Tag: compensation

  • Karnool Bus Fire | ಮೃತರ ಕುಟುಂಬಸ್ಥರಿಗೆ ಕೇಂದ್ರದಿಂದ ತಲಾ 2 ಲಕ್ಷ ಪರಿಹಾರ ಘೋಷಣೆ

    Karnool Bus Fire | ಮೃತರ ಕುಟುಂಬಸ್ಥರಿಗೆ ಕೇಂದ್ರದಿಂದ ತಲಾ 2 ಲಕ್ಷ ಪರಿಹಾರ ಘೋಷಣೆ

    – ಮೃತರಿಗೆ ತಲಾ 5 ಲಕ್ಷ, ಗಾಯಾಳುಗಳಿಗೆ 2 ಲಕ್ಷ ಪರಿಹಾರ ಘೋಷಿಸಿದ ಆಂಧ್ರ ಸಾರಿಗೆ ಸಚಿವ

    ನವದೆಹಲಿ/ಹೈದರಾಬಾದ್: ಆಂಧ್ರದ ಕರ್ನೂಲಿನಲ್ಲಿ (Karnool) ನಡೆದ ಭೀಕರ ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಕೇಂದ್ರ ಸರ್ಕಾರ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಧನ ಘೋಷಿಸಿದೆ.

    ಗುರುವಾರ (ಅ.23) ಮಧ್ಯರಾತ್ರಿ 3ರ ಸುಮಾರಿಗೆ ಹೈದರಾಬಾದ್‌ನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಬಸ್ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದು, 24 ಜನರು ಸಾವು ಬದುಕಿನ ಹೋರಾಟ ನಡೆಸುತ್ತಿದ್ದಾರೆ. ಈ ಕುರಿತು ಪಿಎಂ ಕಚೇರಿ (PMO) ತನ್ನ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪಿಎಂ ಪರಿಹಾರ ನಿಧಿಯಿಂದ (PMNRF) ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ನೀಡುವುದಾಗಿ ತಿಳಿಸಿದೆ.ಇದನ್ನೂ ಓದಿ: Kurnool Bus Fire | ಬೆಂಕಿ ವ್ಯಾಪಿಸಲು ಬೆಂಗಳೂರಿಗೆ ಸಾಗಿಸುತ್ತಿದ್ದ ಮೊಬೈಲ್ ಫೋನ್‌ಗಳು ಒಟ್ಟಾಗಿ ಸ್ಫೋಟಿಸಿದ್ದೂ ಕಾರಣ!

    ಈ ಕುರಿತು ಆಂಧ್ರಪ್ರದೇಶ ಸಾರಿಗೆ ಸಚಿವ ರಾಮ್ ಪ್ರಸಾದ್ ರೆಡ್ಡಿ (Ram Prasad Reddy) ಮಾತನಾಡಿ, ಇದು ಹಳೆಯ ಬಸ್ ಆಗಿದ್ದ ಕಾರಣ ಇದರಲ್ಲಿ ಸ್ವಯಂಚಾಲಿತ ಅಗ್ನಿಶಾಮಕ ಸುರಕ್ಷತಾ ವ್ಯವಸ್ಥೆ ಇರಲಿಲ್ಲ ಎಂದು ಹೇಳಿದ್ದಾರೆ. ಜೊತೆಗೆ ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

    ಹೈದ್ರಾಬಾದ್‌ನಿಂದ ಬೆಂಗಳೂರಿಗೆ ಬರ್ತಿದ್ದ ಖಾಸಗಿ ಎಸಿ ಬಸ್ ಆಂಧ್ರದ ಕರ್ನೂಲ್ ಬಳಿ ಬೈಕ್‌ವೊಂದಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತವಾದ ಬಳಿಕವೂ ಡ್ರೈವರ್‌ ಬಸ್ ನಿಲ್ಲಿಸದೇ ಸವಾರನ ಸಮೇತ ಬೈಕ್ ಅನ್ನು ಸುಮಾರು 300 ಮೀಟರ್ ಎಳೆದೊಯ್ದಿದ್ದಾನೆ. ಈ ವೇಳೆ, ಬೈಕ್‌ನಲ್ಲಿದ್ದ ಪೆಟ್ರೋಲ್ ಚೆಲ್ಲಿ ಬಸ್ ಅಡಿ ಬೆಂಕಿ ಹೊತ್ತಿಕೊಂಡಿದೆ. ನಂತರ ಇಡೀ ಬಸ್‌ಗೆ ಬೆಂಕಿ ಹಬ್ಬಿದೆ. ಎಸಿ ಬಸ್ ಆಗಿದ್ದ ಕಾರಣ ಕ್ಷಣಾರ್ಧದಲ್ಲಿ ಇಡೀ ಬಸ್‌ಗೆ ಬೆಂಕಿ ಆವರಿಸಿದೆ.

    ಮುಂಜಾನೆ 3 ಗಂಟೆ ಸುಮಾರಿನಲ್ಲಿ ದುರಂತ ಸಂಭವಿಸಿದ್ದು, ಪ್ರಯಾಣಿಕರು ನಿದ್ದೆಯಲ್ಲಿದ್ದರು. ಹೀಗಾಗಿ, 20 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದರೂ ಕೂಡ ಸುಟ್ಟಗಾಯಗಳಿಂದಾಗಿ ಒದ್ದಾಡುತ್ತಿದ್ದಾರೆ. ದುರಂತಕ್ಕೆ ತೆಲಂಗಾಣ-ಆಂಧ್ರಪ್ರದೇಶ-ಕರ್ನಾಟಕದ ಮುಖ್ಯಮಂತ್ರಿಗಳು, ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ, ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.ಇದನ್ನೂ ಓದಿ: ಡ್ರೈವರ್‌, ಕಂಡಕ್ಟರ್ ಬೆಂಕಿ ನಂದಿಸ್ತಿದ್ದರು, 5 ಸೆಕೆಂಡ್‌ಲ್ಲಿ ಜೀವ ಉಳಿಸಿಕೊಂಡ್ವಿ – ಪ್ರಾಣಾಪಾಯದಿಂದ ಪಾರಾದ ಆಕಾಶ್ ಮಾತು

  • ಸಾಮಾಜಿಕ, ಶೈಕ್ಷಣಿಕ ಸರ್ವೆ ವೇಳೆ 3 ಸಿಬ್ಬಂದಿ ಸಾವು – ತಲಾ 20 ಲಕ್ಷ ಪರಿಹಾರ ಘೋಷಣೆ

    ಸಾಮಾಜಿಕ, ಶೈಕ್ಷಣಿಕ ಸರ್ವೆ ವೇಳೆ 3 ಸಿಬ್ಬಂದಿ ಸಾವು – ತಲಾ 20 ಲಕ್ಷ ಪರಿಹಾರ ಘೋಷಣೆ

    ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಸರ್ವೆ (Caste census) ಮಾಡುವಾಗ ಸಾವನ್ನಪ್ಪಿದ ಮೂರು ಸಿಬ್ಬಂದಿ ಕುಟುಂಬಕ್ಕೆ ಸರ್ಕಾರ ತಲಾ 20 ಲಕ್ಷ ರೂ. ಪರಿಹಾರ (Compensation) ಘೋಷಿಸಿದೆ.

    ಸಿಎಂ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದಲ್ಲಿ ನಡೆದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಕುರುಬರನ್ನು ಎಸ್‌ಟಿಗೆ ಸೇರಿಸಿದರೆ ST ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು: ಸಿದ್ದರಾಮಯ್ಯ

    1.20 ಲಕ್ಷ ಶಿಕ್ಷಕರು, ಬೇರೆ 40 ಸಾವಿರ ಸಿಬ್ಬಂದಿ ಗಣತಿಯಲ್ಲಿ ಭಾಗಿಯಾಗಿದ್ದಾರೆ. ಶಿಕ್ಷಕರಿಗೆ ಇತರೆ ಸರ್ವೆಯವರಿಗೆ 20 ಸಾವಿರ ರೂ. ಗೌರವ ಧನ ನೀಡಲಾಗುತ್ತದೆ. ಪ್ರತಿ ಮನೆಗೆ 100 ರೂ. ಕೊಡುತ್ತೇವೆ. ಲಮ್ ಸಮ್ 5 ಸಾವಿರ ರೂ. ಕೊಟ್ಟಿದ್ದೇವೆ ಅಲ್ಲಿಗೆ 20 ಸಾವಿರ ರೂ. ಆಗುತ್ತೆ. 19ರ ಒಳಗೆ ಪೂರ್ಣ ಪ್ರಮಾಣದಲ್ಲಿ ಸರ್ವೆ ಮುಗಿಯಲಿದೆ ಎಂದು ಸಿಎಂ ಸಭೆಯಲ್ಲಿ ಮಾಹಿತಿ ನೀಡಿದ್ದಾರೆ.

    ಸಭೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್‌ ಆರ್.‌ ನಾಯಕ್, ಸಿಎಸ್ ಶಾಲಿನಿ ರಜನೀಶ್ ಸೇರಿ ಹಲವರು ಭಾಗಿಯಾಗಿದ್ದರು. ಇದನ್ನೂ ಓದಿ: ಜಾತಿಗಣತಿ ಸಮೀಕ್ಷೆಗಾಗಿ ದಸರಾ ರಜೆ ವಿಸ್ತರಣೆ – ಎಲ್ಲಾ ಸರ್ಕಾರಿ ಶಾಲೆಗಳಿಗೆ ಅ.18 ರವರೆಗೆ ರಜೆ

  • ಕರೂರು ಕಾಲ್ತುಳಿತ – ಮೃತರ ಕುಟುಂಬಸ್ಥರಿಗೆ 10 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸ್ಟಾಲಿನ್‌

    ಕರೂರು ಕಾಲ್ತುಳಿತ – ಮೃತರ ಕುಟುಂಬಸ್ಥರಿಗೆ 10 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸ್ಟಾಲಿನ್‌

    -ಗಾಯಾಳುಗಳಿಗೆ ತಲಾ 1 ಲಕ್ಷ ರೂ. ಪರಿಹಾರ
    -ಕಾಲ್ತುಳಿತ ತನಿಖೆಗೆ ಸರ್ಕಾರದಿಂದ ಆಯೋಗ ರಚನೆ

    ಚೆನ್ನೈ: ತಮಿಳುನಾಡಿನ (Tamilnadu) ಕರೂರಿನಲ್ಲಿ (Karur) ಸಂಭವಿಸಿದ ಕಾಲ್ತುಳಿತದಲ್ಲಿ (Stampede) ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡುವುದಾಗಿ ಸಿಎಂ ಎಂಕೆ ಸ್ಟಾಲಿನ್‌  (MK Stalin) ಘೋಷಿಸಿದ್ದಾರೆ.

    ಈ ಕುರಿತು ಎಕ್ಸ್‌ (X) ಖಾತೆಯಲ್ಲಿ ಹಂಚಿಕೊಂಡಿರುವ ಅವರು, ಕಾಲ್ತುಳಿತದಲ್ಲಿ ಮೃತಪಟ್ಟ ಪ್ರತಿಯೊಬ್ಬರ ಕುಟುಂಬಕ್ಕೂ 10 ಲಕ್ಷ ರೂ. ಪರಿಹಾರ ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರತಿಯೊಬ್ಬರಿಗೂ 1 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಜೊತೆಗೆ ಕಾಲ್ತುಳಿತದ ತನಿಖೆ ನಡೆಸಲು ನಿವೃತ್ತ ನ್ಯಾಯಾಧೀಶೆ ಅರುಣಾ ಜಗದೀಶನ್ ಅವರ ನೇತೃತ್ವದಲ್ಲಿ ಆಯೋಗ ರಚಿಸಲಾಗುವುದು ಎಂದಿದ್ದಾರೆ.ಇದನ್ನೂ ಓದಿ: ಕರೂರು ಕಾಲ್ತುಳಿತ ತೀವ್ರ ದು:ಖವನ್ನುಂಟು ಮಾಡಿದೆ – ಪ್ರಧಾನಿ ಮೋದಿ ಸಂತಾಪ

    ಶನಿವಾರ (ಸೆ.27) ರಾತ್ರಿ ಕರೂರಿಗೆ ಭೇಟಿ ನೀಡಿ, ಸಂತ್ರಸ್ತರ ಕುಟುಂಬಗಳನ್ನು ಹಾಗೂ ಗಾಯಾಳುಗಳನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸುತ್ತೇನೆ. ತಮಿಳಿಗ ವೆಟ್ರಿ ಕಳಗಂ ಪಕ್ಷದ ರ್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 8 ಮಕ್ಕಳು ಮತ್ತು 16 ಮಹಿಳೆಯರು ಸೇರಿದಂತೆ 36 ಜನರು ಸಾವನ್ನಪ್ಪಿದ್ದಾರೆ. ಸದ್ಯ ತಿರುಚಿ, ಸೇಲಂ ಮತ್ತು ದಿಂಡಿಗಲ್ ಜಿಲ್ಲಾಧಿಕಾರಿಗಳು ಕರೂರಿಗೆ ಹೋಗಿ ಪರಿಹಾರ ಕಾರ್ಯಗಳ ಬಗ್ಗೆ ಕ್ರಮವಹಿಸಿ ಎಂದು ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.

    ಕಾಲ್ತುಳಿತ ಸಂಭವಿಸಿದ್ದು ಹೇಗೆ?
    ನಟ ವಿಜಯ ಶನಿವಾರ (ಸೆ.27) ಮಧ್ಯಾಹ್ನದ ಹೊತ್ತಿಗೆ ಕರೂರಿಗೆ ತಲುಪಬೇಕಿತ್ತು. ಆದರೆ ಏಳು ಗಂಟೆಗಳ ಕಾಲ ತಡವಾಗಿ ಬಂದ ಕಾರಣ ಜನಸಂದಣಿ ಹೆಚ್ಚಾಗಿ ಕಾಲ್ತುಳಿತ ಸಂಭವಿಸಿತು ಎನ್ನಲಾಗಿದೆ. ನಟ ಸ್ಥಳಕ್ಕೆ ಬರುತ್ತಿದ್ದಂತೆ ಜನರ ನೂಕಾಟ, ತಳ್ಳಾಟ ಹೆಚ್ಚಾಗಿ ಉಸಿರುಗಟ್ಟಲು ಶುರುವಾಗಿದ್ದು, ಇದರಿಂದ ಜನರು ಸ್ಥಳದಲ್ಲೇ ಮೂರ್ಛೆ ಹೋಗಲಾರಂಭಿಸಿದರು. ಇದನ್ನು ಗಮನಸಿದ ನಟ ಕೂಡಲೇ ತಮ್ಮ ಭಾಷಣ ನಿಲ್ಲಿಸಿ, ನೀರಿನ ಬಾಟಲಿಗಳನ್ನು ಎಸೆದಿದ್ದಾರೆ ಎಂದು ತಿಳಿದು ಬಂದಿದೆ.

    ಈ ವೇಳೆ ಬಾಟಲಿ ಎಸೆಯುತ್ತಿದ್ದ ನಟ ವಿಜಯ್ ಹತ್ತಿರಕ್ಕೆ ಜನರು ಹೋಗಲು ಪ್ರಾರಂಭಿಸಿದ್ದು, ಈ ವೇಳೆ ಒಂದು ಭಾಗದ ಜನರ ನಡುವೆ ಕಾಲ್ತುಳಿತ ಸಂಭವಿಸಿದೆ. ಪರಿಣಾಮ 40 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ಮೂವರು ಮಕ್ಕಳು ಮತ್ತು ವಯಸ್ಕರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.ಇದನ್ನೂ ಓದಿ: ʼ9 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ.. ಪೋಷಕರಿಗೆ ಹುಡುಕಿಕೊಡಿ ಪ್ಲೀಸ್‌ʼ: ರ‍್ಯಾಲಿ ವೇಳೆ ಮೈಕ್‌ನಲ್ಲಿ ಹೇಳಿದ್ದ ವಿಜಯ್‌

  • ಚಿನ್ನಸ್ವಾಮಿ ಕಾಲ್ತುಳಿತ – ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಿಸಿದ ಆರ್‌ಸಿಬಿ

    ಚಿನ್ನಸ್ವಾಮಿ ಕಾಲ್ತುಳಿತ – ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಿಸಿದ ಆರ್‌ಸಿಬಿ

    ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (M Chinnaswamy Stadium) ಸಂಭವಿಸಿದ ಕಾಲ್ತುಳಿತದಲ್ಲಿ (Stampede )ಮೃತಪಟ್ಟವರ ಕುಟುಂಬಗಳಿಗೆ ಹಾಲಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ (Royal Challengers Bengaluru) ತಲಾ 25 ಲಕ್ಷ ರೂ. ಪರಿಹಾರ (Compensation) ಘೋಷಿಸಿದೆ. ಫ್ರಾಂಚೈಸಿ ತನ್ನ ಹೊಸ ಉಪಕ್ರಮ `ಆರ್‌ಸಿಬಿ ಕೇರ್ಸ್’ ಅಡಿಯಲ್ಲಿ ಆರ್ಥಿಕ ಸಹಾಯವನ್ನು ವಿಸ್ತರಿಸಲಾಗುತ್ತಿದೆ ಎಂದು ತಿಳಿಸಿದೆ.

    ಈ ಸಂಬಂಧ ಆರ್‌ಸಿಬಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ. ಜೂ.4 2025ರ ಈ ದಿನ ನಮ್ಮ ಹೃದಯದಲ್ಲಿ ಶಾಶ್ವತವಾಗಿ ಉಳಿಯಲಿದೆ. ನಾವು ಕಳೆದುಕೊಂಡಿದ್ದು 11 ಅಭಿಮಾನಿಗಳನ್ನಷ್ಟೇ ಅಲ್ಲ, ಅವರು ನಮ್ಮ ಕುಟುಂಬದ ಸದಸ್ಯರಾಗಿದ್ದರು. ನಮ್ಮ ಹೃದಯದ ಭಾಗವಾಗಿದ್ದರು. ಅವರ ಉತ್ಸಾಹವೇ ನಮ್ಮ ಶಕ್ತಿ. ಅದು ತಂಡಕ್ಕೆ ಜೀವ ತುಂಬುವ ಬೆಳಕಾಗಿತ್ತು. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ – ಅಭಿಮಾನಿಗಳಿಗೆ ಕೇರ್‌ ಸೆಂಟರ್‌ ತೆರೆಯಲಿದೆ ಆರ್‌ಸಿಬಿ

    ನಮ್ಮ ನೆನಪುಗಳಲ್ಲಿ ಅವರು ಸದಾ ಜೀವಂತವಾಗಿರುತ್ತಾರೆ. ಜಾಗವನ್ನು ಯಾವ ಸಹಾಯವೂ ತುಂಬಲಾರದು. ಗೌರವದ ಸಂಕೇತವಾಗಿ, ಆರ್‌ಸಿಬಿ ಪ್ರತಿ ಕುಟುಂಬಕ್ಕೆ ತಲಾ 25 ಲಕ್ಷ ರೂ. ನೆರವು ನೀಡುತ್ತಿದೆ. ಇದು ಕೇವಲ ಆರ್ಥಿಕ ಸಹಾಯವಲ್ಲ, ಕರುಣೆ, ಒಗ್ಗಟ್ಟು ಮತ್ತು ನಿರಂತರ ಕಾಳಜಿಯ ಭರವಸೆಯಾಗಿದೆ.

    ಇದು ಆರ್‌ಸಿಬಿ ಕೇರ್ಸ್‍ನ ಆರಂಭವೂ ಹೌದು. ಅವರ ನೆನಪನ್ನೂ ಗೌರವಿಸುವ ಮೂಲಕ ಶುರುವಾದ ಈ ಪ್ರಯತ್ನ ಅಭಿಮಾನಿಗಳ ಭಾವನೆ, ನಂಬಿಕೆ ಮತ್ತು ಸುರಕ್ಷತೆ ಪ್ರತಿಬಿಂಬಿಸುವ ಬದ್ಧತೆಯಾಗಿದೆ ಎಂದು ಪೋಸ್ಟ್‍ನಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದೆ.

    ಏನಿದು ದುರ್ಘಟನೆ?
    ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ 18 ವರ್ಷಗಳ ಬಳಿಕ ಐಪಿಎಲ್ (IPL) ಚಾಂಪಿಯನ್ ಪಟ್ಟವನ್ನ ಮುಡಿಗೇರಿಸಿಕೊಂಡಿತ್ತು. ಆರ್‌ಸಿಬಿ ಫ್ಯಾನ್ಸ್‌ ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Stadium) ಬಳಿ ಜೂ.4 ಸಂಭ್ರಮಾಚರಣೆಗೆ ಬಂದಿದ್ದಾಗ ಕಾಲ್ತುಳಿತ ಸಂಭವಿಸಿತ್ತು. ಈ ದುರಂತದಲ್ಲಿ 11 ಮಂದಿ ಸಾವಿಗೀಡಾಗಿದ್ದರು. ಉಚಿತ ಪ್ರವೇಶ ಘೋಷಣೆಯಿಂದ ಮಿತಿಮೀರಿದ ಜನ ಬಂದಿದ್ದರಿಂದ ಈ ಅವಘಡ ನಡೆದಿತ್ತು. ಇದನ್ನೂ ಓದಿ: Stampede Case | ಸಿಎಂ ಸೂಚನೆ ಬೆನ್ನಲ್ಲೇ ನಾಲ್ವರು ಅರೆಸ್ಟ್‌, ಉಳಿದವರು ಎಸ್ಕೇಪ್‌

  • ಎಲ್ರೂ ಬಂದು ಹೇಗಾಯ್ತು ಹುಷಾರಾಗಿ ಅಂತಾರೆ, ಪರಿಹಾರ ಮಾತ್ರ ಇಲ್ಲ: ಆರ್‌ಸಿಬಿ ಫ್ಯಾನ್ಸ್ ನೋವಿನ ಮಾತು

    ಎಲ್ರೂ ಬಂದು ಹೇಗಾಯ್ತು ಹುಷಾರಾಗಿ ಅಂತಾರೆ, ಪರಿಹಾರ ಮಾತ್ರ ಇಲ್ಲ: ಆರ್‌ಸಿಬಿ ಫ್ಯಾನ್ಸ್ ನೋವಿನ ಮಾತು

    – ನಮಗೂ ಪರಿಹಾರ ನೀಡಿ ಎಂದು ಮನವಿ

    ಬೆಂಗಳೂರು: ಆರ್‌ಸಿಬಿ (RCB) ಸಂಭ್ರಮಾಚರಣೆಯಲ್ಲಿನ ಭೀಕರ ಕಾಲ್ತುಳಿತ (Chinnaswamy Stampede) ಪ್ರಕರಣದಲ್ಲಿ ದಾರುಣವಾಗಿ ಸಾವನ್ನಪ್ಪಿದವರ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ಸೇರಿ ಒಟ್ಟು 40 ಲಕ್ಷ ಪರಿಹಾರ ಘೋಷಿಸಲಾಗಿದೆ. ಆದರೆ ಗಂಭೀರ ಗಾಯಗೊಂಡವರಿಗೆ ಯಾವುದೇ ಪರಿಹಾರ (Compensation) ಘೋಷಣೆ ಮಾಡಿಲ್ಲ. ಇದಕ್ಕೆ ಈಗ ವಿರೋಧ ವ್ಯಕ್ತವಾಗುತ್ತಿದೆ.

    ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಪ್ರಕರಣದಲ್ಲಿ ಸತ್ತವರಿಗಷ್ಟೇ ಪರಿಹಾರ ಘೋಷಣೆ ಮಾಡಿರುವ ಸರ್ಕಾರ, ಆರ್‌ಸಿಬಿ ಮ್ಯಾನೇಜ್ಮೆಂಟ್ ವಿರುದ್ಧ ಗಾಯಗೊಂಡವರು ಬೇಸರ ವ್ಯಕ್ತಪಡಿಸಿದ್ದಾರೆ. ಸಂಪೂರ್ಣ ಚಿಕಿತ್ಸಾ ವೆಚ್ಚ ಅಂದ್ರು, ಈಗ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಬೇಕು. ಡಿಸ್ಚಾರ್ಜ್ ಆದ್ರೂ ಕನಿಷ್ಟ ಮೂರು ತಿಂಗಳು ಚಿಕಿತ್ಸೆ ಪಡೀಬೇಕು. ಜೊತೆಗೆ ಏನೂ ಕೆಲಸ ಮಾಡಲಾರದ ಪರಿಸ್ಥಿತಿ ಇದೆ. ನಮಗೂ ಪರಿಹಾರ ನೀಡಿ ಎಂದು ಗಾಯಾಳುಗಳು ಮನವಿ ಮಾಡುತ್ತಿದ್ದಾರೆ.

    ಇನ್ನು ಗಾಯಾಳುಗಳ ಪರಿಸ್ಥಿತಿ ಕೇಳೋರಿಲ್ಲ. ಬರೀ ಘಟನೆ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳು ಮಾಹಿತಿ ಪಡೆದುಕೊಂಡು ಹೋಗಿದ್ದಾರೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ್ರೆ ಮುಂದಿನ ಪರಿಸ್ಥಿತಿ ಬಗ್ಗೆ ನೆನೆಸಿಕೊಂಡರೆ ಆತಂಕವಾಗುತ್ತದೆ. ಕೇವಲ ಸರ್ಕಾರ ಸತ್ತವರಿಗಷ್ಟೇ ಪರಿಹಾರದ ಹಣ ಘೋಷಣೆ ಮಾಡಿದ್ದಾರೆ. ನಮ್ಮ ಜೀವಕ್ಕೆ ಬೆಲೆ ಇಲ್ವಾ? ಕೇವಲ ಚಿಕಿತ್ಸೆ ಕೊಟ್ಟು ಮನೆಗೆ ಕಳುಹಿಸಿದರೆ, ನಂತರದ ಚಿಕಿತ್ಸೆಗಳಿಗೆ ತುಂಬಾ ಕಷ್ಟ ಆಗುತ್ತದೆ. ದಯಮಾಡಿ ಸರ್ಕಾರ, ಆರ್‌ಸಿಬಿ ಮ್ಯಾನೇಜ್ಮೆಂಟ್ ಹಾಗೂ ಕೆಎಸ್‌ಸಿಎನವರು ನಮಗೂ ಸಹ ಪರಿಹಾರ ಕೊಡಲಿ ಎಂದು ಅಳಲು ತೋಡಿಕೊಂಡಿದ್ದಾರೆ.

    ಮುಂದಿನ ಮೂರು ತಿಂಗಳು ಬೆಡ್ ರೆಸ್ಟ್ ಹೇಳಿದ್ದಾರೆ. ಆದರೆ ನಾವು ಪಾರ್ಟ್‌ಟೈಮ್ ಕೆಲಸ ಮಾಡುತ್ತಾ ಕಾಲೇಜಿಗೆ ಹೋಗುತ್ತಿದ್ದೆವು. ಆದ್ರೆ ಮೂರು ತಿಂಗಳು ಕೆಲಸ ಇಲ್ಲದೆ ಜೀವನ ಸಾಗಿಸೋದು ತುಂಬಾ ಕಷ್ಟ. ಮೆಡಿಸಿನ್‌ಗೆ ಲಕ್ಷಾಂತರ ರೂಪಾಯಿ ಹಣ ಖರ್ಚು ಆಗುತ್ತೆ ಎಂದು ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳು ನೋವಿನ ಮಾತನ್ನು ಆಡಿದ್ದಾರೆ.‌

    ಇನ್ನು ಕ್ಯಾಮೆರಾ ಮುಂದೆ ಮಾತನಾಡಿದ್ರೆ ನಮ್ಮ ಜೀವನ ಎಲ್ಲಿ ಹಾಳಾಗುತ್ತೆ, ಸಂಬಂಧಿಕರು ಏನು ತಿಳಿದುಕೊಳ್ಳುತ್ತಾರೆ, ನಮಗೆ ಮುಂದೆ ಕೆಲಸ ಸಿಗುತ್ತಾ? ನಮ್ಮನ್ನ ಯಾರು ಮದುವೆ ಆಗ್ತಾರೆ? ಹೀಗೆ ನಾನಾ ಪ್ರಶ್ನೆಗಳು ಗಾಯಾಳುಗಳನ್ನ ಕಾಡುತ್ತಿದೆ. ಹೀಗಾಗಿ ಕ್ಯಾಮೆರಾ ಮುಂದೆ ಮಾತನಾಡಲು ಗಾಯಾಳುಗಳು ಹಾಗೂ ಅವರ ಕುಟುಂಬದವರು ಹಿಂದೇಟು ಹಾಕುತ್ತಿದ್ದಾರೆ.

  • ಮುರುಡೇಶ್ವರದಲ್ಲಿ ಮೃತಪಟ್ಟ ವಿದ್ಯಾರ್ಥಿನಿಯರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

    ಮುರುಡೇಶ್ವರದಲ್ಲಿ ಮೃತಪಟ್ಟ ವಿದ್ಯಾರ್ಥಿನಿಯರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

    ಕಾರವಾರ: ಮುರುಡೇಶ್ವರದಲ್ಲಿ (Murudeshwar) ಸಮುದ್ರ ಪಾಲಾಗಿದ್ದ ನಾಲ್ವರು ವಿದ್ಯಾರ್ಥಿನಿಯರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

    ಈ ಕುರಿತು ಸಿಎಂ ತಮ್ಮ ಎಕ್ಸ್ (X) ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಕೋಲಾರ (Kolar) ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯರಾದ ದೀಕ್ಷಾ, ಲಾವಣ್ಯ, ವಂದನಾ ಹಾಗೂ ಶ್ರಾವಂತಿ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿ, ಸಂತಾಪ ಸೂಚಿಸಿದ್ದಾರೆ.ಇದನ್ನೂ ಓದಿ: ಮುರುಡೇಶ್ವರದಲ್ಲಿ ಮೃತಪಟ್ಟ ವಿದ್ಯಾರ್ಥಿನಿಯರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

    ಟ್ವೀಟ್‌ನಲ್ಲೇನಿದೆ?
    ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನೀರುಪಾಲಾದ ಸುದ್ದಿ ತಿಳಿದು ಆಘಾತವಾಯಿತು. ಮೃತ ಮಕ್ಕಳ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮಕ್ಕಳ ದುಃಖತಪ್ತ ಪೋಷಕರಿಗೆ ನನ್ನ ಸಂತಾಪಗಳು.

    ಈ ದುರ್ಘಟನೆಯಲ್ಲಿ ಮಡಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮೃತದೇಹಗಳನ್ನು ಹುಟ್ಟೂರಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದೇನೆ.

    ಪ್ರವಾಸದ ಸಂದರ್ಭದಲ್ಲಿ ಶಿಕ್ಷಕರು ಮಕ್ಕಳ ಬಗ್ಗೆ ಹೆಚ್ಚು ಜಾಗೃತೆ ವಹಿಸಬೇಕು. ಅಪಾಯಕಾರಿ ಸ್ಥಳಗಳಿಗೆ ಭೇಟಿನೀಡುವಾಗ ಮಕ್ಕಳ ಮೇಲೆ ನಿಗಾ ಇಡಬೇಕು. ಮಕ್ಕಳನ್ನು ಕಳೆದುಕೊಂಡ ಹೆತ್ತವರ ನೋವು ಸಂಕಟವನ್ನು ನಾನು ಅರ್ಥೈಸಿಕೊಳ್ಳಬಲ್ಲೆ, ಇಂತಹ ಅವಘಡಗಳು ಮತ್ತೆಂದೂ ಸಂಭವಿಸದಿರಲಿ ಎಂದು ಪ್ರಾರ್ಥಿಸುತ್ತೇನೆ.

    ಘಟನೆ ಏನು?
    ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿ ಒಟ್ಟು 57 ಮಂದಿ ಸೇರಿ ಮುರುಡೇಶ್ವರ ಪ್ರವಾಸಕ್ಕೆ ಬಂದಿದ್ದರು. ಮಂಗಳವಾರ (ಡಿ.10) ಸಮುದ್ರದಲ್ಲಿ ಆಟ ಆಡುವಾಗ ಅಲೆಯ ಹೊಡೆತದಿಂದ ವಿದ್ಯಾರ್ಥಿನಿಯರು ಕೊಚ್ಚಿ ಹೋಗಿದ್ದರು. ಈ ವೇಳೆ ಒಟ್ಟು ಏಳು ವಿದ್ಯಾರ್ಥಿನಿಯರು ನೀರು ಪಾಲಾಗಿದ್ದರು. ಆ ಪೈಕಿ ಮೂವರನ್ನು ಲೈಫ್ ಗಾರ್ಡ್ಸ್ ಸಿಬ್ಬಂದಿ ರಕ್ಷಣೆ ಮಾಡಿದ್ರೆ, ಶ್ರಾವಂತಿ ಎಂಬಾಕೆ ಸಾವನ್ನಪ್ಪಿದ್ದಳು. ಇಂದು (ಡಿ.11) ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆಯಾಗಿದೆ.ಇದನ್ನೂ ಓದಿ: ಮುರುಡೇಶ್ವರದಲ್ಲಿ ಸಮುದ್ರ ಪಾಲಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆ

  • ಸಂಪೂರ್ಣ ಮನೆ ಹಾನಿಗೆ 1.2 ಲಕ್ಷ, ಮನೆ ಒದಗಿಸಲು ತೀರ್ಮಾನ – ಮಳೆಹಾನಿ ಪರಿಹಾರ ಘೋಷಿಸಿದ ಸಿಎಂ

    ಸಂಪೂರ್ಣ ಮನೆ ಹಾನಿಗೆ 1.2 ಲಕ್ಷ, ಮನೆ ಒದಗಿಸಲು ತೀರ್ಮಾನ – ಮಳೆಹಾನಿ ಪರಿಹಾರ ಘೋಷಿಸಿದ ಸಿಎಂ

    ಬೆಳಗಾವಿ: ಮಳೆಯಿಂದ (Rain) ಸಂಪೂರ್ಣ ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ 1.2 ಲಕ್ಷ ರೂ. ಪರಿಹಾರದ (Compensation) ಜೊತೆಗೆ ಮನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಘೋಷಿಸಿದ್ದಾರೆ.

    ಬೆಳಗಾವಿಯಲ್ಲಿ (Belagavi) ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಬಿಜೆಪಿ ಪರಿಹಾರ ವಿತರಣೆಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಕ್ಕೆ ಅವರು ಪ್ರತಿಕ್ರಿಯಿಸಿದ್ದಾರೆ.

    ಈ ಹಿಂದೆ ಬಿ.ಎಸ್.ಯಡಿಯೂರಪ್ಪನವರು ಸಂಪೂರ್ಣ ಮನೆ ಹಾನಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಈ ನೆರವಿನ ಹಣ ದುರುಪಯೋಗವಾಯಿತು. ಹಲವರಿಗೆ ಮೊದಲ ಕಂತು ಮಾತ್ರ ಬಿಡುಗಡೆಯಾಗಿ, ಎರಡು ಹಾಗೂ ಮೂರನೇ ಕಂತಿನ ಪರಿಹಾರ ಇನ್ನೂ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ 1.2 ಲಕ್ಷ ರೂ. ಪರಿಹಾರ ಹಾಗೂ ಮನೆ ನೀಡುವ ನಿರ್ಧಾರ ಮಾಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.

    ಜನರ ಸಹಕಾರವಿದ್ದರೆ ಪದೇ ಪದೇ ಮುಳುಗಡೆಯಾಗುವ ಹಳ್ಳಿಗಳ ಸ್ಥಳಾಂತರ ಮಾಡುವ ಮೂಲಕ ಶಾಶ್ವತ ಪರಿಹಾರ ಒದಗಿಸಲು ಚಿಂತನೆ ಮಾಡಲಾಗುವುದು. ರಾಜ್ಯದ ಹಲವೆಡೆ ಮಳೆಯಿಂದ ಹಾನಿಯಾಗಿದೆ. ಎಲ್ಲ ಕಡೆ ಪರಿಹಾರ ಕೆಲಸಗಳನ್ನು ಪ್ರಾರಂಭಿಸಲಾಗಿದೆ. ಮೈಸೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಭೇಟಿನೀಡಲಾಗಿದ್ದು, ಮೃತಪಟ್ಟವರಿಗೆ ಹಾಗೂ ಜಾನುವಾರುಗಳು ಸತ್ತಿರುವುದಕ್ಕೆ ಕೂಡಲೇ ಪರಿಹಾರ ವಿತರಿಸಲಾಗುತ್ತಿದೆ. ಮನೆಗಳು ಬಿದ್ದಿರುವುದಕ್ಕೆ ಪರಿಹಾರ, ವಿದ್ಯುತ್ ಕಂಬ, ಟ್ರಾನ್ಸ್‍ಫಾರ್ಮರ್‌ಗಳ ದುರಸ್ತಿ ಮೊದಲಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

    ಮಳೆಗೆ ಕಟ್ಟೆಚ್ಚರ ವಹಿಸಲು ಸೂಚನೆ:
    ಬೆಳಗಾವಿಯಲ್ಲಿ ಕಳೆದ 42 ದಿನದಿಂದ ನಿರಂತರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡುವಂತೆ ಸೂಚಿಸಲಾಗಿದೆ. ಮುಂದಿನ ವಾರ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ಇದಕ್ಕಾಗಿ ಕಂದಾಯ, ವಿಪತ್ತು ನಿರ್ವಹಣೆ, ಅರಣ್ಯ ಇಲಾಖೆ, ಇಂಧನ, ನೀರಾವರಿ ಸೇರಿದಂತೆ ಎಲ್ಲಾ ಇಲಾಖೆಗಳು ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ ಎಂದು ತಿಳಿಸಿದ್ದಾರೆ.

    ಗೃಹಲಕ್ಷ್ಮಿ ಮೂರು ತಿಂಗಳಿನಿಂದ ಬಾಕಿ ಇದೆ ಎಂಬ ಪತ್ರಕರ್ತರ ಪ್ರಶ್ನೆಗೆ ಜುಲೈ ತಿಂಗಳಿನದ್ದು ಮಾತ್ರ ಬಾಕಿ ಇದೆ. ಅದನ್ನೂ ಶೀಘ್ರವೇ ವಿತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

  • ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ಪರಿಹಾರದ ಚೆಕ್ ವಿತರಣೆ

    ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ಪರಿಹಾರದ ಚೆಕ್ ವಿತರಣೆ

    ಬೆಂಗಳೂರು: ಜಮ್ಮು-ಕಾಶ್ಮೀರದಲ್ಲಿ (Jammu- Kashmir) ನಡೆದ ಉಗ್ರರ ದಾಳಿಯ ವೇಳೆ ಮೃತಪಟ್ಟ ಕರ್ನಾಟಕದ ಕ್ಯಾಪ್ಟನ್ ಪ್ರಾಂಜಲ್ (Captain Pranjal) ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 50 ಲಕ್ಷ ರೂ. ಪರಿಹಾರದ ಚೆಕ್ ಅನ್ನು ಹಸ್ತಾಂತರಿಸಿದೆ.

    ಈ ಸಂಬಂಧ ಸಿಎಂ ಆಫ್ ಕರ್ನಾಟಕ ಎಕ್ಸ್ ಮಾಡಿದ್ದು, ನಮ್ಮ ಸರ್ಕಾರ ಘೋಷಿಸಿದಂತೆ ಹುತಾತ್ಮ ಯೋಧ “ಕ್ಯಾಪ್ಟನ್ ಎಂ.ವಿ ಪ್ರಾಂಜಲ್” ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ಹಸ್ತಾಂತರಿಸಲಾಗಿದೆ. ಪ್ರಾಣವನ್ನು ಪಣಕ್ಕೆ ಇಟ್ಟು ದೇಶ ಕಾಯುವ ಯೋಧರ ಬಗ್ಗೆ ನಮಗೆ ಅಪಾರವಾದ ಗೌರವ-ಅಭಿಮಾನ ಇದೆ, ಅಷ್ಟೇ ಗೌರವ ಮತ್ತು ಕಾಳಜಿ ಯೋಧರ ಕುಟುಂಬ ವರ್ಗದ ಬಗ್ಗೆಯೂ ಇದೆ ಎಂದು ತಿಳಿಸಲಾಗಿದೆ.

    ಯೋಧರ ಸಾವು-ನೋವು ಮುಂದಿಟ್ಟುಕೊಂಡು ರಾಜಕಾರಣ ಮಾಡುವವರು ನಾವಲ್ಲ. ಕೆಲವರು ರಾಜಕೀಯ ದುರುದ್ದೇಶದಿಂದ ಸುಳ್ಳು ಸುದ್ದಿ ಸೃಷ್ಟಿಸಿ ಅಪಪ್ರಚಾರ ಮಾಡುವದರಲ್ಲಿಯೇ ವಿಕೃತ ಆನಂದ ಪಡುತ್ತಿದ್ದಾರೆ. ಅಂತಹವರಿಗೆ ದೇವರು ಸದ್ಬುದ್ಧಿ ನೀಡಲಿ ಎಂದಷ್ಟೇ ಹಾರೈಸಬಲ್ಲೆ ಎಂದು ಸಿಎಂ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತಾಂಬೆಯ ವೀರ ಪುತ್ರ ಕ್ಯಾ. ಪ್ರಾಂಜಲ್‍ಗೆ ಕಣ್ಣೀರ ವಿದಾಯ

    ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರ ಬೆಂಗಳೂರಿಗೆ ಬಂದಾಗ ಅವರಿಗೆ ನಮನ ಸಲ್ಲಿಸಿದ್ದ ಸಿಎಂ, ರಾಜ್ಯ ಸರ್ಕಾರದಿಂದ 50 ಲಕ್ಷ ಪರಿಹಾರ ಧನ ನೀಡುವುದಾಗಿ ಘೋಷಣೆ ಮಾಡಿದ್ದರು. ಅಂತೆಯೇ ಇದೀಗ ರಾಜ್ಯ ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿದೆ.

  • ಪ್ರಾಂಜಲ್ ಕುಟುಂಬಕ್ಕೆ ಕೂಡಲೇ ಪರಿಹಾರ ಬಿಡುಗಡೆಗೆ ಸಂಸದ ತೇಜಸ್ವಿ ಸೂರ್ಯ ಆಗ್ರಹ

    ಪ್ರಾಂಜಲ್ ಕುಟುಂಬಕ್ಕೆ ಕೂಡಲೇ ಪರಿಹಾರ ಬಿಡುಗಡೆಗೆ ಸಂಸದ ತೇಜಸ್ವಿ ಸೂರ್ಯ ಆಗ್ರಹ

    ನವದೆಹಲಿ: ಕಾಶ್ಮೀರದ (Kashmir) ರಜೌರಿಯಲ್ಲಿ ಭಯೋತ್ಪಾದಕರ (Terrorists) ವಿರುದ್ಧ ಕಾರ್ಯಚರಣೆಯಲ್ಲಿ ಹುತಾತ್ಮರಾದ ಬೆಂಗಳೂರು (Bengaluru) ಮೂಲದ ಕ್ಯಾಪ್ಟನ್ ಪ್ರಾಂಜಲ್ (Captain Pranjal) ಅವರ ಕುಟುಂಬಕ್ಕೆ ಇನ್ನೂ ಪರಿಹಾರ (Compensation) ಹಣ ನೀಡಿಲ್ಲ. ಸಿಎಂ ಕೂಡಲೇ ಈ ಬಗ್ಗೆ ಗಮನ ಹರಿಸಿ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಬೇಕು ಎಂದು ಸಂಸದ ತೇಜಸ್ವಿ ಸೂರ್ಯ (Tejasvi Surya) ಆಗ್ರಹಿಸಿದ್ದಾರೆ.

    ಈ ಬಗ್ಗೆ ನವದೆಹಲಿಯಲ್ಲಿ (New Delhi) ಮಾತನಾಡಿದ ಅವರು, ಕಳೆದ 2 ವಾರದ ಹಿಂದೆ ಕನ್ನಡಿಗ ಕ್ಯಾಪ್ಟನ್ ಪ್ರಾಂಜಲ್ ಹುತಾತ್ಮರಾಗಿದ್ದರು. ಅವರ ಪಾರ್ಥಿವ ಶರೀರ ಬೆಂಗಳೂರಿಗೆ ತರುವಾಗ ರಾಜ್ಯಪಾಲರು, ಸಿಎಂ ಸೇರಿ ಎಲ್ಲರೂ ಹೆಚ್‌ಎಎಲ್ (HAL) ವಿಮಾನ ನಿಲ್ದಾಣಕ್ಕೆ ತೆರಳಿದ್ದೆವು. ಅಂದು ಮುಖ್ಯಮಂತ್ರಿಗಳಿಗೆ ನಾನು ಮತ್ತು ವಿಜಯೇಂದ್ರ ಅವರು 50 ಲಕ್ಷ ರೂ. ಪರಿಹಾರ ನೀಡಲು ಮನವಿ ಮಾಡಿದ್ದೆವು. ಅದರಂತೆ ಸಿಎಂ ಪರಿಹಾರ ಘೋಷಣೆ ಮಾಡಿದ್ದರು ಎಂದರು. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲುವು – ಜೋತಿರಾದಿತ್ಯ ಸಿಂಧಿಯಾ ಬಣಕ್ಕೆ ಖುಷಿ ಕೊಡದ ಫಲಿತಾಂಶ

    ಯಾರೇ ಸೈನಿಕರು ಹುತಾತ್ಮರಾದರೂ 50 ಲಕ್ಷ ರೂ. ಪರಿಹಾರ ಕೊಡಬಹುದು ಎಂದು ನಿಯಮ ಇದೆ. ಮುಖ್ಯಮಂತ್ರಿಗಳು ಸಹ ಅವತ್ತು ಪರಿಹಾರ ಘೋಷಣೆ ಮಾಡಿದ್ದರು. ಎರಡು ದಿನದ ಹಿಂದೆ ನಾನು ಪ್ರಾಂಜಲ್ ತಂದೆಗೆ ಫೋನ್ ಮಾಡಿ ಪರಿಹಾರದ ಮಾಹಿತಿ ಪಡೆದೆ. ಅವರ ತಂದೆ ಇವತ್ತಿನವರೆಗೂ ಸಹ ನನಗೆ ಯಾವುದೇ ಫೋನ್ ಬಂದಿಲ್ಲ ಎಂದು ಹೇಳಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಹಾವು ಏಣಿಯಾಟ – ಅತಿದೊಡ್ಡ, ಅತಿಸಣ್ಣ ನಿರ್ಣಾಯಕ ಗೆಲುವುಗಳಿವು

    ಪರಿಹಾರ ಹಣ ಬಿಡುಗಡೆಗೆ ನಾನು ಸಿಎಂ, ಡಿಸಿಎಂಗೆ ಪತ್ರ ಬರೆದು ಮನವಿ ಮಾಡಿದ್ದೇನೆ. ಸಿಎಂಗೆ ಮಾಧ್ಯಮದವರು ಈ ಬಗ್ಗೆ ಪ್ರಶ್ನೆ ಕೇಳಿದರೆ ಪ್ರಾಂಜಲ್ ಅಂದರೆ ಯಾರು? ನಾವೆಲ್ಲಿ ಪರಿಹಾರ ಕೊಡುತ್ತೇವೆ ಎಂದು ಹೇಳಿದ್ದೆವು ಎಂದು ಬೇಜವಾಬ್ದಾರಿಯುತವಾಗಿ ಮಾತನಾಡಿದ್ದಾರೆ. ಓರ್ವ ಯೋಧನ ಬಗ್ಗೆ ಮುಖ್ಯಮಂತ್ರಿಗಳು ಹೀಗೆ ಮಾತನಾಡಿದ್ದು ನೋಡಿ ಬಹಳ ಬೇಸರ ಆಯಿತು ಎಂದರು. ಇದನ್ನೂ ಓದಿ: ಬಿಜೆಪಿಗೆ ಭರ್ಜರಿ ಜಯ, ಹೂಡಿಕೆದಾರರ ಸಂಪತ್ತು ಒಂದೇ ದಿನ 6 ಲಕ್ಷ ಕೋಟಿ ಹೆಚ್ಚಳ – ದಾಖಲೆ ಬರೆದ ಸೆನ್ಸೆಕ್ಸ್‌

    ಪ್ರಾಂಜಲ್ ಮೃತದೇಹ ಬೆಂಗಳೂರಿಗೆ ಬಂದಾಗ ಮುಖ್ಯಮಂತ್ರಿಗಳ ಕಣ್ಣಲ್ಲೂ ಸಹ ನೀರಿತ್ತು. ಅವರು ಸಹ ಭಾವುಕರಾಗಿದ್ದರು. ಆದರೆ ಈಗಾಗಲೇ 15 ದಿನ ಆಯಿತು. ಇನ್ನೂ ಪರಿಹಾರ ಬಂದಿಲ್ಲ. ಆದಷ್ಟು ಬೇಗ ಪರಿಹಾರ ಹಣ ಬಿಡುಗಡೆ ಮಾಡಬೇಕಾಗಿರುವುದು ಸಿಎಂ ಜವಾಬ್ದಾರಿ. ಮುಖ್ಯಮಂತ್ರಿಗಳು ಎಲ್ಲರ ಬಳಿ ಕ್ಷಮೆ ಕೇಳಬೇಕು ಹಾಗೂ ಈ ಕೂಡಲೇ ಪರಿಹಾರ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: Mizoram Election Results: ʻಕೈʼ ಹಿಡಿಯದ ಮಿಜೋರಾಂ – ZPMಗೆ ಗೆಲುವು, 2 ಕ್ಷೇತ್ರಗಳಲ್ಲಿ ಅರಳಿದ ಕಮಲ

  • ಸಿಯಾಚಿನ್‌ನಲ್ಲಿ ಹುತಾತ್ಮನಾದ ಅಗ್ನಿವೀರನ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಿಸಿದ ಮಹಾರಾಷ್ಟ್ರ ಸಿಎಂ

    ಸಿಯಾಚಿನ್‌ನಲ್ಲಿ ಹುತಾತ್ಮನಾದ ಅಗ್ನಿವೀರನ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಿಸಿದ ಮಹಾರಾಷ್ಟ್ರ ಸಿಎಂ

    ಮುಂಬೈ: ಕಳೆದ ವಾರ ಸಿಯಾಚಿನ್‌ನಲ್ಲಿ (Siachen) ಕರ್ತವ್ಯದ ವೇಳೆ ಹುತಾತ್ಮನಾದ ಅಗ್ನಿವೀರ್ (Agniveer) ಅಕ್ಷಯ್ ಲಕ್ಷ್ಮಣ್ ಗವಾಟೆ (Akshay Laxman Gawate) ಕುಟುಂಬಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಅವರು 10 ಲಕ್ಷ ರೂ. ನೆರವು ಘೋಷಿಸಿದ್ದಾರೆ.

    ಮಹಾರಾಷ್ಟ್ರದ (Maharashtra) ಬುಲ್ಧಾನಾ ಜಿಲ್ಲೆಯ ಪಿಂಪಲ್‌ಗಾಂವ್ ಸರಾಯ್ ಮೂಲದ ಗವಾಟೆ ಕಳೆದ ವಾರ ಸಿಯಾಚಿನ್‌ನಲ್ಲಿ ಕರ್ತವ್ಯದ ವೇಳೆ ಹುತಾತ್ಮರಾಗಿದ್ದರು. ಅಗ್ನಿವೀರನ ಅಗಲಿಕೆಗೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಮತ್ತು ಪಡೆಯ ಎಲ್ಲಾ ಶ್ರೇಣಿಗಳು ಸಂತಾಪ ಸೂಚಿಸಿದ್ದಾರೆ. ಇದೀಗ ಗವಾಟೆ ನಿಧನದಿಂದ ದುಃಖತಪ್ತ ಕುಟುಂಬಕ್ಕೆ ಮಹಾರಾಷ್ಟ್ರ ಮುಖ್ಯ ಮಂತ್ರಿ ಶಿಂಧೆ ಸಂತಾಪ ಸೂಚಿಸಿದ್ದು, 10 ಲಕ್ಷ ರೂ. ಪರಿಹಾರ ಘೋಷಿಸಿರುವುದಾಗಿ ಸಚಿವಾಲಯ ತಿಳಿಸಿದೆ.

    ಅಗ್ನಿವೀರನ ಅಗಲಿಕೆಗೆ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಕಾದಾಡಿಕೊಂಡಿವೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗವಾಟೆ ನಿಧನಕ್ಕೆ ಸಂತಾಪ ಸೂಚಿಸಿದ್ದು, ಅಗ್ನಿವೀರ್ ದೇಶದ ವೀರರನ್ನು ಅವಮಾನಿಸುವ ಯೋಜನೆ. ಅಗ್ನಿವೀರ್ ಹುತಾತ್ಮರ ಕುಟುಂಬಗಳಿಗೆ ಯಾವುದೇ ಗ್ರಾಚ್ಯೂಟಿ, ಮಿಲಿಟರಿ ಸೌಲಭ್ಯಗಳು ಅಥವಾ ಪಿಂಚಣಿಗಳನ್ನು ವಿಸ್ತರಿಸಲಾಗಿಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಅಗ್ನಿವೀರರಿಗೆ ಮಿಲಿಟರಿ ಸೌಲಭ್ಯಗಳಿಲ್ಲ- ರಾಹುಲ್‌ ಆರೋಪಕ್ಕೆ ಸೇನೆಯಿಂದ ಪಟ್ಟಿ ರಿಲೀಸ್‌

    ಈ ಆರೋಪಕ್ಕೆ ಭಾರತೀಯ ಸೇನೆ ಪ್ರತಿಕ್ರಿಯೆ ನೀಡಿತ್ತು. ಅಗ್ನಿವೀರರಿಗೆ ಒಟ್ಟು 1.13 ಕೋಟಿ ರೂ. ಪರಿಹಾರ ಸಿಗುತ್ತದೆ ಎಂದು ತಿಳಿಸುವ ಮೂಲಕ ರಾಹುಲ್ ಗಾಂಧಿ ಮಾಡಿರುವ ಆರೋಪ ಸುಳ್ಳು ಎಂದು ಸೇನೆ ಪರೋಕ್ಷವಾಗಿ ಹೇಳಿತ್ತು. ಇದನ್ನೂ ಓದಿ: ಕೋರಮಂಗಲ ಕೆಫೆಯಲ್ಲಿ ಅಗ್ನಿ ಅವಘಡ – 54 ಪಬ್‌ಗಳಿಗೆ ಬಿಬಿಎಂಪಿಯಿಂದ ಬೀಗ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]