Tag: Collegium

  • ಕರ್ನಾಟಕ ಸಿಜೆ ಸೇರಿ ಮೂವರ ಹೆಸರು ಸುಪ್ರೀಂ ಕೋರ್ಟ್ ಜಡ್ಜ್ ನೇಮಕಕ್ಕೆ ಶಿಫಾರಸು

    ಕರ್ನಾಟಕ ಸಿಜೆ ಸೇರಿ ಮೂವರ ಹೆಸರು ಸುಪ್ರೀಂ ಕೋರ್ಟ್ ಜಡ್ಜ್ ನೇಮಕಕ್ಕೆ ಶಿಫಾರಸು

    – ಸುಪ್ರೀಂ ಕೋರ್ಟ್ ಕೊಲಿಜಿಯಂನಿಂದ ಶಿಫಾರಸು

    ನವದೆಹಲಿ: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ (Nilay Vipinchandra Anjaria), ಗುವಾಹಟಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಜಯ್ ಬಿಷ್ಣೋಯ್ ಮತ್ತು ಬಾಂಬೆ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಎ.ಎಸ್. ಚಂದೂರ್ಕರ್ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನಾಗಿ (Supreme Court judges) ನೇಮಕ ಮಾಡುವಂತೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸ್ಸು ಮಾಡಿದೆ.

    ನ್ಯಾಯಲಯದಲ್ಲಿ ಖಾಲಿ ಇರುವ ಮೂರು ಹುದ್ದೆಗಳನ್ನು ಭರ್ತಿ ಮಾಡಲು ಹೆಸರುಗಳನ್ನು ಚರ್ಚಿಸಲು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ನೇತೃತ್ವದ ಐವರು ಸದಸ್ಯರ ಕೊಲಿಜಿಯಂ ಸಭೆ ಸೇರಿ ಈ ಮೂರು ಹೆಸರುಗಳನ್ನು ಅಂತಿಮಗೊಳಿಸಿದೆ. ಇದನ್ನೂ ಓದಿ: ಮಂಡ್ಯ | ಟ್ರಾಫಿಕ್‌ ಪೊಲೀಸರ ಯಡವಟ್ಟಿನಿಂದ ಪ್ರಾಣಬಿಟ್ಟ ಮಗು – ಮೂವರು ASI ಸಸ್ಪೆಂಡ್‌

    ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಎಎಸ್ ಓಕಾ ಅವರ ನಿವೃತ್ತಿಯ ನಂತರ ಮೂರು ಹುದ್ದೆಗಳು ಖಾಲಿಯಾಗಿವೆ. 34 ನ್ಯಾಯಧೀಶರ ಬಲ ಹೊಂದಿರುವ ಸುಪ್ರೀಂ ಕೋರ್ಟ್ ನಲ್ಲಿ ಸದ್ಯ 31 ನ್ಯಾಯಧೀಶರು ಕಾರ್ಯನಿರ್ವಹಿಸುತ್ತಿದ್ದಾರೆ. ಇದನ್ನೂ ಓದಿ: ಮೈಸೂರು ರಾಜಮನೆತನಕ್ಕೆ ಟಿಡಿಆರ್ ನೀಡಲು ಸುಪ್ರೀಂ ಆದೇಶ – ಮರುಪರಿಶೀಲಿಸುವಂತೆ ರಾಜ್ಯ ಸರ್ಕಾರದಿಂದ ಅರ್ಜಿ

  • ಕರ್ನಾಟಕದ ನಾಲ್ವರು ಜಡ್ಜ್‌ಗಳ ವರ್ಗಾವಣೆಗೆ ಶಿಫಾರಸು

    ಕರ್ನಾಟಕದ ನಾಲ್ವರು ಜಡ್ಜ್‌ಗಳ ವರ್ಗಾವಣೆಗೆ ಶಿಫಾರಸು

    ನವದೆಹಲಿ: ಕರ್ನಾಟಕ ಹೈಕೋರ್ಟ್‌ನ (Karnataka High Court) ನಾಲ್ವರು ನ್ಯಾಯಮೂರ್ತಿಗಳ ವರ್ಗಾವಣೆಗೆ ಸುಪ್ರೀಂ ಕೋರ್ಟ್ ಕೊಲಿಜಿಯಂ (Collegium) ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.

    ಹಿರಿಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರನ್ನು ಒಡಿಶಾ, ನ್ಯಾ. ಕೆ.ನಟರಾಜನ್ ಅವರನ್ನು ಕೇರಳ, ನ್ಯಾ. ಎನ್.ಎಸ್ ಸಂಜಯ್ ಗೌಡ ಅವರನ್ನು ಗುಜರಾತ್, ಹಾಗೂ ನ್ಯಾ. ಹೇಮಂತ್ ಚಂದನಗೌಡರ್ ಅವರನ್ನು ಮದ್ರಾಸ್ ಹೈಕೋರ್ಟ್‌ಗೆ ವರ್ಗಾಯಿಸಿಲು ಕೊಲಿಜಿಯಂ ಶಿಫಾರಸು ಮಾಡಿದೆ.

    ಅಲ್ಲದೆ, ತೆಲಂಗಾಣ ನ್ಯಾಯಮೂರ್ತಿ ಪೆರುಗು ಶ್ರೀಸುಧಾ ಮತ್ತು ಆಂಧ್ರ ಪ್ರದೇಶದ ಡಾ. ಕುಂಭಜದಲ ಮನ್ಮಧ ರಾವ್ ಅವರನ್ನು ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ ಮಾಡುವಂತೆಯೂ ಶಿಫಾರಸು ಮಾಡಲಾಗಿದೆ.

  • ಕೊಲಿಜಿಯಂನಲ್ಲಿ ಸರ್ಕಾರಿ ಪ್ರತಿನಿಧಿಗೂ ಅವಕಾಶ ನೀಡಿ: ಸಿಜೆಐಗೆ ಕಿರಣ್‌ ರಿಜಿಜು ಪತ್ರ

    ಕೊಲಿಜಿಯಂನಲ್ಲಿ ಸರ್ಕಾರಿ ಪ್ರತಿನಿಧಿಗೂ ಅವಕಾಶ ನೀಡಿ: ಸಿಜೆಐಗೆ ಕಿರಣ್‌ ರಿಜಿಜು ಪತ್ರ

    ನವದೆಹಲಿ: ಸುಪ್ರೀಂ ಕೋರ್ಟ್ (Supreme Court) ಮತ್ತು ಕೇಂದ್ರ ಸರ್ಕಾರದ ನಡುವಿನ ಹಗ್ಗಜಗ್ಗಾಟ ಮತ್ತಷ್ಟು ಮುಂದುವರಿದಿದೆ. ನ್ಯಾಯಮೂರ್ತಿಗಳನ್ನು ನೇಮಿಸುವ ಕೊಲಿಜಿಯಂ (Collegium) ವ್ಯವಸ್ಥೆಯಲ್ಲಿ ಸರ್ಕಾರದ ಪ್ರತಿನಿಧಿಗೂ ಅವಕಾಶ ಕಲ್ಪಿಸಬೇಕೆಂದು ಕೋರಿ ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು (Kiren Rijiju)  ಪತ್ರ ಬರೆದಿದ್ದಾರೆ.

    ನ್ಯಾಯಮೂರ್ತಿಗಳ ನೇಮಕದಲ್ಲಿ ಪಾರದರ್ಶಕತೆ ಮತ್ತು ಸಾರ್ವಜನಿಕ ಉತ್ತರದಾಯಿತ್ವವನ್ನು ಕಾಪಾಡಲು ಕೇಂದ್ರ ಸರ್ಕಾರದ ಪ್ರತಿನಿಧಿಗೂ ಕೊಲಿಜಿಯಂನಲ್ಲಿ ಅವಕಾಶ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾ. ಡಿ.ವೈ. ಚಂದ್ರಚೂಡ್‌ (CJI D.Y. Chandrachud)  ಅವರಿಗೆ ಪತ್ರ ಬರೆದಿದ್ದಾರೆ.

    ತಮ್ಮ ಪತ್ರದಲ್ಲಿ ರಿಜಿಜು ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗವನ್ನು(NJAC) 2015ರಲ್ಲಿ ರದ್ದು ಮಾಡುವಾಗ ನ್ಯಾಯಾಧೀಶರ ನೇಮಕ ಸಂಬಂಧದ ಪುನರ್‌ ರಚನೆಯ ಬಗ್ಗೆ ಸುಪ್ರೀಂ ಸಂವಿಧಾನಿಕ ಪೀಠ ಉಲ್ಲೇಖಿಸಿತ್ತು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

    ಮಾಧ್ಯಮಗಳಲ್ಲಿ ಈ ಸುದ್ದಿ ಪ್ರಕಟವಾಗುತ್ತಿದ್ದಂತೆ, ಇದು ಅತ್ಯಂತ ಅಪಾಯಕಾರಿ. ನ್ಯಾಯಾಂಗ ನೇಮಕಾತಿಗಳಲ್ಲಿ ಸಂಪೂರ್ಣವಾಗಿ ಸರ್ಕಾರದ ಹಸ್ತಕ್ಷೇಪ ಇರಬಾರದು ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್‌ ಕೇಜ್ರಿವಾಲ್‌ ಟೀಕಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ, ಮಹಿಳೆಗೆ ಪ್ರತಿ ತಿಂಗಳು 2,000 ರೂ.: ಪ್ರಿಯಾಂಕಾ ಗಾಂಧಿ 

    ಈ ಟೀಕೆಗೆ ಪ್ರತಿಕ್ರಿಯಿಸಿದ ಕಿರಣ್‌ ರಿಜಿಜು, ನ್ಯಾಯಾಲಯದ ನಿರ್ದೇಶನವನ್ನು ನೀವು ಗೌರವಿಸುತ್ತೀರಿ ಎಂದು ಭಾವಿಸುತ್ತೇವೆ. ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗದ ಕಾಯ್ದೆಯನ್ನು ಹಿಂತೆಗೆದುಕೊಳ್ಳುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಸಂವಿಧಾನ ಪೀಠದ ನಿರ್ದೇಶನದಂತೆ ಪತ್ರ ಬರೆಯಲಾಗಿದೆ. ಸಾಂವಿಧಾನಿಕ ಪೀಠವು ಕೊಲಿಜಿಯಂ ವ್ಯವಸ್ಥೆಯ ಕಾರ್ಯವಿಧಾನವನ್ನು ಪುನರ್‌ ಚಿಸುವಂತೆ ಸೂಚಿಸಿತ್ತು ಎಂದು ತಿರುಗೇಟು ನೀಡಿದ್ದಾರೆ.

     

    ಕೊಲಿಜಿಯಂ ವ್ಯವಸ್ಥೆಯ ಮೂಲಕ ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ ನ್ಯಾಯಾಧೀಶರನ್ನು ನೇಮಿಸಲಾಗುತ್ತದೆ. ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಾಧೀಶರ ಜೊತೆ ಐವರು ನ್ಯಾಯಾಧೀಶರು ಕೊಲಿಜಿಯಂ ಸದಸ್ಯರಾಗಿರುತ್ತಾರೆ. ಪ್ರಸ್ತುತ ಸಿಜೆಐ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಎಸ್‌ಕೆ ಕೌಲ್, ಕೆಎಂ ಜೋಸೆಫ್, ಎಂಆರ್ ಶಾ, ಅಜಯ್ ರಸ್ತೋಗಿ ಮತ್ತು ಸಂಜೀವ್ ಖನ್ನಾ ಅವರನ್ನು ಕೊಲಿಜಿಯಂ ಒಳಗೊಂಡಿದೆ. ಇದನ್ನೂ ಓದಿ: ನೋಟು ನಿಷೇಧ – ಸಂಸತ್ತು ಇಲ್ಲದೇ ಪ್ರಜಾಪ್ರಭುತ್ವ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ: ನ್ಯಾ,ನಾಗರತ್ನ

    ಧನಕರ್‌ ಟೀಕೆ:
    83ನೇ ಅಖಿಲ ಭಾರತ ಸ್ಪೀಕರ್‌ಗಳ ಸಮ್ಮೇಳನ ಉದ್ದೇಶಿಸಿ ಮಾತನಾಡಿದ್ದ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌, ಪ್ರಜಾಪ್ರಭುತ್ವ ವ್ಯವ್ಯವಸ್ಥೆಯಲ್ಲಿ ಶಾಸನಗಳನ್ನು ರೂಪಿಸುವ ಸಂಸತ್ತೇ ಸಾರ್ವಭೌಮ. ಶಾಸನ ರಚನೆಯಲ್ಲಿ ನ್ಯಾಯಾಂಗವು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ನ್ಯಾಯಾಂಗ ವ್ಯವಸ್ಥೆಯ ವಿರುದ್ಧ ಕಿಡಿಕಾರಿದ್ದರು.

     

    ಸಂಸತ್ತು ಸಂವಿಧಾನದ ‘ಮೂಲ ರಚನೆ’ಯನ್ನು ತಿದ್ದುಪಡಿ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ವಿಧಿಸಿರುವ ನಿರ್ಬಂಧವನ್ನು ನಾನು ಒಪ್ಪುವುದಿಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದರು.

    ಈ ಹಿಂದೆ ಸಿಜೆಐ ಡಿ.ವೈ.ಚಂದ್ರಚೂಡ್‌ ಅವರ ಸಮ್ಮುಖದಲ್ಲೇ ಕೊಲಿಜಿಯಂ ರದ್ದುಗೊಳಿಸಿದ ನಿರ್ಧಾರದ ವಿರುದ್ಧ ಧನಕರ್‌ ಅಸಮಾಧಾನ ವ್ಯಕ್ತಪಡಿಸಿದ್ದರು. ಸಂಸತ್‌ ಅಂಗೀಕರಿಸಿದ ಕಾನೂನನ್ನು ಸುಪ್ರೀಂ ಕೋರ್ಟ್‌ ರದ್ದು ಮಾಡುತ್ತದೆ. ಈ ರೀತಿ ಘಟನೆ ಪ್ರಪಂಚದಲ್ಲಿ ಎಲ್ಲೂ ಈವರೆಗೆ ನಡೆದಿಲ್ಲ ಎಂದು ನೇರವಾಗಿಯೇ ಹೇಳಿದ್ದರು.

    ಸಾಂವಿಧಾನಿಕ ತಿದ್ದುಪಡಿ ಕಾಯ್ದೆ ಬಗ್ಗೆ ಚರ್ಚಿಸುವಾಗ ಇಡೀ ಸಂಸತ್ತು ಅವಿರೋಧವಾಗಿ ಎನ್‌ಜೆಎಸಿ ಕಾಯ್ದೆಯ ಪರ ಮತ ಹಾಕಿತ್ತು. ರಾಜ್ಯಸಭೆಯಲ್ಲೂ ಅವಿರೋಧವಾಗಿ ಅಂಗೀಕಾರವಾಗಿತ್ತು. ಒಬ್ಬರು ಮಾತ್ರ ಗೈರಾಗಿದ್ದರು ಎಂದು ತಿಳಿಸಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k