Tag: Commercial Shop

  • `ಪಬ್ಲಿಕ್ ಟಿವಿ’ ವರದಿ ಬೆನ್ನಲ್ಲೇ ಎಚ್ಚೆತ್ತ ಕೃಷಿ ಅಧಿಕಾರಿಗಳು – ಎಪಿಎಂಸಿ ಆವರಣದ ಕಮರ್ಷಿಯಲ್ ಅಂಗಡಿಗಳಿಗೆ ಲಾಕ್

    `ಪಬ್ಲಿಕ್ ಟಿವಿ’ ವರದಿ ಬೆನ್ನಲ್ಲೇ ಎಚ್ಚೆತ್ತ ಕೃಷಿ ಅಧಿಕಾರಿಗಳು – ಎಪಿಎಂಸಿ ಆವರಣದ ಕಮರ್ಷಿಯಲ್ ಅಂಗಡಿಗಳಿಗೆ ಲಾಕ್

    ಕಲಬುರಗಿ: ಇಲ್ಲಿನ ಎಪಿಎಂಸಿ (APMC) ಆವರಣದಲ್ಲಿ ಕೃಷಿ ಚಟುವಟಿಕೆ ನಡೆಸಲು ಮಳಿಗೆ ಪಡೆದು, ಕೃಷಿಯೇತರ ಚಟುವಟಿಕೆ ನಡೆಸುತ್ತಿರುವ ಅಂಗಡಿಗಳನ್ನ ತೆರವು ಮಾಡುವಂತೆ ಹೋರಾಟಗಾರರು ಕಳೆದ 69 ದಿನಗಳಿಂದ ಹೋರಾಟ ನಡೆಸ್ತಿದ್ದರು. ಎಪಿಎಂಸಿ ಮಾರುಕಟ್ಟೆಯಲ್ಲಿನ ಕಮರ್ಷಿಯಲ್ ಶಾಪ್ ದರ್ಬಾರ್ ಬಗ್ಗೆ `ಪಬ್ಲಿಕ್ ಟಿವಿ’ ಕೂಡ ವರದಿ ಬಿತ್ತರ ಮಾಡಿ ಮಾಡಿತ್ತು. ಇದೀಗ ಪಬ್ಲಿಕ್ ಟಿವಿ ವರದಿ ಮತ್ತು ಹೋರಾಟದ ಪ್ರತಿಫಲವಾಗಿ ಎಪಿಎಂಸಿಯಲ್ಲಿನ 103 ಅಂಗಡಿಗಳ ತೆರವಿಗೆ ಅಧಿಕಾರಿಗಳು ಮುಂದಾಗಿದ್ದಾರೆ.

     ಕಲಬುರಗಿ ಎಪಿಎಂಸಿ ಮಾರುಕಟ್ಟೆಯಲ್ಲಿನ ಕಮರ್ಷಿಯಲ್ ಶಾಪ್‌ಗಳನ್ನ (Commercial Shops) ತೆರವು ಮಾಡುವಂತೆ ಕಳೆದ 69 ದಿನಗಳಿಂದ ಹೋರಾಟ ನಡೆದಿತ್ತು. ಕಮರ್ಷಿಯಲ್ ಶಾಪ್ ತೆರವು ಮಾಡಿ ಎಪಿಎಂಸಿ ಮಾರುಕಟ್ಟೆ ರೈತರಿಗೆ ಅನುಕೂಲ ಆಗುವಂತಹ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಪಬ್ಲಿಕ್ ಟಿವಿ ನಿರಂತರ ವರದಿ ಮಾಡಿತ್ತು. ವರದಿ ಬೆನ್ನಲ್ಲೇ ಎಚ್ಚೆತ್ತ ಎಪಿಎಂಸಿ ಅಧಿಕಾರಿಗಳು 103 ಕಮರ್ಷಿಯಲ್ ಶಾಪ್ ತೆರವು ಮಾಡಲು ಆಗಸ್ಟ್ 18ರ ವರೆಗೆ ಡೆಡ್‌ಲೈನ್ ನೀಡಿತ್ತು. ಇದನ್ನೂ ಓದಿ: ಕೋಲಾರದಲ್ಲಿ ಕೊಲೆ, ತಮಿಳುನಾಡಿನಲ್ಲಿ ಶವ ಪತ್ತೆ – 6 ವರ್ಷಗಳ ಬಳಿಕ ಪ್ರಕರಣ ಭೇದಿಸಿದ ಶಿಡ್ಲಘಟ್ಟ ಪೊಲೀಸ್‌

    ಇದರಿಂದ 25 ಕಮರ್ಷಿಯಲ್ ಅಂಗಡಿ ಮಾಲೀಕರು ಈಗಾಗಲೇ ಅಂಗಡಿ ತೆರವು ಮಾಡಿಕೊಂಡು ಹೋಗಿದ್ದಾರೆ. ಇನ್ನು, 13 ಜನ ಅಂಗಡಿ ಮಾಲೀಕರು ನ್ಯಾಯಾಲಯದಿಂದ ಸ್ಟೇ ತಂದಿದ್ದು, ಹೀಗಾಗಿ ಉಳಿದ ಕಮರ್ಷಿಯಲ್ ಅಂಗಡಿಗಳಿಗೆ ಎಪಿಎಂಸಿ ಅಧಿಕಾರಿಗಳು ಬೀಗ ಹಾಕುವ ಕೆಲಸಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ: ಕಳ್ಳತನ ಕಂಡ ಹೋಟೆಲ್ ಮಾಲೀಕನ ಹತ್ಯೆ ಕೇಸ್; ಪ್ರಮುಖ ಆರೋಪಿ ಕಾಲಿಗೆ ಗುಂಡೇಟು

    ಕಲಬುರಗಿ (Kalaburagi) ಎಪಿಎಂಸಿಯಲ್ಲಿ ಒಟ್ಟು 465 ಮಳಿಗೆಗಳಿವೆ. ಎಪಿಎಂಸಿ ಅಂದಮೇಲೆ ಇಲ್ಲಿ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ಅಂಗಡಿಗಳು ಮಾತ್ರ ಕಾರ್ಯನಿರ್ವಹಿಸಬೇಕು. ಆದರೆ ಇಲ್ಲಿ ಮಾತ್ರ 300ಕ್ಕೂ ಅಧಿಕ ಅನಧಿಕೃತ ಅಂದರೆ ಎಲೆಕ್ಟ್ರಿಕಲ್ ಶಾಪ್, ಟೈಯರ್ ಶಾಪ್, ಮ್ಯಾಚ್ ಬಾಕ್ಸ್ ಶಾಪ್, ಹೊಟೇಲ್ ಸೇರಿದಂತೆ ಇನ್ನಿತರ ಅಂಗಡಿಗಳು ಚಟುವಟಿಕೆ ನಡೆಸುತ್ತಿವೆ. ಇದನ್ನೂ ಓದಿ: ಸಮೀರ್‌ಗೆ ತಪ್ಪದ ಸಂಕಷ್ಟ – ಕಡೂರು ಠಾಣೆಯಲ್ಲಿ ಮತ್ತೊಂದು ದೂರು!

    ಇದರಿಂದ ಕೃಷಿ ಚಟುವಟಿಕೆ ವ್ಯವಹಾರಕ್ಕೆ ದೊಡ್ಡಮಟ್ಟದ ಹೊಡೆತ ಬೀಳುತ್ತಿತ್ತು. ಹೀಗಾಗಿ ಎಪಿಎಂಸಿಯಲ್ಲಿನ ಕಮರ್ಷಿಯಲ್ ಅಂಗಡಿಗಳಿಗೆ ಅಧಿಕಾರಿಗಳು ಬೀಗ ಜಡಿಯುವ ಮಾಹಿತಿ ಬರುತ್ತಿದ್ದಂತೆ. ಅಂಗಡಿ ಮಾಲೀಕರು ಸ್ಥಳಕ್ಕೆ ಬಂದು ಅಂಗಡಿ ತೆರವಿಗೆ ಕಾಲಾವಕಾಶ ಕೋರಿದ್ದರು. ಕಲಬುರಗಿ ಚೇಂಬರ್ ಆಫ್ ಕಾಮಸ್9 ಮನವಿ ಬೆನ್ನಲ್ಲೇ ಎಪಿಎಂಸಿ ಇಲಾಖೆ ಅಧಿಕಾರಿಗಳು ಕೆಲ ದಿನಗಳ ಕಾಲ ಕಾಲಾವಕಾಶ ಕೊಟ್ಟಿದ್ದಾರೆ.

    ಪದೇ ಪದೇ ಎಪಿಎಂಸಿ ಅಧಿಕಾರಿಗಳು ಕಮರ್ಷಿಯಲ್ ಅಂಗಡಿಗೆ ಸಮಯ ಕೊಡುತ್ತಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಹೀಗಾಗಿ ಸಚಿವ ಶಿವಾನಂದ್ ಪಾಟೀಲ್ ಎಪಿಎಂಸಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಕೆಲಸ ಮಾಡಬೇಕಾಗಿದೆ.

  • ನಾಗಮಂಗಲದಲ್ಲಿ 78 ವಾಣಿಜ್ಯ ಮಳಿಗೆಗಳ ಲೋಕಾರ್ಪಣೆ ಮಾಡಿದ ಸಚಿವ ಕೆ.ಗೋಪಾಲಯ್ಯ

    ನಾಗಮಂಗಲದಲ್ಲಿ 78 ವಾಣಿಜ್ಯ ಮಳಿಗೆಗಳ ಲೋಕಾರ್ಪಣೆ ಮಾಡಿದ ಸಚಿವ ಕೆ.ಗೋಪಾಲಯ್ಯ

    ಮಂಡ್ಯ: ಹತ್ತಣೆ ಹಣಕಾಸು ಯೋಜನೆ ಮತ್ತು ಎಸ್‍ಎಫ್‍ಸಿ ಅನುದಾನಡಿ 3.60 ಕೋಟಿ ರೂ. ವೆಚ್ಚದಲ್ಲಿ ಪುರಸಭೆಯಿಂದ ನಿರ್ಮಾಣ ಮಾಡಿರುವ ವಾಣಿಜ್ಯ ಸಂಕೀರ್ಣಗಳನ್ನು ಪುರಸಭಾ ಆವರಣದಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಇಂದು ಉದ್ಘಾಟಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಾಗಮಂಗಲ ಪಟ್ಟಣ ಮತ್ತು ಈ ಭಾಗದ ಸುತ್ತ ಮುತ್ತಲ ಜನರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ 78 ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ ಮಾಡಲಾಗಿದ್ದು, ಜನರ ಉಪಯೋಗಕ್ಕೆ ಈ ಮಳಿಗೆಗಳು ದೊರಕುವಂತಾಗಲಿ ಎಂದರು. ಇದನ್ನೂ ಓದಿ: ಉಕ್ರೇನ್ ಗಡಿ ತಲುಪಿದ್ರೂ ಭಾರತಕ್ಕೆ ಬರಲಾಗದೆ ರಾಯಚೂರು ವಿದ್ಯಾರ್ಥಿಗಳು ಪರದಾಟ

    ಜಿಲ್ಲೆಯಲ್ಲಿ ದೇವರಾಜು ಅರಸು ವಸತಿ ನಿಲಯ, ಪೊಲೀಸ್ ವಸತಿ ನಿಲಯ ಮತ್ತು ವಾಣಿಜ್ಯ ಸಂಕೀರ್ಣ ಹೀಗೆ ಒಂದೇ ದಿನ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಲಾಗಿದೆ. ಸಚಿವರಾದ ಡಾ.ಕೆ.ಸಿ.ನಾರಾಯಣ ಗೌಡರು, ಶಾಸಕರಾದ ಸುರೇಶ್ ಗೌಡರು ಮತ್ತು ನಾನು ಮೂವರು ಸೇರಿಕೊಂಡು ಸರ್ಕಾರದ ಅನುದಾನವನ್ನು ತಂದು ಮಂಡ್ಯ ಜಿಲ್ಲೆಯ ಸಮಗ್ರ ಚಿತ್ರಣವನ್ನು ಬದಲಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು.

    ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷೆ ಎನ್.ಜಿ.ಆಶಾ, ಉಪಾಧ್ಯಕ್ಷ ಜಾಫರ್ ಷರೀಫ್, ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಸಿ.ಚನ್ನಪ್ಪ, ರಾಜ್ಯ ಪೌರಾಡಳಿತ ನಿರ್ದೇಶಕಿ ಎಂ.ಎಸ್.ಅರ್ಚನಾ, ಮಂಡ್ಯ ಜಿಲ್ಲಾಧಿಕಾರಿ ಎಸ್.ಅಶ್ವತಿ, ಎಸ್ಪಿ ಎನ್.ಯತೀಶ್ ಇತರರು ಉಪಸ್ಥಿತರಿದ್ದರು. ಇದನ್ನೂ ಓದಿ: ಉಕ್ರೇನ್‍ನಲ್ಲಿ ಸಿಲುಕಿರುವವರನ್ನು ವಾಪಸ್ ಕರೆತರುವ ಸಂಪೂರ್ಣ ವೆಚ್ಚವನ್ನು ಸರ್ಕಾರ ಭರಿಸುತ್ತೆ: ಪ್ರಹ್ಲಾದ್ ಜೋಶಿ

  • ದಿನದ 24 ಗಂಟೆ ಅಂಗಡಿ, ವಾಣಿಜ್ಯ ಮಳಿಗೆ ತೆರೆಯಲು ಅವಕಾಶ

    ದಿನದ 24 ಗಂಟೆ ಅಂಗಡಿ, ವಾಣಿಜ್ಯ ಮಳಿಗೆ ತೆರೆಯಲು ಅವಕಾಶ

    – 10ಕ್ಕಿಂತ ಹೆಚ್ಚು ಕಾರ್ಮಿಕರನ್ನು ಹೊಂದಿರುವ ವಾಣಿಜ್ಯ ಮಳಿಗೆಗಳಿಗೆ ಅನುಮತಿ

    – ಮೂರು ವರ್ಷಕ್ಕೆ ಅಧಿಸೂಚನೆ ಅನ್ವಯ

    ಬೆಂಗಳೂರು: ದಿನದ 24 ಗಂಟೆ ಅಂಗಡಿ ತೆರೆಯಲು ಸರ್ಕಾರ ಅವಕಾಶ ನೀಡಿದ್ದು, 10ಕ್ಕಿಂತ ಹೆಚ್ಚು ಕಾರ್ಮಿಕರನ್ನು ಹೊಂದಿರುವ ವಾಣಿಜ್ಯ ಮಳಿಗೆಗಳು ವಾರದ ಏಳೂ ದಿನ, ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಈ ಕುರಿತು ಕಾರ್ಮಿಕ ಇಲಾಖೆ ಮೂಲಕ ಅಧಿಸೂಚನೆ ಹೊರಡಿಸಲಾಗಿದ್ದು, ಮುಂದಿನ ಮೂರು ವರ್ಷ ಈ ಅಧಿಸೂಚನೆ ಅನ್ವಯವಾಗಲಿದೆ. ಅಂಗಡಿ ಮತ್ತು ವಾಣಿಜ್ಯ ಮಳಿಗೆಗಳು ತಮ್ಮ ನೌಕರರಿಗೆ ಕಡ್ಡಾಯವಾಗಿ ವಾರದಲ್ಲಿ ಒಂದು ದಿನ ರಜೆ ನೀಡಬೇಕು. ಅದನ್ನು ಅಂಗಡಿಯಲ್ಲಿ ಎಲ್ಲರಿಗೂ ಕಾಣುವಂತೆ ಪ್ರದರ್ಶಿಸಬೇಕು. ರಜೆ ಹಾಗೂ ವಾರದ ರಜೆಯಲ್ಲಿರುವ ಉದ್ಯೋಗಿಯ ಮಾಹಿತಿಯನ್ನು ಎಲ್ಲರಿಗೂ ಕಾಣಿಸುವಂತೆ ಪ್ರದರ್ಶನ ಮಾಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

    ಕಾರ್ಮಿಕರ ಸಂಬಳ ಮತ್ತು ಹೆಚ್ಚುವರಿ ಅವಧಿಯ ಭತ್ಯೆಯನ್ನು 1963ರ ಸಂಬಳ ಮತ್ತು ಭತ್ಯೆ ಕಾಯ್ದೆ ಅನ್ವಯ ನೀಡಬೇಕು. ಪ್ರತಿಯೊಬ್ಬ ಕಾರ್ಮಿಕರಿಗೆ 8 ಗಂಟೆ ಅವಧಿಗೆ ಮೀರಿ ಕೆಲಸ ಮಾಡಿಸಿಕೊಳ್ಳುವಂತಿಲ್ಲ. ಹೆಚ್ಚುವರಿ ಅವಧಿಯೂ ಗರಿಷ್ಠ 2 ಗಂಟೆ ಮೀರುವಂತಿಲ್ಲ. ಮೂರು ತಿಂಗಳಲ್ಲಿ 50 ಗಂಟೆ ಹೆಚ್ಚುವರಿ ಅವಧಿ ಮೀರುವಂತಿಲ್ಲ ಎಂದು ಸೂಚಿಸಿದೆ.

    ಕಾರ್ಮಿಕರನ್ನು ರಜೆಯ ದಿನ ಅಥವಾ ಕೆಲಸದ ಅವಧಿ ಮುಗಿದ ಮೇಲೆ ನಿರ್ಧಿಷ್ಠ ಸೂಚನೆ ಇಲ್ಲದೇ ಹೆಚ್ಚುವರಿ ಅವಧಿ ಕೆಲಸ ಮಾಡಿಸುವುದು ಕಂಡು ಬಂದರೆ ಅಂತಹ ಅಂಗಡಿ ಮಳಿಗೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಾಮಾನ್ಯ ಸಂದರ್ಭದಲ್ಲಿ ರಾತ್ರಿ 8 ಗಂಟೆ ನಂತರ ಮಹಿಳಾ ಕಾರ್ಮಿಕರನ್ನು ಕೆಲಸ ಮಾಡಿಸಿಕೊಳ್ಳುವಂತಿಲ್ಲ. ಒಂದು ವೇಳೆ ಮಹಿಳಾ ಕಾರ್ಮಿಕರು ಲಿಖಿತ ಒಪ್ಪಿಗೆ ನೀಡಿದರೆ ರಾತ್ರಿ 8 ರಿಂದ ಬೆಳಗಿನ 6 ಗಂಟೆಯ ತನಕ ಅವರ ಗೌರವಕ್ಕೆ ಧಕ್ಕೆ ಬಾರದಂತೆ, ರಕ್ಷಣೆ ನೀಡಿ, ಕೆಲಸ ಒದಗಿಸಬಹುದು.

    ಎಲ್ಲ ಮಹಿಳಾ ಸಿಬ್ಬಂದಿಗೆ ಶಿಫ್ಟ್ ಆಧಾರದಲ್ಲಿಯೇ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಈ ಬಗ್ಗೆ ಅಂಗಡಿಯ ಬೋರ್ಡ್‍ನಲ್ಲಿ ಮಾಹಿತಿ ಪ್ರದರ್ಶನ ಮಾಡಬೇಕು. ಅಂಗಡಿ ಮಳಿಗೆಗಳಲ್ಲಿ ಕಾರ್ಮಿಕರಿಗೆ ಅಗತ್ಯ ಶೌಚಾಲಯ, ವಿಶ್ರಾಂತಿ ಕೊಠಡಿ, ಸೇಫ್ಟಿ ಲಾಕರ್ ಒದಗಿಸಬೇಕು. ಮಹಿಳಾ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳುವ ಅಂಗಡಿ ಮಳಿಗೆಗಳು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುವವರ ವಿರುದ್ಧ ದೂರು ಸಲ್ಲಿಸಲು ಆಂತರಿಕ ಸಮಿತಿ ರಚನೆ ಮಾಡಬೇಕು. ಆ ಸಮಿತಿ ಸಕ್ರೀಯವಾಗಿರುವಂತೆ ನೋಡಿಕೊಳ್ಳಬೇಕು.

    ಈ ನಿಯಮಗಳ ಉಲ್ಲಂಘನೆ ಮಾಡುವ ಅಂಗಡಿ ಮತ್ತು ವಾಣಿಜ್ಯ ಮಳಿಗೆಗಳ ವಿರುದ್ದ 1961 ವಾಣಿಜ್ಯ ಅಂಗಡಿಗಳು ಮತ್ತು ಮಳಿಗೆಗಳ ಕಾಯ್ದೆ ಪ್ರಕಾರ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.