Tag: concreat

  • ಬಿಬಿಎಂಪಿ ಎಡವಟ್ಟು- ಕಾಮಗಾರಿ ವೇಳೆ ಕಾಂಕ್ರೀಟ್ ಕುಸಿದು 8 ಮಂದಿಗೆ ಗಾಯ

    ಬಿಬಿಎಂಪಿ ಎಡವಟ್ಟು- ಕಾಮಗಾರಿ ವೇಳೆ ಕಾಂಕ್ರೀಟ್ ಕುಸಿದು 8 ಮಂದಿಗೆ ಗಾಯ

    ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮಹಾ ಎಡವಟ್ಟು ಮಾಡಿದ್ದು, ಕಾಮಗಾರಿ ವೇಳೆ ಕಾಂಕ್ರೀಟ್ ಕುಸಿದು 8 ಮಂದಿ ಗಾಯಗೊಂಡಿದ್ದಾರೆ.

    ಮೀರ್ ಖಾಸಿಂ (24) ಕಲ್ಕತ್ತ ಅವರ ಸ್ಥಿತಿ ಗಂಭೀರವಾಗಿದೆ. ಆಸಿಬುಲ್ (22), ಶಿವಪ್ರಸಾದ್ (33), ರೆಹಮಾನ್ ಗೆ ಸಣ್ಣಪುಟ್ಟ ಗಾಯಗಳಾಗಿವೆ. ಬೆಂಗಳೂರಿನ ಶ್ರೀನಗರದ ಕಾಳಿದಾದ ಸರ್ಕಲ್ ಬಳಿ 11:15 ಕ್ಕೆ ಘಟನೆ ನಡೆದಿದೆ. ರಾಜಕಾಲುವೆ ದುರಸ್ತಿ ಕಾರ್ಯದ ವೇಳೆ ಕಳಪೆ ಕಾಮಗಾರಿ ಮಾಡುತ್ತಿರುವುದು ಬಯಲಾಗಿದೆ. ಇದನ್ನೂ ಓದಿ: 5ರೂ. ಡಾಕ್ಟರ್ ಎಂದೇ ಫೇಮಸ್ ಆಗಿದ್ದ ಶಂಕರೇಗೌಡಗೆ ಹೃದಯಾಘಾತ

    ಸೋಮವಾರದಿಂದ ಬಿಬಿಎಂಪಿ ರಾಜಕಾಲುವೆಗೆ ಮೇಲೆ ಮೊಲ್ಡಿಂಗ್ ಕಾಮಗಾರಿ ಶುರು ಮಾಡಿಕೊಂಡಿತ್ತು. ಇಂದು ಕಾರ್ಮಿಕರು ಕೆಲಸ ಮಾಡುವ ವೇಳೆಯಲ್ಲಿ ಘಟನೆ ನಡೆದಿದೆ. ರಾಜಕಾಲುವೆ ಕಾಮಗಾರಿ ಸಂದರ್ಭದಲ್ಲೇ ಬ್ರಿಡ್ಜ್ ಕುಸಿದಿದೆ. ಪರಿಣಾಮ 8 ಮಂದಿ ಕಾರ್ಮಿಕರು ಬ್ರಿಡ್ಜ್ ಮೇಲಿಂದ ಬಿದ್ದಿದ್ದಾರೆ. ಹಲವರು ರಾಜಕಾಲುವೆಗೆ ಬಿದ್ದಿರೋ ಶಂಕೆ ವ್ಯಕ್ತವಾಗುತ್ತಿದೆ. ಘಟನೆಯಲ್ಲಿ ಓರ್ವನ ರಕ್ಷಣೆ ಮಾಡಲಾಗಿದೆ.

    ಕಳಪೆ ಕಾಮಗಾರಿಯಿಂದ ದುರಂತವೆಂದು ಸ್ಥಳೀಯರು ಆರೋಪಿಸಿದ್ದಾರೆ. ಕಾಮಗಾರಿ ನಡೆಯುತ್ತಿದ್ರೂ ಇಂಜಿನಿಯರ್ ಆಗ್ಲಿ, ಬಿಬಿಎಂಪಿ ಅಧಿಕಾರಿಗಳ್ಯಾರೂ ಸ್ಥಳದಲ್ಲಿ ಇರಲಿಲ್ಲ. ಅಲ್ಲದೆ ಘಟನೆ ನಡೆದರೂ ಯಾವೊಬ್ಬ ಅಧಿಕಾರಿಯೂ ಸ್ಥಳಕ್ಕೆ ಬಂದಿಲ್ಲ. ಸ್ಥಳೀಯರು ಗಾಯಾಳುಗಳನ್ನ ಸ್ವತಃ ತಾವೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.

  • ಗಮನಿಸಿ: ಜ.20ರಿಂದ ಶಿರಾಡಿ ಘಾಟ್ ಬಂದ್

    ಗಮನಿಸಿ: ಜ.20ರಿಂದ ಶಿರಾಡಿ ಘಾಟ್ ಬಂದ್

    ಹಾಸನ: ಇದೇ ತಿಂಗಳ 20 ರಿಂದ ಮಂಗಳೂರು-ಬೆಂಗಳೂರು ಮಾರ್ಗದ ಶಿರಾಡಿ ಘಾಟ್ ಬಂದ್ ಆಗಲಿದೆ. ರಸ್ತೆ ಅಭಿವೃದ್ಧಿ ಕಾಮಗಾರಿ ಹಿನ್ನೆಲೆ ಶಿರಾಡಿ ಘಾಟ್ ರಸ್ತೆ ಬಂದ್ ಮಾಡಲಾಗುತ್ತಿದ್ದು, ಪರ್ಯಾಯ ಮಾರ್ಗ ಸೂಚಿಸಲಾಗಿದೆ ಎಂದು ಲೋಕೋಪಯೋಗಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ ಹೇಳಿದ್ದಾರೆ.

    ಸಕಲೇಶಪುರ ಪ್ಲಾಂಟರ್ಸ್ ಕ್ಲಬ್ ನಲ್ಲಿ ಶಿರಾಡಿ ಘಾಟ್ ರಸ್ತೆಯ ತಾತ್ಕಾಲಿಕ ಮಾರ್ಗ ಬದಲಾವಣೆ ಮಾಡುವ ಮತ್ತು ಸಾಧಕ ಭಾದಕಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮಾತನಾಡಿದ ಸಚಿವರು, ಅಧಿಕವಾದ ಮಳೆಯಿಂದ ನಿರಂತರವಾಗಿ ಹಾಳಾಗುತ್ತಿದ್ದ ಶಿರಾಡಿ ಘಾಟ್ ರಸ್ತೆ ಭಾಗವನ್ನು ಕಾಂಕ್ರೀಟೀಕರಣ ಕಾಮಗಾರಿಯ ಮೂಲಕ ಸರಿಪಡಿಸಿ ಈ ಭಾಗದ ರಸ್ತೆ ಬಳಕೆದಾರರು ಅನುಭವಿಸುತ್ತಿದ್ದ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸುವುದು ಈ ಯೋಜನೆಯ ಉದ್ದೇಶವಾಗಿದೆ ಎಂದರು.

    ಈಗಾಗಲೇ ಮೊದಲ ಹಂತದ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ. 13 ಕಿಲೋಮೀಟರ್ ಎರಡನೇ ಹಂತದ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿದ್ದು ಮೇ ಅಂತ್ಯದ ವೇಳೆಗೆ ಪೂರ್ಣಗೊಳಿಸಲಾಗುವುದು. ಶಿರಾಡಿ ಘಾಟ್ ರಸ್ತೆ ಕಾಮಗಾರಿ ಹಿನ್ನೆಲೆ, ವಾಹನಗಳು ಸಂಚರಿಸುವ ಮಾರ್ಗ ಬದಲಾವಣೆ ಮಾಡಲಾಗಿದೆ. 6 ಪರ್ಯಾಯ ರಸ್ತೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು, ವಾಹನಗಳನ್ನು ಎ ಮತ್ತು ಬಿ ಪಟ್ಟಿಗೆ ಸೇರುವ ವಾಹನಗಳೆಂದು ವಿಭಜನೆ ಮಾಡಿ ಎ ಪಟ್ಟಿಗೆ ಸೇರುವ ಸಾಮಾನ್ಯ ಬಸ್ಸುಗಳು, ಕಾರ್, ಜೀಪ್ ಎರಡು ಚಕ್ರದ ವಾಹನಗಳು ಇವುಗಳನ್ನು ಮಂಗಳೂರು-ಬಿಸಿ ರೋಡ್-ಉಜಿರೆ-ಚಾರ್ಮಾಡಿ ಘಾಟ್-ಮೂಡಿಗೆರೆ- ಬೇಲೂರು ಮಾರ್ಗವಾಗಿ ಸಂಚರಿಸಲು ಸೂಚಿಸಲಾಗಿದೆ.

    ಬಿ ಪಟ್ಟಿಗೆ ಸೇರಿಸಿರುವ ಭಾರಿ ವಾಹನಗಳನ್ನು, ಉಡುಪಿ-ಕುಂದಾಪುರ-ಮುರುಡೇಶ್ವರ-ಹೊನ್ನಾವರ-ಸಾಗರ-ಶಿವಮೊಗ್ಗ-ನೆಲಮಂಗಲ-ಬೆಂಗಳೂರು ಈ ಮಾರ್ಗವಾಗಿ ಸಂಚರಿಸಲು ನಿರ್ದೇಶನ ನೀಡಲಾಗಿದೆ ಎಂದು ಸಚಿವರು ವಿವರಿಸಿದರು.