Tag: Colonel Sofiya Qureshi

  • ಸೋಫಿಯಾ ವಿರುದ್ಧ ಅವಹೇಳನಕಾರಿ ಹೇಳಿಕೆ – ವಿಜಯ್ ಶಾರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ

    ಸೋಫಿಯಾ ವಿರುದ್ಧ ಅವಹೇಳನಕಾರಿ ಹೇಳಿಕೆ – ವಿಜಯ್ ಶಾರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ

    ನವದೆಹಲಿ: ಕರ್ನಲ್ ಸೋಫಿಯಾ (Colonel Sofiya Qureshi) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ವಿಜಯ್ ಶಾ (Vijay Shah) ಅವರನ್ನು ಸುಪ್ರೀಂ ಕೋರ್ಟ್ (Supreme Court) ತರಾಟೆಗೆ ತೆಗೆದುಕೊಂಡಿದೆ.

    ಹೇಳಿಕೆ ಸಂಬಂಧ ವಿಚಾರಣೆ ನಡೆಸಿದ್ದ ಜಬ್ಬಲ್ಪುರ ಹೈಕೋರ್ಟ್ (Jabbalpur High Court) ಸಚಿವ ವಿಜಯ್ ಶಾ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಆದೇಶಿಸಿತ್ತು. ಈ ಆದೇಶದ ಬೆನ್ನಲ್ಲೇ ವಿಜಯ್ ಶಾ, ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಈ ಕುರಿತು ವಿಚಾರಣೆ ನಡೆಸಿದ ಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ಈ ರೀತಿ ಹೇಳಿಕೆಗಳನ್ನು ನೀಡುವಾಗ ಎಚ್ಚರವಿರಲಿ ಎಂದಿದೆ.ಇದನ್ನೂ ಓದಿ: ಸೋಫಿಯಾ‌ ವಿರುದ್ಧ ಅವಹೇಳನಕಾರಿ ಹೇಳಿಕೆ – ಮಧ್ಯಪ್ರದೇಶದ ಮಂತ್ರಿ ವಿರುದ್ಧ ಎಫ್‌ಐಆರ್‌ಗೆ ಸೂಚನೆ

    ವಿಜಯ್ ಶಾ ನೀಡಿದ ಹೇಳಿಕೆಗಳನ್ನು ಟೀಕಿಸಿದ ಕೋರ್ಟ್, ದೇಶವು ಉದ್ವಿಗ್ನ ಪರಿಸ್ಥಿತಿಯನ್ನು ಎದುರಿಸುತ್ತಿರುವಾಗ ಸಚಿವರು ಜವಾಬ್ದಾರಿಯುತರಾಗಿರಬೇಕು ಎನ್ನುವುದು ನಮ್ಮೆಲ್ಲರ ನಿರೀಕ್ಷೆ ಎಂದು ಒತ್ತಿ ಹೇಳಿದೆ.

    ವಿಜಯ್ ಶಾ ಹೇಳಿದ್ದೇನು?
    ಇಂದೋರ್ ಜಿಲ್ಲೆಯ ಮಾಹುವಿನ ರಾಯ್ಕುಂಡ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯ್ ಶಾ ಅವರು ಪಾಕಿಸ್ತಾನ ವಿರುದ್ಧ ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಯಶಸ್ಸನ್ನು ಹೇಳಿ ಮೋದಿ ಸರ್ಕಾರವನ್ನು ಶ್ಲಾಘಿಸಿದ್ದರು.

    ಭಾಷಣದಲ್ಲಿ, ಭಯೋತ್ಪಾದಕರು ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಸಿಂಧೂರವನ್ನು ಅಳಿಸಿದ್ದರು. ಆ ಉಗ್ರರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ನಾವು ಕಳುಹಿಸಿದ್ದೇವೆ ಎಂದು ಹೇಳಿದ್ದರು.

    ಭಾಷಣದಲ್ಲಿ ವಿಜಯ್ ಶಾ ಮುಸ್ಲಿಂ ಸಮುದಾಯಕ್ಕೆ ಸೇರಿದ ಉಗ್ರರನ್ನು ಸದೆ ಬಡಿಯಲು ಮುಸ್ಲಿಂ ಸಮುದಾಯಕ್ಕೆ ಸೇರಿದ ಕರ್ನಲ್ ಸೋಫಿಯಾ ಖುರೇಷಿ ಅವರ ಹೆಸರನ್ನು ಸ್ಪಷ್ಟವಾಗಿ ಹೇಳದೇ ಇದ್ದರೂ ಅವರನ್ನು ಉಲ್ಲೇಖಿಸಿಯೇ ಭಾಷಣ ಮಾಡಿದ್ದು ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಬಳಿಕ ಜಬ್ಬಲ್ಪುರ ಹೈಕೋರ್ಟ್ ಇದನ್ನು ಅಶ್ಲೀಲ ಭಾಷೆ ಎಂದು ಪರಿಗಣಿಸಿತ್ತು. ಈ ವಿಷಯವನ್ನು ಸ್ವಯಂಪ್ರೇರಿತವಾಗಿ ಪರಿಗಣಿಸಿ, ವಿಜಯ್ ಶಾ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಸೂಚಿಸಿತ್ತು.ಇದನ್ನೂ ಓದಿ: ‘ಆಪರೇಷನ್‌ ಸಿಂಧೂರ’ ಏಟಿಗೆ ಪಾಕಿಸ್ತಾನ ಬಾಲ ಮುದುರಿದ ನಾಯಿಯಂತೆ ಓಡಿದೆ: ಪೆಂಟಗನ್‌ ಮಾಜಿ ಅಧಿಕಾರಿ ವ್ಯಂಗ್ಯ

  • ಭಾರತದ ವಿರುದ್ಧ ಪಾಕಿಸ್ತಾನ ಸುಳ್ಳು ಸುದ್ದಿಗಳನ್ನು ಹಬ್ಬಿಸಿದೆ: ಸೋಫಿಯಾ ಖುರೇಷಿ

    ಭಾರತದ ವಿರುದ್ಧ ಪಾಕಿಸ್ತಾನ ಸುಳ್ಳು ಸುದ್ದಿಗಳನ್ನು ಹಬ್ಬಿಸಿದೆ: ಸೋಫಿಯಾ ಖುರೇಷಿ

    – ಭಾರತೀಯ ವಾಯುನೆಲೆಗಳು ಸುರಕ್ಷಿತ
    – ನಮ್ಮ ಪ್ರತಿದಾಳಿಯಿಂದ ಪಾಕ್ ಸೇನೆಗೆ ಅಪಾರ ನಷ್ಟ: ಕರ್ನಲ್ ಸೋಫಿಯಾ

    ನವದೆಹಲಿ: ಭಾರತದ ವಿರುದ್ಧ ಪಾಕಿಸ್ತಾನ ಸುಳ್ಳು ಆರೋಪ ಮಾಡಿದೆ ಎಂದು ಕರ್ನಲ್ ಸೋಫಿಯಾ ಖುರೇಷಿ(Sofiya Qureshi) ಹೇಳಿದ್ದಾರೆ.

    ಶನಿವಾರ ಭಾರತ(India) ಹಾಗೂ ಪಾಕಿಸ್ತಾನದ(Pakistan) ನಡುವಿನ ಕದನ ವಿರಾಮದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್400 ಕ್ಷಿಪಣಿ, ಬ್ರಹ್ಮೋಸ್ ನೆಲೆ ನಾಶವಾಗಿಲ್ಲ. ಭಾರತದ ವಿರುದ್ಧ ಪಾಕಿಸ್ತಾನ ಸುಳ್ಳು ಆರೋಪಗಳನ್ನ ಮಾಡ್ತಿದೆ. ಚಂಡೀಗಢದಲ್ಲಿ ಪಾಕ್ ಶೆಲ್ ಮೇಲೆ ದಾಳಿ ಮಾಡಿರೋದು ಸುಳ್ಳು ಸುದ್ದಿಯಾಗಿದೆ. ಭಾರತೀಯ ಸೇನೆಯು ಪಾಕಿಸ್ತಾನದ ಡ್ರೋನ್‌ಗಳನ್ನ ಹೊಡೆದುರುಳಿಸಿದೆ ಎಂದಿದ್ದಾರೆ. ಇದನ್ನೂ ಓದಿ: ಗುಂಡಿನ ದಾಳಿ, ಮಿಲಿಟರಿ ಕಾರ್ಯಾಚರಣೆ ನಿಲ್ಲಿಸಲು ಭಾರತ-ಪಾಕ್‌ ಒಪ್ಪಂದ: ಜೈಶಂಕರ್‌

    ಭಾರತೀಯ ಸೇನೆಯು(Indian Army) ಕೇವಲ ಪಾಕ್‌ನ ಸೇನಾವಲಯಗಳನ್ನ ಮಾತ್ರ ಗುರಿ ಮಾಡಿ ದಾಳಿ ಮಾಡಿದೆ. ಪಾಕಿಸ್ತಾನ ಸುಳ್ಳು ಸುದ್ದಿಗಳನ್ನ ಹಬ್ಬಿಸುತ್ತಿದೆ. ನಮ್ಮ ದಾಳಿಯಿಂದ ಪಾಕಿಸ್ತಾನ ಸೇನೆಗೆ ಸಾಕಷ್ಟು ನಷ್ಟವಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿದೆ: ಪಾಕ್ ವಿದೇಶಾಂಗ ಸಚಿವ ಘೋಷಣೆ

    ಭಾರತೀಯ ಸೇನೆಯು ಪಾಕಿಸ್ತಾನದ ಯಾವುದೇ ಮಸೀದಿಗಳನ್ನ ಟಾರ್ಗೆಟ್ ಮಾಡಿಲ್ಲ. ಕೇವಲ ಪಾಕ್ ಉಗ್ರರ ನೆಲೆಗಳನ್ನ ಧ್ವಂಸ ಮಾಡಿದ್ದೇವೆ. ಪಾಕಿಸ್ತಾನ ಏರ್‌ಬೇಸ್‌ಗಳನ್ನ ಹೊಡೆದುರುಳಿಸಿದ್ದೇವೆ. ಎಲ್‌ಓಸಿಯಲ್ಲಿಯೂ ಪಾಕಿಸ್ತಾನ ಗುಂಡಿನ ದಾಳಿ ಮಾಡಿತ್ತು. ಅದಕ್ಕೆ ಪ್ರತಿಯಾಗಿ ಭಾರತ ದಾಳಿ ಮಾಡಿದ ವೇಳೆ ಅವರಿಗೂ ನಷ್ಟವಾಗಿದೆ. ಎಲ್ಲಾ ಸಮಯದಲ್ಲೂ ನಮ್ಮ ಸೇನೆ ಅಲರ್ಟ್ ಇರಲಿದೆ. ಪಾಕ್ ದಾಳಿಗೆ ಪ್ರತಿದಾಳಿ ಮಾಡಲು ಸಿದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.

  • ಭಾರತದ 36 ಕಡೆ 400 ಮಿಸೈಲ್‌ನಿಂದ ಪಾಕ್ ದಾಳಿ: ಕರ್ನಲ್ ಸೋಫಿಯಾ ಖುರೇಷಿ

    ಭಾರತದ 36 ಕಡೆ 400 ಮಿಸೈಲ್‌ನಿಂದ ಪಾಕ್ ದಾಳಿ: ಕರ್ನಲ್ ಸೋಫಿಯಾ ಖುರೇಷಿ

    – ಪಾಕ್‌ನ ಎಲ್ಲಾ ಮಿಸೈಲ್ ನಾಶ ಮಾಡಿದ್ದೇವೆ

    ನವದೆಹಲಿ: ಭಾರತದ 36 ಕಡೆ 400 ಮಿಸೈಲ್ ಬಳಸಿಕೊಂಡು (Missile Attack) ಗುರುವಾರ ರಾತ್ರಿ ಪಾಕಿಸ್ತಾನ ದಾಳಿ ನಡೆಸಿದೆ ಎಂದು ಕರ್ನಲ್ ಸೋಫಿಯಾ ಖುರೇಷಿ ( Colonel Sofiya Qureshi) ಅಧಿಕೃತ ಮಾಹಿತಿ ನೀಡಿದ್ದಾರೆ.

    ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುರುವಾರ ರಾತ್ರಿ 8ರಿಂದ 9 ಗಂಟೆಗೆ ಆರಂಭವಾಗಿ ಮಧ್ಯರಾತ್ರಿವರೆಗೂ ಭಾರತದ ಮೇಲೆ ಪಾಕಿಸ್ತಾನ ನಿರಂತರ ದಾಳಿ ನಡೆಸಿದೆ. 36 ಕಡೆ 300ರಿಂದ 400 ಪಾಕ್ ಡ್ರೋನ್ ಮಿಸೈಲ್ ದಾಳಿ ಮಾಡಿದೆ. ಪಾಕ್‌ನ ಎಲ್ಲಾ ಮಿಸೈಲ್‌ಗಳನ್ನು ನಾಶ ಮಾಡಲಾಗಿದೆ. ಅಲ್ಲದೇ ಗುಂಡಿನ ದಾಳಿಯನ್ನೂ ಮಾಡಿದೆ. ಪಾಕಿಸ್ತಾನ ಎಲ್‌ಒಸಿಯಲ್ಲಿ ಗುಂಡಿನ ದಾಳಿ ಮಾಡಿದೆ. ಪಂಜಾಬ್, ಭಟಿಂಡಾ ಸೇನಾ ನೆಲೆ ಮೇಲೆ ಪಾಕ್ ದಾಳಿಗೆ ಯತ್ನಿಸಿದೆ ಎಂದರು. ಇದನ್ನೂ ಓದಿ: ಪಾಕ್‌ನಿಂದ ಶೆಲ್ ದಾಳಿ – ಸ್ಥಳಾಂತರಗೊಂಡ ಜನರೊಂದಿಗೆ ಕ್ರಿಕೆಟ್ ಆಡಿದ ಜಮ್ಮು ಸಿಎಂ

    ಪಾಕಿಸ್ತಾನ ತನ್ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಸ್ಥಗಿತ ಮಾಡಿಲ್ಲ. ಪಾಕಿಸ್ತಾನ, ಭಾರತದ ಏರ್ ಸ್ಟೇಷನ್‌ಗಳ ಮೇಲೆ ದಾಳಿ ಮಾಡಲು ಯತ್ನಿಸಿದೆ. ತನ್ನ ನಾಗರಿಕ ವಿಮಾನ ಬಳಸಿಕೊಂಡು ಬೇಜವಾಬ್ದಾರಿತನ ತೋರಿದೆ. ಈ ಮೂಲಕ ಪಾಕಿಸ್ತಾನ ಅಂತಾರಾಷ್ಟ್ರೀಯ ನಿಯಮಗಳನ್ನ ಉಲ್ಲಘಂನೆ ಮಾಡಿದೆ. ಆದರೆ ಭಾರತ ನಾಗರಿಕರಿಗೆ ಧಕ್ಕೆಯಾಗದಂತೆ ಪ್ರತಿದಾಳಿ ಮಾಡಿದೆ. ಈ ಮೂಲಕ ಭಾರತ ಅಂತಾರಾಷ್ಟ್ರೀಯ ನಿಯಮಗಳನ್ನು ಉಲ್ಲಂಘನೆ ಮಾಡಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಅಗತ್ಯ ಬಿದ್ದರೆ ಮದರಸಾದ ಮಕ್ಕಳನ್ನು ಯುದ್ಧಕ್ಕೆ ಬಳಸಿಕೊಳ್ತೀವಿ: ಪಾಕ್‌ ರಕ್ಷಣಾ ಸಚಿವ

    ಟರ್ಕಿಯ ಡ್ರೋನ್‌ಗಳನ್ನು ಬಳಸಿಕೊಂಡು ಪಾಕಿಸ್ತಾನ ಭಾರತದ ಮೇಲೆ ದಾಳಿ ನಡೆಸಿದೆ. ಕೈನೆಟಿಕ್ ಮತ್ತು ನಾನ್ ಕೈನೆಟಿಕ್ ಎರಡೂ ರೀತಿಯಲ್ಲೂ ಪಾಕ್ ಡ್ರೋನ್‌ಗಳನ್ನು ನಾಶಪಡಿಸಲಾಗಿದೆ. ಡ್ರೋನ್‌ನ ಅವಶೇಷಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ. ವರದಿಯಲ್ಲಿ ಇದು ಟರ್ಕಿ ನಿರ್ಮಿತ ಡ್ರೋನ್‌ಗಳು ಎಂದು ತಿಳಿದು ಬಂದಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಭಾರತ-ಪಾಕ್ ಯುದ್ಧ ಭೀತಿ – ಕುತುಬ್ ಮಿನಾರ್ ಸೇರಿ ದೆಹಲಿಯ ಹಲವು ಐತಿಹಾಸಿಕ ತಾಣಗಳಿಗೆ ಬಿಗಿಭದ್ರತೆ