Tag: colleges

  • ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ – ಜೂ.17ರಂದು ಶಾಲೆ, ಕಾಲೇಜುಗಳಿಗೆ ರಜೆ

    ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ – ಜೂ.17ರಂದು ಶಾಲೆ, ಕಾಲೇಜುಗಳಿಗೆ ರಜೆ

    ಉಡುಪಿ: ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು (Rain), ರೆಡ್ ಅಲರ್ಟ್ ಘೋಷಣೆಯಾಗಿದೆ. ಇದೀಗ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆ (School), ಪಿಯುಸಿ (College), ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

    ಉಡುಪಿ (Udupi) ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಬೆನ್ನಲ್ಲೇ ಮುನ್ನೆಚ್ಚರಿಕೆಯ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಪಿಯುಸಿ, ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಆದೇಶ ನೀಡಿದ್ದಾರೆ. ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ಭಾರೀ ಮಳೆ – 8 ತಾಲೂಕುಗಳ ಶಾಲೆಗಳಿಗೆ ಜೂ.17 ರಂದು ರಜೆ

    ಜಿಲ್ಲೆಯ ಹಲವೆಡೆ ನದಿಗಳು ತುಂಬಿ ಹರಿಯುತ್ತಿದ್ದು, ಬೈಂದೂರಿನ (Baindoor) ಗ್ರಾಮಗಳ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಕೆಲವು ಗ್ರಾಮಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ಇದನ್ನೂ ಓದಿ: ಇರಾನ್‌ ಸರ್ಕಾರಿ ವಾಹಿನಿ ಮೇಲೆ ಬಾಂಬ್‌ ದಾಳಿ – ಲೈವ್‌ನಿಂದಲೇ ಓಡಿ ಹೋದ ನಿರೂಪಕಿ

    ಇನ್ನು ಬೈಂದೂರು ತಾಲೂಕಿನಲ್ಲಿ ಎಡೆಬಿಡದೆ ಮಳೆಯಾಗಿದ್ದು, ಸೌಪರ್ಣಿಕಾ, ಸುಮನಾವತಿ, ಸಂಕದ ಗುಂಡಿ, ಎಡ ಮಾವಿನ ಹೊಳೆ ತುಂಬಿ ಹರಿದಿದೆ. ನದಿ ಪಾತ್ರ, ನಾಡ, ನಾವುಂದ, ಮರವಂತೆ, ಬಡಾಕೆರೆ, ಚಿಕ್ಕಳ್ಳಿ, ಪಡುಕೋಣೆ, ಆನಗಳ್ಳಿ, ಹಳಗೇರಿ, ಬಿಜೂರಿ ಪ್ರದೇಶಗಳಲ್ಲಿ ನೆರೆಯ ವಾತಾವರಣ ಸೃಷ್ಟಿಯಾಗಿದೆ. ಒಟ್ಟಾರೆಯಾಗಿ ವರುಣಾರ್ಭಟಕ್ಕೆ ಜಿಲ್ಲೆಯಾದ್ಯಂತ ಜನ ಜೀವನ ಅಸ್ತವ್ಯಸ್ತವಾಗಿದೆ.

  • ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ 2 ದಿನ ರಜೆ ಘೋಷಣೆ

    ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ 2 ದಿನ ರಜೆ ಘೋಷಣೆ

    – ಮೈಸೂರಿನಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ರಜೆ

    ಮಂಗಳೂರು: ಮುಂಗಾರು ಮಳೆ (Monsoon Rain) ಕರ್ನಾಟಕ ಪ್ರವೇಶಿಸಿದೆ. ಅವಧಿ ಪೂರ್ವ ನೈಋತ್ಯ ಮುಂಗಾರು ಮಳೆ ರಾಜ್ಯಾದ್ಯಂತ ಖುಷಿ ತಂದಿದೆ. ಆದ್ರೆ ಕರಾವಳಿ ಭಾಗದಲ್ಲಿ ಸತತ 2ನೇ ದಿನವೂ ಭಾರಿ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ 2 ದಿನ ರಜೆ ಘೋಷಿಸಲಾಗಿದೆ.

    ಮಳೆಯ ಆರ್ಭಟ ಮುಂದುವರಿದ ಹಿನ್ನೆಲೆಯಲ್ಲಿ ಜಿಲ್ಲೆಗೆ ರೆಡ್‌ ಅಲರ್ಟ್‌ ಘೋಷಣೆಯಾಗಿದ್ದು, ಮೇ 27 ಮತ್ತು ಮೇ 28ರಂದು ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ಕೇರಳ | ಮುಳುಗಿದ ಕಾರ್ಗೋ ಶಿಪ್‌ – ಅಲೆಯ ಅಬ್ಬರಕ್ಕೆ ತೇಲಿಬಂದ ಕಂಟೇನರ್‌; ಮುಟ್ಟದಂತೆ ಜನರಿಗೆ ಸೂಚನೆ

    ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲಾ ಕಾಲೇಜುಗಳು, ಅಂಗನವಾಡಿ ಕೇಂದ್ರಗಳು ಪ್ರಾಥಮಿಕ, ಫೌಡಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ರಜೆ ಘೋಷಿಸಿದೆ. ಇದನ್ನೂ ಓದಿ: ಮುಂಬೈನಲ್ಲಿ 107 ವರ್ಷದ ದಾಖಲೆ ಮುರಿದ ಮಳೆ – 75 ವರ್ಷದಲ್ಲಿ ಮೊದಲ ಬಾರಿಗೆ ಅವಧಿ ಪೂರ್ವ ಮುಂಗಾರು

    ಮೈಸೂರಲ್ಲಿ ಅಂಗನವಾಡಿ ಕೇಂದ್ರಗಳಿಗೆ ರಜೆ:
    ಇನ್ನೂ ಮೈಸೂರು ಜಿಲ್ಲೆಯಲ್ಲಿ ಗಾಳಿ-ಮಳೆ ಹಿನ್ನೆಲೆ ಮಂಗಳವಾರವೂ (ಮೇ 26) ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಕ್ಕಳ ಸುರಕ್ಷತೆ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ ತಿಳಿಸಿದ್ದಾರೆ.

  • ಕೊಡಗಿನಲ್ಲಿ ಮಳೆ ಆರ್ಭಟ – ಮಹಾವಿದ್ಯಾಲಯಗಳಿಗೆ 2 ದಿನ ರಜೆ ಘೋಷಣೆ

    ಕೊಡಗಿನಲ್ಲಿ ಮಳೆ ಆರ್ಭಟ – ಮಹಾವಿದ್ಯಾಲಯಗಳಿಗೆ 2 ದಿನ ರಜೆ ಘೋಷಣೆ

    ಕೊಡಗು: ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂಧ ಮಳೆ ಬಿರುಸುಗೊಂಡಿದೆ. ಜಿಲ್ಲೆಯ ಕಾವೇರಿ ನದಿಯ ನೀರಿನ ಮಟ್ಟ ಏರಿಕೆಯಾಗುತ್ತಿದ್ದರೆ, ಮತ್ತೊಂದೆಡೆ ಅವಾಂತರಗಳು ಮುಂದುವರಿದು ಜನಜೀವನ ಅಸ್ತವ್ಯಸ್ತಗೊಂಡಿದೆ. ಹೀಗಾಗಿ ಮೇ 26, 27ರಂದು ಎರಡು ದಿನಗಳ ಕಾಲ ಮಹಾವಿದ್ಯಾಲಯ ವ್ಯಾಪ್ತಿಗೆ ಒಳಪಡುವ ಎಲ್ಲಾ ಘಟಕ ಸರ್ಕಾರಿ ಹಾಗೂ ಸಂಯೋಜಿತ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

    ಕೊಡಗು ಜಿಲ್ಲಾಡಳಿತದೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಮಹಾವಿದ್ಯಾಲಯಗಳಿಗೆ ಎರಡು ದಿನ ರಜೆ ಘೋಷಿಸಿ ಕೊಡಗು ವಿವಿ ಕುಲಪತಿ ಡಾ.ಅಶೋಕ್ ಸಂಗಪ್ಪ ಆಲೂರ ಆದೇಶ ಹೊರಡಿಸಿದ್ದಾರೆ.

    ಮಳೆಯ ಆರ್ಭಟದಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಅಲ್ಲದೇ ಕಾವೇರಿ ಉಗಮಸ್ಥಾನ ತಲಕಾವೇರಿ ಭಾಗಮಂಡದಲ್ಲಿ ಧಾರಕಾರವಾಗಿ ಮಳೆಯಾಗುತ್ತಿರುವ ಪರಿಣಾಮದಿಂದ ತ್ರಿವೇಣಿ ಸಂಗಮದಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ತ್ರಿವೇಣಿ ಸಂಗಮದ ಉದ್ಯಾನ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಅಲ್ಲದೇ ಕ್ಷಣಕ್ಕೂ ಕ್ಷಣಕ್ಕೂ ಕಾವೇರಿ ನದಿಯ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ನಾಪೋಕ್ಲು- ಅಯ್ಯಂಗೇರಿ – ಸಣ್ಣಪುಲಿಕೋಟ್ಟು ರಸ್ತೆ ಸಂಪರ್ಕ ಕಡತಗೊಳ್ಳುವ ಭೀತಿ ಎದುರಾಗಿದೆ. ಆದ್ರೆ ಈ ಬಾರಿ ಮೇಲುಸೇತುವೆ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕಾವೇರಿ ಭಕ್ತರು ಹಾಗೂ ಭಾಗಮಂಡಲದ ಗ್ರಾಮೀಣ ಭಾಗದ ಜನರು ಸೇತುವೆ ಮೇಲೆ ಸಂಚಾರ ಮಾಡುತ್ತಿದ್ದಾರೆ.

    ಇನ್ನೂ ಕೊಡಗು ಜಿಲ್ಲೆಯ ಹಲವೆಡೆ ಮಳೆ ಅರ್ಭಟದಿಂದ ಗ್ರಾಮೀಣ ಪ್ರದೇಶಗಳಲ್ಲಿ ಬೃಹತ್ ಮರಗಳು ಹಾಗೂ ವಿದ್ಯುತ್ ಕಂಬಗಳು ಧರಶಾಹಿಯಾಗುತ್ತಿದ್ದು ಕಳೆದ ಎರಡು ಮೂರು ದಿನಗಳಿಂದ ಗ್ರಾಮೀಣ ಭಾಗದ ಜನರು ಕತ್ತಲೆಯಲ್ಲೇ ಬದುಕು ಕಳೆಯುತ್ತಿದ್ದಾರೆ. ನಿರಂತರವಾಗಿ ಮಳೆಯಾಗುತ್ತಿರುವ ಪರಿಣಾಮದಿಂದ ಕಾವೇರಿ ನದಿ ನೀರಿನ ಮಟ್ಟ ನಿಧಾನವಾಗಿ ಏರಿಕೆಯಾಗುತ್ತಿದೆ. ಇನ್ನೂ ವಿಪರೀತ ಗಾಳಿ ಮಳೆಯಿಂದ ಸೆಸ್ಕ್ ಮಡಿಕೇರಿ ವಿಭಾಗದಲ್ಲಿ ಸುಮಾರು 197 ವಿದ್ಯುತ್ ಕಂಬಗಳಿಗೆ ಹಾನಿ ಉಂಟಾಗಿದೆ.

  • ಕೋವಿಡ್ ಮಧ್ಯೆ ಶಾಲಾ ಕಾಲೇಜುಗಳು ಆರಂಭ – ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್!

    ಕೋವಿಡ್ ಮಧ್ಯೆ ಶಾಲಾ ಕಾಲೇಜುಗಳು ಆರಂಭ – ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್!

    – ಮುಂಜಾಗ್ರತಾ ಕ್ರಮ ಜಾರಿ ಸಾಧ್ಯತೆ

    ಬೆಂಗಳೂರು: ರಾಜ್ಯದಲ್ಲಿ ಕೋವಿಡ್ (Covid) ಸಂಖ್ಯೆ ಹೆಚ್ಚಾಗುತ್ತಿದೆ. ಇದರ ಮಧ್ಯೆ ಶಾಲಾ – ಕಾಲೇಜುಗಳು ಆರಂಭ ಆಗುತ್ತಿದ್ದು, ಪೋಷಕರಲ್ಲಿ ಆತಂಕ ಹೆಚ್ಚಿಸಿದೆ. ಶಾಲಾ-ಕಾಲೇಜುಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಪ್ರಾಥಮಿಕ ಮುಂಜಾಗ್ರತಾ ಕ್ರಮ ಜಾರಿ ಆಗುವ ಸಾಧ್ಯತೆ ಇದೆ.

    ಈಗಾಗಲೇ ಕೆಲವೊಂದು ಖಾಸಗಿ ಶಾಲಾ-ಕಾಲೇಜ್‌ಗಳಲ್ಲಿ ಮುಂಜಾಗ್ರತಾ ಕ್ರಮ ರಿಲೀಸ್ ಆಗಿದ್ದು, ಶಿಕ್ಷಣ ಇಲಾಖೆಯಿಂದ ಪ್ರಾಥಮಿಕ ಮುಂಜಾಗ್ರತಾ ಕ್ರಮ ಜಾರಿಯಾಗುವ ಸಾಧ್ಯತೆ ಇದೆ. ಮೇ 29ರಿಂದ ಬಹುತೇಕ ಶಾಲೆಗಳು ಶುರುವಾಗುತ್ತಿದ್ದು, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ (Health Department) ಜೊತೆ ಮಾತನಾಡಿ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಇದನ್ನೂ ಓದಿ: ಉತ್ತರಾಖಂಡ | ಭಾರೀ ಮಳೆಗೆ ಭೂಕುಸಿತ – ಹೆದ್ದಾರಿಯಲ್ಲಿ 6ಕಿ.ಮೀ ಟ್ರಾಫಿಕ್‌

    ಮಾರ್ಗಸೂಚಿ ಏನಿರಬಹುದು?
    * ಶಾಲಾ ಆವರಣದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವುದು.
    * ಪ್ರಾರ್ಥನೆ, ಊಟದ ಸಮಯದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು.
    * ಆರೋಗ್ಯದಲ್ಲಿ ವ್ಯತ್ಯಾಸ ಇರೋ ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿಗಳು ಶಾಲೆಗೆ ಬಾರದಂತೆ ಸೂಚನೆ ನೀಡುವುದು.
    * ಆರೋಗ್ಯ ತೊಂದರೆ ಇರೋ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಇರಿಸುವುದು.
    * ಶಾಲಾ-ಕಾಲೇಜುಗಳಲ್ಲಿ ಸ್ಯಾನಿಟೈಸರ್ ಬಳಕೆ ಮಾಡುವುದು.
    * ಶಾಲಾ ಶೌಚಾಲಯ, ಕುಡಿಯುವ ನೀರಿನಲ್ಲಿ ಶುಚಿತ್ವ ಕಾಪಾಡಲು ಆದ್ಯತೆ ಕೊಡುವುದು.

    ಇನ್ನು ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದು, ಶಾಲೆ ಆರಂಭವಾಗಲು ಇನ್ನೂ ಸಮಯ ಇದೆ. ಈಗಲೇ ನಿರ್ಧಾರ ಮಾಡಲ್ಲ. ಒಂದು ವಾರ ನೋಡಿಕೊಂಡು ಶಾಲೆ ವಿಚಾರದಲ್ಲಿ ಏನು ಮಾಡಬೇಕು ನೋಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ನೈತಿಕ ಮೌಲ್ಯಗಳ ಕೊರತೆ – ಆರ್‌ಜೆಡಿಯಿಂದ ಪುತ್ರ ತೇಜ್ ಪ್ರತಾಪ್‌ರನ್ನ ಹೊರದಬ್ಬಿದ ಲಾಲು ಪ್ರಸಾದ್‌ ಯಾದವ್‌

  • ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ

    ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ

    ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ವ್ಯಾಪಕ ಗಾಳಿ ಸಹಿತ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ (Meteorological Department) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಪದವಿ ಶಿಕ್ಷಣ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.25ರ ಮಂಗಳವಾರ ರಜೆ (Holiday) ಘೋಷಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಆದೇಶಿಸಿದ್ದಾರೆ.

    ಮುಂಜಾಗ್ರತಾ ಕ್ರಮವಾಗಿ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳಬೇಕು. ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು ಮತ್ತು ಜಿಲ್ಲಾಧಿಕಾರಿ ಕಚೇರಿ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವಂತೆ ತಿಳಿಸಿದ್ದಾರೆ. ಇದನ್ನೂ ಓದಿ: ಕೊಡಗಿನಲ್ಲಿ ಮುಂದುವರಿದ ಭಾರೀ ಮಳೆ – ಶಾಲೆಗಳಿಗೆ ನಾಳೆಯೂ ರಜೆ ಘೋಷಣೆ

    ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ ಮತ್ತು ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿ ಇಟ್ಟುಕೊಳ್ಳುವಂತೆ ಜಿಲ್ಲಾಧಿಕಾರಿಯವರು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: KRS ಡ್ಯಾಂ 3 ಅಡಿ ಭರ್ತಿ – 29,552 ಕ್ಯೂಸೆಕ್ ನೀರು ಒಳಹರಿವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಯೋಗ ಮತ್ತು ಧ್ಯಾನದ ಅಗತ್ಯ ಎಲ್ಲರಿಗಿಂತ ಹೆಚ್ಚಾಗಿ ಶಿಕ್ಷಣ ಸಚಿವರಿಗಿದೆ: ಸಿದ್ದರಾಮಯ್ಯ

    ಯೋಗ ಮತ್ತು ಧ್ಯಾನದ ಅಗತ್ಯ ಎಲ್ಲರಿಗಿಂತ ಹೆಚ್ಚಾಗಿ ಶಿಕ್ಷಣ ಸಚಿವರಿಗಿದೆ: ಸಿದ್ದರಾಮಯ್ಯ

    ಬೆಂಗಳೂರು: ಬಿ.ಸಿ ನಾಗೇಶ್ (BC Nagesh) ಅವರ ಮನಸ್ಸು ಸ್ಥಿಮಿತದಲ್ಲಿದ್ದ ಹಾಗಿಲ್ಲ. ನಿಜವಾಗಿ ಯೋಗ ಮತ್ತು ಧ್ಯಾನದ (Dhyana) ಅಗತ್ಯ ಎಲ್ಲರಿಗಿಂತ ಹೆಚ್ಚಾಗಿ ಶಿಕ್ಷಣ ಸಚಿವರಿಗಿದೆ. ಕೊರೊನಾವನ್ನು (Corona) ಸರಿಯಾಗಿ ನಿಯಂತ್ರಿಸಲಾಗದೆ ಶಾಲೆಗಳನ್ನು ಮುಚ್ಚಿ, ಆನ್‍ಲೈನ್ ತರಗತಿಗಳ ಮೂಲಕ ವಿದ್ಯಾರ್ಥಿಗಳಲ್ಲಿ ಮೊಬೈಲ್ ಹುಚ್ಚು ಹತ್ತಿಸಿರುವ ಬಿಜೆಪಿ (BJP) ಸರ್ಕಾರ, ಈಗ ಆ ಹುಚ್ಚು ಬಿಡಿಸಲು ಧ್ಯಾನ ನಡೆಸಲು ಮುಂದಾಗಿರುವುದು ಹುಚ್ಚುತನವಲ್ಲದೆ ಮತ್ತೇನು ಎಂದು ಸರಣಿ ಪ್ರಶ್ನೆಗಳನ್ನು ಕೇಳಿ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಕಿಡಿಕಾರಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?
    ಯೋಗ-ಧ್ಯಾನ ಯಾವುದಕ್ಕೂ ನನ್ನ ವಿರೋಧ ಇಲ್ಲ. ಆದರೆ ಶಾಲೆಗಳಲ್ಲಿ ಯಾವುದು ಮುಖ್ಯ, ಶಿಕ್ಷಣ ಸಚಿವ ಬಿ.ಸಿ ನಾಗೇಶ್? ಯಾವುದಕ್ಕೆ ಆದ್ಯತೆ ನೀಡಬೇಕೆನ್ನುವುದಷ್ಟೇ ಪ್ರಶ್ನೆ. ಒಂದೆಡೆ ಶಾಲೆ ನಡೆಸಲು ಸಾರ್ವಜನಿಕರಿಂದ ಭಿಕ್ಷೆ ಬೇಡುತ್ತಿರುವ ಬಿಜೆಪಿ ಸರ್ಕಾರ ಇನ್ನೊಂದೆಡೆ ದಿನಕ್ಕೊಂದರಂತೆ ಗಿಮಿಕ್‍ಗಳನ್ನು ಮಾಡುತ್ತಿರುವುದು ಖಂಡನೀಯ. ರಾಜ್ಯದಲ್ಲಿ ಬಿ.ಸಿ ನಾಗೇಶ್ ಅವರು ಶಿಕ್ಷಣ ಸಚಿವರಾದ ದಿನದಿಂದ ಪಠ್ಯಪುಸ್ತಕ ವಿವಾದದಿಂದ ಹಿಡಿದು ಶಾಲಾ ಶಿಕ್ಷಕರ ನೇಮಕದ ವರೆಗೆ ಬರೀ ಹಗರಣಗಳಲ್ಲೇ ಈಜಾಡುತ್ತಿದ್ದಾರೆ. ಇದನ್ನೂ ಓದಿ: ಶವ ಅಂತ ಹೇಳ್ಬೇಡಿ ಚಂದ್ರು ಅಂತ ಕರೆಯಿರಿ- ಗೋಳಾಡಿದ ರೇಣುಕಾಚಾರ್ಯ

    ಎಳೆಯ ಮಕ್ಕಳು ಆಡುತ್ತಾ, ಕುಣಿಯುತ್ತಾ ಪಾಠ ಓದಬೇಕು. ಇದರ ಬದಲಿಗೆ ಅವರನ್ನು ಕೋಣೆಯಲ್ಲಿ ಕೂಡಿ ಹಾಕಿ ಬಲಾತ್ಕಾರವಾಗಿ ಯೋಗ-ಧ್ಯಾನಗಳ ಕಸರತ್ತು ಮಾಡಿಸಿದರೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಅವರು ಇನ್ನಷ್ಟು ಕುಗ್ಗಿಹೋಗುತ್ತಾರೆ. ಮೊದಲು ಶಾಲೆಗಳಲ್ಲಿ ಅಗತ್ಯ ಸಂಖ್ಯೆಯಲ್ಲಿ ಶಿಕ್ಷಕರನ್ನು ನೇಮಿಸಿ ಅವಶ್ಯಕವಾದ ಬೋದನಾ ಸಲಕರಣೆಗಳನ್ನು ಬಿಜೆಪಿ ಸರ್ಕಾರ ಒದಗಿಸಬೇಕು. ಪ್ರತಿ ಶಾಲೆಯಲ್ಲಿ ಕಲೆ, ಸಂಗೀತ ಮತ್ತು ಕ್ರೀಡೆಗಳಲ್ಲಿ ತರಬೇತಿ ನೀಡುವ ಶಿಕ್ಷಕರನ್ನು ನೇಮಿಸಬೇಕು. ಇದನ್ನು ಬಿಟ್ಟು ತಮ್ಮ ರಾಜಕೀಯ ಅಜೆಂಡಾಕ್ಕಾಗಿ ಮಕ್ಕಳ ಬದುಕಿನಲ್ಲಿ ಚೆಲ್ಲಾಟವಾಡಬಾರದು ಎಂದು ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ. ಇದನ್ನೂ ಓದಿ: 5 ದಿನಗಳ ಬಳಿಕ ರೇಣುಕಾಚಾರ್ಯ ಸಹೋದರನ ಪುತ್ರನ ಶವ ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ ಪತ್ತೆ

    Live Tv
    [brid partner=56869869 player=32851 video=960834 autoplay=true]

  • ಹಿಜಬ್‌ ವಿವಾದ ತೀರ್ಪು- ನಾಳೆ ದಕ್ಷಿಣ ಜಿಲ್ಲೆ ಶಾಲಾ-ಕಾಲೇಜುಗಳಿಗೆ ರಜೆ

    ಹಿಜಬ್‌ ವಿವಾದ ತೀರ್ಪು- ನಾಳೆ ದಕ್ಷಿಣ ಜಿಲ್ಲೆ ಶಾಲಾ-ಕಾಲೇಜುಗಳಿಗೆ ರಜೆ

    ಮಂಗಳೂರು: ಕರ್ನಾಟಕದಲ್ಲಿ ಉದ್ಭವವಾಗಿ ವಿಶ್ವದಾದ್ಯಂತ ಚರ್ಚೆಗೆ ಗ್ರಾಸವಾದ ಹಿಜಬ್‌ ವಿವಾದಕ್ಕೆ ಸಂಬಂಧಿಸಿದಂತೆ ನಾಳೆ ಹೈಕೋರ್ಟ್‌ ತೀರ್ಪು ನೀಡಲಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ.

    ಜಿಲ್ಲೆಯಾದ್ಯಂತ 144 ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ನಾಳೆ ಬೆಳಗ್ಗೆ 10:30ಕ್ಕೆ ಹಿಜಬ್‌ ಹೈಕೋರ್ಟ್‌ ತೀರ್ಪು

    ಈಗಾಗಲೇ ನಿಗದಿಯಾಗಿರುವ ಪರೀಕ್ಷೆಗಳು ಎಂದಿನಂತೆ ‌ಮುಂದುವರಿಯಲಿವೆ. ಆಂತರಿಕ ಪರೀಕ್ಷೆಗಳನ್ನು ಮುಂದೂಡುವಂತೆ ಆದೇಶಿಸಲಾಗಿದೆ.

    ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್ ಹಾಗೂ ಜೈಬುನ್ನೀಸಾ ಎಂ ಖಾಜಿ ನೇತೃತ್ವದ ಪೀಠ ನಾಳೆ ತೀರ್ಪು ಪ್ರಕಟಿಸಲಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿದ್ದ ನನ್ನ ಪೂರ್ವಜರು ನೋವು ತಿಂದೆ ಕಾಶ್ಮೀರ ಬಿಟ್ಟರು : ಅನಂತ್ ನಾಗ್ ಬಿಚ್ಚಿಟ್ಟ ಕಾಶ್ಮೀರಿ ಕ್ರೌರ್ಯ

  • ಕಾಲೇಜುಗಳಿಗೆ ಯಾರೂ ಧಾರ್ಮಿಕ ಬಟ್ಟೆಗಳನ್ನು ಧರಿಸಿ ಹೋಗುವಂತಿಲ್ಲ: ಹೈಕೋರ್ಟ್‌

    ಕಾಲೇಜುಗಳಿಗೆ ಯಾರೂ ಧಾರ್ಮಿಕ ಬಟ್ಟೆಗಳನ್ನು ಧರಿಸಿ ಹೋಗುವಂತಿಲ್ಲ: ಹೈಕೋರ್ಟ್‌

    ಬೆಂಗಳೂರು: ಕಾಲೇಜುಗಳಿಗೆ ವಿದ್ಯಾರ್ಥಿಗಳು ಯಾವುದೇ ಧಾರ್ಮಿಕ ವಸ್ತ್ರಗಳನ್ನು ಧರಿಸಿ ಹೋಗುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಮೌಖಿಕ ಆದೇಶ ಪ್ರಕಟಿಸಿದೆ.

    ಕಾಲೇಜುಗಳಲ್ಲಿ ಹಿಜಬ್‌ ಧರಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಮುಖ್ಯ ನ್ಯಾ. ರಿತುರಾಜ್ ಅವಸ್ಥಿ, ನ್ಯಾ.ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಒಳಗೊಂಡ ತ್ರಿಸದ್ಯ ಪೀಠದಲ್ಲಿ ನಡೆಯಿತು. ಇದನ್ನೂ ಓದಿ: ಡಿಕೆಶಿ ಪಾಕಿಸ್ತಾನ ಪರ ಹೇಳಿಕೆ ಕೊಡುವವರ ಪರವೋ ಅಥವಾ ಭಾರತ ಮಾತೆಯ ಪರವೋ: ರೇಣುಕಾಚಾರ್ಯ

    ಮುಂದಿನ ಆದೇಶ ಬರುವವರೆಗೂ ಕಾಲೇಜಿಗೆ ಯಾರೂ ಸಹ ಹಿಜಬ್‌ ಮತ್ತು ಕೇಸರಿ ಶಾಲನ್ನು ಧರಿಸಿ ಹೋಗುವಂತಿಲ್ಲ. ಕಾಲೇಜು ನಡೆಯಲೇಬೇಕು. ಹೀಗಾಗಿ ಮಧ್ಯಂತರ ಆದೇಶ ನೀಡಿದ್ದೇವೆ ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ.

    ಸಾಂವಿಧಾನತ್ಮಕ ಪ್ರಶ್ನೆಗಳು ಎದ್ದಿರುವ ಕಾರಣ ವಿಚಾರಣೆಯನ್ನು ಗಂಭೀರವಾಗಿ ನಡೆಸಲಾಗುವುದು ಎಂದು ಹೇಳಿರುವ ಪೀಠ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ. ಇದನ್ನೂ ಓದಿ: ಹಿಜಬ್ ನಮ್ಮ ಕುಟುಂಬದ ವಿವಾದ ಪಾಕಿಸ್ತಾನ ತಲೆಹಾಕಬಾರದು: ಫಾತಿಮಾ ಹುಸೇನ್ ಆಕ್ರೋಶ

    ಮುಂದಿನ ಆದೇಶ ಬರುವವರೆಗೂ ವಿದ್ಯಾರ್ಥಿಗಳು ಯಾರೂ ಸಹ ಧಾರ್ಮಿಕ ಬಟ್ಟೆ ಧರಿಸಿ ಕಾಲೇಜಿಗೆ ಹೋಗುವಂತಿಲ್ಲ. ಶಾಂತಿ, ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡಬೇಕು ಎಂದು ಹೈಕೋರ್ಟ್‌ ಸೂಚನೆ ನೀಡಿದೆ.

    ಸಾಂವಿಧಾನಾತ್ಮಕ ಪ್ರಶ್ನೆಗಳು ಎದ್ದಿರುವ ಕಾರಣ ವಿಚಾರಣೆಯನ್ನು ಗಂಭೀರವಾಗಿ ನಡೆಸಲಾಗುವುದು ಎಂದು ಹೇಳಿರುವ ಪೀಠ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ. ಅಷ್ಟೇ ಅಲ್ಲದೇ ಪ್ರತಿನಿತ್ಯ ವಿಚಾರಣೆ ನಡೆಸಲಾಗುವುದು ಎಂದು ಹೇಳಿದೆ.

  • ಭಾರೀ ಮಳೆ- ಬೆಂಗಳೂರು ಸೇರಿ 6 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ, ಅಲರ್ಟ್‌ ಆಗಿರಲು 13 ಜಿಲ್ಲೆಗಳಿಗೆ ಸೂಚನೆ

    ಭಾರೀ ಮಳೆ- ಬೆಂಗಳೂರು ಸೇರಿ 6 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ, ಅಲರ್ಟ್‌ ಆಗಿರಲು 13 ಜಿಲ್ಲೆಗಳಿಗೆ ಸೂಚನೆ

    ಬೆಂಗಳೂರು: ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿರುವ ಬೆಂಗಳೂರು ನಗರ ಸೇರಿದಂತೆ ಆರು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಲ್ಲದೇ ಮುಂಜಾಗ್ರತೆ ಕ್ರಮಗಳೊಂದಿಗೆ ಅಲರ್ಟ್‌ ಆಗಿರುವಂತೆ ರಾಜ್ಯದ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿದೆ.

    ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮಂಜುನಾಥ್‌ ಆದೇಶ ಹೊರಡಿಸಿದ್ದಾರೆ. ಉಳಿದಂತೆ ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ರಜೆ ಘೋಷಿಸಲಾಗಿದೆ. ಇದನ್ನೂ ಓದಿ: ಖಾಕಿಯಿಂದಲೇ ನ್ಯಾಯಾಧೀಶರ ಮೇಲೆ ಹಲ್ಲೆ- ಇಬ್ಬರು ಪೊಲೀಸರು ಅರೆಸ್ಟ್‌!

    ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣ ತುಂತುರು ಮಳೆಯಾಗುತ್ತಿದೆ. ತುಂತುರು ಮಳೆ ಹಿನ್ನೆಲೆ ಶಾಲಾ-ಕಾಲೇಜುಗಳು, ನಿತ್ಯ ಕೆಲಸಕ್ಕೆ ಹೋಗುವವರಿಗೆ ಸಮಸ್ಯೆ ಆಗಲಿದೆ. ಮುಂದಿನ ನಾಲ್ಕು ದಿನದವರೆಗೂ ಮಳೆ ಇರಲಿದೆ. ಚೆನ್ನೈನಲ್ಲಿ ರೆಡ್‌ ಅಲರ್ಟ್‌ ಇರುವ ಕಾರಣ ಬೆಂಗಳೂರಿನಲ್ಲೂ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ವೀರ್ ದಾಸ್‍ಗೆ ಪ್ರದರ್ಶನ ನೀಡಲು ಬಿಡುವುದಿಲ್ಲ: ನರೋತ್ತಮ್ ಮಿಶ್ರಾ

    ರಾಜ್ಯದ 13 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ನೀಡಿದೆ. ವ್ಯಾಪಕ ಮಳೆ ಜೊತೆಗೆ ವಿಪರೀತ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಅಲರ್ಟ್ ಆಗಿರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಜೊತೆಗೆ ಕರಾವಳಿ ಕರ್ನಾಟಕದಲ್ಲಿ ಮೀನುಗಾರಿಕೆಗೆ ನಿರ್ಬಂಧ ವಿಧಿಸಲಾಗಿದೆ.

    chikkaballapura rain

    ಯಾವ್ಯಾವ ಜಿಲ್ಲೆಗಳಿಗೆ ಸೂಚನೆ?
    ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಅಲರ್ಟ್‌ ಆಗಿರುವಂತೆ ತಿಳಿಸಲಾಗಿದೆ.

  • ದೇಶಕ್ಕೆ 600 ವೈದ್ಯಕೀಯ ಕಾಲೇಜು, ಏಮ್ಸ್‌ನಂಥ 50 ಸಂಸ್ಥೆ ಬೇಕು: ನಿತಿನ್ ಗಡ್ಕರಿ

    ದೇಶಕ್ಕೆ 600 ವೈದ್ಯಕೀಯ ಕಾಲೇಜು, ಏಮ್ಸ್‌ನಂಥ 50 ಸಂಸ್ಥೆ ಬೇಕು: ನಿತಿನ್ ಗಡ್ಕರಿ

    ನವದೆಹಲಿ: ದೇಶಕ್ಕೆ ಇನ್ನೂ ಕನಿಷ್ಠ 600 ವೈದ್ಯಕೀಯ ಕಾಲೇಜುಗಳು ದೆಹಲಿಯ ಏಮ್ಸ್ ತರಹದ 50 ಸಂಸ್ಥೆಗಳು ಮತ್ತು 200 ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳು ಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಹೇಳಿದ್ದಾರೆ.

    ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕರಡ್ ನಗರದಲ್ಲಿ ಕೊರೊನಾ ವಾರಿಯರ್ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ಧಿ ವಲಯದ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಅಗತ್ಯ ಇದೆ. ಸಹಕಾರಿ ಕ್ಷೇತ್ರ ಸಹ ವೈದ್ಯಕೀಯ ಸೌಲಭ್ಯಗಳನ್ನು ಸ್ಥಾಪಿಸಲು ಮುಂದೆ ಬರಬೇಕು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಸೋಮವಾರ ಬಂದ್ ಇದ್ದರೂ SSLC ಪೂರಕ ಪರೀಕ್ಷೆ

    ಪ್ರಧಾನಿ ನರೇಂದ್ರ ಮೋದಿಯವರೊಂದಿಗಿನ ಚರ್ಚೆಯ ಸಮಯದಲ್ಲಿ, ನಾನು ಅವರಿಗೆ ವೆಂಟಿಲೇಟರ್‍ಗಳ ಕೊರತೆಯ ಬಗ್ಗೆ ಹೇಳಿದೆ. ದೇಶದಲ್ಲಿ ಎಷ್ಟು ವೆಂಟಿಲೇಟರ್‍ಗಳಿವೆ ಎಂದು ಅವರು ನನ್ನನ್ನು ಕೇಳಿದರು, ಅದಕ್ಕೆ ನಾನು ಸುಮಾರು 2.5 ಲಕ್ಷ ಇರಬೇಕು. ದೇಶದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ರೋಗ ಪ್ರಾರಂಭವಾದಾಗ ದೇಶದಲ್ಲಿ ಕೇವಲ 13,000 ವೆಂಟಿಲೇಟರ್‍ಗಳು ಇದ್ದವು ಎಂದು ಅವರು ನನಗೆ ತಿಳಿಸಿದರು ಎಂದು ಗಡ್ಕರಿ ಹೇಳಿದ್ದಾರೆ. ಇದನ್ನೂ ಓದಿ: ಖಾಸಗಿ ಶಾಲೆಗಳ ದುಬಾರಿ ಶುಲ್ಕ- ರಮೇಶ್ ಕುಮಾರ್ ಉಪಸ್ಥಿತಿಯಲ್ಲಿ ಚಿಂತನ ಮಂಥನ

    ಆ ಸಮಯದಲ್ಲಿ ಆಮ್ಲಜನಕ, ಬೆಡ್‍ಗಳು ಮತ್ತು ಇತರ ವೈದ್ಯಕೀಯ ಸೌಲಭ್ಯಗಳ ಕೊರತೆ ಇತ್ತು. ಆದರೆ ವೈದ್ಯರು, ಅರೆವೈದ್ಯರು, ನರ್ಸ್‍ಗಳು ಆ ಸಮಯದಲ್ಲಿ ಸಾಕಷ್ಟು ಸಹಾಯ ಮಾಡಿದರು. ಅವರ ಕೆಲಸವನ್ನು ನಾನು ಪ್ರಶಂಸಿಸುತ್ತೇನೆ ಎಂದು ಗಡ್ಕರಿ ಹೇಳಿದ್ದಾರೆ.