ಒರು ಅಡಾರ್ ಲವ್ ಸೇರಿದಂತೆ ಸಾಕಷ್ಟು ಸೂಪರ್ ಹಿಟ್ ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಮಲಯಾಳಂ (Malayalam)ನಿರ್ದೇಶಕ ಒಮರ್ ಲಲ್ಲು (Omar Lulu) ವಿರುದ್ಧ ಅತ್ಯಾಚಾರ ದೂರು ದಾಖಲಾಗಿದೆ. ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಎರ್ನಾಕುಲಂ ಪೊಲೀಸ್ ಠಾಣೆಯಲ್ಲಿ ದೂರು (Complaint) ದಾಖಲಾಗಿದೆ.
ಸಿನಿಮಾದಲ್ಲಿ ಅವಕಾಶ ಕೊಡುವುದಾಗಿ ನಿರ್ದೇಶಕರು ತಮಗೆ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಮಹಿಳೆಯೊಬ್ಬರು ದೂರು ದಾಖಲು ಮಾಡಿದ್ದರು. ಈ ಪ್ರಕರಣ ಈಗ ನಿಡುಂಬಸ್ಸೇರಿ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಅವಕಾಶ ಕೊಡುವ ನೆಪದಲ್ಲಿ ನನ್ನೊಂದಿಗೆ ನಿರ್ದೇಶಕ ಪ್ರವಾಸ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಪ್ರಕರಣವನ್ನು ನಿರ್ದೇಶಕರು ತಳ್ಳಿ ಹಾಕಿದ್ದಾರೆ. ನನ್ನ ಘನತೆಯನ್ನು ಹಾಳು ಮಾಡುವುದಕ್ಕಾಗಿ ಈ ನಟಿ ಸುಳ್ಳು ಆರೋಪ ಮಾಡಿ, ದೂರು ನೀಡಿದ್ದಾರೆ. ಅವರಿಗೆ ಅವಕಾಶ ನೀಡಲಿಲ್ಲ ಎನ್ನುವ ಕಾರಣವೂ ಇದೆ ಎಂದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲಲ್ಲು ಅವರಿಗೆ ಮಧ್ಯಂತರ ಜಾಮೀನು ಕೂಡ ಮಂಜೂರಾಗಿದೆ.
ತೆಲುಗು ಸೇರಿದಂತೆ ನಾನಾ ಭಾಷೆಯ ಸಿನಿಮಾ ಮತ್ತು ವೆಬ್ ಸಿರೀಸ್ ನಲ್ಲಿ ನಟಿಸಿರುವ ದೇವಿಯಾನಿ ಶರ್ಮಾ (Devyani Sharma) ಅವರಿಗೆ ವಿಪರೀತ ತೊಂದರೆ ಕೊಡುತ್ತಿದ್ದಾರಂತೆ. ಅವರಿಂದ ತಪ್ಪಿಸಿಕೊಳ್ಳೋಕೆ ಆಗದೇ ಅವರು ಮೂರು ಬಾರಿ ಮುಂಬೈ ಪೊಲೀಸರಿಗೂ ದೂರು (Complaint) ನೀಡಿದ್ದಾರೆ. ಈ ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಶರ್ಮಾ ಸುದೀರ್ಘವಾದ ಪೋಸ್ಟ್ ಮಾಡಿದ್ದಾರೆ.
ಸೋಷಿಯಲ್ ಮೀಡಿಯಾ ಮೂಲಕ ತಮ್ಮ ಫೋನ್ ಅನ್ನು ಯಾರೋ ಹ್ಯಾಕ್ ಮಾಡಿದ್ದು, ತಮ್ಮ ಖಾಸಗಿ ಮಾಹಿತಿಯನ್ನು ಪಡೆದಿದ್ದಾರಂತೆ. ಅದನ್ನು ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎನ್ನುವುದು ನಟಿಯ ಅಳಲು. ಈ ಕುರಿತಂತೆ ದೂರು ದಾಖಲಾಗಿದ್ದರೂ, ಯಾವುದೇ ಪ್ರಯೋಜನವಾಗಿಲ್ಲವಂತೆ.
ಅವತ್ತು ಫೋನ್ ಹ್ಯಾಕ್ ಮಾಡಿದ್ದರು. ಈಗ ವಾಟ್ಸಪ್ ಕೂಡ ಹ್ಯಾಕ್ ಆಗಿದೆಯಂತೆ. ಯಾರಾದರೂ ನನ್ನ ಅಕೌಂಟ್ ನಿಂದ ಸಂದೇಶಗಳನ್ನು ಕಳುಹಿಸಿದರೆ ಅದಕ್ಕೆ ನಾನು ಜವಾಬ್ದಾರಳು ಅಲ್ಲ ಎಂದಿದ್ದಾರೆ. ಈ ದುರುಳರ ಕಾರಣದಿಂದಾಗಿ ತಮಗೆ ನಿದ್ದೆ ಕೂಡ ಬರುತ್ತಿಲ್ಲವೆಂದು ಅವರು ಬರೆದುಕೊಂಡಿದ್ದಾರೆ.
ಇದೇ ಏಪ್ರಿಲ್ 2 ರಂದು ರಾತ್ರಿ ಊಟ ಮುಗಿಸ್ಕೊಂಡು ಕಾರಿನತ್ತ ಬಂದಿದ್ದ ನಟಿ ಹರ್ಷಿಕಾ ಪೂಣಚ್ಚ (Harshika Poonacha) ಹಾಗೂ ನಟ ಭುವನ್ (Bhuvan) ಮೇಲೆ ಅಪರಿಚಿತರು ಹಲ್ಲೆಗೆ ಯತ್ನಿಸಿ, ಚಿನ್ನಾಭರಣವನ್ನು ದೋಚುವ ಪ್ರಯತ್ನ ಮಾಡಿದ್ದರು ಎಂದು ಆರೋಪ ಮಾಡಲಾಗುತ್ತಿದೆ. ಈ ಕುರಿತಂತೆ ಪೊಲೀಸರಿಗೆ ಮಾಹಿತಿ ನೀಡಿದ್ದರೂ, ಹರ್ಷಿಕಾ ದೂರನ್ನು (Complaint) ಯಾಕೆ ನೀಡಲಿಲ್ಲ ಎನ್ನುವ ಪ್ರಶ್ನೆ ಕೂಡ ಎದ್ದಿದೆ. ಈ ಕುರಿತಂತೆ ಹರ್ಷಿಕಾ ಮಾತನಾಡಿದ್ದಾರೆ.
ಕರಾಮಾ ರೆಸ್ಟೋರೆಂಟ್ ಗೆ ರೆಗ್ಯೂಲರ್ ಆಗಿ ಊಟಕ್ಕೆ ಹೋಗ್ತಿದ್ವಿ. ಎಪ್ರಿಲ್ 2 ರ ರಾತ್ರಿ ಊಟ ಮುಗಿಸ್ಕೊಂಡು ವಾಪಾಸ್ಸಾಗುವಾಗ ಘಟನೆ ನಡೆಯಿತು. ದೇಖೆ ಜಾವ್ ಅಂತಾ ಪಾರ್ಕಿಂಗ್ ಸ್ಲಾಟ್ ನಲ್ಲಿ ಕಿರಿಕ್ ಶುರುವಾಯಿತು. ಮೂವರು ಅಪರಿಚಿತ ವ್ಯಕ್ತಿಗಳಿಂದ ಹಲ್ಲೆಗೆ ಯತ್ನ ನಡೆಯಿತು. ಭುವನ್ ಕತ್ತಿಗೆ ಕೈ ಹಾಕಿ ಚೈನ್ ಎಳೆಯುವಂತ ಪ್ರಯತ್ನ ಮಾಡಿದರು ಅಲ್ಲಿದ್ದವರು. ಕಿರಿಕ್ ನೆಪದಲ್ಲಿ ದರೋಡೆಗೆ ಕೂಡ ಯತ್ನ ಮಾಡಲಾಗಿದೆ ಎಂದಿದ್ದಾರೆ.
ಮುಂದುವರೆದು ಮಾತನಾಡಿದ ಹರ್ಷಿಕಾ, ರಾತ್ರಿ ಆದ್ದರಿಂದ ಹೆಣ್ಮಕ್ಕಳು ಗಾಡಿಲಿ ಇದ್ದ ಕಾರಣ ಕಂಪ್ಲೇಂಟ್ ಕೊಡೋಕೆ ಮುಂದಾಗ್ಲಿಲ್ಲ. ನಮ್ ಮೇಲೆನೇ ಈ ತರ ಆದ್ರೆ ಸಾಮಾನ್ಯರ ಪರಿಸ್ಥಿತಿ ಹೇಗೆ ಅನ್ನೋ ಪ್ರಶ್ನೆ ಹುಟ್ಕೊಳ್ಳುತ್ತೆ. ಭುವನ್ ಕೈಗೆ ಗಾಯ ಆಗಿದೆ. ಚಿಕಿತ್ಸೆ ತಗೊಂಡಿದ್ದಾರೆ. ಎಲ್ಲರಿಗೂ ಈ ಬಗ್ಗೆ ಮಾಹಿತಿ ಇರಲಿ. ದರೋಡೆಗೆ ಹೀಗೂ ಪ್ಲಾನ್ ಮಾಡ್ತಾರೆ ಅಂತ ತಿಳಿಸೋಕೆ ಪೋಸ್ಟ್ ಹಾಕಿದೆ. ಉರ್ದುದಲ್ಲಿ ಎಲ್ಲಿಂದ ಬಂದಿದ್ದೀರಾ ಅಂತಾ ಹೇಳ್ತಾರೆ. ನಾವು ಯಾರಿಗೂ ಬೈದಿಲ್ಲ. ಕೆಟ್ಟದಾಗಿ ಮಾತಾಡಿಲ್ಲ. ನಮ್ ಕರ್ನಾಟಕದಲ್ಲಿ ನಾವು ಕನ್ನಡ ಮಾತಾಡೋದೇ ತಪ್ಪಾ? ಎನ್ನುವ ಪ್ರಶ್ನೆ ಅವರದ್ದು.
ಕಾರಿನಲ್ಲಿ ಹೆಣ್ಣು ಮಕ್ಕಳು ಇದ್ದ ಕಾರಣದಿಂದಾಗಿ ಮತ್ತು ಪೊಲೀಸರು ಸರಿಯಾಗಿ ಸ್ಪಂದಿಸಲಿಲ್ಲ ಎನ್ನುವ ಕಾರಣದಿಂದಾಗಿ ದೂರನ್ನು ನೀಡಲಿಲ್ಲ ಎಂದು ಇನ್ಸ್ಟಾದಲ್ಲಿ ಬರೆದುಕೊಂಡು ಪೋಸ್ಟ್ ನಲ್ಲಿ ಉಲ್ಲೇಖಿಸಿದ್ದಾರೆ ಹರ್ಷಿಕಾ.
ಬಿಗ್ ಬಾಸ್ ಸೀಸನ್ 17ರ ವಿನ್ನರ್ ಹಾಗೂ ಖ್ಯಾತ ಸ್ಟ್ಯಾಂಡ್ ಅಪ್ ಕಾಮಿಡಿಯನ್ ಮುನಾವರ್ ಫಾರೂಖಿ (Munawar Farooqui) ಮೇಲೆ ಮೊಟ್ಟೆ ಎಸೆದಿರುವ (Egg throwing) ಘಟನೆ ಮುಂಬೈನಲ್ಲಿ ನಡೆದಿದೆ. ಮೊಟ್ಟೆ ಎಸೆದಿರುವ ರೆಸ್ಟೊರೆಂಟ್ ಮಾಲೀಕನ ಮೇಲೆ ಕೇಸು ದಾಖಲಾಗಿದೆ. ಗಲಾಟೆಯಲ್ಲಿ ಮುನಾವರ್ ನನ್ನು ಸೆಕ್ಯೂರಿಟಿ ಸಿಬ್ಬಂದಿ ಪಾರು ಮಾಡಿದ್ದಾರೆ.
ಮುಂಬೈನ (Mumbai) ಮೊಹಮ್ಮದ್ ಅಲಿ ರಸ್ತೆಯಲ್ಲಿರುವ ಮಿನಾರಾ ಮಸೀದಿ ಪ್ರದೇಶದಲ್ಲಿದ್ದ ರೆಸ್ಟೋರೆಂಟ್ ವೊಂದಕ್ಕೆ ಇಫ್ತಾರಿಗೆ ಆಹ್ವಾನಿಸಿದ್ದರು. ಆದರೆ, ಅವರು ನಂತರ ಬೇರೊಂದು ಹೋಟೆಲ್ ಅನ್ನು ಆಯ್ಕೆ ಮಾಡಿಕೊಂಡರಂತೆ. ಇದರಿಂದ ಕುಪಿತಗೊಂಡ ರೆಸ್ಟೋರೆಂಟ್ ಮಾಲೀಕ ಮುನಾವರ್ ಮೇಲೆ ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾನೆ.
ತನ್ನ ಮೇಲೆ ಮೊಟ್ಟೆ ಬಿದ್ದ ಮೇಲೆ ಮಾಲೀಕರ ಮೇಲೆ ಮುನಾವರ್ ಕೂಗಾಡಿರುವ ದೃಶ್ಯ ಅಲ್ಲಿದ್ದವರ ಮೊಬೈಲ್ ನಲ್ಲಿ ಸೆರೆಯಾಗಿದೆ. ಘಟನೆಯ ಹಿನ್ನೆಲೆಯಲ್ಲಿ ಆರು ಮಂದಿ ವಿರುದ್ಧ ಪೈದೋನಿ ಪೊಲೀಸರು ಪ್ರಕರಣವನ್ನು (Complaint) ದಾಖಲಿಸಿದ್ದಾರೆ. ನಂತರ ಮುನಾವರ್ ಅಲ್ಲಿ ನೆರೆದಿದ್ದವರ ಜೊತೆ ಸೆಲ್ಫಿಗೆ ಪೋಸ್ ಕೂಡ ನೀಡಿದ್ದಾರೆ.
ನಿರ್ಮಾಪಕಿ ಗೀತಾ ಶಿವರಾಜ್ ಕುಮಾರ್ (Geetha Shivaraj Kumar) ವಿರುದ್ಧ ಚುನಾವಣೆ ಆಯೋಗಕ್ಕೆ ಬಿಜೆಪಿ (BJP) ಕರ್ನಾಟಕ ದೂರು ನೀಡಿದೆ. ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಗೀತಾ ಶಿವರಾಜ್ ಕುಮಾರ್ ಅವರು ಚುನಾವಣೆ ಸಮಯದಲ್ಲಿ ತಮ್ಮ ಸಿನಿಮಾದ ಜಾಹೀರಾತನ್ನು ನೀಡಿರುವುದರಿಂದ ಅದನ್ನು ಚುನಾವಣೆ ವೆಚ್ಚಕ್ಕೆ ಸೇರಿಸುವಂತೆ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.
ಶಿವರಾಜ್ ಕುಮಾರ್ ನಟನೆಯ ಭೈರತಿ ರಣಗಲ್ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ ಗೀತಾ. ಯುಗಾದಿ ಸಂದರ್ಭದಲ್ಲಿ ಈ ಸಿನಿಮಾದ ಜಾಹೀರಾತು ಅನ್ನು ಎಲ್ಲ ದಿನಪತ್ರಿಕೆಗಳಿಗೆ ನೀಡಲಾಗಿತ್ತು. ಜಾಹೀರಾತಿಗೆ ನೀಡಿದ ಹಣದ ಖರ್ಚನ್ನು ಚುನಾವಣೆ ವೆಚ್ಚದಲ್ಲಿ ಸೇರಿಸುವಂತೆ ಶಿಫಾರಸ್ಸು ಮಾಡಬೇಕು ಎಂದು ದೂರಿನಲ್ಲಿ (Complaint) ಹೇಳಲಾಗಿದೆ.
ಈ ಹಿಂದೆ ಶಿವರಾಜ್ ಕುಮಾರ್ ಚಿತ್ರಗಳನ್ನು ಮತ್ತು ಜಾಹೀರಾತುಗಳನ್ನು ತಡೆ ಹಿಡಿಯುವಂತೆ ಇದೇ ಚುನಾವಣೆ ಆಯೋಗಕ್ಕೆ ದೂರು ನೀಡಲಾಗಿತ್ತು. ಆದರೆ, ತಡೆಹಿಡಿಯಲು ಆಯೋಗ ನಿರಾಕರಿಸಿತ್ತು. ಈಗ ಮತ್ತೊಂದು ದೂರನ್ನು ಬಿಜೆಪಿ ನೀಡಿದೆ.
ಗಜಪಡೆ (Gajapade) ಹೆಸರಿನ ಸೋಷಿಯಲ್ ಮೀಡಿಯಾ ಖಾತೆಯ ಮೂಲಕ ನಿರ್ಮಾಪಕಿ, ಪುನೀತ್ ರಾಜ್ ಕುಮಾರ್ ಬಗ್ಗೆ ನಿಂದನೆ ಪೋಸ್ಟ್ ಮಾಡಿರುವ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಸಿಎಂ ಸಿದ್ಧರಾಮಯ್ಯ ಸೇರಿದಂತೆ ಹಲವರು ಈ ನಡೆಯನ್ನು ಖಂಡಿಸಿದ್ದಾರೆ. ಜೊತೆಗೆ ಅಪ್ಪು ಫ್ಯಾನ್ಸ್ ಕಾನೂನಾತ್ಮಕ ಹೋರಾಟಕ್ಕೂ ಮುಂದಾಗಿದ್ದಾರೆ. ಸದ್ಯ ಬಿಟಿಎಂ ಲೇ ಔಟ್, ಜೆ ಪಿ ನಗರ ಹಾಗೂ ತಲಘಟ್ಟಪುರದ ಪೊಲೀಸ್ ಠಾಣೆಯಲ್ಲಿ ಗಜಪಡೆ ಖಾತೆಯ ವಿರುದ್ಧ ದೂರು (Complaint) ನೀಡಲಾಗಿದೆ.
ಅಶ್ವಿನಿ (Ashwini Puneeth Rajkumar) ಬಗ್ಗೆ ಅವಹೇಳನಕಾರಿ ಪೋಸ್ಟ್ (Post) ಮಾಡಿದವರ ವಿರುದ್ಧ ಕ್ರಮಕ್ಕೆ ದಿನದಿಂದ ದಿನಕ್ಕೆ ಒತ್ತಡ ಹೆಚ್ಚಾಗುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಈಗಾಗಲೇ ವಿರೋಧಿ ಪೋಸ್ಟ್ ಗಳು ಹರಿದಾಡುತ್ತಿವೆ. ಜೊತೆಗೆ ಸಿನಿಮಾ ರಂಗದ ಅನೇಕರು ಪೋಸ್ಟ್ ವಿರುದ್ಧ ಧ್ವನಿ ಎತ್ತಿದ್ದಾರೆ. ಈಗ ಅಪ್ಪು ಫ್ಯಾನ್ಸ್ ಗೃಹ ಸಚಿವರನ್ನು ಭೇಟಿ ಮಾಡಿ, ಕ್ರಮಕ್ಕಾಗಿ ಒತ್ತಾಯ ಮಾಡಿದ್ದಾರೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಕೂಡ ಕಠಿಣ ಕ್ರಮದ ಮಾತುಗಳನ್ನು ಆಡಿದ್ದಾರೆ.
ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ಈಗಾಗಲೇ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಆರ್‌ಸಿಬಿ ಸೋಲಿಗೆ ಅಶ್ವಿನಿ ಅವರೇ ಕಾರಣ ಎಂದು ನಿಂದಿಸಿದವರಿಗೆ ನವರಸನಾಯಕ ಜಗ್ಗೇಶ್ ಕೂಡ ಸಾಮಾಜಿಕ ಜಾಲತಾಣದಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ಹೆಣ್ಣುಕುಲಕ್ಕೆ ಅಗೌರವ ತೋರಿಸಿದರೆ ಉದ್ಧಾರ ಆಗ್ತಾರಾ ಎಂದು ಜಗ್ಗೇಶ್ (Jaggesh) ಹಿಡಿಶಾಪ ಹಾಕಿದ್ದಾರೆ.
ಪುನೀತನ ಮಡದಿ ಅಣಕಿಸಿದ ನತದೃಷ್ಟರೆ ನಿಮಗೂ ತಾಯಿ ಇರಬೇಕು. ತಾಯಿ ಬೆಲೆ ಗೊತ್ತಿರಬೇಕು. ಒಂದು ವೇಳೆ, ತಾಯಿ ಮತ್ತು ಹೆಣ್ಣಿಗೆ ಗೌರವ ಕೊಡಲ್ಲ ಎಂದರೆ ಖಂಡಿತಾ ಅಂಥವರು ಮನುಕುಲಕ್ಕೆ ಅನರ್ಹ. ಪುನೀತನ ಮಡದಿ ಅನಾಥಳಲ್ಲ ತನ್ನ ಪ್ರೀತಿಸುತ್ತಿದ್ದ ಕೋಟ್ಯಾಂತರ ಅಭಿಮಾನಿಗಳ ಬಳುವಳಿ ಕೊಟ್ಟು ಹೋಗಿದ್ದಾನೆ ಎಂದು ಜಗ್ಗೇಶ್ ಅಪ್ಪು ಅಭಿಮಾನಿಗಳ ಕಡೆ ತೋರಿಸಿದ್ದಾರೆ. ಹೆಣ್ಣು ಕುಲಕ್ಕೆ ನೋವು ಕೊಟ್ಟವ ಉದ್ಧಾರ ಆದ ಇತಿಹಾಸವಿಲ್ಲ ಎಂದು ಜಗ್ಗೇಶ್ ಅಶ್ವಿನಿ ಪರ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಜಗ್ಗೇಶ್ ಪ್ರತಿಕ್ರಿಯೆ ಫ್ಯಾನ್ಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಳೆದ ಮಾರ್ಚ್ ತಿಂಗಳು 19ನೇ ತಾರೀಕಿನಂದು ಬೆಂಗಳೂರಿನ ಆರ್‌ಸಿಬಿ ಅನ್‌ಬಾಕ್ಸ್ ಇವೆಂಟ್‌ನಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರನ್ನು ಆಹ್ವಾನಿಸಿದ್ದರು. ಅದರಂತೆ ಅಶ್ವಿನಿ ಅವರು ಆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದಾದ ನಂತರ ಐಪಿಎಲ್ ಪ್ರಾರಂಭವಾಗಿ ಆರ್‌ಸಿಬಿ ತಂಡ ಕೆಲ ಪಂದ್ಯಗಳಲ್ಲಿ ಸೋತಿದೆ. ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ ಗಜಪಡೆ ಹೆಸರಿನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ, ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಆರ್‌ಸಿಬಿ ಕಾರ್ಯಕ್ರಮಕ್ಕೆ ಬಂದಿದ್ದಕ್ಕೆ ತಂಡ ಸೋತಿದೆ ಎಂದು ನಿಂದಿಸಲಾಗಿದೆ. ಅಭಿಮಾನಿಗಳಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ ‘ಸುದೀಪ್ ಅಭಿಮಾನಿ’ ಎಂದು ಖಾತೆಯ ಹೆಸರು ಬದಲಿಸಿದ್ದಾರೆ. ಇದರ ವಿರುದ್ಧ ಅಪ್ಪು ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಕಾನೂನು ಸಮರ ಸಾರಿದ್ದಾರೆ.
ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ (Ashwini Puneeth Rajkumar) ಬಗ್ಗೆ ಅವಹೇಳನಕಾರಿ ಪೋಸ್ಟ್ (Post) ಮಾಡಿದವರ ವಿರುದ್ಧ ಕ್ರಮಕ್ಕೆ ದಿನದಿಂದ ದಿನಕ್ಕೆ ಒತ್ತಡ ಹೆಚ್ಚಾಗುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಈಗಾಗಲೇ ವಿರೋಧಿ ಪೋಸ್ಟ್ ಗಳು ಹರಿದಾಡುತ್ತಿವೆ. ಜೊತೆಗೆ ಸಿನಿಮಾ ರಂಗದ ಅನೇಕರು ಪೋಸ್ಟ್ ವಿರುದ್ಧ ಧ್ವನಿ ಎತ್ತಿದ್ದಾರೆ. ಈಗ ಅಪ್ಪು ಫ್ಯಾನ್ಸ್ ಗೃಹ ಸಚಿವರನ್ನು ಭೇಟಿ ಮಾಡಿ, ಕ್ರಮಕ್ಕಾಗಿ ಒತ್ತಾಯ ಮಾಡಿದ್ದಾರೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಕೂಡ ಕಠಿಣ ಕ್ರಮದ ಮಾತುಗಳನ್ನು ಆಡಿದ್ದಾರೆ.
ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ಈಗಾಗಲೇ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಆರ್‌ಸಿಬಿ ಸೋಲಿಗೆ ಅಶ್ವಿನಿ ಅವರೇ ಕಾರಣ ಎಂದು ನಿಂದಿಸಿದವರಿಗೆ ನವರಸನಾಯಕ ಜಗ್ಗೇಶ್ ಕೂಡ ಸಾಮಾಜಿಕ ಜಾಲತಾಣದಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ಹೆಣ್ಣುಕುಲ್ಲಕ್ಕೆ ಅಗೌರವ ತೋರಿಸಿದರೆ ಉದ್ಧಾರ ಆಗ್ತಾರಾ ಎಂದು ಜಗ್ಗೇಶ್ (Jaggesh) ಹಿಡಿಶಾಪ ಹಾಕಿದ್ದಾರೆ.
ಪುನೀತನ ಮಡದಿ ಅಣಕಿಸಿದ ನತದೃಷ್ಟರೆ ನಿಮಗೂ ತಾಯಿ ಇರಬೇಕು. ತಾಯಿ ಬೆಲೆ ಗೊತ್ತಿರಬೇಕು. ಒಂದು ವೇಳೆ, ತಾಯಿ ಮತ್ತು ಹೆಣ್ಣಿಗೆ ಗೌರವ ಕೊಡಲ್ಲ ಎಂದರೆ ಖಂಡಿತಾ ಅಂಥವರು ಮನುಕುಲಕ್ಕೆ ಅನರ್ಹ. ಪುನೀತನ ಮಡದಿ ಅನಾಥಳಲ್ಲ ತನ್ನ ಪ್ರೀತಿಸುತ್ತಿದ್ದ ಕೋಟ್ಯಾಂತರ ಅಭಿಮಾನಿಗಳ ಬಳುವಳಿ ಕೊಟ್ಟು ಹೋಗಿದ್ದಾನೆ ಎಂದು ಜಗ್ಗೇಶ್ ಅಪ್ಪು ಅಭಿಮಾನಿಗಳ ಕಡೆ ತೋರಿಸಿದ್ದಾರೆ. ಹೆಣ್ಣು ಕುಲಕ್ಕೆ ನೋವು ಕೊಟ್ಟವ ಉದ್ಧಾರ ಆದ ಇತಿಹಾಸವಿಲ್ಲ ಎಂದು ಜಗ್ಗೇಶ್ ಅಶ್ವಿನಿ ಪರ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಜಗ್ಗೇಶ್ ಪ್ರತಿಕ್ರಿಯೆ ಫ್ಯಾನ್ಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಳೆದ ಮಾರ್ಚ್ ತಿಂಗಳು 19ನೇ ತಾರೀಕಿನಂದು ಬೆಂಗಳೂರಿನ ಆರ್‌ಸಿಬಿ ಅನ್‌ಬಾಕ್ಸ್ ಇವೆಂಟ್‌ನಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರನ್ನು ಆಹ್ವಾನಿಸಿದ್ದರು. ಅದರಂತೆ ಅಶ್ವಿನಿ ಅವರು ಆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದಾದ ನಂತರ ಐಪಿಎಲ್ ಪ್ರಾರಂಭವಾಗಿ ಆರ್‌ಸಿಬಿ ತಂಡ ಕೆಲ ಪಂದ್ಯಗಳಲ್ಲಿ ಸೋತಿದೆ. ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ ಗಜಪಡೆ ಹೆಸರಿನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ, ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಆರ್‌ಸಿಬಿ ಕಾರ್ಯಕ್ರಮಕ್ಕೆ ಬಂದಿದ್ದಕ್ಕೆ ತಂಡ ಸೋತಿದೆ ಎಂದು ನಿಂದಿಸಲಾಗಿದೆ. ಅಭಿಮಾನಿಗಳಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ ‘ಸುದೀಪ್ ಅಭಿಮಾನಿ’ ಎಂದು ಖಾತೆಯ ಹೆಸರು ಬದಲಿಸಿದ್ದಾರೆ. ಇದರ ವಿರುದ್ಧ ಅಪ್ಪು ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಕಾನೂನು ಸಮರ ಸಾರಿದ್ದಾರೆ.
ಅಶ್ವಿನಿ ಪುನೀತ್ ರಾಜ್‌ಕುಮಾರ್ ಬಗ್ಗೆ ಬರೆದ ಕೀಳು ಮಟ್ಟದ ಪೋಸ್ಟ್‌ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಅದರಲ್ಲೂ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮಿಳಿನ ಹೆಸರಾಂತ ನಟಿ, ದಕ್ಷಿಣದ ತಾರೆ ಶರಣ್ಯ (Saranya Ponvannan) ವಿರುದ್ಧ ಚೆನ್ನೈನ ವಿರುಂಭಾಗಕಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತಾಯಿ ಪಾತ್ರಗಳ ಮೂಲಕ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿರುವ ಶರಣ್ಯ ಪೊನ್ವನನ್ ವಿರುದ್ಧ ದೂರು (Complaint) ದಾಖಲಾಗಿದ್ದಕ್ಕೆ ಅಭಿಮಾನಿಗಳಿಗೆ ಸಹಜವಾಗಿ ಆತಂಕವಾಗಿದೆ.
ಶರಣ್ಯ ವಿರುದ್ಧ ದೂರು ದಾಖಲಿಸಿದವರು, ಅವರ ಪಕ್ಕದ ಮನೆಯ ಮಹಿಳೆ ಎನ್ನುವುದು ಅಚ್ಚರಿಯ ಸಂಗತಿ. ಪಾರ್ಕಿಂಗ್ ವಿಷಯವಾಗಿ ಪಕ್ಕದ ಮನೆಯವರೊಂದಿಗೆ ಶರಣ್ಯ ಗಲಾಟೆ ಮಾಡಿದ್ದಾರಂತೆ ಜೊತೆಗೆ ಮಹಿಳೆಗೆ ಕೊಲೆ ಬೆದರಿಕೆ (Death threat) ಹಾಕಿದ್ದಾರೆ ಎಂದು ದೂರಿನಲ್ಲಿ ದಾಖಲಾಗಿದೆ.
ಶ್ರೀದೇವಿ ಅನ್ನುವವರ ಜೊತೆ ಪದೇ ಪದೇ ಶರಣ್ಯ ಪಾರ್ಕಿಂಗ್ ವಿಚಾರವಾಗಿ ಗಲಾಟೆ ಮಾಡುತ್ತಿದ್ದರಂತೆ. ಈಗ ಕೊಲೆ ಬೆದರಿಕೆ ಕೂಡ ಹಾಕಿದ್ದಾರೆ ಎಂದು ದೂರು ನೀಡಿದ್ದಾರೆ. ಅದಕ್ಕೆ ಸಾಕ್ಷಿ ಎನ್ನುವಂತೆ ಸಿಸಿಟಿವಿ ದೃಶ್ಯಾವಳಿಗಳನ್ನೂ ನೀಡಿದ್ದಾರಂತೆ. ಸದ್ಯ ಪೊಲೀಸರು ಈ ಕುರಿತಂತೆ ವಿಚಾರಣೆ ನಡೆಸುತ್ತಿದ್ದಾರೆ.
ಕನ್ನಡದ ಹೆಸರಾಂತ ಕಾಮಿಡಿ ಕಲಾವಿದರ ಶಿವರಾಜ್ ಕೆ.ಆರ್ ಪೇಟೆ (Shivaraj KR Pete) ವಿರುದ್ಧ ಸುಬ್ರಮಣ್ಯ ನಗರ ಪೊಲೀಸ್ (Police) ಠಾಣೆಯಲ್ಲಿ ದೂರು ದಾಖಲಾಗಿದೆ. ಶಾರದಾ ಬಾಯಿ ಎಂಬ ಮಹಿಳೆಗೆ ಶಿವರಾಜ್ ಕೆ.ಆರ್ ಪೇಟೆ ಅವಾಚ್ಯ ಪದದಿಂದ ನಿಂದಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ನಾನು ಮಾರ್ಚ್ 30ರ ರಾತ್ರಿ 9.15 ರಿಂದ 9.30ರಲ್ಲಿ ಸ್ವೆಕ್ಬಮ್ ಲ್ಯಾಬ್ ಮುಂಭಾಗ ಬರುವಾಗ ಯಾರೋ ಅಪರಿಚಿತರು ನನ್ನ ದ್ವಿಚಕ್ರ ವಾಹನಕ್ಕೆ KA.-02 KS-8401 Suzuki access ವಾಹನವನ್ನು ಚಾಲನೆ ಮಾಡಿಕೊಂಡು ಬಂದು ರಾಜ್ ಕುಮಾರ್ ರಸ್ತೆ 10ನೇ ಕ್ರಾಸ್ ಬಳಿ, ಪಟ್ರೋಲ್ ಬಂಕ್ ಹತ್ತಿರ ಕಾರನ್ನು ತಂದು ನನ್ನ ವಾಹನಕ್ಕೆ ಟಚ್ ಮಾಡಿ ನಂತರ ಕಾಡಿನ ಗ್ಲಾಸ್ ಇಳಿಸಿದಾಗ ನಟ ಶಿವರಾಜ್ ಕೆ.ಆರ್ ಪೇಟೆ ಅವರು ಮತ್ತು ಅವರ ಸ್ನೇಹಿತರು ವಾಹನದಲ್ಲಿ ಕುಳಿತುಕೊಂಡು ಯಾವಳೆ ನೀನು? ಅಲ್ಲಾಡಿಸಿಕೊಂಡು ಹೋಗ್ತೀಯಾ ಎಂದು ನಿಂದನೆಯ ಶಬ್ದದಿಂದ ಮಾತನಾಡಿದರು ಎಂದು ದೂರಿನಲ್ಲಿ ಬರೆಯಲಾಗಿದೆ.
ಶಿವರಾಜ್ ಕೆ.ಆರ್ ಪೇಟೆ ಮತ್ತು ಆತನ ಗೆಳೆಯರು ಕಾರಿನಲ್ಲಿ ಇದ್ದರು. ಎಲ್ಲರೂ ನನಗೆ ಅವಮಾನ ಮಾಡಿದ್ದಾರೆ. ಹಾಗಾಗಿ ಅವರನ್ನು ಠಾಣೆಗೆ ಕರೆದು, ಸೂಕ್ತ ಕ್ರಮ ತಗೆದುಕೊಳ್ಳುವಂತೆ ಮಹಿಳೆ ಕೋರಿದ್ದಾರೆ.
ಕನ್ನಡದ ಹೆಸರಾಂತ ಸಾಹಸ (Stunt) ನಿರ್ದೇಶಕ ರವಿ ವರ್ಮಾ (Ravi Verma) ವಿರುದ್ಧ ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಲ್ಲದೇ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೂ ಹಾಗೂ ನಿರ್ಮಾಪಕರ ಸಂಘಕ್ಕೆ ದೂರು (Complaint) ನೀಡಿದ್ದಾರೆ ಮತ್ತೋರ್ವ ಸಾಹಸ ನಿರ್ದೇಶಕ ಡ್ಯಾನಿ.
ಡ್ಯಾನಿ (Danny) ಮಾಸ್ಟರ್ ಮತ್ತು ರವಿ ವರ್ಮಾ ಮಾಸ್ಟರ್ ಜಗಳ ನಿನ್ನೆ ಮೊನ್ನೆಯದ್ದಲ್ಲ. ಹಲವಾರು ವರ್ಷಗಳಿಂದ ಮುಸುಕಿನ ಗುದ್ದಾಟ ಇದ್ದೇ ಇದೆ. ಅದು ಈಗ ಪೊಲೀಸ್ ಠಾಣೆ ಮೆಟ್ಟಿಲು ಏರುವ ಹಂತಕ್ಕೆ ತಲುಪಿದೆ. ಈ ಹಿಂದೆ ಸಂದರ್ಶನವೊಂದರಲ್ಲಿ ಡ್ಯಾನಿ ಮಾಸ್ಟರ್, ತಮ್ಮ ಹೆಸರು ಹೇಳಿಕೊಂಡು ಪರಭಾಷಾ ಸಿನಿಮಾ ರಂಗದಲ್ಲಿ ರವಿ ವರ್ಮಾ ಕೆಲಸ ಗಿಟ್ಟಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಇದು ರವಿ ವರ್ಮಾರನ್ನು ಕೆರಳಿಸಿತ್ತು.
ಜಾಕಿ ಸಿನಿಮಾದಲ್ಲಿ ಬೆಂಕಿಯಲ್ಲಿ ನಡೆಯುವಂತಹ ಫೈಟ್ ಇದೆ. ಅದನ್ನು ಕಂಪೋಸ್ ಮಾಡಿದ್ದು ಡ್ಯಾನಿ ಮಾಸ್ಟರ್. ಆದರೆ, ಅದು ತಾವು ಮಾಡಿದ್ದು ಎಂದು ಪ್ರಭುದೇವ ಅವರ ಬಳಿ ರವಿ ವರ್ಮಾ ಹೇಳಿ ಚಾನ್ಸ್ ಗಿಟ್ಟಿಸಿಕೊಂಡಿದ್ದರು ಎಂದೆಲ್ಲ ಡ್ಯಾನಿ ಆರೋಪ ಮಾಡಿದ್ದರು. ಈ ಕಾರಣಕ್ಕಾಗಿ ರವಿ ವರ್ಮಾ ಅವರು ಜೀವ ಬೆದರಿಕೆ ಹಾಕಿದ್ದಾರೆ ಎನ್ನುವುದು ಡ್ಯಾನಿ ಆರೋಪ.
ಈ ಕುರಿತಾಗಿ ಮಾತನಾಡಲು ಡ್ಯಾನಿ ಅವರಿಗೆ ರವಿ ವರ್ಮಾ ಕರೆ ಮಾಡಿದ್ದರಂತೆ. ಅನಾರೋಗ್ಯದ ಕಾರಣದಿಂದಾಗಿ ಮಾತನಾಡಲು ಆಗಿರಲಿಲ್ಲ. ಅಷ್ಟರಲ್ಲಿ ಕೆರಳಿದ್ದ ರವಿ ವರ್ಮಾ ತಮಗೆ ಕೊಲ್ಲುವ ಬೆದರಿಕೆಯನ್ನು ಹಾಕಿದ್ದಾರೆ ಎಂದು ಡ್ಯಾನಿ ಆರೋಪ ಮಾಡಿದ್ದಾರೆ.