Tag: compensation

  • ಒಡಿಶಾ ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬ, ಗಾಯಾಳುಗಳಿಗೆ ಪರಿಹಾರ ಘೋಷಣೆ

    ಒಡಿಶಾ ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬ, ಗಾಯಾಳುಗಳಿಗೆ ಪರಿಹಾರ ಘೋಷಣೆ

    – ಪರಿಹಾರ ಘೋಷಿಸಿದ ಪಿಎಂಎನ್‌ಆರ್‌ಎಫ್, ರೈಲ್ವೇ ಇಲಾಖೆ ಹಾಗೂ ತಮಿಳುನಾಡು ಸರ್ಕಾರ

    ನವದೆಹಲಿ: ಒಡಿಶಾದಲ್ಲಿ (Odisha) ನಡೆದ ಭೀಕರ ರೈಲು ಅಪಘಾತದಿಂದಾಗಿ (Train Accident) 261 ಮಂದಿ ಸಾವನ್ನಪ್ಪಿದ್ದು, 900 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಹಿನ್ನೆಲೆ ಪಿಎಂಎನ್‌ಆರ್‌ಎಫ್, ತಮಿಳುನಾಡು ಸರ್ಕಾರ ಹಾಗೂ ರೈಲ್ವೇ ಇಲಾಖೆ ಘಟನೆಗೆ ಸಂತಾಪ ಸೂಚಿಸಿ ಮೃತರಿಗೆ ಹಾಗೂ ಗಾಯಾಳುಗಳಿಗೆ ಪರಿಹಾರ (Compensation) ಘೋಷಿಸಿದೆ.

    ಶುಕ್ರವಾರ ಒಡಿಶಾದಲ್ಲಿ ನಡೆದ ರೈಲು ದುರಂತಕ್ಕೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಪರಿಹಾರ ಘೋಷಿಸಲಾಗಿದೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50,000 ರೂ. ಪರಿಹಾರ ಘೋಷಿಸಿದೆ. ಇದನ್ನೂ ಓದಿ: ರೈಲು ದುರಂತ – ಕನ್ನಡಿಗರ ಸುರಕ್ಷತೆ ಮೇಲ್ವಿಚಾರಣೆಗೆ ಸಚಿವ ಸಂತೋಷ್ ಲಾಡ್ ನಿಯೋಜನೆ

    ಅದೇ ರೀತಿ ರೈಲ್ವೇ ಸಚಿವಾಲಯವು (Ministry of Railways) ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ., ಗಂಭೀರ ಗಾಯಗೊಂಡವರಿಗೆ 2 ಲಕ್ಷ ರೂ. ಹಾಗೂ ಅಲ್ಪ ಪ್ರಮಾಣದಲ್ಲಿ ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಘೋಷಿಸಿದೆ. ಈ ಕುರಿತು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ (Ashwini Vaishnav), ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ಮೃತರ ಕುಟುಂಬಕ್ಕೆ ಸಂತಾಪವನ್ನು ಸೂಚಿಸಿದ್ದಾರೆ. ಶನಿವಾರ ಮುಂಜಾನೆ ಅಪಘಾತ ಸ್ಥಳಕ್ಕೆ ಭೇಟಿ ನೀಡಿದ ಅವರು, ಅಪಘಾತದ ಬಗ್ಗೆ ವಿವರವಾದ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಇದನ್ನೂ ಓದಿ: Odisha Train Accident; 48 ರೈಲು ಸಂಚಾರ ರದ್ದು, 39 ರೈಲುಗಳ ಮಾರ್ಗ ಬದಲಾವಣೆ

    ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ (Naveen Patnaik) ಬಾಲಸೋರ್ ಜಿಲ್ಲಾ ಆಸ್ಪತ್ರೆಗೆ ಆಗಮಿಸಿ ರೈಲು ಅಪಘಾತದಲ್ಲಿ ಗಾಯಗೊಂಡ ಜನರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದು, ಒಡಿಶಾದಲ್ಲಿ ಇಂದು (ಶನಿವಾರ) ಶೋಕಾಚರಣೆಯನ್ನು ಘೋಷಿಸಿದ್ದಾರೆ. ಅಂತೆಯೇ ತಮಿಳುನಾಡು (Tamil Nadu) ಸರ್ಕಾರ ಅಪಘಾತಕ್ಕೀಡಾದ ತಮಿಳುನಾಡಿನ ಜನರಿಗೆ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ (M.K.Stalin) ಅವರು ದುರ್ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿ, ತಮಿಳುನಾಡು ಮೂಲದ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 1 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ಅಪಘಾತ; ಸಂಚಾರ ರದ್ದಾಗಿ ಬೆಂಗ್ಳೂರಲ್ಲೇ ನಿಂತ ಬೆಂಗಳೂರು-ಗುವಾಹಟಿ ರೈಲು

    ದುರಂತಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi), ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸೇರಿದಂತೆ ಅನೇಕ ಗಣ್ಯರು ವಿಷಾದ ವ್ಯಕ್ತಪಡಿಸಿದ್ದಾರೆ. ಅನೇಕ ಗಣ್ಯರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಅಗತ್ಯ ನೆರವು ಒದಗಿಸುವ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ದೊಡ್ಡಮಟ್ಟದ ಸದ್ದು ಕೇಳಿಬಂತು; ದುರಂತದ ಘನಘೋರ ದೃಶ್ಯ ಬಿಚ್ಚಿಟ್ಟ ಕನ್ನಡಿಗ

  • ಮಣಿಪುರ ಘರ್ಷಣೆ – ಮೃತರ ಕುಟುಂಬದವರಿಗೆ ಪರಿಹಾರ, ಸರ್ಕಾರಿ ಉದ್ಯೋಗ

    ಮಣಿಪುರ ಘರ್ಷಣೆ – ಮೃತರ ಕುಟುಂಬದವರಿಗೆ ಪರಿಹಾರ, ಸರ್ಕಾರಿ ಉದ್ಯೋಗ

    ಇಂಫಾಲ: ಕಳೆದ ಹಲವು ದಿನಗಳಿಂದ ಮಣಿಪುರದಲ್ಲಿ (Manipur) ನಡೆಯುತ್ತಿರುವ ಹಿಂಸಾಚಾರದಲ್ಲಿ (Violence) ಪ್ರಾಣ ಕಳೆದುಕೊಂಡವರಿಗೆ ಕೇಂದ್ರ ಹಾಗೂ ಮಣಿಪುರ ರಾಜ್ಯ ಸರ್ಕಾರ ಮಂಗಳವಾರ ಪರಿಹಾರ (Compensation) ಘೋಷಿಸಿದೆ.

    ಮಣಿಪುರ ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬದವರಿಗೆ 10 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಮಾತ್ರವಲ್ಲದೇ ಮೃತರ ಕುಟುಂಬದ ಒಬ್ಬ ಸದಸ್ಯರಿಗೆ ಉದ್ಯೋಗ (Job) ನೀಡಲಾಗುವುದು. ಪರಿಹಾರದ ಮೊತ್ತವನ್ನು ಕೇಂದ್ರ ಹಾಗೂ ರಾಜ್ಯ ಸಮಾನವಾಗಿ ಭರಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಸೋಮವಾರ ತಡರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮಣಿಪುರದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಸಭೆ ನಡೆಸಿದ್ದು, ಈ ವೇಳೆ ಪರಿಹಾರವನ್ನು ಘೋಷಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಮಾವೋವಾದಿಗಳಿಂದ ಭಾರೀ ವಿಧ್ವಂಸಕ ಕೃತ್ಯಕ್ಕೆ ಸಂಚು – 5 ಬಾಂಬ್ ನಿಷ್ಕ್ರಿಯ

    ಭಾನುವಾರ ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಪೊಲೀಸ್ ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಈ ಮೂಲಕ ಕಳೆದ 1 ತಿಂಗಳಲ್ಲಿ ಸಾವಿನ ಸಂಖ್ಯೆ 80ಕ್ಕೆ ಏರಿಕೆಯಾಗಿದೆ. ಮಣಿಪುರದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿರುವುದರಿಂದ ಮೇ 31ರ ವರೆಗೂ ರಾಜ್ಯಾದ್ಯಂತ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ: ಆರನೆಯ ಗ್ಯಾರಂಟಿ ಪಕ್ಕಾ: ಪ್ರಿಯಾಂಕ್ ಖರ್ಗೆ

  • ಮಾಡೆಲ್ ಹೇರ್‌ಸ್ಟೈಲ್‌ ಹಾಳು ಮಾಡಿದ್ದಕ್ಕೆ 2 ಕೋಟಿ ಪರಿಹಾರ – ಆದೇಶಕ್ಕೆ ಸುಪ್ರೀಂ ತಡೆ

    ಮಾಡೆಲ್ ಹೇರ್‌ಸ್ಟೈಲ್‌ ಹಾಳು ಮಾಡಿದ್ದಕ್ಕೆ 2 ಕೋಟಿ ಪರಿಹಾರ – ಆದೇಶಕ್ಕೆ ಸುಪ್ರೀಂ ತಡೆ

    ನವದೆಹಲಿ: ಮಾಡೆಲ್ ಒಬ್ಬರ ಹೇರ್‌ಸ್ಟೈಲ್‌ನ್ನು ವಿರೂಪಗೊಳಿಸಿದ್ದಕ್ಕಾಗಿ ಆಕೆಗೆ 2 ಕೋಟಿ ರೂ. ಪರಿಹಾರ (Compensation) ನೀಡುವಂತೆ ಐಟಿಸಿ ಸಲೂನ್ ವಿರುದ್ಧ ರಾಷ್ಟ್ರೀಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ (NCDRC ) ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ (Supreme Court) ಬುಧವಾರ ತಡೆ ನೀಡಿದೆ.

    ಎನ್‍ಸಿಡಿಆರ್‌ಸಿ ಆದೇಶವನ್ನು ಪ್ರಶ್ನಿಸಿ ಐಟಿಸಿ (ITC) ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಅನಿರುದ್ಧ ಬೋಸ್ ಮತ್ತು ಸುಧಾಂಶು ಧುಲಿಯಾ ಅವರಿದ್ದ ಪೀಠವು ವಿಚಾರಣೆ ನಡೆಸಿತು. ಪರಿಹಾರವನ್ನು ಸುಮ್ಮನೆ ಕೇಳುವುದಲ್ಲ, ಅದಕ್ಕೆ ಸೂಕ್ತವಾದ ಕಾರಣ ಹಾಗೂ ಸಾಕ್ಷ್ಯ ಇರಬೇಕು ಎಂದು ಪೀಠ ಹೇಳಿದೆ. ಬಳಿಕ ಮಾಡೆಲ್ ಆಶ್ನಾ ರಾಯ್ ಅವರಿಗೆ ನ್ಯಾಯಾಲಯ ನೋಟಿಸ್ ಜಾರಿಗೊಳಿಸಿತು. ಇದನ್ನೂ ಓದಿ:ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷೆಗೆ ಕಿರುಕುಳ – ಬಿವಿ ಶ್ರೀನಿವಾಸ್‍ಗೆ ಸುಪ್ರೀಂ ಜಾಮೀನು

    ಪ್ರಕರಣಕ್ಕೆ ಸಂಬಂಧಿಸಿದಂತೆ 2 ಕೋಟಿ ರೂ. ಪರಿಹಾರ ನೀಡುವಂತೆ 2021ರ ಸೆ. 21 ರಂದು ಗ್ರಾಹಕರ ನ್ಯಾಯಾಲಯ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಲಾದ ಮನವಿಯನ್ನು ಫೆಬ್ರವರಿಯಲ್ಲಿ ವಿಚಾರಣೆ ನಡೆಸಿದ್ದ ಸುಪ್ರೀಂ ರದ್ದುಗೊಳಿಸಿತ್ತು. ಅಲ್ಲದೆ ಮಾದರಿಯಲ್ಲಿ ಸಲ್ಲಿಸಿದ ವಸ್ತುಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಮುಂದುವರೆಯುವಂತೆ ಗ್ರಾಹಕರ ನ್ಯಾಯಾಲಯಕ್ಕೆ ಸೂಚಿಸಿತ್ತು. ಪರಿಶೀಲನೆ ನಡೆಸಿದ್ದ ಗ್ರಾಹಕರ ನ್ಯಾಯಾಲಯ ಹಿಂದಿನ ತೀರ್ಪನ್ನು ಎತ್ತಿ ಹಿಡಿದಿತ್ತು.

    ಏನಿದು ಪ್ರಕರಣ?
    2018ರ ಏ.12 ರಂದು ನವದೆಹಲಿಯ (New Delhi) ಹೋಟೆಲ್ ಐಐಟಿ ಮೌರ್ಯದಲ್ಲಿರುವ ಸಲೂನ್‍ಗೆ ಹೇರ್ ಕಟಿಂಗ್‍ಗಾಗಿ ಆಶ್ನಾ ರಾಯ್ ತೆರಳಿದ್ದರು. ಯಾವಾಗಲೂ ಕೇಶ ವಿನ್ಯಾಸ ಮಾಡುತ್ತಿದ್ದ ಕೇಶ ವಿನ್ಯಾಸಕಿ ಸಿಗದ ಕಾರಣ ಬೇರೊಬ್ಬ ವ್ಯಕ್ತಿಗೆ ಆ ಕೆಲಸವನ್ನು ವಹಿಸಲಾಗಿತ್ತು. ಆತ ಮಾಡಿದ್ದ ಕಟಿಂಗ್ ಸರಿಯಾಗಿಲ್ಲ. ವಿರೂಪಗೊಳಿಸಿದ್ದಾನೆ ಎಂದು ಮಾಡೆಲ್ ಆರೋಪಿಸಿದ್ದರು.

    ಅಲ್ಲದೆ ಇದರಿಂದಾಗಿ ಮುಜುಗರ ಎದುರಿಸಬೇಕಾಯಿತು. ವಿರೂಪವಾದ ಹೇರ್‌ನಿಂದಾಗಿ ಖಿನ್ನತೆಯನ್ನು ಅನುಭವಿಸಿದೆ. ನನ್ನ ವೃತ್ತಿ ಜೀವನಕ್ಕೆ ಇದರಿಂದ ತೊಂದರೆಯಾಯಿತು. ಇದರಿಂದ ನಷ್ಟ ಅನುಭವಿಸಿದೆ, 3 ಕೋಟಿ ರೂ. ಪರಿಹಾರವನ್ನು ಸಲೂನ್ ನೀಡಬೇಕು ಎಂದು ಗ್ರಾಹಕರ ನ್ಯಾಯಾಲಯದ ಮೊರೆ ಹೊಗಿದ್ದರು. ಇದನ್ನೂ ಓದಿ: ಧರ್ಮಗುರು ಹೆಂಡತಿಯನ್ನು ಹೇಗೆ ಕೊಂದ? – ಗೂಗಲ್ ಸರ್ಚ್‍ನಿಂದ ಸಿಕ್ಕಿಬಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ

  • ಬೇಸರಿಸಿಕೊಂಡು ಪರಿಹಾರ ಹಣ ಬೇಡ ಎಂದ ಕಂಗನಾ ರಣಾವತ್

    ಬೇಸರಿಸಿಕೊಂಡು ಪರಿಹಾರ ಹಣ ಬೇಡ ಎಂದ ಕಂಗನಾ ರಣಾವತ್

    ರಾಷ್ಟ್ರ ಪ್ರಶಸ್ತಿ ವಿಜೇತ ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut) ಅಕ್ರಮವಾಗಿ ಮನೆ ನಿರ್ಮಾಣ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಬೃಹತ್ ಮುಂಬೈ ಮಹಾನಗರ ಪಾಲಿಕೆಯು ಅವರ ಮನೆಯ ಒಂದು ಭಾಗವನ್ನು 2020ರಲ್ಲಿ ಕೆಡವಲಾಗಿತ್ತು. ಇದನ್ನು ಪ್ರಶ್ನಿಸಿ ಅವರು ಕೋರ್ಟ್ ಮೆಟ್ಟಿಲು ಏರಿದ್ದರು. ಈ ಹೋರಾಟದಲ್ಲಿ ಅವರು ಗೆದ್ದಿದ್ದರು.

    ಕಂಗನಾ ರಣಾವತ್ ಮನವಿಯನ್ನು ಪುರಸ್ಕರಿಸಿದ್ದ ಮಾನ್ಯ ನ್ಯಾಯಾಲಯವು ‘ಕಂಗನಾಗೆ ಪರಿಹಾರ (Compensation) ನೀಡಬೇಕು ಎಂದು ನ್ಯಾಯಾಲಯ ಹೇಳಿತ್ತು. ಆದರೆ, ಈವರೆಗೂ ತಮಗೆ ಹಣ ಬಂದಿಲ್ಲವೆಂದು ಅವರು ಹೇಳಿಕೊಂಡಿದ್ದಾರೆ. ಮಹಾನಗರ ಪಾಲಿಕೆಯು ಮೌಲ್ಯಮಾಪಕರನ್ನು ಈವರೆಗೂ ಕಳುಹಿಸಿಲ್ಲವೆಂದು ತಿಳಿಸಿದ್ದಾರೆ. ಇದನ್ನೂ ಓದಿ:ಸಿದ್ದರಾಮಯ್ಯನವರು ಮತ್ತೆ ಸಿಎಂ ಆಗ್ಬೇಕು – ದುನಿಯಾ ವಿಜಯ್

    ಈ ಸಂಬಂಧ ಅವರು ಮಹಾರಾಷ್ಟ್ರ ಸಿಎಂ ಏಕ್ ನಾಥ್ ಶಿಂಧೆ (Ek Nath Shinde) ಅವರನ್ನು ಭೇಟಿ ಮಾಡಿ, ಮೌಲ್ಯಮಾಪಕರನ್ನು ಕಳುಹಿಸಬೇಡಿ. ನಾನು ಪರಿಹಾರ ಹಣವನ್ನು ಸ್ವೀಕರಿಸುವುದಿಲ್ಲ. ಅದು ತೆರಿಗೆದಾರರ ಹಣವಾಗಿದೆ ಎಂದು ಹೇಳಿದ್ದಾರಂತೆ. ಮಹಾನಗರ ಪಾಲಿಕೆಯ ವಿರುದ್ಧ ಅಸಮಾಧಾನಗೊಂಡಿರುವ ಕಂಗನಾ, ಯಾವುದೇ ಕಾರಣಕ್ಕೂ ಹಣ ಪಡೆಯುವುದಿಲ್ಲ ಎಂದು ಹೇಳಿಕೊಂಡಿದ್ದಾರೆ.

    ಈ ಹಿಂದೆ ಮಹಾರಾಷ್ಟ್ರ ಸರಕಾರ ಹಾಗೂ ಕಂಗನಾ ನಡುವೆ ಜಟಾಪಟಿ ನಡೆದಿತ್ತು. ಹಾಗಾಗಿ ಕಂಗನಾಗೆ ವೈಪ್ಲಸ್ ಕೆಟಗರಿ ಭದ್ರತೆ ಒದಗಿಸಲಾಗಿತ್ತು. ಈ ನಡೆಗೆ ಭಾರೀ ಟೀಕೆ ಕೇಳಿ ಬಂದಿತ್ತು. ಜನರ ತೆರಿಗೆ ಹಣದಲ್ಲಿ ಭದ್ರತೆ ಕೊಡುವುದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದ್ದರು ಹಲವರು. ಪರಿಹಾರ ನಿರಾಕರಿಸುವ ಮೂಲಕ ಇವರಿಗೆ ಟಾಂಗ್ ನೀಡಿದ್ದಾರೆ ಕಂಗನಾ.

  • ಭೋಪಾಲ್ ಅನಿಲ ದುರಂತ – ಸುಪ್ರೀಂ ಕೋರ್ಟ್‍ನಲ್ಲಿ ಕೇಂದ್ರಕ್ಕೆ ಭಾರೀ ಹಿನ್ನಡೆ

    ಭೋಪಾಲ್ ಅನಿಲ ದುರಂತ – ಸುಪ್ರೀಂ ಕೋರ್ಟ್‍ನಲ್ಲಿ ಕೇಂದ್ರಕ್ಕೆ ಭಾರೀ ಹಿನ್ನಡೆ

    ನವದೆಹಲಿ: ಭೋಪಾಲ್ ಅನಿಲ ದುರಂತ ಪ್ರಕರಣದ (Bhopal Gas Tragedy) ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ (compensation) ಕೋರಿ ಸಲ್ಲಿಸಿದ್ದ ಅರ್ಜಿಯಲ್ಲಿ ಕೇಂದ್ರಕ್ಕೆ ಭಾರೀ ಹಿನ್ನಡೆ ಉಂಟಾಗಿದೆ. ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ಮಂಗಳವಾರ ವಜಾಗೊಳಿಸಿದೆ.

    ಭೋಪಾಲ್‍ನ ಯೂನಿಯನ್ ಕಾರ್ಬೈಡ್ ಕಾರ್ಖಾನೆಯಲ್ಲಿ 1984ರಲ್ಲಿ ವಿಷಕಾರಿ ಮೀಥೈಲ್ ಐಸೊಸೈನೇಟ್ ಅನಿಲ ಸೋರಿಕೆಯಾಗಿತ್ತು. ಈ ಅನಿಲ ದುರಂತದಲ್ಲಿ 3,000ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು. ಈ ದುರಂತ ವಿಶ್ವದ ಅತ್ಯಂತ ಕೆಟ್ಟ ಕೈಗಾರಿಕಾ ವಿಪತ್ತುಗಳಲ್ಲಿ ಒಂದಾಗಿತ್ತು.

    ಈ ಪ್ರಕರಣವನ್ನು ಮತ್ತೆ ತೆರೆಯಬೇಕು. ಅನಿಲ ಸೋರಿಕೆಯಿಂದ ತೊಂದರೆಗೀಡಾದ ಸಂತ್ರಸ್ತರಿಗೆ ಹೆಚ್ಚುವರಿಯಾಗಿ 7,844 ಕೋಟಿ ರೂ.ವನ್ನು ಅಮೆರಿಕ ಮೂಲದ ಯೂನಿಯನ್ ಕಾರ್ಬೈಡ್‍ನ ಉತ್ತರಾಧಿಕಾರಿ ಸಂಸ್ಥೆಗಳು ನೀಡಬೇಕು ಎಂದು ಕೇಂದ್ರವು ಸುಪ್ರೀಂ ಕೋರ್ಟ್‍ನ ಮೊರೆ ಹೋಗಿತ್ತು. ಅಷ್ಟೇ ಅಲ್ಲದೇ ಅನಿಲ ದುರಂತದಿಂದ ಜೀವ ಹಾನಿ ಮತ್ತು ಪರಿಸರಕ್ಕೆ ಅಗಾಧ ಪ್ರಮಾಣದಲ್ಲಿ ಹಾನಿ ಉಂಟಾಗಿದೆ ಎಂದು ವಾದಿಸಿತ್ತು.

    ಪ್ರಕರಣವನ್ನು ಆಲಿಸಿದ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಅಭಯ್ ಎಸ್ ಓಕಾ, ವಿಕ್ರಮ್‍ನಾಥ್ ಮತ್ತು ಜೆ.ಕೆ ಮಹೇಶ್ವರಿ ಅವರನ್ನು ಒಳಗೊಂಡ ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಅರ್ಜಿಗೆ ಸಂಬಂಧಿಸಿ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದೆ. ಯೂನಿಯನ್ ಕಾರ್ಬೈಡ್ ಕಾರ್ಪೋರೇಷನ್ ಸಂಸ್ಥೆಗೆ ಹೆಚ್ಚಿನ ಹೊಣೆಗಾರಿಕೆಯನ್ನು ಹೊರಿಸುವುದು ಅಗತ್ಯವಿಲ್ಲ. ಪ್ರಕರಣವನ್ನು ಮರು ಆರಂಭಿಸುವುದು ಮತ್ತಷ್ಟು ಜಟಿಲತೆಗೆ ಕಾರಣವಾಗುವುದಲ್ಲದೆ, ಅರ್ಹ ಸಂತ್ರಸ್ತರಿಗೆ ತೊಂದರೆಯುಂಟು ಮಾಡಲಿದೆ ಎಂದಿದೆ.

    ವಂಚನೆ ನಡೆದರೆ ಮಾತ್ರ ಪರಿಹಾರವನ್ನು ನೀಡುವುದರ ಬಗ್ಗೆ ಯೋಚಿಸಬಹುದು. ಆದರೆ ಕೇಂದ್ರವು ಈ ವಿಷಯದಲ್ಲಿ ವಾದಿಸಿಲ್ಲ. 2 ದಶಕಗಳ ನಂತರವೂ ಈ ವಿಷಯವನ್ನು ಪ್ರಸ್ತಾಪಿಸಲು ಕೇಂದ್ರವು ಯಾವುದೇ ತರ್ಕವನ್ನು ಒದಗಿಸಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

    ಹೆಚ್ಚಿನ ಪರಿಹಾರದ ಹೊಣೆಗಾರಿಯನ್ನು ಯುಸಿಸಿ ಮೇಲೆ ವಿಧಿಸುವ ಅಗತ್ಯ ಕಾಣುತ್ತಿಲ್ಲ. ಸಂತ್ರಸ್ತರಿಗೆ ಪ್ರಮಾಣಾನುಗುಣವಾಗಿ ಇದಾಗಲೇ 6 ಬಾರಿ ಪರಿಹಾರವನ್ನು ವಿತರಿಸಲಾಗಿದೆ. ಭೋಪಾಲ್ ಅನಿಲ ದುರಂತ ಸಂತ್ರಸ್ತರ ಅಗತ್ಯವನ್ನು ಪೂರೈಸಲು ಆರ್‍ಬಿಐ ಬಳಿ ಇದಾಗಲೇ 50 ಕೋಟಿ ರೂ.ವನ್ನು ಇರಿಸಲಾಗಿದೆ. ಕೇಂದ್ರ ಸರ್ಕಾರವು ಬಾಕಿ ಉಳಿದಿರುವ ಕ್ಲೈಮ್‍ಗಳನ್ನು ಪೂರೈಸಲು ಬಳಸಿಕೊಳ್ಳಬೇಕು. ಒಂದೊಮ್ಮೆ ಪ್ರಕರಣವನ್ನು ಮರು ಆರಂಭಿಸಿದರೆ ಅದು ಮತ್ತಷ್ಟು ಜಟಿಲತೆಗೆ ಸಿಲುಕಬಹುದು. ಯುಸಿಸಿಗೆ ಅನುಕೂಲಕರವಾಗಿ ಪರಿಣಮಿಸಲಿದೆ. ಇದರಿಂದ ಸಂತ್ರಸ್ತರಿಗೆ ತೊಡಕಾಗಲಿದೆ ಎಂದು ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.

    ಭೋಪಾಲ್ ಅನಿಲ ದುರಂತಕ್ಕೆ ಸಂಬಂಧಸಿ ಆಗಿನ ಯೂನಿಯನ್ ಕಾರ್ಬೈಡ್ ಅಧ್ಯಕ್ಷ ವಾರೆನ್ ಆಂಡರ್ಸನ್ ಪ್ರಮುಖ ಆರೋಪಿಯಾಗಿದ್ದ. ಆದರೆ ವಿಚಾರಣೆಗೆ ಹಾಜರಾಗಲಿಲ್ಲ. 1992ರಲ್ಲಿ ಭೋಪಾಲ್ ನ್ಯಾಯಾಲಯವು ಆತನನ್ನು ಪರಾರಿ ಎಂದು ಘೋಷಿಸಿತ್ತು. ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ ಟಿಕೆಟ್ ಫೈಟ್- ದೆಹಲಿಯಲ್ಲಿ ದಲಿತ ಎಡ ನಾಯಕರ ಠಿಕಾಣಿ

    2014ರಲ್ಲಿ ಆಂಡರ್ಸನ್ ಸಾಯುವ ಮೊದಲು ಎರಡು ಜಾಮೀನು ರಹಿತ ವಾರಂಟ್‍ಗಳನ್ನು ಹೊರಡಿಸಲಾಗಿತ್ತು. 2010ರ ಜೂನ್ 7ರಂದು, ಭೋಪಾಲ್ ನ್ಯಾಯಾಲಯವು ಯೂನಿಯನ್ ಕಾರ್ಬೈಡ್ ಇಂಡಿಯಾ ಲಿಮಿಟೆಡ್‍ನ 7 ಅಧಿಕಾರಿಗಳಿಗೆ 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಇದನ್ನೂ ಓದಿ: ಸುದ್ದಿಗೋಷ್ಠಿಯಲ್ಲಿ ಸೋಮಣ್ಣ ಕಣ್ಣೀರು – ಬಿಜೆಪಿ ಬಿಡಲ್ಲ ಎಂದು ಸ್ಪಷ್ಟನೆ

  • ರಾಜ್ಯದಲ್ಲಿ ಕೋವಿಡ್‌ನಿಂದ ಮೃತರಾದ ಕುಟುಂಬಕ್ಕೆ 446 ಕೋಟಿ ಪರಿಹಾರ ನೀಡಲಾಗಿದೆ: ಆರ್ ಅಶೋಕ್

    ರಾಜ್ಯದಲ್ಲಿ ಕೋವಿಡ್‌ನಿಂದ ಮೃತರಾದ ಕುಟುಂಬಕ್ಕೆ 446 ಕೋಟಿ ಪರಿಹಾರ ನೀಡಲಾಗಿದೆ: ಆರ್ ಅಶೋಕ್

    ಬೆಂಗಳೂರು: ಕೋವಿಡ್‌ನಿಂದ (Covid) ಮೃತಪಟ್ಟ ಕುಟುಂಬಗಳಿಗೆ ಈವರೆಗೂ 446 ಕೋಟಿ ರೂ. ಪರಿಹಾರ (Compensation) ವಿತರಣೆ ಮಾಡಲಾಗಿದ್ದು, ನೈಜತೆ ಆಧರಿಸಿ ಈಗಲೂ ಪರಿಹಾರ ನೀಡಿಕೆ ಮುಂದುವರಿಸಲಾಗಿದೆ. ರಾಜ್ಯ ಸರ್ಕಾರ 1 ಲಕ್ಷ ಕೇಂದ್ರದ 50 ಸಾವಿರ ಸೇರಿ ಒಟ್ಟು 1.5 ಲಕ್ಷ ರೂ. ಗಳನ್ನು ಮೃತರ ಕುಟುಂಬಕ್ಕೆ ನೀಡಲಾಗುತ್ತದೆ ಎಂದು ಕಂದಾಯ ಸಚಿವ ಆರ್ ಅಶೋಕ್ (R Ashok) ಸ್ಪಷ್ಟಪಡಿಸಿದ್ದಾರೆ.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಯುಬಿ ವೆಂಕಟೇಶ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೋವಿಡ್‌ನಿಂದ ಮೃತ ಎಂದು ಹೆಲ್ತ್ ಬುಲೆಟಿನ್‌ನಲ್ಲಿಯೇ ಬಂದಿದ್ದರೆ, ಆ ಕುಟುಂಬಕ್ಕೆ ಪರಿಹಾರ ನೀಡಲಾಗಿದೆ. 1 ಲಕ್ಷ ರೂ. ರಾಜ್ಯ ಸರ್ಕಾರದಿಂದ, 50 ಸಾವಿರ ರೂ. ಕೇಂದ್ರದಿಂದ ಕೊಡಲಾಗಿದೆ ಎಂದರು. ಇದನ್ನೂ ಓದಿ: ನಾನು ಹುಟ್ಟಿರೋದೆ ಮಾಂಸ ತಿನ್ನೋ ಜಾತಿಯಲ್ಲಿ, ಆದ್ರೆ ಮಾಂಸ ತಿಂದು ದೇವಾಲಯಕ್ಕೆ ಹೋಗಿಲ್ಲ: ಸಿ.ಟಿ ರವಿ

    ಆರೋಗ್ಯ ಇಲಾಖೆ ಬುಲೆಟಿನ್‌ನಲ್ಲಿ ಹೆಸರು ಬಾರದೆ ಇದ್ದು, ನಂತರ ಮೃತರ ಕುಟುಂಬದವರು ಅರ್ಜಿ ಸಲ್ಲಿಸಿದರೆ ಅದನ್ನು ಪರಿಗಣಿಸಲಾಗುತ್ತದೆ. ಆದರೆ ನೈಜತೆ ಪರಿಶೀಲನೆಗೆ ಸಮಿತಿ ರಚಿಸಲಾಗಿದೆ. ಅಲ್ಲಿ ಕೋವಿಡ್‌ನಿಂದ ಸಾವು ಎಂದು ಖಚಿತವಾದರೆ ಮಾತ್ರ ಪರಿಹಾರ ಕೊಡಲಾಗುತ್ತದೆ. ಈವರೆಗೂ ರಾಜ್ಯದಲ್ಲಿ 446 ಕೋಟಿ ರೂ. ಪರಿಹಾರ ಕೊಡಲಾಗಿದೆ ಎಂದರು.

    ಬೆಂಗಳೂರಿನಲ್ಲಿ ಪರಿಹಾರಕ್ಕೆ 10,137 ಅರ್ಜಿಗಳು ಬಂದಿದ್ದವು. ಈ ಪೈಕಿ 3,450 ಬಿಪಿಎಲ್ ಪ್ರಕರಣಗಳಾಗಿವೆ. ಈಗಲೂ ಪರಿಹಾರ ಕೊಡಲಾಗುತ್ತಿದೆ. ಮೃತರಾದವರ ಕುಟುಂಬದವರಲ್ಲದವರು ಪರಿಹಾರಕ್ಕೆ ಅರ್ಜಿ ಸಲ್ಲಿಕೆ ಮಾಡುತ್ತಿದ್ದಾರೆ. ಅದಕ್ಕೆಲ್ಲಾ ಕೊಡಲು ಸಾಧ್ಯವಿಲ್ಲ. ಇದು ಸರ್ಕಾರದ ಹಣ, ದುರುಪಯೋಗ ತಡೆಗೆ ಪರಿಹಾರಕ್ಕೆ ಅರ್ಜಿ ಸಲ್ಲಿಸುವವರ ಹೆಸರು ಮೃತ ವ್ಯಕ್ತಿಯ ಹೆಸರು ಇರುವ ಬಿಪಿಎಲ್ ಪಡಿತರ ಕಾರ್ಡ್ನಲ್ಲಿ ಇರುವುದು ಕಡ್ಡಾಯ ಎಂದರು. ಇದನ್ನೂ ಓದಿ: ಗ್ರಾಮಗಳ ಆಸ್ತಿ ಸರ್ವೆಗೆ ಡ್ರೋಣ್ ಸರ್ವೆ ಪ್ರಕ್ರಿಯೆ ನಡೆಯುತ್ತಿದೆ: ಅಶೋಕ್

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜೋಶಿಮಠ ಮುಳುಗಡೆ – ಪ್ರತಿ ಸಂತ್ರಸ್ತ ಕುಟುಂಬಕ್ಕೆ 1.5 ಲಕ್ಷ ಪರಿಹಾರ

    ಜೋಶಿಮಠ ಮುಳುಗಡೆ – ಪ್ರತಿ ಸಂತ್ರಸ್ತ ಕುಟುಂಬಕ್ಕೆ 1.5 ಲಕ್ಷ ಪರಿಹಾರ

    ಡೆಹ್ರಾಡೂನ್: ಭೂಮಿ ಕುಸಿತದಿಂದಾಗಿ ತತ್ತರಿಸುತ್ತಿರುವ ಉತ್ತರಾಖಂಡದ (Uttarakhand) ಜೋಶಿಮಠದಲ್ಲಿ (Joshimath) ಮನೆಗಳನ್ನು ಕಳೆದುಕೊಂಡಿರುವ ಸಂತ್ರಸ್ತ ಕುಟುಂಬಗಳಿಗೆ ಅಲ್ಲಿನ ಸರ್ಕಾರ ತಲಾ 1.5 ಲಕ್ಷ ರೂ. ಪರಿಹಾರ (compensation) ನೀಡುವುದಾಗಿ ಘೋಷಿಸಿದೆ.

    ಕಳೆದ ವರ್ಷ ಡಿಸೆಂಬರ್‌ನಲ್ಲಿ ಜೋಶಿಮಠದ ಕೆಲವೆಡೆ ಬಿರುಕುಗಳು ಒಂದೊಂದಾಗಿಯೇ ಕಾಣಿಸಿಕೊಳ್ಳಲು ಪ್ರಾರಂಭಿಸಿತ್ತು. ಕೆಲವು ದಿನಗಳಲ್ಲಿ ಇದರ ತೀವ್ರತೆ ಹೆಚ್ಚಾಗಿ, ದುರಂತವಾಗಿ ಮಾರ್ಪಟ್ಟಿತು. ನಗರ ಮುಳುಗಡೆಯಾಗುವ ಭೀತಿಯಲ್ಲಿ (Joshimath Sinking) ಅಲ್ಲಿನ ನಿವಾಸಿಗಳಿದ್ದು, ಅಪಾಯದ ಸ್ಥಿತಿಯಲ್ಲಿರುವ ಕಟ್ಟಡಗಳನ್ನು ನೆಲಸಮಗೊಳಿಸಲು ಸರ್ಕಾರ ಮುಂದಾಗಿದೆ.

    ಜೋಶಿಮಠದಲ್ಲಿನ ರಸ್ತೆ, ಮನೆಗಳು ಸೇರಿದಂತೆ ಅನೇಕ ಕಡೆ ಬಿರುಕುಗಳು ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದೆ. ಅಲ್ಲಿ ವಾಸಿಸಲು ಅಪಾಯಕಾರಿ ಎಂದು ಗುರುತಿಸಲಾಗಿರುವ 600ಕ್ಕೂ ಹೆಚ್ಚು ಕಟ್ಟಡಗಳನ್ನು ನೆಲಸಮಗೊಳಿಸಲು ಸರ್ಕಾರ ಮಂಗಳವಾರ ಮುಂದಾಗಿತ್ತು. ಆದರೆ ಸ್ಥಳಿಯರು ಈ ನಡೆಗೆ ವಿರೋಧ ವ್ಯಕ್ತಪಡಿಸಿದ್ದರಿಂದ ನೆಲಸಮ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ: ಜಾನ್ಸನ್‌ & ಜಾನ್ಸನ್‌ ಬೇಬಿ ಪೌಡರ್‌ ಉತ್ಪಾದನೆ, ಮಾರಾಟಕ್ಕೆ ಬಾಂಬೆ ಹೈಕೋರ್ಟ್‌ ಅನುಮತಿ

    ಸದ್ಯಕ್ಕೆ ನಗರದ ಮಲಾರಿ ಇನ್ ಹಾಗೂ ಮೌಂಟ್ ವ್ಯೂ ಹೆಸರಿನ 2 ಹೋಟೆಲ್‌ಗಳನ್ನು ಮಾತ್ರವೇ ನೆಲಸಮ ಮಾಡಲಾಗುತ್ತಿರುವುದಾಗಿ ವರದಿಯಾಗಿದೆ. ಸರ್ಕಾರ 1 ವಾರದೊಳಗೆ ಸ್ಥಳೀಯ ಮನೆಗಳ ಸಮೀಕ್ಷೆ ನಡೆಸಿ ಬಳಿಕ ನೆಲಸಮ ಕಾರ್ಯ ಮಾಡುವ ಬಗ್ಗೆ ತೀರ್ಮಾನ ಮಾಡಲಿದೆ ಎಂದು ವರದಿಯಾಗಿದೆ.

    ಜೋಶಿಮಠ ಮುಳುಗಡೆಯ ಹಿನ್ನೆಲೆ ಅಲ್ಲಿ ಸಾವಿರಾರು ನಿವಾಸಿಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಗೊಳಿಸಲಾಗುತ್ತಿದೆ. ಉತ್ತರಾಖಂಡ ಸರ್ಕಾರ ಸಂತ್ರಸ್ತ ಕುಟುಂಬಗಳಿಗೆ 1.5 ಲಕ್ಷ ರೂ. ಪರಿಹಾರ ಘೋಷಿಸಿದೆ. ಕೆಡವಲಾಗುತ್ತಿರುವ ಹೋಟೆಲ್‌ಗಳ ಆಸ್ತಿಯ ಬಗ್ಗೆ ಸಮೀಕ್ಷೆ ನಡೆಸಿ ಪರಿಹಾರವನ್ನು ಘೋಷಿಸಲಾಗುವುದು ಎಂದು ತಿಳಿಸಲಾಗಿದೆ. ಇದನ್ನೂ ಓದಿ: ಮೆಟ್ರೋ ದುರಂತ: ತನಿಖೆ ನಡೆಸಿ ವರದಿ ಸಲ್ಲಿಸಿಲು ಐಐಎಸ್‍ಸಿಗೆ ಮನವಿ – ಮತ್ತಷ್ಟು ಅಧಿಕಾರಿಗಳ ತಲೆದಂಡ ಸಾಧ್ಯತೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಚಿರತೆ ದಾಳಿಯಿಂದ ಮೃತಪಟ್ಟವರಿಗೆ 15 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

    ಚಿರತೆ ದಾಳಿಯಿಂದ ಮೃತಪಟ್ಟವರಿಗೆ 15 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

    ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲದಿನಗಳಿಂದ ಚಿರತೆ (Leopard) ಆತಂಕ ಮನೆ ಮಾಡಿದೆ. ಬೆಂಗಳೂರು (Bengaluru) ನಗರ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಚಿರತೆ ಕಂಡುಬಂದಿದ್ದು, ಕೆಲವರಿಗೆ ದಾಳಿ ನಡೆಸಿ ಬಲಿ ಪಡೆದಿದೆ. ಇದೀಗ ಚಿರತೆ ದಾಳಿಯಲ್ಲಿ ಮೃತಪಟ್ಟವರಿಗೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) 15 ಲಕ್ಷ ರೂ. ಪರಿಹಾರ (Compensation) ಘೋಷಿಸಿದ್ದಾರೆ.

    ಚಿರತೆ ದಾಳಿಯಿಂದಾಗಿ ಮೈಸೂರಿನಲ್ಲಿ (Mysuru) ನಿನ್ನೆ ಎರಡನೇ ಬಲಿಯಾಗಿತ್ತು. ಈ ಬೆನ್ನಲ್ಲೇ ಚಿರತೆ ಕುರಿತಾಗಿ ಗಂಭೀರವಾಗಿ ಪರಿಗಣಿಸಿರುವ ಸಿಎಂ ಇಂದು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿ, ಚಿರತೆ ಹಾವಳಿಯನ್ನು ಅರಣ್ಯ ಇಲಾಖೆ (Forest Department) ಗಂಭೀರವಾಗಿ ಪರಿಗಣಿಸಿದ್ದೇವೆ. ಚಿರತೆಯನ್ನು ಜೀವಂತ ಹಿಡಿದು ಅರಣ್ಯಕ್ಕೆ ಬಿಡುವಂತೆ ಸೂಚಿಸಿದ್ದೇವೆ. ಚಿರತೆ ದಾಳಿಯಿಂದ ಮೃತಪಟ್ಟವರಿಗೆ 15 ಲಕ್ಷ ರೂ. ಪರಿಹಾರ ನೀಡಲಾಗುವುದು. ಈ ಹಿಂದೆ ಆನೆ ದಾಳಿಯಿಂದ ಮೃತಪಟ್ಟವರಿಗೆ ನೀಡುತ್ತಿದ್ದಂತೆ ಪರಿಹಾರ ಇದೀಗ ಚಿರತೆ ದಾಳಿಯಿಂದ ಮೃತಪಟ್ಟವರಿಗೂ ನೀಡುತ್ತಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಊರು ಬಿಡುವಂತೆ ರೌಡಿಗಳಿಗೆ ಸಿಸಿಬಿ ಖಡಕ್ ಸೂಚನೆ – ರಾಜಕೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ರೆ ಕ್ರಮದ ಎಚ್ಚರಿಕೆ

    ಮೊದಲು ಚಿರತೆ ಹಾವಳಿ ಕಾಡುಪಕ್ಕದಲ್ಲಿ ಅಲ್ಲಲ್ಲಿತ್ತು. ಈಗ ಬೆಂಗಳೂರು ಅಕ್ಕ ಪಕ್ಕವೇ ಹಾವಳಿ ಆಗ್ತಿದೆ. ಇದನ್ನು ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಚಿರತೆ ಹಿಡಿಯಲು ಬೋನ್ ಇಟ್ಟು ಕಾಯಲಾಗುತ್ತಿದೆ. ವಿಶೇಷ ತಂಡ ರಚಿಸಿ ಬದ್ಧತೆಯಿಂದ ಕಾರ್ಯಾಚರಣೆ ನಡೆಸಲು ಸೂಚಿಸಿದ್ದೇನೆ. ಎಲಿಫೆಂಟ್ ಕಾರಿಡಾರ್ ಸುತ್ತಲೂ ಚಿರತೆ ಇದೆ. ಕಾಡು ಬಿಟ್ಟು ಬಂದಿರುವ ಚಿರತೆಗಳನ್ನು ಹಿಡಿಯಲು ವಿಶೇಷ ತಂಡ ರಚಿಸಲು ಸೂಚಿಸಲಾಗಿದೆ. ಮೃತಪಟ್ಟ ಕುಟುಂಬದವರಿಗೆ ಆನೆ ದಾಳಿಯಲ್ಲಿ ಮೃತಪಟ್ಟವರಿಗೆ ಕೊಡುವ ಮಾದರಿಯಲ್ಲಿ 15 ಲಕ್ಷ ಪರಿಹಾರ ಕೊಡ್ತೇವೆ. ಇದನ್ನೂ ಓದಿ: ರೌಡಿಶೀಟರ್ ಬೆತ್ತನಗೆರೆ ಶಂಕರ ಹೆಸರು ಬದಲಾಯಿಸಿಕೊಂಡು ಬಿಜೆಪಿ ಸೇರ್ಪಡೆ

    ಇದೇ ಸಂದರ್ಭ ಮೈಸೂರಿನಲ್ಲಿ ಚಿರತೆ ದಾಳಿಯಿಂದ ಮೃತಪಟ್ಟಿದ್ದ ನರಸೀಪುರದ ಕೆಬ್ಬೇಹುಂಡಿ ಗ್ರಾಮದ ಯುವತಿ ಕುಟುಂಬಕ್ಕೆ ಸಿಎಂ 15 ಲಕ್ಷ ರೂ. ಪರಿಹಾರ ಘೋಷಿಸಿದರು.

    Live Tv
    [brid partner=56869869 player=32851 video=960834 autoplay=true]

  • ಅಂಗಾಂಗ ದಾನ ಮಾಡಿ 9 ಜೀವಗಳಿಗೆ ಬೆಳಕಾದ ರಕ್ಷಿತಾ ಕುಟುಂಬಕ್ಕೆ ಸರ್ಕಾರದಿಂದ 8 ಲಕ್ಷ ರೂ. ಪರಿಹಾರ

    ಅಂಗಾಂಗ ದಾನ ಮಾಡಿ 9 ಜೀವಗಳಿಗೆ ಬೆಳಕಾದ ರಕ್ಷಿತಾ ಕುಟುಂಬಕ್ಕೆ ಸರ್ಕಾರದಿಂದ 8 ಲಕ್ಷ ರೂ. ಪರಿಹಾರ

    ಚಿಕ್ಕಮಗಳೂರು: ಸಾವಿನಲ್ಲೂ ಸಾರ್ಥಕತೆ ಮೆರೆದ ಜಿಲ್ಲೆಯ ಕಡೂರು ತಾಲೂಕಿನ ಸೋಮನಹಳ್ಳಿ ತಾಂಡ್ಯಾದ ಪ್ರಥಮ ಪಿಯುಸಿ (PUC) ವಿದ್ಯಾರ್ಥಿನಿ ರಕ್ಷಿತಾ (Rakshitha) ಕುಟುಂಬಕ್ಕೆ ರಾಜ್ಯ ಸರ್ಕಾರ (Karnataka Government) ಎಂಟು ಲಕ್ಷ ರೂ. ಪರಿಹಾರ (Compensation) ಘೋಷಣೆ ಮಾಡಿದೆ.

    ಚಿಕ್ಕಮಗಳೂರು ನಗರದ ಸರ್ಕಾರಿ ಬಾಲಿಕಾ ಪದವಿ ಪೂರ್ವ ಕಾಲೇಜಿನಲ್ಲಿ ಫಸ್ಟ್ ಪಿಯುಸಿ ಓದುತ್ತಿದ್ದ 18 ವರ್ಷದ ಯುವತಿ ರಕ್ಷಿತಾ, ಐದು ದಿನಗಳ ಹಿಂದೆ ಸರ್ಕಾರಿ ಬಸ್‍ನಿಂದ (Bus) ಇಳಿಯುವಾಗ ಆಯಾ ತಪ್ಪಿ ಬಿದ್ದು ಮೆದುಳು ಸಂಪೂರ್ಣ ನಿಷ್ಕ್ರಿಯವಾಗಿತ್ತು (Brain Dead). ಕೂಡಲೇ ಆಸ್ಪತ್ರೆಗೆ ಸೇರಿಸಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಹಾಗಾಗಿ, ರಕ್ಷಿತಾ ಪೋಷಕರು ಆಕೆಯ ಸಾವಿನ ನೋವಿನಲ್ಲೂ ಆಕೆಯ ಅಂಗಾಂಗಗಳನ್ನು ದಾನ ಮಾಡಿದ್ದರು. ಇದನ್ನೂ ಓದಿ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವತಿ – ಕುಟುಂಬದ ನಿರ್ಧಾರಕ್ಕೆ ವ್ಯಾಪಕ ಮೆಚ್ಚುಗೆ

    ಆಕೆಯ ಒಂಬತ್ತು ಅಂಗಾಂಗಳಿಂದ 9 ಜನರ ಜೀವ ಉಳಿದಿದೆ. ಹಾಗಾಗಿ, ಸರ್ಕಾರ ಆಕೆಯ ಕುಟುಂಬಕ್ಕೆ ಪರಿಹಾರ ಎನ್ನುವುದಕ್ಕಿಂತ ಗೌರವಯುತವಾಗಿ ಎಂಟು ಲಕ್ಷ ರೂ. ಹಣವನ್ನು ನೀಡಿದೆ. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ರೂ. ತಾಂಡಾ ಅಭಿವೃದ್ಧಿ ನಿಗಮದಿಂದ 1 ಲಕ್ಷ ರೂ. ಹಾಗೂ ಉದ್ಯಮಶೀಲತೆ ಯೋಜನೆಯಡಿ 2 ಲಕ್ಷ ರೂ. ಹಣವನ್ನು ಸರ್ಕಾರ ಮಂಜೂರು ಮಾಡಿದೆ. ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಕುಡುಚಿ ಶಾಸಕ ಪಿ.ರಾಜೀವ್ (P. Rajeev) ಕಡೂರಿನ ಸೋಮನಹಳ್ಳಿ ತಾಂಡ್ಯಾದ ರಕ್ಷಿತಾ ಮನೆಗೆ ಭೇಟಿ ನೀಡಿ ತಾಂಡ ಅಭಿವೃದ್ಧಿ ನಿಗಮದ ಒಂದು ಲಕ್ಷ ರೂ. ಹಾಗೂ ಉದ್ಯಮಶೀಲತೆ ಯೋಜನೆಯಡಿಯ 2 ಲಕ್ಷ ಒಟ್ಟು ಮೂರು ಲಕ್ಷ ರೂ. ಹಣದ ಚೆಕ್ ನೀಡಲಿದ್ದಾರೆ. ಸರ್ಕಾರದ ಪ್ರತಿನಿಧಿಯಾಗಿ ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಮುಖ್ಯಮಂತ್ರಿ ಪರಿಹಾರ ನಿಧಿಯ 5 ಲಕ್ಷ ರೂ. ಚೆಕ್ ನೀಡಲಿದ್ದಾರೆ. ಇದನ್ನೂ ಓದಿ: ಗಾಂಜಾ ಮಿಶ್ರಿತ ಚಾಕ್ಲೇಟ್ ಮಾರಾಟ- ರಾಯಚೂರಿನಲ್ಲಿ ಅಬಕಾರಿ ಪೊಲೀಸರ ದಾಳಿ

    Live Tv
    [brid partner=56869869 player=32851 video=960834 autoplay=true]

  • ಮನೆಗೆ ನೀರು ನುಗ್ಗಿ ನಷ್ಟವಾದರೆ ಅದಕ್ಕೆ ಕಾರ್ಪೊರೇಷನ್ ಹೊಣೆ – 9 ಲಕ್ಷ ಪರಿಹಾರಕ್ಕೆ ಹೈಕೋರ್ಟ್ ಸೂಚನೆ

    ಮನೆಗೆ ನೀರು ನುಗ್ಗಿ ನಷ್ಟವಾದರೆ ಅದಕ್ಕೆ ಕಾರ್ಪೊರೇಷನ್ ಹೊಣೆ – 9 ಲಕ್ಷ ಪರಿಹಾರಕ್ಕೆ ಹೈಕೋರ್ಟ್ ಸೂಚನೆ

    ನವದೆಹಲಿ: ಸರಿಯಾದ ಚರಂಡಿಗಳನ್ನು ನಿರ್ಮಿಸಿ, ಮಳೆ ನೀರು ನಿಲ್ಲದಂತೆ ನೋಡಿಕೊಳ್ಳುವುದು ಮುನ್ಸಿಪಲ್ ಕಾರ್ಪೊರೇಷನ್‌ನ ಕರ್ತವ್ಯ. ಮಳೆ ನೀರು ಮನೆಗೆ ನುಗ್ಗಿ, ನಷ್ಟವಾದರೆ ಅದಕ್ಕೆ ಕಾರ್ಪೊರೇಷನ್ ಹೊಣೆ ಎಂದು ದೆಹಲಿ ಹೈಕೋರ್ಟ್ ಹೇಳಿದೆ. 12 ವರ್ಷ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಆದೇಶ ನೀಡಿದ ಕೋರ್ಟ್, ಅಧಿಕಾರಿಗಳ ವಿರುದ್ಧ ಚಾಟಿ ಬೀಸಿ 9 ಲಕ್ಷ ರೂ. ಪರಿಹಾರ ನೀಡುವಂತೆ ಸೂಚಿಸಿದೆ.

    2010 ರಲ್ಲಿ ದೆಹಲಿಯಲ್ಲಿ ಸುರಿದ ಭಾರೀ ಮಳೆಯಿಂದ ಚರಂಡಿ ನೀರು ಮನೆಗೆ ನುಗ್ಗಿ ಅಪಾರ ನಷ್ಟವಾಗಿತ್ತು. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿಗಳ ಕರ್ತವ್ಯ ಲೋಪ ಪ್ರಶ್ನಿಸಿ ಲೀಲಾ ಮಾಥುರ್ ಅವರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

    ಪಶ್ಚಿಮ ದೆಹಲಿಯಲ್ಲಿ ತಮ್ಮ ಮನೆ ನಿರ್ಮಿಸಿದಾಗ ಅದು ರಸ್ತೆಯ ಮಟ್ಟದಲ್ಲಿತ್ತು. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಹಲವು ಬಾರಿ ರಸ್ತೆ ಪುನರ್‌ನಿರ್ಮಾಣದ ನಂತರ ರಸ್ತೆಯ ಮಟ್ಟವು ಏರಿ, ಮನೆ ತಗ್ಗು ಪ್ರದೇಶದಲ್ಲಿ ಉಳಿಯುವಂತೆ ಅಧಿಕಾರಿಗಳು ಮಾಡಿದ್ದಾರೆ. ಇದರಿಂದ ಮಾನ್ಸೂನ್ ಮಳೆಯ ವೇಳೆ ಮನೆಗೆ ನೀರು ನುಗ್ಗಿದೆ. ಸಮಸ್ಯೆಯನ್ನು ಪರಿಹರಿಸಲು ಹಲವು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಗಮನ ಹರಿಸಲಿಲ್ಲ ಎಂದು ಅವರು ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದಾರೆ. ಇದನ್ನೂ ಓದಿ: SC-ST ಗ್ರಾಹಕರಿಗೆ ಉಚಿತ ವಿದ್ಯುತ್‌ ಅನುಷ್ಠಾನಕ್ಕೆ ಹೊಸ ಆ್ಯಪ್‌

    ಇದಕ್ಕೆ ಪ್ರತಿವಾದ ಮಂಡಿಸಿದ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್, ನೀರಿನ ಚರಂಡಿಗಳು ಮುಚ್ಚಿಹೋಗಿರುವುದರಿಂದ ಎಂಸಿಡಿಯಿಂದ ಏನನ್ನೂ ಮಾಡಲು ಸಾಧ್ಯವಿಲ್ಲ. ಹೀಗಾಗಿ ಕರ್ತವ್ಯ ನಿರ್ವಹಿಸುವಲ್ಲಿ ಶೋಚನೀಯವಾಗಿ ಸಂಸ್ಥೆ ವಿಫಲವಾಗಿದೆ. ಒಂದರ ಮೇಲೊಂದರಂತೆ ರಸ್ತೆಗಳನ್ನು ಹಾಕಿದ್ದು, ಇದು ರಸ್ತೆಗಳ ಎತ್ತರವನ್ನು ಹೆಚ್ಚಿಸಿದೆ. ಎಂಸಿಡಿಯು ಈ ಪ್ರದೇಶದಲ್ಲಿ ಮಳೆ ನೀರು ಹರಿದು ಹೋಗಲು ಸರಿಯಾದ ಮಳೆ ನೀರಿನ ಚರಂಡಿಗಳಿವೆ ಎಂದು ಖಚಿತಪಡಿಸಿಲ್ಲ ಎಂದು ಕೋರ್ಟ್ ಗಮನಕ್ಕೆ ತಂದಿದೆ.

    ಪ್ರಕರಣ ವಿಚಾರಣೆ ಬಳಿಕ ಆದೇಶ ನೀಡಿದ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ದ್ವಿ ಸದಸ್ಯ ಪೀಠ, ನಾಗರಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಖರ ಉದ್ದೇಶಕ್ಕಾಗಿ ರಚಿತವಾದ ಮುನ್ಸಿಪಲ್ ಕಾರ್ಪೊರೇಷನ್ ಜವಾಬ್ದಾರಿಯಿಂದ ನುಣುಚಿಕೊಳ್ಳುವಂತಿಲ್ಲ. ಎಂಸಿಡಿ ತನ್ನ ಕಾರ್ಯವೈಖರಿಯಲ್ಲಿ ತೀವ್ರ ನಿರ್ಲಕ್ಷ್ಯ ವಹಿಸಿರುವುದರಿಂದ, ಮೇಲ್ಮನವಿದಾರರಿಗೆ ಸಂಪೂರ್ಣ ನ್ಯಾಯ ಒದಗಿಸಬೇಕು. ಹೀಗಾಗಿ ಪರಿಹಾರ ಹಣವನ್ನು 3 ಲಕ್ಷದಿಂದ 9 ಲಕ್ಷ ರೂ.ಗೆ ಏರಿಸಬೇಕು ಎಂದು ಕೋರ್ಟ್ ಆದೇಶ ನೀಡಿತು. ಇದನ್ನೂ ಓದಿ: ಮೈಸೂರು ಮೇಯರ್, ಉಪ ಮೇಯರ್ ಎಲೆಕ್ಷನ್: ಬಿಜೆಪಿ ಬಾಯಿಗೆ ಬಿತ್ತು ಡಬಲ್ ಲಡ್ಡು!

    Live Tv
    [brid partner=56869869 player=32851 video=960834 autoplay=true]