Tag: Commercial Cylinder

  • ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬಳಕೆದಾರರಿಗೆ ದರ ಏರಿಕೆ ಬಿಸಿ – ಇಂದಿನಿಂದಲೇ ಹೊಸ ದರ ಅನ್ವಯ

    ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬಳಕೆದಾರರಿಗೆ ದರ ಏರಿಕೆ ಬಿಸಿ – ಇಂದಿನಿಂದಲೇ ಹೊಸ ದರ ಅನ್ವಯ

    ನವದೆಹಲಿ/ಬೆಂಗಳೂರು: ನವರಾತ್ರಿ, ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ವಾಣಿಜ್ಯ ಸಿಲಿಂಡರ್ (Commercial Cylinder) ಬಳಕೆದಾರರ ಜೇಬು ಮತ್ತೆ ಭಾರವಾಗಲಿದೆ. ಕಾರಣ ಮತ್ತೆ ವಾಣಿಜ್ಯ ಸಿಲಿಂಡರ್ ದರ ಏರಿಕೆಯಾಗಿದ್ದು, ತಿಂಗಳ ಮೊದಲ ದಿನವೇ ಬಳಕೆದಾರರಿಗೆ ಬೆಲೆ ಏರಿಕೆಯ ಬಿಸಿತಾಗಿದೆ. ಇಂದಿನಿಂದಲೇ ಹೊಸ ದರಗಳು ಅನ್ವಯವಾಗಲಿದೆ.

    ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ 48.5 ರೂ. ಏರಿಕೆಯಾಗಿದೆ. ಗೃಹ ಬಳಕೆಯ 14 ಕೆಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಐಓಸಿಎಲ್ ವೆಬ್‌ಸೈಟ್ ಪ್ರಕಾರ, 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್‌ನ ಹೊಸ ಬೆಲೆಗಳು ಇಂದಿನಿಂದ ಅನ್ವಯವಾಗಲಿವೆ. ಆದರೆ ಬೆಲೆಗಳು ನಗರದಿಂದ ನಗರಕ್ಕೆ ವ್ಯತ್ಯಾಸವಾಗಿರುತ್ತವೆ. ದೆಹಲಿಯಿಂದ ಮುಂಬೈನವರೆಗೂ ಬೆಲೆಗಳು ಭಿನ್ನವಾಗಿರುತ್ತವೆ. ಮುಂಬೈನಲ್ಲಿ 1,644 ರೂ. ಇದ್ದ 19 ಕೆಜಿ ಸಿಲಿಂಡರ್ ಬೆಲೆ ಇದೀಗ 1,692.50 ರೂ. ಆಗಿದೆ. ಸೆಪ್ಟೆಂಬರ್‌ನಲ್ಲಿ 39 ರೂ.ಗಳಷ್ಟು ಏರಿಕೆಯಾಗಿತ್ತು. ಇದನ್ನೂ ಓದಿ: ಮಾಜಿ ಸಚಿವ ವಿಕೆ ಸಿಂಗ್ ವಿರುದ್ಧ ಮಾನಹಾನಿ ಪೋಸ್ಟ್ – ಯೂಟ್ಯೂಬರ್ ಅರೆಸ್ಟ್

    ಕೋಲ್ಕತ್ತಾದಲ್ಲಿ ಇದರ ಬೆಲೆ 1,802.50 ರೂ.ನಿಂದ 1,850.50 ರೂ.ಆಗಿದೆ. ಚೆನ್ನೈನಲ್ಲಿ 1,855 ರೂ.ಯಿದ್ದ 19 ಕೆಜಿ ಸಿಲಿಂಡರ್ ಬೆಲೆ 1,903 ರೂ. ಆಗಿದೆ. ಬೆಂಗಳೂರಿನಲ್ಲಿಯೂ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ 48 ರೂ. ಏರಿಕೆಯಾಗಿದೆ. ಸದ್ಯ 19 ಕೆಜಿ ಸಿಲಿಂಡರ್ ಬೆಲೆ 1,818 ರೂ. ಆಗಿದೆ. ಇದನ್ನೂ ಓದಿ: 14 ಸೈಟ್‌ ಕೇಸ್‌ಗಿಂತಲೂ ಇದು ದೊಡ್ಡ ಪ್ರಕರಣ – ಹಳೆಯ ಡಿನೋಟಿಫಿಕೇಶನ್‌ ಕೆದಕಿ ಸಿಎಂಗೆ ಹೆಚ್‌ಡಿಕೆ ಗುದ್ದು

    2024ರ ಜುಲೈ ನಂತರ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಜುಲೈನಲ್ಲಿ ಆಯಿಲ್ ಮಾರ್ಕೆಟಿಂಗ್ ಕಂಪನಿಗಳು ಬೆಲೆಗಳನ್ನು ಕೊಂಚ ಇಳಿಕೆ ಮಾಡಿಕೊಂಡಿದ್ದವು. ದೇಶದ ರಾಜಧಾನಿ ದೆಹಲಿಯಲ್ಲಿ 30 ರೂ.ವರೆಗೂ ಇಳಿಕೆಯಾಗಿತ್ತು. ಆದರೆ ಆಗಸ್ಟ್‌ನಲ್ಲಿ 8.50 ರೂ. ಏರಿಕೆಯಾಗಿತ್ತು. ನಂತರ ಇದೀಗ ಮೂರು ತಿಂಗಳು ಸೇರಿ ಒಟ್ಟು 39 ರೂ. ಬೆಲೆ ಏರಿಕೆಯಾಗಿದೆ. ಇದನ್ನೂ ಓದಿ: ಸೈಟ್ ವಾಪಸ್ ಕೊಟ್ಟು ಸಿಎಂ ಮತ್ತಷ್ಟು ಸಂಕಷ್ಟವನ್ನು ಮೈಮೇಲೆ ಎಳೆದುಕೊಂಡಿದ್ದಾರೆ : ಬೊಮ್ಮಾಯಿ

  • LPG Price Hike: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 7 ರೂ. ಏರಿಕೆ

    LPG Price Hike: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 7 ರೂ. ಏರಿಕೆ

    ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ (LPG Price Hike) ಬೆಲೆಯನ್ನು 7 ರೂ. ಹೆಚ್ಚಿಸಿವೆ. ಮೂರು ತಿಂಗಳ ಬಳಿಕ ವಾಣಿಜ್ಯ ಬಳಕೆ ಸಿಲಿಂಡರ್‌ (Commercial Cylinder) ಬೆಲೆ ಏರಿಕೆಯಾಗಿದೆ.

    19 ಕೆಜಿ ಸಿಲಿಂಡರ್‌ ಬೆಲೆಯಲ್ಲಿ 7 ರೂಪಾಯಿ ಏರಿಕೆಯಾಗಿದೆ. ಪ್ರತಿ ಸಿಲಿಂಡರ್‌ಗೆ 1,773 ರೂ. ಇದ್ದದ್ದು, ಈಗ 1,780 ರೂ.ಗೆ ಹೆಚ್ಚಳವಾಗಿದೆ. ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಇದನ್ನೂ ಓದಿ: ಸಿಕ್ಕಿಬೀಳೋ ಭಯದಲ್ಲಿ ಕದ್ದಿದ್ದ 30 ಲಕ್ಷದ ವಜ್ರದ ಉಂಗುರವನ್ನು ಟಾಯ್ಲೆಟ್‌ನಲ್ಲಿ ಫ್ಲಶ್ ಮಾಡಿದ್ಳು!

    ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ (ಬಿಪಿಸಿಎಲ್), ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ (ಎಚ್‌ಪಿಸಿಎಲ್), ಎಲ್ಲಾ ಸರ್ಕಾರಿ ಸ್ವಾಮ್ಯದ ಕಂಪನಿಗಳು ಹಿಂದಿನ ತಿಂಗಳ ಸರಾಸರಿ ಅಂತರರಾಷ್ಟ್ರೀಯ ಬೆಲೆಗಳನ್ನು ಆಧರಿಸಿ ಅಡುಗೆ ಅನಿಲದ ಬೆಲೆಗಳನ್ನು ಮಾಸಿಕವಾಗಿ ಸರಿಹೊಂದಿಸುತ್ತವೆ.

    ಈ ವರ್ಷದ ಏಪ್ರಿಲ್, ಮೇ ಮತ್ತು ಜೂನ್‌ನಲ್ಲಿ ಸತತ ಕಡಿತದ ನಂತರ ವಾಣಿಜ್ಯ LPG ಗೆ ಮೊದಲ ಬೆಲೆ ಏರಿಕೆಯಾಗಿದೆ. ಇದನ್ನೂ ಓದಿ: ಜಸ್ಟ್‌ 999 ರೂ.ಗೆ ಜಿಯೋ ಭಾರತ್‌ 4ಜಿ ಫೋನ್‌ ಬಿಡುಗಡೆ – ಗುಣ ವೈಶಿಷ್ಟ್ಯಗಳೇನು?

    ಮೇ ತಿಂಗಳಲ್ಲಿ, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ದೆಹಲಿಯಲ್ಲಿ 171.5 ರೂ.ನಷ್ಟು ಕಡಿಮೆ ಮಾಡಿತ್ತು. ಹೀಗಾಗಿ ಪ್ರತಿ ಸಿಲಿಂಡರ್‌ ಬೆಲೆ 2,028 ರೂ. ಇದ್ದದ್ದು, 1,856.5 ರೂ.ಗೆ ಆಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಾಣಿಜ್ಯ ಬಳಕೆಯ LPG ಸಿಲಿಂಡರ್‌ ಬೆಲೆ ಭಾರೀ ಇಳಿಕೆ

    ವಾಣಿಜ್ಯ ಬಳಕೆಯ LPG ಸಿಲಿಂಡರ್‌ ಬೆಲೆ ಭಾರೀ ಇಳಿಕೆ

    ನವದೆಹಲಿ: ಕಾರ್ಮಿಕರ ದಿನದಂದು ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ (Commercial Cylinder) ಬೆಲೆ (Price) ಭಾರೀ ಇಳಿಕೆ ಕಂಡಿದ್ದು, 171. 50 ರೂ. ಕಡಿತಗೊಂಡಿದೆ. ಈ ಆದೇಶವು ಇಂದಿನಿಂದಲೇ ಜಾರಿಗೆ ಬರಲಿದೆ.

    ಈ ಹಿಂದೆ ಏಪ್ರಿಲ್‌ನಲ್ಲಿ ಸರ್ಕಾರವು ವಾಣಿಜ್ಯ ಬಳಕೆಯ ಗ್ಯಾಸ್‌ ಸಿಲಿಂಡರ್‌ನ ಬೆಲೆಗಳನ್ನು 92 ರೂ. ಇಳಿಕೆ ಮಾಡಿತ್ತು. ಇದೀಗ ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಪರಿಷ್ಕರಿದ್ದು, ಪುನಃ ಇಳಿಕೆಯಾಗಿದೆ. ಆದರೆ ಗೃಹಬಳಕೆಯ ಎಲ್‍ಪಿಜಿ ಸಿಲಿಂಡರ್‌ ದರ ಪರಿಷ್ಕರಣೆಯಾಗಿಲ್ಲ. 14.2 ಕೆಜಿ ತೂಕದ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್‌ಗಳ ದರ ಕಳೆದ ತಿಂಗಳಿನಂತೆಯೇ ಇದೆ. ಇದನ್ನೂ ಓದಿ: ಮಧು ಬಂಗಾರಪ್ಪ ಗೆದ್ದರೆ, ಸೊರಬಕ್ಕೆ ಬಂದು ಕುಣಿದು ಕುಪ್ಪಳಿಸುತ್ತೇನೆ: ಶಿವಣ್ಣ

    ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (New Delhi) 19 ಕೆ.ಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 1856.50 ರೂ. ಆಗಿದೆ. ಈ ಹಿಂದೆ 2,028 ರೂ. ಇತ್ತು. ಅದೇ ರೀತಿ ಮುಂಬೈನಲ್ಲಿ (Mumbai) ಈ ಮೊದಲು 1,980 ರೂ. ಇದ್ದು, ಇದೀಗ ಇದರ ಬೆಲೆ 1,808.50 ರೂ. ಆಗಿದೆ. ಚೆನ್ನೈನಲ್ಲಿ (Chennai) ವಾಣಿಜ್ಯ ಸಿಲಿಂಡರ್‌ನ ಬೆಲೆ ಈ ಮೊದಲು 2,192.50 ರೂ. ಇದ್ದು, ಇದೀಗ 2,021.50 ರೂ. ಆಗಿದೆ. ಇದನ್ನೂ ಓದಿ: ಹಳೇ ಮೈಸೂರು ಕ್ಷೇತ್ರಗಳನ್ನು ಕಬ್ಜ ಮಾಡಲು ಮೋದಿ ಪಣ – 25+ ಸ್ಥಾನ ಗೆಲ್ಲಲು ರಣತಂತ್ರ

  • ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆ ಇಳಿಕೆ

    ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆ ಇಳಿಕೆ

    ನವದೆಹಲಿ: 2024ರ ಆರ್ಥಿಕ ವರ್ಷದ ಮೊದಲ ದಿನವೇ ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್ (Commercial Cylinder) ಬೆಲೆಗಳಲ್ಲಿ (Price) ಭಾರೀ ಇಳಿಕೆ ಕಂಡಿದ್ದು, 92 ರೂ. ರಷ್ಟು ಕಡಿತಗೊಳಿಸಲಾಗಿದೆ.

    ಈ ಹಿಂದೆ ಮಾರ್ಚ್‍ನಲ್ಲಿ ಸರ್ಕಾರವು ವಾಣಿಜ್ಯ ಗ್ಯಾಸ್ ಸಿಲಿಂಡರ್‌ನ ಬೆಲೆಗಳನ್ನು 350 ರೂ. ಹೆಚ್ಚಿಸಿತ್ತು. ಆದರೆ ಶನಿವಾರ 92 ರೂ. ಇಳಿಕೆಯಾಗಿದೆ.

    ಆದರೆ ದೇಶೀಯ ಎಲ್‍ಪಿಜಿ ಗ್ಯಾಸ್ ಗ್ರಾಹಕರಿಗೆ ಬೆಲೆ ಪರಿಷ್ಕರಣೆಯಾಗಿಲ್ಲ. 14.2 ಕೆಜಿ ಗ್ಯಾಸ್ ಸಿಲಿಂಡರ್‌ಗಳ ದರ ಕಳೆದ ತಿಂಗಳಿನಂತೆಯೇ ಇದೆ. ಕಳೆದ ತಿಂಗಳು ಕೇಂದ್ರವು ಗೃಹಬಳಕೆಯ ಅಡುಗೆ ಅನಿಲದ ಬೆಲೆಯನ್ನು 50 ರೂ. ಹೆಚ್ಚಿಸಿತ್ತು. ಇದನ್ನೂ ಓದಿ: ಕೆನಡಾದಿಂದ ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನ – ಭಾರತೀಯರು ಸೇರಿ 8 ಮಂದಿ ಸಾವು

    ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (New Delhi) 19 ಕೆಜಿ ವಾಣಿಜ್ಯ ಎಲ್‍ಪಿಜಿ ಸಿಲಿಂಡರ್‌ಗಳ ಬೆಲೆ 2,028 ರೂ. ಆಗಿದೆ. ಅದೇ ರೀತಿ ಬೆಂಗಳೂರಿನಲ್ಲಿ (Bengaluru) ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ಬೆಲೆಯೂ 1115.5 ರೂ. ಆಗಿದೆ. ಮುಂಬೈನಲ್ಲಿ 1112.5 ರೂ., ಕೋಲ್ಕತ್ತಾದಲ್ಲಿ 1,129 ಹಾಗೂ ಚೆನ್ನೈನಲ್ಲಿ 1118.5 ರೂ.ನಲ್ಲಿ ಖರೀದಿಸಬಹುದಾಗಿದೆ. ಇದನ್ನೂ ಓದಿ: ಕೊನೆ ಗಳಿಗೆ ಕಸರತ್ತಿನಲ್ಲಿ ಸಿದ್ದರಾಮಯ್ಯ, ಡಿಕೆಶಿ ಆಟ- 45 ಕ್ಷೇತ್ರದಲ್ಲಿ ಟಿಕೆಟ್ ಕೊಡಿಸಲು ಪಟ್ಟು

  • ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆ ಇಳಿಕೆ

    ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆ ಇಳಿಕೆ

    ನವದೆಹಲಿ: ತೈಲ ಮಾರ್ಕೆಟಿಂಗ್ ಕಂಪನಿಗಳು 1 ಜೂನ್ ರಂದು 19 ಕೆಜಿ ಕಮರ್ಷಿಯಲ್ ಸಿಲಿಂಡರ್‌ ಬೆಲೆಗಳನ್ನು ಕಡಿಮೆ ಮಾಡುವುದಾಗಿ ಘೋಷಿಸಿದೆ.

    ಇಂದಿನಿಂದ 19 ಕೆಜಿಯ ಕಮರ್ಷಿಯಲ್ ಸಿಲಿಂಡರ್ ಬೆಲೆ 135 ರೂ. ಇಳಿಕೆಯಾಗಿದೆ. 19 ಕೆಜಿಯ ಕಮರ್ಷಿಯಲ್ ಸಿಲಿಂಡರ್‌ನ ಬೆಲೆ ದೆಹಲಿಯಲ್ಲಿ 2,354 ರೂ.ಗೆ ಇತ್ತು, ಆದರೆ ಈಗ 2,219 ರೂ.ಗೆ ಇಳಿಕೆಯಾಗಿದೆ. ಇದನ್ನೂ ಓದಿ:  ರಾಜ್ಯಕ್ಕೆ ಮುಂಗಾರು ಪ್ರವೇಶ – ಮುಂದಿನ 3, 4 ದಿನ ಭಾರೀ ಮಳೆ ಸಾಧ್ಯತೆ

    ಕೋಲ್ಕತ್ತಾದಲ್ಲಿ 2,454 ರೂ. ಇದ್ದರೆ ಈಗ 2,322 ರೂ.ಗೆ ಇಳಿದಿದೆ. ಮುಂಬೈನಲ್ಲಿ 2,306 ರೂ., ಚೆನ್ನೈನಲ್ಲಿ 2,507 ರೂ. ಇತ್ತು. ಈಗ ಇಲ್ಲಿ ಅನುಕ್ರವಮವಾಗಿ 2,171.50 ರೂ., 2,373 ರೂ.ಗೆ ಇಳಿಕೆಯಾಗಿದೆ. ಇಂದಿನಿಂದಲೇ ಈ ಪರಿಷ್ಕೃತ ಬೆಲೆ ಜಾರಿಯಾಗಲಿದೆ ಎಂದು ತೈಲ ಮಾರ್ಕೆಟಿಂಗ್ ಕಂಪನಿಗಳು ತಿಳಿಸಿದೆ.

    LPG

    ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ.

    ಮೇ 19 ರಂದು ಭಾರತದಲ್ಲಿ ಗೃಹೋಪಯೋಗಿ ಮತ್ತು ಕಮರ್ಷಿಯಲ್ ಎಲ್‍ಪಿಜಿ ಸಿಲಿಂಡರ್‍ಗಳ ಬೆಲೆಯನ್ನು ಹೆಚ್ಚಿಸಲಾಗಿತು. ಒಂದೇ ತಿಂಗಳಲ್ಲಿ ಎರಡು ಬಾರಿ ಅಡುಗೆ ತೈಲದ ಬೆಲೆ ಹೆಚ್ಚಿಸಲಾಗಿತ್ತು. 14 ಕೆಜಿ ಗೃಹಬಳಕೆಯ ಸಿಲಿಂಡರ್‍ನ ದರವನ್ನು 3.50 ರೂ. ಹೆಚ್ಚಿಸಲಾಗಿತ್ತು ಮತ್ತು 19 ಕೆಜಿಯ ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆಯನ್ನು 8 ರೂ. ಹೆಚ್ಚಿಸಲಾಗಿತ್ತು. ಇದನ್ನೂ ಓದಿ: ಖಿನ್ನತೆಗೆ ಒಳಗಾಗಿ ಮಗು ಸಮೇತ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ