Tag: comgress

  • ಇವಿಎಂ ದೂರೋದನ್ನು ನಿಲ್ಲಿಸಿ, ಫಲಿತಾಂಶವನ್ನು ಸ್ವೀಕರಿಸಿ – ಕಾಂಗ್ರೆಸ್‌ಗೆ ಉಮರ್ ಅಬ್ದುಲ್ಲಾ ಕಿವಿಮಾತು

    ಇವಿಎಂ ದೂರೋದನ್ನು ನಿಲ್ಲಿಸಿ, ಫಲಿತಾಂಶವನ್ನು ಸ್ವೀಕರಿಸಿ – ಕಾಂಗ್ರೆಸ್‌ಗೆ ಉಮರ್ ಅಬ್ದುಲ್ಲಾ ಕಿವಿಮಾತು

    ಶ್ರೀನಗರ: ಗೆದ್ದಾಗ ವಿದ್ಯುನ್ಮಾನ ಮತಯಂತ್ರಗಳನ್ನು (EVM) ದೂರದೇ, ಚುನಾವಣೆಯಲ್ಲಿ ಸೋತಾಗ ದೂರುವುದನ್ನು ನಿಲ್ಲಿಸಿ ಫಲಿತಾಂಶವನ್ನು ಸ್ವೀಕರಿಸಿ ಎಂದು ಜಮ್ಮು ಕಾಶ್ಮೀರದ (Jammu and Kashmir) ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ (Omar Abdullah) ಕಾಂಗ್ರೆಸ್‌ಗೆ ಕಿವಿಮಾತು ಹೇಳಿದ್ದಾರೆ.

    ಸುದ್ದಿ ಸಂಸ್ಥೆಗೆ ಪ್ರತಿಕ್ರಿಯಿಸಿದ ಅವರು, ಅದೇ ಇವಿಎಂಗಳನ್ನು ಬಳಸಿಕೊಂಡು ನೀವು ನೂರಕ್ಕೂ ಹೆಚ್ಚು ಸಂಸತ್ ಸದಸ್ಯರನ್ನು ಪಡೆದು ಪಕ್ಷಕ್ಕೆ ಸಿಕ್ಕಿದ ವಿಜಯ ಎಂದು ಹೇಳಿ ಕೆಲ ತಿಂಗಳ ನಂತರ ಇವಿಎಂ ದೂಷಣೆ ಮಾಡುವುದು ಸರಿಯಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಇವಿಎಂ ಮ್ಯಾನಿಪ್ಯುಲೆಟ್ ಆಗಿದೆ ಅನ್ನೋದಕ್ಕೆ ಸಾಕ್ಷಿಗಳಿಲ್ಲ – ಕಾಂಗ್ರೆಸ್‌ ಸಂಸದ ಕಾರ್ತಿ ಚಿದಂಬರಂ

    ನಿಮಗೆ ಈಗ ಯಾಕೆ ಇವಿಎಂ ಇಷ್ಟವಿಲ್ಲ ಎಂದರೆ ನೀವು ಬಯಸಿದ ರೀತಿ ಫಲಿತಾಂಶ ಪ್ರಕಟವಾಗುತ್ತಿಲ್ಲ. ಮತದಾನದ ವಿಧಾನದಲ್ಲಿ ನಂಬಿಕೆ ಇಲ್ಲದೇ ಇದ್ದರೆ ಪಕ್ಷಗಳು ಚುನಾವಣೆಯಲ್ಲೇ ಸ್ಪರ್ಧಿಸಬಾರದು ಎಂದು ಖಾರವಾದ ಅಭಿಪ್ರಾಯವನ್ನು ಸಹ ವ್ಯಕ್ತಪಡಿಸಿದರು. ಇದನ್ನೂ ಓದಿ: ಇವಿಎಂ ಬೇಡ, ಬ್ಯಾಲೆಟ್ ಪೇಪರ್ ಬೇಕು – ಮಹಾಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಬೇಡಿಕೆ

    ಲೋಕಸಭೆ ಚುನಾವಣೆಯಲ್ಲಿ ಸೋತು ತಿಂಗಳ ನಂತರ ವಿಧಾನಸಭೆ ಚುನಾವಣೆಯಲ್ಲಿ ದೊಡ್ಡ ಗೆಲುವು ಸಾಧಿಸಿದ ಉದಾಹರಣೆಯನ್ನು ಉಲ್ಲೇಖಿಸಿದ ಅವರು, ಒಂದು ದಿನ ಮತದಾರರು ನಿಮ್ಮನ್ನು ಆಯ್ಕೆ ಮಾಡಿದರೆ ಮರುದಿನ ಅವರು ಇಷ್ಟಪಡುವುದಿಲ್ಲ. ನಾನು ಎಂದಿಗೂ ಯಂತ್ರಗಳನ್ನು ದೂಷಿಸಲಿಲ್ಲ ಎಂದು ಹೇಳಿದರು.

    ನಿಮ್ಮ ಮಾತುಗಳು ಬಿಜೆಪಿಯ ಏಜೆಂಟ್‌ರಂತೆ ಕೇಳಿಸುತ್ತಿದೆಯಲ್ಲ ಎಂಬ ಪ್ರಶ್ನೆಗೆ, ದೇವರು ನನ್ನನ್ನು ಕ್ಷಮಿಸಲಿ ಎಂದು ಉತ್ತರಿಸಿದ ಅವರು ಇಲ್ಲ, ಇದು ಹಾಗೆಯೇ ಇರುವುದು. ಯಾವುದು ಸರಿಯೋ ಅದೇ ಸರಿ ಎಂದರು. ನ್ಯಾಷನಲ್‌ ಕಾನ್ಫರೆನ್ಸ್‌ ಮತ್ತು ಕಾಂಗ್ರೆಸ್‌ ಜಮ್ಮು ಕಾಶ್ಮೀರದಲ್ಲಿ ಮೈತ್ರಿ ಮಾಡಿಕೊಂಡು ಸರ್ಕಾರ ನಡೆಸುತ್ತಿದೆ.

  • ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಶಾಸಕ ಅನಿಲ್ ಲಾಡ್ ಗೆ ಎಸ್‍ಐಟಿ ಶಾಕ್ !

    ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಶಾಸಕ ಅನಿಲ್ ಲಾಡ್ ಗೆ ಎಸ್‍ಐಟಿ ಶಾಕ್ !

    ಬಳ್ಳಾರಿ: ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಬಳ್ಳಾರಿ ನಗರ ಶಾಸಕ ಅನಿಲ್ ಲಾಡ್ ಗೆ ಎಸ್‍ಐಟಿ ಶಾಕ್ ನೀಡಿದೆ.

    ಅಕ್ರಮವಾಗಿ ಅದಿರು ಸಾಗಾಟ ಮಾಡಿದ ಪ್ರಕರಣಕ್ಕೆ ಸಂಭದಿಸಿದಂತೆ ಎಸ್‍ಐಟಿ, ಶಾಸಕ ಅನಿಲ್ ಲಾಡ್ ವಿರುದ್ಧ ಎಫ್ ಐಆರ್ ದಾಖಲಿಸಿದೆ. 2010ರಿಂದ 2 ವರ್ಷಗಳ ಕಾಲ ಪರವಾನಿಗೆ ಪಡಿಯದೇ 82 ಸಾವಿರ ಮೆಟ್ರಿಕ್ ಟನ್ ಅದಿರು ಸಾಗಾಟ ಮಾಡಿದ ಪ್ರಕರಣಕ್ಕೆ ಸಂಭದಿಸಿದಂತೆ ಎಫ್‍ಐಆರ್ ದಾಖಲಿಸಲಾಗಿದೆ.

    ಶಾಸಕ ಅನಿಲ್ ಲಾಡ್ ಕೆನರಾ ಮಿನರಲ್ಸ್ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ವೇಳೆ 82,275 ಮೆಟ್ರಿಕ್ ಟನ್ ಅದಿರನ್ನು ಅಕ್ರಮವಾಗಿ ಸಾಗಾಟ ಮಾಡಿ ಸರ್ಕಾರದ ಬೊಕ್ಕಸಕ್ಕೆ 12.30 ಕೋಟಿ ರೂ, ನಷ್ಟವುಂಟು ಮಾಡಿದ ಆರೋಪದ ಮೇರೆಗೆ ಎಫ್‍ಐಆರ್ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ.

    ಅಕ್ರಮ ಗಣಿಗಾರಿಕೆ ವಿರುದ್ಧ ಪಾದಯಾತ್ರ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದಲ್ಲಿ ಕಾಂಗ್ರೆಸ್ ಶಾಸಕರ ವಿರುದ್ಧವೇ ಇದೀಗ ಎಸ್‍ಐಟಿ ಎಫ್‍ಐಆರ್ ದಾಖಲಿಸಿರುವುದು ಸರ್ಕಾರಕ್ಕೆ ಮುಜುಗರ ತಂದಿಟ್ಟಿದೆ.

  • ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಭಾರೀ ಮುನ್ನಡೆ

    ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಭಾರೀ ಮುನ್ನಡೆ

    ನವದೆಹಲಿ: ಪಂಚರಾಜ್ಯಗಳ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಉತ್ತರ ಪ್ರದೇಶದಲ್ಲಿ ಚುನಾವಣೋತ್ತರ ಸಮೀಕ್ಷೆಯಂತೆ ಬಿಜೆಪಿ 200ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

    ಬೆಳಗ್ಗೆ 9 ಗಂಟೆಯ ವೇಳೆ ಟ್ರೆಂಡ್ಸ್ ಪ್ರಕಾರ ಬಿಜೆಪಿ 205, ಎಸ್‍ಪಿ ಕಾಂಗ್ರೆಸ್ ಮೈತ್ರಿಕೂಟ 51, ಬಿಎಎಸ್‍ಪಿ 24, ಇತರರು 7 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಒಟ್ಟು 403 ಕ್ಷೇತ್ರಗಳಿರುವ ಉತ್ತರ ಪ್ರದೇಶದಲ್ಲಿ 202 ಸ್ಥಾನಗಳನ್ನು ಗೆದ್ದವರು ಅಧಿಕಾರ ಹಿಡಿಯಲಿದ್ದಾರೆ.

    ಪಂಜಾಬ್‍ನಲ್ಲಿ ಕಾಂಗ್ರೆಸ್ 25, ಆಪ್ 8, ಅಕಾಲಿದಳ 5 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

    ಉತ್ತರಾಖಂಡ್‍ನಲ್ಲಿ 20 ಕ್ಷೇತ್ರಗಳಲ್ಲಿ ಬಿಜೆಪಿ, 5ರಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದರೆ ಗೋವಾದ 3 ಕ್ಷೇತ್ರಗಳಲ್ಲಿ ಬಿಜೆಪಿ, 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಮಣಿಪುರದ 2 ಕ್ಷೇತ್ರಗಳಲ್ಲಿ ಕಾಂಗ್ರೆಸ್, 1ರಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.