Tag: condoles

  • ತಮ್ಮ ಅಕ್ಷರಗಳಿಂದ ಆತ್ಮವನ್ನು ಕಲಕಿ, ಭಾರತದ ಅಧ್ಯಯನ ಮಾಡಿದ್ದ ಮಹಾನ್ ಧೀಮಂತ – ಮೋದಿ ಸಂತಾಪ

    ತಮ್ಮ ಅಕ್ಷರಗಳಿಂದ ಆತ್ಮವನ್ನು ಕಲಕಿ, ಭಾರತದ ಅಧ್ಯಯನ ಮಾಡಿದ್ದ ಮಹಾನ್ ಧೀಮಂತ – ಮೋದಿ ಸಂತಾಪ

    ನವದೆಹಲಿ: ಸಾಹಿತಿ, ಅಕ್ಷರ ಮಾಂತ್ರಿಕ ಎಸ್.ಎಲ್.ಭೈರಪ್ಪ (S. L. Bhyrappa) ಅವರ ನಿಧನಕ್ಕೆ ಪ್ರಧಾನಿ ಮೋದಿ (PM Modi) ಅವರು ಸಂತಾಪ ಸೂಚಿಸಿದ್ದಾರೆ.

    ಎಕ್ಸ್ ಖಾತೆಯಲ್ಲಿ ಟ್ವೀಟ್ ಹಂಚಿಕೊಂಡಿರುವ ಅವರು, ತಮ್ಮ ಅಕ್ಷರಗಳಿಂದ ನಮ್ಮ ಆತ್ಮವನ್ನು ಕಲಕಿ, ಇಡೀ ಭಾರತವನ್ನು ಅಧ್ಯಯನ ಮಾಡಿದ್ದ ಒಬ್ಬ ಮಹಾನ್ ಧೀಮಂತ ವ್ಯಕ್ತಿಯನ್ನು ನಾವು ಕಳೆದುಕೊಂಡಿದ್ದೇವೆ. ನಿರ್ಭೀತ ಮತ್ತು ಕಾಲಾತೀತ ಚಿಂತಕರಾಗಿದ್ದ ಅವರು ತಮ್ಮ ಚಿಂತನಶೀಲ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದರು. ಅವರ ಬರಹಗಳು ಇಂದಿನ ಪೀಳಿಗೆಯ ಮೇಲೆ ಪ್ರಭಾವ ಬೀರಿದ್ದವು.ಇದನ್ನೂ ಓದಿ: ಕನ್ನಡ ಸಾಹಿತ್ಯ ಲೋಕದ ಅಕ್ಷರ ಮಾಂತ್ರಿಕ ಎಸ್‌ಎಲ್‌ ಭೈರಪ್ಪ ಇನ್ನಿಲ್ಲ

    ನಮ್ಮ ಇತಿಹಾಸ ಮತ್ತು ಸಂಸ್ಕೃತಿಯ ಬಗ್ಗೆ ಅವರು ಹೊಂದಿದ್ದ ಉತ್ಸಾಹವು ಮುಂದಿನ ಯುವಮನಸ್ಸುಗಳನ್ನು ಪ್ರೇರೇಪಿಸುತ್ತಲೇ ಇರುತ್ತದೆ. ಈ ಸಂದರ್ಭದಲ್ಲಿ ದೇವರು ಅವರ ಕುಟುಂಬಸ್ಥರಿಗೆ ನೋವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲೆಂದು ದೇವರಲ್ಲಿ ಪಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಅವರ ಜೊತೆಗಿದ್ದ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.

    ಸರಸ್ವತಿ ಸಮ್ಮಾನ್‌ ಪುರಸ್ಕೃತ ಸಾಹಿತಿ ಎಸ್‌ಎಲ್‌ ಭೈರಪ್ಪ (SL Bhyrappa) ಅವರು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ  ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ  ಹೃದಯಸ್ತಂಭನದಿಂದ ಇಂದು (ಸೆ.24) ಮಧ್ಯಾಹ್ನ 2:38ಕ್ಕೆ  ನಿಧನರಾದರು.

    ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲಿಷ್‌  ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರು ಪಡೆದಿದೆ.  ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು  ಇವರಿಗೆ ಭಾರತ ಸರ್ಕಾರವು 2023ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.ಇದನ್ನೂ ಓದಿ: ಖ್ಯಾತ ಕಾದಂಬರಿಕಾರ ಎಸ್‌.ಎಲ್.ಭೈರಪ್ಪ ನಿಧನಕ್ಕೆ ಸಿದ್ದರಾಮಯ್ಯ, ಯಡಿಯೂರಪ್ಪ ಸೇರಿ ಗಣ್ಯರಿಂದ ಸಂತಾಪ

  • ಹಿರಿಯ ನಟ ರಾಜೇಶ್ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ

    ಹಿರಿಯ ನಟ ರಾಜೇಶ್ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ

    ಹಿರಿಯ ನಟ ರಾಜೇಶ್ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ. ಹಿರಿಯ ನಟರ ಅಗಲಿಕೆಯಿಂದಾಗಿ ಕನ್ನಡ ಚಿತ್ರರಂಗ ಅದ್ಭುತ ಕಲಾವಿದರೊಬ್ಬರನ್ನು ಕಳೆದುಕೊಂಡಿದೆ ಎಂದು ಅವರು ಕಂಬನಿ ಮಿಡಿದಿದ್ದಾರೆ. ಇದನ್ನೂ ಓದಿ : ರಾಜೇಶ್ ಅವರ ಕೊನೆಯ ಸಿನಿಮಾದ ಎಕ್ಸ್‌ಕ್ಲೂಸಿವ್‌ ಫೋಟೋಸ್, ಮಾಹಿತಿ


    ರಾಜೇಶ್ ಅವರ ಜತೆಗಿನ ನೆನಪುಗಳನ್ನು ಹಂಚಿಕೊಂಡಿರುವ ಅವರು, ನಾಯಕ ನಟರಾಗಿ ಮಾತ್ರವಲ್ಲದೆ ಪೋಷಕ ನಟರಾಗಿಯೂ ಬೆಳ್ಳಿ ತೆರೆಯನ್ನು ಬೆಳಗಿದ ರಾಜೇಶ್ ಅವರು ನನಗೆ ಚಿರಪರಿಚಿತರು. ಹಲವಾರು ಸಂದರ್ಭಗಳಲ್ಲಿ ನಾವು ಭೇಟಿಯಾಗಿದ್ದೆವು. ರಂಗಭೂಮಿ ಮೂಲಕ ಕಲಾ ಜಗತ್ತಿಗೆ ಪ್ರವೇಶ ಪಡೆದ ಮುನಿಚೌಡಪ್ಪ ಅವರಿಗೆ ರಂಗಭೂಮಿ ಕೊಟ್ಟ ಹೆಸರು ವಿದ್ಯಾಸಾಗರ್. ಇದನ್ನೂ ಓದಿ : ರವೀಂದ್ರ ಕಲಾಕ್ಷೇತ್ರದಲ್ಲಿ ನಟ ರಾಜೇಶ್ ಅಂತಿಮ ದರ್ಶನಕ್ಕೆ ವ್ಯವಸ್ಥೆ

    ರಂಗಭೂಮಿ ಮೂಲಕವೇ ಬೆಳ್ಳೆ ತೆರೆಗೆ ಬಂದು ರಾಜೇಶ್ ಆಗಿ ಖ್ಯಾತಿ ಪಡೆದರು. ನಾಯಕ ನಟರಾಗಿ ಮತ್ತು ಪೋಷಕ ಪಾತ್ರಗಳಲ್ಲೂ ಮಿಂಚಿ ಮೂರು ತಲೆ ಮಾರಿನ ಕನ್ನಡಿಗರಿಗೆ ಪರಿಚಿತರಾಗಿದ್ದರು. ಒಬ್ಬೊಬ್ಬರಾಗಿ ಹಿರಿಯ ಕಲಾವಿದರನ್ನು ನಮ್ಮ ಕಲಾ ಜಗತ್ತು ಕಳೆದುಕೊಳ್ಳುತ್ತಿರುವುದು ಬಹಳ ದುಃಖದ ಸಂಗತಿ.ಇವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅಭಿಮಾನಿಗಳಿಗೆ, ಕುಟುಂಬಕ್ಕೆ ಮತ್ತು ಬಂಧು ಮಿತ್ರರಿಗೆ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ ಮಾಜಿ ಸಿಎಂ ಸಿದ್ಧರಾಮಯ್ಯ.