Tag: Comedy Khiladigalu 3

  • ರಾಕೇಶ್ ಸಾವಿನ ಸುದ್ದಿ ಅರಗಿಸಿಕೊಳ್ಳೋಕೆ ಆಗ್ತಿಲ್ಲ: ‘ಬಿಗ್ ಬಾಸ್’ ಲೋಕೇಶ್ ಭಾವುಕ

    ರಾಕೇಶ್ ಸಾವಿನ ಸುದ್ದಿ ಅರಗಿಸಿಕೊಳ್ಳೋಕೆ ಆಗ್ತಿಲ್ಲ: ‘ಬಿಗ್ ಬಾಸ್’ ಲೋಕೇಶ್ ಭಾವುಕ

    ರಾಕೇಶ್ ಪೂಜಾರಿ (Lokesh Poojari) ಸಾವಿನ ಸುದ್ದಿ ಈಗಲೂ ಅರಗಿಸಿಕೊಳ್ಳೋಕೆ ಆಗ್ತಿಲ್ಲ ಎಂದು ‘ಬಿಗ್ ಬಾಸ್’ ಖ್ಯಾತಿಯ ಲೋಕೇಶ್ ಭಾವುಕರಾಗಿದ್ದಾರೆ. ಇದನ್ನೂ ಓದಿ:ನಟಿಗೆ ಬಿಗ್ ಚಾನ್ಸ್- ಉಪೇಂದ್ರಗೆ ಅಂಕಿತಾ ಅಮರ್ ನಾಯಕಿ

    ಗೆಳೆಯನ ಬಗ್ಗೆ ‘ಪಬ್ಲಿಕ್ ಟಿವಿ’ ಜೊತೆಗೆ ಮಾತನಾಡಿ, ನನಗೆ ಅವರ ಸಾವಿನ ಬಗ್ಗೆ ಬೆಳಗ್ಗೆ 4 ಗಂಟೆಗೆ ನಟಿ ದಿವ್ಯಾಶ್ರೀ ಕಡೆಯಿಂದ ತಿಳಿಯಿತು. ದಿವ್ಯಾ ಮತ್ತು ರಾಕೇಶ್ ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ಅವರು ಫೋನ್ ಮಾಡಿ ಹೇಳಿದಾಗ ನನಗೆ ನಂಬೋಕೆ ಆಗಲಿಲ್ಲ. ‘ಕಾಮಿಡಿ ಕಿಲಾಡಿಗಳು’ ಚಾಂಪಿಯನ್‌ಶಿಪ್‌ನಲ್ಲಿ ನಾವು ಒಟ್ಟಿಗೆ ಕೆಲಸ ಮಾಡಿದ್ವಿ. ಅವರು ಅದ್ಭುತವಾಗಿ ನಟಿಸುತ್ತಿದ್ದರು. ಈಗ ಅವರ ಸಾವಿನ ಸುದ್ದಿ ಕೇಳಿ ಆಶ್ವರ್ಯ ಆಯ್ತು, ನನಗೆ ನಂಬಲು ಆಗ್ತಿಲ್ಲ. ಈಗಲೂ ಇದನ್ನು ಅರಗಿಸಿಕೊಳ್ಳೋಕೆ ಆಗ್ತಿಲ್ಲ ಅಂತ ಹೇಳಿದ್ದಾರೆ. ಇದನ್ನೂ ಓದಿ:ರಾಕೇಶ್ ಗುಣ ಮಗುವಿನಂತೆ – ಬಿಕ್ಕಿ ಬಿಕ್ಕಿ ಅತ್ತ ದಿವ್ಯಾಶ್ರೀ

    ಅವರಿಗಿನ್ನು ಚಿಕ್ಕ ವಯಸ್ಸು, ಚಿತ್ರರಂಗದಲ್ಲಿ ಬೆಳೆಯೋದಿತ್ತು, ಹೀಗೆ ಆಗಿದ್ದು ನ್ಯಾಯನಾ ಅನಿಸುತ್ತದೆ. ‘ಕಾಮಿಡಿ ಕಿಲಾಡಿಗಳು’ ಟೀಮ್ ಅವರ ಊರಿನ ಕಡೆ ಹೊರಟಿದೆ. ಇತ್ತೀಚೆಗೆ ನಾವು ಭೇಟಿಯಾಗಿರಲಿಲ್ಲ. ಆದರೆ ಸಮಯ ಸಿಕ್ಕಾಗ ಫೋನ್‌ನಲ್ಲಿ ಮಾತನಾಡುತ್ತಿದ್ದೇವು. ನಾನು ರಾಕಿ ಅಂತ ಕರೆದ್ರೆ ಅಣ್ಣ ಎಂದು ಬಂದು ತಬ್ಬಿಕೊಳ್ತಿದ್ದರು. ಈಗ ಅವರ ಸಾವಿನ ಸುದ್ದಿ ಕೇಳಿದ್ರೆ ಹೊಟ್ಟೆ ಉರಿಯುತ್ತದೆ ಅಂತ ಕಣ್ಣೀರಿಟ್ಟರು.

    ‘ಕಾಂತಾರ ಚಾಪ್ಟರ್ 1’ರಲ್ಲಿ ಕೆಲಸ ಮಾಡುತ್ತಿದ್ದ ವಿಷಯ ಗೊತ್ತಿತ್ತು. ಬೆಳೆಯುವ ಟೈಮ್‌ನಲ್ಲಿ ಒಂದೊಳ್ಳೆಯ ಬ್ಯಾನರ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಹೀಗೆ ಆಯ್ತಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ರಾಕೇಶ್ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ಸಮಾಧಾನ ಸಿಗಲಿ ಎಂದು ಮಾತನಾಡಿದ್ದಾರೆ.

    ಇಂದು ಬೆಳಗ್ಗಿನ ಜಾವ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಸಂಜೆ ಹುಟ್ಟೂರು ಉಡುಪಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.

  • ಮೃದು ಸ್ವಭಾವದ ವ್ಯಕ್ತಿತ್ವ ನಿನ್ನದು – ರಾಕೇಶ್ ಪೂಜಾರಿ ನಿಧನಕ್ಕೆ ರಕ್ಷಿತಾ ಸಂತಾಪ

    ಮೃದು ಸ್ವಭಾವದ ವ್ಯಕ್ತಿತ್ವ ನಿನ್ನದು – ರಾಕೇಶ್ ಪೂಜಾರಿ ನಿಧನಕ್ಕೆ ರಕ್ಷಿತಾ ಸಂತಾಪ

    ‘ಕಾಮಿಡಿ ಕಿಲಾಡಿಗಳು ಸೀಸನ್ 3’ರ ವಿನ್ನರ್ ರಾಕೇಶ್ ಪೂಜಾರಿ (Rakesh Poojary) ಹೃದಯಾಘಾತದಿಂದ ಇಂದು (ಮೇ 12) ಬೆಳಗ್ಗಿನ ಜಾವ ನಿಧನರಾಗಿದ್ದಾರೆ. ರಾಕೇಶ್ ನಿಧನಕ್ಕೆ ಕಾಮಿಡಿ ಕಿಲಾಡಿ ಶೋನ ತೀರ್ಪುಗಾರರಾಗಿದ್ದ ರಕ್ಷಿತಾ ಪ್ರೇಮ್ (Rakshita Prem) ಕೂಡ ಸಂತಾಪ ಸೂಚಿಸಿದ್ದಾರೆ. ನಗುಮುಖದ ರಾಕೇಶ್, ಮೃದು ಸ್ವಭಾವದ ವ್ಯಕ್ತಿತ್ವ ನಿನ್ನದು, ಮಿಸ್ ಯೂ ಮಗನೇ ಎಂದು ಭಾವುಕವಾಗಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಕಾಮಿಡಿ ಕಿಲಾಡಿ-3 ವಿನ್ನರ್ ರಾಕೇಶ್‌ ಪೂಜಾರಿ ನಿಧನ

    ರಕ್ಷಿತಾ ಪ್ರೇಮ್ ಅವರು ರಾಕೇಶ್ ನಿಧನದ ಕುರಿತು ಹಂಚಿಕೊಂಡಿರುವ ಸ್ಟೋರಿಯಲ್ಲಿ, ನಗುಮುಖದ ರಾಕೇಶ್, ನನ್ನ ನೆಚ್ಚಿನ ವ್ಯಕ್ತಿ. ಮೃದು ಸ್ವಭಾವದ ವ್ಯಕ್ತಿತ್ವ ನಿನ್ನದು, ಮಿಸ್ ಯೂ ಮಗನೇ. ನಾನು ಇನ್ನೂ ಎಂದಿಂಗೂ ರಾಕೇಶ್ ಅವರನ್ನು ಮಾತನಾಡಿಸಲು ಸಾಧ್ಯವಿಲ್ಲ ಎಂಬುದನ್ನು ಅರಗಿಸಿಕೊಳ್ಳಲು ಕಷ್ಟವಾಗ್ತಿದೆ. ಕಾಮಿಡಿ ಕಿಲಾಡಿಗಳು ನನ್ನ ಹೃದಯಕ್ಕೆ ಹತ್ತಿರವಿರುವ ಕಾರ್ಯಕ್ರಮ. ಅದರಲ್ಲಿ ರಾಕೇಶ್ ಕೂಡ ಒಬ್ಬರು. ಒಳ್ಳೆಯ ವ್ಯಕ್ತಿ, ಟ್ಯಾಲೆಂಟೆಡ್ ಕಲಾವಿದನಾಗಿದ್ರು. ನೀವೆಂದಿಗೂ ನಮ್ಮ ಹೃದಯದಲ್ಲಿ ಶಾಶ್ವತವಾಗಿರುತ್ತೀರಾ. ಮಿಸ್ ಮಾಡಿಕೊಳ್ಳುತ್ತಿದ್ದೇವೆ. ನಿನ್ನ ನಗು ಮತ್ತು ನಿನ್ನ ಸುತ್ತ ಇರುವವರನ್ನು ನಗುಸುತ್ತಿದ್ದ ರೀತಿ. ಥ್ಯಾಂಕ್ಯೂ ರಾಕೇಶ್ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಫೈರ್ ಬ್ರ್ಯಾಂಡ್‌ ಚೈತ್ರಾ ಮನೆಗೆ ಮಂಜು ಭೇಟಿ- ನವಜೋಡಿಗೆ ವಿಶೇಷ ಉಡುಗೊರೆ ಕೊಟ್ಟ ನಟ

    ‘ಕಾಮಿಡಿ ಕಿಲಾಡಿಗಳು ಸೀಸನ್ 3ರ ವಿನ್ನರ್ ಆಗಿದ್ದರು. ಕನ್ನಡದ ‘ಪೈಲ್ವಾನ್’, ‘ಇದು ಎಂಥಾ ಲೋಕವಯ್ಯ’ ಚಿತ್ರಗಳಲ್ಲಿ ನಟಿಸಿದ್ದಾರೆ. ತುಳು ಭಾಷೆಯ ‘ಪೆಟ್ಕಮ್ಮಿ’, ‘ಅಮ್ಮೆರ್ ಪೊಲೀಸ್’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

    ಉಡುಪಿಯ ಹೂಡೆಯಲ್ಲಿ ಇಂದು ಸಂಜೆ ರಾಕೇಶ್ ಪೂಜಾರಿ ಅವರ ಅಂತ್ಯಕ್ರಿಯೆ ನಡೆಯಲಿದೆ.

  • ‘ಕಾಮಿಡಿ ಕಿಲಾಡಿಗಳು 3’ರ ವಿನ್ನರ್ ಉಡುಪಿಯ ರಾಕೇಶ್ ಪೂಜಾರಿ

    ‘ಕಾಮಿಡಿ ಕಿಲಾಡಿಗಳು 3’ರ ವಿನ್ನರ್ ಉಡುಪಿಯ ರಾಕೇಶ್ ಪೂಜಾರಿ

    ಬೆಂಗಳೂರು: ಕನ್ನಡ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕಾಮಿಡಿ ಕಿಲಾಡಿಗಳು ಸೀಸನ್ 3’ ರಿಯಾಲಿಟಿ ಶೋಗೆ ಶನಿವಾರ ಅದ್ಧೂರಿ ತೆರೆಬಿದ್ದಿದ್ದು, ಉಡುಪಿಯ ರಾಜೇಕ್ ಪೂಜಾರಿ ವಿಜೇತರಾಗಿ, ಕಾಮಿಡಿ ಕಿಲಾಡಿಗಳು 3ರ ಟ್ರೋಫಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

    ಮೊದಲ ಸ್ಥಾನವನ್ನು ರಾಕೇಶ್ ಪಡೆದಿದ್ದು, ಹಾಸನದ ಸಂತೋಷ್ ಅವರು ರನ್ನರ್ ಅಪ್ ಆಗಿದ್ದಾರೆ. ಶನಿವಾರ ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ‘ಕಾಮಿಡಿ ಕಿಲಾಡಿಗಳು ಸೀಸನ್ 3’ ಗ್ರ್ಯಾಂಡ್ ಫಿನಾಲೆ ಅದ್ಧೂರಿಯಾಗಿ ನಡೆದಿದ್ದು, ಶೋ ತೀರ್ಪುಗಾರರಾಗಿದ್ದ ನಟ ಜಗ್ಗೇಶ್ ಅವರು ಕಾಮಿಡಿ ಕಿಲಾಡಿಗಳು ಸೀಸನ್ 3ರ ವಿನ್ನರ್ ಮತ್ತು ರನ್ನರ್ ಅಪ್‍ಗಳನ್ನು ಘೋಷಿಸಿದರು.

    ವಿನ್ನರ್ ಆದ ರಾಕೇಶ್ ಅವರಿಗೆ 8 ಲಕ್ಷ ರೂಪಾಯಿ ಹಾಗೂ ರನ್ನರ್ ಅಪ್ ಸಂತೋಷ್ ಅವರಿಗೆ 4 ಲಕ್ಷ ರೂಪಾಯಿ ನಗದು ಬಹುಮಾನ ಹಾಗೂ ಟ್ರೋಫಿ ನೀಡಲಾಗಿದೆ. ಇತ್ತ ಕೋಳಿ ಕಳ್ಳ ಖ್ಯಾತಿಯ ಮನೋಹರ್ ಹಾಗೂ ಬಾ ಮಲಿಕೋ ಖ್ಯಾತಿಯ ದಾನಪ್ಪ ಅವರು ಎರಡನೇ ರನ್ನರ್ ಅಪ್ ಸ್ಥಾನವನ್ನು ಹಂಚಿಕೊಂಡಿದ್ದಾರೆ. ವಿನ್ನರ್ ರಾಕೇಶ್ ಅವರಿಗೆ ಕಾರ್ಯಕ್ರಮದ ಮೂವರು ತಿರ್ಪುಗಾರರಾದ ನಟ ಜಗ್ಗೇಶ್, ನಟಿ ರಕ್ಷಿತಾ, ನಿರ್ದೇಶಕ ಯೋಗರಾಜ್ ಭಟ್ ಹಾಗೂ ಖಾಸಗಿ ವಾಹಿನಿಯ ಬಿಸಿನೆಸ್ ಹೆಡ್ ರಾಘವೇಂದ್ರ ಹುಣಸೂರ್ ಅವರು ನಗದು ಬಹುಮಾನದ ಚೆಕ್ ಮತ್ತು ಟ್ರೋಫಿ ನೀಡಿ ಖುಷಿಪಟ್ಟರು.

    15 ಸ್ಪರ್ಧಿಗಳು ತೀವ್ರ ಪೈಪೋಟಿ ನೀಡುತ್ತಾ, 26 ವಾರಗಳ ಕಾಲ ನಡೆದ ‘ಕಾಮಿಡಿ ಕಿಲಾಡಿಗಳು ಸೀಸನ್ 3’ಗೆ ಅದ್ಧೂರಿ ತೆರೆಬಿದ್ದಿದೆ. ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಮಂದಿ ಪ್ರೇಕ್ಷಕರು ನೆರೆದಿದ್ದರು.