Tag: Comedy Actor

  • ದರ್ಶನ್‌ಗೆ ಮಾದರಿಯಾದ ಸಂಜು ಬಸಯ್ಯ – ಪತ್ನಿಗೆ ಅಶ್ಲೀಲ ಮೆಸೇಜ್ ಕಳಿಸಿದವನಿಗೆ ಬುದ್ಧಿ ಹೇಳಿದ ನಟ

    ದರ್ಶನ್‌ಗೆ ಮಾದರಿಯಾದ ಸಂಜು ಬಸಯ್ಯ – ಪತ್ನಿಗೆ ಅಶ್ಲೀಲ ಮೆಸೇಜ್ ಕಳಿಸಿದವನಿಗೆ ಬುದ್ಧಿ ಹೇಳಿದ ನಟ

    ಬೆಳಗಾವಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಇಡೀ ರಾಜ್ಯಾದ್ಯಂತ ಸದ್ದು ಮಾಡಿತ್ತು. ನಟಿ ಹಾಗೂ ದರ್ಶನ್ (Darshan) ಆಪ್ತೆ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೆಸೇಜ್ ಕಳಿಸಿದ್ದಕ್ಕೆ ದರ್ಶನ್ ಅಂಡ್ ಗ್ಯಾಂಗ್ ಭೀಕರವಾಗಿ ಹತ್ಯೆ ನಡೆಸಿದ ಆರೋಪ ಈಗಲೂ ಇದೆ. ಇದೇ ರೀತಿ ಪ್ರಕರಣವೊಂದು ಈಗ ಬೆಳಗಾವಿಯಲ್ಲಿ ನಡೆದಿದೆ. ಆದ್ರೆ ಪತ್ನಿಗೆ ಇನ್ಸ್ಟಾಗ್ರಾಮ್‌ ಅಶ್ಲೀಲವಾಗಿ ಮೆಸೇಜ್ ಕಳಿಸಿದ್ದ ಯುವಕನಿಗೆ ಬುದ್ಧಿ ಹೇಳಿ ಕಳುಹಿಸುವ ಮೂಲಕ ಹಾಸ್ಯನಟ ಸಂಜು ಬಸಯ್ಯ (Sanju Basayya) ದರ್ಶನ್‌ಗೆ ಮಾದರಿಯಾಗಿದ್ದಾರೆ.

    ಹೌದು, ಸಂಜು ಬಸಯ್ಯ ಅವರ ಪತ್ನಿ ನಟಿ ಪಲ್ಲವಿ ಸಂಜು ಬಸಯ್ಯ (Pallavi Sanju Basayya) ಅವರಿಗೆ ವಿಜಯನಗರ ಮೂಲದ ಮನೋಜ್ ಎಂಬ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಯುವಕ ಇನ್ಸ್ಟಾಗ್ರಾಮ್‌ ಮೂಲಕ ಅಶ್ಲೀಲ ಸಂದೇಶ ಕಳುಹಿಸಿದ್ದ. ಇದನ್ನೂ ಓದಿ: ಕಿರುತೆರೆ ನಟಿ ಶ್ರುತಿಗೆ ಮನೆಯಲ್ಲೇ ಚಾಕು ಇರಿದು ಕೊಲೆಗೆ ಯತ್ನ, ಪತಿ ಅರೆಸ್ಟ್‌

    ಅಶ್ಲೀಲ ಮೆಸೇಜ್ ಜೊತೆಗೆ ಅಶ್ಲೀಲ ಫೋಟೊಗಳನ್ನೂ ಕಳಿಸಿದ್ದ. ಇದರಿಂದ ಸಂಯಮ ಕಳೆದುಕೊಳ್ಳದ ಸಂಜು ಬಸಯ್ಯ ಅವರು ಬೈಲಹೊಂಗಲ ಪೊಲೀಸ್ (Bailahongala Police) ಠಾಣೆಗೆ ದೂರು ನೀಡಿದ್ದರು. ದೂರು ದಾಖಲಾಗುತ್ತಿದ್ದಂತೆ ಅಲರ್ಟ್ ಆದ ಪೊಲೀಸರು, ಅಶ್ಲೀಲ ಸಂದೇಶ ಕಳಿಸಿದ ಯುವಕನಿಗೆ ಬುದ್ಧಿ ಹೇಳಿ ಕಳುಹಿಸಿದ್ದಾರೆ. ಇದನ್ನೂ ಓದಿ: ಗಾರೆ ಕೆಲಸದವನ ಜೊತೆ ಕಂಟ್ರ್ಯಾಕ್ಟರ್ ಮಗಳ ಲವ್ – ಮದ್ವೆಯಾದ 15 ದಿನಕ್ಕೆ ಓಡಿಬಂದ ಗೃಹಿಣಿ!

    ಯುವಕನ ಭವಿಷ್ಯ ಹಾಳಾಗಬಾರದೆಂದು ಸಂಜು ಬಸಯ್ಯ ಅವರು ಬುದ್ಧಿ ಹೇಳಿ ಕಳುಹಿಸಿದ್ದಾರೆ. ಇಂತಹದೇ ಪ್ರಕರಣದಲ್ಲಿ ಸದ್ಯ ಬಂಧಿಯಾಗಿದ್ದ ನಟ ದರ್ಶನ್‌ಗೆ ಸಂಜು ಬಸಯ್ಯ ಮಾದರಿಯಾಗಿದ್ದಾರೆ. ಇದನ್ನೂ ಓದಿ: ರೀಲ್ಸ್‌ ಹುಚ್ಚಿನಿಂದ ಎಡವಟ್ಟು, ಸ್ಟಂಟ್‌ ಮಾಡ್ತಿದ್ದಾಗಲೇ 300 ಅಡಿ ಆಳದ ಕಂದಕಕ್ಕೆ ಬಿದ್ದ ಕಾರು – ಎದೆ ಝಲ್ ಎನಿಸುವ ದೃಶ್ಯ ಸೆರೆ!

    ಇದೀಗ ಯುವಕ, ನಾನು ಬಹಳ ದಿವಸದಿಂದ ಇನ್‌ಸ್ಟಾಗ್ರಾಂ ಬಳಸುತ್ತಿದ್ದೆ. ಪಲ್ಲು ಸಂಜು ಅಫಿಷಿಯಲ್ ಖಾತೆಗೆ ಕೆಟ್ಟ ಕಾಮೆಂಟ್ ಹಾಗೂ ಅಶ್ಲೀಲ ವಿಡಿಯೋ ಕಳುಹಿಸಿದ್ದೆ. ಈ ಬಗ್ಗೆ ಸಂಜು ಬಸಯ್ಯ ಅವರು ಬೈಲಹೊಂಗಲ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪೊಲೀಸರು ನನ್ನನ್ನ ಕರೆಸಿ, ಶಿಕ್ಷೆ ಕೊಟ್ಟಿದ್ದಾರೆ. ನನಗೆ ನನ್ನ ತಪ್ಪಿನ ಅರಿವಾಗಿದೆ. ನಾನು ಮಾಡಿದಂತೆ ಇನ್ಯಾರೂ ಈ ರೀತಿ ಮಾಡಬೇಡಿ. ಎಲ್ಲರಲ್ಲೂ ಕ್ಷಮೆ ಕೇಳ್ತೀನಿ ಎಂದು ತಪ್ಪೊಪ್ಪಿಕೊಂಡಿದ್ದಾನೆ.

  • ದರ್ಶನ್‌, ಚಿಕ್ಕಣ್ಣ ಕರೆತಂದು ಸ್ಟೋನಿಬ್ರೂಕ್‌ ಪಬ್‌ನಲ್ಲಿ ಸ್ಥಳ ಮಹಜರು – ಮೂಲೆಮೂಲೆಯನ್ನೂ ಜಾಲಾಡಿದ ಪೊಲೀಸರು!

    ದರ್ಶನ್‌, ಚಿಕ್ಕಣ್ಣ ಕರೆತಂದು ಸ್ಟೋನಿಬ್ರೂಕ್‌ ಪಬ್‌ನಲ್ಲಿ ಸ್ಥಳ ಮಹಜರು – ಮೂಲೆಮೂಲೆಯನ್ನೂ ಜಾಲಾಡಿದ ಪೊಲೀಸರು!

    ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿಯ ಕೊಲೆ ನಡೆದ ಜೂನ್‌ 8ರ ಶನಿವಾರದಂದು ದರ್ಶನ್‌ ಮತ್ತು ಗ್ಯಾಂಗ್‌ನ ಸದಸ್ಯರು ಪಾರ್ಟಿ ಮಾಡಿದ್ದರು ಎನ್ನಲಾದ ಆರ್‌ಆರ್‌ ನಗರದ ಸ್ಟೋನಿ ಬ್ರೂಕ್‌ ಪಬ್‌ನಲ್ಲಿಂದು (Stonny Brook Pub) ಪೊಲೀಸರು ಮಹಜರು ನಡೆಸಿದರು.

    ಅನ್ನಪೂರ್ಣೇಶ್ವರಿ ಠಾಣೆ ಪೊಲೀಸರು (Annapurneshwari Nagar Police) ನಟ ದರ್ಶನ್, ರೆಸ್ಟೊರೆಂಟ್ ಮಾಲೀಕ ವಿನಯ್, ಪ್ರದೂಶ್, ಪವನ್ ಆರೋಪಿಗಳನ್ನ ಕರೆತಂದು ಎಸಿಪಿ ಭರತ್‌ ರೆಡ್ಡಿ ಅವರ ನೇತೃತ್ವದಲ್ಲಿ ಸ್ಥಳ ಮಹಜರು ನಡೆಸಿದರು. ಸ್ಟಾರ್‌ ಕಾಮಿಡಿ ನಟ ಚಿಕ್ಕಣ್ಣ ಅವರೂ ಅಂದಿನ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎಂಬ ಕಾರಣಕ್ಕೆ ಚಿಕ್ಕಣ್ಣ ಅವರನ್ನು ಕರೆತಂದು ಸ್ಥಳ ಮಹಜರು ನಡೆಸಲಾಯಿತು. ಇದನ್ನೂ ಓದಿ: ಕಳೆದ 3 ದಶಕಗಳಲ್ಲಿ ದೇಶ ಕಂಡ ಡೆಡ್ಲಿ ರೈಲು ದುರಂತಗಳ ಬಗ್ಗೆ ನಿಮಗೆ ಗೊತ್ತಾ?

    ಪಬ್‌ನ ಮೂಲೆ ಮೂಲೆಯನ್ನು ಜಾಲಾಡಿದ ಪೊಲೀಸರು ಹಲವು ಮಾಹಿತಿಗಳನ್ನು ಕಲೆಹಾಕಿದರು. ದರ್ಶನ್‌ ಮತ್ತು ಗ್ಯಾಂಗ್‌ ಆರೋಪಿಗಳ ಜೊತೆಗೆ ಹಾಸ್ಯನಟ ಚಿಕ್ಕಣ್ಣ (Chikkanna) ರಿಂದಲೂ ಮಾಹಿತಿ ಕಲೆಹಾಕಿದರು. ಮೂಲಗಳು ಹೇಳುವಂತೆ ದರ್ಶನ್‌ ಮತ್ತು ಗ್ಯಾಗ್‌ ಅವರನ್ನು ಪೊಲೀಸರು ಸ್ಟೋನಿ ಬ್ರೂಕ್‌ ಪಬ್‌ಗೆ ಕರೆತರುವ 2 ಗಂಟೆಗೂ ಮುನ್ನವೇ ಪೊಲೀಸರು ಚಿಕ್ಕಣ್ಣ ಅವರನ್ನ ಕರೆತಂದು ಸ್ಥಳ ಮಹಜರು ನಡೆಸಿದ್ದರು ಎಂದು ತಿಳುದುಬಂದಿದೆ. ಸ್ಥಳ ಮಹಜರು ವೇಳೆ ಕೆಂಗೇರಿ ಮತ್ತು ಆರ್‌ಆರ್‌ ನಗರ ಪೊಲೀಸರಿಂದ ಪಬ್‌ ಸುತ್ತಲೂ ಬಿಗಿ ಭದ್ರತೆ ನಿಯೋಜಿಸಲಾಗಿತ್ತು. ಇದನ್ನೂ ಓದಿ:  ಸದ್ಯಕ್ಕಿನ್ನು ಆರೋಪಿಯಷ್ಟೇ, ಅಪರಾಧಿಯಾಗಿಲ್ಲ- ಅನುಷಾ ರೈ ರಿಯಾಕ್ಷನ್

    ಚಿಕ್ಕಣ್ಣಗ್ಗೆ ಏಕೆ ನೋಟಿಸ್‌?
    ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ದರ್ಶನ್‌ (Darshan) ಗ್ಯಾಂಗ್‌ ಬಂಧನವಾದ ಬೆನ್ನಲ್ಲೇ ವಿಚಾರಣೆಗೆ ಹಾಜರಾಗುವಂತೆ ಸ್ಯಾಂಡಲ್‌ವುಡ್‌ (Sandalwood) ಖ್ಯಾತ ಹಾಸ್ಯನಟ ಚಿಕ್ಕಣ್ಣಗೆ (Chikkanna) ಪೊಲೀಸರು ನೋಟಿಸ್‌ ನೀಡಿದ್ದರು. ರೇಣುಕಾಸ್ವಾಮಿ ಕೊಲೆ ನಡೆದ ಜೂನ್‌ 8 ಶನಿವಾರದಂದು ದರ್ಶನ್‌ ಮತ್ತು ಗ್ಯಾಂಗ್‌ ಸದಸ್ಯರು ಆರ್‌ಆರ್‌ ನಗರದ ಸ್ಟೋನಿಬ್ರೂಕ್‌ ಪಬ್‌ನಲ್ಲಿ ಮಧ್ಯಾಹ್ನದಿಂದ ಪಾರ್ಟಿ ಮಾಡಿದ್ದರು. ಈ ಪಾರ್ಟಿಯಲ್ಲಿ ಚಿಕ್ಕಣ್ಣ ಭಾಗಿಯಾಗಿದ್ದರು ಎನ್ನಲಾಗಿತ್ತು. ಸಂಜೆ ವೇಳೆಗೆ ಸ್ವಲ್ಪ ಕೆಲಸವಿದೆ ಎಂದು ಹೇಳಿ ದರ್ಶನ್ ಹೊರಟಿದ್ದರು. ರೇಣುಕಾಸ್ವಾಮಿ ಕೊಲೆಯಾದ ದಿನವೇ ದರ್ಶನ್‌ ಜೊತೆ ಪಾರ್ಟಿ ಮಾಡಿದ್ದರು ಅನ್ನೋ ಮಾಹಿತಿ ಕೇಳಿಬಂದಿದ್ದರಿಂದ ಪೊಲೀಸರು ತುರ್ತು ವಿಚಾರಣೆಗೆ ಹಾಜರಾಗುವಂತೆ ಚಿಕ್ಕಣ್ಣಗೆ ನೋಟಿಸ್‌ ನೀಡಿದ್ದರು.

  • ತೆಲುಗಿನ ಹಾಸ್ಯನಟ ರಘು ಕರುಮಂಚಿ ತಂದೆ ವಿಧಿವಶ

    ತೆಲುಗಿನ ಹಾಸ್ಯನಟ ರಘು ಕರುಮಂಚಿ ತಂದೆ ವಿಧಿವಶ

    ತೆಲುಗಿನ ಸಾಕಷ್ಟು ಸಿನಿಮಾಗಳಲ್ಲಿ ಹಾಸ್ಯ ನಟನಾಗಿ ಗಮನ ಸೆಳೆದ ರಘು ಕರುಮಂಚಿ ಅವರ ತಂದೆ ವೆಂಕಟ್ ರಾವ್ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವೆಂಕಟ್ ರಾವ್ ಕೊನೆಯುಸಿರೆಳೆದಿದ್ದಾರೆ.

    ದಕ್ಷಿಣದ ಸಾಕಷ್ಟು ಸಿನಿಮಾಗಳಲ್ಲಿ ತಮ್ಮ ಹಾಸ್ಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ರಘು ಕರುಮಂಚಿ ತಂದೆ ವೆಂಕಟ್ ರಾವ್ ವಿಧಿವಶರಾಗಿದ್ದಾರೆ. ನಟ ರಘು ಅವರ ತಂದೆಗೆ 74 ವರ್ಷ ವಯಸ್ಸಾಗಿತ್ತು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಆಗಸ್ಟ್ 4 ಗುರುವಾರದಂದು ನಿಧನರಾಗಿದ್ದಾರೆ. ಇದನ್ನೂ ಓದಿ:ಲಂಡನ್ ಸ್ಟುಡಿಯೋದಲ್ಲಿ ಕನ್ನಡ ಚಿತ್ರಕ್ಕೆ ಹಿನ್ನೆಲೆ ಸಂಗೀತ

    ಜೂನ್ 10, 1947 ರಂದು ಜನಿಸಿದ ವೆಂಕಟ್ ರಾವ್ ಅವರು ಭಾರತೀಯ ಸೇನೆಯಲ್ಲಿ ಕೆಲಸ ಮಾಡುವ ಮೂಲಕ ದೇಶಕ್ಕೆ ಸೇವೆ ಸಲ್ಲಿಸಿದರು ಮತ್ತು ಪ್ರಸ್ತುತ ನಿವೃತ್ತಿಯ ನಂತರ ಮನೆಯಲ್ಲೇ ಇದ್ದು ತಮ್ಮ ಕುಟುಂಬವನ್ನು ನೋಡಿಕೊಳ್ಳುತ್ತಿದ್ದರು. ನಟ ರಘು ಅವರ ತಂದೆಯ ಸಾವಿಗೆ ಕುಟುಂಬಸ್ಥರು, ಹಿತೈಷಿಗಳು ಸಂತಾಪ ಸೂಚಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಚಿಕ್ಕಣ್ಣನ ಮದುವೆ ಮುಂದಿನ ವರ್ಷ ಫಿಕ್ಸ್: ಕುಟುಂಬದ ಒತ್ತಡಕ್ಕೆ ಕೊನೆಗೂ ಮಣಿದ ನಟ

    ಚಿಕ್ಕಣ್ಣನ ಮದುವೆ ಮುಂದಿನ ವರ್ಷ ಫಿಕ್ಸ್: ಕುಟುಂಬದ ಒತ್ತಡಕ್ಕೆ ಕೊನೆಗೂ ಮಣಿದ ನಟ

    ನಟ ಚಿಕ್ಕಣ್ಣನ ಮದುವೆ ವಿಚಾರವಾಗಿ ನೂರಾರು ಸಲ ಗಾಸಿಪ್ ಗಳು ಗಾಂಧಿನಗರದಲ್ಲಿ ಹರಡಿವೆ. ನಿರೂಪಕಿ ಅನುಶ್ರೀ ಅವರ ಜೊತೆ ಮದುವೆಯಾಗಿದ್ದಾರೆ ಎನ್ನುವುದರಿಂದ ಹಿಡಿದು, ನಾನಾ ನಟಿಯರ ಹೆಸರು ಅವರ ಮದುವೆಯ ಯಾದಿಯಲ್ಲಿ ಕಾಣಿಸಿಕೊಂಡಿವೆ. ಅವೆಲ್ಲವೂ ಈವರೆಗೂ ಸುಳ್ಳಾಗಿದ್ದವು. ಈ ಬಾರಿ ನಿಜ ಸಂಗತಿಯೊಂದು ತೇಲಿ ಬಂದಿದೆ. ಮುಂದಿನ ವರ್ಷ ಪಕ್ಕಾ ಚಿಕ್ಕಣ್ಣ ಮದುವೆಯಾಗಲಿದ್ದಾರಂತೆ. ಅದಕ್ಕೆ ಕಾರಣ ಅವರ ಕುಟುಂಬದ ಒತ್ತಡ.

    ಸದ್ಯ ಚಿಕ್ಕಣ್ಣ ಉಪಾಧ್ಯಕ್ಷ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಮೊದಲ ಹಂತದ ಚಿತ್ರೀಕರಣ ಮುಗಿಸಿಕೊಂಡು ಬಂದಿರುವ ಅವರು, ಎರಡನೇ ಹಂತದ ಶೂಟಿಂಗ್ ಗಾಗಿ ಸಿದ್ಧತೆ ನಡೆಸಿದ್ದಾರೆ. ಈ ನಡುವೆ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಉಪಾಧ್ಯಕ್ಷ ಸಿನಿಮಾದ ಶೂಟಿಂಗ್ ಮುಗಿಯುತ್ತಿದ್ದಂತೆಯೇ ಅವರು ಹಸೆಮಣೆ ಏರಲಿದ್ದಾರಂತೆ. ಈ ಸಲ ಮಾತ್ರ ಮದುವೆ ವಿಚಾರ ಯಾವುದೇ ಕಾರಣಕ್ಕೂ ಗಾಸಿಪ್ ಆಗಲ್ಲ ಎಂದು ನಿಜ ನುಡಿದಿದ್ದಾರೆ. ಇದನ್ನೂ ಓದಿ: ಆಮೀರ್ ಖಾನ್ ಮನೆಯ ಔತಣ ಕೂಟದಲ್ಲಿ ಧನುಷ್‌ ನಟನೆಯ ಹಾಲಿವುಡ್ ಚಿತ್ರತಂಡ

    ಚಿಕ್ಕಣ್ಣ ಮದುವೆ ಆಗುತ್ತಿರುವ ಹುಡುಗಿ ಯಾರು? ಸಿನಿಮಾ ರಂಗದಲ್ಲೇ ಇದ್ದಾರಾ ಅಥವಾ ಕುಟುಂಬದವರು ಹುಡುಗಿಯನ್ನು ಹುಡುಕಿದ್ದಾರೆ? ಈ ಕುರಿತು ಅವರು ಏನನ್ನೂ ಹೇಳಿಲ್ಲ. ಆದರೆ, ಉಪಾಧ್ಯಕ್ಷ ಸಿನಿಮಾದ ಶೂಟಿಂಗ್ ಮುಗಿಯುತ್ತಿದ್ದಂತೆಯೇ ಮದುವೆ ಪಕ್ಕಾ ಎಂದು ಮಾತ್ರ ಹೇಳಿಕೊಂಡಿದ್ದಾರೆ. ಹಲವು ದಿನಗಳಿಂದ ಚಿಕ್ಕಣ್ಣ ಮದುವೆ ವಿಚಾರ ಓಡಾಡುತ್ತಿತ್ತು. ಅದಕ್ಕೀಗ ಫುಲ್ ಸ್ಟಾಪ್ ಇಡಲು ಅವರು ನಿರ್ಧಾರ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹಾಸ್ಯ ನಟ ರಾಜು ತಾಳಿಕೋಟೆಗೆ ಜೀವ ಬೆದರಿಕೆ

    ಹಾಸ್ಯ ನಟ ರಾಜು ತಾಳಿಕೋಟೆಗೆ ಜೀವ ಬೆದರಿಕೆ

    ವಿಜಯಪುರ: ಹಾಸ್ಯ ನಟ ರಾಜು ತಾಳಿಕೋಟೆ ಮೇಲೆ ಮಾರಾಣಾಂತಿಕ ಹಲ್ಲೆ ಜೊತೆಗೆ ಜೀವ ಬೆದರಿಕೆ ಹಾಕಿದ ಆರೋಪ ಕೇಳಿ ಬಂದಿದೆ. ಸದ್ಯ ರಾಜು ತಾಳಿಕೋಟಿ ಖಾಸಗಿ ಅಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

    ಅತ್ತ ರಾಜು ತಾಳಿಕೋಟೆ ಅಕ್ಕನ ಮಗನ ಹೆಂಡತಿ ಸನಾಗೆ ರಾಜು ತಾಳಿಕೋಟಿ ವಿಷ ಕುಡಿಸಿರುವುದಾಗಿ ಆರೋಪಿಸಿ ಸನಾ ದೂರು ದಾಖಲಿಸಿದ್ದಾರೆ. ಇತ್ತ ರಾಜು ತಾಳಿಕೋಟೆ ಕೂಡ ಶೇಖ್ ಮೋದಿ,ಸನಾ ಸೇರಿದಂತೆ ಸನಾ ತಂದೆ,ತಾಯಿ ಮೇಲೆ ದೂರು ದಾಖಲಿಸಿದ್ದಾರೆ.

    ಸನಾಳ ಅಕ್ಕನ ಗಂಡ ಶೇಖ್ ಮೋದಿ ಜೊತೆ ಸನಾ ಅನೈತಿಕ ಸಂಬಂಧ ಇಟ್ಟುಕೊಂಡಿದ್ದರು. ಅದರ ಹಿನ್ನೆಲೆ ನನ್ನ ಅಳಿಯ ಫಯಾಜ ಪರವಾಗಿ ಕೌಟುಂಬಿಕ ಕಲಹ ಬಗೆಹರಿಸಲು ಹೋದಾಗ ಈ ರೀತಿ ನನ್ನ ಮೇಲೆ ಸುಳ್ಳು ಆರೋಪ ಮಾಡಿ ದೂರು ದಾಖಲಿಸಿದ್ದಾರೆಂದು ರಾಜು ತಾಳಿಕೋಟೆ ತಮ್ಮ ಮೇಲೆ ಸನಾ ಕುಟುಂಬಸ್ಥರು ಮಾಡಿದ ಆರೋಪವನ್ನ ತಳ್ಳಿಹಾಕಿದ್ದಾರೆ. ಇದನ್ನೂ ಓದಿ: ಹಾಸ್ಯನಟ ರಾಜು ತಾಳಿಕೋಟೆ ವಿರುದ್ಧ ಹಲ್ಲೆ ಆರೋಪ

    ರಾಜು ತಾಳಿಕೋಟೆ ಅವರ ಅಕ್ಕನ ಮಗ ಫಯಾಜ್ ಹೆಂಡತಿ ಸನಾ ಕೂಡ ಖಾಸಗಿ ಅಸ್ಪತ್ರೆಗೆ ದಾಖಲಾಗಿದ್ದು, ರಾಜು ತಾಳಿಕೋಟೆ, ಗಂಡ ಫಯಾಜ್ ಸೇರಿದಂತೆ ಹಲವರು ನನ್ನ ಮೇಲೆ ಹಲ್ಲೆಗೈದಿದ್ದಾರೆಂದು ಆರೋಪಿಸಿ ದೂರು ದಾಖಲಿಸಿದ್ದಾಳೆ. ಪತಿಬಫಯಾಜ್ ಅನೈತಿಕ ಸಂಬಂಧ ಹೊಂದಿದ್ದಾನೆ. ಅದನ್ನ ಪ್ರಶ್ನಿಸಿದ್ದಕ್ಕೆ ನನಗೆ ಈ ಶಿಕ್ಷೆ ಎಂದು ದೂರಿದ್ದಾರೆ.

    ಸದ್ಯ ಎರಡು ಕಡೆಯಿಂದ ದೂರು ದಾಖಲಾಗಿದ್ದು, ಪೊಲೀಸರ ತನಿಖೆಯ ನಂತರ ಸತ್ಯಾಸತ್ಯತೆ ತಿಳಿಯಲಿದೆ.

  • ನಿನ್ನ ಬಳಿ ದುಡ್ಡಿಲ್ಲ ಎಂದು ಮಜಾ ಭಾರತದ ಕಲಾವಿದನಿಗೆ ಕೈ ಕೊಟ್ಟ ಪತ್ನಿ

    ನಿನ್ನ ಬಳಿ ದುಡ್ಡಿಲ್ಲ ಎಂದು ಮಜಾ ಭಾರತದ ಕಲಾವಿದನಿಗೆ ಕೈ ಕೊಟ್ಟ ಪತ್ನಿ

    ಮಂಡ್ಯ: ನಿನ್ನ ಬಳಿ ದುಡ್ಡಿಲ್ಲ ಎಂದು ಹಾಸ್ಯ ಕಲಾವಿದನಿಗೆ ಪತ್ನಿ ಕೈ ಕೊಟ್ಟು ಬೇರೊಬ್ಬನೊಂದಿಗೆ ಮದುವೆಯಾಗಿರುವ ಪ್ರಸಂಗವೊಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಾಳಸಿದ್ದನಹುಂಡಿಯಲ್ಲಿ ನಡೆದಿದೆ.

    ಕೊರೊನಾ ಕಾರಣದಿಂದ ಹಲವಾರು ಜನ ದುಡ್ಡಿಲ್ಲದೆ ಕಷ್ಟವನ್ನು ಅನುಭವಿಸುತ್ತಿದ್ದಾರೆ. ಅದರಲ್ಲೂ ನಟನೆಯೇ ಜೀವನವೆಂದು ಬದುಕುತ್ತಿರುವ ಕಲಾವಿದರು ತಮ್ಮ ದಿನನಿತ್ಯದ ಜೀವನ ಸಾಗಿಸಲು ತುಂಬಾ ಕಷ್ಟ ಪಡುತ್ತಿದ್ದಾರೆ. ಮಜಾಭಾರತ ಕಾಮಿಡಿ ಶೋ ಹಾಸ್ಯ ಕಲಾವಿದ ಕಾಳಸಿದ್ದನಹುಂಡಿಯ ರವಿ ಅವರು, ಸಣ್ಣ-ಪುಟ್ಟ ಸೀರಿಯಲ್‍ಗಳಲ್ಲಿ ನಟಿಸುತ್ತಿದ್ದರು. ಅವರು 4 ವರ್ಷದ ಹಿಂದೆ ಮೈಸೂರು ಮೂಲದ ಬೇಬಿ ಎಂಬಾಕೆಯನ್ನು ಪ್ರೀತಿಸಿ, ಮನೆಯವರ ವಿರೋಧವಿದ್ದರೂ ಮದುವೆಯಾಗಿದ್ದರು. ಆ ಬಳಿಕ ಕೊರೊನಾ ಕಷ್ಟಕಾಲದಲ್ಲಿ ರವಿ ಅವರಿಗೆ ಎಲ್ಲಿಯೂ ಸಹ ಅವಕಾಶಗಳು ಸಿಗದೆ ಕಷ್ಟದ ಜೀವನ ನಡೆಸುತ್ತಿದ್ದರು. ಇದನ್ನೂ ಓದಿ: ಕಿಚ್ಚನ ಹೊಸ ಹೇರ್ ಸ್ಟೈಲ್‍ಗೆ ಫ್ಯಾನ್ಸ್ ಫಿದಾ

    ಈ ಹಿನ್ನೆಲೆ ಪತ್ನಿ ಬೇಬಿ ಮತ್ತೊಬ್ಬನ ಜೊತೆ ಅಕ್ರಮ ಸಂಬಂಧವನ್ನು ಇಟ್ಟುಕೊಂಡಿದ್ದರು. ಇದು ರವಿ ಅವರಿಗೆ ತಿಳಿದು ಪ್ರಶ್ನಿಸಿದ್ದಾರೆ. ಬಳಿಕ ನಿನ್ನ ಬಳಿ ದುಡ್ಡಿಲ್ಲ ಎಂದು ಬೇಬಿ ಕಾರಣ ಕೊಟ್ಟು ರವಿ ಅವರನ್ನು ಬಿಟ್ಟು ಹೋಗಿದ್ದಾರೆ. ಅಲ್ಲದೇ ದೂರವಾದ ಬಳಿಕ ಮತ್ತೊಂದು ಮದುವೆಯನ್ನು ಮಾಡಿಕೊಂಡಿದ್ದಾರೆ. ಇದನ್ನು ತಡೆಯಲು ಹೋಗಿದ್ದ ರವಿ ಮೇಲೆ ಬೇಬಿ ಅವರ ಎರಡನೇ ಗಂಡ ಹಾಗೂ ಆಕೆ ತಮ್ಮನಿಂದ ಹಲ್ಲೆ ನಡೆದಿದ್ದು, ಈ ಕುರಿತು ಅವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ವಿಭಿನ್ನವಾಗಿ ರಕ್ಷಾ ಬಂಧನ ಆಚರಿಸಿದ ಸೆಲೆಬ್ರಿಟಿಗಳು

    ರವಿ ಮತ್ತು ಬೇಬಿ 4 ವರ್ಷದ ಹಿಂದೆ ಪರಸ್ಪರ ಪ್ರೀತಿಸಿ ಮನೆಯವರ ವಿರೋಧದ ನಡುವೆಯೂ ರಿಜಿಸ್ಟರ್ ಮ್ಯಾರೇಜ್ ಆಗಿದ್ರು. ಇವರು ಮೈಸೂರಿನಲ್ಲಿ 4 ವರ್ಷ ಬಾಡಿಗೆ ಮನೆಯಲ್ಲಿ ಸಂಸಾರ ಮಾಡಿದ್ದರು. ಅದು ಅಲ್ಲದೇ ಖಾಸಗಿ ವಾಹಿನಿಯ ಆದರ್ಶ ದಂಪತಿ ಶೋನಲ್ಲೂ ಸಹ ಭಾಗವಹಿಸಿದ್ದರು. ಈ ಶೋನಲ್ಲಿ ನಿರೂಪಕರು ಅವರ ಮದುವೆಗೆ ಗೈರಾಗಿದ್ದ ತಾಯಿ ಮುಂದೆ ಮತ್ತೊಮ್ಮೆ ಇಬ್ಬರಿಗೂ ತಾಳಿಕಟ್ಟಿಸಿದ್ದರು. ಈ ನಡುವೆ ಕೊರೊನಾ ಮೊದಲನೇ ಅಲೆಯಲ್ಲಿ ಅವರಿಗೆ ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದರು. ಅದಕ್ಕೆ ಅವರ ಪತ್ನಿ ಬೇಬಿ ಅವರನ್ನು ತೊರೆದು ಹೋಗಿದ್ದಾರೆ. ಇದನ್ನೂ ಓದಿ: ಕೆಜಿಎಫ್ ಬಿಡುಗಡೆಗೆ ದಿನಾಂಕ ನಿಗದಿ – ಏಪ್ರಿಲ್‍ನಲ್ಲಿ ರಾಖಿಬಾಯ್ ಆರ್ಭಟ

    ತನಗಾದ ಮೋಸದಂತೆ ಮತ್ಯಾರಿಗೂ ಆಗಬಾರದು, ಆಕೆಗೆ ಶಿಕ್ಷೆ ಆಗಬೇಕು ಎಂದು ಕಲಾವಿದ ರವಿ ಪಟ್ಟು ಹಿಡಿದಿದ್ದು, ನ್ಯಾಯಕ್ಕಾಗಿ ಕೋರ್ಟ್ ಮೊರೆ ಹೋಗಿದ್ದಾರೆ.

  • ರಾಜಕೀಯ ಕನಸು ಕಂಡಿದ್ದ ಬುಲೆಟ್ ಪ್ರಕಾಶ್: ರಂಗಾಯಣ ರಘು

    ರಾಜಕೀಯ ಕನಸು ಕಂಡಿದ್ದ ಬುಲೆಟ್ ಪ್ರಕಾಶ್: ರಂಗಾಯಣ ರಘು

    – ಪ್ರಕಾಶ್‍ಗೆ ಸ್ನೇಹ ಸಾಗರವೇ ಇದೆ

    ಬೆಂಗಳೂರು: ಗೆಳೆಯ ಬುಲೆಟ್ ಪ್ರಕಾಶ್ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ನೋವು ತಡೆದುಕೊಳ್ಳುವ ಶಕ್ತಿಯನ್ನು ಅವರ ಕುಟುಂಬಸ್ಥರಿಗೆ ದೇವರು ನೀಡಲಿ ಎಂದು ಹಾಸ್ಯ ನಟ ರಂಗಾಯಣ ರಘು ಹೇಳಿದ್ದಾರೆ.

    ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ನಾನು ಹಾಗೂ ಬುಲೆಟ್ ಪ್ರಕಾಶ್ ಹೋಗೋ ಬಾರೋ ಫ್ರೆಂಡ್ಸ್. ಅವರಿಗೆ ನಾನಷ್ಟೇ ಅಲ್ಲ ದೊಡ್ಡ ಸಂಖ್ಯೆಯ ಸ್ನೇಹ ಬಳಗವೇ ಇದೆ. ಪ್ರಕಾಶ್ ಅವರ ಏರಿಯಾದಲ್ಲಿ ಅನೇಕ ಸ್ನೇಹಿತರಿದ್ದಾರೆ. ಎಲ್ಲರೊಂದಿಗೂ ಹಾಸ್ಯವಾಗಿ, ನಗು ಮುಖದಿಂದ ಇರುತ್ತಿದ್ದರು. ಎಲ್ಲವನ್ನೂ ತಮಾಷೆಯಾಗಿ ತೆಗೆದುಕೊಳ್ಳುತ್ತಿದ್ದ ಎಂದು ನೆನೆದರು.

    ನೇರ ನುಡಿಯ ಗೆಳೆಯ ಪ್ರಕಾಶ್ ರಾಜಕೀಯ ಕನಸು ಕಂಡಿದ್ದ. ಅದರಂತೆ ಸಿದ್ಧತೆ ಕೂಡ ನಡೆಸಿದ್ದ. ಆದರೆ ಪ್ರಕಾಶ್ ಚಿಕ್ಕ ವಯಸ್ಸಿನಲ್ಲಿಯೇ ನಮ್ಮನ್ನ ಅಗಲಿದ್ದು ಭಾರೀ ನೋವು ತಂದಿದೆ. ಕನ್ನಡ ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರ ಎಂದು ರಂಗಾಯಣ ರಘು ಹೇಳಿದರು.

  • ಚಿತ್ರರಂಗದ ಕೆಲವರ ಬಗ್ಗೆ ಸಿದ್ದುಗೆ ದೂರು ಹೇಳಿದ ಟೆನ್ನಿಸ್ ಕೃಷ್ಣ

    ಚಿತ್ರರಂಗದ ಕೆಲವರ ಬಗ್ಗೆ ಸಿದ್ದುಗೆ ದೂರು ಹೇಳಿದ ಟೆನ್ನಿಸ್ ಕೃಷ್ಣ

    ಮೈಸೂರು: ಕನ್ನಡದ ಹಿರಿಯ ಹಾಸ್ಯ ಕಲಾವಿದ ಟೆನ್ನಿಸ್ ಕೃಷ್ಣ, ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಚಿತ್ರರಂಗದಲ್ಲಿರುವ ಎರಡು ಬಣಗಳ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರೆ.

    ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಟೆನ್ನಿಸ್ ಕೃಷ್ಣ ಚಿತ್ರರಂಗದ ಸದ್ಯದ ಪರಿಸ್ಥಿತಿಯನ್ನು ವಿವರಿಸಿದರು. ಸಿದ್ದು ಭೇಟಿ ಬಳಿಕ ಮಾತನಾಡಿದ ಅವರ, ಇಷ್ಟು ದಿನ ನಾನು ಸಿನಿಮಾದಲ್ಲಿ ಬ್ಯುಸಿಯಿದ್ದೆ. ಹಾಗಾಗಿ ಎಲ್ಲಿಯೂ ಕಾಣಿಸಿಕೊಳ್ಳುವುದಿಲ್ಲ. ಈಗ ಪಕ್ಕದ ರೋಡಿನಲ್ಲಿ ಶೂಟಿಂಗ್ ನಡೆಯುತ್ತಿತ್ತು. ಹಾಗಾಗಿ ನಾನು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದೆ. ಎಷ್ಟೋ ಬಾರಿ ಅವರು ನನಗೆ ಕರೆದುಕೊಂಡು ಬಂದು ಊಟ ಮಾಡಿಸಿದ್ದಾರೆ ಎಂದರು.

    ಇದೇ ವೇಳೆ, ಈ ನಡುವೆ ಜನ ಸಿನಿಮಾ ನೋಡುವುದು ಕಡಿಮೆ ಆಗಿದೆ. ಒಳ್ಳೆಯ ಸಿನಿಮಾ ಬರುತ್ತೆ, ಜನರು ಅದನ್ನು ನೋಡಿ ಪ್ರೋತ್ಸಾಹಿಸಬೇಕು. ಇತ್ತೀಚಿನ ದಿನಗಳಲ್ಲಿ ಹಿರಿಯ ಕಲಾವಿದರಿಗೆ ಸಿನಿಮಾ ಅವಕಾಶಗಳು ಕಡಿಮೆ ಆಗುತ್ತಿದೆ. ಈ ಮೊದಲು ನಾನು ಮಾಧ್ಯಮಗಳಲ್ಲಿ ಈ ಬಗ್ಗೆ ಮಾತನಾಡಿದ್ದೆ. ಹಾಗಾಗಿ ಈಗ ಹಿರಿಯ ನಟರಿಗೆ ಅವಕಾಶ ಸಿಗುತ್ತಿದೆ. ತುಂಬಾ ಜನ ಈ ಬಗ್ಗೆ ಮಾತನಾಡಲು ಹೆದರುಕೊಳ್ಳುತ್ತಿದ್ದರು. ನಾನು ಎಷ್ಟು ದಿನ ಕಾಯಲಿ ಎಂದು ಮಾತನಾಡಿದೆ, ಮಾತನಾಡಿದಕ್ಕೆ ಅವಕಾಶ ಸಿಕ್ತು ಎಂದರು.

    ನನಗೆ ಈಗ ಅನ್ನ ಇದೆ. ನಾನು ಈಗಲೂ ಉತ್ತರ ಕರ್ನಾಟಕಕ್ಕೆ ಹೋಗಿ ನಾಟಕದಲ್ಲಿ ಪಾತ್ರ ಮಾಡಿದ್ರೆ, 35 ಅಡಿ ಕಟೌಟ್ ಹಾಕುತ್ತಾರೆ. ನಾಟಕದಲ್ಲಿ ಪಾತ್ರ ಮಾಡಿದರೆ ನನಗೆ ಅನ್ನ ಸಿಗುತ್ತೆ. ಆದರೆ ಅಭಿಮಾನಿಗಳು ನೀವು ಯಾವಾಗ ಸಿನಿಮಾ ಮಾಡುತ್ತೀರಾ ಎಂದು ಕೇಳುತ್ತಿದ್ದಾರೆ. ಚಿತ್ರರಂಗದಲ್ಲಿ ಪ್ರತ್ಯೇಕ ಗುಂಪೊಂದು ಇದನ್ನು ನಿಯಂತ್ರಿಸುತ್ತಿತ್ತು. ಈಗ ಆ ಗುಂಪು ಒಡೆದು ಹೋಗಿದೆ. ಹಾಗಾಗಿ ನಮಗೆ ಅವಕಾಶಗಳು ಸಿಗುತ್ತಿದೆ ಎಂದು ಟೆನ್ನಿಸ್ ಕೃಷ್ಣ ಹೇಳಿದ್ದಾರೆ.

    ಅಲ್ಲದೆ ಸಿದ್ದರಾಮಯ್ಯ ಅವರ ಮಾತನ್ನು ಚಿತ್ರರಂಗದ ಹಲವರು ಕೇಳುತ್ತಾರೆ. ಹಾಗಾಗಿ ಸಿದ್ದರಾಮಯ್ಯ ಭೇಟಿಗೆ ಬಂದಿದ್ದೆ ಎಂದು ತಿಳಿಸಿದರು.

  • ತೆಲುಗಿನ ಖ್ಯಾತ ಹಾಸ್ಯನಟ ವೇಣು ಮಾಧವ್ ಇನ್ನಿಲ್ಲ

    ತೆಲುಗಿನ ಖ್ಯಾತ ಹಾಸ್ಯನಟ ವೇಣು ಮಾಧವ್ ಇನ್ನಿಲ್ಲ

    ಹೈದರಾಬಾದ್: ತೆಲುಗು ಚಿತ್ರರಂಗದ ಜನಪ್ರಿಯ ಹಾಸ್ಯ ನಟ ವೇಣು ಮಾಧವ್(39) ಅನಾರೋಗ್ಯದಿಂದ ಇಂದು ವಿಧಿವಶರಾಗಿದ್ದಾರೆ.

    ವೇಣು ಮಾಧವ್ ಅನೇಕ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಸಿಕಂದರಬಾದ್‍ ನಲ್ಲಿರುವ ಯಶೋಧ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

    ವೇಣು ಮಾಧವ್ ಅವರು ಯಕೃತ್ತು ತೀವ್ರ ಹಾನಿಗೆ ಒಳಗಾಗಿತ್ತು. ಹೀಗಾಗಿ ಅವರಿಗೆ ಯಕೃತ್ ಕಸಿ ಮಾಡುವ ಅವಶ್ಯಕತೆ ಇತ್ತು. ಆದರೆ ವೇಣು ಮಾಧವ್ ಸ್ಥಿತಿ ತೀವ್ರ ಚಿಂತಾಜನಕವಾಗಿದ್ದು, ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

    ಇವರು ತೆಲುಗು, ತಮಿಳು ಸೇರಿದಂತೆ ಅನೇಕ ಭಾಷೆಗಳ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಇದುವರೆಗೂ 170ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ನಟ ಚಿರಂಜೀವಿ, ಪ್ರಭಾಸ್, ಅಲ್ಲು ಅರ್ಜುನ್, ಪವನ್ ಕಲ್ಯಾಣ್ ಮತ್ತು ಮಹೇಶ್ ಬಾಬು ಸೇರಿದಂತೆ ಅನೇಕ ಮೇರು ನಟರ ಜೊತೆ ನಟಿಸಿದ್ದರು.

    ಕಡಪ ಜಿಲ್ಲೆಯ ಸೂರ್ಯ ಪೇಟೆ ವೇಣು ಮಾಧವ್ ಅವರ ಹುಟ್ಟೂರು. ಮಿಮಿಕ್ರಿ ನಟನಾಗಿದ್ದ ವೇಣು ಮಾಧವ್ ಅವರು 1996 ರಲ್ಲಿ ಸಿನಿಮಾರಂಗ ಪ್ರವೇಶಿಸಿದ್ದರು. ಕೊನೆಯದಾಗಿ 2016 ರಲ್ಲಿ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಈಗ ವೇಣು ಮಾಧವ್ ಪತ್ನಿ ಶ್ರೀ ವಾಣಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

  • ಖ್ಯಾತ ಹಾಸ್ಯನಟನಿಗೆ ‘ಯುವತಿ’ಯಿಂದ ಸೆಕ್ಸ್ ದೋಖಾ!

    ಖ್ಯಾತ ಹಾಸ್ಯನಟನಿಗೆ ‘ಯುವತಿ’ಯಿಂದ ಸೆಕ್ಸ್ ದೋಖಾ!

    ಮಂಗಳೂರು: ತುಳು ಚಲನಚಿತ್ರ ರಂಗದ ಹಾಸ್ಯನಟರೊಬ್ಬರಿಗೆ ಬೆಂಗಳೂರಿನ ಇಬ್ಬರು ಆರೋಪಿಗಳು ಯುವತಿ ಹೆಸರಿನಲ್ಲಿ ಬ್ಲಾಕ್ ಮೇಲ್ ಮಾಡಿ ಹಣ ಸುಲಿಗೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.

    ಪ್ರಕರಣ ಸಂಬಂಧ ಮಂಗಳೂರಿನ ಪೊಲೀಸರು ಬೆಂಗಳೂರಿನ ಯಶವಂತಪುರ ನಿವಾಸಿ ಆದಿತ್ಯ ಮತ್ತು ರಾಮನಗರ ಜಿಲ್ಲೆಯ ಕನಕಪುರ ನಿವಾಸಿ ಅರುಣ್ ಎಚ್.ಎಸ್‍ನನ್ನು ಬಂಧಿಸಿದ್ದಾರೆ. ಫೇಸ್ ಬುಕ್ಕಿನಲ್ಲಿ ಆರಾಧ್ಯ ಹೆಸರಿನಲ್ಲಿ ಪರಿಚಯ ಮಾಡಿಕೊಂಡಿದ್ದ ಆದಿತ್ಯ, ಮಂಗಳೂರಿನ 25ರ ಹರೆಯದ ಹಾಸ್ಯನಟನನ್ನು ವಂಚಿಸಿದ್ದಾನೆ.

    ಸಲುಗೆಯ ಮಾತನಾಡಿ ಬಳಿಕ ಚಿತ್ರನಟ, ತನ್ನ ಅರೆನಗ್ನ ಫೋಟೋವನ್ನು ಯುವತಿ ಅಶ್ವಿನಿ ಅಲಿಯಾಸ್ ಆರಾಧ್ಯಗೆ ಸೆಂಡ್ ಮಾಡಿದ್ದರು. ಈ ಫೋಟೋ ಪಡೆದ ಯುವಕ ಆರಾಧ್ಯ, ಚಿತ್ರನಟನನ್ನು ಬ್ಲಾಕ್ ಮೇಲ್ ಮಾಡಿದ್ದು ಬಳಿಕಸ ಪೊಲೀಸರಿಗೆ ದೂರು ನೀಡುವುದಾಗಿ ಹೇಳಿ ಬೆಂಗಳೂರಿಗೆ ಕರೆಸಿಕೊಂಡು 65 ಸಾವಿರ ರೂ. ವಸೂಲಿ ಮಾಡಿದ್ದಾನೆ.

    ಆ ನಂತರ ಇನ್ನಷ್ಟು ಹಣಕ್ಕಾಗಿ ಬೇಡಿಕೆ ಇಟ್ಟಾಗ ವ್ಯಕ್ತಿ ಪೊಲೀಸ್ ದೂರು ನೀಡಿದ್ದರು. ತನಿಖಾ ಹಂತದಲ್ಲಿ ಕಮಿಷನರ್ ಹೆಸರಲ್ಲಿ ಮತ್ತು ಗೃಹಮಂತ್ರಿ ಪಿಎ ಹೆಸರಿನಲ್ಲೂ ಫೋನ್ ಕರೆ ಮಾಡಿ ಆರೋಪಿಗಳು ವ್ಯಕ್ತಿಯನ್ನು ಬೆದರಿಸಿದ್ದಾರೆ.

    ಕಾರ್ಯಾಚರಣೆ ನಡೆಸಿದ ಮಂಗಳೂರಿನ ಉರ್ವ ಠಾಣೆ ಪೊಲೀಸ್ ಅಧಿಕಾರಿಯಾದ ರವೀಶ್ ನಾಯ್ಕ್ ನೇತೃತ್ವದ ತಂಡ, ಬೆಂಗಳೂರಿನ ಕೊಲಂಬಿಯಾ ಆಸ್ಪತ್ರೆ ಬಳಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ಪೈಕಿ ಆದಿತ್ಯ 19ರ ಹರೆಯದ ಪಿಯುಸಿ ವಿದ್ಯಾರ್ಥಿ ಆಗಿದ್ದು ಅಶ್ವಿನಿ ಅಲಿಯಾಸ್ ಆರಾಧ್ಯ ಹೆಸರಿನಲ್ಲಿ ಹಲವರನ್ನು ಬ್ಲಾಕ್ ಮೇಲ್ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.

    ಈತ ಹಲವು ಮಂದಿಗೆ ಇದೇ ರೀತಿ ಮಾಡಿ ವಂಚಿಸಿದ್ದು, ಈ ಬಗ್ಗೆ ಯಾರು ಕೂಡ ದೂರು ನೀಡಿರಲಿಲ್ಲ. ಮನೆಯಲ್ಲಿ ಹುಡುಗನ ವೇಷದಲ್ಲಿರುವ ಈತ ಹೊರಗೆ ಹುಡುಗಿಯ ಥರ ಡ್ರೆಸ್ ಮಾಡಿಕೊಂಡು ವಂಚಿಸುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv