Tag: Commercial LPG Cylinders

  • ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 41 ರೂ. ಇಳಿಕೆ

    ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 41 ರೂ. ಇಳಿಕೆ

    -ಬೆಂಗಳೂರಿನಲ್ಲಿ 19 ಕೆ.ಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 1,836 ರೂ.

    ನವದೆಹಲಿ: ಬೆಲೆ ಏರಿಕೆಯಿಂದ ಕಂಗಾಲಾದ ಜನರಿಗೆ ಸಿಹಿ ಸುದ್ದಿಯೊಂದು ಸಿಕ್ಕಿದ್ದು, ವಾಣಿಜ್ಯ ಬಳಕೆಯ (Commercial Use) 19 ಕೆ.ಜಿ ಎಲ್‌ಪಿಜಿ ಸಿಲಿಂಡರ್‌ಗಳ (LPG  Cylinder) ಬೆಲೆ 41 ರೂ. ಇಳಿಕೆಯಾಗಿದೆ.

    ಇಂದಿನಿಂದ ಹೊಸ ಹಣಕಾಸು ವರ್ಷ ಆರಂಭವಾಗುತ್ತಿದ್ದು, ಹಣಕಾಸು ನಿಯಮಗಳು, ದರ ಏರಿಕೆ, ಬ್ಯಾಂಕಿಂಗ್ ವಲಯಗಳಲ್ಲಿ ಹಲವು ಬದಲಾವಣೆಗಳಾಗುತ್ತಿವೆ. ಇದರ ಜೊತೆಗೆ ತೈಲ ಕಂಪನಿಗಳು 19 ಕೆ.ಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 41 ರೂ. ಇಳಿಸಿದೆ. ಹೊಸ ಬೆಲೆ ಏ.2 ಅಂದರೆ ನಾಳೆಯಿಂದ ಜಾರಿಯಾಗಲಿದೆ.ಇದನ್ನೂ ಓದಿ:ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ ಸಾಧ್ಯತೆ

    ಇದಕ್ಕೂ ಮೊದಲು, ಫೆ.1ರಂದು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 7 ರೂ. ಇಳಿಕೆ ಮಾಡಲಾಗಿತ್ತು. ಕಳೆದ ಡಿಸೆಂಬರ್‌ನಲ್ಲಿ ಸಿಲಿಂಡರ್‌ಗಳ ಬೆಲೆಯನ್ನು 62 ರೂ.ಗೆ ಏರಿಕೆ ಮಾಡಲಾಗಿತ್ತು. ಇದೀಗ ಮತ್ತೆ 41 ರೂ. ಇಳಿಕೆ ಮಾಡಲಾಗಿದೆ. ಹೊಸ ಬೆಲೆಯಿಂದಾಗಿ ರೆಸ್ಟೋರೆಂಟ್, ಹೋಟೆಲ್ ಮತ್ತು ವಾಣಿಜ್ಯ ಘಟಕಗಳಿಗೆ ಪ್ರಯೋಜನವಾಗಲಿದ್ದು, ಆದರೆ ದಿನಬಳಕೆಯ ಸಿಲಿಂಡರ್‌ನ ಬೆಲೆ ಬದಲಾಗದೆ ಉಳಿದಿದೆ.

    ದರ ಇಳಿಕೆಯ ಬಳಿಕ, ದೆಹಲಿಯಲ್ಲಿ 1,803 ರೂ. ಇದ್ದ 19 ಕೆ.ಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯು 1,762 ರೂ.ಗೆ ಇಳಿದಿದೆ. ಬೆಂಗಳೂರಿನಲ್ಲಿ 1,836 ರೂ., ಮುಂಬೈನಲ್ಲಿ 1,714 ರೂ., ಕೋಲ್ಕತ್ತಾದಲ್ಲಿ 1,872 ರೂ., ಚೆನ್ನೈನಲ್ಲಿ 1,924 ರೂ.ಗೆ ಕಡಿಮೆಯಾಗಿದೆ.ಇದನ್ನೂ ಓದಿ:ರಾಜಸ್ಥಾನದಲ್ಲಿ ‘ಡೆವಿಲ್’ ಚಿತ್ರೀಕರಣ ಮುಗಿಸಿದ ದರ್ಶನ್- ನಾಳೆ ಬೆಂಗಳೂರಿನತ್ತ ಚಿತ್ರತಂಡ

  • LPG Cylinder Price:‌ ವಾಣಿಜ್ಯ ಬಳಕೆಯ LPG ಸಿಲಿಂಡರ್‌ ಬೆಲೆ ಭಾರೀ ಇಳಿಕೆ

    LPG Cylinder Price:‌ ವಾಣಿಜ್ಯ ಬಳಕೆಯ LPG ಸಿಲಿಂಡರ್‌ ಬೆಲೆ ಭಾರೀ ಇಳಿಕೆ

    ನವದೆಹಲಿ: ಪೆಟ್ರೋಲಿಯಂ ಮತ್ತು ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ (Commercial LPG Cylinders) ಬೆಲೆ ಪರಿಷ್ಕರಿಸಿದ ನಂತರ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಭಾರೀ ಇಳಿಕೆ ಕಂಡಿದೆ.

    19 ಕೆಜಿ ತೂಕದ ಸಿಲಿಂಡರ್‌ ಬೆಲೆ 83.50 ರೂ. ಇಳಿಕೆಯಾಗಿದ್ದು, ದೆಹಲಿಯಲ್ಲಿ 1,773 ರೂ.ಗೆ ಮಾರಾಟವಾಗುತ್ತಿದೆ. ಗೃಹ ಬಳಕೆ ಸಿಲಿಂಡರ್‌ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಇದನ್ನೂ ಓದಿ: India GDP – ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಹೊರಹೊಮ್ಮಿದ ಭಾರತ

    ಕಳೆದ ತಿಂಗಳು ಮೇ 1 ರಂದು ವಾಣಿಜ್ಯ ಸಿಲಿಂಡರ್‌ ಬೆಲೆಯಲ್ಲಿ 171.50 ರೂ. ಕಡಿತಗೊಳಿಸಲಾಗಿತ್ತು. ಅದಕ್ಕೂ ಮುನ್ನ ಏಪ್ರಿಲ್‌ನಲ್ಲಿ 91.50 ರೂ. ಕಡಿತಗೊಳಿಸಲಾಗಿತ್ತು. ಆದರೆ ಗೃಹಬಳಕೆಯ ಎಲ್‍ಪಿಜಿ ಸಿಲಿಂಡರ್‌ ದರ ಪರಿಷ್ಕರಣೆಯಾಗಿಲ್ಲ. 14.2 ಕೆಜಿ ತೂಕದ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್‌ಗಳ ದರ ಕಳೆದ ತಿಂಗಳಿನಂತೆಯೇ ಇದೆ. ಇದನ್ನೂ ಓದಿ: 100 ಯೂನಿಟ್ ವಿದ್ಯುತ್ ಫ್ರೀ – ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್ ಘೋಷಣೆ

    ಸದ್ಯ ವಾಣಿಜ್ಯ ಸಿಲಿಂಡರ್‌ ಬೆಲೆ ಕೋಲ್ಕತ್ತಾದಲ್ಲಿ 1,875.50 ರೂ., ಮುಂಬೈನಲ್ಲಿ 1,725 ರೂ., ಚೆನ್ನೈನಲ್ಲಿ 1,937ರೂ. ಗಳಿಗೆ ಮಾರಾಟವಾಗುತ್ತಿದೆ.