Tag: Commonwealth

  • CWG 2022: ನಡಿಗೆ, ಜಾವೆಲಿನ್‌ನಲ್ಲಿ ಭಾರತಕ್ಕೆ ಕಂಚು

    CWG 2022: ನಡಿಗೆ, ಜಾವೆಲಿನ್‌ನಲ್ಲಿ ಭಾರತಕ್ಕೆ ಕಂಚು

    ಲಂಡನ್: 22ನೇ ಕಾಮನ್‌ವೆಲ್ತ್ ಕ್ರಿಡಾಕೂಟ ಪ್ರಾರಂಭವಾಗಿ ಇಂದು 10ನೇ ದಿನವಾಗಿದ್ದು, ಭಾರತೀಯ ಕ್ರೀಡಾಪಟುಗಳು ಒಂದಾದಮೇಲೊಂದರಂತೆ ಪದಕಗಳನ್ನು ಬಾಚಿಕೊಳ್ಳುತ್ತಿದ್ದಾರೆ. ಇದೀಗ ಪುರುಷರ ನಡಿಗೆ ಸ್ಪರ್ಧೆಯಲ್ಲಿ ಸಂದೀಪ್ ಕುಮಾರ್ ಹಾಗೂ ಮಹಿಳೆಯರ ಜಾವೆಲಿನ್ ಸ್ಪರ್ಧೆಯಲ್ಲಿ ಅನು ರಾಣಿ ಕಂಚನ್ನು ಗೆದ್ದಿದ್ದಾರೆ.

    ಸಂದೀಪ್ ಕುಮಾರ್ ಅವರು ಪುರುಷರ 10,000 ಮೀ. ಫೈನಲ್ ವಾಕ್ ರೇಸ್‌ನಲ್ಲಿ ಕಂಚಿನ ಪದಕವನ್ನು ಪಡೆದಿದ್ದಾರೆ. ಭಾರತವನ್ನು ಪ್ರತಿನಿಧಿಸಿದ ಸಂದೀಪ್ ಕಾಮನ್‌ವೆಲ್ತ್ ಗೇಮ್ಸ್ 2022ರ ಅಥ್ಲೆಟಿಕ್ಸ್‌ನಲ್ಲಿ ಉತ್ತಮ ಪ್ರದರ್ಶನವನ್ನು ನೀಡಿದ್ದಾರೆ. ಇದನ್ನೂ ಓದಿ: CWG 2022: ಟ್ರಿಪಲ್ ಜಂಪ್‍ನಲ್ಲಿ ಡಬಲ್ ಧಮಾಕ – ಎಲ್ದೋಸ್ ಪೌಲ್‍ಗೆ ಚಿನ್ನ, ಅಬ್ದುಲ್ಲಾ ಅಬೂಬಕರ್‌ಗೆ ಬೆಳ್ಳಿ

    ಶನಿವಾರವಷ್ಟೇ ಮಹಿಳೆಯರ ನಡಿಗೆ ಸ್ಪರ್ಧೆಯಲ್ಲಿ ಪ್ರಿಯಾಂಕಾ ಗೋಸ್ವಾಮಿ ಬೆಳ್ಳಿ ಗೆದ್ದಿದ್ದರು. ಇಂದು ಪುರುಷರ ನಡಿಗೆ ಸ್ಪರ್ಧೆಯಲ್ಲಿ ಸಂದೀಪ್ ಕುಮಾರ್ 10,000 ಮೀ. ಅನ್ನು ಕೇವಲ 28:49.21 ಸಮಯದಲ್ಲಿ ಕ್ರಮಿಸಿ ಕಂಚನ್ನು ಬಾಚಿಕೊಂಡಿದ್ದಾರೆ.

    ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್ ಎಸೆತದಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಅನು ರಾಣಿ ಪಾತ್ರರಾಗಿದ್ದಾರೆ. 60 ಮೀ. ದೂರಕ್ಕೆ ಜಾವೆಲಿನ್ ಎಸೆದ ಅನು ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಇದನ್ನೂ ಓದಿ: CWG-2022: ಭಾರತಕ್ಕೆ ಚಿನ್ನದ ಕಿಕ್ ಕೊಟ್ಟ ಬಾಕ್ಸರ್ಸ್, ಸಿಂಧು ಫೈನಲ್‌ಗೆ ಗ್ರ್ಯಾಂಡ್‌ ಎಂಟ್ರಿ

    Live Tv
    [brid partner=56869869 player=32851 video=960834 autoplay=true]

  • ವೇಟ್ ಲಿಫ್ಟಿಂಗ್‌ನಲ್ಲಿ ಭಾರತಕ್ಕೆ 8ನೇ ಪದಕ – ವಿಕಾಸ್ ಠಾಕೂರ್‌ಗೆ ಬೆಳ್ಳಿ

    ವೇಟ್ ಲಿಫ್ಟಿಂಗ್‌ನಲ್ಲಿ ಭಾರತಕ್ಕೆ 8ನೇ ಪದಕ – ವಿಕಾಸ್ ಠಾಕೂರ್‌ಗೆ ಬೆಳ್ಳಿ

    ಬರ್ಮಿಂಗ್‌ಹ್ಯಾಮ್: ಕಾಮನ್‌ವೆಲ್ತ್ ಗೇಮ್ಸ್ 2022 ರ ಪುರುಷರ 96 ಕೆಜಿ ವಿಭಾಗದ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತದ ವಿಕಾಸ್ ಠಾಕೂರ್ ಮಂಗಳವಾರ ಬೆಳ್ಳಿ ಪದಕ ಗೆದ್ದಿದ್ದಾರೆ. ಇದು ಈ ಬಾರಿ ಕಾಮನ್‌ವೆಲ್ತ್‌ನ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತಕ್ಕೆ ಲಭಿಸಿದ 8ನೇ ಪದಕವಾಗಿದೆ.

    ವಿಕಾಸ್ ಒಟ್ಟು 346 ಕೆಜಿ (ಸ್ನ್ಯಾಚ್‌ನಲ್ಲಿ 155 ಕೆಜಿ ಮತ್ತು ಕ್ಲೀನ್ ಮತ್ತು ಜರ್ಕ್ನಲ್ಲಿ 199 ಕೆಜಿ) ತೂಕವನ್ನು ಎತ್ತಿ ಎರಡನೇ ಸ್ಥಾನ ಗಿಟ್ಟಿಸಿಕೊಂಡರು. 2014ರಲ್ಲಿ ಗ್ಲಾಸ್ಗೋದಲ್ಲಿ ಬೆಳ್ಳಿ ಮತ್ತು 2018ರಲ್ಲಿ ಗೋಲ್ಡ್ ಕೋಸ್ಟ್‌ನಲ್ಲಿ ಕಂಚು ಗೆದ್ದಿದ್ದ ವಿಕಾಸ್ ಠಾಕೂರ್‌ಗೆ ಇದು ಮೂರನೇ ಕಾಮನ್‌ವೆಲ್ತ್ ಗೇಮ್ಸ್ ಪದಕವಾಗಿದೆ. ಇದನ್ನೂ ಓದಿ: ಇಂದು ಸುವರ್ಣ ದಿನ- ಟೇಬಲ್ ಟೆನಿಸ್‍ನಲ್ಲಿ ಚಿನ್ನ ಗೆದ್ದ ಭಾರತ

    ಇಲ್ಲಿಯವರೆಗೆ ಕಾಮನ್‌ವೆಲ್ತ್ 2022ರ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತಕ್ಕೆ ಒಟ್ಟು 8 ಪದಕ ಬಂದಿದೆ. ಮೀರಾಬಾಯಿ ಚಾನು, ಜೆರೆಮಿ ಲಾಲ್ರಿನ್ನುಂಗಾ, ಅಚಿಂತಾ ಶೆಯುಲಿ, ಸಂಕೇತ್ ಸರ್ಗರ್, ಬಿಂದ್ಯಾರಾಣಿ ರಾಣಿ, ಗುರುರಾಜ ಪೂಜಾರಿ, ಹರ್ಜಿಂದರ್ ಕೌರ್ ಹಾಗೂ ಇದೀಗ ವಿಕಾಸ್ ಪದಕ ಗೆದ್ದಿದ್ದಾರೆ. ಇದನ್ನೂ ಓದಿ: ಲಾನ್‌ ಬಾಲ್ಸ್‌ನಲ್ಲಿ ಇತಿಹಾಸ ಸೃಷ್ಟಿ – ಚಿನ್ನ ಗೆದ್ದ ವನಿತೆಯರು

    Live Tv
    [brid partner=56869869 player=32851 video=960834 autoplay=true]

  • ನೀರಜ್ ಚೋಪ್ರಾಗೆ ಗಾಯದ ಸಮಸ್ಯೆ – ಕಾಮನ್‍ವೆಲ್ತ್ ಗೇಮ್ಸ್‌ಗೂ ಮುನ್ನವೇ ಭಾರತಕ್ಕೆ ಹಿನ್ನಡೆ

    ನೀರಜ್ ಚೋಪ್ರಾಗೆ ಗಾಯದ ಸಮಸ್ಯೆ – ಕಾಮನ್‍ವೆಲ್ತ್ ಗೇಮ್ಸ್‌ಗೂ ಮುನ್ನವೇ ಭಾರತಕ್ಕೆ ಹಿನ್ನಡೆ

    ನವದೆಹಲಿ: ಬರ್ಮಿಂಗ್‍ಹ್ಯಾಮ್‍ನಲ್ಲಿ ನಡೆಯಲಿರುವ ಕಾಮನ್‍ವೆಲ್ತ್ ಗೇಮ್ಸ್‌ಗೂ ಮುನ್ನವೇ ಭಾರತಕ್ಕೆ ಹಿನ್ನಡೆಯಾಗಿದ್ದು, ಪದಕದ ಭರವಸೆಯಾಗಿದ್ದ ನೀರಜ್ ಚೋಪ್ರಾ ಅವರು ಗಾಯದ ಸಮಸ್ಯೆಯಿಂದಾಗಿ ಕಾಮನ್‍ವೆಲ್ತ್ ಗೇಮ್ಸ್‌ನಿಂದ ಈ ಬಾರಿ ಹೊರಗುಳಿದಿದ್ದಾರೆ.

    ಈ ಬಗ್ಗೆ ಇಂಡಿಯನ್ ಒಲಿಂಪಿಕ್ ಅಸೋಸಿಯೇಷನ್‍ನ ಪ್ರಧಾನ ಕಾರ್ಯದರ್ಶಿ ರಾಜೀವ್ ಮೆಹ್ತಾ ಮಾಹಿತಿ ನೀಡಿದ್ದು, ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ ಶಿಪ್‍ನ ಸಂದರ್ಭದಲ್ಲಿ ನೀರಜ್‍ಗೆ ಗಾಯವಾಗಿದೆ. ಈ ಹಿನ್ನೆಲೆಯಲ್ಲಿ ಸದ್ಯ ನೀರಜ್ ಚೋಪ್ರಾ ಅವರಿಗೆ ವಿಶ್ರಾಂತಿಯ ಅಗತ್ಯವಿದೆ. ಆದ್ದರಿಂದ ಅವರು ಕಾಮನ್‍ವೆಲ್ತ್‌ನಲ್ಲಿ ಭಾಗಿಯಾಗಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: World Athletics Championship 2022 – ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ

    ಇತ್ತೀಚೆಗೆ ಅಮೆರಿಕದಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ ಶಿಪ್‍ನ ಪುರುಷರ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಬೆಳ್ಳಿ ಪದಕ ಗೆದ್ದು ಭಾರತಕ್ಕೆ ಮೊದಲ ಪದಕ ತಂದು ಕೊಟ್ಟಿದ್ದರು. ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ 88.13 ಮೀಟರ್ ಎಸೆಯುವ ಮೂಲಕ ಬೆಳ್ಳಿ ಗೆದ್ದಿದ್ದರು. ಇದನ್ನೂ ಓದಿ: ಮುಂದಿನ ಗುರಿ 90 ಮೀ. ಎಸೆತ – ಪದಕದ ಬಣ್ಣ ಬದಲಾಯಿಸಲು ಪ್ರಯತ್ನಿಸುತ್ತೇನೆ: ನೀರಜ್ ಚೋಪ್ರಾ

    Live Tv
    [brid partner=56869869 player=32851 video=960834 autoplay=true]

  • ಕಾಮನ್‍ವೆಲ್ತ್ ಗೇಮ್ಸ್ ಪದಕ ವಿಜೇತೆ ಅಶ್ವಿನಿ ಪೊನ್ನಪ್ಪಗೆ ಡಿಸಿಎಂ ಪರಮೇಶ್ವರ್ ಸನ್ಮಾನ

    ಕಾಮನ್‍ವೆಲ್ತ್ ಗೇಮ್ಸ್ ಪದಕ ವಿಜೇತೆ ಅಶ್ವಿನಿ ಪೊನ್ನಪ್ಪಗೆ ಡಿಸಿಎಂ ಪರಮೇಶ್ವರ್ ಸನ್ಮಾನ

    ಬೆಂಗಳೂರು: ಕಾಮನ್‍ವೆಲ್ತ್ ಗೇಮ್ಸ್ ನಲ್ಲಿ ಚಿನ್ನ ಗೆದ್ದ ಬ್ಯಾಡ್ಮಿಟನ್ ತಾರೆ ಕನ್ನಡತಿ ಅಶ್ವಿನಿ ಪೊನ್ನಪ್ಪ ಅವರಿಗೆ ಡಿಸಿಎಂ ಪರಮೇಶ್ವರ್ ಸನ್ಮಾನ ಮಾಡಿ ಗೌರವಿಸಿದ್ದಾರೆ.

    ವಿಧಾನಸೌಧದ ಕಚೇರಿಯಲ್ಲಿ ಅಶ್ವಿನಿ ಪೊನ್ನಪ್ಪಗೆ ಶಾಲು ಪೇಟ ತೊಡಿಸಿ ಸನ್ಮಾನಿಸಿದ್ದಾರೆ. ಅಶ್ವಿನಿ ಚಿನ್ನ ಹಾಗೂ ಕಂಚಿನ ಪದಕ ಗೆದ್ದಿದ್ದಕ್ಕೆ ಸರ್ಕಾರ 25 ಲಕ್ಷ ರೂ. ಹಾಗೂ 8 ಲಕ್ಷ ರೂ. ನೀಡಿ ಗೌರವಿಸಿದೆ. ಪರಮೇಶ್ವರ್ ಜೊತೆ ಕರ್ನಾಟಕ ಒಲಿಂಪಿಕ್ ಅಧ್ಯಕ್ಷ ಗೋವಿಂದ್ ರಾಜ್ ಕೂಡ ಭಾಗಿಯಾಗಿದ್ದರು.

    ಅಶ್ವಿನಿ ಪೊನ್ನಪ್ಪ ಕಾಮನ್‍ವೆಲ್ತ್ ಗೇಮ್ ನಲ್ಲಿ ಚಿನ್ನ ಹಾಗೂ ಕಂಚಿನ ಪದಕ ಪಡೆದಿದ್ದಾರೆ. ಸರ್ಕಾರ ಅವರಿಗೆ ಒಟ್ಟು 33 ಲಕ್ಷ ರೂ. ಪುರಸ್ಕಾರ ನೀಡಿದೆ. ಅವರ ಸಾಧನೆ ಇನ್ನಷ್ಟು ಬೆಳೆಯಲಿ. ರಾಜ್ಯಕ್ಕೆ ತಂದಿರುವ ಗೌರವಕ್ಕೆ ಅವರಿಗೆ ಈ ಪುರಸ್ಕಾರ ನೀಡಲಾಗಿದೆ. ಮುಂದಿನ ಪಂದ್ಯಗಳಲ್ಲಿ ಚಿನ್ನದ ಪದಕ ಪಡೆಯಲಿ ಎಂದು ಪರಮೇಶ್ವರ್ ಹೇಳಿದರು.

    ಒಲಿಂಪಿಕ್ಸ್ ನಲ್ಲಿ ಚಿನ್ನ ಗೆದ್ದವರಿಗೆ ಗೆದ್ದವರಿಗೆ 5 ಕೋಟಿ ರೂ. ಪುರಸ್ಕಾರ ಘೋಷಣೆ ಮಾಡಲಾಗಿದೆ. ಬೆಳ್ಳಿಗೆ 3 ಕೋಟಿ ರೂ. ಹಾಗೂ ಕಂಚಿಗೆ 2 ಕೋಟಿ ರೂ. ನೀಡಲು ಸರ್ಕಾರ ನಿರ್ಧಾರ ಮಾಡಲಾಗಿದೆ. ಅಶ್ವಿನಿ ಪೊನ್ನಪ್ಪ ಒಲಂಪಿಕ್ಸ್ ನಲ್ಲಿ ಪದಕ ಪಡೆಯಲಿ ಎಂದು ಡಿಸಿಎಂ ಪರಮೇಶ್ವರ್ ಹಾರೈಸಿದರು.

  • ಕಾಮನ್‍ವೆಲ್ತ್ ನಲ್ಲಿ ಬೆಳ್ಳಿ ಪದಕ ಗೆದ್ದ ಗುರುರಾಜ್ ಪೂಜಾರಿಗೆ ರಾಜ್ಯ ಸರ್ಕಾರದಿಂದ ಮೋಸ!

    ಕಾಮನ್‍ವೆಲ್ತ್ ನಲ್ಲಿ ಬೆಳ್ಳಿ ಪದಕ ಗೆದ್ದ ಗುರುರಾಜ್ ಪೂಜಾರಿಗೆ ರಾಜ್ಯ ಸರ್ಕಾರದಿಂದ ಮೋಸ!

    ಉಡುಪಿ: ಈ ಬಾರಿಯ ಕಾಮನ್ ವೆಲ್ತ್ ನಲ್ಲಿ ದೇಶಕ್ಕೆ ಬೆಳ್ಳಿ ಪದಕ ಗೆದ್ದು ಕೊಟ್ಟ ಕುಂದಾಪುರದ ಗುರುರಾಜ್ ಪೂಜಾರಿಗೆ ರಾಜ್ಯ ಸರ್ಕಾರ ಮೋಸ ಮಾಡಿದೆ.

    25 ಲಕ್ಷ ರೂ. ಪ್ರೋತ್ಸಾಹ ಧನವನ್ನೂ ನೀಡಿಲ್ಲ, ಉದ್ಯೋಗವನ್ನೂ ಕೊಡಿಸಿಲ್ಲ. ದೇಶಕ್ಕಾಗಿ ಪದಕ ಗೆದ್ದು ಕೊಟ್ಟು ಮೂರು ತಿಂಗಳು ಕಳೆದರೂ ಈ ಬಡ ಕ್ರೀಡಾಪಟುವಿಗೆ ಸರ್ಕಾರದ ಆರ್ಥಿಕ ನೆರವು ತಲುಪಿಲ್ಲ. ರಾಷ್ಟ್ರಮಟ್ಟದಲ್ಲಿ ರಾಜ್ಯಕ್ಕೆ ಹೆಸರು ತಂದ ಈ ವೇಟ್ ಲಿಫ್ಟಿಂಗ್, ಫೈಲುಗಳನ್ನು ಹಿಡಿದು ಕಚೇರಿಯಿಂದ ಕಚೇರಿಗೆ ಅಲೆದಾಡಬೇಕಾದ ಸ್ಥಿತಿ ಎದುರಿಸಬೇಕಾಗಿದೆ.

    ಬಡತನದಲ್ಲೇ ಕಷ್ಟಪಟ್ಟು ಸಾಧನೆ ಮಾಡಿರುವ ಗುರುರಾಜ್ ಮೂಲತಃ ಉಡುಪಿ ಜಿಲ್ಲೆಯ ಬೈಂದೂರಿನವರು. ಆಸ್ಟ್ರೇಲಿಯಾದಲ್ಲಿ ನಡೆದ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಪದಕ ಭೇಟೆಯನ್ನು ಗುರುರಾಜ್ ಆರಂಭಿಸಿದ್ದರು. 56 ಕೆ.ಜಿ ವಿಭಾಗದ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಭಾರತಕ್ಕೆ ಬೆಳ್ಳಿ ಪದಕ ತಂದು ಕೊಟ್ಟಿದ್ದರು. ಈ ಮೂಲಕ ದಿನ ಬೆಳಗಾಗೋದ್ರೊಳಗೆ ಕರ್ನಾಟಕದ ಈ ಕ್ರೀಡಾಪಟು, ಭಾರತದಾದ್ಯಂತ ಮನೆ ಮಾತಾದ್ರು. ಅಷ್ಟೇ ಯಾಕೆ ನಮ್ಮ ಆಗಿನ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಸರ್ಕಾರ ಬಹುಮಾನವಾಗಿ 25 ಲಕ್ಷ ರೂ. ಘೋಷಿಸಿತ್ತು. ಅಲ್ಲದೇ ಗುರುರಾಜ್ ಗೆ ಕೆಲಸ ಕೊಡಿಸುವುದಾಗಿಯೂ ಭರವಸೆ ನೀಡಿತ್ತು. ಈ ಭರವಸೆ ನೀಡಿ ಸುಮಾರು ಮೂರು ತಿಂಗ್ಳಾದ್ರೂ ಇದೂವರೆಗೂ ಬಹುಮಾನವೂ ಇಲ್ಲ, ಉದ್ಯೋಗವೂ ಸಿಕ್ಕಿಲ್ಲ.

    ಗುರುರಾಜ್ ತಂದೆ ಮಹಾಬಲ ಪೂಜಾರಿ ಇಂದಿಗೂ ಆಟೋ ಓಡಿಸುತ್ತಿದ್ದಾರೆ. ಬೇರೆ ರಾಜ್ಯದಲ್ಲಿ ಬೆಳ್ಳಿ ಗೆದ್ದ ಕ್ರೀಡಾಪಟುಗಳಿಗೆ 1 ಕೋಟಿ ರೂ. ವರೆಗೆ ಬಹುಮಾನ ನೀಡಿದ್ದಾರೆ. ಅಲ್ಲಿ ಬಹುಮಾನ ಅವರ ಕೈ ಸೇರಿದ್ದೂ ಆಗಿದೆ. ಆದರೆ ಇಲ್ಲಿ ಸರ್ಕಾರದ ಮುಂದೆ ಇಂದು ಈ ಸಾಧಕ ಕೈಚಾಚಿ ನಿಲ್ಲುವ ಸ್ಥಿತಿ ಬಂದಿದೆ.

    ಒಟ್ಟಿನಲ್ಲಿ ಕಠಿಣ ಅಭ್ಯಾಸ ನಡೆಸಿ 2020ರಲ್ಲಿ ನಡೆಯುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸುವ ಕನಸು ಈ ಕ್ರೀಡಾಪಟುವಿನದ್ದು. ಆದರೆ ಸರ್ಕಾರದ ಪ್ರೋತ್ಸಾಹ ನೋಡಿದ್ರೆ ನಮ್ಮ ಸರ್ಕಾರಕ್ಕಿರುವ ಹಂಬಲವೇನೆಂದು ತಿಳಿದು ಬರುತ್ತಿದೆ.

  • ಕಾಮನ್‍ವೆಲ್ತ್ ಗೇಮ್ಸ್ ನಲ್ಲಿ ಕನ್ನಡಿಗನ ಕೇಕೆ- ಬೆಳ್ಳಿ ಪದಕ ಗೆದ್ದ ಉಡುಪಿಯ ಗುರುರಾಜ್

    ಕಾಮನ್‍ವೆಲ್ತ್ ಗೇಮ್ಸ್ ನಲ್ಲಿ ಕನ್ನಡಿಗನ ಕೇಕೆ- ಬೆಳ್ಳಿ ಪದಕ ಗೆದ್ದ ಉಡುಪಿಯ ಗುರುರಾಜ್

    ಗೋಲ್ಡ್ ಕೋಸ್ಟ್ : ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ಆರಂಭವಾದ 21 ನೇ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಪದಕ ಲಭಿಸಿದೆ. ಕನ್ನಡಿಗ ಪಿ. ಗುರುರಾಜ್ ಅವರು 56 ಕೆ.ಜಿ. ವಿಭಾಗದ ವೇಟ್ ಲಿಫ್ಟಿಂಗ್ ನಲ್ಲಿ ಬೆಳ್ಳಿ ಪದಕವನ್ನು ಜಯಿಸಿದ್ದಾರೆ.

    ಪುರುಷರ 56 ಕೆಜಿ ವಿಭಾಗದಲ್ಲಿ ಒಟ್ಟು 249 ಕೆಜಿ ಭಾರ ಎತ್ತಿದ ಅವರು, ಸ್ಕ್ಯಾಚ್ ವಿಭಾಗದಲ್ಲಿ 111 ಕೆಜಿ, ಕ್ಲೀನ್ ಎಂಡ್ ಜರ್ಕ್ ವಿಭಾಗದಲ್ಲಿ 138 ಕೆಜಿ ಎತ್ತುವುದರ ಮೂಲಕ ಪದಕ ಗೆದ್ದಿದ್ದಾರೆ. ಗುರುರಾಜ್ ಮೊದಲ ಪದಕವನ್ನು ಜಯಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

    ಭಾರತೀಯ ವಾಯುಪಡೆ ಉದ್ಯೋಗಿಯಾಗಿರುವ ಗುರುರಾಜ್, ಟ್ರಕ್ ಚಾಲಕರ ಪುತ್ರರಾಗಿದ್ದಾರೆ. ಇದೀಗ ಅವರ ಸಾಧನೆಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಚಂಢೀಗಡ್ ಭಾರತೀಯ ವಾಯುಸೇನೆಗೆ ಆಯ್ಕೆಯಾಗಿ ತರಬೇತಿ ಪಡೆಯುತ್ತಿರುವ ಗುರುರಾಜ್ ಪ್ರತಿದಿನ 4 ಘಂಟೆ ಅಭ್ಯಾಸಕ್ಕೆ ತೆರಳುತ್ತಿದ್ದರು. ಚಿನ್ನ ಗೆದ್ದ ಖುಷಿಯಲ್ಲಿರುವ ಗುರುರಾಜ್ ತನ್ನ ಸಾಧನೆಗೆ ತಂದೆ-ತಾಯಿ, ಕ್ರೀಡೆಯನ್ನು ಗುರುತಿಸಿ ಪ್ರೋತ್ಸಾಹಿಸಿದ ಶಿಕ್ಷಕರು ಹಾಗೂ ಕೋಚ್ ರಾಜೇಂದ್ರ ಪ್ರಸಾದ್ ಅವರ ಮಾರ್ಗದರ್ಶನವೇ ಕಾರಣ ಎಂದು ಹೇಳುತ್ತಿದ್ದಾರೆ.

    ಈ ಹಿಂದೆ 2017ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಚಾಂಪಿಯನ್ ಶಿಪ್‍ನಲ್ಲಿ ಕಂಚು ಪದಕ ಹಾಗೂ 2016 ರಲ್ಲಿ ದಕ್ಷಿಣ ಏಷ್ಯಾ ಗೇಮ್ಸ್ ನಲ್ಲಿ ಗುರುರಾಜ್ ಚಿನ್ನದ ಪದಕ ಗೆದ್ದಿದ್ದರು. 2016ನೇ ಸಾಲಿನ ಏಕಲವ್ಯ ಪ್ರಶಸ್ತಿಯನ್ನು ಉಡುಪಿಯಲ್ಲಿ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಘೋಷಣೆ ಮಾಡಿದ್ದರು.

    ಪಿವಿ ಸಿಂಧು ಚಾಲನೆ: ಬುಧವಾರ ಭಾರತದ ಪರ ಪಿವಿ ಸಿಂಧು ತ್ರಿವರ್ಣ ಧ್ವಜ ಹಿಡಿದು ಮುನ್ನಡೆಸುವ ಮೂಲಕ ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ 21ನೇ ಕಾಮನ್ ವೆಲ್ತ್ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ ನೀಡಿದ್ದರು. ಈ ಬಾರಿ ಕ್ರೀಡಾಕೂಟದಲ್ಲಿ 71 ರಾಷ್ಟ್ರಗಳ 4,500 ಅಥ್ಲೀಟ್ಸ್ ಭಾಗಿಯಾಗುತ್ತಿದ್ದು, 275 ಗೋಲ್ಡ್ ಮೆಡೆಲ್ ಪಡೆಯಲು ಸ್ಪರ್ಧೆ ನಡೆಸಿದ್ದಾರೆ. ಭಾರತದಿಂದ ಒಟ್ಟು 221 ಕ್ರೀಡಾಪಟುಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಇದು 12 ದಿನಗಳ ಕಾಲ ಕ್ರೀಡಾಕೂಟ ನಡೆಯಲಿದೆ.

    ಈ ಹಿಂದೆ ಗ್ಲಾಸ್ಗೊದಲ್ಲಿ ನಡೆದಿದ್ದ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ 15 ಚಿನ್ನ, 30 ಬೆಳ್ಳಿ ಹಾಗೂ 19 ಕಂಚಿನ ಪದಕದೊಂದಿಗೆ ಒಟ್ಟು 64 ಪದಕಗಳನ್ನು ಭಾರತ ತಂಡ ಗೆದ್ದುಕೊಂಡಿತ್ತು. ಈ ಬಾರಿ ಪದಕಗಳ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುವ ಭರವಸೆಯಲ್ಲಿದೆ.