗಳು, ಲ್ಯಾಬ್‌ಗಳನ್ನು ಧ್ವಂಸ ಮಾಡಿ ಸುಮಾರು 35 ಕೋಟಿ ರೂ. ಹಾನಿ ಮಾಡಿದ್ದಾರೆ.

    ಡೆಂಗ್ಯೂನಿಂದ ಬಳಲುತ್ತಿದ್ದ 12ನೇ ತರಗತಿಯ ವಿದ್ಯಾರ್ಥಿ ಅಭಿಜಿತ್‌ ನ.16 ರಂದು ಆಸ್ಪತ್ರೆಗೆ ದಾಖಲಾಗಿದ್ದ. ನ.18 ರಂದು ಚಿಕಿತ್ಸೆ ಫಲಕಾರಿಯಾಗದೇ ಆತ ಸಾವನ್ನಪ್ಪಿದ್ದ. ಇದನ್ನೂ ಓದಿ: ಮತ್ತೆ ಕೆಣಕಿದ ಹಿಜ್ಬುಲ್ಲಾ – 250 ರಾಕೆಟ್‌,‌ ಡೆಡ್ಲಿ ಡ್ರೋನ್‌ಗಳಿಂದ ಇಸ್ರೇಲ್‌ ಮೇಲೆ ಭೀಕರ ದಾಳಿ

    ನ. 19 ರಂದು ಅವನ ಸ್ನೇಹಿತರಾದ ಸಿಯಾಮ್ ಮತ್ತು ಅಫ್ತಾಬ್ ಅವರು ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ನೀಡದ್ದಕ್ಕೆ ಅಭಿಜಿತ್‌ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಪ್ರಕಟಿಸಿದ್ದರು. ಈ ಪೋಸ್ಟ್‌ ವೈರಲ್‌ ಆಗುತ್ತಿದ್ದಂತೆ ಹಲವು ವಿದ್ಯಾರ್ಥಿಗಳು ಆಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಿದರು.

    ಭಾನುವಾರ ಈ ಪ್ರತಿಭಟನೆ ವಿಕೋಪಕ್ಕೆ ಹೋಗಿದೆ. ಸುಹ್ರಾವರ್ದಿ ಕಾಲೇಜಿನ ಮೇಲೆ ಬೇರೆ ಕಾಲೇಜಿನ ವಿದ್ಯಾರ್ಥಿಗಳು ದಾಳಿ ಮಾಡಿ ದಾಂಧಲೆ ಮಾಡಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಢಾಕಾದ ಕಾಲೇಜುಗಳು, ಹಾಸ್ಟೆಲ್‌ಗಳು ಮತ್ತು ಪೂಜಾ ಸ್ಥಳಗಳ ಸುತ್ತಲೂ ಈಗ ಸೇನೆಯನ್ನು ನಿಯೋಜಿಸಲಾಗಿದೆ.

    ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಸುಹ್ರವರ್ದಿ ಕಾಲೇಜು ಪ್ರಾಂಶುಪಾಲ ಕಾಕೋಲಿ ಮುಖರ್ಜಿ, ಸುಮಾರು 35 ಕೋಟಿ ರೂ.ನಷ್ಟವಾಗಿದೆ. ವಿದ್ಯಾರ್ಥಿಗಳಿಗೆ ನೈತಿಕ ಮೌಲ್ಯವನ್ನು  ಕಲಿಸದ್ದಕ್ಕೆ ಪ್ರಾಂಶುಪಾಲನಾಗಿ ನನ್ನನ್ನು ಮತ್ತು ಶಿಕ್ಷಕರನ್ನು ದೂಷಿಸುತ್ತೇನೆ. ನಮ್ಮ ಕಾಲೇಜಿನ ವಿದ್ಯಾರ್ಥಿಗಳೇ ಪುಸ್ತಕ, ಹಣ, ಪ್ರಮಾಣಪತ್ರ, ದಾಖಲೆ, ದಿಂಬು, ಹಾಸಿಗೆಗಳನ್ನು  ದೋಚಿ ಸಂಭ್ರಮಿಸಿದರು ಎಂದು ಬೇಸರ ವ್ಯಕ್ತಪಡಿಸಿದರು.


    ಅಭಿಜಿತ್ ಸಾವಿಗೆ ಸಂಬಂಧಿಸಿದಂತೆ ನವೆಂಬರ್ 21 ರಂದು ನಡೆದ ಪ್ರತಿಭಟನೆಯಲ್ಲಿ ಸುಹ್ರವರ್ದಿ ಕಾಲೇಜು ಮತ್ತು ಕಬಿ ನಜ್ರುಲ್ ಕಾಲೇಜು ವಿದ್ಯಾರ್ಥಿಗಳು ಮುಲ್ಲಾ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಮುಲ್ಲಾ ಕಾಲೇಜು, ಢಾಕಾ ಕಾಲೇಜು, ಸಿಟಿ ಕಾಲೇಜು, ನೊಟ್ರೆ ಡೇಮ್ ಕಾಲೇಜು ಸೇರಿದಂತೆ ಕಾಲೇಜುಗಳ ಸಾವಿರಾರು ವಿದ್ಯಾರ್ಥಿಗಳು ಮತ್ತೆ ಆಸ್ಪತ್ರೆಯ ಮುಂದೆ ಜಮಾಯಿಸಿ ವೈದ್ಯಕೀಯ ವಿದ್ಯಾರ್ಥಿಯ ಸಾವಿನ ವಿರುದ್ಧ ಪ್ರತಿಭಟನೆ ನಡೆಸಿದರು. ಈ ವೇಳೆ ಘರ್ಷಣೆಯಲ್ಲಿ 30 ಮಂದಿ ಗಾಯಗೊಂಡಿದ್ದರು.

     

  • ಬೆಂಗ್ಳೂರಿನ ಮೂರು ಕಾಲೇಜುಗಳಿಗೆ ಬಾಂಬ್ ಬೆದರಿಕೆ – ಪೊಲೀಸರಿಂದ ತೀವ್ರ ಶೋಧ

    ಬೆಂಗ್ಳೂರಿನ ಮೂರು ಕಾಲೇಜುಗಳಿಗೆ ಬಾಂಬ್ ಬೆದರಿಕೆ – ಪೊಲೀಸರಿಂದ ತೀವ್ರ ಶೋಧ

    ಬೆಂಗಳೂರು: ನಗರದ (Bengaluru) ಮೂರು ಖಾಸಗಿ ಕಾಲೇಜುಗಳಿಗೆ (College) ಕಿಡಿಗೇಡಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ (Bomb Threat) ಹಾಕಿದ್ದಾರೆ.

    ಮಧ್ಯಾಹ್ನ 1 ಗಂಟೆ ಸುಮಾರಿಗೆ ಕಾಲೇಜುಗಳಿಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಬಿಎಮ್‍ಎಸ್, ರಾಮಯ್ಯ, ಬಿಐಟಿ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಇದನ್ನೂ ಓದಿ: ‌ದರ್ಶನ್‌ಗೆ ಇವತ್ತೂ ಸಿಗಲಿಲ್ಲ ಬೇಲ್‌ – ಜಾಮೀನು ಅರ್ಜಿ ವಿಚಾರಣೆ ಶನಿವಾರಕ್ಕೆ ಮುಂದೂಡಿಕೆ

    ಸದಾಶಿವನಗರ ಠಾಣಾ ವ್ಯಾಪ್ತಿಯಲ್ಲಿರೋ ಎಮ್.ಎಸ್ ರಾಮಯ್ಯ ಕಾಲೇಜು, ಹನುಮಂತ ನಗರ ಠಾಣಾ ವ್ಯಾಪ್ತಿಯಲ್ಲಿರೋ ಬಿಎಮ್‍ಎಸ್ ಹಾಗೂ ಬಸವನಗುಡಿಯ ಬಿಐಟಿ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಬಂದಿದೆ.

    ಕಾಲೇಜುಗಳಲ್ಲಿ ಸ್ಥಳೀಯ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಮತ್ತು ಶ್ವಾನ ದಳದಿಂದ ಪರಿಶೀಲನೆ ನಡೆಯುತ್ತಿದೆ. ಕಸದ ಡಬ್ಬಿ, ಲಿಫ್ಟ್, ಮೆಟ್ಟಿಲು, ಬ್ಯಾಗ್‍ಗಳನ್ನು ಪೊಲೀಸರು ತಪಾಸಣೆ ಮಾಡುತ್ತಿದ್ದಾರೆ.

    ಕಳೆದ 28ರಂದು ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೆಲ್‍ಗೆ ಐಪಿಎಸ್ ಅಧಿಕಾರಿ ಹೆಸರಲ್ಲಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿತ್ತು. ಇದನ್ನೂ ಓದಿ: 5,600 ಕೋಟಿ ಮೌಲ್ಯದ ಕೊಕೇನ್ ಹಿಂದೆ ಕಾಂಗ್ರೆಸ್ ನಾಯಕನ ಕೈವಾಡ – ನಾಚಿಕೆಗೇಡು ಎಂದ ಅಮಿತ್ ಶಾ

  • ಆಂಧ್ರ ಕಾಲೇಜಿನ ವಿದ್ಯಾರ್ಥಿನಿಯರ ವಾಶ್ ರೂಮ್‍ನಲ್ಲಿ ಕ್ಯಾಮೆರಾ ಇಟ್ಟು ವಿಡಿಯೋ ಮಾರಾಟ – ಆರೋಪಿ ಅರೆಸ್ಟ್

    ಆಂಧ್ರ ಕಾಲೇಜಿನ ವಿದ್ಯಾರ್ಥಿನಿಯರ ವಾಶ್ ರೂಮ್‍ನಲ್ಲಿ ಕ್ಯಾಮೆರಾ ಇಟ್ಟು ವಿಡಿಯೋ ಮಾರಾಟ – ಆರೋಪಿ ಅರೆಸ್ಟ್

    – ಹಣಕ್ಕಾಗಿ 300 ಫೋಟೋ, ವಿಡಿಯೋ ಮಾರಾಟ

    ಅಮರಾವತಿ: ಆಂಧ್ರಪ್ರದೇಶದ (Andhra Pradesh) ಇಂಜಿನಿಯರಿಂಗ್ ಕಾಲೇಜೊಂದರ (College) ವಿದ್ಯಾರ್ಥಿನಿಯರ ಹಾಸ್ಟೆಲ್‍ನ ವಾಶ್ ರೂಂನಲ್ಲಿ ಹಿಡನ್ ಕ್ಯಾಮೆರಾ (Hidden Camera) ಪತ್ತೆಯಾಗಿದ್ದು, ವಿಡಿಯೋ ಸೆರೆ ಹಿಡಿದು ಮಾರಾಟ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಕೃಷ್ಣನ್ ಜಿಲ್ಲೆಯ ಇಂಜಿನಿಯರಿಂಗ್ ಕಾಲೇಜೊಂದರಲ್ಲಿ ಈ ಪ್ರಕರಣ ನಡೆದಿದ್ದು, ವಿದ್ಯಾರ್ಥಿಗಳು ಮತ್ತು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

    ಗುರುವಾರ ಸಂಜೆ ವಾಶ್‍ರೂಮ್‍ನಲ್ಲಿ ಮುಚ್ಚಿಟ್ಟಿದ್ದ ವಸ್ತುವನ್ನು ವಿದ್ಯಾರ್ಥಿನಿ ಗಮನಿಸಿದ್ದಾಳೆ. ಆ ವಸ್ತುವನ್ನು ನೋಡಿದಾಗ ಕ್ಯಾಮೆರಾ ಇರುವುದು ಪತ್ತೆಯಾಗಿದೆ. ಕ್ಯಾಮೆರಾ ಪರಿಶೀಲಿಸಿದಾಗ ವಿಡಿಯೋಗಳನ್ನು ನೋಡಿ ಪ್ರತಿಭಟನೆ ನಡೆಸಿದ್ದಾರೆ.

    ಪ್ರಕರಣಕ್ಕೆ ಸಂಬಂಧ ವಿದ್ಯಾರ್ಥಿಗಳ ಹಾಸ್ಟೆಲ್‍ನ ಇಂಜಿನಿಯರಿಂಗ್ ಅಂತಿಮ ವರ್ಷದ ವಿದ್ಯಾರ್ಥಿ ವಿಜಯ್ ಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ಲ್ಯಾಪ್‍ಟಾಪ್ ವಶಪಡಿಸಿಕೊಳ್ಳಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ವಾಶ್‍ರೂಮ್‍ನಲ್ಲಿರುವ ವಿದ್ಯಾರ್ಥಿನಿಯರ 300ಕ್ಕೂ ಹೆಚ್ಚು ಫೋಟೋಗಳು ಮತ್ತು ವೀಡಿಯೊಗಳು ಸೋರಿಕೆಯಾಗಿದ್ದು, ಹಣ ಕೊಟ್ಟು ಕೆಲವು ವಿದ್ಯಾರ್ಥಿಗಳು ಆರೋಪಿ ವಿಜಯ್‍ನಿಂದ ವೀಡಿಯೊಗಳನ್ನು ಖರೀದಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

  • ನಿರಂತರ ಮಳೆ, ಶೀತಗಾಳಿ – ಧಾರವಾಡ ಜಿಲ್ಲಾದ್ಯಂತ 2 ದಿನ ಶಾಲಾ ಕಾಲೇಜುಗಳಿಗೆ ರಜೆ

    ನಿರಂತರ ಮಳೆ, ಶೀತಗಾಳಿ – ಧಾರವಾಡ ಜಿಲ್ಲಾದ್ಯಂತ 2 ದಿನ ಶಾಲಾ ಕಾಲೇಜುಗಳಿಗೆ ರಜೆ

    ಧಾರವಾಡ: ಜಿಲ್ಲೆಯಾದ್ಯಂತ ನಿರಂತರ ಮಳೆ (Rain) ಮತ್ತು ತಂಪು ಗಾಳಿ ಬೀಸುತ್ತಿರುವುದರಿಂದ ಜುಲೈ 25 ಮತ್ತು 26 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ (Holiday) ಘೋಷಿಸಿ ಧಾರವಾಡ ಜಿಲ್ಲಾಧಿಕಾರಿ (Dharwad DC) ದಿವ್ಯ ಪ್ರಭು (Divya Prabhu) ಆದೇಶಿಸಿದ್ದಾರೆ.

    ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾಧಿಕಾರಿ, ಜಿಲ್ಲೆಯ ಬಹುತೇಕ ಕಡೆಗೆ ನಿರಂತರವಾಗಿ ಮಳೆ ಆಗುತ್ತಿದೆ ಮತ್ತು ತಂಪುಗಾಳಿ ಬೀಸುತ್ತಿದೆ. ಮಕ್ಕಳ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಶಾಲಾ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಜುಲೈ ತಿಂಗಳು ಸಂತೃಪ್ತಿಯಾಗಿದೆ – ಆಗಸ್ಟ್‌ನಲ್ಲಿ 45 ಟಿಎಂಸಿ ನೀರು ಹರಿಸುವಂತೆ ತಮಿಳುನಾಡು ಒತ್ತಾಯ

     

    ಈ ರಜಾ ದಿನಗಳನ್ನು ಮುಂದಿನ ಸಾರ್ವಜನಿಕ ರಜಾ ದಿನಗಳಂದು ಹೆಚ್ಚುವರಿ ವರ್ಗಗಳನ್ನು ನಡೆಸುವ ಮೂಲಕ ಹೊಂದಾಣೆಕೆ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸೂಚಿಸಿದ್ದಾರೆ.  ಇದನ್ನೂ ಓದಿ: ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿ – ಕಾವೇರಿ ಕೊಳ್ಳದ ಜನರಿಗೆ ಪ್ರವಾಹದ ಆತಂಕ